ಬೆಳಗಾವಿ: ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಶನಿವಾರ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬವನ್ನು ಸರಳವಾಗಿ ಆಚರಿಸಿದರು. ಪ್ರತಿವರ್ಷ ಈದ್ಗಾ ಮೈದಾನಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಗುತ್ತಿತ್ತು. ಆದರೆ, ಈ ಸಲ ಕೋವಿಡ್ ಹಿನ್ನೆಲೆಯಲ್ಲಿ ಸಾಮೂಹಿಕ ಪ್ರಾರ್ಥನೆ ನಿರ್ಬಂಧಿಸಲಾಗಿತ್ತು. ಹಾಗಾಗಿ, ಮಸೀದಿಗಳಲ್ಲಿ ಹಾಗೂ ಮನೆಗಳಲ್ಲಿ ಪರಸ್ಪರ ಅಂತರ ಕಾಪಾಡಿಕೊಂಡು ಪ್ರಾರ್ಥನೆ ಸಲ್ಲಿಸಿದರು. ಅಡುಗೆ ಕೂಡ ಸರಳವಾಗಿತ್ತು. ಪ್ರತಿವರ್ಷ ಹೊಸ ಉಡುಗೆ ತೊಟ್ಟು ಹಬ್ಬ ಆಚರಿಸುತ್ತಿದ್ದ ಆ ಸಂಭ್ರಮ ಕಾಣಲಿಲ್ಲ. ಪ್ರತಿ ವರ್ಷ ತಮ್ಮ ನೆಂಟರು ಹಾಗೂ …
Read More » ತಿಂಗಳ ಪ್ರಯಾಣಿಕರ ಸಂಖ್ಯೆಯಲ್ಲಿ 2ನೇ ಸ್ಥಾನಕ್ಕೇರಿದ ಬೆಳಗಾವಿ ವಿಮಾನ ನಿಲ್ದಾಣ
ಬೆಳಗಾವಿ: ಜೂನ್ ತಿಂಗಳ ವಿಮಾನ ಪ್ರಯಾಣದ ಮಾಹಿತಿಯನ್ನ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ರಾಜ್ಯದಲ್ಲಿನ ಪ್ರಯಾಣಿಕರ ಸಂಖ್ಯೆಯ ವಿಚಾರದಲ್ಲಿ ಬೆಳಗಾವಿ ವಿಮಾನ ನಿಲ್ದಾಣ 2ನೇ ಸ್ಥಾನಕ್ಕೇರಿದೆ ಈ ಮೂಲಕ ಬೆಳಗಾವಿ, ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನೇ ಹಿಂದಿಕ್ಕಿದೆ. ಬೆಂಗಳೂರು ಮೊದಲನೇ ಸ್ಥಾನದಲ್ಲಿದ್ದು ನಂತರದ ಸ್ಥಾನವನ್ನ ಬೆಳಗಾವಿ ಪಡೆದುಕೊಂಡಿದೆ. ಜೂನ್ ತಿಂಗಳಲ್ಲಿ ಬೆಳಗಾವಿಯಿಂದ 391 ವಿಮಾನಗಳ ಹಾರಾಟವಾಗಿದ್ದು, ಒಟ್ಟು 10,224 ಪ್ರಯಾಣಿಕರು ಸಂಚಾರ ಮಾಡಿದ್ದಾರೆ. ಇನ್ನು …
Read More »ಕರೊನಾ ಕೇಸ್: ಸಕ್ರಾ ಸೇರಿ ಐದು ಆಸ್ಪತ್ರೆಗಳ ವಿರದ್ಧ ಎಫ್ಐಆರ್
ಬೆಂಗಳೂರು: ಸರ್ಕಾಋದ ಆದೇಶದಂತೆ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಶೇಕಡ 50 ಹಾಸಿಗೆ ಒದಗಿಸದ ಐದು ಖಾಸಗಿ ಆಸ್ಪತ್ರೆಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ನೃಪತುಂಗಾ ರಸ್ತೆಯಲ್ಲಿರುವ ಸೇಂಟ್ ಮಾರ್ಥಾಸ್ ಆಸ್ಪತ್ರೆ, ಶಂಕರಪುರದ ರಂಗದೊರೆ ಮೆಮೋರಿಯಲ್ ಆಸ್ಪತ್ರೆ, ಕ್ವೀನ್ಸ್ ರಸ್ತೆಯ ಶಿಫಾ ಆಸ್ಪತ್ರೆ, ಕನ್ನಿಂಗ್ಹ್ಯಾಂ ರಸ್ತೆಯ ಫೋರ್ಟಿಸ್ ಆಸ್ಪತ್ರೆ ಹಾಗೂ ದೇವರಬೀಸನಹಳ್ಳಿಯ ಸಕ್ರಾ ಆಸ್ಪತ್ರೆ ವಿರುದ್ಧ ದೂರು ದಾಖಲಾಗಿರುವಂಥದ್ದು. ಕರೊನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಮೀಸಲಿರಿಸಿದ ಬೆಡ್ಗಳ ಕುರಿತು ಐಎಎಸ್ ಅಧಿಕಾರಿಗಳಿಗೆ …
Read More »ಕೊರೊನಾ ಸೋಂಕಿತನ ಕುಟುಂಬಕ್ಕೆ ಬಹಿಷ್ಕಾರ
ವಿಜಯಪುರ: ಕೊರೊನಾ ಸೋಂಕು ತಗಲಿದ ವ್ಯಕ್ತಿಯ ಕುಟುಂಬಕ್ಕೆ ಸ್ಥಳೀಯರು ಅಘೋಷಿತ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ. ವಿಜಯಪುರದ ಚಾಲುಕ್ಯ ನಗರದಲ್ಲಿ ಪುಣೆಯಿಂದ ಬಂದಿದ್ದ ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಆತನ ಕುಟುಂಬದ ಜೊತೆ ಯಾರು ಸಂಪರ್ಕ ಇಟ್ಟುಕೊಳ್ಳಬಾರದು. ಅವರ ಮನೆಗೆ ಪೇಪರ್, ತರಕಾರಿ, ಅಗತ್ಯ ವಸ್ತು ಪೂರೈಕೆ ಮಾಡಬಾರದೆಂದು ಕೆಲವು ಸ್ಥಳೀಯರು ತಕರಾರು ತೆಗೆದಿದ್ದಾರೆ. ಮನೆ ಕೆಲಸಗಾರರಿಗೆ ಕೆಲಸಕ್ಕೆ ಬರದಂತೆ ಅಡಚಣೆ ಉಂಟು ಮಾಡಿ ಅಘೋಷಿತ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ ಎನ್ನಲಾಗಿದೆ. …
Read More »ಶಾಸಕ `ಹಾಲಪ್ಪ ಆಚಾರ್’ ಗೆ ಕೊರೊನಾ ಸೋಂಕು ದೃಢ
ಕೊಪ್ಪಳ : ಈಗಾಗಲೇ ಜಿಲ್ಲೆಯ ಶಾಸಕರಾದಂತ ರಾಘವೇಂದ್ರ ಹಿಟ್ನಾಳ್ ಹಾಗೂ ಪರಣ್ಣ ಮುನವಳ್ಳಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಇದೀಗ ಇವರ ಬಳಿಕ ಶಾಸಕ ಹಾಲಪ್ಪ ಆಚಾರ್ ಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಕುರಿತಂತೆ ತಮ್ಮ ಫೇಸ್ ಬುಕ್ ಮುಖಪುಟದಲ್ಲಿ ಮಾಹಿತಿ ಹಂಚಿಕೊಂಡಿರುವ ಕೊಪ್ಪಳ ಜಿಲ್ಲೆಯ ಯಲಬುರ್ಗ ವಿಧಾನಸಭಾ ಕ್ಷೇತ್ರದ ಶಾಸಕ ಹಾಲಪ್ಪ ಆಚಾರ್, ಸ್ವಯಂ ಕೋವಿಡ್ ತಪಾಸಣೆಯನ್ನು ಮಾಡಿಸಿಕೊಳ್ಳಲಾಗಿ, ವೈದ್ಯಕೀಯ ವರದಿಯ ಅನುಸಾರ ಕೊರೋನಾ …
Read More »ಕೊರೋನಾ ವಿರುದ್ಧ ಹೋರಾಡಲು ರಾಜ್ಯ ಸರ್ಕಾರ ಸಿದ್ಧತೆ ಸಾಲದು: ಹೆಚ್.ಡಿ.ದೇವೇಗೌಡ
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಲೇ ಇದ್ದು, ಇಷ್ಟು ದಿನ ಸರ್ಕಾರಕ್ಕೆ ಬೆಂಬಲ ನೀಡುತ್ತಿದ್ದೇವೆಂದು ಹೇಳುತ್ತಿದ್ದ ರಾಜಕೀಯ ಪಕ್ಷಗಳು ಇದೀಗ ಸರ್ಕಾರದ ವಿರುದ್ಧ ತಿರುಗಿಬಿದ್ದಿವೆ. ಈ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ಕಿಡಿಕಾರಿದ್ದರು. ಇದೀಗ ಇವರೊಂದಿಗೆ ಹೆಚ್.ಡಿ.ದೇವೇಗೌಡ ಅವರೂ ಕೂಡ ದನಿಗೂಡಿಸಿದ್ದಾರೆ. ರಾಜ್ಯದಲ್ಲಿ ಕೊರೋನಾ ಪರಿಸ್ಥಿತಿ ಸುಧಾರಿಸುತ್ತಿದ್ದಂತೆಯೇ ಪರಿಸ್ಥಿತಿ ಕುರಿತು ಅವಲೋಕನ …
Read More »ಆಗಸ್ಟ್ ಬಂದರೂ ಸುರಿಯುತ್ತಿಲ್ಲ ಮಳೆ; ಇಂದಿನ ಜಲಾಶಯಗಳ ನೀರಿನ ಮಟ್ಟ ಹೀಗಿದೆ
ಬೆಂಗಳೂರು : ಆಗಸ್ಟ್ ತಿಂಗಳು ಆರಂಭಗೊಂಡಿದೆ. ಕಳೆದ ವರ್ಷ ಈ ಹೊತ್ತಿಗೆ ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ , ಈ ಬಾರಿ ಮಳೆ ಇಲ್ಲದೆ ಜನ ಕಂಗಾಲಾಗಿದ್ದಾರೆ. ಪರಿಸ್ಥಿತಿ ಹೀಗೆ ಮುಂದುವರಿದರೆ ಬೇಸಿಗೆ ಸಮಯದಲ್ಲಿ ನೀರಿಗೆ ಹಾಹಾಕಾರ ಏಳುವುದು ಗ್ಯಾರಂಟಿ . ಏಕೆಂದರೆ ಈಗ ಅಂದುಕೊಂಡ ಮಟ್ಟಕ್ಕೆ ಜಲಾಶಯಗಳು ತುಂಬುತ್ತಿಲ್ಲ. ಮಲೆನಾಡು ಹಾಗೂ ಕರಾವಳಿ ತೀರ ಪ್ರದೇಶದಲ್ಲಿ ಜೂನ್ ಹಾಗೂ ಜುಲೈ ಆರಂಭದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಆಗಿತ್ತು. ಆದರೆ, ನಂತರ ಮಳೆ ಆಗಲೇ ಇಲ್ಲ. …
Read More »ಪಿಪಿಇ ಕಿಟ್ ಧರಿಸದೇ ಸೋಂಕಿತರ ಅಂತ್ಯಸಂಸ್ಕಾರಕ್ಕೆ ಗುಂಪಾಗಿ ಸೇರಿದ ಸಂಬಂಧಿಕರು
ಬೆಳಗಾವಿ: ಕೊರೊನಾ ಸೋಂಕಿತರ ಅಂತ್ಯಸಂಸ್ಕಾರದ ವೇಳೆ ಸಂಬಂಧಿಕರು ಸೋಂಕಿನ ಭಯ ಮೆರತು ಸ್ಮಶಾನದೊಳಗೆ ನುಗ್ಗಿದ ಘಟನೆ ಜಿಲ್ಲೆಯ ಸದಾಶಿವನಗರದ ಸ್ಮಶಾನದಲ್ಲಿ ನಡೆದಿದೆ. ನಿನ್ನೆ ಸಂಜೆ ನಗರ ಪಾಲಿಕೆ ಸಿಬ್ಬಂದಿ ಕೊರೊನಾ ಸೋಂಕಿತರೊಬ್ಬರ ಅಂತ್ಯಕ್ರಿಯೆ ನಡೆಸಲು ಸದಾಶಿವನಗರದ ಸ್ಮಶಾನಕ್ಕೆ ಮೃತದೇಹ ತಂದಿದ್ದಾರೆ. ಈ ವೇಳೆ ಸೋಂಕಿತರ ಸಂಬಂಧಿಕರು ಪಿಪಿಇ ಕಿಟ್ ಇಲ್ಲದೇ, ಶವದ ಅಕ್ಕಪಕ್ಕ ಓಡಾಡಿದ್ದಾರೆ. ಅಲ್ಲದೇ ಅಂತ್ಯಸಂಸ್ಕಾರದ ವೇಳೆ ಬೆಂಕಿ ಸರಿಪಡಿಸಲು ಪಾಲಿಕೆ ಸಿಬ್ಬಂದಿ ಕೂಡ ಪಿಪಿಇ ಕಿಟ್ …
Read More »ಬೆಳಗಾವಿ | ಕಾಣೆಯಾದ ಬೆಳಗಾವಿಯ ಜಡಿಮಳೆ..!
ಬೆಳಗಾವಿ: ಮಳೆಗಾಲ ಆರಂಭದ ಮೊದಲ ತಿಂಗಳು, ಕಳೆದ ಜೂನ್‌ನಲ್ಲಿ ಜಿಲ್ಲೆಯಲ್ಲಿ ಅಬ್ಬರಿಸಿದ್ದ ಮಳೆರಾಯ ಜುಲೈನಲ್ಲಿ ತಣ್ಣಗಾಗಿದ್ದಾನೆ. ಪ್ರತಿವರ್ಷ ಜೂನ್‌ಗಿಂತಲೂ ಜುಲೈನಲ್ಲಿಯೇ ಹೆಚ್ಚು ಮಳೆಯಾಗುತ್ತಿತ್ತು. ವಾರಗಟ್ಟಲೆ ಜಿಟಿಜಿಟಿ ಸುರಿಯುತ್ತಿತ್ತು. ಆದರೆ, ಈ ಸಲ ಬೆಳಗಾವಿಯ ಜಡಿಮಳೆ ಕಾಣೆಯಾಗಿದೆ. ವಾಡಿಕೆಗಿಂತ ಶೇ 20ರಷ್ಟು ಕಡಿಮೆ ಮಳೆಯಾಗಿದ್ದು, ರೈತರಲ್ಲಿ ಆತಂಕ ಸೃಷ್ಟಿಸಿದೆ. ಜೂನ್‌ನಲ್ಲಿ 180.9 ಸೆಂ.ಮೀ ವಾಡಿಕೆ ಮಳೆಗೆ ಹೋಲಿಸಿದರೆ 228.4 ಸೆಂ.ಮೀ.ನಷ್ಟು (ಶೇ 25ರಷ್ಟು ಹೆಚ್ಚು) ಮಳೆಯಾಗಿತ್ತು. ಅದೇ ರಭಸ ಜುಲೈನಲ್ಲಿ ಕಂಡುಬರಲಿಲ್ಲ. ಮೊದಲ …
Read More »63,922 ಪಡಿತರ ಕಾರ್ಡ್ ರದ್ದು: ಗಡಾದ
ಮೂಡಲಗಿ: ರಾಜ್ಯದಲ್ಲಿ ಒಟ್ಟು 1,27,00,451 ಪಡಿತರ ಕಾರ್ಡ್‌ಗಳು ಇದ್ದು ಇವುಗಳಲ್ಲಿ 63,922 ಕಾರ್ಡ್‌ಗಳನ್ನು ಅನರ್ಹ ಪಡಿತರ ಕಾರ್ಡ್‌ಗಳೆಂದು ಗುರುತಿಸಿ ರದ್ದು ಪಡಿಸಲಾಗಿದೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿದ ಅವರು, 43,138 ಕಾರ್ಡ್‌ಗಳನ್ನು ಬಿಪಿಎಲ್‌ದಿಂದ ಎಪಿಎಲ್‌ಗೆ ಪರಿವರ್ತಿಸಲಾಗಿದೆ ಮತ್ತು ಅಕ್ರಮ ಬಿಪಿಎಲ್ ಕಾರ್ಡ್‌ಗಳನ್ನು ವಾಪಸ್ ಪಡೆಯುವಾಗ ಕಾರ್ಡ್‌ದಾರರಿಂದ ದಂಡದ ರೂಪದಲ್ಲಿ ಒಟ್ಟು 96,27,961 ರೂ. ಖಜಾನೆಗೆ ಪಾವತಿಸಿಕೊಳ್ಳಲಾಗಿರುವ ಅಂಶವು ಮಾಹಿತಿ ಹಕ್ಕಿನಿಂದ ಬೆಳಕಿಗೆ …
Read More »
Laxmi News 24×7