ಬೆಳಗಾವಿ: ‘ತಾಲ್ಲೂಕಿನ ಸುವರ್ಣ ವಿಧಾನಸೌಧದ ಸಮೀಪದಲ್ಲಿರುವ ಹಲಗಾ ಗ್ರಾಮದಲ್ಲಿ ಜಾನುವಾರುಗೆ ಹುಲ್ಲುಗಾವಲುಗಾಗಿ ಏಳು ಏಕರೆ ಜಾಗ ನೀಡಬೇಕು ಮತ್ತು ಪಶು ಆಸ್ಪತ್ರೆ ಮಂಜೂರು ಮಾಡಬೇಕು’ ಎಂದು ಆಗ್ರಹಿಸಿ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು. ‘ಹೈನುಗಾರಿಕೆ ಮತ್ತು ಕೃಷಿಯನ್ನು ಅವಲಂಬಿಸಿ ನಾವು ಜೀವನ ನಡೆಸುತ್ತಿದ್ದೇವೆ. ಸದ್ಯ ದನ, ಎಮ್ಮೆ, ಕರುಗಳನ್ನು ಮೇಯಿಸುವುದಕ್ಕೆ ನಿರ್ದಿಷ್ಟ ಜಾಗವಿಲ್ಲದೆ ತೊಂದರೆಯಾಗುತ್ತಿದೆ. ಇದನ್ನು ತಪ್ಪಿಸುವ ಉದ್ದೇಶದಿಂದ ಜಾಗ ನೀಡಿ ಅಲ್ಲಿ ಹುಲ್ಲುಗಾವಲು ಮಾಡಲು ಅವಕಾಶ ಕಲ್ಪಿಸಬೇಕು’ ಎಂದು …
Read More »ಕೃಷಿ ಸಚಿವ ಬಿ.ಸಿ.ಪಾಟೀಲ್ ವಿರುದ್ಧ ರೈತ ಮಹಿಳೆ ಹಿಗ್ಗಾಮುಗ್ಗಾ ವಾಗ್ದಾಳಿ.
ಬೆಂಗಳೂರು: ಕರ್ನಾಟಕ ಭೂಸುಧಾರಣಾ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆಗಳಿಗೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತಂದ ರಾಜ್ಯ ಸರ್ಕಾರದ ವಿರುದ್ಧ ಸಾವಿರಾರು ರೈತರು ಮತ್ತೊಮ್ಮೆ ಪ್ರತಿಭಟನೆಗೆ ಇಳಿದಿದ್ದಾರೆ. ಇಂದಿನಿಂದ 10 ದಿನಗಳ ಕಾಲ ವಿಧಾನಮಂಡಲ ಅಧಿವೇಶನ ಆರಂಭವಾಗುತ್ತಿರೋ ನಡುವೆಯೇ ರಾಜಧಾನಿ ಬೆಂಗಳೂರಿನಲ್ಲಿ ರೈತರು ಪ್ರತಿಭಟನೆಯ ಹಾದಿ ತುಳಿದಿದ್ದಾರೆ. ಜೊತೆಗೆ ಅಹೋರಾತ್ರಿ ಧರಣಿ ನಡೆಸಲು ನಿರ್ಧರಿಸಿದ್ದಾರೆ. ಈ ಬಗ್ಗೆ ಮಾತನಾಡಿದ ರೈತ ಮಹಿಳೆ ಮಂಜುಳಾ, ‘ಈ ಕಾಯ್ದೆಗಳು ರೈತರನ್ನು ಮುಗಿಸಲು ಹೊರಟಿವೆ. ರೈತರ ಕಷ್ಟ …
Read More »ಕೆಪಿಸಿಸಿ ವಕ್ತಾರರಾಗಿ ಲಕ್ಷ್ಮಿ ಹೆಬ್ಬಾಳಕರ ನೇಮಕ
ಬೆಳಗಾವಿ: ಇಲ್ಲಿನ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರನ್ನು ಕೆಪಿಸಿಸಿ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧ್ಯಕ್ಷ ಡಿ.ಕೆ. ಶಿವಕುಮಾರ ತಿಳಿಸಿದ್ದಾರೆ. ‘ಮಾಧ್ಯಮಗಳಲ್ಲಿ ನಮ್ಮ ವಿಚಾರ ಮತ್ತು ದೃಷ್ಟಿಕೋನ ಪರಿಣಾಮಕಾರಿಯಾಗಿ ಬಿಂಬಿತವಾಗಬೇಕಾಗಿರುವುದು ಅಗತ್ಯವಾಗಿದೆ. ಹೀಗಾಗಿ, ಅವರಿಗೆ ಇರುವ ಅನುಭವ ಮತ್ತು ವಿಷಯವನ್ನು ಸಮರ್ಥವಾಗಿ ಮಂಡಿಸುವ ಸಾಮರ್ಥ್ಯ ಗಮನಿಸಿ ಈ ನೇಮಕ ಮಾಡಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ. ‘ನನ್ನ ಮೇಲೆ ಸಂಪೂರ್ಣ ವಿಶ್ವಾಸವನ್ನಿಟ್ಟು ವಕ್ತಾರರನ್ನಾಗಿ ನೇಮಿಸಿದ ಅಧ್ಯಕ್ಷರಿಗೆ ಹೃದಯಪೂರ್ವಕ ಧನ್ಯವಾದ …
Read More »ಕರ್ನಾಟಕ ಬಂದ್.
ಬೆಂಗಳೂರು, ದೇಶಾದ್ಯಾಂತ ಭಾರೀ ವಿವಾದ ಸೃಷ್ಟಿಸಿರುವ ಹಾಗೂ ರೈತರ ಪಾಲಿನ ಮರಣ ಶಾಸನ ಎಂದೇ ಆರೋಪಿಸಲಾಗಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮಸೂದೆ ವಿರೋಧಿಸಿ ಶುಕ್ರವಾರ ರೈತ ಸಂಘಟನೆಗಳು ಕರ್ನಾಟಕ ಬಂದ್‍ಗೆ ಕರೆ ನೀಡಲು ಮುಂದಾಗಿವೆ. ರೈತ ಸಂಘಟನೆಗಳು ಕರೆ ನೀಡಿರುವ ರಾಜ್ಯ ಬಂದ್‍ಗೆ ವಿವಿಧ ಸಂಘಟನೆಗಳಿಂದ ವ್ಯಾಪಕ ಬೆಂಬಲ ವ್ಯಕ್ತವಾಗುವ ಸಾಧ್ಯತೆಗಳಿವೆ. ರೈತ ಸಂಘಟನೆಗಳು ಮಾತ್ರವಲ್ಲದೆ ನಾರಾಯಣಗೌಡ ನೇತೃತ್ವದ ಕರವೇ, ಕಾರ್ಮಿಕ ಸಂಘಟನೆಗಳು, ದಲಿತ ಸಂಘಟನೆಗಳು, ಓಲಾ-ಉಬರ್, ಆಟೋ, …
Read More »ಸಿದ್ದರಾಮಯ್ಯ – ಸಚಿವ ಸುಧಾಕರ್ ನಡುವೆ ಜಟಾಪಟಿ.
ಬೆಂಗಳೂರು : ಕೊರೋನಾ ಸೋಂಕು ಯಾರಿಗೂ ಬರೋದು ಬೇಡ. ಮಾನಸಿಕವಾಗಿ ಕೊರೋನಾ ಮಾನವನನ್ನು ಕುಗ್ಗಿಸುತ್ತದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸಭಾ ಕಲಾಪದಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಕೊರೋನಾ ಸಾವಿನ ಪ್ರಮಾಣ ಹೆಚ್ಚಾಗುತ್ತಿದೆ ಎಂದು ಆತಂಕ ಹೊರಹಾಕಿದರು. ಇದಕ್ಕೆ ಪ್ರತಿಕ್ರಿಯಿಸಿದ ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಸಿದ್ದರಾಮಯ್ಯ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದು, ತಪ್ಪು ಮಾಹಿತಿ ನೀಡಬೇಡಿ ಎಂದರು. ವಿಧಾನಸೌಧದಲ್ಲಿ ಬಿಜೆಪಿ ಶಾಸಕ-ಸಚಿವರ ಗಲಾಟೆ: ಬುದ್ಧಿವಾದ …
Read More »ಅಮಾನತುಗೊಂಡ ರಾಜ್ಯಸಭೆ ಸದಸ್ಯರೊಂದಿಗೆ ಉಪಸಭಾಧ್ಯಕ್ಷರ ಚಾಯ್ ಪೇ ಚರ್ಚಾ: ಮೋದಿಯಿಂದ ಮೆಚ್ಚುಗೆ
ನವದೆಹಲಿ: ರಾಜ್ಯಸಭೆಯಿಂದ ಅಮಾನತುಗೊಂಡು ಸಂಸತ್ ಆವರಣದಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸಿದ ಸದಸ್ಯರಿಗೆ ಖುದ್ದು ರಾಜ್ಯಸಭೆಯ ಉಪಸಭಾಧ್ಯಕ್ಷ ಹರಿವಂಶ್ ಅವರು ಚಾಯ್ ನೀಡಿ ಮಾತನಾಡಿದ್ದರು. ಹರಿವಂಶ್ ಅವರ ಈ ನಡೆಯ ಬಗ್ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಸಹ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಹರಿವಂಶ್ ಅವರ ನಡೆ ಸ್ಪೂರ್ತಿದಾಯಕವಾದದ್ದು, ಮುತ್ಸದ್ದಿ ನಡೆ ಎಂದು ಬಣ್ಣಿಸಿ, ಪ್ರತಿಯೊಬ್ಬ ಪ್ರಜಾಪ್ರಭುತ್ವದ ಪ್ರೇಮಿಯೂ ಹೆಮ್ಮೆಪಡುವಂಥದ್ದಾಗಿದೆ ಎಂದು …
Read More »ಒಂಟಿ ಮಹಿಳೆ ಕೊಲೆ ಮಾಡಿದ್ದ ಆರೋಪಿಗಳ ಮೇಲೆ ಪೊಲೀಸ್ ಫೈರಿಂಗ್..
ಆನೇಕಲ್: ಇಂದು ಬೆಳಗ್ಗೆ ಇಬ್ಬರು ಕೊಲೆ ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಮುತ್ಯಾಲಮಡು ಬಳಿ ವೇಲು ಅಲಿಯಾಸ್ ಸೈಕೋ, ಬಾಲಕೃಷ್ಣ ಅಲಿಯಾಸ್ ಬಾಲ ಕಾಲಿಗೆ ಗುಂಡೇಟು ಹೊಡೆದಿದ್ದಾರೆ. ಕಳೆದ ಒಂದು ವಾರದ ಹಿಂದೆ ಆರೋಪಿಗಳು ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕು ವ್ಯಾಪ್ತಿಯ ಸಿಂಗೇನ ಅಗ್ರಹಾರ ಬಳಿ ಒಂಟಿ ಮಹಿಳೆ ಕೊಲೆ ಮಾಡಿ ಮನೆಯಲ್ಲಿ ಕಳ್ಳತನ ಮಾಡಿದ್ದರು. ನಿನ್ನೆ ರಾತ್ರಿ ಆರೋಪಿಗಳ ಬಂಧನಕ್ಕೆ ಪೊಲೀಸರು ತೆರಳಿದ್ರು. ಈ ವೇಳೆ ಆರೋಪಿಗಳು …
Read More »ಸ್ಯಾಂಡಲ್‌ವುಡ್ Drugs ಜಾಲ: ನಟ ಯೋಗಿ, ಕ್ರಿಕೆಟಿಗ NC ಅಯ್ಯಪ್ಪ ವಿಚಾರಣೆ
ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್ಗೆ ಸಂಬಂಧಿಸಿದಂತೆ ನಟ ಲೂಸ್ ಮಾದ ಯೋಗೀಶ್ ಹಾಗೂ ಮಾಜಿ ಕ್ರಿಕೆಟಿಗ NC ಅಯ್ಯಪ್ಪರ ವಿಚಾರಣೆ ಸಹ ನಡೆಸಲಾಗಿದೆ ಎಂಬ ಮಾಹಿತಿ ದೊರೆತಿದೆ. ಆಂತರಿಕ ಭದ್ರತಾ ವಿಭಾಗದ ಪೊಲೀಸರಿಂದ ವಿಚಾರಣೆ ನಡೆದಿದ್ದು ಡ್ರಗ್ ಪೆಡ್ಲರ್ ಒಬ್ಬನ ಹೇಳಿಕೆ ಆಧಾರದ ಮೇಲೆ ವಿಚಾರಣೆ ನಡೆಸಲಾಯಿತು ಎಂದು ಹೇಳಲಾಗಿದೆ. ಇಬ್ಬರನ್ನು ಶಾಂತಿನಗರದ ಕೇಂದ್ರ ಕಚೇರಿಯಲ್ಲಿ ವಿಚಾರಣೆ ಮಾಡಿದ್ದೇವೆ ಎಂದು ಆಂತರಿಕ ಭದ್ರತಾ ವಿಭಾಗದ ADGP ಭಾಸ್ಕರ್ …
Read More »12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಸರಣಿ ಬಾಂಬ್ ಸ್ಫೋಟ ಆರೋಪಿ CCB ಬಲೆಗೆ
ಬೆಂಗಳೂರು: ಕಳೆದ 12 ವರ್ಷಗಳ ಹಿಂದೆ ಮಡಿವಾಳ ಸೇರಿದಂತೆ 9 ಕಡೆಗಳಲ್ಲಿ ನಡೆದಿದ್ದ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೇಂದ್ರ ತನಿಖಾ ಸಂಸ್ಥೆಯ ನೆರವಿನೊಂದಿಗೆ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಶೊಯೇಬ್ ಬಂಧಿತ ಆರೋಪಿ. ಕೇರಳದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿ ಸಿಸಿಬಿ ಪೊಲೀಸರು ಕೇರಳಕ್ಕೆ ಕರೆ ತರುತ್ತಿದ್ದಾರೆ. ಮಡಿವಾಳ ಸೇರಿದಂತೆ 9 ಕಡೆಗಳಲ್ಲಿ ಬಾಂಬ್ ಸ್ಪೋಟದಲ್ಲಿ ಭಾಗಿಯಾಗಿದ್ದ. ಕೃತ್ಯದಲ್ಲಿ ಓರ್ವ ಬಲಿಯಾದರೆ 20 ಮಂದಿ ಗಾಯಗೊಂಡಿದ್ದರು. ಬಳಿಕ ಅದೇ …
Read More »ಆರ್‌ಸಿಯುಗೆ 126 ಎಕರೆ ಮಂಜೂರು.
ಬೆಳಗಾವಿ: ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ 126 ಎಕರೆ 27 ಗುಂಟೆ ಜಮೀನನ್ನು ಮಂಜೂರು ಮಾಡಿ ರಾಜ್ಯ ಸರ್ಕಾರ ಸೋಮವಾರ ಅಧಿಕೃತ ಆದೇಶ ಹೊರಡಿಸಿದೆ. ಇದರೊಂದಿಗೆ ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಹಾಗೂ ವಿಸ್ತರಣೆಗೆ ಉಂಟಾಗಿದ್ದ ಜಾಗದ ಕೊರತೆ ನಿವಾರಣೆಯಾದಂತಾಗಿದೆ. ‘ತಾಲ್ಲೂಕಿನ ಬಾಗೇವಾಡಿ (ಸಂಕನಾಯ್ಕನಕೊಪ್ಪ) ಗ್ರಾಮದ ರಿ.ಸ.ನಂ. 421/2, 423, 426, 427, 429 ಮತ್ತು 431ರಲ್ಲಿ 87 ಎಕರೆ 39 ಗುಂಟೆ ಹಾಗೂ ಹಾಲಗಿಮರ್ಡಿ ಗ್ರಾಮದ ರಿ.ಸ.ನಂ. 48, 48 ಹಾಗೂ 49ರ …
Read More »