Breaking News
Home / ಅಂತರಾಷ್ಟ್ರೀಯ (page 194)

ಅಂತರಾಷ್ಟ್ರೀಯ

ಬಸ್‌ ಕಡೆ ಜನರ ಒಲವು: ಸಾರಿಗೆ ಆದಾಯ ಚೇತರಿಕೆ

ಚಿಕ್ಕೋಡಿ: ಕಳೆದ ಆರು ತಿಂಗಳಿಂದ ಕೋವಿಡ್ ಹೊಡೆತಕ್ಕೆ ನಷ್ಟ ಅನುಭವಿಸಿದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಿಕ್ಕೋಡಿ ವಿಭಾಗವು ಈಗ ಹಂತ ಹಂತವಾಗಿ ಆದಾಯದಲ್ಲಿ ಚೇತರಿಸಿಕೊಳ್ಳುತ್ತಿದೆ. ಲಾಕ್‌ಡೌನ್‌ ತೆರವುಗೊಂಡಿರುವ ಪರಿಣಾಮ ದಿನದಿಂದ ದಿನಕ್ಕೆ ಪ್ರಯಾಣಿಕರು ಬಸ್‌ ಕಡೆ ವಾಲುತ್ತಿದ್ದಾರೆ. ಕಳೆದ ಮಾರ್ಚ್‌ ಮೂರನೇ ವಾರದಿಂದ ಕೋವಿಡ್ ವ್ಯಾಪಕವಾಗಿ ಹರಡುತ್ತಿರುವ ಪರಿಣಾಮ ಕೇಂದ್ರ ಮತ್ತು ರಾಜ್ಯ ಸರಕಾರ ಲಾಕ್‌ಡೌನ್‌ ಜಾರಿ ಮಾಡಿ ಬಸ್‌ ಸಂಚಾರ ನಿಷೇಧಿಸಿತ್ತು. ಹೀಗಾಗಿ ನಾಲ್ಕು ತಿಂಗಳು ಬಸ್‌ …

Read More »

ಬೆಳಗಾವಿ: ಸಕ್ಕರೆ ಕಾರ್ಖಾನೆ ಎದುರು ರೈತರ ಧರಣಿ

ಎಂ.ಕೆ. ಹುಬ್ಬಳ್ಳಿ (ಬೆಳಗಾವಿ ಜಿಲ್ಲೆ): ಕಬ್ಬಿನ ಬಾಕಿ ಬಿಲ್ ಹಾಗೂ ಕಾರ್ಮಿಕರ ವೇತನ ಪಾವತಿಗೆ ಆಗ್ರಹಿಸಿ ಇಲ್ಲಿನ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಎದುರು ರೈತರು ಸೋಮವಾರ ಧರಣಿ ಆರಂಭಿಸಿದ್ದಾರೆ. ‘2017-18ನೇ ಸಾಲಿನ ಕಬ್ಬಿನ ಬಾಕಿ ಬಿಲ್ ₹ 7.8 ಕೋಟಿ, 2018-19 ಮತ್ತು 2019-20ನೇ ಸಾಲಿನ ಕಬ್ಬು ಕಟಾವು ಮತ್ತು ಸಾಗಾಣಿಕೆಯ ಬಾಕಿ ₹ 1.2 ಕೋಟಿ ಹಾಗೂ 2019-20ನೇ ಸಾಲಿನಲ್ಲಿ ಜನವರಿ ನಂತರ ಕಬ್ಬು ಪೂರೈಸಿದ ರೈತರ ₹ …

Read More »

ಪಬ್ ಜಿ  ಮೊಬೈಲ್ ಗೇಮ್ ಬ್ಯಾನ್ 21 ವರ್ಷದ ಯುವಕ  ಆತ್ಮಹತ್ಯೆ

ಕೋಲ್ಕತ್ತಾ: ಪಬ್ ಜಿ  ಮೊಬೈಲ್ ಗೇಮ್ ಬ್ಯಾನ್ ಆದ ಬಳಿಕ ಬೇಸರಗೊಂಡ 21 ವರ್ಷದ ಯುವಕ  ಆತ್ಮಹತ್ಯೆಗೆ ಶರಣಾದ ಘಟನೆ ಪಶ್ಚಿಮ ಬಂಗಾಳದ ನಾದಿಯಾ ಜಿಲ್ಲೆಯಲ್ಲಿ ನಡೆದಿದೆ. ಐಟಿಐ ವಿದ್ಯಾಭ್ಯಾಸ ಮಾಡುತ್ತಿದ್ದ ಪ್ರೀತಮ್ ಹಲ್ದರ್ ಆತ್ಮಹತ್ಯೆಗೆ ಶರಣಾದ ವಿದ್ಯರ್ಥಿ ಎಂದು ಗುರುತಿಸಲಾಗಿದೆ. ಚಕ್‌ದಹಾ ಪೊಲೀಸ್ ಠಾಣೆ ವ್ಯಾಪ್ತಿಯ ಕುರ್ಬಾ ಲಾಲ್‌ಪುರ್ ಪ್ರದೇಶದಲ್ಲಿರುವ ಮನೆಯಲ್ಲಿ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.  ಬೆಳಗ್ಗಿನ ಉಪಹಾರ ಸ್ವೀಕರಿಸಿದ ಬಳಿಕ ಆತ ಕೊಠಡಿಗೆ ತೆರಳಿದ್ದ …

Read More »

5 ತಿಂಗಳಿಂದ ಪ್ರವಾಸಿಗರಿಂದ ದೂರವಿದ್ದ ವಿಶ್ವ ಪ್ರಸಿದ್ದ ಗಿರಿಧಾಮ ಈಗ ಮುಕ್ತ

ಚಿಕ್ಕಬಳ್ಳಾಪುರ : ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದ್ದ ಜಿಲ್ಲೆಯ ವಿಶ್ವವಿಖ್ಯಾತ ನಂದಿ ಗಿರಿಧಾಮ ಪ್ರವೇಶಕ್ಕೆ ಇಂದಿನಿಂದ ಅವಕಾಶ ನಿಡುತ್ತಿದ್ದು ಗಿರಿಧಾಮ ವೀಕ್ಷಣೆಗೆ ಪ್ರವಾಸಿಗರು ತುದಿಗಾಲಲ್ಲಿ ನಿಂತಿದ್ದಾರೆ. ಪ್ರತಿ ಶನಿವಾರ, ಭಾನುವಾರ ಸಹಸ್ರಾರು ಸಂಖ್ಯೆಯಲ್ಲಿ ಗಿರಿಧಾಮಕ್ಕೆ ಲಗ್ಗೆ ಇಟ್ಟು ಬೆಟ್ಟದ ಕಾನನ ಮಧ್ಯೆ ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದು ಹೋಗುತ್ತಿದ್ದ ಐಟಿ, ಬಿಟಿ ಉದ್ಯೋಗಿಗಳಿಗೆ, ಪ್ರೇಮಿಗಳಿಗೆ ಸತತ ಐದು ತಿಂಗಳಿಂದ ಗಿರಿಧಾಮಕ್ಕೆ ಪ್ರವೇಶವಿಲ್ಲವಾಗಿತ್ತು. ಆದರೆ ಕೇಂದ್ರ ಸರ್ಕಾರ …

Read More »

ಹೈಪರ್​ಸಾನಿಕ್ ಮಿಸೈಲ್ ಕ್ಲಬ್​ ಸೇರಿತು ಭಾರತ

ನವದೆಹಲಿ: ಒಡಿಶಾದ ಬಾಲಸೋರ್​ನ ಎಪಿಜೆ ಅಬ್ದುಲ್ ಕಲಾಂ ಟೆಸ್ಟಿಂಗ್ ರೇಂಜ್​ನಲ್ಲಿ ಹೈಪರ್ ಸಾನಿಕ್ ಕ್ಷಿಪಣಿ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರೈಸುವ ಮೂಲಕ ಭಾರತ ಇಂದು ಹೈಪರ್​ ಸಾನಿಕ್ ಮಿಸೈಲ್ ಕ್ಲಬ್​ ಸೇರ್ಪಡೆಯಾಗಿದೆ. ಈ ಕ್ಷಿಪಣಿಯ ಶಬ್ದದ ವೇಗಕ್ಕಿಂತಲೂ ಆರು ಪಟ್ಟು ವೇಗದಲ್ಲಿ ಸಾಗುತ್ತದೆ. ಇಂತಹ ಮಿಸೈಲ್ ಹೊಂದಿರುವ ಇತರ ದೇಶಗಳು ಅಮೆರಿಕ, ರಷ್ಯಾ ಮತ್ತು ಚೀನಾ. ಹೈಪರ್​ ಸಾನಿಕ್ ಟೆಸ್ಟ್ ಡೆಮಾನ್​ಸ್ಟ್ರೇಟರ್​ ವೆಹಿಕಲ್​ ಅನ್ನು ಡಿಫೆನ್ಸ್ ರಿಸರ್ಚ್​ ಆಯಂಡ್ ಡೆವಲಪ್​ಮೆಂಟ್ ಆರ್ಗನೈಸೇಷನ್ …

Read More »

`LPG’ ಸಬ್ಸಿಡಿ ರದ್ದು ಮಾಡಿ ಮಹಿಳೆಯರು ಕೂಡಿಡುವ ಡಬ್ಬಿ ಹಣಕ್ಕೂ ಮೋದಿ ಸರ್ಕಾರ ಕನ್ನ ಹಾಕುತ್ತಿದೆ : ಈಶ್ವರ್ ಖಂಡ್ರೆ ಕಿಡಿ

ಬೆಂಗಳೂರು : ಕೇಂದ್ರದ ನರೇಂದ್ರ ಮೋದಿ ಸರ್ಕಾರ ಗ್ಯಾಸ್ ಸಬ್ಸಿಡಿಯನ್ನು ಧೀಡಿರ್ ಆಗಿ ರದ್ದುಗೊಳಿಸುವ ಮೂಲಕ ಮಧ್ಯಮ ವರ್ಗದ ಜನರಿಗೆ ಮೋಸ ಮಾಡಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ವಾಗ್ದಾಳಿ ನಡೆಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಈಶ್ವರ್ ಖಂಡ್ರೆ, ಈಶ್ವರ್ ಖಂಡ್ರೆ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಗ್ಯಾಸ್ ಸಬ್ಸಿಡಿಯನ್ನ ಧಿಡೀರ್ ಆಗಿ ರದ್ದುಗೊಳಿಸಿದೆ.‌ ಮಹಿಳೆಯರ ವೋಟ್ ಪಡೆದು ಅಧಿಕಾರಕ್ಕೆ ಬಂದ ಮೋದಿ …

Read More »

ಕೋವಿಡ್-19, ಶಾಸಕರ ವಿರೋಧಗಳ ನಡುವೆ ಮಹಾರಾಷ್ಟ್ರ ವಿಧಾನಸಭೆಯ 2 ದಿನಗಳ ಮುಂಗಾರು ಅಧಿವೇಶನ ಆರಂಭ

ಮುಂಬೈ: ಕೋವಿಡ್-19 ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿಕೊಂಡು ಮಹಾರಾಷ್ಟ್ರ ವಿಧಾನಸಭೆಯ ಎರಡು ದಿನಗಳ ಮುಂಗಾರು ಅಧಿವೇಶನ ಸೋಮವಾರ ಆರಂಭವಾಗಿದೆ. ಉಪಾಧ್ಯಕ್ಷ ನರಹರಿ ಝಿರ್ವಾಲ್, ಕೋವಿಡ್-19 ಹಿನ್ನೆಲೆಯಲ್ಲಿ ಸದಸ್ಯರು ಮಾಸ್ಕ್ ಧರಿಸುವಂತೆ, ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ, ಕ್ರಾಸ್ ಚಿಹ್ನೆಯಿರುವ ಸೀಟಿನಲ್ಲಿ ಕೂರದಂತೆ ಸದನದ ಸದಸ್ಯರಿಗೆ ಮಾರ್ಗದರ್ಶನ ನೀಡಿದರು. ಇಬ್ಬರು ಕುಳಿತುಕೊಳ್ಳುಲ್ಲಿ ಒಬ್ಬರು ಸದಸ್ಯರಿಗೆ ಮಾತ್ರ ಈ ಬಾರಿ ಅವಕಾಶ ಕಲ್ಪಿಸಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸದನ ಸದಸ್ಯರು ವಿದ್ಯಾರ್ಥಿಗಳು ಮತ್ತು ಪ್ರೇಕ್ಷಕರು ಕುಳಿತುಕೊಳ್ಳುವ …

Read More »

ಸತೀಶ ಜಾರಕಿಹೊಳಿ ಟೈಗರ್ ಗ್ಯಾಂಗ್ ಬಗ್ಗೆ ಹೇಳಿದ್ದೇನು….

ಗೋಕಾಕ:  ನಗರದಲ್ಲಿ  ಹಲವು ವರ್ಷಗಳಿಂದ ಸಕ್ರಿಯವಾಗಿದ್ದ ಟೈಗರ್ ಗ್ಯಾಂಗ್ ನ್ನು  ತಡವಾದರು ಕೂಡ ಪೊಲೀಸರು ಬಂಧಿಸಿದ್ದು, ಇದೊಂದು ಒಳ್ಳೆಯ ಬೆಳವಣಿಗೆ.  ನಿಷ್ಪಕ್ಷಪಾತ ತನಿಖೆಯಿಂದ ಮತ್ತಷ್ಟು ಮಾಹಿತಿ  ಹೊರ ಬರಲಿ ಎಂದು ಕೆಪಿಸಿಸಿ  ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ  ಹೇಳಿದ್ದಾರೆ.   *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??   ಟೈಗರ್ ಗ್ಯಾಂಗ್ ಬಂಧನ ವಿಚಾರವಾಗಿ ನಗರದಲ್ಲಿ …

Read More »

ಕೊರೋನಾ ಕಾಟ: ವಿಶಿಷ್ಟ ರೀತಿಯಲ್ಲಿ ಸಂಸತ್‌ ಅಧಿವೇಶನ, ಪ್ರಹ್ಲಾದ ಜೋಶಿ

ಹುಬ್ಬಳ್ಳಿ  : ಕೋವಿಡ್‌ ಹಿನ್ನೆಲೆಯಲ್ಲಿ ಅತ್ಯಂತ ವಿಶಿಷ್ಟ ಪರಿಸ್ಥಿತಿಯಲ್ಲಿ ಈ ಬಾರಿ ಸಂಸತ್‌ ಅಧಿವೇಶನ ನಡೆಯಲಿದೆ. ಚರ್ಚೆಯೇ ಇಲ್ಲದೆ ಕೇರಳ, ರಾಜಸ್ತಾನ, ಪಶ್ಚಿಮ ಬಂಗಾಳದಲ್ಲಿ ಅಧಿವೇಶನ ಪೂರ್ಣಗೊಳಿಸಿದವರು ನಮ್ಮ ವಿರುದ್ಧ ಹೇಳಿಕೆ ನೀಡುತ್ತಿರುವುದು ವಿಚಿತ್ರ ವರ್ತನೆ ಎಂದು ಎಂದು ಕೇಂದ್ರ ಸಂಸದೀಯ ಮತ್ತು ಕಲ್ಲಿದ್ದಲು ಗಣಿ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಅತ್ಯಂತ ವಿಶಿಷ್ಟಪರಿಸ್ಥಿತಿಯಲ್ಲಿ ಈ ಬಾರಿ ಸಂಸತ್‌ ಅಧಿವೇಶನ ನಡೆಯಲಿದೆ. …

Read More »

ನಟಿ ರಾಗಿಣಿಗೆ ಚಿತ್ರರಂಗದಿಂದ ನಿಷೇಧ?

ಬೆಂಗಳೂರು : ಡ್ರಗ್ಸ್‌ ಆರೋಪ ಸಾಬೀತಾದರೆ ನಟಿ ರಾಗಿಣಿ ಅವರಿಗೆ ಚಿತ್ರರಂಗದಿಂದ ನಿಷೇಧ ಶಿಕ್ಷೆ ಎದುರಾಗುವ ಸಾಧ್ಯತೆ ಇದೆ. ಈ ಕುರಿತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಚರ್ಚೆ ಆಗಿದೆ ಎನ್ನಲಾಗಿದ್ದು, ಡ್ರಗ್ಸ್‌ ಜಾಲದಲ್ಲಿ ರಾಗಿಣಿ ಪಾತ್ರ ಇರುವುದು ಸಾಕ್ಷ್ಯಸಮೇತ ಸಾಬೀತಾದರೆ ಅವರನ್ನು ಚಿತ್ರರಂಗದಿಂದ ದೂರ ಇಡುವ ನಿರ್ಧಾರ ಕೈಗೊಳ್ಳಲು ನಿರ್ಧರಿಸಲಾಗಿದೆ. ಆದರೆ, ಈ ಕುರಿತು ಪ್ರತಿಕ್ರಿಯೆ ನೀಡಲು ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಡಿ.ಆರ್‌.ಜೈರಾಜ್‌ ನಿರಾಕರಿಸಿದ್ದು, ಈ ಹಂತದಲ್ಲಿ …

Read More »