Breaking News
Home / ಅಂತರಾಷ್ಟ್ರೀಯ (page 203)

ಅಂತರಾಷ್ಟ್ರೀಯ

ಮತ್ತೆ ನೂರು ವಿಶೇಷ ರೈಲುಗಳ ಸಂಚಾರ

ನವದೆಹಲಿ: ಅನ್ಲಾಕ್ನ ನಾಲ್ಕನೇ ಹಂತದಲ್ಲಿ, ಭಾರತೀಯ ರೈಲ್ವೆ ಗೃಹ ಸಚಿವಾಲಯ ರಾಜ್ಯ ಸರ್ಕಾರಗಳ ಒಪ್ಪಿಗೆಯೊಂದಿಗೆ ಹೆಚ್ಚಿನ ವಿಶೇಷ ರೈಲುಗಳನ್ನು ಪರಿಚಯಿಸಲು ಯೋಜಿಸುತ್ತಿದೆ. ಆದರೆ ಸಾಮಾನ್ಯ ಸೇವೆಗಳನ್ನು ಪೂರ್ಣವಾಗಿ ಪುನರಾರಂಭಿಸುವುದು ಇನ್ನೂ ಬಹಳ ದೂರ ಎನ್ನಲಾಗುತ್ತಿದೆ. ಕೆಲವು ರಾಜ್ಯಗಳು, ವಿಶೇಷವಾಗಿ ಬಿಜೆಪಿಯೇತರ ಅಧಿಕಾರದಲ್ಲಿರುವ ಸರ್ಕಾರಗಳು ಅಂತರರಾಜ್ಯ ರೈಲುಗಳ ಪ್ರಯಾಣವನ್ನು ವಿರೋಧ ವ್ಯಕ್ತಪಡಿಸಿದ್ದಾವೆ. ತಮಿಳುನಾಡು, ಜಾರ್ಖಂಡ್, ಪಶ್ಚಿಮ ಬಂಗಾಳ, ಒಡಿಶಾದಂತಹ ರಾಜ್ಯಗಳು ಹೆಚ್ಚಿನ ರೈಲುಗಳನ್ನು ಪರಿಚಯಿಸಲು ಹೆಚ್ಚು ಆಸಕ್ತಿ ಹೊಂದಿಲ್ಲ ಎನ್ನಲಾಗಿದೆ. ಸಾಂಕ್ರಾಮಿಕ …

Read More »

ವೈಜನಾಥ ಪಾಟೀಲ ಸಂಸ್ಮರಣ ಗ್ರಂಥ ಪ್ರಕಟಿಸಲು ನಿರ್ಧಾರ

ಕಲಬುರ್ಗಿ: ‘371 (ಜೆ) ತಿದ್ದುಪಡಿ ಹೋರಾಟದ ರೂವಾರಿ, ಮಾಜಿ ಸಚಿವ ವೈಜನಾಥ ಪಾಟೀಲ ಅವರ ಪ್ರಥಮ ಪುಣ್ಯಸ್ಮರಣೆ ಅಂಗವಾಗಿ ಸಂಸ್ಮರಣ ಗ್ರಂಥ ಹೊರತರಲು ನಿರ್ಧರಿಸಲಾಗಿದೆ. ಈ ಬಗ್ಗೆ ಸಂಪಾದಕೀಯ ಸಮಿತಿ ರಚನೆ ಮಾಡಲಾಗಿದೆ’ ಎಂದು ವೈಜನಾಥ ಪಾಟೀಲರ ಸಂಸ್ಮರಣಾ ಸಂಚಿಕೆ ಸಮಿತಿ ಸಂಚಾಲಕ ಎಂ.ಬಿ.ಅಂಬಲಗಿ ಮತ್ತು ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಗೌತಮ ಪಾಟೀಲ ತಿಳಿಸಿದರು. ನಗರದಲ್ಲಿ ಮಂಗಳವಾರ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಅವರು, ‘ವೈಜನಾಥ …

Read More »

ಅಪಾಯದ‌ ಅಂಚಿನಲ್ಲಿದೆ ಪಣಜಿ – ಕೊಚ್ಚಿ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 66 ರ ಕಿರು‌ಸೇತುವೆ

ಮಂಗಳೂರು : ಪಣಜಿ- ಕೊಚ್ಚಿ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 66 ಮಂಗಳೂರು ಹೊರವಲಯದ ಕೆ.ಸಿ.ರೋಡ್ ಎಂಬಲ್ಲಿರುವ ಸೇತುವೆಯೊಂದು ಅಪಾಯಕ್ಕೆ ಮುನ್ಸೂಚನೆ ನೀಡುತ್ತಿದೆ. ಇತ್ತೀಚೆಗೆ ಈ ಸೇತುವೆಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸೇತುವೆಯ ತಡೆಗೋಡೆಯು ಸಂಪೂರ್ಣ ಹಾನಿಗೊಳಗಾಗಿದೆ. ಇದರಿಂದಾಗಿ ತಡೆಗೋಡೆ ಇಲ್ಲದ ಪರಿಣಾಮ ಹಾಗೂ ಅತ್ಯಂತ ಇಕ್ಕಟ್ಟಾಗಿರುವ ಸೇತುವೆಯಿಂದಾಗಿ ಇದರ ಮೇಲೆ ಸಂಚರಿಸುವ ವಾಹನಗಳಿಗೆ ಅಪಾಯ ಎದುರಾಗಿದೆ. ದಿನನಿತ್ಯ ಸಾವಿರಾರು ಸಂಖ್ಯೆಯಲ್ಲಿ ವಾಹನಗಳು ಈ ಸೇತುವೆಯ ಮೂಲಕವೇ ಹಾದು ಹೋಗುತ್ತಿದ್ದು, …

Read More »

ಬೆಂಗಳೂರು ಗಲಭೆ ಕೇಸ್‌: ಎಸ್‌ಡಿಪಿಐ ಕಚೇರಿಯಲ್ಲಿ ಮತ್ತೆ ಮಾರಕಾಸ್ತ್ರ ವಶ

ಬೆಂಗಳೂರು  : ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಗಲಭೆ ಪ್ರಕರಣ ಸಂಬಂಧ ಎಸ್‌ಡಿಪಿಐ ಪಕ್ಷದ 3 ಕಚೇರಿಗಳ ಮೇಲೆ ಮಂಗಳವಾರ ಸಿಸಿಬಿ ಪೊಲೀಸರು ದಾಳಿ ನಡೆಸಿ, ಮಹತ್ವದ ದಾಖಲೆಗಳು ಹಾಗೂ ಮಾರಕಾಸ್ತ್ರಗಳನ್ನು ಜಪ್ತಿ ಮಾಡಿದ್ದಾರೆ. ಮಾರಕಾಸ್ತ್ರ ಜಪ್ತಿ ಆಗುತ್ತಿರುವುದು 2ನೇ ಸಲ. ಹಲಸೂರು ಗೇಟ್‌, ದೇವರಜೀವನಹಳ್ಳಿ (ಡಿ.ಜೆ.ಹಳ್ಳಿ) ಹಾಗೂ ಕೆ.ಜಿ.ಹಳ್ಳಿಯಲ್ಲಿರುವ ಎಸ್‌ಡಿಪಿಐ ಕಚೇರಿಗಳಲ್ಲಿ ಶೋಧ ನಡೆದಿದೆ. ಈ ವೇಳೆ ಲ್ಯಾಪ್‌ಟಾಪ್‌, ಹಾರ್ಡ್‌ ಡಿಸ್ಕ್‌ಗಳು ಸೇರಿದಂತೆ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆದರೆ ಕೆ.ಜಿ.ಹಳ್ಳಿ …

Read More »

ಬೆಳಗಾವಿಯಲ್ಲಿ ಅಬ್ಬರವಿಲ್ಲದೆ ಗಣೇಶ ಮೂರ್ತಿಗಳಿಗೆ ವಿದಾಯ

ಬೆಳಗಾವಿ: ನಗರದ ವಿವಿಧೆಡೆ ಪ್ರತಿಷ್ಠಾಪಿಸಲಾಗಿದ್ದ ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನೆ ಕಾರ್ಯಕ್ರಮವು ಸರಳ, ಸಾಂಪ್ರದಾಯಿಕ ಹಾಗೂ ಶ್ರ‌ದ್ಧಾ- ಭಕ್ತಿಯಿಂದ ಮಂಗಳವಾರ ನೆರವೇರಿತು. ಕೊರೊನಾ ಕಾರಣದಿಂದ ಅದ್ಧೂರಿ ಮೆರವಣಿಗೆ ಮತ್ತು ಸೌಂಡ್ ಸಿಸ್ಟಂಗಳ ಅಬ್ಬರವಿರಲಿಲ್ಲ. 300ಕ್ಕೂ ಹೆಚ್ಚಿನ ಸ್ಥಳಗಳಲ್ಲಿ ಪ್ರತಿಷ್ಠಾಪಿಸಲಾಗಿತ್ತು. ಮೊದಲ ದಿನವೇ ಕೆಲವು ಮಂಡಳದವರು ಮೂರ್ತಿಗಳನ್ನು ವಿಸರ್ಜನೆ ಮಾಡಿದ್ದರು. ಬಹುತೇಕ ಮೂರ್ತಿಗಳಿಗೆ ಮಂಗಳವಾರ ವಿದಾಯ ಹೇಳಲಾಯಿತು. ಗಣೇಶೋತ್ಸವ ಮಂಡಳದವರು, ಸ್ಥಳೀಯರು ಹಾಗೂ ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕೆಲವರು ಮನೆಗಳಲ್ಲಿ ಪ್ರತಿಷ್ಠಾಪಿಸಿದ್ದ ಮೂರ್ತಿಗಳನ್ನು …

Read More »

ನೀರಾವರಿ ಯೋಜನೆಗಳಿಗೆ 1699 ಕೋಟಿ

ರಾಯಬಾಗ: ಮತಕ್ಷೇತ್ರದ ರೈತರ ಬಹುದಿನಗಳ ಬೇಡಿಕೆಯ ನೀರಾವರಿ ಯೋಜನೆಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿಯವರು ರೂ.1699 ಕೋಟಿ ಹಣ ಮಂಜೂರು ಮಾಡಿದ್ದಾರೆ ಎಂದು ಶಾಸಕ ಡಿ.ಎಮ್‌.ಐಹೊಳೆ ಹೇಳಿದರು. ಸೋಮವಾರ ಪಟ್ಟಣದ ತಮ್ಮ ಗೃಹ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ರಾಯಬಾಗ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ, ಸತತ ಬರಗಾಲ ಅನುಭವಿಸುತ್ತಿರುವ ಗ್ರಾಮಗಳ ರೈತರ ಬೆಳೆಗಳಿಗೆ ಹಾಗೂ ಜನ-ಜಾನುವಾರುಗಳಿಗೆ ಕುಡಿಯಲು ಕಾಯಂ ನೀರಾವರಿ ಸೌಲಭ್ಯ ಕಲ್ಪಿಸುವ ಗುರಿ …

Read More »

RTE’ ಪ್ರವೇಶ : ವಿದ್ಯಾರ್ಥಿಗಳು, ಪೋಷಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : ಶಿಕ್ಷಣ ಹಕ್ಕು ಕಾಯ್ದೆಗೆ ಸಂಬಂಧಿಸಿದಂತೆ ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯು ಮುಖ್ಯ ಮಾಹಿತಿಯೊಂದನ್ನು ನೀಡಿದ್ದು, ಆರ್ ಟಿಇ ಎರಡನೇ ಸುತ್ತಿನ ಲಾಟರಿ ಪ್ರಕ್ರಿಯೆ ಇಂದು ಮಧ್ಯಾಹ್ನ 3 ಗಂಟೆಗೆ ಶಿಕ್ಷಣ ಇಲಾಖೆ ಕಚೇರಿಗಳಲ್ಲಿ ನಡೆಯಲಿದೆ.   ಆರ್ ಟಿಇ ಎರಡನೇ ಸುತ್ತಿನಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳ ಮಾಹಿತಿಯನ್ನು ನೋಂದಾಯಿತ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುತ್ತದೆ. ಅಲ್ಲದೆ, ಪಾಲಕರು ಶಿಕ್ಷಣ ಇಲಾಖೆಯ ವೆಬ್ ಸೈಟ್ ನಲ್ಲೂ http://www.schooleducation.kar.nic.in/ ನಲ್ಲಿ ಸೀಟು …

Read More »

ಇಂದಿನಿಂದ ‘ಆಫ್‌ಲೈನ್‌’ನಲ್ಲಿ ಪುನರ್‌ಮನನ ತರಗತಿ: ಬೆಂ.ವಿ.ವಿ ಕ್ರಮ

ಬೆಂಗಳೂರು: ಪದವಿ ಮತ್ತು ಸ್ನಾತಕೋತ್ತರ ಪದವಿಯ ಅಂತಿಮ ಸೆಮಿಸ್ಟರ್‌ ವಿದ್ಯಾರ್ಥಿಗಳಿಗೆ ಪಠ್ಯದ ಪುನರ್‌ಮನನಕ್ಕಾಗಿ ‘ರೆಗ್ಯುಲರ್‌ ಆಫ್‌ಲೈನ್‌’ ತರಗತಿಗಳನ್ನು ಸೆಪ್ಟೆಂಬರ್‌ 1ರಿಂದಲೇ ತೆಗೆದುಕೊಳ್ಳುವಂತೆ ಬೆಂಗಳೂರು ವಿಶ್ವವಿದ್ಯಾಲಯ ತನ್ನ ವ್ಯಾಪ್ತಿಯ ಕಾಲೇಜುಗಳಿಗೆ ನಿರ್ದೇಶಿಸಿದೆ. ಸೆ. 12ರಿಂದ ಪದವಿಯ 6ನೇ ಸೆಮಿಸ್ಟರ್‌ ಹಾಗೂ 23ರಿಂದ ಸ್ನಾತಕೋತ್ತರ ಪದವಿಯ 4ನೇ ಸೆಮಿಸ್ಟರ್‌ನ ಪರೀಕ್ಷೆಗಳನ್ನು ನಡೆಸಲು ವಿ.ವಿ. ದಿನಾಂಕ ನಿಗದಿಪಡಿಸಿದೆ. ಪರೀಕ್ಷೆಗೂ ಮುನ್ನ ವಿದ್ಯಾರ್ಥಿಗಳಲ್ಲಿ ಪಾಠಕ್ಕೆ ಸಂಬಂಧಿಸಿದಂತೆ ಪ್ರಶ್ನೆ, ಗೊಂದಲ, ಸಮಸ್ಯೆಗಳಿದ್ದರೆ ಪರಿಹರಿಸಿಕೊಳ್ಳಲು ಹಾಗೂ ಪಾಠಗಳ ಪುನರಾವರ್ತನೆಗೆ ಅವಕಾಶ …

Read More »

ಕೊರೋನಾಗೆ ಬಲಿಯಾದರೆ 30 ಲಕ್ಷ ರು. ವಿಮೆ

ಬೆಂಗಳೂರು  : ಕೊರೋನಾ ಸೋಂಕು ನಿಯಂತ್ರಣ ಸಂಬಂಧ ಕರ್ತವ್ಯದಲ್ಲಿ ತೊಡಗಿದ ರಾಜ್ಯದ ಗ್ರಾಮ ಪಂಚಾಯಿತಿ ನೌಕರರು ಸೋಂಕಿನಿಂದ ಸಾವನ್ನಪ್ಪಿದರೆ 30 ಲಕ್ಷ ರು. ವಿಮಾ ಪರಿಹಾರ ನೀಡಲಿದೆ ಮತ್ತು ಸೋಂಕಿಗೊಳಗಾದರೆ ಸಂಪೂರ್ಣ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿದೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ತಿಳಿಸಿದೆ. ಗ್ರಾಮಪಂಚಾಯತ್‌ ಬಿಲ್‌ ಕಲೆಕ್ಟರ್‌, ಕ್ಲರ್ಕ್, ಕ್ಲರ್ಕ್ ಕಮ್‌ ಡಾಟಾ ಎಂಟ್ರಿ ಆಪರೇಟರ್‌, ವಾಟರ್‌ಮೆನ್‌, ಜವಾನ ಮತ್ತು ಸ್ವಚ್ಛತಾಗಾರರು ಕೋವಿಡ್‌-19 ನಿಯಂತ್ರಣದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಸಾರ್ವಜನಿಕರಲ್ಲಿ ರೋಗದ ಬಗ್ಗೆ ಅರಿವು …

Read More »

KPCC ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೊರೊನಾದಿಂದ ಗುಣಮುಖ : ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಕೊರೋನಾ ಸೋಂಕಿನಿಂದಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂತಹ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಕೊರೋನಾ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದು, ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ ಆಗಸ್ಟ್ 25ರಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಹೀಗಾಗಿ ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಇಂತಹ ಕೆಪಿಸಿಸಿ ಅಧ್ಯಕ್ಷ ಡಿಕೆ …

Read More »