ಮೇಷ – ಮನಸ್ಸಿಗೆ ಸಮಾಧಾನದ ದಿನ, ಸ್ವಲ್ಪ ಆರೋಗ್ಯದಲ್ಲಿ ವ್ಯತ್ಯಾಸ ಕಾಣಲಿದೆ, ಅಮ್ಮನವರ ಪ್ರಾರ್ಥನೆ ಮಾಡಿ ವೃಷಭ – ಹೊಟ್ಟೆ ಸಂಬಂಧಿ ಆರೋಗ್ಯ ವ್ಯತ್ಯಾಸ, ಸಹೋದರರೊಂದಿಗೆ ಸಮಾಧಾನವಿರಲಿ, ನಷ್ಟ ಸಾಧ್ಯತೆ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ ಮಿಥುನ – ಸುಖಹಾನಿ, ಅಸಮಧಾನದ ದಿನ, ಕೃಷಿಕರಿಗೆ ಕೊಂಚ ಕಾರ್ಯ ವಿಘ್ನಗಳು, ಗ್ರಾಮದೇವತಾರಾಧನೆ ಮಾಡಿ ಕನ್ಯಾ – ಸ್ತ್ರೀಯರಿಗೆ ಕೆಲಸದಲ್ಲಿ ಮಂಕು, ಸಹೋದರರಿಂದ ಅಸಹಾಯಕತೆ, ದುರ್ಗಾ ಪ್ರಾರ್ಥನೆ ಮಾಡಿ ಜುಲೈ ತಿಂಗಳಿನಲ್ಲಿ ಜನಿಸಿದವರ ಸ್ವಭಾವ …
Read More »ದೇಶದಲ್ಲಿ ಕೊರೊನಾ ಬಾಧಿತರ ಸಂಖ್ಯೆ 9 ಲಕ್ಷ ಗಡಿ ದಾಟಿದೆ.
ನವದೆಹಲಿ,ಜು.14-ದೇಶದಲ್ಲಿ ಕೊರೊನಾ ಬಾಧಿತರ ಸಂಖ್ಯೆ 9 ಲಕ್ಷ ಗಡಿ ದಾಟಿದೆ. ಕಳೆದ 24 ಗಂಟೆಯಲ್ಲಿ 28,498 ಜನರಿಗೆ ಸೋಂಕು ತಗುಲಿದ್ದು, 533 ಮಂದಿ ಸಾವನ್ನಪ್ಪಿದ್ದಾರೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ ವಿವಿಧ ರಾಜ್ಯಗಳಲ್ಲಿ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚುತ್ತಿದೆ. ಇದನ್ನು ನಿಯಂತ್ರಿಸುವ ಸಲುವಾಗಿ ಲಾಕ್‍ಡೌನ್ ಸೇರಿದಂತೆ ವಿವಿಧ ಬಿಗಿ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇದು ಅನಿವಾರ್ಯವಾಗಿದೆ. ಇದಕ್ಕೆ ಜನರು ಸ್ಪಂದಿಸಬೇಕು ಎಂದು ಕೋರಲಾಗಿದೆ. …
Read More »ಮಗನ ಅದ್ದೂರಿ ಮದುವೆ ಮಾಡಿದ ಬಿಜೆಪಿ ಮುಖಂಡನ ವಿರುದ್ದ ಎಫ್ ಐ ಆರ್
ಹುಕ್ಕೇರಿ: ಮದುವೆ ಸಮಾರಂಭಗಳಿಗೆ ಸರಕಾರ ನಿಷೇಧ ಹೇರಿದರೂ ಜನ ಮಾತ್ರ ಸಂಭಂದವಿಲ್ಲವೆನೋ ಅನ್ನೊ ಹಾಗೆ ಇದ್ದಾರೆ. ಕೊರೋನಾ ಮಾಹಾಮಾರಿ ಯಿಂದ ಜನ ಸಾವನ್ನಪ್ಪುತ್ತಿದ್ದರು ಜನ ಮಾತ್ರ ಎಚ್ಚೆತ್ತುಕೊಳ್ಳುವ ಲಕ್ಷಣಗಳು ಕಾಣುತ್ತಿಲ್ಲ. ಈಗ ಸರಕಾರದ ನಿಯಮಗಳನ್ನ ಗಾಳಿಗೆ ತೂರಿ ಅದ್ದೂರಿ ಮದುವೆ ಮಾಡಿದ ಬಿಜೆಪಿ ಮುಖಂಡನಿಗೆ ಹುಕ್ಕೇರಿ ಪೊಲೀಸರು ತಕ್ಕ ಶಾಸ್ತಿ ಮಾಡಿದ್ದಾರೆ. ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲಿಸಿದ್ದು ಅದ್ಧೂರಿ ಮದುವೆ ಮಾಡುವ ಮುನ್ನ ಎಚ್ಚರಕೆಯಿಂದ ಇರಿ ಎನ್ನುವ ಸಂದೇಶವನ್ನ …
Read More »ಮಗನೊಂದಿಗೆ ಬೋಟಿನಲ್ಲಿ ತೆರಳಿದ್ದ ನಟಿ- 6 ದಿನಗಳ ನಂತ್ರ ಶವವಾಗಿ ಪತ್ತೆ
ಲಾಸ್ ಏಂಜಲೀಸ್: ಕ್ಯಾಲಿಫೋರ್ನಿಯಾದ ಕಣಿವೆಯಲ್ಲಿ ಮಗನೊಂದಿಗೆ ಬೋಟಿನಲ್ಲಿ ಹೋಗಿದ್ದಾಗ ನಾಪತ್ತೆಯಾಗಿದ್ದ ನಟಿ ಶವವಾಗಿ ಪತ್ತೆಯಾಗಿದ್ದಾರೆ. ಹಾಲಿವುಡ್‍ನ ನಟಿ ನಯಾ ರಿವೇರಾ ಮೃತದೇಹ ಪತ್ತೆಯಾಗಿದೆ. ಕ್ಯಾಲಿಫೋರ್ನಿಯಾದ ಕಣಿವೆಯಲ್ಲಿ ನಾಪತ್ತೆಯಾಗಿದ್ದರು. ಆದರೆ ಆರು ದಿನಗಳ ನಂತರ ಸೋಮವಾರ ರಿವೇರಾ ಶವವಾಗಿ ಪತ್ತೆಯಾಗಿದ್ದಾರೆ ಎಂದು ಯುಎಸ್ ಅಧಿಕಾರಿಗಳು ಹೇಳಿದ್ದಾರೆ. ನಟಿ ನಯಾ ರಿವೇರಾ ಕಳೆದ ವಾರ ತಮ್ಮ ನಾಲ್ಕು ವರ್ಷದ ಮಗನೊಂದಿಗೆ ಬೋಟಿನಲ್ಲಿ ಹೋಗಿದ್ದ ವೇಳೆ ಬೋಟ್ ಮಗುಚಿ ಮುಳುಗಿದ್ದರು. ಸದ್ಯಕ್ಕೆ ರಿವೇರಾ ಅವರ …
Read More »ಬಿಜೆಪಿಯೊಂದಿಗೆ ಗುರುತಿಸಿಕೊಂಡಿದ್ದ ಸಿಪಿಎಂ ಶಾಸಕ ಅನುಮಾನಾಸ್ಪದ ಸಾವು..!
ಕೋಲ್ಕತ್ತಾ, ಜು.13- ಸಿಪಿಎಂನಿಂದ ಶಾಸಕನಾಗಿ ಆರಿಸಿ ಬಂದು ಬಿಜೆಪಿಯೊಂದಿಗೆ ಗುರುತಿಸಿಕೊಂಡಿದ್ದ ಶಾಸಕರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದ ದೀನಜ್‍ಪುರ್‍ನಲ್ಲಿ ನಡೆದಿದೆ. ಹೆಮ್ತಾಬಾದ್‍ನಲ್ಲಿರುವ ತಮ್ಮ ನಿವಾಸದಲ್ಲಿ ಬಿಜೆಪಿ ಮುಖಂಡ ದೇಬೇಂದ್ರನಾಥ್ ರೇ ಅವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ರಾಜಕೀಯ ದುರುದ್ದೇಶಕ್ಕಾಗಿ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿರುವ ಕುಟುಂಬವರ್ಗದವರು ಸಿಬಿಐ ತನಿಖೆಗೆ ಒತ್ತಾಯಿಸಿದ್ದಾರೆ. ಹೆಮ್ತಾಬಾದ್ ವಿಧಾನಸಭಾ ಕ್ಷೇತ್ರದಿಂದ ಸಿಪಿಐ(ಎಂ) ಪಕ್ಷದಿಂದ ಸ್ಪರ್ಧಿಸಿ ವಿಜೇತರಾಗಿದ್ದ …
Read More »ಬೆಡ್ ನೀಡದ ಖಾಸಗಿ ಆಸ್ಪತ್ರೆಗಳ ಪರವಾನಗಿ ರದ್ದುಪಡಿಸುವಂತೆ ಸಿಎಂಗೆ ಡಿಸಿಎಂ ಸಲಹೆ
ಬೆಂಗಳೂರು: ಕೋವಿಡ್-19 ಸೋಂಕಿತರಿಗಾಗಿ ಸರಕಾರದ ವಶಕ್ಕೆ ತಮ್ಮಲ್ಲಿರುವ ಶೇ.50ರಷ್ಟು ಹಾಸಿಗೆಗಳನ್ನು ಇದುವರೆಗೂ ನೀಡದ ಖಾಸಗಿ ಆಸ್ಪತ್ರೆಗಳು, ವೈದ್ಯಕೀಯ ಕಾಲೇಜುಗಳ ಮಾನ್ಯತೆಯನ್ನು ಕೂಡಲೇ ರದ್ದು ಮಾಡಬೇಕು ಎಂದು ನಗರದ ಕೋವಿಡ್ ಕೇರ್ ಕೇಂದ್ರಗಳ ಉಸ್ತುವಾರಿಯೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸಿದರು. ಬೆಂಗಳೂರಿನಲ್ಲಿ ಸೋಮವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜಿಲ್ಲಾಧಿಕಾರಿಗಳ ಜತೆ ಸೋಮವಾರ ನಡೆಸಿದ ವಿಡಿಯೋ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಕಾಲಕ್ಕೆ …
Read More »ಚೀನಾ ವಿರುದ್ಧ ಹಾರ್ಡ್‌ವೇರ್ ಸ್ಟ್ರೈಕ್
ಕ್ಯಾಲಿಫೋರ್ನಿಯಾ: ಗಲ್ವಾನ್ ಘರ್ಷಣೆಯ ಬಳಿಕ ಭಾರತ ಸರ್ಕಾರ ಚೀನಾದ 59 ಅಪ್ಲಿಕೇಶನ್‌ಗಳನ್ನು ನಿಷೇಧಿಸಿ ‘ಡಿಜಿಟಲ್ ಸ್ಟ್ರೈಕ್’ ಮಾಡುವ ಮೂಲಕ ಶಾಕ್ ನೀಡಿತ್ತು. ಈಗ ಕೊರೊನಾ ವಿಚಾರಕ್ಕೆ ಸಂಬಂಧಪಟ್ಟಂತೆ ಮಾಹಿತಿಗಳನ್ನು ಸರಿಯಾಗಿ ಹಂಚಿಕೊಳ್ಳದ್ದಕ್ಕೆ ವಿಶ್ವದ ಕೆಂಗಣ್ಣಿಗೆ ಗುರಿಯಾದ ಹಿನ್ನೆಲೆಯಲ್ಲಿ ಅಮೆರಿಕದ ಕಂಪನಿಗಳು ಚೀನಾ ಮೇಲೆ ‘ಹಾರ್ಡ್‌ವೇರ್ ಸ್ಟ್ರೈಕ್’ ಮಾಡಲು ಆರಂಭಿಸಿವೆ. ಅಮೆರಿಕದ ಟ್ರಂಪ್ ಸರ್ಕಾರ ಮೊದಲಿನಿಂದಲೂ ವ್ಯಾಪಾರ ವಿಚಾರದಲ್ಲಿ ಚೀನಾ ವಿರುದ್ಧ ಕಿಡಿ ಕಾರುತ್ತಲೇ ಬಂದಿದೆ. ಈಗ ಕೊರೊನಾ ವೈರಸ್ ಸೃಷ್ಟಿಯಾದ ಬಳಿಕ …
Read More »ಅಭಿಷೇಕ್ ಬಚ್ಚನ್ ಗೂ ಸೋಂಕು………..
ಮುಂಬೈ – ಅಮಿತಾಬ್ ಬಚ್ಚನ್ ಗೆ ಕೊರೋನಾ ಬಂದಿರುವ ಬೆನ್ನಲ್ಲೇ ಮಗ ಅಭಿಷೇಕ್ ಬಚ್ಚನ್ ಗೂ ಸೋಂಕು ದೃಢಪಟ್ಟಿದೆ. ಅವರೇ ಟ್ವಿಟರ್ ನಲ್ಲಿ ಈ ವಿಷಯ ಬಹಿರಂಗಪಡಿಸಿದ್ದಾರೆ. ಅಮಿತಾಬ್ ಹಾಗೂ ತಾವು ಇಬ್ಬರೂ ಸಣ್ಣ ಅನಾರೋಗ್ಯಕ್ಕಾಗಿ ಆಸ್ಪತ್ರೆಗೆ ಹೋಗಿ ಪರೀಕ್ಷೆ ಮಾಡಿಸಿಕೊಂಡೆವು. ಇಬ್ಬರಿಗೂ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ನಮ್ಮಿಬ್ಬರೊಂದಿಗೆ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳಿ. ಯಾರೂ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಅವರು ತಿಳಿಸಿದ್ದಾರೆ.
Read More »ಬೆಳಗಾವಿ ಜಿಲ್ಲೆಯ ಕಡೆಯಿಂದಲೂ ಕಾಮಗಾರಿ ಆರಂಭಿಸಬೇಕು ಎಂದು ತಿಳಿಸಿದರು.
ಬೆಳಗಾವಿ: ಕುಡಚಿ-ಬಾಗಲಕೋಟೆ ರೈಲು ಮಾರ್ಗ ನಿರ್ಮಾಣಕ್ಕೆ ಸಂಬಂಧಿಸಿದಂತೆ ಅಗತ್ಯ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ರೈಲ್ವೆ ಇಲಾಖೆಗೆ ಜಮೀನು ಹಸ್ತಾಂತರಿಸಿದರೆ ಶೀಘ್ರ ಕಾಮಗಾರಿಯನ್ನು ಪೂರ್ಣಗೊಳಿಸುವುದು ರೈಲ್ವೆ ಇಲಾಖೆಯ ಪ್ರಥಮ ಆದ್ಯತೆಯಾಗಿದೆ ಎಂದು ಸಚಿವ ಸುರೇಶ್ ಅಂಗಡಿ ಹೇಳಿದರು. ಜಿಲ್ಲಾ ಕಚೇರಿಯ ಸಭಾಂಗಣದಲ್ಲಿ ಶನಿವಾರ ನಡೆದ ಬೆಳಗಾವಿ-ಬಾಗಲಕೋಟೆ ಜಿಲ್ಲೆಯ ಜಿಲ್ಲಾಧಿಕಾರಿಗಳು ಮತ್ತು ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಒಮ್ಮೆ ಭೂಸ್ವಾಧೀನ ಪ್ರಕ್ರಿಯೆ ಆರಂಭಗೊಂಡರೆ ಡಿಪಿಆರ್ ಮತ್ತು …
Read More »ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಶನಿವಾರ ಚಾಲನೆ ನೀಡಿದರು.
ಬೆಳಗಾವಿ: ಪಾಚ್ಛಾಪೂರ ಜಿಲ್ಲಾ ಪಂಚಾಯತ ಹಾಗೂ ಹತ್ತರಗಿ ಠಾಣಾ ಜಿಲ್ಲಾ ಪಂಚಾಯತ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿನ ಕಾಮಗಾರಿಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಶನಿವಾರ ಚಾಲನೆ ನೀಡಿದರು. ಅರಳಿಕಟ್ಟಿ, ಹಳೆವಂಟಮೂರಿ, ಬಿರನಹೊಳಿ, ಕಾಟಾಬಳಿ, ಇಸ್ಲಾಂಪೂರ, ಚಿಕ್ಕಲದಿನ್ನಿ, ಶಹಾಬಂದರ, ಗೆಜಪತಿ, ಗುಟಗುದ್ದಿ, ರಾಜಕಟ್ಟಿ ಗ್ರಾಮಗಳಿಗೆ ಭೇಟಿ ನೀಡಿ, ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಗ್ರಾಮಸ್ಥರು ಇದ್ದರು.
Read More »