Breaking News

ಅಂತರಾಷ್ಟ್ರೀಯ

ಭಾರತಕ್ಕೆ ಕಚ್ಚಾ ತೈಲ ಪೂರೈಸಲು ನಾವು ಸಿದ್ಧ: ರಷ್ಯಾ

ನವದೆಹಲಿ: ಮಧ್ಯಪ್ರಾಚ್ಯ ಬಿಕ್ಕಟ್ಟಿನಿಂದಾಗಿ ಇಂಧನ ಪೂರೈಕೆಯಲ್ಲಿ ಅಡಚಣೆ ಉಂಟಾದರೆ ಭಾರತಕ್ಕೆ  ಕಚ್ಚಾ ತೈಲ ಪೂರೈಸಲು ನಾವು ಸಿದ್ದರಿದ್ದೇವೆ ಎಂದು ರಷ್ಯಾ ಹೇಳಿದೆ. ಕಚ್ಚಾ ತೈಲಗಳು ಹಾದು ಹೋಗುವ ಹಾರ್ಮುಜ್ ಜಲಸಂಧಿಯನ್ನು  ಇರಾನ್‌ ಬಂದ್‌ ಮಾಡಿದೆ. ಅಷ್ಟೇ ಅಲ್ಲದೇ ಇರಾನ್‌ ಸೌದಿಯ ತೈಲ ಸಂಸ್ಕರಣಾ ಘಟಕಗಳ ಮೇಲೆ ಡ್ರೋನ್‌ ದಾಳಿ ನಡೆಸಿದೆ. ಈ ಸುದ್ದಿಗಳು ಪ್ರಕಟವಾದ ಬೆನ್ನಲ್ಲೇ ಕಚ್ಚಾ ತೈಲಗಳ ಬೆಲೆ ಏರಿಕೆ ಕಾಣುತ್ತಿವೆ. ತೈಲ ವಿಚಾರಲ್ಲಿ ಇಡೀ ವಿಶ್ವ ಈಗ …

Read More »

ಯುದ್ಧದ ನಡುವೆಯೇ ಇರಾನ್‌ನಲ್ಲಿ ಭೂಕಂಪ

ಟೆಹ್ರಾನ್‌: ಅಮೆರಿಕ-ಇಸ್ರೇಲ್‌ ಹಾಗೂ ಗಲ್ಫ್‌ ರಾಷ್ಟ್ರಗಳ ವಿರುದ್ಧ ಯುದ್ಧದ ನಡುವೆಯೇ ಇರಾನ್‌ನಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರ ಬಿಂದು ಇರಾನ್‌ನ ಗೆರಾಶ್‌ನಲ್ಲಿ 4.3 ತೀವ್ರತೆಯ ಭೂಕಂಪವಾಗಿದೆ. ಸುಮಾರು 10 ಕಿ.ಮೀ ಆಳದಲ್ಲಿ ಭೂಕಂಪ ಉಂಟಾಗಿದೆ. ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ಮಿಲಿಟರಿ ದಾಳಿಗಳನ್ನು ತೀವ್ರಗೊಳಿಸಿವೆ. ಈ ಪ್ರದೇಶದಲ್ಲಿ ತೀವ್ರ ಸಂಘರ್ಷದ ನಡುವೆ ಭೂಕಂಪ ಸಂಭವಿಸಿದೆ. ಈಗಾಗಲೇ ಉದ್ವಿಗ್ನಗೊಂಡಿರುವ ಪ್ರಾದೇಶಿಕ ಯುದ್ಧಗಳಿಗೆ ಈ ಕಂಪನವು ಮತ್ತಷ್ಟು ಸಂಕಷ್ಟ ತಂದೊಡ್ಡಿದೆ. …

Read More »

ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಅಯತೊಲ್ಲಾ ಅಲಿರೆಜಾ ಅರಾಫಿ ಆಯ್ಕೆ

ಟೆಹ್ರಾನ್: ಇರಾನ್‌ನ ಇತಿಹಾಸದಲ್ಲೇ ಅತ್ಯಂತ ಭೀಕರ ಕ್ರಾಂತಿ ಮತ್ತು ಬದಲಾವಣೆಯ ಗಾಳಿ ಬೀಸುತ್ತಿದೆ. ಅಮೇರಿಕಾ-ಇಸ್ರೇಲ್ ಜಂಟಿ ವೈಮಾನಿಕ ದಾಳಿಯಲ್ಲಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾದ ಬೆನ್ನಲ್ಲೇ, ಇರಾನ್ ತನ್ನ ತಾತ್ಕಾಲಿಕ ಸರ್ವೋಚ್ಚ ನಾಯಕನನ್ನಾಗಿ ಅಯತೊಲ್ಲಾ ಅಲಿರೆಜಾ ಅರಾಫಿ  ಅವರನ್ನು ಘೋಷಿಸಿದೆ ಎಂದು ಇರಾನ್‌ನ ಇಸ್ನಾ ಸುದ್ದಿ ಸಂಸ್ಥೆ ವರದಿ ಮಾಡಿದೆ. ಇರಾನ್‌ನ ಧಾರ್ಮಿಕ ಮತ್ತು ರಾಜಕೀಯ ವಲಯದಲ್ಲಿ ಅರಾಫಿ ಅತ್ಯಂತ ಪ್ರಭಾವಿ ವ್ಯಕ್ತಿಯಾಗಿದ್ದು. ಇವರು ಗಾರ್ಡಿಯನ್ ಕೌನ್ಸಿಲ್‌ನ …

Read More »

ಇರಾನ್‌ ಸರ್ವೋಚ್ಛ ನಾಯಕ ಖಮೇನಿ ಹತ್ಯೆ – ಟ್ರಂಪ್‌ ಘೋಷಣೆ ಬೆನ್ನಲ್ಲೇ ಖಚಿತಪಡಿಸಿದ ಇರಾನ್‌

ವಾಷಿಂಗ್ಟನ್: ಇರಾನ್ ಸರ್ವೋಚ್ಛ ನಾಯಕ ಅಯಾತೊಲ್ಲ ಅಲಿ ಖಮೇನಿ ಅವರನ್ನ ಹತ್ಯೆ ಮಾಡಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಘೋಷಿಸಿದ ಕೆಲವೇ ಗಂಟೆಗಳಲ್ಲಿ ಇರಾನ್‌ ಮಾಧ್ಯಮ ಕೂಡ ಹತ್ಯೆಯನ್ನ ದೃಢಪಡಿಸಿದೆ. ಇಸ್ಲಾಮಿಕ್ ಗಣರಾಜ್ಯದ ಮೇಲೆ ಅಮೆರಿಕ-ಇಸ್ರೇಲಿ ನಡೆಸಿದ ಜಂಟಿ ದಾಳಿಯಲ್ಲಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ ಎಂದು ಇರಾನ್ ಸ್ಟೇಟ್ಸ್‌ ಮೀಡಿಯಾ ಖಚಿತಪಡಿಸಿದೆ. ಈ ಬೆಳವಣಿಗೆ ಬಳಿಕ ಇರಾನ್‌ ದೇಶಾದ್ಯಂತ 40 ದಿನಗಳ ಶೋಕಾಚರಣೆ ಘೋಷಿಸಿದೆ. …

Read More »

ರಷ್ಯಾದ ಇಬ್ಬರು ಮಹಿಳೆಯರ ಜೊತೆ ಸಂಬಂಧವಿದೆ: ಎಪಿಸ್ಟೀನ್‌ ಜೊತೆಗಿನ ಸ್ನೇಹಕ್ಕೆ ಕ್ಷಮೆಯಾಚಿದ ಬಿಲ್‌ ಗೇಟ್ಸ್‌

ವಾಷಿಂಗ್ಟನ್‌: ಅಮೆರಿಕದ ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌  ಜೊತೆಗಿನ ಸಂಬಂಧಕ್ಕಾಗಿ ಕ್ಷಮೆಯಾಚಿಸಿದ ಮೈಕ್ರೋಸಾಫ್ಟ್  ಸಹ-ಸಂಸ್ಥಾಪಕ ಬಿಲ್‌ ಗೇಟ್ಸ್‌ ರಷ್ಯಾದ ಮಹಿಳೆಯರೊಂದಿಗೆ ತನಗೆ ಎರಡು ಸಂಬಂಧಗಳಿವೆ ಎಂಬುದನ್ನು ಒಪ್ಪಿಕೊಂಡಿದ್ದಾರೆ. ಗೇಟ್ಸ್‌ ಫೌಂಡೇಶನ್‌ ಸಿಬ್ಬಂದಿಗಳ ಜೊತೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಅವರು ತಾನು ಎಪ್‌ಸ್ಟೀನ್ ಅಪರಾಧಗಳಲ್ಲಿ ಭಾಗಿಯಾಗಿಲ್ಲ ಎಂದಿದ್ದಾರೆ. ಗೆಟ್ಸ್‌ ಫೌಂಡೇಶನ್ ವಕ್ತಾರರು ಮಾಧ್ಯಮಗಳ ಜೊತೆ ಹಂಚಿಕೊಂಡ ಹೇಳಿಕೆಯ ಪ್ರಕಾರ ಇತ್ತೀಚಿಗೆ ಟೌನ್‌ ಹಾಲ್‌ ಸಭೆಯಲ್ಲಿ ಬಿಲ್‌ ಗೇಟ್ಸ್‌( (Bill Gates) ತನ್ನ ಕೆಲಸದ …

Read More »

ಟ್ರಂಪ್ ಟ್ಯಾರಿಫ್‌ ಗೆ ಭಾರೀ ಹಿನ್ನಡೆ – ಸುಂಕ ಹೇರಲು ಅಧಿಕಾರ ಇಲ್ಲ; ಯುಎಸ್‌ ಸುಪ್ರೀಂ ಕೋರ್ಟ್‌ ಚಾಟಿ

ವಾಷಿಂಗ್ಟನ್‌: ತನ್ನ ವಿರುದ್ಧ ತಿರುಗಿಬಿದ್ದವರ ಮೇಲೆ ಸುಂಕದ ಅಸ್ತ್ರ ಪ್ರಯೋಗಿಸುತ್ತಿದ್ದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಗೆ  ಅಮೆರಿಕದ ಸುಪ್ರೀಂ ಕೋರ್ಟ್‌ನಲ್ಲಿ ಬಹುದೊಡ್ಡ ಹಿನ್ನಡೆಯಾಗಿದೆ. ಟ್ರಂಪ್ ವಿಧಿಸಿರುವ ವ್ಯಾಪಕ ಜಾಗತಿಕ ಸುಂಕಗಳನ್ನ ಅಮೆರಿಕ ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದು, ಕಪಾಳಮೋಕ್ಷ ಮಾಡಿದಂತಾಗಿದೆ. ಹೌದು. ಪ್ರಪಂಚದಾದ್ಯಂತ ದೇಶಗಳ ಮೇಲೆ ವಿಧಿಸಿರುವ ಸುಂಕಗಳು ಕಾನೂನು ಬಾಹಿರವಾಗಿದೆ. ಡೊನಾಲ್ಡ್‌ ಟ್ರಂಪ್‌ ಅವರಿಗೆ ಸುಂಕ ವಿಧಿಸಲು ಕಾನೂನುಬದ್ಧ ಅಧಿಕಾರವಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಜಾನ್ ರಾಬರ್ಟ್ಸ್ ಅವರಿದ್ದ ಪೀಠ …

Read More »

ಭಾರತದ ವಿರುದ್ಧ ಪಾಕ್‌ ಪಂದ್ಯವಾಡಲ್ಲ: ಶೆಹಾಬಾಜ್ ಷರೀಫ್

ಇಸ್ಲಾಮಾಬಾದ್‌: ಭಾರತದ  ವಿರುದ್ಧ ಟಿ20 ವಿಶ್ವಕಪ್‌ ಕ್ರಿಕೆಟ್‌  ಪಂದ್ಯ ಆಡುವುದಿಲ್ಲ ಎಂದು ಪಾಕಿಸ್ತಾನ ಪ್ರಧಾನಿ ಶೆಹಾಬಾಜ್ ಷರೀಫ್ ಹೇಳಿದ್ದಾರೆ. ಕ್ಯಾಬಿನೆಟ್‌ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಟಿ20 ವಿಶ್ವಕಪ್‌ಗೆ ಸಂಬಂಧಿಸಿದಂತೆ ನಾವು ಭಾರತದ ವಿರುದ್ಧ ಪಂದ್ಯ ಆಡುವುದಿಲ್ಲ ಎಂಬ ಸ್ಪಷ್ಟ ನಿಲುವನ್ನು ತೆಗೆದುಕೊಂಡಿದ್ದೇವೆ ಎಂದು ತಿಳಿಸಿದರು. ಕ್ರೀಡೆಯಲ್ಲಿ ಯಾವುದೇ ರಾಜಕೀಯ ಇರಬಾರದು; ಇದು ನಮ್ಮ ಸ್ಪಷ್ಟ ನಿಲುವು. ಎಚ್ಚರಿಕೆಯಿಂದ ಚರ್ಚಿಸಿದ ನಂತರ ನಾವು ಈ ನಿಲುವನ್ನು ತೆಗೆದುಕೊಂಡಿದ್ದೇವೆ. ನಾವು ಬಾಂಗ್ಲಾದೇಶದೊಂದಿಗೆ …

Read More »

ಚೀನಾ, ಪಾಕ್‌, ಬಾಂಗ್ಲಾಗೆ ಹೋಲಿಸಿದ್ರೆ ಭಾರತಕ್ಕೆ ಈಗ ಕಡಿಮೆ ಸುಂಕ

ನವದೆಹಲಿ: ಯುರೋಪಿಯನ್‌ ಒಕ್ಕೂಟದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ  ಸಹಿ ಬಿದ್ದ ಬೆನ್ನಲ್ಲೇ ಅಮೆರಿಕ  ಭಾರತದ ಮೇಲೆ ವಿಧಿಸಿದ್ದ ಸುಂಕವನ್ನು ಕಡಿತ ಮಾಡಿದೆ. ಟ್ರಂಪ್‌ ಅಧಿಕಾರಕ್ಕೆ ಏರಿದ ಬಳಿಕ ಪ್ರತಿ ತೆರಿಗೆ, ರಷ್ಯಾದಿಂದ ಕಚ್ಚಾ ತೈಲವನ್ನು ಆಮದು ಮಾಡುತ್ತಿರುವುದಾಗಿ ಪ್ರತಿಯಾಗಿ 25% ದಂಡ ಸೇರಿದಂತೆ ಭಾರತದ ವಸ್ತುಗಳಿಗೆ ಅಮೆರಿಕ 50% ಸುಂಕವನ್ನು ವಿಧಿಸಿತ್ತು. ಈ ಟ್ರಂಪ್‌ 18% ಮಾತ್ರ ತೆರಿಗೆ ವಿಧಿಸುವುದಾಗಿ ಹೇಳಿದ್ದಾರೆ. ಟ್ರಂಪ್‌ ನಿರ್ಧಾರದಿಂದ ಚೀನಾ, ಪಾಕಿಸ್ತಾನ, ಬಾಂಗ್ಲಾದೇಶ, …

Read More »

ಭಾರತದ ಮೇಲಿನ ಸುಂಕ 18% ಗೆ ಇಳಿಕೆ – 500 ಶತಕೋಟಿ ಡಾಲರ್‌ ಒಪ್ಪಂದ ಘೋಷಿಸಿದ ಟ್ರಂಪ್‌

ನವದೆಹಲಿ: ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿದ ಬಳಿಕ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಬೃಹತ್‌ ವ್ಯಾಪಾರ ಒಪ್ಪಂದ ಘೋಷಣೆ ಮಾಡಿದ್ದಾರೆ. ಜೊತೆಗೆ ಭಾರತದ ಮೇಲಿನ ಪ್ರತಿ ತೆರಿಗೆ ಭಾರವನ್ನ 25% ನಿಂದ 18% ಗೆ ಇಳಿಸಿರುವುದಾಗಿ ತಿಳಿಸಿದ್ದಾರೆ. ಹೌದು. ಪ್ರಧಾನಿ ಮೋದಿ ಜೊತೆಗಿನ ಮಾತುಕತೆ ಬಳಿಕ ತನ್ನ ಸೋಷಿಯಲ್‌ ಮೀಡಿಯಾ ವೇದಿಕೆ ಟ್ರುತ್‌ …

Read More »

ಕ್ಯೂಬಾಗೆ ತೈಲ ಪೂರೈಸುವ ರಾಷ್ಟ್ರಗಳಿಗೆ ಹೆಚ್ಚುವರಿ ಸುಂಕ; ಮೆಕ್ಸಿಕೊ ಮೇಲೆ ಒತ್ತಡ ಹೆಚ್ಚಿಸಿದ ಟ್ರಂಪ್

ವಾಷಿಂಗ್ಟನ್: ಕ್ಯೂಬಾಗೆ  ತೈಲ ಮಾರಾಟ ಮಾಡುವ ಅಥವಾ ಸರಬರಾಜು ಮಾಡುವ ಯಾವುದೇ ದೇಶದ ಸರಕುಗಳ ಮೇಲೆ ಸುಂಕ  ವಿಧಿಸುವ ಪ್ರಸ್ತಾಪವನ್ನು ಹೊಂದಿರುವ ಕಾರ್ಯಕಾರಿ ಆದೇಶಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್  ಸಹಿ ಹಾಕಿದ್ದಾರೆ. ದ್ವೀಪ ರಾಷ್ಟ್ರಕ್ಕೆ ದೀರ್ಘಕಾಲದಿಂದ ಕಚ್ಚಾ ತೈಲದ ಪ್ರಮುಖ ಪೂರೈಕೆದಾರನಾಗಿರುವ ಮೆಕ್ಸಿಕೊದ ಮೇಲಿನ ಹಿಡಿತವನ್ನು ಬಿಗಿಗೊಳಿಸುವ ಪ್ರಯತ್ನ ಇದಾಗಿದೆ. ಮೆಕ್ಸಿಕೊ ಅಧ್ಯಕ್ಷ ಕ್ಲೌಡಿಯಾ ಷೈನ್‌ಬಾಮ್ ಅವರು ಇತ್ತೀಚೆಗೆ ತಮ್ಮ ಸರ್ಕಾರ ಕ್ಯೂಬಾಗೆ ತೈಲ ರವಾನೆಯನ್ನು ತಾತ್ಕಾಲಿಕವಾಗಿ ನಿಲುಗಡೆ …

Read More »