ಡಿಜಿಟಲ್‌ಡೆಸ್ಕ್: ಯಾವುದೇ ತರಹದ ರೋಗ ಮತ್ತು ಕೀಟಬಾಧೆ ಕಂಡುಬಂದಲ್ಲಿ ರೈತರ ಹೊಲಗಳಿಗೆ ಹೋಗಿ ಪ್ರಾತ್ಯಕ್ಷಿಕೆ ಮೂಲಕ ಅಗತ್ಯ ಸಲಹೆ, ನೆರವು ನೀಡಲು 108 ವಾಹನ ಮಾದರಿಯಲ್ಲಿ ಕೃಷಿ ಸಂಚಾರಿ ಲ್ಯಾಬ್ ಸಿದ್ಧಪಡಿಸಲಾಗುತ್ತಿದೆ. ಕೃಷಿಕರು ಕರೆ ಮಾಡಿದ ಕೂಡಲೆ ಕೃಷಿ ಪದವೀಧರರು ಸೇರಿದಂತೆ ಅಗತ್ಯ ಸಿಬ್ಬಂದಿಗಳನ್ನೊಳಗೊಂಡ ಈ ವಾಹನ ಹೊಲಗಳಿಗೆ ಹೋಗಿ ಸೂಕ್ತ ಸಲಹೆ ನೀಡಲಿದ್ದಾರೆ. ಈ ಯೋಜನೆಯನ್ನು ಪ್ರಾಯೋಗಿಕವಾಗಿ ತಮ್ಮ ಉಸ್ತುವಾರಿಯ ಕೊಪ್ಪಳ ಜಿಲ್ಲೆಯಲ್ಲಿ ಜಾರಿಗೆ ತರಲು ಸಿದ್ಧತೆ ನಡೆದಿದೆ. …
Read More »ರೈಲು ಪ್ರಯಾಣಿಕರಿಗೆ ಮತ್ತೊಂದು ಶಾಕ್
ನವದೆಹಲಿ: ವಿಮಾನ ನಿಲ್ದಾಣಗಳಲ್ಲಿ ಇರುವಂತೆ ರೈಲು ನಿಲ್ದಾಣದಲ್ಲಿಯೂ ಬಳಕೆದಾರರ ಶುಲ್ಕ ಜಾರಿಗೆ ತರಲು ರೈಲ್ವೆ ಮಂತ್ರಾಲಯ ತೀರ್ಮಾನಿಸಿದೆ. ಅತಿ ಹೆಚ್ಚು ಜನಸಂದಣಿಯಿರುವ ಮತ್ತು ನವೀಕರಣಗೊಂಡಿರುವ ಶೇಕಡ 15 ರಷ್ಟು ನಿಲ್ದಾಣಗಳಲ್ಲಿ ಬಳಕೆದಾರರ ಶುಲ್ಕವನ್ನು ವಸೂಲಿ ಮಾಡಲಾಗುವುದು ಎಂದು ಹೇಳಲಾಗಿದೆ. ಕೇಂದ್ರ ರೈಲ್ವೆ ಮಂಡಳಿ ಮುಖ್ಯಸ್ಥ ವಿ.ಕೆ. ಯಾದವ್ ಈ ಕುರಿತು ಮಾತನಾಡಿ, ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಸೌಲಭ್ಯ ಹೆಚ್ಚಿಸುವ ಉದ್ದೇಶಕ್ಕಾಗಿ ಆದಾಯ ಅಗತ್ಯವಿದೆ. ಹಾಗಾಗಿ ಬಳಕೆದಾರರ ಶುಲ್ಕ ವಿಧಿಸಲಾಗುವುದು. ಅತಿ ಹೆಚ್ಚು …
Read More »ಬಿಜೆಪಿ ರಾಜ್ಯಸಭೆ ಸದಸ್ಯ ಅಶೋಕ ಗಸ್ತಿ ನಿಧನ
ಬೆಂಗಳೂರು: ಬಿಜೆಪಿಯ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ (55) ಕೋವಿಡ್-19 ಮತ್ತು ಬಹು ಅಂಗಾಂಗಳ ವೈಫಲ್ಯದಿಂದ ನಗರದ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇದೇ 2 ರಂದು ಕೊರೊನಾ ಸೋಂಕಿನಿಂದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ಕೆಲವು ದಿನಗಳಿಂದ ಅವರನ್ನು ಜೀವ ರಕ್ಷಕ ವ್ಯವಸ್ಥೆಯಲ್ಲಿಡಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ರಾತ್ರಿ 10.31ರ ವೇಳೆಗೆ ಕೊನೆಯುಸಿರೆಳೆದರು ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ. ಅಶೋಕ ಗಸ್ತಿ ರಾಯಚೂರು ಜಿಲ್ಲೆಯವರು. ವಕೀಲರಾಗಿದ್ದ ಇವರು 1989ರಲ್ಲಿ ಬಿಜೆಪಿ ಸೇರ್ಪಡೆಯಾಗಿ, ಯುವ …
Read More »ʼಪ್ರಾಥಮಿಕ ಶಾಲಾ ಮಕ್ಕಳಿಗೆʼ ಮುಖ್ಯ ಮಾಹಿತಿ: ಶುರುವಾಗಲಿದೆ ʼಲೋಕಲ್ ಚಾನೆಲ್ ಕ್ಲಾಸ್ʼ..!
ಬೆಂಗಳೂರು: ಕೊರೊನಾ ಹವಾಳಿಯಿಂದ ಮನೆಯಲ್ಲಿಯೇ ಆನ್‌ಲೈನ್ ಕ್ಲಾಸ್ ಪಡೆಯುತ್ತಿರುವ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಸಚಿವ ಸುರೇಶ್ ಕುಮಾರ್ ಮತ್ತೊಂದು ವೇದಿಕೆಯನ್ನ ಸಿದ್ಧಪಡಿಸಿದ್ದು, 1 ರಿಂದ 8ನೇ ತರಗತಿವರೆಗಿನ ಶಾಲಾ ಮಕ್ಕಳಿಗೆ ಲೋಕಲ್ ಕೇಬಲ್ ಟಿವಿ ಚಾನೆಲ್‌ಗಳ ಮೂಲಕ ತರಗತಿಗಳನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದಿದ್ದಾರೆ. ‘ಈಗಾಗಲೇ ಸಂವೇದಾ ಕಾರ್ಯಕ್ರಮದ ಮೂಲಕ ದೂರದರ್ಶನದ ಚಂದನವಾಹಿನಿಯಲ್ಲಿ 9 ಮತ್ತು 10ನೇ ತರಗತಿಯ ಮಕ್ಕಳಿಗೆ ಪಾಠ ಪ್ರವಚನ ನಡೆಸಲಾಗುತ್ತಿದೆ. ಇನ್ನು 1ರಿಂದ 8ನೇ ತರಗತಿಯ ಮಕ್ಕಳಿಗೆ …
Read More »ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ವಿಷಾದ ಕರ್ಣನಂತಾದ ಬಳ್ಳಾರಿ: ಪನ್ನರಾಜ್ ವಿಷಾದ
ಬಳ್ಳಾರಿ: ‘ಕಲ್ಯಾಣ ಕರ್ನಾಟಕ ಆರು ಜಿಲ್ಲೆಗಳ ಪೈಕಿ ಬಳ್ಳಾರಿಯು ಕರ್ಣನಂತಾಗಿದೆ’ ಎಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಸಿರಿಗೇರಿ ಪನ್ನರಾಜ್ ವಿಷಾದಿಸಿದರು. ನಗರದ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಗುರುವಾರ ಜಿಲ್ಲಾಡಳಿತ ಏರ್ಪಾಡಿಸಿದ್ದ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರು, ‘1990ರಲ್ಲಿ ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿ ರಚನೆಯಾದಾಗ ಬಳ್ಳಾರಿ ಜಿಲ್ಲೆಯನ್ನು ಹೊರಗೆ ಇಡಲಾಗಿತ್ತು. ಸುದೀರ್ಘ ಹೋರಾಟದ ಮೂಲಕವೇ ಸೇರ್ಪಡೆಯಾಯಿತು’ ಎಂದು ಸ್ಮರಿಸಿದರು. ‘ಜಿಲ್ಲೆಯು …
Read More »ಬೆಂಗಳೂರಿನ 36 ಆಸ್ಪತ್ರೆಗಳಿಗೆ ನೋಟಿಸ್
ಬೆಂಗಳೂರು: ಸರ್ಕಾರದ ನಿಯಮ ಉಲ್ಲಂಘಿಸಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸುತ್ತಿರುವ ಬೆಂಗಳೂರಿನ 36 ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಜರುಗಿಸುವುದು ಖಚಿತ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು ಕೊರೊನಾ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳು ಸರ್ಕಾರದ ನಿಯಮಾವಳಿ ಪ್ರಕಾರ ಶೇ.50ರಷ್ಟು ಹಾಸಿಗೆಗಳನ್ನು ಮೀಸಲಿಡುವುದು ಕಡ್ಡಾಯವಾಗಿದೆ. v ಆದರೆ ಕೆಲವು ಆಸ್ಪತ್ರೆಗಳು ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸುತ್ತಿರುವ …
Read More »ಅಥಣಿಯಲ್ಲಿ ಹಾಸು ಹೊಕ್ಕಾಗಿರುವ ಶರಣ ಸಂಸ್ಕೃತಿ: ಶಿವಬಸವ ಸ್ವಾಮೀಜಿ
ಅಥಣಿ: ‘ಇಲ್ಲಿ ಶರಣ ಸಂಸ್ಕೃತಿ ಹಾಸುಹೊಕ್ಕಾಗಿದೆ. ಹೊರಗಿನಿಂದ ಬಂದವರೆಲ್ಲರನ್ನೂ ತಮ್ಮವರೆಂದು ಪ್ರೀತಿ, ವಿಶ್ವಾಸ ಕೊಟ್ಟು ಜಾತಿ, ಮತವೆನ್ನದೆ ಎಲ್ಲರನ್ನೂ ಅಪ್ಪಿಕೊಳ್ಳುವ ಗುಣ ಈ ಮಣ್ಣಿನದಾಗಿದೆ’ ಎಂದು ಗಚ್ಚಿನ ಮಠದ ಶಿವಬಸವ ಸ್ವಾಮೀಜಿ ಹೇಳಿದರು. ಶೆಟ್ಟರ ಮಠದ ಮರುಳಸಿದ್ಧ ಸ್ವಾಮೀಜಿ ಅವರ 128ನೇ ಪುಣ್ಯಾರಾಧನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಭಾರತೀಯ ಆಹಾರ ಪದ್ಧತಿಯಲ್ಲಿ ದಿವ್ಯ ಔಷಧಿಗಳಿವೆ. ಆದಾಗ್ಯೂ ಎಲ್ಲರೂ ಮುನ್ನೆಚ್ಚರಿಕೆ ಕ್ರಮ ಅನುಸರಿಸಿ ಸೋಂಕಿನಿಂದ ದೂರವಿರಬೇಕು’ ಎಂದು ಸಲಹೆ ನೀಡಿದರು. …
Read More »ರಾಯಚೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣ :ಡಿಸಿಎಂ ಲಕ್ಷ್ಮಣ ಸವದಿ
ರಾಯಚೂರು : ವಿಮಾನ ನಿಲ್ದಾಣ ನಿರ್ಮಾಣಕ್ಕೆ ಯೋಜನೆ ತಯಾರಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಅಂತ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ. ರಾಯಚೂರಿನ ಪೊಲೀಸ್ ಕವಾಯತ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವದ ಧ್ವಜಾರೋಹಣ ಬಳಿಕ ಮಾತನಾಡಿದ ಸಚಿವರು, ವಿಮಾನ ನಿಲ್ದಾಣಕ್ಕೆ ಸಂಪುಟದ ಒಪ್ಪಿಗೆ ಪಡೆಯಲಾಗುವುದು. ವಿಮಾನ ನಿಲ್ದಾಣ ಬರುವದರಿಂದ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗುವುದು ಎಂದರು. ಈಗಾಗಲೇ ಕೇಂದ್ರ ಸರ್ಕಾರ ಐಐಐಟಿ ನೀಡಿದೆ. ಏಮ್ಸ್ ರಾಯಚೂರು ಜಿಲ್ಲೆಗೆ ಬರಬೇಕೆಂದು ನಾನು ಉಸ್ತುವಾರಿ ಸಚಿವನಾಗಿ ಪ್ರಾಮಾಣಿಕ …
Read More »ಸಂಪುಟ ಪುನಾರಚನೆ : ಯಾರು ಇನ್, ಯಾರು ಔಟ್..?
ಬೆಂಗಳೂರು,ಸೆ. ಬಹುನಿರೀಕ್ಷಿತ ರಾಜ್ಯ ಸಚಿವ ಸಂಪುಟಕ್ಕೆ ಭರ್ಜರಿ ಸರ್ಜರಿ ನಡೆಸಲು ಬಿಜೆಪಿ ವರಿಷ್ಠರು ಮುಂದಾಗಿದ್ದು, ಹೆಚ್ಚು ಕ್ರಿಯಾಶೀಲರಲ್ಲದ ಹಾಗೂ ಒಂದು ವರ್ಷದಲ್ಲಿ ನಿರೀಕ್ಷೆಯಷ್ಟು ಸಾಧನೆ ಮಾಡದ 6 ರಿಂದ 8 ಸಚಿವರನ್ನು ಕೈಬಿಟ್ಟು, ಸಂಪುಟ ಪುನಾರಚನೆ ಮಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮುಂದಾಗಿದ್ದಾರೆ. ಹೀಗಾಗಿ ಮೂರು ದಿನಗಳ ಕಾಲ ನವದೆಹಲಿಗೆ ತೆರಳಿರುವ ಅವರು, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವರು ಸೇರಿದಂತೆ ಮತ್ತಿತರರನ್ನು ಭೇಟಿಯಾಗಿ ಮಾತುಕತೆ …
Read More »CCB List ನಲ್ಲಿ ಮುಂದಿನ ಹೆಸರುಗಳು ಆ ಹಿರಿಯ ಸ್ಟಾರ್ ನಟ ಮತ್ತು ಸೋದರರದ್ದು!
ಬೆಂಗಳೂರು: ಸ್ಯಾಂಡಲ್ವುಡ್ನಲ್ಲಿ ನಟ ನಟಿಯರ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಸಿಸಿಬಿ ಇನ್ನೂ ಕೆಲವರ ಮೇಲೆ ಕಣ್ಣು ನೆಟ್ಟಿದೆ. ಡ್ರಗ್ಸ್ ದಂಧೆ ಪ್ರಕರಣದಲ್ಲಿ ಸ್ಟಾರ್ ನಟ ಮತ್ತು ಸಹೋದರರು ಭಾಗಿಯಾಗಿರುವ ಬಗ್ಗೆ ಸಿಸಿಬಿ ಅಧಿಕಾರಿಗಳಿಗೆ ಮಹತ್ವದ ಸುಳಿವು ಸಿಕ್ಕಿದ್ದು, ಆ ಇಬ್ಬರನ್ನು ವಿಚಾರಣೆಗೆ ಕರೆಯುವ ಸಾಧ್ಯತೆಗಳಿವೆ. ಸ್ಯಾಂಡಲ್ವುಡ್ನ ಫ್ಯಾಮಿಲಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಈ ಸಹೋದರ ನಟರ ಪೈಕಿ 2017ರ ಗಾಂಜಾ ಪ್ರಕರಣ ಹಾಗೂ ಅಪಘಾತ ಸಂದರ್ಭದಲ್ಲಿ ಇದೇ ಕುಟುಂಬದ ಒಬ್ಬರನ್ನ ಜಯನಗರ …
Read More »