Breaking News

ಅಂತರಾಷ್ಟ್ರೀಯ

ಕೆಪಿಸಿಸಿ ವಕ್ತಾರರಾಗಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕ :ಡಿ ಕೆ ಶಿವಕುಮಾರ್ ಆದೇಶ

ಬೆಳಗಾವಿ : ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರನ್ನು ಕೆಪಿಸಿಸಿ ವಕ್ತಾರರನ್ನಾಗಿ ನೇಮಿಸಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ ಆದೇಶ ಹೊರಡಿಸಿದ್ದಾರೆ. ಯಾವುದೇ ವಿಷಯವನ್ನು ಅತ್ಯಂತ ಸಮರ್ಥವಾಗಿ ನಿರ್ವಹಿಸುವ ಸಾಮರ್ಥ್ಯ ಲಕ್ಷ್ಮಿ ಹೆಬ್ಬಾಳ್ಕರ್​ ಅವರಿಗಿದೆ. ಇದನ್ನು ಗಮನಿಸಿ ಅವರಿಗೆ ಈ ಮಹತ್ವದ ಹುದ್ದೆಯನ್ನು ನೀಡಲಾಗಿದೆ ಎಂದು ಡಿಕೆಶಿ ಆದೇಶದಲ್ಲಿ ಉಲ್ಲೇಖಿಸಿದ್ದಾರೆ. ಮಾಧ್ಯಮಗಳಲ್ಲಿ ನಮ್ಮ ವಿಚಾರ, ದೃಷ್ಟಿಕೋನ ಪರಿಣಾಮಕಾರಿಯಾಗಿ ಬಿಂಬಿತವಾಗಬೇಕಾಗಿರುವುದು ಅಗತ್ಯವಾಗಿದೆ. ತಮಗಿರುವ ಅನುಭವ, ತಿಳುವಳಿಕೆಗಳೊಂದಿಗೆ ವಿಷಯವನ್ನು ಸಮರ್ಥವಾಗಿ …

Read More »

ಫಾದರ್‌ ಲೈಂಗಿಕ ಕಿರುಕುಳ: SP ಕಚೇರಿ ಆವರಣದಲ್ಲಿ ಆತ್ಮಹತ್ಯೆಗೆ ಯತ್ನ

ಕಲಬುರಗಿ: ಫಾದರ್​ನಿಂದ‌ ಲೈಂಗಿಕ ಕಿರುಕುಳ ಆರೋಪಿಸಿ ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲಿ ಮಹಿಳೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಲಬುರಗಿ ನಗರದ ಪೊಲೀಸ್ ಕಮೀಷನರ್ ಕಚೇರಿ ಮುಂದೆ ನಡೆದಿದೆ. ಕಲಬುರಗಿ ನಗರದ ಸೆಂಟ್ ಮೇರಿ ಕ್ಯಾಥೆಡ್ರಲ್ ಚರ್ಚ್​ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಸಂತ್ರಸ್ತೆಗೆ ಚರ್ಚ್​ನ ಫಾದರ್​ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಸಂತ್ರಸ್ಥೆಗೆ ಆರೋಪಿಸಿದ್ದಾರೆ. ಒಮ್ಮೆ ಚರ್ಚ್​ನ ಫಾದರ್ ಕ್ಲೀವನ್ ಎಂಬುವವರು ರೂಂ ಕ್ಲೀನ್ ಮಾಡಲು ಕರೆದು ಸಂತ್ರಸ್ತೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು …

Read More »

ಅಪಾರ್ಟ್‌ಮೆಂಟ್ ನಿರ್ಮಾಣಕ್ಕೆ ಕೋಟಿ ಕೋಟಿ ಲಂಚ -BSY ಕುಟುಂಬದ ವಿರುದ್ಧ KPCC ಗಂಭೀರ ಆರೋಪ

ಬೆಂಗಳೂರು: ಕೆಪಿಸಿಸಿ ಉಸ್ತುವಾರಿಯಾಗಿ ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಹಿರಿಯ ಕಾಂಗ್ರೆಸ್​ ನಾಯಕ ರಣದೀಪ್ ಸುರ್ಜೇವಾಲ ಸಿಎಂ ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು ಉಸ್ತುವಾರಿ ವಹಿಸಿಕೊಂಡ ಹಿನ್ನೆಲೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಣದೀಪ್ ಸುರ್ಜೇವಾಲ ಸಿಎಂ BSY ಪುತ್ರ ವಿಜಯೇಂದ್ರ, ಮೊಮ್ಮಗ ಶಶಿಧರ್ ಮರಾಡಿ ಮತ್ತು ಅಳಿಯ ವಿರೂಪಾಕ್ಷರ ವಿರುದ್ಧ ಅಕ್ರಮವಾಗಿ ಹಣ ಸ್ವೀಕರಿಸಿರುವ ಆರೋಪ ಮಾಡಿದ್ದಾರೆ. ಮಹಾತ್ಮ ಗಾಂಧಿ ದುರಾಡಳಿತ …

Read More »

APMC ಕಾಯ್ದೆ ತರುವಾಗ ರೈತರ ಜತೆ ಚರ್ಚಿಸಿದ್ದಾರಾ? -HDK

ಬೆಂಗಳೂರು: ಎಪಿಎಂಸಿ ಕಾಯ್ದೆ ಕುರಿತು ಮಾಜಿ ಸಿಎಂ ಕುಮಾರಸ್ವಾಮಿ ವಿಧಾನಸೌಧದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ್ದಾರೆ. ಎಪಿಎಂಸಿ ಕಾಯ್ದೆ ತರುವಾಗ ರೈತರ ಜತೆ ಚರ್ಚಿಸಿದ್ದಾರಾ? ಎಂದು ರಾಜ್ಯ ಸರ್ಕಾರಕ್ಕೆ ಪ್ರಶ್ನಿಸಿದ್ದಾರೆ. ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಸಂದರ್ಭವಿದು. ಈ ಸಮಯದಲ್ಲಿ ಸುಗ್ರೀವಾಜ್ಞೆಯ ಮೂಲಕ ಜಾರಿ ಏಕೆ? ತರಾತುರಿಯಲ್ಲಿ ಕಾಯ್ದೆ ಜಾರಿ ಮಾಡುವ ಅಗತ್ಯವೇನಿದೆ? ಮೇ ನಲ್ಲಿ ಸುಗ್ರೀವಾಜ್ಞೆ ತಂದಿದ್ದಾರೆ. ಇದಾದ ಬಳಿಕ ಸಾಕಷ್ಟು ಸಮಯಾವಕಾಶ ಇತ್ತು. ಯಾವ ವಿರೋಧ ಪಕ್ಷದವರನ್ನ ಕರೆದು ಇವರು …

Read More »

ಸಾರ್ವಜನಿಕ ಶೌಚಾಲಯ ಬಳಸಿ ಹಣ ನೀಡದಿದ್ದಕ್ಕೆ ರಾಡ್​ನಿಂದ ಹಲ್ಲೆ!

ನೆಲಮಂಗಲ: ಸಾರ್ವಜನಿಕ ಶೌಚಾಲಯ ಬಳಸಿ ಹಣ ನೀಡದ ಹಿನ್ನೆಲೆಯಲ್ಲಿ ಬಸ್ ಚಾಲಕನ ತಲೆಗೆ ರಾಡ್‌ನಿಂದ ಹಲ್ಲೆ ಮಾಡಿರುವ ಘಟನೆ ನೆಲಮಂಗಲ ನಗರ ಬಸ್ ನಿಲ್ದಾಣದಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರದ ಬಸ್ ನಿಲ್ದಾಣದಲ್ಲಿ ಸಾರ್ವಜನಿಕ ಶೌಚಾಲಯ ಬಳಸಿ ಹಣ ನೀಡಲಿಲ್ಲ ಎಂದು ಶೌಚಾಲಯ ನಿರ್ವಹಣೆ ಮಾಡುತ್ತಿದ್ದ ರಾಜೇಶ್‌ ಎಂಬಾತ ಬಸ್ ಚಾಲಕ ವೆಂಕಟೇಶ್ ಮೇಲೆ ರಾಡ್​ನಿಂದ ಹಲ್ಲೆ ಮಾಡಿದ್ದಾರೆ. ಗಾಯಾಳು ವೆಂಕಟೇಶ್​ನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. …

Read More »

ಹ್ಯಾಂಡಿ ಕ್ರಾಫ್ಟ್​ಗೆ 15 ಕೋಟಿ ಹಣ ವಂಚಿಸಿದ್ದ ಆರೋಪಿ ED ಬಲೆಗೆ

ಬೆಂಗಳೂರು: ಹ್ಯಾಂಡಿಕ್ರಾಫ್ಟ್ ಎಫ್ ಡಿ ವಂಚನೆ ಪ್ರಕರಣ ಸಂಬಂಧ ನಾಗಲಿಂಗ ಸ್ವಾಮಿಯನ್ನು ED ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ನಾಗಲಿಂಗಸ್ವಾಮಿ ಹ್ಯಾಂಡಿ ಕ್ರಾಫ್ಟ್​ಗೆ ಸೇರಿದ್ಧ ಸುಮಾರು 15 ಕೋಟಿ ಹಣ ವಂಚನೆ ಮಾಡಿದ್ದ. ಹ್ಯಾಂಡಿ ಕ್ರಾಫ್ಟ್​ಗೆ ಸೇರಿದ್ದ ಒಟ್ಟು ಹದಿನೈದು ಕೋಟಿ ಹಣವನ್ನು ವಿಜಯ ಬ್ಯಾಂಕ್​ನಲ್ಲಿ FD ಇಡಲಾಗಿತ್ತು. ಬ್ಯಾಂಕ್ ಮತ್ತು ಹ್ಯಾಂಡಿ ಕ್ರಾಫ್ಟ್ ನಡುವೆ ಮಧ್ಯವರ್ತಿ ಯಾಗಿದ್ದ ನಾಗಲಿಂಗ ಸ್ವಾಮಿ FD ಇಟ್ಟ ಏಳು ದಿನದಲ್ಲಿ ನಕಲಿ ಸರ್ಕಾರಿ ಲೆಟರ್ ಮತ್ತು …

Read More »

ಉನ್ನತ ವ್ಯಾಸಂಗಕ್ಕೆ ಬಂದು ಮಾದಕ ವಸ್ತು ಮಾರಾಟ, ವಿದೇಶಿ ಪ್ರಜೆ ಸೇರಿ ಐವರ ಬಂಧನ

ಬೆಂಗಳೂರು,  ಉನ್ನತ ವ್ಯಾಸಂಗಕ್ಕಾಗಿ ಬೆಂಗಳೂರಿಗೆ ಬಂದು ಎಂಸಿಎ ಪದವಿ ವ್ಯಾಸಂಗ ಮಾಡುತ್ತಿದ್ದ ವೇಳೆ ಮಾದಕ ವಸ್ತುಗಳ ಸೇವನೆ ಚಟಕ್ಕೆ ಬಿದ್ದು ಹಣಕಾಸಿನ ತೊಂದರೆಯಿಂದ ತಾನೇ ಮಾದಕ ವಸ್ತುಗಳ ಮಾರಾಟ ಆರಂಭಿಸಿದ್ದ ವಿದೇಶಿ ಪ್ರಜೆ ಸೇರಿ ಐದು ಮಂದಿಯನ್ನು ಹೆಣ್ಣೂರು ಠಾಣೆ ಪೊಲೀಸರು ಬಂಧಿಸಿ 5 ಲಕ್ಷ ರೂ. ಬೆಲೆ ಬಾಳುವ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಸೂಡಾನ್ ದೇಶದ ಅಹಮ್ಮದ್ ಒಮರ್ (27), ತಾಬ್‍ಶೇರ್(24), ಲಜೀಮ್(23), ಸೈಯದ್ ಶಕೀರ್(24), ಮೊಹಮ್ಮದ್ ಶಿಹಾಮ್ …

Read More »

ಸಿದ್ದರಾಮಯ್ಯ ಕಾಲಿಗೆ ಬಿದ್ದ ಬಿಜೆಪಿ ಶಾಸಕರು

ಬೆಂಗಳೂರು: ಬಿಜೆಪಿಯ ಇಬ್ಬರು ಶಾಸಕರು ಸೇರಿದಂತೆ ಹಲವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದ ‍ಪ್ರಸಂಗ ವಿಧಾನಸಭೆ ಮೊಗಸಾಲೆಯಲ್ಲಿ ಮಂಗಳವಾರ ನಡೆಯಿತು. ಕಲಾಪ ನಡೆಯುತ್ತಿದ್ದಾಗಲೇ ಚಹಾ ಕುಡಿಯುವ ಸಲುವಾಗಿ ವಿಧಾನಪರಿಷತ್ತಿನ ಸದಸ್ಯ ಸಿ.ಎಂ. ಇಬ್ರಾಹಿಂ ಜತೆಯಲ್ಲಿ ಸಿದ್ದರಾಮಯ್ಯ ಮೊಗಸಾಲೆಗೆ ಬಂದರು. ಆ ಹೊತ್ತಿನಲ್ಲಿ ಕಡೂರು ಶಾಸಕ ಬೆಳ್ಳಿ ಪ್ರಕಾಶ್‌ ಜತೆ ಬಿಜೆಪಿ, ಕಾಂಗ್ರೆಸ್ ಸದಸ್ಯರು ಹರಟೆ ಹೊಡೆಯುತ್ತಿದ್ದರು. ಸಿದ್ದರಾಮಯ್ಯ ಅವರನ್ನು ನೋಡುತ್ತಿದ್ದಂತೆ ಎಲ್ಲರೂ ಅವರ ಮುಂದೆ ನಿಂತರು. ಆಗ, …

Read More »

ಪ್ರಥಮ ಭಾಷೆಗೆ 481 ವಿದ್ಯಾರ್ಥಿಗಳು ಗೈರು ಹಾಜರು

ಬೆಳಗಾವಿ: ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಯ 2ನೇ ದಿನವಾದ ಮಂಗಳವಾರ ಪ್ರಥಮ ಭಾಷೆ ವಿಷಯದ ಪರೀಕ್ಷೆ ನಡೆಯಿತು. ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ ನೋಂದಾಯಿಸಿದ್ದ 2,700 ಮಂದಿಯಲ್ಲಿ 2,540 ವಿದ್ಯಾರ್ಥಿಗಳು ಹಾಜರಾದರು. 160 ಮಂದಿ ಗೈರು ಹಾಜರಾದರು. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ 4,005 ಮಕ್ಕಳು ನೋಂದಾಯಿಸಿದ್ದರು. ಇವರಲ್ಲಿ 3,684 ಮಂದಿ ಹಾಜರಾದರು. 321 ವಿದ್ಯಾರ್ಥಿಗಳು ಗೈರು ಹಾಜರಾದರು. ಯಾರೂ ಡಿಬಾರ್‌ ಆಗಿಲ್ಲ ಎಂದು ಡಿಡಿಪಿಐಗಳಾದ ಎ.ಬಿ. ಪುಂಡಲೀಕ ಹಾಗೂ ಗಜಾನನ ಮನ್ನಿಕೇರಿ ತಿಳಿಸಿದ್ದಾರೆ.

Read More »

ಸಿಮೆಂಟ್ ಬೆಲೆ ಏರಿಕೆ: ಜಿಲ್ಲಾಡಳಿತದ ಮಧ್ಯಪ್ರವೇಶಕ್ಕೆ ಆಗ್ರಹ

ಬೆಳಗಾವಿ: ‘ಸಿಮೆಂಟ್ ಬೆಲೆ ದಿನೇ ದಿನೇ ಹೆಚ್ಚುತ್ತಿದ್ದು, ಸ್ಥಿರತೆ ಕಾಪಾಡಿಕೊಂಡು ಗ್ರಾಹಕರ ವಿಶ್ವಾಸ ಗಳಿಸಲು ಕಂಪನಿಗಳು ಸಹಕರಿಸುತ್ತಿಲ್ಲ. ಇದರಿಂದ ನಮಗೆ ಆಗುತ್ತಿರುವ ತೊಂದರೆ ನಿವಾರಿಸಲು ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ಜಿಲ್ಲಾ ಸಿಮೆಂಟ್ ಮಾರಾಟಗಾರರ ಸಂಘದವರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು. ‘ಸಮಸ್ಯೆ ಬಗೆಹರಿಯದಿದ್ದರೆ ಸೋಮವಾರ (ಸೆ.28)ದಿಂದ ಸಿಮೆಂಟ್ ಮಾರಾಟ ಬಂದ್ ಮಾಡಲಾಗುವುದು’ ಎಂದು ತಿಳಿಸಿದರು. ‘ಬೆಲೆಯಲ್ಲಿ ಸ್ಥಿರತೆ ಕಾಪಾಡುವಂತೆ ಕೋರಿದರೂ ಕಂಪನಿಗಳವರು ಸ್ಪಂದಿಸುತ್ತಿಲ್ಲ. ಹೀಗಾಗಿ, ಜಿಲ್ಲಾಡಳಿತ …

Read More »