Breaking News
Home / ಅಂತರಾಷ್ಟ್ರೀಯ (page 241)

ಅಂತರಾಷ್ಟ್ರೀಯ

ಕೊನೆಯ ರೈತರ ತಲುಪದ ಕೃಷ್ಣೆ……?

ಹುಣಸಗಿ: ‘ಕೃಷ್ಣಾ ಅಚ್ಚುಕಟ್ಟು ಪ್ರದೇಶದ ನೀರಾವರಿ ವ್ಯಾಪ್ತಿಯ ಎಲ್ಲ ರೈತರಿಗೂ ನೀರು ಸಿಗಬೇಕು. ರೈತರು ಸ್ವಾವಲಂಬಿಗಳಾಗಬೇಕು’ ಎನ್ನುವ ಮೂಲ ಉದ್ದೇಶವೇ ಮಾಯವಾಗಿದೆ. ಕಾಲುವೆ ಗೇಟ್ ಬಳಿ ಇರುವ ರೈತರು ಮಾತ್ರ ನೀರು ಪಡೆಯುತ್ತಿದ್ದು, ಇಂದಿಗೂ ಕಾಲುವೆ ಅಂಚಿನ ರೈತರು ನೀರಾವರಿಯಿಂದ ವಂಚಿತರಾಗಿದ್ದಾರೆ. ಇದರಿಂದಾಗಿ ಕಾಲುವೆ, ಜಾಲ ಕಾಲುವೆ, ರಸ್ತೆ ಇದ್ದರೂ ಒಣ ಬೇಸಾಯವನ್ನೇ ಮಾಡಿಕೊಂಡಿದ್ದು, ನೀರಾವರಿ ಮರೀಚಿಕೆಯಂತಾಗಿದೆ. ಇದಕ್ಕೆ ಉದಾಹರಣೆ ಎಂಬಂತೆ ವಿತರಣಾ ಕಾಲುವೆ 6 ಇದ್ದು, ಶೇ 50ರಷ್ಟು …

Read More »

ರಾತ್ರೋ ರಾತ್ರಿ ಸುರಿದ ಮಳೆಯಿಂದ ತುಂಬಿದ ರೈತರ ಕೆರೆ

ತುಮಕೂರು: ಭಾನುವಾರ ರಾತ್ರಿ ಮಧುಗಿರಿ ತಾಲ್ಲೂಕಿನಲ್ಲಿ ಸುರಿದ ಮಳೆಯಿಂದಾಗಿ ಮಾವಿನ ಕೃಷಿಕ ಅಂಜಿನಪ್ಪ ಅವರ ಭವಿಷ್ಯವೇ ಬದಲಾಯಿತು. 1 ಕೋಟಿ ಲೀಟರ್ ಸಾಮರ್ಥ್ಯದ ಅವರ ಬೃಹತ್ ಕೃಷಿ ಕೊಳವು ತುಂಬಿದೆ, , ಬೆಂಗಳೂರು ಗ್ರಾಮೀಣ ಜಿಲ್ಲೆಯ ದೇವನಹಳ್ಳಿ ಮೂಲದ ಬಿ.ಇ (ಸಿವಿಲ್) ಎಂಜಿನೀಯರ್ ಅಂಜಿನಪ್ಪ ಹಲವು ವರ್ಷಗಳ ಹಿಂದೆ ಕೆರೆ ನಿರ್ಮಿಸಿದ್ದರು. ಅವರು ಕೊರೆಸಿದ್ದ ಮೂರು ಬೋರ್ ವೆಲ್ ಗಳ ನೀರು ಬತ್ತಿ ಹೋದ ಹಿನ್ನೆಲೆಯಲ್ಲಿ ತಮ್ಮ 40 ಎಕರೆ …

Read More »

ರಾಜ್ಯದಲ್ಲಿ ಒಂದೇ ದಿನ 61 ಜನರ ಬಲಿ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಮಂಗಳವಾರ ಒಂದೇ ದಿನ ಬರೋಬ್ಬರಿ 61 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1464ಕ್ಕೆ ಏರಿಕೆಯಾಗಿದೆ. ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 22 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 61 ಮಂದಿ ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಅವರು ತಿಳಿಸಿದ್ದಾರೆ. ಇಂದು ಬೆಂಗಳೂರು ನಗರವೊಂದರಲ್ಲೆ ಅತಿ …

Read More »

ಸಿಗರೇಟ್ ಗಾಗಿ ತನ್ನ ಜೀವವನ್ನೇ ಪಣಕ್ಕಿಟ್ಟ ಭೂಪ

ನಾಲ್ಕು ಪ್ಯಾಕ್ ಸಿಗರೇಟಿಗೆ ತನ್ನ ಜೀವವನ್ನೇ ಪಣಕ್ಕಿಟ್ಟ ವ್ಯಕ್ತಿಯೊಬ್ಬ ನೆಟ್‌ನಲ್ಲಿ ಸುದ್ದಿಯಾಗಿದ್ದಾನೆ. ಸಮುದ್ರದ ನೀರಿನಲ್ಲಿ ಮುಳುಗಿಹೋಗಿದ್ದ ತನ್ನ ವ್ಯಾನ್‌ನಲ್ಲಿ ನಾಲ್ಕು ಪ್ಯಾಕ್ ಸಿಗರೇಟ್‌ ಇದ್ದ ಕಾರಣ, ಆ ನೀರಿನಲ್ಲೇ ಈಜಿಕೊಂಡು ಹೋದ ಆತ ಕೊನೆಗೂ ಸಿಗರೇಟ್‌ನೊಂದಿಗೆ ಸುರಕ್ಷಿತವಾಗಿ ಹಿಂದಿರುಗಿದ್ದಾನೆ. ಈ ಪ್ರಸಂಗವನ್ನು ಫೋಟೋಗ್ರಾಫರ್‌ಗಳು ವಿಡಿಯೋ ರೆಕಾರ್ಡಿಂಗ್ ಮಾಡಿಕೊಂಡಿದ್ದಾರೆ. ಈ ಘಟನೆಯು ಬ್ರಿಟನ್‌ನ ಟೀಸೈಡ್ ಬಳಿಯ ರೆಡ್‌ಕಾರ್‌ ಬೀಚ್‌ನಲ್ಲಿ ಸಂಭವಿಸಿದೆ. ಸಮುದ್ರದಲ್ಲಿ ಮುಳುಗಿದ್ದ ವ್ಯಾನ್‌ ಅನ್ನು ಟ್ರಾಕ್ಟರ್‌ ನೆರವಿನಿಂದ ತೀರಕ್ಕೆ ಎಳೆಯುವ …

Read More »

ಕುಮಾರಸ್ವಾಮಿ ಸರ್ಕಾರ ಪತನವಾಗಿ ಒಂದು ವರ್ಷ : ಮಾಜಿ ಸಿಎಂ ನಾಳೆ ಸಾರ್ವಜನಿಕರೊಂದಿಗೆ ವಿಡಿಯೋ ಸಂವಾದ ನಡೆಸಲಿದ್ದಾರೆ.

ಬೆಂಗಳೂರು: ಕುಮಾರಸ್ವಾಮಿ ಸರ್ಕಾರ ಪತನವಾಗಿ ಒಂದು ವರ್ಷವಾದ ಹಿನ್ನಲೆಯಲ್ಲಿ ಮಾಜಿ ಸಿಎಂ ನಾಳೆ ಸಾರ್ವಜನಿಕರೊಂದಿಗೆ ವಿಡಿಯೋ ಸಂವಾದ ನಡೆಸಲಿದ್ದಾರೆ. ಒಂದು ವರ್ಷದ ಬಿಜೆಪಿ ಸರ್ಕಾರದ ಆಡಳಿತ , ಕಾರ್ಯವೈಖರಿ ಬಗ್ಗೆ ಸಂವಾದ ನಡೆಸಲಿದ್ದು, ಕುಮಾರಸ್ವಾಮಿ ಸಾರ್ವಜನಿಕರ ಜೊತೆ ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ. ಪ್ರಸ್ತುತ ಕೊರೋನಾ ಪರಿಸ್ಥಿತಿ ಯನ್ನು ಸರ್ಕಾರ ನಿಭಾಯಿಸುತ್ತಿರುವ ಬಗ್ಗೆಯೂ ಚರ್ಚೆ ನಡೆಸಲಿದ್ದಾರೆ. ಮಧ್ಯರಾತ್ರಿ ನಡು ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ ಗರ್ಭಿಣಿ..! ಈಗಾಗಲೇ ಕುಮಾರಸ್ವಾಮಿಗೆ ಮೋಸ ಮಾಡಿ ಒಂದು …

Read More »

ಲಾಕ್ ಡೌನ್ ವಿಸ್ತರಣೆ ಬಗ್ಗೆ ಮುಖ್ಯ ಮಂತ್ರಿಗಳ ಹೇಳಿಕೆ

ಬೆಂಗಳೂರು: ಸಿಎಂ ಬಿಎಸ್ ಯಡಿಯೂರಪ್ಪ ಅವರ ರಾಜ್ಯದ ಜನತೆಯನ್ನ ಉದ್ದೇಶಿಸಿ ಇಂದು (ಮಂಗಳವಾರ) ಸಂಜೆ ಭಾಷಣ ಮಾಡಿದರು. ಇದೇ ಮೊದಲ ಬಾರಿ ಸಮಾಜಿಕ ಜಾಲತಾಣಗಳ ಮೂಲಕ ಕರ್ನಾಟಕದ ಜನರನ್ನು ಉದ್ದೇಶಿಸಿ ಮಾತನಾಡಿದ್ದು, ನಿರೀಕ್ಷೆಯಂತೆ ಕೊರೋನಾ ವೈರಸ್‌ ಬಗ್ಗೆ ಮಾತನಾಡಿದರು. ಈ ವೇಳೆ ಕರ್ನಾಟಕ ಜನತೆ ವಿಶೇಷ ಮನವಿ ಮಾಡಿಕೊಂಡಿದ್ದಾರೆ. ದೇಶದೆಲ್ಲೆಡೆ ಕೊರೋನಾ ವೈರಸ್​ ಬಗ್ಗೆ ವ್ಯಾಪಕ ಚರ್ಚೆಯಾಗುತ್ತಿದೆ. ಕೋವಿಡ್​ ನಿಯಂತ್ರಣ ಮಾಡುವುದರಲ್ಲಿ ಪ್ರಾರಂಭದಲ್ಲಿ ನಾವು ಯಶಸ್ವಿಯಾಗಿದ್ದೆವು. ಆದ್ರೆ, ಇತ್ತೀಚಿನ ದಿನಗಳಲ್ಲಿ …

Read More »

ಸಚಿವರಾದ ರಮೇಶ ಜಾರಕಿಹೊಳಿಯವರು ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರದ ಜೊತೆಯಲ್ಲಿ ಪ್ರೋತ್ಸಾಹ ಧನವನ್ನು ಗೋಕಾಕದ ಗೃಹ ಕಚೇರಿಯಲ್ಲಿ ನೀಡಿದರು.

  ಗೋಕಾಕ : ದ್ವೀತಿಯ ಪಿಯುಸಿಯಲ್ಲಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ಉತ್ತಮ ಅಂಕ ಪಡೆದು ರಾಂಕ್ ಪಡೆದುಕೊಂಡ ವಿದ್ಯಾರ್ಥಿಗಳಿಗೆ ಜಲಸಂಪನ್ಮೂಲ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ ಜಾರಕಿಹೋಳಿಯವರು ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರದ ಜೊತೆಯಲ್ಲಿ ಪ್ರೋತ್ಸಾಹ ಧನವನ್ನು ಗೋಕಾಕದ ಗೃಹ ಕಚೇರಿಯಲ್ಲಿ ನೀಡಿದರು. ಈ ಸಂದರ್ಭದಲ್ಲಿ  ಮಾದ್ಯಮದವರ ಜೊತೆ ಮಾತಾನಾಡಿದ ಗೋಕಾಕ ಶಿಕ್ಷಣಾಧಿಕಾರಿಯಾದ ಜಿ,ಬಿ,ಬಳಿಗಾರ ಇವರು ಮಾತನಾಡಿ ವಿದ್ಯಾರ್ಥಿಗಳಿಗೆ ಮುಂದಿನ …

Read More »

ದುಬೆ ಸತ್ತಿದ್ದು ಪೊಲೀಸರ ಗುಂಡೇಟಿನಿಂದಲ್ಲ – ಮರಣೋತ್ತರ ವರದಿ ಹೇಳಿದ್ದೇನು?

ಲಕ್ನೋ: ಪೊಲೀಸ್ ಎನ್‍ಕೌಂಟರ್ ನಲ್ಲಿ ಸಾವನ್ನಪ್ಪಿದ ಗ್ಯಾಂಗ್‍ಸ್ಟರ್ ವಿಕಾಸ್ ದುಬೆಯ ಮರಣೋತ್ತರ ಪರೀಕ್ಷೆ ಬಂದಿದ್ದು, ವರದಿಯಲ್ಲಿ ಆತ ಪೊಲೀಸರ ಗುಂಡೇಟಿನಿಂದ ಸಾನ್ನಪ್ಪಿಲ್ಲ ಎಂದು ತಿಳಿದು ಬಂದಿದೆ. ಜುಲೈ 2ರಂದು ರಾತ್ರಿ ಪೊಲೀಸರ ತಂಡ 60 ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ವಿಕಾಸ್ ದುಬೆಯನ್ನು ಬಂಧಿಸಲೆಂದು ದಿಕ್ರು ಗ್ರಾಮಕ್ಕೆ ತೆರಳಿತ್ತು. ಈ ವಿಚಾರ ಮೊದಲೇ ತಿಳಿದಿದ್ದ ವಿಕಾಸ್ ದುಬೆ ಬೆಂಬಲಿಗರು ರಸ್ತೆಗೆ ಅಡ್ಡಲಾಗಿ, ಕಲ್ಲು ಹಾಗೂ ಇಟ್ಟಿಗೆಗಳನ್ನು ಇಟ್ಟಿದ್ದರು. ಇದನ್ನು ತೆರವುಗೊಳಿಸಿ ಪೊಲೀಸರು …

Read More »

ಕೊರೊನಾ ವೈರಸ್‌ನಿಂದ ನಲುಗುತ್ತಿರುವ ವಿಶ್ವಕ್ಕೆ ಸಿಹಿ ಸುದ್ದಿ ಸಿಕ್ಕಿದೆ.

ಲಂಡನ್‌: ಕೊರೊನಾ ವೈರಸ್‌ನಿಂದ ನಲುಗುತ್ತಿರುವ ವಿಶ್ವಕ್ಕೆ ಸಿಹಿ ಸುದ್ದಿ ಸಿಕ್ಕಿದೆ. ಆಕ್ಸ್‌ಫರ್ಡ್‌ ವಿಶ್ವವಿದ್ಯಾಲಯ ಅಭಿವೃದ್ಧಿ ಪಡಿಸಿರುವ ಲಸಿಕೆ ಸುರಕ್ಷಿತವಾಗಿದೆ. ಆಕ್ಸ್‌ಫರ್ಡ್‌ ಮತ್ತು ಅಸ್ಟ್ರಾಜೆನೆಕಾ ಜಂಟಿಯಾಗಿ ಅಭಿವೃದ್ಧಿ ಪಡಿಸಿದ AZD1222 ಹೆಸರಿನ ಲಸಿಕೆಯ ಸುರಕ್ಷಿತವಾಗಿದೆ ಎಂದು ವೈದ್ಯ ಕ್ಷೇತ್ರಕ್ಕೆ ಸಂಬಂಧಿಸಿದ ‘ದಿ ಲ್ಯಾನ್ಸೆಟ್‌ ಮೆಡಿಕಲ್‌ ಜರ್ನಲ್’‌ನಲ್ಲಿ ಸಂಶೋಧನಾ ವರದಿ ಪ್ರಕಟವಾಗಿದೆ. 1,077 ಮಂದಿ ಆರೋಗ್ಯಕರ ಸ್ವಯಂಸೇವಕರ ಮೇಲೆ ನಡೆಸಿದ ಆರಂಭಿಕ ಹಂತದ ಕ್ಲಿನಿಕಲ್ ಟ್ರಯಲ್‌ ಯಶಸ್ವಿಯಾಗಿದ್ದು, ಈ ವೇಳೆ ಲಸಿಕೆ ರೋಗನಿರೋಧಕ …

Read More »

ಬಾಳೆಹಣ್ಣಿಗೆ ವಿಷಹಾಕಿ 20ಕ್ಕೂ ಹೆಚ್ಚು ಹಸುಗಳನ್ನು ಕೊಂದಿರುವ ಆಘಾತಕಾರಿ ಘಟನೆ…?

ತೋಟದೊಳಗೆ ಬರುತ್ತಿವೆ ಎಂದು ಪಾಪಿಗಳು ಬಾಳೆಹಣ್ಣಿಗೆ ವಿಷಹಾಕಿ 20ಕ್ಕೂ ಹೆಚ್ಚು ಹಸುಗಳನ್ನು ಕೊಂದಿರುವ ಆಘಾತಕಾರಿ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆಯಲ್ಲಿ ನಡೆದಿದೆ. ಐಗೂರಿನ ಡಿಬಿಡಿ ಟಾಟಾ ಎಸ್ಟೇಟ್‍ನಲ್ಲಿ ಈ ಘಟನೆ ನಡೆದಿದ್ದು, ಎಸ್ಟೇಟ್ ಒಳಗೆ ಸ್ಥಳೀಯ ದನಗಳು ಹೋಗುತ್ತಿದ್ದರಿಂದ ಎಸ್ಟೇಟ್‍ನ ಮ್ಯಾನೇಜರ್ ಮತ್ತು ಸಿಬ್ಬಂದಿ ಸೇರಿ ಬಾಳೆಹಣ್ಣಿಗೆ ವಿಷ ಹಾಕಿ ಹಸುಗಳಿಗೆ ತಿನಿಸಿ ಕೊಂದಿದ್ದಾರೆ. ಈ ರೀತಿ ಕಳೆದ ಹಲವು ದಿನಗಳಿಂದ 20ಕ್ಕೂ ಹೆಚ್ಚು ಹಸುಗಳಿಗೆ ಹತ್ಯೆ ಮಾಡಿದ್ದಾರೆ ಎಂದು …

Read More »