Breaking News

ಊಟ ಸೇವನೆಯಿಂದ ಮಕ್ಕಳು ಅಸ್ವಸ್ಥ ಕೇಸ್ – ಶಾಲೆಯ ಪ್ರಭಾರಿ ಪ್ರಾಂಶುಪಾಲ, ವಾರ್ಡನ್ ಅಮಾನತು

Spread the love

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ ವಸತಿ ನಿಲಯದ ವಿದ್ಯಾರ್ಥಿಗಳು ಆಹಾರ ಸೇವಿಸಿ ಅಸ್ವಸ್ಥಗೊಂಡ ಪ್ರಕರಣದ ಹಿನ್ನೆಲೆಯಲ್ಲಿ ಶಾಲೆಯ ಪ್ರಭಾರಿ ಪ್ರಾಂಶುಪಾಲ ನಜೀಮಾ ಬೇಗಂ ಮತ್ತು ಪ್ರಭಾರಿ ವಾರ್ಡನ್ ಭೀಮಬಾಯಿ ಅವರನ್ನು ಅಮಾನತುಗೊಳಿಸಲಾಗಿದೆ.

ಗುರುವಾರ ರಾತ್ರಿ ಶಾಲೆಯ 50 ಮಕ್ಕಳು ರಾತ್ರಿ ಊಟ ಸೇವಿಸಿದ್ದರು. ಅವರಲ್ಲಿ 39 ಮಕ್ಕಳು ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಚಿತ್ತಾಪುರ ತಾಲೂಕಾ ಆಸ್ಪತ್ರೆ, ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕರ್ತವ್ಯ ಲೋಪದ ಆಧಾರದ ಮೇಲೆ ನಜೀಮಾ ಬೇಗಂ ಮತ್ತು ಭೀಮಬಾಯಿ ಅವರನ್ನು ಅಮಾನತುಗೊಳಿಸಲಾಗಿದೆ. ಅಲ್ಲದೇ, ಹೊರಗುತ್ತಿಗೆ ಸಿಬ್ಬಂದಿಯನ್ನು ಸಹ ಬದಲಾಯಿಸಲಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣಾಧಿಕಾರಿ ಸಂಗಮೇಶ ತಿಳಿಸಿದ್ದಾರೆ.

ಗುರುವಾರ ರಾತ್ರಿ ಆಸ್ಪತ್ರೆಯಲ್ಲಿ ಎಲ್ಲಾ 50 ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣೆ ಮಾಡಿಸಿದ ನಂತರ‌ ವೈದ್ಯರ ನಿರ್ದೇಶನದಂತೆ ದಾಖಲಾದ 39 ಮಕ್ಕಳಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಲಾಗಿದ್ದು, ಅದರಂತೆ ಗುಣಮುಖರಾದ ಎಲ್ಲಾ 39 ವಿದ್ಯಾರ್ಥಿಗಳನ್ನು ಶುಕ್ರವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಮಕ್ಕಳು ಆರೋಗ್ಯವಂತರಾಗಿದ್ದು, ಪಾಲಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ.

ಜಿಲ್ಲಾಧಿಕಾರಿಗಳಿಂದ ಮಕ್ಕಳ ಆರೋಗ್ಯ ವಿಚಾರಣೆ
ಗುರುವಾರ ರಾತ್ರಿ ಶಾಲೆಯ ಮಕ್ಕಳು ಊಟ ಸೇವಿಸಿದ ನಂತರ ಅಸ್ವಸ್ಥಗೊಂಡು ಚಿತ್ತಾಪುರ ಆಸ್ಪತ್ರೆ, ಜಿನ್ಸ್ ಅಸ್ಪತ್ರೆಗೆ ದಾಖಲಾಗಿರುವ ಮಾಹಿತಿ ತಿಳಿದು ಕೂಡಲೇ ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು.

ಆಸ್ಪತ್ರೆಯ ವಾರ್ಡ್‌ಗೆ ಭೇಟಿ ನೀಡಿದ ಜಿಲ್ಲಾಧಿಕಾರಿ, ವಿದ್ಯಾರ್ಥಿಗಳ ಆರೋಗ್ಯ ಸ್ಥಿತಿಯ ಕುರಿತು ವೈದ್ಯರಿಂದ ಮಾಹಿತಿ ಪಡೆದರು. ಎಲ್ಲ ವಿದ್ಯಾರ್ಥಿಗಳಿಗೆ ಅಗತ್ಯ ಚಿಕಿತ್ಸೆ ಹಾಗೂ ಔಷಧೋಪಚಾರವನ್ನು ಯಾವುದೇ ಕೊರತೆಯಾಗದಂತೆ ಸಮರ್ಪಕವಾಗಿ ಒದಗಿಸುವಂತೆ ಸೂಚಿಸಿದರು. ಅಲ್ಲದೆ, ವಿದ್ಯಾರ್ಥಿಗಳ ಆರೋಗ್ಯದ ಮೇಲೆ ನಿರಂತರ ನಿಗಾ ವಹಿಸಿ, ವೈದ್ಯಕೀಯ ಸೇವೆಯಲ್ಲಿ ಯಾವುದೇ ನಿರ್ಲಕ್ಷ್ಯವಾಗದಂತೆ ಎಚ್ಚರಿಕೆ ವಹಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.


Spread the love

About Laxminews 24x7

Check Also

ವಿಜಯಪುರ | ಭೂತನಾಳ ಕೆರೆಯಲ್ಲಿ 6 ಶವ ಪತ್ತೆ – ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆ ಶಂಕೆ

Spread the loveವಿಜಯಪುರ: ನಗರದ ಹೊರವಲಯದಲ್ಲಿರುವ ಭೂತನಾಳ ಕೆರೆಯಲ್ಲಿ  6 ಜನರ ಶವಗಳು ಪತ್ತೆಯಾಗಿದ್ದು, ಕೌಟುಂಬಿಕ ಕಲಹಕ್ಕೆ ಕುಟುಂಬವೇ ಆತ್ಮಹತ್ಯೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ