ಬೆಳಗಾವಿ- ಕನ್ನಡಿಗರು ಹಬ್ಬದ ದಿನ ರಾಜ್ಯೋತ್ಸವದ ದಿನ ಮಹಾರಾಷ್ಟ್ರ ಸರ್ಕಾರವೇ ಕಪ್ಪು ದಿನ ಆಚರಿಸುವ ಮೂಲಕ ಎಂಈಎಸ್ ಗೆ ಬೆಂಬಲ ನೀಡಲು ನಿರ್ಧರಿಸಿ ಭಾರತದ ಒಕ್ಕೂಟದ ವ್ಯೆವಸ್ಥೆಗೆ ಧಕ್ಕೆ ತರುವ ಪ್ರಯತ್ನ ಮಾಡುತ್ತಿರುವಾಗ ಅದಕ್ಕೆ ತಕ್ಕ ಉತ್ತರ ಕೊಡಬೇಕಾದ ನಮ್ಮ ಸರ್ಕಾರ ಮಲಗಿದೆಯಾ ? ಎನ್ನುವ ಪ್ರಶ್ನೆ ಈಗ ಎದುರಾಗಿದೆ. ಕಪ್ಪು ಪಟ್ಟಿ ಧರಿಸಿ,ಕಪ್ಪು ದಿನ ಆಚರಣೆಗೆ ಬೆಂಬಲ ನೀಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿ ಈ ಕುರಿತು ಮಹಾರಾಷ್ಟ್ರ ಗಡಿ …
Read More »ಕೊರೊನಾ ಸಂಕಷ್ಟ ಸಮಯದಲ್ಲಿ ಅಕ್ಕಿ-ಆಹಾರ ಕಿಟ್ ನೀಡಿರುವುದು ದೊಡ್ಡತನ.ನಟ ದರ್ಶನ್ ಹೇಳಿದರು.
ಬೆಂಗಳೂರು: ಕೊರೊನಾ ಸಂಕಷ್ಟ ಸಮಯದಲ್ಲಿ ಅಕ್ಕಿ-ಆಹಾರ ಕಿಟ್ ನೀಡಿರುವುದು ದೊಡ್ಡತನ. ಮುನಿರತ್ನರ ಆ ದೊಡ್ಡತನದಿಂದಲೇ ನಾನು ಪ್ರಚಾರಕ್ಕೆ ಬಂದಿದ್ದೇನೆ ಎಂದು ನಟ ದರ್ಶನ್ ಹೇಳಿದರು. ಮಾನವೀಯ ದೃಷ್ಟಿಯಿಂದಷ್ಟೇ ಪ್ರಚಾರಕ್ಕೆ ಹೋಗುತ್ತಿದ್ದೇನೆ. ನಾನು ಯಾವುದೇ ಪಕ್ಷ ನೋಡಿ ಪ್ರಚಾರಕ್ಕೆ ಹೋಗುತ್ತಿಲ್ಲ. ವ್ಯಕ್ತಿ ನೋಡಿ ಮುನಿರತ್ನ ಪರ ಪ್ರಚಾರಕ್ಕೆ ಹೋಗುತ್ತಿದ್ದೇನೆ ಎಂದು ದರ್ಶನ್ ಹೇಳಿದರು. ಕೊರೊನಾ ಟೈಮಲ್ಲಿ ಮುನಿರತ್ನ ಅನ್ನ ದಾಸೋಹ ನಡೆಸಿದ್ದಾರೆ. ಲಾಕ್‍ಡೌನ್ ಅವಧಿಯಲ್ಲಿ ಅವರ ಸೇವೆಯನ್ನ ನೋಡೋಣ. ಮಾನವೀಯತೆ ನೋಡಿ ಮುನಿರತ್ನ …
Read More »ಶೆಟ್ಟಿಹಳ್ಳಿಯ ವೇರ್‌ಹೌಸ್ ಬಳಿ ಯುವಕನ ಬರ್ಬರ ಕೊಲೆಯಾಗಿರುವ ಘಟನೆ ನಡೆದಿದೆ.
ಬೆಂಗಳೂರು: ಜಿಲ್ಲೆಯ ಆನೇಕಲ್ ತಾಲೂಕಿನ ಶೆಟ್ಟಿಹಳ್ಳಿಯ ವೇರ್‌ಹೌಸ್ ಬಳಿ ಯುವಕನ ಬರ್ಬರ ಕೊಲೆಯಾಗಿರುವ ಘಟನೆ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ 25 ವರ್ಷದ V.Y. ವಿನುತ್ ಎಂಬಾತನನ್ನು ಹತ್ಯೆ ಮಾಡಲಾಗಿದೆ. ಕೆಲಸಕ್ಕೆ ತೆರಳುತ್ತಿದ್ದ ವೇಳೆ ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ ಎಸಗಲಾಗಿದ್ದು ಹಳೇ ದ್ವೇಷದ ಹಿನ್ನೆಲೆಯಲ್ಲಿ ವಿನುತ್ ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಅತ್ತಿಬೆಲೆ ಠಾಣೆ ಪೊಲೀಸರ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ವಿನುತ್ ಬೆಸ್ತಮಾನಹಳ್ಳಿ ನಿವಾಸಿ ಎಂದು …
Read More »IPL ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಹಣ ಕಳೆದುಕೊಂಡಿರುವ ಶಂಕೆಯಡಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ
ಬೆಂಗಳೂರು: IPL ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಹಣ ಕಳೆದುಕೊಂಡಿರುವ ಶಂಕೆಯಡಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. 20 ವರ್ಷದ ಮಂಜುನಾಥ್ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಕಳೆದ ಒಂದು ವಾರದ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ಮಂಜುನಾಥ್ ಇಂದು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ವಿದ್ಯಾಭ್ಯಾಸಕ್ಕೆಂದು ಅಜ್ಜಿ ಮನೆಗೆ ಬಂದಿದ್ದ ಮಂಜುನಾಥ್ ಕಳೆದ ವಾರ ಇದ್ದಕ್ಕಿದ್ದಂತೆ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ. ಆಗ, ಕಾರಣ ತಿಳಿದಯದೇ ಇದ್ದ ಕುಟುಂಬಸ್ಥರಿಗೆ …
Read More »ಬ್ಯಾಂಕಿಂಗ್ ಸೇವೆಗಳಿಗೆ ಸಂಬಂಧಿಸಿದ ಎಲ್ಲ ನೇಮಕಾತಿ ಪರೀಕ್ಷೆಗಳನ್ನು ರಾಜ್ಯ ಭಾಷೆಗಳಲ್ಲಿ ನಡೆಸುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ನಿರಂತರವಾಗಿ ಒತ್ತಾಯಿಸುತ್ತಾ ಬಂದಿದೆ.
ಬೆಂಗಳೂರು: ಬ್ಯಾಂಕಿಂಗ್ ಸೇವೆಗಳಿಗೆ ಸಂಬಂಧಿಸಿದ ಎಲ್ಲ ನೇಮಕಾತಿ ಪರೀಕ್ಷೆಗಳನ್ನು ರಾಜ್ಯ ಭಾಷೆಗಳಲ್ಲಿ ನಡೆಸುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ನಿರಂತರವಾಗಿ ಒತ್ತಾಯಿಸುತ್ತಾ ಬಂದಿದೆ. ಈ ಸಂಬಂಧ ಹಲವು ಭಾರಿ ಕೇಂದ್ರ ವಿತ್ತ ಸಚಿವರನ್ನು ಖುದ್ದು ಭೇಟಿ ಮಾಡಿ ಮನವಿ, ಮೊರೆಗಳನ್ನು ಸಲ್ಲಿಸಿದ್ದಾರೆ. ಆದರೂ ಸಹ ಹಳೆಯ ಮಾರ್ಗಸೂಚಿಗಳನ್ವಯ ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತಿರುವ ಐಬಿಪಿಎಸ್ ಕ್ರಮ ಖಂಡನಾರ್ಹವಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಕನ್ನಡ …
Read More »ಅಕ್ರಮವಾಗಿ ಮಣ್ಣುಮುಕ್ಕ ಹಾವು ಸಾಗಿಸುತ್ತಿದ್ದ ಐವರನ್ನು ಬಂಧಿಸಿ ಅರಣ್ಯಾಧಿಕಾರಿಗಳು ಅವರಿಂದ ಮೂರು ಅಡಿ ಉದ್ದದ ಎರಡು ತಲೆಯ
ಮೈಸೂರು: ಅಕ್ರಮವಾಗಿ ಮಣ್ಣುಮುಕ್ಕ ಹಾವು ಸಾಗಿಸುತ್ತಿದ್ದ ಐವರನ್ನು ಬಂಧಿಸಿ ಅರಣ್ಯಾಧಿಕಾರಿಗಳು ಅವರಿಂದ ಮೂರು ಅಡಿ ಉದ್ದದ ಎರಡು ತಲೆಯ ಹಾವನ್ನು ರಕ್ಷಿಸಿದ್ದಾರೆ. ದೊಡ್ಡಯ್ಯ (45), ಹೇಮಂತ್(19), ಯೋಗೇಶ್(24), ರವಿ(35), ಭರಮೇಗೌಡ(23) ಬಂಧಿತರು. ಆರ್‌ಎಫ್‌ಒ ವಿವೇಕ್ ನೇತ್ರತ್ವದಲ್ಲಿ ಕಾರ್ಯಾಚರಣೆ ನಡೆಸಿ ಬೆಂಗಳೂರಿನಿಂದ ಮೈಸೂರಿಗೆ ಅಕ್ರಮವಾಗಿ ಮಣ್ಣುಮುಕ್ಕ ಹಾವನ್ನು ಮಾರಾಟ ಮಾಡಲು ಕಾರಿನಲ್ಲಿ ಬರುತ್ತಿದ್ದವರನ್ನು ಮೈಸೂರಿನ ಸಿದ್ದಲಿಂಗಪುರ ಬಳಿ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಹಾಗೂ ಹಾವನ್ನು ರಕ್ಷಣೆ ಮಾಡಿದ್ದಾರೆ.
Read More »ಪುಲ್ವಾಮಾ ದಾಳಿ ನಮ್ಮ ಸಮುದಾಯದ ಯಶಸ್ಸು ಎಂದ ಪಾಕ್ ಸಚಿವ
ಇಸ್ಲಾಮಾಬಾದ್: ನೆರೆಯ ದುಷ್ಟ ಪಾಕಿಸ್ತಾನ 20 ತಿಂಗಳ ತಾನು ಎಸಗಿದ ಘೋರಕೃತ್ಯವನ್ನ ಒಪ್ಪಿಕೊಂಡಿದೆ. ಪುಲ್ವಾಮಾ ದಾಳಿಯ ತಮ್ಮ ಸಮುದಾಯ ಯಶಸ್ಸು ಎಂದು ಪಾಕಿಸ್ತಾನ ಸಚಿವ ಫವಾದ್ ಖಾನ್ ಸಂಸತ್ ನಲ್ಲಿಯೇ ಹೇಳಿಕೆ ನೀಡಿದ್ದಾರೆ. ಇಂದು ಮುಸ್ಲಿಂ ಲೀಗ್ ಎನ್ ಪಕ್ಷದ ನೇತಾರ ಅಯಾಜ್ ಸಾದಿಕ್ ಪ್ರಶ್ನೆಗೆ ಫವಾದ್ ಖಾನ್ ಉತ್ತರಿಸುತ್ತಿದ್ದರು. ಭಾರತ ವಾಯುಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ವಶಕ್ಕೆ ಪಡೆದ ವೇಳೆ ವಿದೇಶಾಂಗ ಸಚಿವ ಖುರೇಷಿ ಭಯಗೊಂಡಿದ್ದರು. ಆರ್ಮಿ ಚೀಫ್ …
Read More »ಬ್ರಿಟಿಷ್ ರಾಯಲ್ ಫ್ಯಾಮಿಲಿಯಿಂದ ಮನೆ ಕೆಲಸದವರ ಹುಡುಕಾಟ- 18.5 ಲಕ್ಷ ರೂ. ಸಂಬಳ
ಲಂಡನ್: ಬ್ರಿಟಿಷ್ ರಾಯಲ್ ಫ್ಯಾಮಿಲಿ ಮನೆ ಕೆಲಸದವರಿಗಾಗಿ ಹುಡುಕಾಟ ನಡೆಸುತ್ತಿದ್ದು, ಬರೋಬ್ಬರಿ 18.5 ಲಕ್ಷ ರೂ. ಆರಂಭಿಕ ಸಂಬಳ ನೀಡುವುದಾಗಿ ಘೋಷಿಸಿದೆ. ರಾಜ ಮನೆತನದ ಅಧಿಕೃತ ವೆಬ್‍ಸೈಟ್ ರಾಯಲ್ ಹೌಸ್‍ಹೋಲ್ಡ್‍ನಲ್ಲಿ ಈ ಕುರಿತು ಪ್ರಕಟಿಸಿದ್ದು, ಇದು 2ನೇ ಹಂತದ ಅಪ್ರಂಟಿಸ್‍ಶಿಪ್(ತರಬೇತಿ ಅವಧಿ) ಕೆಲಸವಾಗಿದೆ. ಆಯ್ದ ಅಭ್ಯರ್ಥಿಗಳು ಮಾತ್ರ ವಿಂಡ್ಸರ್ ಕ್ಯಾಸ್ಟಲ್‍ನಲ್ಲಿ ವಾಸಿಸಬೇಕಾಗಿರುತ್ತದೆ ಎಂದು ತಿಳಿಸಲಾಗಿದೆ. ಈಗಾಗಲೇ ಹೇಳಿದ ಹಾಗೆ ಇದೊಂದು ಎರಡನೇ ಹಂತದ ಅಪ್ರೆಂಟಿಸ್‍ಶಿಪ್ ಕೆಲಸವಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಇಂಗ್ಲೆಂಡ್‍ನ …
Read More »ರವೀಂದ್ರ ಜಡೇಜಾ ಅವರ ಸ್ಫೋಟಕ ಆಟದಿಂದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 5 ವಿಕೆಟ್‌ಗಳ ರೋಚಕ ಜಯ
ದುಬೈ: ಆಲ್‌ರೌಂಡರ್ ರವೀಂದ್ರ ಜಡೇಜಾ ಅವರ ಸ್ಫೋಟಕ ಆಟದಿಂದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 5 ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ. ಗೆಲ್ಲಲು 173 ರನ್‌ಗಳ ಸವಾಲನ್ನು ಪಡೆದ ಚೆನ್ನೈ ಅಂತಿಮವಾಗಿ 20 ಓವರ್‌ಗಳಲ್ಲಿ 178 ರನ್ ಹೊಡೆಯಿತು. ಈ ಪಂದ್ಯವನ್ನು ಕೋಲ್ಕತ್ತಾ ಸೋತಿರುವ ಕಾರಣ ಪ್ಲೇ ಆಫ್ ಹಾದಿ ಕಠಿಣವಾಗಿದ್ದು ಉಳಿದ ತಂಡಗಳ ಫಲಿತಾಂಶದ ಮೇಲೆ ನಿರ್ಧಾರವಾಗಲಿದೆ. ಚೆನ್ನೈ ಗೆದ್ದಿದ್ದು ಹೇಗೆ? 17. 2 …
Read More »ಡಿ.1ರವರೆಗೆ ಮತ್ತೆ ಲಾಕ್‍ಡೌನ್..!
ಜರ್ಮನಿ,ಅ.29- ವಿಶ್ವವನ್ನೇ ಕಂಗೆಡಿಸಿರುವ ಮಹಾಮಾರಿ ಕೊರೊನಾ ಕೆಲವು ದೇಶಗಳಲ್ಲಿ ನಿಯಂತ್ರಣದಲ್ಲಿದ್ದರೂ ಇನ್ನು ಕೆಲವು ದೇಶಗಳಲ್ಲಿ ತನ್ನ ಅಬ್ಬರವನ್ನು ಮುಂದುವರೆಸಿದ್ದು ಆತಂಕಕಾರಿಯಾಗಿದೆ. ಕೊರೊನಾ ಮಹಾಮಾರಿಯನ್ನು ತಡೆಯಲು ಆಯಾ ದೇಶಗಳಲ್ಲಿ ಅಗತ್ಯವಾದ ಕ್ರಮಗಳನ್ನು ಕೈಗೊಂಡಿದ್ದರೂ ಇದರ ಕಾಟ ಕಡಿಮೆಯಾಗದಿರುವುದರಿಂದ ಕೆಲವು ದೇಶಗಳಲ್ಲಿ ಮತ್ತೆ ಲಾಕ್‍ಡೌನ್ ಏರಿಕೆ ಮಾಡಲು ಸರ್ಕಾರಗಳು ಮುಂದಾಗಿವೆ. ಜರ್ಮನಿ ಹಾಗೂ ಫ್ರಾನ್ಸ್ ಗಳಲ್ಲಿ ಕೊರೊನಾ ಮಹಾಮಾರಿಯ ಕಾಟ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇರುವುದರಿಂದ ಆ ದೇಶಗಳಲ್ಲಿ 2ನೇ ಲಾಕ್‍ಡೌನ್ ಮಾಡಲು …
Read More »