Home / ಅಂತರಾಷ್ಟ್ರೀಯ (page 168)

ಅಂತರಾಷ್ಟ್ರೀಯ

ವಿಧಾನಸೌಧದಲ್ಲಿ ಆಡಳಿತ ಪಕ್ಷದ ಶಾಸಕ-ಸಚಿವರ ನಡುವೆ ಫೈಟ್!

ಬೆಂಗಳೂರು : ಇಂದಿನಿಂದ ವಿಧಾನಸಭೆ ಅಧಿವೇಶನ ಆರಂಭವಾಗಿದ್ದು, ಆಡಳಿತ ಪಕ್ಷದ ಶಾಸಕ ಮತ್ತು ಸಚಿವರ ನಡುವೆ ಅನುದಾನದ ವಿಚಾರವಾಗಿ ಗಲಾಟೆ ಮಾಡಿಕೊಂಡಿರುವ ಘಟನೆ ವಿಧಾನಸಭೆ ಸೆಂಟ್ರಲ್ ಹಾಲ್ ಲಾಂಜ್ ನಲ್ಲಿ ನಡೆದಿದೆ. ಕಡೂರು ಕ್ಷೇತ್ರದ ಶಾಸಕ ಬೆಳ್ಳಿ ಪ್ರಕಾಶ್ ಅವರು ಸಚಿವ ನಾರಾಯಣಗೌಡಅವರನ್ನು ಅನುದಾನದ ವಿಚಾರವಾಗಿ ಏಕವಚನದಲ್ಲೇ ನಿಂದಿಸಿದ್ದಾರೆ. ಬಳಿಕ ಮಾತಿನ ಚಕಮಕಿ ತಾರಕಕ್ಕೇರಿ ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. ತೋಟಗಾರಿಕೆ ಇಲಾಖೆಯಿಂದ ನೀಡಬೇಕಿದ್ದ ಅನುದಾನ ಬಿಡುಗಡೆಗೆ ಸಂಬಂಧಿಸಿದಂತೆ …

Read More »

ಜೆಡಿಎಸ್‌ಗೆ ತಲೆನೋವಾದ ಶಿರಾ ಕ್ಷೇತ್ರ

ಶಿರಾ : ಶಾಸಕ ಸತ್ಯನಾರಾಯಣ ನಿಧನದಿಂದ ತೆರವಾದ ಶಿರಾ ಕ್ಷೇತ್ರಕ್ಕೆ ಜೆಡಿಎಸ್ ಪಕ್ಷದಿಂದ ಯಾರಿಗೆ ಟಿಕೇಟ್ ನೀಡಬೇಕು ಎಂಬುದು ಪಕ್ಷದ ವರಿಷ್ಠರಿಗೆ ತಲೆನೋವಾಗಿದೆ. ಶಾಸಕ ಸತ್ಯನಾರಾಯಣ ಮೃತಟ್ಟ ನಂತರ ಮಾಜಿ ಪ್ರಧಾನಿ ದೇವೇಗೌಡ ಅವರು ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಯಾರಿಗೆ ಟಿಕೆಟ್ ನೀಡಬೇಕು ಎನ್ನುವ ಗೊಂದಲ ಮೂಡಿದೆ. ಸತ್ಯನಾರಾಯಣ ಪತ್ನಿ ಅಥವಾ ಮಗನಿಗೆ ಟಿಕೆಟ್ ಕೊಟ್ಟರೆ ಅನುಕಂಪದಿಂದ ಗೆಲ್ಲಬಹುದು ಎಂಬ ಲೆಕ್ಕಾಚಾರದಲ್ಲಿದ್ದರು. ದಿನ ಕಳೆದಂತೆ ಅನುಕಂಪದ ಅಲೆ ಕಡಿಮೆಯಾಗುತ್ತಿದ್ದು, …

Read More »

ಪ್ರಧಾನಿ ಮೋದಿ ಭಾವಚಿತ್ರ ಹಚ್ಚೆ ಹಾಕಿಸಿಕೊಂಡ ಮಹಿಳೆ

ಪಿರಿಯಾಪಟ್ಟಣ : ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬ ಅಂಗವಾಗಿ ಪಟ್ಟಣದ ಮಹಿಳಾ ಅಭಿಮಾನಿಯೊಬ್ಬರು ಅವರ ಎಡಗೈ ಮೇಲೆ ಮೋದಿ ಅವರ ಭಾವಚಿತ್ರದ ಹಚ್ಚೆ ಹಾಕಿಸಿ ಅಭಿಮಾನ ತೋರಿದ್ದಾರೆ. ಹಲವು ಸಾಮಾಜಿಕ ಚಟುವಟಿಕೆ ಮೂಲಕ ಗುರುತಿಸಿಕೊಂಡಿರುವ ಪಟ್ಟಣದ ನಿವಾಸಿ ಶುಭಾಗೌಡ ಹಚ್ಚೆ ಹಾಕಿಸಿಕೊಂಡವರು. ನರೇಂದ್ರ ಮೋದಿ ಅವರು ದೇಶದ ಪ್ರಧಾನ ಮಂತ್ರಿಯಾದಾಗಿನಿಂದ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದು ಭಾರತವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ದು, ಇಡೀ ವಿಶ್ವವೇ ಭಾರತದತ್ತ ತಿರುಗಿ …

Read More »

ಪೋಲೀಸರ ಕಣ್ತಪ್ಪಿಸಿ ಬಸ್ಸಿನಲ್ಲಿ ಬೆಳಗಾವಿಯ ಸುವರ್ಣಸೌಧಕ್ಕೆ ಬಂದ ವಾಟಾಳ್ ನಾಗರಾಜ್

ಬೆಳಗಾವಿ : ಬೆಳಗಾವಿಯ ಸುವರ್ಣ ಸೌಧದಲ್ಲಿ ಅಧಿವೇಶನ ನಡೆಸಬೇಕೆಂದು ಆಗ್ರಹಿಸಿ ಹೋರಾಟ ನಡೆಸಲು ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ಪೋಲೀಸರ ಕಣ್ತಪ್ಪಿಸಿ ಬೆಳಗಾವಿ ಸುವರ್ಣ ಸೌಧಕ್ಕೆ ಕನ್ನಡದ ಪರ ಚಳುವಳಿಯ ಹೋರಾಟಗಾರ ವಾಟಾಳ್ ನಾಗರಾಜ್ ಬಂದಿದ್ದಾರೆ. ಈ ಕುರಿತಂತೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಸುದ್ದಿಗಾರರು ನಿಮ್ಮನ್ನ ಪೋಲೀಸರು ಬೆಳಗಾವಿಗೆ ಆಗಮಿಸಲು ಬಿಡುವುದಿಲ್ಲ ಹಿರೆ ಬಾಗೇವಾಡಿಯಲ್ಲೆ ಬಂಧಿಸುತ್ತಾರೆ. ಹೇಗೆ ಆಗಮಿಸುವಿರಿ ಎಂದಿದ್ದರು. ಈ ಸಾರಿ …

Read More »

ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 87,000 ಮಂದಿಗೆ ಕೊರೋನಾ ಪಾಸಿಟಿವ್, 1,130 ಡೆತ್..!

ನವದೆಹಲಿ/ಮುಂಬೈ, -ದೇಶದಲ್ಲಿ ಡೆಡ್ಲಿ ಕೋವಿಡ್-19 ವೈರಸ್ ಹಾವಳಿಯ ಏರಿಳಿತ ಮುಂದುವರಿದಿದೆ. ಇದೇ ವೇಳೆ ರೋಗಿಗಳ ಚೇತರಿಕೆ ಪ್ರಮಾಣದಲ್ಲಿ ಹೆಚ್ಚಳ ಕಂಡುಬರುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಈವರೆಗೆ ಶೇ.80.12ರಷ್ಟು ಅಂದರೆ 43.96 ಲಕ್ಷ ರೋಗಿಗಳು ಗುಣಮುಖರಾಗಿದ್ದಾರೆ. ಒಂದೇ ದಿನ 86,961 ಮಂದಿಗೆ ಸೋಂಕು ತಗಲಿದ್ದು, ನಾಲ್ಕು ದಿನಗಳಿಂದ ಹೊಸ ಪ್ರಕರಣಗಳಲ್ಲಿ ಸತತ ಇಳಿಕೆ ಕಂಡುಬಂದಿದೆ. ಒಂದೇ ದಿನ 1,130 (ಮೊನ್ನೆ1,247)ರೋಗಿಗಳನ್ನು ಕೊರೊನಾ ಮಹಾಮಾರಿ ಬಲಿ ತೆಗೆದುಕೊಂಡಿದೆ. ಸತತ17ನೆ ದಿನ 1,000ಕ್ಕೂ ಹೆಚ್ಚು ಸಾವು …

Read More »

ಚಾರ್ಮಾಡಿಯಲ್ಲಿ ಪ್ರವಾಸಿಗರ ಮೋಜು ಮಸ್ತಿ, ಅಪಾಯದ ಸ್ಥಳದಲ್ಲಿ ಸೆಲ್ಫಿಗಿಲ್ಲ ಬ್ರೇಕ್..!

ಬಣಕಲ್, : ಕಾಫಿ ನಾಡಿನಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಚಾರ್ಮಾಡಿ ಘಾಟಿ ಭಾಗದಲ್ಲಿ ಅಲ್ಲಲ್ಲಿ ಧರೆ ಕುಸಿತ ಕಂಡು ಬಂದಿದ್ದರೂ ಪ್ರವಾಸಿಗರಿಗೆ ಮಾತ್ರ ಚಾರ್ಮಾಡಿ ಘಾಟ್‍ನಲ್ಲಿ ಮೋಜು ಮಸ್ತಿಗೆ ಕಡಿವಾಣ ಇಲ್ಲದಂತಾಗಿದೆ.ನಿನ್ನೆ ಭಾರೀ ಮಳೆ ಸುರಿಯುತ್ತಿದ್ದರೂ ಚಾರ್ಮಾಡಿ ರಸ್ತೆಯಲ್ಲಿ ಪ್ರವಾಸಿಗರ ಸಂಖ್ಯೆ ಮಾತ್ರ ಕಡಿಮೆಯಾಗಿಲ್ಲ ಏರುತ್ತಲೇ ಇದೆ. ಪ್ರವಾಸಿಗರು ಅಪಾಯದ ಸ್ಥಳದಲ್ಲಿ ಸೆಲ್ಫಿ ತೆಗೆಯುವುದು, ಜಲಪಾತದ ಅಪಾಯದ ಸ್ಥಳಗಳನ್ನು ಏರುವುದು ಮಾಡಿಕೊಂಡು ಬರುತ್ತಿದ್ದಾರೆ. ಚಾರ್ಮಾಡಿಯಲ್ಲಿ ಅಪಾಯವಿದ್ದರೂ ಪ್ರವಾಸಿಗರು ಮಾತ್ರ ಯಾವುದೇ …

Read More »

ಧಾರವಾಡದ ಹೆಸರು-ಉದ್ದು ಖರೀದಿಗೆ ಕೇಂದ್ರ ಗ್ರೀನ್ ಸಿಗ್ನಲ್

ನವದೆಹಲಿ,  – ಧಾರವಾಡ ಜಿಲ್ಲಾಯ ರೈತರ ಬೇಡಿಕೆಗೆ ಅನುಗುಣವಾಗಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಧಾರವಾಡ ಜಿಲ್ಲಾಯಲ್ಲಿ ಖರೀದಿ ಕೇಂದ್ರಗಳ ಮೂಲಕ ಹೆಸರುಕಾಳು ಹಾಗೂ ಉದ್ದು ಖರೀದಿಯನ್ನು ಕೂಡಲೇ ಆರಂಭಿಸಲು ಅನುಮೋದನೆ ನೀಡಿ ಆದೇಶ ಹೊರಡಿಸಿದೆ. ಕೇಂದ್ರ ಕೃಷಿ ಸಚಿವರಾದ ನರೇಂದ್ರ ಸಿಂಗ್ ತೋಮರ್ ಈ ಬಗ್ಗೆ ಆದೇಶ ಪ್ರತಿ ಹೊರಡಿಸಿದ್ದು , ರೈತರಿಗೆ ಸಂತಸ ತಂದಿದೆ. ಈ ವಿಷಯವನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದು ಜಿಲ್ಲಾಯ ರೈತರು …

Read More »

ನಿಲ್ಲದ ಮಳೆ : ಕರಾವಳಿ, ಉತ್ತರ ಕರ್ನಾಟಕದಲ್ಲಿ ಮತ್ತೆ ಪ್ರವಾಹ ಭೀತಿ

ಬೆಂಗಳೂರು, – ನಿಲ್ಲದ ಮಳೆಗೆ ಕರಾವಳಿ ತತ್ತರಗೊಂಡಿದೆ. ಉತ್ತರ ಕರ್ನಾಟಕದಲ್ಲಿ ಮತ್ತೇ ಪ್ರವಾಹದ ಭೀತಿ ಎದುರಾಗಿದೆ. ಭಾರೀ ಮಳೆಗೆ ನಿನ್ನೆ ಇಬ್ಬರು ಮೃತಪಟ್ಟಿದ್ದು ಇಂದು ತುಂಗಾಭದ್ರ ನದಿಯಲ್ಲಿ ಎತ್ತಿನಬಂಡಿ ಸಮೇತ ಇಬ್ಬರು ಕೊಚ್ಚಿಹೋಗಿದ್ದಾರೆ. ಕಲಬುರಗಿಯಲ್ಲಿ ಕಮಲಾಪುರ ತಾಲೂಕಿನ ಶ್ರೀಚಂದ ಗ್ರಾಮದಲ್ಲಿ ಯುವಕನೋರ್ವ ಬೈಕ್ ಸಮೇತ ಕೊಚ್ಚಿಹೋಗಿದ್ದಾನೆ. ಹಾವೇರಿ ಜಿಲ್ಲೆ ರಾಣೇಬೆನ್ನೂರಿನ ಕೋಣನ ತಂಬಗಿಯ ನದಿ ಭಾಗದಲ್ಲಿ ಮರಳು ತುಂಬುತ್ತಿದ್ದ ಇಬ್ಬರು ಪ್ರವಾಹದ ಪಾಲಾಗಿದ್ದಾರೆ. ಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು …

Read More »

ತರಗತಿ ಆರಂಭಿಸುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಖಾಸಗಿ ಶಾಲೆಗಳು ಗರಂ

ಬೆಂಗಳೂರು, :  ಇಂದಿನಿಂದ ಕೇಂದ್ರ ಸರ್ಕಾರ 9 ರಿಂದ 12ನೆ ತರಗತಿಗಳನ್ನು ಆರಂಭಿಸಲು ಸೂಚನೆ ನೀಡಿದ ಹೊರತಾಗಿಯೂ ವಿದ್ಯಾರ್ಥಿಗಳನ್ನು ಶಾಲೆಯಿಂದ ದೂರ ಇಡುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಖಾಸಗಿ ಶಾಲೆಗಳು ವ್ಯಾಪಕ ವಿರೋಧ ವ್ಯಕ್ಯಪಡಿಸಿವೆ. ಈ ಹಿಂದೆ ಇಂದಿನಿಂದ ಶಾಲೆಗಳನ್ನು ತೆರೆದು 9 ರಿಂದ 12 ತರಗತಿ ವಿದ್ಯಾರ್ಥಿಗಳು ಶಾಲೆಗೆ ತೆರಳಲು ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿತ್ತು. ಆದರೆ, ವಿದ್ಯಾರ್ಥಿಗಳು ಶಾಲೆಗೆ ಬರುವುದನ್ನು ರಾಜ್ಯ ಸರ್ಕಾರದ ವಿವೇಚನೆಗೆ ಬಿಟ್ಟಿದೆ. ಇದೇ …

Read More »

ರಾಜ್ಯದ ಇತಿಹಾಸದಲ್ಲೇ ಇದೆ ಮೊದಲ ಬಾರಿ ಅಧಿವೇಶನಕ್ಕೆ ಸಾರ್ವಜನಿಕರಿಗೆ ನಿರ್ಬಂಧ

ಬೆಂಗಳೂರು, :- ಅಧಿವೇಶನಕ್ಕೆ ಇದೇ ಮೊದಲ ಬಾರಿಗೆ ಸಾರ್ವಜನಿಕ ಪ್ರವೇಶ ನಿರ್ಬಂಧಿಸಲಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ವಿಧಾನಸಭೆ, ವಿಧಾನಪರಿಷತ್‍ನ ಅಧಿವೇಶನ ವೀಕ್ಷಣೆಗೆ ಸಾರ್ವಜನಿಕರ ಪ್ರವೇಶ ಬಂದ್ ಮಾಡಲಾಗಿದೆ. ಕೆಳ ಮಟ್ಟದ ಅಧಿಕಾರಿ, ನೌಕರರಿಗೆ ಹಾಗೂ ಪತ್ರಿಕಾ ಮಾಧ್ಯಮದವರಿಗೆ ಪ್ರೇಕ್ಷಕರ ಗ್ಯಾಲರಿಯಲ್ಲಿ ಆಸನದ ವ್ಯವಸ್ಥೆ ಕಲ್ಪಿಸಲಾಗಿದ್ದು, ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಪ್ರತಿ ಅಧಿವೇಶನ ಸಂದರ್ಭದಲ್ಲಿ ವಿದ್ಯಾರ್ಥಿಗಳು, ಸಾರ್ವಜನಿಕರು, ವಿವಿಧ ದೇಶಗಳಿಂದ ಆಗಮಿಸುವ ಗಣ್ಯರು ಸೇರಿದಂತೆ ಎಲ್ಲರಿಗೂ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗುತ್ತಿತ್ತು. ಆದರೆ ಈ …

Read More »