Breaking News

ಅಂತರಾಷ್ಟ್ರೀಯ

ತಿಂಗಳಾಂತ್ಯದಲ್ಲಿ ಅಥವಾ ಜನವರಿ ಮೊದಲ ವಾರದಲ್ಲಿ ಸಂಪುಟ ವಿಸ್ತರಣೆ-ಸಚಿವ ರಮೇಶ ಜಾರಕಿಹೋಳಿ

  ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆ ಸಂಪುಟ ವಿಸ್ತರಣೆಯಾಗಿದ್ದು, ಈ ತಿಂಗಳ ಕೊನೆಯ ವಾರದಲ್ಲಿ ಇಲ್ಲವೇ ಜನವರಿ ಮೊದಲ ವಾರದಲ್ಲಿ ಸಂಪುಟ ವಿಸ್ತರಣೆಯಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೋಳಿ ಹೇಳಿದರು. ಗುರುವಾರದಂದು ಬೆಳಗಾವಿಯಲ್ಲಿ ಮಾಧ್ಯಮಗಾರರೊಂದಿಗೆ ಮಾತನಾಡಿದ ಸಚಿವ ರಮೇಶ ಜಾರಕಿಹೊಳಿ ಪಂಚಾಯತ ಚುನಾವಣೆ ಹಿನ್ನೆಲೆ ಸಂಪುಟ ವಿಸ್ತರಣೆಗೆ ತಡವಾಗಿದೆ. ಈ ತಿಂಗಳ ಕೊನೆಯಲ್ಲಿ ಅಥವಾ ಜನವರಿ ಮೊದಲ ವಾರದಲ್ಲಿ ಆಗುವ ಸಾಧ್ಯತೆ ಇದೆ ಎಂದ್ರು. …

Read More »

ವಿಧಾನ ಪರಿಷತ್ ಸಭಾಪತಿ ಕಾಂಗ್ರೆಸ್ ನಿಯಂತ್ರಣದಲ್ಲಿದ್ದಾರೆ

ಉಡುಪಿ: ವಿಧಾನ ಪರಿಷತ್ ಕಲಾಪದಲ್ಲಿ ನಡೆದ ಗದ್ದಲವನ್ನು ಕುರಿತು ಮಾತನಾಡಿರುವ ಉಡುಪಿ ಶಾಸಕ ಕೋಟ ಶ್ರಿನಿವಾಸ್ ಪೂಜಾರಿ ವಿಧಾನ ಪರಿಷತ್ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿಯವರನ್ನು ಕಾಂಗ್ರೆಸ್ ನಿಯಂತ್ರಣ ಮಾಡುವುದು ಬಿಟ್ಟಿದ್ದರೆ ಗೊಂದಲ ಇರುತ್ತಿರಲಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಗದ್ದಲದ ಕುರಿತು ಪ್ರತಿಕ್ರಿಯಿಸಿರುವ ಸಚಿವರು ಕಾಂಗ್ರೆಸ್ ನಾಯಕರು ಸಭಾಪತಿ ತಾನು ಹೇಳಿದಂತೆ ಕೇಳಬೇಕು ಎಂದು ಸಿದ್ದರಾಮಯ್ಯ ಸಹಿತ ಎಲ್ಲರೂ ಕಾಂಗ್ರೆಸ್ಸೀಕರಣ ಮಾಡುತ್ತಿದ್ದಾರೆ. ಕಾಂಗ್ರೆಸ್ಸೀಕರಣ ಮಾಡಿದ್ದರ ಫಲವೇ ವಿಧಾನಪರಿಷತ್ ಗದ್ದಲಕ್ಕೆ …

Read More »

ಕಾಂಗ್ರೇಸ್ ಮುಖಂಡರ ಮೇಲೆ ಗುಂಡಿ ದಾಳಿ: ಗ್ರಾ,ಪಂ, ಚುನಾವಣೆ ಹಿನ್ನೆಲೆ ಶಂಕೆ,

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದಲ್ಲಿ ಅನಾಮಧೇಯ ವ್ಯಕ್ತಿಯೊಬ್ಬ ಶಾಸಕ ಸತೀಶ ಜಾರಕಿಹೋಳಿ ಆಪ್ತರಾದ ಕೀರಣ ರಜಪೂತ, ಬರಮಾ ದೂಪದಾಳೆ ಮೇಲೆ ಗುಂಡಿನ ದಾಳಿ ಗ ನಡೆಸಿ ಫರಾರಿಯಾಗಿರುವ ಘಟನೆ ನಡೆದಿದೆ. ಈ ದಾಳಿಯು ಕಂಟ್ರಿ ಪಿಸ್ತೋಲದಿಂದ ನಡೆಸಲಾಗಿದೆ. ಕಳೆದ ಬುಧವಾರ ರಾತ್ರಿ ಸುಮಾರು 11.30ಕ್ಕೆ ಈ ಘಟನೆ ನಡೆದಿದೆ. ಗುಂಡಿನ ದಾಳಿಯಲ್ಲಿ ಗಾಯಗೊಂಡಿರುವ ವ್ಯಕ್ತಿಯ ನ್ನು ಚಿಕಿತ್ಸೆಗಾಗಿ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಬ್ಬರು ಪ್ರಾಣಾಪಾಯದಿಂದ …

Read More »

ಶಿಂದಿಕುರಬೇಟ ಗ್ರಾಪಂ ಗೆ ಅವಿರೋಧ ಆಯ್ಕೆ: ಸದಸ್ಯರಿಂದ ಸಚಿವ ರಮೇಶ ಜಾರಕಿಹೊಳಿಗೆ ಸತ್ಕಾರ

ಗೋಕಾಕ: ತಾಲೂಕಿನ ಶಿಂದಿಕುರಬೇಟ ಗ್ರಾಮ ಪಂಚಾಯತಿಗೆ ವಾರ್ಡ್ ನಂಬರ್ 8ರ ಸದಸ್ಯರಾದ ಭೀಮಶಿ ಯಲ್ಲಪ್ಪ ಬಿರನಾಳಿ ಮತ್ತು ಮಂಜುಳಾ ವಿಠ್ಠಲ ಕರೋಶಿ ಅವರು ಅವಿರೋಧ ಆಯ್ಕೆಯಾದ ಹಿನ್ನೆಲೆಯಲ್ಲಿ ಸದಸ್ಯರು ಹಾಗೂ ಗ್ರಾಮದ ಮುಖಂಡರು ಸಚಿವ ರಮೇಶ ಜಾರಕಿಹೊಳಿ ಅವರನ್ನು ಬುಧವಾರದಂದು ನಗರದ ಅವರ ಕಾರ್ಯಾಲಯದಲ್ಲಿ ಸತ್ಕರಿಸಿದರು. ಈ ಸಂದರ್ಭದಲ್ಲಿ ಜಿ.ಪಂ ಸದಸ್ಯರಾದ ಟಿ. ಆರ್. ಕಾಗಲ, ಮಡೆಪ್ಪ ತೋಳಿನವರ, ಶ್ರೀಕಾಂತ ಯತ್ತಿನಮನಿ,ರಾಮಯ್ಯ ಆಲೋಶಿ,ಅಡಿವೆಪ್ಪ ಬೆಳಗಲಿ, ಸಿದ್ದಪ್ಪ ಸಂಸುದ್ದಿ, ಮುಸಾ ಸರಕಾವಸ, …

Read More »

ಗೋಕಾಕ: ಸರ್ಕಾರಿ ಗೌರವದೊಂದಿಗೆ ಯೋಧನ ಅಂತ್ಯಕ್ರಿಯೆ

ಗೋಕಾಕ: ರಾಜಸ್ಥಾನದಲ್ಲಿ ಕರ್ತವ್ಯ ನಿರ್ವಹಿಸುವಾಗ ಅನಾರೋಗ್ಯದಿಂದ ಸಾವನ್ನಪ್ಪಿದ್ದ ತಾಲೂಕಿನ ಲೋಳಸೂರ ಗ್ರಾಮದ ಹುತಾತ್ಮ ಯೋಧ ಕಲ್ಲಪ್ಪ ಸಿದ್ದಪ್ಪ ಬಾಂವಚಿ (45) ಅವರ ಅಂತ್ಯಕ್ರಿಯೆಯನ್ನು ಸ್ವಗ್ರಾಮದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಮಧ್ಯಾಹ್ನ 12.30ಕ್ಕೆ ನೆರವೇರಿಸಲಾಯಿತು.ಬುಧವಾರದಂದು ಬೆಳಿಗ್ಗೆ 11.00ಕ್ಕೆ ಯೋಧ ಕಲ್ಲಪ್ಪ ಅವರ ಪಾರ್ಥಿವ ಶರೀರ ಗೋವಾ ಮಾರ್ಗವಾಗಿ ಲೋಳಸೂರ ಗ್ರಾಮಕ್ಕೆ ತಲುಪಿತು.  ಅವರ ಜಮೀನಿನಲ್ಲಿ ಸಾರ್ವಜನಿಕರ ದರ್ಶನಕ್ಕಾಗಿ ಇಡಲಾಯಿತು.  ನೂರಾರು ಜನ   ಆಗಮಿಸಿ ಅಂತಿಮ ದರ್ಶನ ಪಡೆದರು. ಯೋಧ ಕಲ್ಲಪ್ಪ ಬಾಂವಚಿ …

Read More »

ಗೋಕಾಕ: ಡಿ. 19 ರಂದು ಎಸ್ಎಸ್ಎಲ್ ಸಿ, ಪಿಯುಸಿ ಟಾಪರ್ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ

ಗೋಕಾಕ: ಅಖಿಲ ಭಾರತ ವೀರಶೈವ ಮಹಾಸಭಾ ಗೋಕಾಕ ತಾಲೂಕು ಘಟಕದ ವತಿಯಿಂದ ಡಿ. 19 ರಂದು ಮುಂಜಾನೆ 10 ಘಂಟೆಗೆ ನಗರದ ಕೆ.ಎಲ್.ಇ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಹಾಸಭಾದ ತಾಲೂಕು ಘಟಕದ ಅಧ್ಯಕ್ಷ ಸೋಮಶೇಖರ್ ಮಗದುಮ್ಮ ಹೇಳಿದರು. ನಗರದ ಕೆಎಲ್ಇ ಶಾಲಾ ಆವರಣದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಎಸ್ ಎಸ್ ಎಲ್ …

Read More »

ಮಹಿಳೆ ಮೇಲೆ ಹಲ್ಲೆ ಪ್ರಕರಣ: ಇಬ್ಬರ ಬಂಧನ

ಹುಬ್ಬಳ್ಳಿ: ಮನೆ ಎದುರು ಗಲಾಟೆ ಮಾಡಿದಕ್ಕೆ ಮಹಿಳೆ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದ ಇಬ್ಬರನ್ನು ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಕೇಶ್ ಹೆಬ್ಬಳ್ಳಿ, ಸಚಿನ್ ಹೆಬ್ಬಳ್ಳಿ ಬಂಧಿತ ಆರೋಪಿಗಳು. ಹೆಗ್ಗರಿ ಬಡಾವಣೆಯಲ್ಲಿ ವಾಸವಿರುವ ಮಹಿಳೆ ಮನೆ ಮುಂದೆ ಸಹೋದರರಿಬ್ಬರು ಗಲಾಟೆ ಮಾಡುತ್ತಿದ್ದರು. ಇಬ್ಬರನ್ನು ಮಹಿಳೆ ಅಲ್ಲಿಂದ ಕಳುಹಿಸಿದ್ದಳು. ಇದೇ ವಿಚಾರವಾಗಿ ರಾತ್ರಿ ಆಕೆ ಮನೆಗೆ ಬಂದ ಇಬ್ಬರು ಚಾಕುವಿನಿಂದ ಇರಿದು, ಹೊಡೆದಿದ್ದರು. ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಳೇ …

Read More »

ದೆಹಲಿ ರೈತ ಪ್ರತಿಭಟನೆ: ಚಳಿ ತಾಳಲಾರದೆ ಕಳೆದ 20 ದಿನಗಳಲ್ಲಿ 22 ರೈತರು ಸಾವು

ನವದೆಹಲಿ: ಮೂರು ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ 20 ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆ ವೇಳೆ 22 ರೈತರು ಸಾವನ್ನಪ್ಪಿದ್ದಾರೆ ಎಂದು ಸಂಯುಕ್ತ್ ಕಿಸಾನ್ ಮೋರ್ಚಾ ಹೇಳಿದೆ. ದೆಹಲಿ ಹಾಗೂ ಹರಿಯಾಣದ ಸಿಂಗು ಹಾಗೂ ಟಿಕ್ರಿ ಗಡಿ ಪ್ರದೇಶಗಳಲ್ಲಿ ರೈತರು ಭಾರಿ ಪ್ರಮಾಣದಲ್ಲಿ ಸೇರಿದ್ದು, ತೀವ್ರ ಚಳಿಯ ನಡುವೆಯೂ ಕೇಂದ್ರ ಸರ್ಕಾರದ ಕೃಷಿ ಕಾನೂನು ವಿರೋಧಿಸಿ ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಈಗಾಗಲೇ ಟಿಕ್ರಿ ಹಾಗೂ ಸಿಂಘು …

Read More »

ಬೆಳಗಾವಿಯ ಸಾಹುಕಾರ್ ಗೆ ಶಾಕ್ ನೀಡಿದ ಸಿಎಂ ಬಿಎಸ್ ವೈ

ಬೆಂಗಳೂರು: ರಮೇಶ್ ಜಾರಕಿಹೊಳಿ ಅವರ ಅನುಪಸ್ಥಿತಿಯಲ್ಲಿ ಅವರ ಇಲಾಖೆಗೆ ಸೇರಿದ ಕೆಲ ಮಹತ್ವದ ಪ್ರಸ್ತಾವನೆಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ ಅನುಮೋದನೆ ನೀಡಿದ್ದಾರೆ. ಬೆಳಗಾವಿ ಸಾಹುಕಾರ ಅವರ ರಾಜಕೀಯ ವೇಗಕ್ಕೆ ಕಡಿವಾಣ ಹಾಕಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂದೇಶ ರವಾನಿಸುವ ಸಲುವಾಗಿಯೇ ಆ ಕೆಲಸ ನಿರ್ವಹಿಸಿದರಾ ಎಂಬುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ಹುಟ್ಟು ಹಾಕಿದೆ. ಡಿಸೆಂಬರ್ 2, ಬೆಳಗಾವಿಯಲ್ಲಿ ಬಿಜೆಪಿಯ ಕಾರ್ಯಕಾರಣಿ ಸಭೆ ನಡೆದಿತ್ತು. ರಮೇಶ ಜಾರಕಿಹೊಳಿ ಸಭೆಯಲ್ಲಿ …

Read More »

ಮೋದಿಯ ಬಣ್ಣದ ಮಾತಿಗೆ ದೇಶ ಮರುಳಾಗಿದೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ರಾಯಬಾಗ: ‘ ಪ್ರಧಾನಿ ಮೋದಿಯ ಬಣ್ಣದ ಮಾತಿಗೆ ಈಗಾಗಲೇ ದೇಶ ಮರುಳಾಗಿದೆ. ಇದೇನು ಹೊಸದೆನಲ್ಲ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವ್ಯಂಗ್ಯವಾಡಿದರು. ಪಟ್ಟಣದಲ್ಲಿ ನಡೆದ ಗ್ರಾಮ ಪಂಚಾಯಿತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಗೋ ಹತ್ಯೆ ನಿಷೇಧ ಕಾಯ್ದೆ ಏನು ಹೊಸದಲ್ಲ. 1965ರಲ್ಲಿಯೇ ನೆಹರು ಅವರು ಜಾರಿಗೆ ತಂದಿದ್ದರು. ಆದರೆ ಈಗ ಬಿಜೆಪಿ ಸರ್ಕಾರ ಅದಕ್ಕೆ ಸುಣ್ಣ ಬಣ್ಣ ಬಳೆದು, ಅಲಂಕರಿಸಿ ಹೊರಟ್ಟಿದ್ದಾರೆ. ದೇಶದ ಜನರು ಬಣ್ಣದ ಮಾತಿಗೆ …

Read More »