Breaking News
Home / ಅಂತರಾಷ್ಟ್ರೀಯ (page 236)

ಅಂತರಾಷ್ಟ್ರೀಯ

ಬೆಳಗಾವಿ; ತವರಿಗೆ ಹೋದ ಪತ್ನಿ; ಇಬ್ಬರು ಮಕ್ಕಳೊಂದಿಗೆ ಪತಿ ಆತ್ಮಹತ್ಯೆ

ಬೆಳಗಾವಿ, : ಪತ್ನಿ ತಮ್ಮನ್ನು ಬಿಟ್ಟು ತವರಿಗೆ ಹೋಗಿದ್ದರಿಂದ ಮನನೊಂದು ಇಬ್ಬರು ಮಕ್ಕಳ ಜೊತೆಗೆ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಾದಗೂಡು ಗ್ರಾಮದಲ್ಲಿ ಈ ಘಟನೆ ನಡೆದಿದೆ. ತಮ್ಮಣ್ಣ ಗಿಡ್ಡಾಳೆ (35) ಎಂಬುವರು ತಮ್ಮ ಮಕ್ಕಳಾದ ಚಿನ್ನು (2), ನಿರಂಜನ್ (10) ಅವರಿಗೆ ವಿಷ ಉಣಿಸಿ ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಧಾರವಾಡ; ಉದ್ಯೋಗ ನಷ್ಟ, ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಹೆಂಡತಿ …

Read More »

ಲಕ್ಷ್ಮಣ ಸವದಿಗೆ ನಸೀಬಿದ್ದರೆ ಮುಖ್ಯಮಂತ್ರಿ ಆಗಲಿ: ರಮೇಶ ಜಾರಕಿಹೊಳಿ

ಬೆಳಗಾವಿ: ‘ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ನಸೀಬಿದ್ದರೆ ಮುಖ್ಯಮಂತ್ರಿ ಆಗಲಿ’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ‘ಮುಂದಿನ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಎಂದು ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಅಭಿಯಾನ ನಡೆಸಲಾಗುತ್ತಿದೆಯಲ್ಲಾ’ ಎನ್ನುವ ಪತ್ರಕರ್ತರ ಪ್ರಶ್ನೆಗೆ ಮಂಗಳವಾರ ಇಲ್ಲಿ ಪ್ರತಿಕ್ರಿಯಿಸಿದ ಅವರು, ‘ಅಭಿಯಾನದ ಬಗ್ಗೆ ನನಗೆ ಗೊತ್ತಿಲ್ಲ. ಮುಖ್ಯಮಂತ್ರಿಯಾದರೆ ಆಗಲಿ ಪಾಪ’ ಎಂದರು. ‘ಹೈಕಮಾಂಡ್‌ನವರು ಹಾಗೂ ಮುಖ್ಯಮಂತ್ರಿ ಚರ್ಚಿಸಿ ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ‌ ಮಾಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹಾಗೂ …

Read More »

ಬೆಳಗಾವಿ | ಕೋವಿಡ್-19: ‘ನೆಗೆಟಿವ್’ ಪ್ರಮಾಣವೂ ಹೆಚ್ಚಳ

ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಕಾರಣದಿಂದಾಗಿ 29 ದಿನಗಳಲ್ಲಿ 51 ಮಂದಿ ಸಾವಿಗೀಡಾಗಿದ್ದಾರೆ. ತೀವ್ರ ಉಸಿರಾಟದ ತೊಂದರೆ, ಕ್ಯಾನ್ಸರ್, ಮಧುಮೇಹ, ವಿಷಮ ಶೀತಜ್ವರ ಮಾದರಿ ಅನಾರೋಗ್ಯ ಮೊದಲಾದ ಸಮಸ್ಯೆಗಳಿರುವವರು ಹೆಚ್ಚಿನ ಅಪಾಯಕ್ಕೆ ಒಳಗಾಗುತ್ತಿದ್ದಾರೆ. ಕಳೆದ ತಿಂಗಳಿಗೆ ಹೋಲಿಸಿದರೆ ಈ ತಿಂಗಳಲ್ಲಿ ಜಿಲ್ಲೆಯಲ್ಲಿ ಪರೀಕ್ಷೆಯ ಪ್ರಮಾಣ ಜಾಸ್ತಿಯಾಗಿದೆ. ಇದರೊಂದಿಗೆ ಸೋಂಕು ದೃಢಪಡುವ ಸಂಖ್ಯೆಯೂ ಹೆಚ್ಚಾಗಿದೆ. ಜಿಲ್ಲೆಯಲ್ಲಿ ನೆಗೆಟಿವ್ ಪ್ರಕರಣಗಳ ಸಂಖ್ಯೆಯೂ ದೊಡ್ಡ ಮಟ್ಟದಲ್ಲಿಯೇ ಇದೆ. ಸೋಮವಾರದವರೆಗೆ 40,173 ಮಂದಿಯಿಂದ ಗಂಟಲು ಅಥವಾ ಮೂಗಿನ …

Read More »

ಕಳಸಾ ಬಂಡೂರಿ ವಿಸ್ತೃತ ಯೋಜನಾ ವರದಿ ಅನುಷ್ಠಾನಕ್ಕೆ ಆಡಳಿತಾತ್ಮಕ ಒಪ್ಪಿಗೆ: ರಮೇಶ್ ಜಾರಕಿಹೊಳಿ‌

ಬೆಳಗಾವಿ: ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಕಣಕುಂಬಿ ಗ್ರಾಮದ ಬಳಿ ಮಹದಾಯಿ‌ ನದಿಗೆ ಅಣೆಕಟ್ಟು ನಿರ್ಮಿಸಿ ಕೂಡು ಕಾಲುವೆ ಮುಖಾಂತರ 1.72 ಟಿ ಎಂ ಸಿ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಲಪ್ರಭಾ ನದಿಗೆ ತಿರುಗಿಸುವ 885. 80 ಕೋಟಿ ಮೊತ್ತದ ಕಳಸಾ ನಾಲಾ ತಿರುವು ಯೋಜನೆಯ ಪರಿಷ್ಕೃತ ಯೋಜನಾ ವರದಿಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಹಾಗೆಯೇ ಬೆಳಗಾವಿ ಜಿಲ್ಲೆಯ …

Read More »

ಕೆ.ವಿ. ರಾಜೇಂದ್ರ ವರ್ಗಾವಣೆ…

ಬೆಳಗಾವಿ: ಇಲ್ಲಿನ ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ವಿ. ರಾಜೇಂದ್ರ ಅವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಸರ್ಕಾರ ಮಂಗಳವಾರ ವರ್ಗಾವಣೆ ಮಾಡಿದೆ. ಅವರಿಂದ ತೆರವಾದ ಸ್ಥಾನಕ್ಕೆ ಎಚ್‌.ವಿ. ದರ್ಶನ್‌ ವರ್ಗವಾಗಿದ್ದಾರೆ. ಕೋಲಾರ ಜಿಲ್ಲಾ ಪಂಚಾಯಿತಿ ಸಿಇಒ ಆಗಿದ್ದ ಅವರು, 2016ರ ಐಎಎಸ್‌ ಬ್ಯಾಚ್‌ನ ಅಧಿಕಾರಿಯಾಗಿದ್ದಾರೆ.

Read More »

ಕೊರೊನಾ ವಿಚಾರದಲ್ಲಿ ಇತರೆ ದೇಶಗಳಿಗೆ ಹೋಲಿಸಿದರೆ ಭಾರತ ಉತ್ತಮ ಸ್ಥಿತಿಯಲ್ಲಿದೆ:ಪ್ರಧಾನಿ

ನವದೆಹಲಿ: ಕೊರೊನಾ ವಿಚಾರದಲ್ಲಿ ಇತರೆ ದೇಶಗಳಿಗೆ ಹೋಲಿಸಿದರೆ ಭಾರತ ಉತ್ತಮ ಸ್ಥಿತಿಯಲ್ಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನೊಯ್ಡಾ, ಮುಂಬೈ ಹಾಗೂ ಕೊಲ್ಕತ್ತಾಗಳಲ್ಲಿ ಅತ್ಯಾಧುನಿಕ ಕೊರೊನಾ ಪರೀಕ್ಷಾ ಕೇಂದ್ರಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿ ಪ್ರತಿ ದಿನ 50 ಸಾವಿರದ ಆಸುಪಾಸಿನಲ್ಲಿ ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿವೆ. ಆದರೆ ಇತರೆ ದೊಡ್ಡ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಕೊರೊನಾದಿಂದ ಸಾವನ್ನಪ್ಪುತ್ತಿರುವವರ ಪ್ರಮಾಣ ಕಡಿಮೆ ಇದೆ. ಅಲ್ಲದೆ …

Read More »

ಬೆಳಗಾವಿ | ಆರ್‌ಟಿಇ; ಶೇ 50ಕ್ಕಿಂತಲೂ ಕಡಿಮೆ ಅರ್ಜಿ ಸಲ್ಲಿಕೆ!…

ಬೆಳಗಾವಿ: ಶಿಕ್ಷಣ ಹಕ್ಕು ಕಾಯ್ದೆಗೆ (ಆರ್‌ಟಿಇ) ತಿದ್ದುಪಡಿ ತಂದ ನಂತರ ಜಿಲ್ಲೆಯಲ್ಲಿರುವ ‌ಅನುದಾನಿತ ಹಾಗೂ ಅನುದಾನ ರಹಿತ (ಖಾಸಗಿ) ಶಾಲೆಗಳಲ್ಲಿರುವ ಸೀಟುಗಳ ಬೇಡಿಕೆ ತೀವ್ರ ಕುಸಿತ ಕಂಡುಬಂದಿದೆ. ಪ್ರಸಕ್ತ ಸಾಲಿನಲ್ಲಿ ಶೇ 50ಕ್ಕಿಂತಲೂ ಕಡಿಮೆ ಬೇಡಿಕೆ ಕಂಡುಬಂದಿದೆ. ಒಟ್ಟು 1966 ಸೀಟುಗಳ ಪೈಕಿ ಕೇವಲ 883 ಸೀಟುಗಳಿಗೆ ಮಾತ್ರ ಅರ್ಜಿ ಸಲ್ಲಿಕೆಯಾಗಿರುವುದೇ ಇದಕ್ಕೆ ಸಾಕ್ಷಿ. ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ 40 ಅನುದಾನಿತ ಹಾಗೂ 5 ಅನುದಾನ ರಹಿತ ಶಾಲೆಗಳು ಆರ್‌ಟಿಇ ವ್ಯಾಪ್ತಿ …

Read More »

ಸಿಬ್ಬಂದಿ ಸೋಂಕು: ಚಿಕ್ಕೋಡಿ ಉಪವಿಭಾಗಾಧಿಕಾರಿ ಕಚೇರಿ ಸೀಲ್ ಡೌನ್!

ಚಿಕ್ಕೋಡಿ, ಜುಲೈ.27: ಕೊರೊನಾವೈರಸ್ ಸೋಂಕು ಹರಡುವಿಕೆ ಭೀತಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಚಿಕ್ಕೋಡಿಯ ಉಪ ವಿಭಾಗಾಧಿಕಾರಿ ಕಚೇರಿ ಸಿಬ್ಬಂದಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ಚಿಕ್ಕೋಡಿ ಉಪವಿಭಾಗಾಧಿಕಾರಿ ಕಚೇರಿಯ ಸಿಬ್ಬಂದಿಯೊಬ್ಬರಿಗೆ ಸೋಂಕು ಪತ್ತೆಯಾಗಿರುವ ಹಿನ್ನೆಲೆ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ. ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ಕಚೇರಿ ಸೇರಿದಂತೆ ಮಿನಿ ವಿಧಾನಸೌಧದಲ್ಲಿ 10ಕ್ಕೂ ಹೆಚ್ಚು ಕಚೇರಿಗಳನ್ನು ಸೀಲ್ ಡೌನ್ ಮಾಡಲಾಗಿದೆ. ಕೊರೊನಾ ಭಯ: ಚಿಕ್ಕೋಡಿಯಲ್ಲಿ ಸ್ವಯಂ …

Read More »

ಖಾದಿ ಮಂಡಳಿಗೆ ನೇಮಕ ನಿರೀಕ್ಷಿಸಿರಲಿಲ್ಲ, ಖುಷಿಯಾಗಿದೆ: ದುರ್ಯೋಧನ ಐಹೊಳೆ…?

ಬೆಳಗಾವಿ: ‘ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷನಾಗಿ ನೇಮಕಗೊಂಡಿರುವುದಕ್ಕೆ ಖುಷಿಯಾಗಿದೆ. ನಾನು ಈ ಹುದ್ದೆ ನಿರೀಕ್ಷಿಸಿರಲಿಲ್ಲ’ ಎಂದು ರಾಯಬಾಗದ ಶಾಸಕ ದುರ್ಯೋಧನ ಐಹೊಳೆ ಪ್ರತಿಕ್ರಿಯಿಸಿದರು. ‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶ್ರಾವಣ ಸೋಮವಾರದ ದಿನ ಒಳ್ಳೆಯ ಕೊಡುಗೆ ನೀಡಿದ್ದಾರೆ. ಮಂಡಳಿಯಲ್ಲಿ ಕೆಲಸ ಮಾಡಲು ಬಹಳಷ್ಟು ಅವಕಾಶವಿದೆ. ಅದನ್ನು ಬಳಸಿಕೊಳ್ಳುತ್ತೇನೆ’ ಎಂದರು. ‘ಜಿಲ್ಲಾ ನಾಯಕರ ಸಹಕಾರ ಮತ್ತು ರಾಜಕಾರಣದಲ್ಲಿ ನನ್ನ ಗಾಡ್‌ಫಾದರ್‌ ಆಗಿರುವ ಉಪ ಮುಖ್ಯಮಂತ್ರಿ ಗೋವಿಂದ …

Read More »

ನ್ಯಾಯವಾದಿಗಳ ಪಿರ್ಯಾದಿ ತೆಗೆದುಕೊಳ್ಳದ ಪೋಲಿಸ್ ಅಧಿಕಾರಿ….?

    ಕೆಲವು ದಿನಗಳ ಹಿಂದೆ ಹಿಂದು ದೇವರು ಬಗ್ಗೆ ಕೋಮು ಗಲಭೆ ಉಂಟು ಮಾಡುವ ಉದ್ದೇಶದಿಂದ ಹೇಳಿಕೆ ನೀಡಿರುವ ಮಾಜಿ ಸಚಿವ ಮುರಗೇಶ ನಿರಾಣಿಯವರ ವಿರುದ್ದ ಪಿರ್ಯಾದಿ ಕೊಡಲು ಹೋದಾಗ ಸ್ಥಳಿಯ ನಗರ ಪಿಎಸ್ಐ ಯವರು ತೆಗೆದುಕೊಳ್ಳುತ್ತಿಲ್ಲವೆಂದು ಗೋಕಾಕ ನಗರದ ನ್ಯಾಯವಾದಿಗಳಾದ ಬಸವರಾಜ ಕಾಪಸಿ ಇವರು ಪತ್ರಿಕಗೊಷ್ಟಿಯಲ್ಲಿ ಪೋಲಿಸ ಇಲಾಖೆಯ ವಿರುದ್ದ ತಮ್ಮ ಅಸಹಾಕತೆ ತೋರಿದ್ದಾರೆ. ಗೋಕಾಕನಲ್ಲಿ ಪಿ,ಎಸ್,ಐ, ಅಮ್ಮಿನಬಾವಿ ಇವರು ಮೂರ್ನಾಲ್ಕು ದಿನಗಳಿಂದ ನ್ಯಾವಾದಿಗಳು ಮುರಗೇಶ ನಿರಾಣಿ …

Read More »