Breaking News

ಅಂತರಾಷ್ಟ್ರೀಯ

ಕೊರೊನಾಗೆ ರಾಮಬಾಣವಾದ ಈ ಮಾತ್ರೆ ಬೆಲೆ 35 ರೂ. ಮಾತ್ರ

ನವದೆಹಲಿ: ಕೋವಿಡ್ ಚಿಕಿತ್ಸೆಗೆ ಸನ್ ಫಾರ್ಮಾಸ್ಯುಟಿಕಲ್ಸ್ ಇಂಡಸ್ಟ್ರೀಸ್ ವತಿಯಿಂದ ಫೆವಿಪಿರಾವಿರ್ ಮಾತ್ರೆಯನ್ನು ಪ್ಲೂಗಾರ್ಡ್ ಹೆಸರಲ್ಲಿ ಬಿಡುಗಡೆ ಮಾಡಲಾಗಿದ್ದು 35 ರೂ. ದರ ನಿಗದಿ ಮಾಡಲಾಗಿದೆ. ಪ್ಲೂಗಾರ್ಡ್ ಹೆಸರಿನ ಫೆವಿಪಿರಾವಿರ್ 200 ಎಂಜಿ ಮಾತ್ರೆಗಳನ್ನು ಭಾರತದಲ್ಲಿ ಬಿಡುಗಡೆ ಮಾಡಲಾಗಿದೆ ಎಂದು ಸನ್ ಫಾರ್ಮಾಸ್ಯುಟಿಕಲ್ ಇಂಡಸ್ಟ್ರೀಸ್ ತಿಳಿಸಿದೆ. ಕಡಿಮೆ ಮತ್ತು ಮಧ್ಯಮ ಪ್ರಮಾಣದ ಕೊರೋನಾ ಲಕ್ಷಣವಿರುವ ರೋಗಿಗಳಿಗೆ ಇದನ್ನು ಬಿಡುಗಡೆ ಮಾಡಲಾಗಿದೆ. ವೈರಾಣು ನಿರೋಧಕವಾಗಿರುವ ಒಂದು ಮಾತ್ರೆಗೆ 35 ರೂ. ದರ ನಿಗದಿ ಮಾಡಲಾಗಿದೆ. …

Read More »

ಇಂದು 170 ಜನರಿಗೆ ಕೊರೊನಾ ಸೋಂಕು ಧೃಡ

ಉಡುಪಿ : ಜಿಲ್ಲೆಯಲ್ಲಿ ಇಂದು 170 ಜನರಿಗೆ ಕೊರೊನಾ ಸೋಂಕು ದೃಢವಾಗಿದ್ದು, ಈ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 4970 ಕ್ಕೆ ಏರಿಕೆಯಾಗಿದೆ. ಅಂತೆಯೇ ಜಿಲ್ಲೆಯಲ್ಲಿ ಇಂದು 1522 ಜನರ ಗಂಟಲು ದ್ರವ ಮಾದರಿ ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ 170 ಜನರಿಗೆ ಕೊರೊನಾ ಪಾಸಿಟಿವ್ ಧೃಡವಾಗಿದೆ. ಜಿಲ್ಲೆಯಲ್ಲಿ ಇಂದಿನ 170 ಹೊಸ ಸೋಂಕು ಪ್ರಕರಣಗಳಿಂದ ಒಟ್ಟು ಸೋಂಕಿತರ ಸಂಖ್ಯೆ 4970 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 2948 ಜನರು ಗುಣಮುಖರಾಗಿದ್ದಾರೆ. …

Read More »

32 ಸೆಕೆಂಡುಗಳ ಅಭಿಜಿತ್ ಮುಹೂರ್ತದಲ್ಲಿ ನಡೆಯಲಿದೆ ರಾಮ ಮಂದಿರ ಭೂಮಿ ಪೂಜೆ

ಕೋಟ್ಯಂತರ ಭಕ್ತರು ಎದುರು ನೋಡ್ತಿದ್ದ ರಾಮ ಮಂದಿರದ ಭೂಮಿ ಪೂಜೆಯ ದಿನವು ಬಂದೇ ಬಿಟ್ಟಿದೆ. ಐತಿಹಾಸಿಕ ರಾಮ ಮಂದಿರ ನಿರ್ಮಾಣಕ್ಕೆ ಸಜ್ಜಾಗಿರೋ ಅಯೋಧ್ಯೆ ನಗರ ಈಗಾಗಲೇ ಝಗಮಗಿಸುತ್ತಿದೆ.. ಮನೆ ಮನೆಯಲ್ಲಿ ದೀಪ ಹಚ್ಚಿ ಸಂಭ್ರಮಿಸಲಾಗ್ತಿದೆ. ಬೀದಿ ಬೀದಿಯಲ್ಲಿ ಬಣ್ಣ ಹಚ್ಚಿ ಸಿಂಗಾರ ಮಾಡಲಾಗಿದೆ. ಗಲ್ಲಿ ಗಲ್ಲಿಯಲ್ಲಿ ಪ್ರಭು ಶ್ರೀ ರಾಮ ಪೋಸ್ಟರ್​ಗಳನ್ನ ಅಂಟಿಸಲಾಗಿದೆ. ದೀಪಾವಳಿ ಸಂಭ್ರಮದಂತೆ ಇಡೀ ಅಯೋಧ್ಯೆ ನಗರ ಕಂಗೊಳಿಸುತ್ತಿದೆ. ಭೂಮಿ ಪೂಜೆಗೆ 32 ಸೆಕೆಂಡ್​ಗಳ ಮೂಹೂರ್ತ ಭೂಮಿ …

Read More »

24ಗಂಟೆಯಲ್ಲಿ ಪತ್ತೆಯಾದ ಹೊಸ ಕರೊನಾ ಪ್ರಕರಣಗಳಿಗಿಂತ ಡಿಸ್​​ಚಾರ್ಜ್​ ಆದವರೇ ಹೆಚ್ಚು; 110 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಕರೊನಾದಿಂದ ಚೇತರಿಕೆ ಕಾಣುತ್ತಿರುವವರ ಸಂಖ್ಯೆ ಹೆಚ್ಚುತ್ತಿರುವುದು ಸಮಾಧಾನ ಮೂಡಿಸಿದೆ. ಕಳೆದ 24 ಗಂಟೆಯಲ್ಲಿ ಹೊಸ ಕರೊನಾ ಪ್ರಕರಣಗಳಿಗಿಂತ, ಸೋಂಕಿನಿಂದ ಮುಕ್ತರಾಗಿ ಡಿಸ್​ಚಾರ್ಜ್ ಆದವರ ಸಂಖ್ಯೆಯೇ ತುಸು ಜಾಸ್ತಿ ಇದೆ. 24 ಗಂಟೆಯಲ್ಲಿ 6,259 ಹೊಸ ಕರೊನಾ ಕೇಸ್​​ಗಳು ಪತ್ತೆಯಾಗಿದ್ದು, ಒಟ್ಟು 6,777 ಮಂದಿ ಗುಣಮುಖರಾಗಿ, ಡಿಸ್​​ಚಾರ್ಜ್​ ಆಗಿದ್ದಾರೆ. 110 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇಲ್ಲಿಯವರೆಗಿನ ಕರೊನಾ ಸೋಂಕಿತರ ಸಂಖ್ಯೆ 1,45.830ಕ್ಕೆ ಏರಿಕೆಯಾಗಿದ್ದು, ಮೃತಪಟ್ಟವರ ಸಂಖ್ಯೆ 2704. ಹಾಗೇ ಡಿಸ್​​ಚಾರ್ಜ್​ …

Read More »

ಬೆಳಗಾವಿ ಜಿಲ್ಲೆಯ ಚಾಲಕನ ಪುತ್ರನ ಸಾಧನೆ; UPSC ಪರೀಕ್ಷೆಯಲ್ಲಿ 440ನೇ ಸ್ಥಾನ!

ಬೆಳಗಾವಿ ; ಸಾಧಿಸುವ ಛಲವೊಂದಿದ್ದರೆ ಏನನ್ನಾದರೂ ಸಾಧಿಸಬಹುದು. ಸತತ ಪರಿಶ್ರಮ, ಸತತ ಓದು ಗುರುವಿಲ್ಲದೆಯೂ ನಮ್ಮ ಗುರಿಯನ್ನು ತಲುಪಲು ಸಹಕಾರಿ ಎಂಬುದನ್ನು ಚಾಲಕನ‌ ಮಗ ಇಂದು ಸಾಧನೆ ಮಾಡುವುದರ ಮೂಲಕ ಆ ಗ್ರಾಮದ ಹೆಮ್ಮೆಯ ಜೊತೆಗೆ ತಂದೆ ತಾಯಿಯ ಗೌರವವನ್ನು ಹೆಚ್ಚಿಸಿದ್ದಾನೆ. ಹೌದು ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮೋಳೆ ಗ್ರಾಮದ ಕೀರ್ತಿಯನ್ನು ಗ್ರಾಮದ ಜಗದೀಶ ಅಡಹಳ್ಳಿ ಅವರು ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ 440 ನೇ ರ್‍ಯಾಂಕ್ ಪಡೆಯುವುದರ ಮೂಲಕ ರಾಜ್ಯದ …

Read More »

ಕೊರೋನಾ ಚಿಕಿತ್ಸೆ: ಸಿಎಂ, ಕೇಂದ್ರ ಸಚಿವರಿಗೆ ಸರ್ಕಾರಿ ಆಸ್ಪತ್ರೆಗಳ ಮೇಲೆ ನಂಬಿಕೆಯಿಲ್ಲವೇ?

ನವದೆಹಲಿ: ಕೊರೋನಾ ಸೋಂಕು ದೃಢಪಟ್ಟ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಹಿಡಿದು ಕೆಲ ಮುಖ್ಯಮಂತ್ರಿಗಳು ಹಾಗೂ ಸಚಿವರುಗಳು ಸರಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ಬದಲು ಖಾಸಗಿ ಆಸ್ಪತ್ರೆಗಳಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವುದು ಸಾರ್ವಜನಿಕರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ಸಹ ವ್ಯಕ್ತವಾಗುತ್ತಿದೆ. ಸೋಂಕು ದೃಢಪಟ್ಟ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುರುಗ್ರಾಮದಲ್ಲಿರುವ ಮೇದಾಂತ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ …

Read More »

ಮತ್ತೆ 4ಸಾವಿರ ಕಿಟ್‌ಗಳ ಪೂರೈಕೆ

ಬೆಳಗಾವಿ: ‘ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಕೋವಿಡ್-19 ಹೊರತುಪಡಿಸಿ ಇತರ ಆರೋಗ್ಯ ಸಂಬಂಧಿ ಸಮಸ್ಯೆಗಳಿಗೆ ತುರ್ತು ಚಿಕಿತ್ಸೆ ನೀಡಲು ನಿರಾಕರಿಸಿದರೆ ಅಂತಹ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಎಚ್ಚರಿಕೆ ನೀಡಿದರು. ಇಲ್ಲಿ ಸೋಮವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ‘ತುರ್ತು ಚಿಕಿತ್ಸೆಗೆ ಅಗತ್ಯ ಇರುವವರಿಗೆ ತಪಾಸಣೆ ನಡೆಸಿ ಪ್ರಮಾಣಪತ್ರವನ್ನು ನೀಡಲು ಜಿಲ್ಲೆಗೆ ಮತ್ತೆ 4ಸಾವಿರ ರ‍್ಯಾಪಿಡ್ ಆಂಟಿಜೆನ್ ಕಿಟ್‌ಗಳು ಬಂದಿವೆ. ಪ್ರಮಾಣಪತ್ರ ಪಡೆದ ಬಳಿಕವೂ …

Read More »

ಮಕ್ಕಳ ಪರೇಡ್, ಸಾಂಸ್ಕೃತಿಕ ಕಾರ್ಯಕ್ರಮ ಇಲ್ಲ

ಬೆಳಗಾವಿ: ‘ಕೋವಿಡ್-19 ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿ ಪ್ರಕಾರ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು. ಇಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಆ.15ರ ಬೆಳಿಗ್ಗೆ 9ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸಿ ಮತ್ತು ಅಂತರ ಕಾಯ್ದುಕೊಂಡು ಭಾಗವಹಿಸಬೇಕು. ಪ್ರತಿ ವರ್ಷದಂತೆ …

Read More »

ಬಿಎಸ್‍ವೈ ಪುತ್ರಿ, ಕಾವೇರಿ ನಿವಾಸದ ಸಿಬ್ಬಂದಿಗೂ ಕೊರೊನಾ ಶಾಕ್.!

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಯಾರ್ಯಾರಿಗೆ ಕೊರೊನಾ ಸೋಂಕು ಇದೆ ಎಂಬುದರ ಪತ್ತೆ ನಡೆಸಿದಾಗ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಯಡಿಯೂರಪ್ಪ ಪುತ್ರಿ ಪದ್ಮಾವತಿ ಹಾಗೂ ಕಾವೇರಿ ನಿವಾಸದ ಮನೆಗೆಲಸದವರು, ಅಡುಗೆಯವರು ಹಾಗೂ ವಿಶೇಷ ಕರ್ತವ್ಯಾಧಿಕಾರಿ ಕಾರು ಚಾಲಕ ಸೇರಿದಂತೆ 6 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ.  ಯಡಿಯೂರಪ್ಪ ಅವರು ಅಡ್ಮಿಟ್ ಆಗಿರುವ ವಾರ್ಡ್‍ನಲ್ಲೇ ಪುತ್ರಿ ಪದ್ಮಾವತಿ ಅವರೂ ಕೂಡ ದಾಖಲಾಗಿದ್ದಾರೆ.

Read More »

ಸಿಎಂ ನಿವಾಸ ಕಾವೇರಿಯ 9 ಮಂದಿಗೆ ಕೊರೊನಾ: ಕುಟುಂಬಸ್ಥರಿಗೆ ಪರೀಕ್ಷೆ

ಸಿಎಂ ನಿವಾಸ ಕಾವೇರಿಯಲ್ಲಿ 9 ಮಂದಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿದೆ. ಸಿಎಂ ಯಡಿಯೂರಪ್ಪ ಸೇರಿದಂತೆ 8 ಮಂದಿಗೆ ಕೊರೊನಾದ ರೋಗ ಲಕ್ಷಣ ಕಂಡು ಬಂದಿಲ್ಲ. ಆದ್ರೆ ಕೊರೊನಾ ಇರುವುದು ದೃಢಪಟ್ಟಿದ್ದು,ಚಿಕಿತ್ಸೆ ನಡೆಯುತ್ತಿದೆ. ಈ ಮಧ್ಯೆ ಸಿಎಂ ಸಂಪರ್ಕಕ್ಕೆ ಬಂದಿದ್ದ ಜನರಿಗೆ ಸೆಲ್ಫ್ ಕ್ವಾರಂಟೈನ್ ಆಗುವಂತೆ ಹೇಳಲಾಗಿದೆ.ಸಿಎಂ ಕುಟುಂಬದ ಎಲ್ಲ ಸದಸ್ಯರಿಗೂ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಕುಟುಂಬ ಸದಸ್ಯರಿಗೆ ಬಿಬಿಎಂಪಿ ಆಂಟಿಜೆನ್ ಟೆಸ್ಟ್ ಮಾಡ್ತಿದೆ.   ಸಿಎಂ ನಿವಾಸದ …

Read More »