Breaking News

ಅಂತರಾಷ್ಟ್ರೀಯ

ಬಿಗ್ ಬಿ ಯಾವತ್ತಿಗೂ ಬ್ಯುಸಿ ಬೀ!

ಬಾಲಿವುಡ್​ನಲ್ಲೀಗ ಅತ್ಯಂತ ಚಲಾವಣೆಯಲ್ಲಿರುವ ಅಥವಾ ಲಾಕ್​ಡೌನ್ ಹೊರತಾಗಿಯೂ ಬಹಳ ಬ್ಯುಸಿಯಾಗಿರುವ ನಟ ಯಾರೆಂದು ಊಹಿಸಬಲ್ಲಿರಾ ? ನಿಮಗೆ ಆಶ್ಚರ್ಯವಾಗಬಹುದು . ಕೊವಿಡ್ -19 ಸೋಂಕಿಗೆ ಹೆದರಿ ಬಹಳಷ್ಟು ನಟ – ನಟಿಯರು ತಮ್ಮ ಮನೆಗಳಿಂದ ಆಚೆ ಬರುತ್ತಿಲ್ಲ . ಆದರೆ , ತನ್ನ ಕುಟುಂಬದ ಕೆಲವು ಸದಸ್ಯರೊಂದಿಗೆ ಖುದ್ದು ಸೋಂಕಿಗೊಳಗಾಗಿ ಮೂರು ವಾರಗಳ ಕಾಲ ಮುಂಬೈನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆದು ಮನೆಗೆ ಹಿಂತಿರುಗಿದ ಬಾಲಿವುಡ್​ನ ಮೆಗಾ ಸ್ಟಾರ್ ಅಮಿತಾಬ್ ಬಚ್ಚನ್ ಈಗ ದಿನವಿಡೀ ಕೆಲಸ ಮಾಡಿಕೊಂಡೇ ಇದ್ದಾರೆ . ಹೌದು , ನಿನ್ನೆಯಷ್ಟೇ ( ಅಕ್ಟೋಬರ್ 11) ತಮ್ಮ 78 ನೇ ಹುಟ್ಟಹಬ್ಬವನ್ನು ಬಹಳ ಸರಳ ರೀತಿಯಲ್ಲಿ ಕುಟುಂಬದ …

Read More »

ವಿವಿಧ ಸಮುದಾಯದ ಜನರು ಸ ಹೃದಯ ಸಹಬಾಳ್ವೆಯಿಂದ ಬಾಳಬೇಕು

  ಅಥಣಿ  : ದೇಶದಲ್ಲಿ ಬದುಕುತ್ತಿರುವ ವಿವಿಧ ಸಮುದಾಯದ ಜನರು ಸ ಹೃದಯ ಸಹಬಾಳ್ವೆಯಿಂದ ಬಾಳಬೇಕು . ಸಮಾಜದಲ್ಲಿ ಸಮಾನತೆ  ಸಮಾಜ ನಿರ್ಮಿಸಲು ಪ್ರತಿಯೊಬ್ಬರು ಕೈಜೊಡಿಸಬೇಕೆಂದು ಅಥಣಿ  ಸಮಾಜ ಕಲ್ಯಾಣ ಇಲಾಖೆ ಅಧೀಕ್ಷಕರಾದ ಜ್ಯೋತಿ ನರೋಟಿ  ಹೇಳಿದರು . ಜಿಲ್ಲಾ ಪಂಚಾಯತ ಬೆಳಗಾವಿ ತಾಲೂಕಾ ಆಡಳಿತ ಸಮಾಜ ಕಲ್ಯಾಣ ಇಲಾಖೆ ಅಥಣಿ  ಹಾಗೂ ಗ್ರಾಮ ಪಂಚಾಯತ ನದಿ ಇಂಗಳಗಾಂವ  ಇವರ ಸಹಯೋಗದಲ್ಲಿ ಅಸ್ಪೃಶ್ಯತಾ ನಿರ್ಮೂಲನೆ ಸಮುದಾಯದ ಅಭಿವೃದ್ಧಿ ಕಾರ್ಯಕ್ರಮಗಳ ಜಾಗೃತಿ …

Read More »

ರೇಣುಕಾ ಯಲ್ಲಮ್ಮ ದೇಗುಲದ‌ ಬಳಿ ಅಕ್ರಮ ಕಟ್ಟಡ! ನಿರ್ಮಾಣಕ್ಕೆ ಮಧ್ಯಂತರ ತಡೆ

ಬೆಳಗಾವಿ: ರೇಣುಕಾ ಯಲ್ಲಮ್ಮ ದೇಗುಲದ‌ ಬಳಿ ಅಕ್ರಮ ಕಟ್ಟಡ ನಿರ್ಮಾಣ ಆರೋಪಕ್ಕೆ ಸಂಬಂಧಿಸಿ ದೇವಸ್ಥಾನದ 100 ಮೀಟರ್ ವ್ಯಾಪ್ತಿಯಲ್ಲಿನ ಕಟ್ಟಡ ನಿರ್ಮಾಣಕ್ಕೆ ಹೈಕೋರ್ಟ್ ವಿಭಾಗೀಯ ಪೀಠದಿಂದ ಮಧ್ಯಂತರ ತಡೆ ನೀಡಲಾಗಿದೆ.   ಸವದತ್ತಿಯ ದೇವಸ್ಥಾನ ಸಂರಕ್ಷಿತ ಸ್ಮಾರಕ ಸವದತ್ತಿಯ ರೇಣುಕಾ ಯಲ್ಲಮ್ಮ ದೇವಸ್ಥಾನ ಸಂರಕ್ಷಿತ ಸ್ಮಾರಕ. ಹಾಗಾಗಿ, ಅದರ 100 ಮೀಟರ್ ಸುತ್ತಳತೆಯಲ್ಲಿ ಕಟ್ಟಡ ನಿರ್ಮಿಸುವಂತಿಲ್ಲ ಎಂದು ಉಚ್ಚ ನ್ಯಾಯಾಲಯವು ಹೇಳಿದೆ. ದೇವಸ್ಥಾನದ ಸುತ್ತ ನಿಯಮ ಮೀರಿ ಅಕ್ರಮ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ …

Read More »

ಸೀತಾಫಲ ಹಣ್ಣು ತರಲು ಬೆಟ್ಟಕ್ಕೆ ಹೋದ ಮಹಿಳೆ ವಾಪಸ್​ ಬರಲೇ ಇಲ್ಲ..

ಕಲಬುರಗಿ: ಹಳ್ಳ ದಾಟುವಾಗ ನೀರಿನಲ್ಲಿ ಕೊಚ್ಚಿಹೋಗಿದ್ದ ಮಹಿಳೆಯೊಬ್ಬಳ ಮೃತದೇಹ ಇಂದು ಪತ್ತೆಯಾಗಿದೆ. ಜಿಲ್ಲೆಯ ಕಮಲಾಪುರ ತಾಲೂಕಿನ ಮರಗುತ್ತಿ ತಾಂಡಾದ ನಿವಾಸಿ ಶಾಂತಾಬಾಯಿ(40) ಮೃತ ದರ್ದೈವಿ. ದಡದ ಮರದ ಕೊಂಬೆಯಲ್ಲಿ ಶವ ಪತ್ತೆ.. ಶಾಂತಾಬಾಯಿ ಹಳ್ಳ ದಾಟಲು ಹೋಗಿ ನೀರಿನ ರಭಸಕ್ಕೆ ಸಿಲುಕಿ ಕೊಚ್ಚಿಹೋಗಿದ್ದಳು. ಸೀತಾಫಲ ಹಣ್ಣು ತರಲು ಬೆಟ್ಟಕ್ಕೆ ಹೋಗಿ ವಾಪಸ್ ಬರುವಾಗ ಹಳ್ಳದಲ್ಲಿ ಕೊಚ್ಚಿ ಹೋಗಿದ್ದಳು. ಇಂದು ಕಮಲಾಪುರ ತಾಲೂಕಿನ ಮರಗುತ್ತಿ ತಾಂಡಾ ಬಳಿಯಿರುವ ಹಳ್ಳದ ದಡದ ಮರದ ಕೊಂಬೆಯಲ್ಲಿ …

Read More »

ವರುಣನ ಆರ್ಭಟಕ್ಕೆ ಗೋಡೆ ಗಡಗಡ: ನಡುಗಿದ ಐತಿಹಾಸಿಕ ಸವದತ್ತಿ ಕೋಟೆ

ಬೆಳಗಾವಿ: ಜಿಲ್ಲೆಯಾದ್ಯಂತ ಭಾರಿ ಮಳೆ ಸಂಭವಿಸಿದೆ. ವರುಣನ ಆರ್ಭಟಕ್ಕೆ ಐತಿಹಾಸಿಕ ಸವದತ್ತಿ ಕೋಟೆಯ ಒಂದು ಭಾಗ ಕುಸಿದಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ಪುರಾತನ ನಗರಗಳಲ್ಲಿ ಒಂದು. ಆದರೆ ಮಳೆಯ ಪ್ರಭಾವದಿಂದಾಗಿ ತಮ್ಮ ಧಾರ್ಮಿಕತೆ, ಇತಿಹಾಸ ಸಾರುತ್ತಿದ್ದ ಪುರಾತನ ಕಲೆಗಳಿಗೆ ಹಾನಿಯಾಗುತ್ತಿದೆ. 18ನೇ ಶತಮಾನದಲ್ಲಿ ಜಯಪ್ಪ ದೇಸಾಯಿಯಿಂದ ನಿರ್ಮಿಸಲ್ಪಟ್ಟ ಸವದತ್ತಿ ಪಟ್ಟಣದಲ್ಲಿರುವ ಕೋಟೆಯ ಒಂದು ಭಾಗದ ಗೋಡೆ ಕುಸಿದಿದೆ. ಈ ಘಟನೆಯಿಂದಾಗಿ ಕೋಟೆ ಅಕ್ಕಪಕ್ಕದ ಜನರಲ್ಲಿ ಆತಂಕ ಉಂಟಾಗಿದೆ. ಗೋಡೆ ಕುಸಿಯುವ …

Read More »

IPL 2020: RCB vs KKR Live Score ರನ್ ಮಷಿನ್​ ಕೊಹ್ಲಿ ಬಳಗಕ್ಕೆ ಕೊಲ್ಕತ್ತಾ ನೈಟ್ ಚಾಲೆಂಜ್​..

ಮರಳುಗಾಡಿನ ಮಹಾಯುದ್ಧದಲ್ಲಿ ಆರ್​ಸಿಬಿ ಅಬ್ಬರ ಪಂದ್ಯದಿಂದ ಪಂದ್ಯಕ್ಕೆ ಜೋರಾಗ್ತಿದೆ. ಹೀಗಾಗಿ ಇಂದು ನಡೆಯುತ್ತಿರುವ ಆರ್​ಸಿಬಿ ಮತ್ತು ಕೆಕೆಆರ್ ನಡುವಿನ ಕದನ ತೀವ್ರ ಕುತೂಹಲ ಕೆರಳಿಸಿದೆ. ಟೂರ್ನಿಯ ಆರಂಭದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಮುಗ್ಗರಿಸಿದ್ರೂ, ನಂತರದ ಪಂದ್ಯಗಳಲ್ಲಿ ಗೆಲುವಿನ ಕೇಕೆ ಹಾಕಿ ಮುನ್ನುಗ್ಗುತ್ತಿದೆ. ಹೀಗಾಗಿ ದಿನೇಶ್ ಕಾರ್ತಿಕ್ ಪಡೆಯನ್ನ ಕೊಹ್ಲಿ ಪಡೆ ಕಟ್ಟಿ ಹಾಕಬೇಕು ಅಂದ್ರೆ, ಬ್ಯಾಟಿಂಗ್​ನಂತೆ ಬೌಲಿಂಗ್​ನಲ್ಲೂ ಅದ್ಭುತ ಪ್ರದರ್ಶನ ನೀಡಲೇಬೇಕು. ಐಪಿಎಲ್​ನಲ್ಲಿ ಇದುವರೆಗೂ ಆರ್​ಸಿಬಿ ಮತ್ತು ಕೆಕೆಆರ್ …

Read More »

ಅಮರನಾಥ್ ಜಾರಕಿಹೊಳಿ ಅವರಿಗೆ ಬೆಳಗಾವಿ ಲೋಕಸಭೆ ಬೈ ಎಲೆಕ್ಷನ್ ಟಿಕೆಟ್ ಎಂಬ ಸುದ್ದಿ

ಬೆಳಗಾವಿ: ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭೆ ಕ್ಷೇತ್ರದ ಉಪಚುನಾವಣೆ ಟಿಕೆಟ್ ಗಾಗಿ ಲಾಬಿ ಆರಂಭವಾಗಿದ್ದು, ಯಾರಿಗೆ ಟಿಕೆಟ್ ನೀಡಬೇಕು ಎಂಬುದು ಸದ್ಯಕ್ಕೆ ಬಿಜೆಪಿ ಕಠಿಣ ಸವಾಲಾಗಿದೆ. ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಪುತ್ರ ಅಮರನಾಥ್ ಅವರಿಗೆ ಬೆಳಗಾವಿ ಲೋಕಸಭೆ ಬೈ ಎಲೆಕ್ಷನ್ ಟಿಕೆಟ್ ಎಂಬ ಸುದ್ದಿ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಬೆಳಗಾವಿ ಲೋಕಸಭೆ ವ್ಯಾಪ್ತಿಗೆ ಬರುವ ಹಲವು ವಿಧಾನಸಭೆ ಕ್ಷೇತ್ರಗಳಲ್ಲಿ ಜಾರಕಿ ಹೊಳಿ …

Read More »

ನೆಲಮಂಗಲ: ಆತ್ಮಹತ್ಯೆಗೆ ಸಿದ್ಧತೆ ನಡೆಸಿದ್ದ ಹೆಂಡತಿಯನ್ನ ಕೊಂದವನಿಗೆ ಜೀವಾವಧಿ ಶಿಕ್ಷೆ!

ನೆಲಮಂಗಲ: 2013ರ ಕೊಲೆ ಆರೋಪಿಗೆ 55 ಸಾವಿರ ದಂಡದ ಜೊತೆಗೆ ಜೀವಾವಧಿ ಶಿಕ್ಷೆಯನ್ನು ಪ್ರಕಟಿಸಿ ನ್ಯಾಯಾಲಯ ತೀರ್ಪುಕೊಟ್ಟಿದೆ. ಕಾಂತರಾಜು ಅಲಿಯಾಸ್ ರಾಜು (31) ಶಿಕ್ಷೆಗೆ ಒಳಪಟ್ಟ ಅಪರಾಧಿ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ಗೊಲ್ಲಹಳ್ಳಿ ಗ್ರಾಮದಲ್ಲಿ ಹಸುಗಳನ್ನ ಸಾಕುವ ಕೆಲಸವನ್ನ ಅಪರಾಧಿ ಕಾಂತರಾಜು ಹಾಗೂ ಆತನ ಹೆಂಡತಿ ಮೃತೆ ಲಲಿತಾಬಾಯಿ ಮಾಡುತ್ತಿದ್ದರು. ಮೂಲತಃ ಚಿತ್ರದುರ್ಗ ಜಿಲ್ಲೆ ಕಾಟನಾಯಕನಹಳ್ಳಿಯವರಾದ ಇಬ್ಬರು ಜೀವನಾಧಾರಕ್ಕಾಗಿ ನೆಲಮಂಗಲದ ಗೊಲ್ಲಹಳ್ಳಿಗೆ ಬಂದಿದ್ದು, ಅಪರಾಧಿ ಕಾಂತರಾಜ್ ತನಗಿಂತ …

Read More »

ನಮ್ಮ ಪೊಲೀಸರು ಕೆ.ಕಲ್ಯಾಣ್​ರ ಪತ್ನಿ, ಅತ್ತೆ-ಮಾವ ಅವರನ್ನ ರಕ್ಷಿಸಿದ್ದಾರೆ -DCP ವಿಕ್ರಂ

ಬೆಳಗಾವಿ: ಚಿತ್ರಸಾಹಿತಿ ಕೆ. ಕಲ್ಯಾಣ ದಾಂಪತ್ಯದಲ್ಲಿ ಕಲಹ ಪ್ರಕರಣಕ್ಕೆ ಸಂಬಂಧಿಸಿ ನಗರದಲ್ಲಿ ಇಂದು ಡಿಸಿಪಿ ವಿಕ್ರಂ ಆಮ್ಟೆ ಸುದ್ದಿಗೋಷ್ಠಿ ನಡೆಸಿದರು. ನಮ್ಮ ಪೊಲೀಸರು ಕೆ.ಕಲ್ಯಾಣ್ ಅವರ ಪತ್ನಿ ಹಾಗೂ ಅತ್ತೆ, ಮಾವ ಅವರನ್ನ ರಕ್ಷಿಸಿದ್ದಾರೆ. ಜೊತೆಗೆ, ಆರೋಪಿ ಶಿವಾನಂದ ವಾಲಿನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ. ಬಂಧಿತನ ಬಳಿಯಿದ್ದ 9 ಮ್ಯಾಕ್ಸಿ ಕ್ಯಾಬ್, 350 ಗ್ರಾಂ ಚಿನ್ನ, 6 ಕೆಜಿ ಬೆಳ್ಳಿ ಜಪ್ತಿ ಮಾಡಿಕೊಂಡಿದ್ದೇವೆ ಎಂದು ಡಿಸಿಪಿ ವಿಕ್ರಂ ಆಮ್ಟೆ ಹೇಳಿದ್ದಾರೆ. …

Read More »

ಹಿರಿಯ ರಾಜಕಾರಣಿ, ಮಾಜಿ ಶಾಸಕ ಕೆ ಮಲ್ಲಪ್ಪ ನಿಧನ

ದಾವಣಗೆರೆ: ಹಿರಿಯ ರಾಜಕಾರಣಿ ಹಾಗೂ ಮಾಜಿ ಶಾಸಕ ಕೆ.ಮಲ್ಲಪ್ಪ (92) ನಿಧನರಾಗಿದ್ದಾರೆ. ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಇಂದು ಬೆಳಿಗ್ಗೆ ದಾವಣಗೆರೆ ನಗರದ ಆಂಜನೇಯ ಬಡಾವಣೆಯ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಕೆ.ಮಲ್ಲಪ್ಪನವರು ಜಿಲ್ಲೆಯ ಮಾಯಕೊಂಡ ಹಾಗೂ ಹರಿಹರ ಕ್ಷೇತ್ರದಿಂದ ಎರಡು ಸಲ ಶಾಸಕ ಹಾಗೂ ಒಮ್ಮೆ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಕುಸ್ತಿ ಜೀರ್ಣೋದ್ಧಾರಕ ಸಂಘದ ಅಧ್ಯಕ್ಷರಾಗಿ ಹೆಸರು ಮಾಡಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತರಾಗಿದ್ದ ಕೆ.ಮಲ್ಲಪ್ಪ ಅಹಿಂದಾ …

Read More »