Breaking News
Home / ಅಂತರಾಷ್ಟ್ರೀಯ (page 256)

ಅಂತರಾಷ್ಟ್ರೀಯ

ಕೆರೆಗೆ ಕಾರು ಉರುಳಿದರೂ ಪವಾಡ ಸದೃಶವಾಗಿ ಯುವತಿ ಪಾರು ; ಜೀವದಾನ ಮಾಡಿದ ಬಾಲಕಿಯ ವೀಡಿಯೋ ವೈರಲ್

ಉಡುಪಿ: ಬಾರ್ಕೂರಿನ ಚೌಳಿಕೆರೆಗೆ ಕಾರು ಉರುಳಿ ಬಿದ್ದು ಸ್ಥಳೀಯ ಉದ್ಯಮಿ ಸಂತೋಷ್ ಶೆಟ್ಟಿ ಎಂಬವರು ಸ್ಥಳದಲ್ಲೇ  ಸಾವನ್ನಪ್ಪಿದ್ದರು. ಅವರ ಜೊತೆಗಿದ್ದ ಸಂಸ್ಥೆಯ ಉದ್ಯೋಗಿ ಶ್ವೇತಾ ಅಪಘಾತದಿಂದ ಬಚಾವಾಗಿದ್ದೇ ಒಂದು ಪವಾಡ. ಆದರೆ, ಈ ಪವಾಡ ನಡೆದದ್ದು ಹೇಗೆ ಅನ್ನೋದು ತಡವಾಗಿ ಬೆಳಕಿಗೆ ಬಂದಿದೆ. ನೀರು ತುಂಬಿದ್ದ ಕೆರೆಗೆ ಕಾರು ಬಿದ್ದಾಗ ಇಬ್ಬರೂ ಮುಳುಗಿದ್ದರು. ಸಂತೋಷ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಯುವತಿಯ ಪ್ರಾಣವಾಯು ಇನ್ನೂ ಉಳಿದಿತ್ತು. ಬಾಲಕಿಯೊಬ್ಬಳ ಸಮಯ ಪ್ರಜ್ಞೆಯಿಂದ ಶ್ವೇತಾ ಬದುಕಿ …

Read More »

ಹುಕ್ಕೇರಿ: ರಾಷ್ಟ್ರಿಯ ಹೆದ್ದಾರಿ ೪ರ ಹೊಂದಿಕೊಂಡಿರುವ ಹೊನ್ನಿಹಳ್ಳಿ ಗ್ರಾಮದಲ್ಲಿ ಬಿಸಿಲಿನ ಬವಣೆಯಲ್ಲಿ ರೈತರು ಐದು ತಿಂಗಳು ಕಾಲ ರೋಷಿ ಹೋಗಿದ್ದರು !

ಹುಕ್ಕೇರಿ: ರಾಷ್ಟ್ರಿಯ ಹೆದ್ದಾರಿ ೪ರ ಹೊಂದಿಕೊಂಡಿರುವ ಹೊನ್ನಿಹಳ್ಳಿ ಗ್ರಾಮದಲ್ಲಿ ಬಿಸಿಲಿನ ಬವಣೆಯಲ್ಲಿ ರೈತರು ಐದು ತಿಂಗಳು ಕಾಲ ರೋಷಿ ಹೋಗಿದ್ದರು ! ಇಗಾ ಮುಂಗಾರು ತುಂತುರು ಮಳೆ ಬಿಟ್ಟು ಬಿಟ್ಟು ಬರುತ್ತಿದ್ದರು ಸಹ ಗ್ರಾಮದ ರೈತ್ ಬಾಂಧವರು ಭೂಮಿ ಸ್ವಚತೆ ಕಾರ್ಯದಲ್ಲಿ ಹಾಗೂ ಬಿತ್ತನೆಯ ಕಾರ್ಯದಲ್ಲಿ ತೊಡಗಿದ್ದು ! ಕೋರೋನಾ ರೋಗದ ಸಂಧರ್ಭದಲ್ಲಿ ಗ್ರಾಮಸ್ಥರು ಮುಖಕ್ಕೆ ಕವಚ ಹಾಗೂ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು! ಮುಂಗಾರಾಗಿ ರೈತರು ತಮ್ಮ ತಮ್ಮ ಹೊಲದಲ್ಲಿ …

Read More »

ನಾನು ಕ್ರಿಕೆಟಿಗ, ರಾಜಕಾರಣಿ ಅಲ್ಲ: ಸಾನಿಯಾ ಮದುವೆ ಬಗ್ಗೆ ಶೋಯೆಬ್ ಮಲಿಕ್ ಮಾತು!

ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರು ಪಾಕಿಸ್ತಾನ ಕ್ರಿಕೆಟಿಗ ಶೋಯೆಬ್ ಮಲಿಕ್ ಅವರನ್ನು ವಿವಾಹವಾದ ಬಳಿಕ ಅಭಿಮಾನಿಗಳು ಸಾಮಾಜಿಕ ತಾಣಗಳಲ್ಲಿ ರಾಷ್ಟ್ರೀಯತೆಯ ಬಗ್ಗೆ ಪ್ರಶ್ನಿಸುತ್ತಲೇ ಬಂದಿದ್ದಾರೆ. ಇದಕ್ಕೆ ಸಾನಿಯ ಕೂಡ ತಕ್ಕ ಉತ್ತರವನ್ನೇ ನೀಡುತ್ತಾ ಇದ್ದಾರೆ. 10 ವರ್ಷಗಳ ಹಿಂದೆ ಇವರಿಬ್ಬರು ವಿವಾಹವಾಗಿದ್ದರೂ ಈಗಲೂ ಎರಡೂ ದೇಶಗಳಲ್ಲಿ ಈ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತದೆ. ಸದ್ಯ ಈ ಕುರಿತು ಮಾತನಾಡಿರುವ ಮಲಿಕ್, ನಾನು ಸಾನಿಯಾ ಮದುವೆಯಾಗಲು ನಿರ್ಧರಿಸಿದಾಗ ಮೊದಲು ಪ್ರೀತಿಯನ್ನು …

Read More »

ಜಗದ್ವಿಖ್ಯಾತಿಯ ಪುರಿ ಜಗನ್ನಾಥ ರಥಯಾತ್ರೆಗೆ ಸುಪ್ರೀಂ ಕೋರ್ಟ್ ಷರತ್ತುಬದ್ದ ಅನುಮತಿ

ನವದೆಹಲಿ: ಜಗದ್ವಿಖ್ಯಾತ ಪುರಿ ಜಗನ್ನಾಥ ರಥಯಾತ್ರೆಯನ್ನು ನಡೆಸಲು ಸುರ್ಪೀಂ ಕೋರ್ಟ್ ಷರತ್ತುಬದ್ದ ಅನುಮತಿ ನೀಡಿದೆ. ರಥಯಾತ್ರೆ”ಸೂಕ್ಷ್ಮವಾಗಿ ನಿರ್ವಹಿಸಲು” ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. ಅಲ್ಲದೆ ದೇವಾಲಯ ರಥಯಾತ್ರೆ ನಿರ್ವಹಣೆ ಜವಾಬ್ದಾರಿಯನ್ನು ಕೇಂದ್ರ ಮತ್ತು ದೇವಾಲಯ ನಿರ್ವಹಣೆ ಮಂಡಳಿಗೆ ವಹಿಸಿದೆ. ಇದರೊಡನೆ ಸುಪ್ರಸಿದ್ದ ಪುರಿ ಜಗನ್ನಾಥ ರಥ ಯಾತ್ರೆಗೆ ಹಾದಿ ಸುಗಮವಾಗಿದೆ. ಆದರೆ ನ್ಯಾಯಾಲಯ ಕೆಲ ಷರತ್ತು ಸಹ ವಿಧಿಸಿದೆ ಭಕ್ತರು ಇಲ್ಲದೆಯೇ ರಥಯಾತ್ರೆ ನಡೆಸಬೇಕು, ರಥಯಾತ್ರೆ ಕೈಂಕರ್ಯದ …

Read More »

ಮೊಬೈಲ್ ಗಾಗಿ ಆತ್ಮಹತ್ಯೆ ಮಾಡಿಕೊಂಡ ಬಾಲಕ…..?

ಮೈಸೂರು: ಪೋಷಕರು ಮೊಬೈಲ್ ಕೊಡಿಸಲಿಲ್ಲ ಎಂಬ ಕಾರಣಕ್ಕೆ ಬಾಲಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಎಚ್.ಡಿ.ಕೋಟೆ ತಾಲ್ಲೂಕಿನ ಬೆಳಗನಹಳ್ಳಿ ಕಾವಲ್ ಗ್ರಾಮದಲ್ಲಿ ನಡೆದಿದೆ. ಆದಿತ್ಯ(15 )ವರ್ಷದ ಆತ್ಮಹತ್ಯೆಗೆ ಶರಣಾದ ಬಾಲಕ. ಪೋಷಕರು ಆತನ ಅಕ್ಕನಿಗೆ ಹೆಚ್ಚಿನ ಬೆಲೆ ಮೊಬೈಲ್ ಕೊಡಿಸಿದ್ರು. ಇದರಿಂದ ಕೋಪಗೊಂಡ ಆದಿತ್ಯ, ನನಗೂ ಹೊಸ ಪೋನ್ ಕೊಡಿಸುವಂತೆ ಹಠ ಮಾಡಿದ್ದನು. ಪೋಷಕರು ಕೊಡಿಸುವುದಕ್ಕೆ ಹಿಂದೇಟು ಹಾಕಿರುವುದರಿಂದ ವಿಷ ಸೇವಿಸಿದ್ದಾನೆ. ಬಾಲಕನನ್ನು ಆಸ್ಪತ್ರೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ …

Read More »

ಪೂರ್ವ ಲಡಾಕ್ ನ ಗಲ್ವಾನ್ ಕಣಿವೆ ಸಂಘರ್ಷದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್,….

ನವದೆಹಲಿ: ಪೂರ್ವ ಲಡಾಕ್ ನ ಗಲ್ವಾನ್ ಕಣಿವೆ ಸಂಘರ್ಷದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್, ಪ್ರಧಾನಿ ನರೇಂದ್ರ ಮೋದಿ ತಾವು ಆಡುವ ಮಾತುಗಳ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು ಮತ್ತು ತನ್ನ ಸ್ಥಾನದ ಸಮರ್ಥನೆ ಮಾಡಿಕೊಳ್ಳಲು ಚೀನಾಕ್ಕೆ ಬಿಡಬಾರದು ಎಂದು ಹೇಳಿದ್ದಾರೆ. ತಪ್ಪು ಮಾಹಿತಿ ಕೊಡುವುದು ರಾಜತಾಂತ್ರಿಕತೆ ಅಥವಾ ನಿರ್ಣಾಯಕ ನಾಯಕತ್ವಕ್ಕೆ ಪರ್ಯಾಯವಲ್ಲ ಎಂದು ಹೇಳಿರುವ ಮಾಜಿ ಪ್ರಧಾನಿ, ಭಾರತದ ಪ್ರಾದೇಶಿಕ ಸಮಗ್ರತೆಯನ್ನು ಕಾಪಾಡಿಕೊಂಡು ಗಡಿಭಾಗದಲ್ಲಿ ಮೊನ್ನೆ …

Read More »

ಟಿವಿ ನೋಡಲು ಮನೆಗೆ ಬಂದ 11 ವರ್ಷದ ಬಾಲಕಿಯನ್ನು ಮನೆಯ ಮಾಲೀಕನ ಮಗ ಹಾಗೂ ಆತನ ಸ್ನೇಹಿತರು ಸೇರಿ ಅತ್ಯಾಚಾರ ಎಸಗಿದ ಘಟನೆ…

ಚೆನ್ನೈ : ಟಿವಿ ನೋಡಲು ಮನೆಗೆ ಬಂದ 11 ವರ್ಷದ ಬಾಲಕಿಯನ್ನು ಮನೆಯ ಮಾಲೀಕನ ಮಗ ಹಾಗೂ ಆತನ ಸ್ನೇಹಿತರು ಸೇರಿ ಅತ್ಯಾಚಾರ ಎಸಗಿದ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ. ಮಾಲೀಕನ ಮಗ 10ನೇ ತರಗತಿಯಲ್ಲಿ ಓದುತ್ತಿದ್ದ ಹಿನ್ನಲೆಯಲ್ಲಿ ಆನ್ ಲೈನ್ ಕ್ಲಾಸ್ ಗಾಗಿ ಮೊಬೈಲ್ ನೀಡಲಾಗಿತ್ತು. ಅದರಲ್ಲಿ ಆತ ತನ್ನ ಇಬ್ಬರು ಸ್ನೇಹಿತರ ಜೊತೆ ಸೇರಿ ಅಶ್ಲೀಲ ವಿಡಿಯೋಗಳನ್ನು ನೋಡುತ್ತಿದ್ದ. ಒಮ್ಮೆ ಬಾಲಕಿ ಯಾರು ಇಲ್ಲದ ವೇಳೆ ಮನೆಗೆ …

Read More »

ಕೋವಿಡ್ ಸೋಂಕು ಮತ್ತು ಬಹು ಅಂಗಾಂಗ ವೈಫಲ್ಯದಿಂದ ಆದೋನಿ ಮೂಲದ ವ್ಯಕ್ತಿಯೊಬ್ಬರು ಸೋಮವಾರ ಬೆಳಗಿನ ಜಾವ ಮೃತಪಟ್ಟರು…

ಬಳ್ಳಾರಿ: ಕೋವಿಡ್ ಸೋಂಕು ಮತ್ತು ಬಹು ಅಂಗಾಂಗ ವೈಫಲ್ಯದಿಂದ ಆದೋನಿ ಮೂಲದ ವ್ಯಕ್ತಿಯೊಬ್ಬರು ಸೋಮವಾರ ಬೆಳಗಿನ ಜಾವ ಮೃತಪಟ್ಟರು. ವಿಮ್ಸ್‌ಗೆ ದಾಖಲಾಗಿದ್ದ ಅವರನ್ನು, ಸೋಂಕು ದೃಢಪಟ್ಟ ಬಳಿಕ ಜೂನ್ 17 ರಂದು‌ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅನಿಯಂತ್ರಿತ ಮಧುಮೇಹ, ಸೋಂಕು ತಗುಲಿದೆ ಎಂಬ ಆಘಾತ ಹಾಗೂ ಅಂಗಾಂಗ ವೈಫ್ಯಲ್ಯಕ್ಕೆ‌ ಒಳಗಾಗಿದ್ದ ಅವರಿಗೆ ವೆಂಟಿಲೇಟರ್ ಸೌಕರ್ಯದೊಂದಿಗೆ‌ ಚಿಕಿತ್ಸೆ ಮುಂದುವರಿಸಲಾಗಿತ್ತು‌. ಆದರೂ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು ಎಂದು …

Read More »

ನವದೆಹಲಿಗೆ ತೆರಳಿದ್ದ ಕೃಷಿ ಇಲಾಖೆಯ ಅಧಿಕಾರಿಗೆ ಕೋವಿಡ್‌-19 ತಗುಲಿರುವುದು ದೃಢಪಟ್ಟಿದೆ.

ಪಾಟ್ನಾ: ಪ್ರಧಾನಿ, ರಾಷ್ಟ್ರಪತಿ, ಉಪ ರಾಷ್ಟ್ರಪತಿ ಹಾಗೂ ಕೇಂದ್ರ ಸಚಿವರುಗಳಿಗೆ ಈ ತಿಂಗಳ ಆರಂಭದಲ್ಲಿ ಲಿಚ್ಚಿ ಹಣ್ಣು ಕೊಡುಗೆ ನೀಡಲು ನವದೆಹಲಿಗೆ ತೆರಳಿದ್ದ ಕೃಷಿ ಇಲಾಖೆಯ ಅಧಿಕಾರಿಗೆ ಕೋವಿಡ್‌-19 ತಗುಲಿರುವುದು ದೃಢಪಟ್ಟಿದೆ. ಬಿಹಾರಕ್ಕೆ ಜೂನ್ 11ರಂದು ಮರಳಿದ್ದ, ಅವರ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಜೂನ್‌ 20ರಂದು ಸೋಂಕು ಇರುವುದು ದೃಢಪಟ್ಟಿದ್ದು, ಇಲ್ಲಿನ ಕೋವಿಡ್‌ ಕೇರ್ ಕೇಂದ್ರಕ್ಕೆ ದಾಖಲು ಮಾಡಲಾಗಿದೆ. ಆದರೆ, ಮುಜಾಫರ್‌ಪುರ್ ಜಿಲ್ಲಾಡಳಿತವು ಸ್ಪಷ್ಟನೆ ನೀಡಿದ್ದು, ಈ ಅಧಿಕಾರಿಗೆ ಹೆಸರಾಂತ …

Read More »

ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ನಾಗಾಲೋಟದಲ್ಲಿ ಏರಿಕೆಯಾಗುತ್ತಿದೆ.

ನವದೆಹಲಿ: ವಿಶ್ವದೆಲ್ಲೆಡೆ ಕೊರೋನಾ ಆರ್ಭಟ ಹೆಚ್ಚಾಗುತ್ತಿರುವ ನಡುವೆಯೇ ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ನಾಗಾಲೋಟದಲ್ಲಿ ಏರಿಕೆಯಾಗುತ್ತಿದೆ. ಕಳೆದ ಕೆಲ ದಿನಗಳಿಂದ ಚಿನ್ನ ಮತ್ತು ಬೆಳ್ಳಿಯ ಬೆಲೆ ನಿರಂತರವಾಗಿ ಹೆಚ್ಚಾಗುತ್ತಲೇ ಇದೆ. ಇಂದು 10 ಗ್ರಾಂ ಚಿನ್ನದ ಬೆಲೆ 47,950 ರೂನಿಂದ 47,960 ರೂಪಾಯಿಗೆ ಏರಿಕೆಯಾಗಿದೆ. ಇದೇ ವೇಳೆ ಬೆಳ್ಳಿ ದರದಲ್ಲಿ ಕೂಡ ಏರಿಕೆ ಕಂಡಿದ್ದು, 1 ಕೆ.ಜಿ ಬೆಳ್ಳಿಗೆ 48,670 ರೂಪಾಯಿ ಆಗಿದೆ. ಈ ಮೂಲಕ ದೇಶಾದ್ಯಂತ ಚಿನ್ನದ …

Read More »