Breaking News

ಅಂತರಾಷ್ಟ್ರೀಯ

ರೋಗಿ ಕೈಯಲ್ಲೇ ಗ್ಲೂಕೋಸ್ ಬಾಟಲ್ ಹಿಡಿಸಿ, ಆಂಬುಲೆನ್ಸ್ ಹತ್ತಿಸಿಕೊಂಡ ಬಿಮ್ಸ್‌ ಬೆಳಗಾವಿ…?

ಬೆಳಗಾವಿ: ಕೊರೊನಾ ಆರ್ಭಟದ ಮಧ್ಯೆ ಸರ್ಕಾರಿ ಆಸ್ಪತ್ರೆಗಳಲ್ಲಿ ಮಹಾ ನಿರ್ಲಕ್ಷ್ಯ ಎದ್ದುಕಾಣುತ್ತಿದೆ. ಇದೀಗ ಬೆಳಗಾವಿಯ ಬಿಮ್ಸ್​ ಆಸ್ಪತ್ರೆಯು ಮತ್ತೊಂದು ಮಹಾ ಎಡವಟ್ಟು ಮಾಡಿಕೊಂಡಿದೆ. ಬಿಮ್ಸ್‌ ಆಸ್ಪತ್ರೆಯ ಸಿಬ್ಬಂದಿಯುಯ ಗಾಯಾಳುವಿನ ಕೈನಲ್ಲೇ ಗ್ಲೂಕೋಸ್ ಬಾಟಲ್ ಹಿಡಿಸಿ ಆಯಂಬುಲೆನ್ಸ್‌ ಹತ್ತಿಸಿಕೊಂಡಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನಿಗೆ ಬಿಮ್ಸ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಸಾಮಾನ್ಯ ವಾರ್ಡ್​ಗೆ ಶಿಫ್ಟ್​ ಮಾಡುವಾಗ ಗಾಯಾಳುವಿನ ಕೈಗೇ ಗ್ಲೂಕೋಸ್ ಬಾಟಲ್ ಕೊಟ್ಟಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ …

Read More »

ಬೆಂಗಳೂರಿನಲ್ಲಿ ಆಸ್ಪತ್ರೆಗಳ ನಿರ್ಲಕ್ಷ್ಯ : ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೇ ವ್ಯಕ್ತಿ ಸಾವು

ಕಾಮಾಕ್ಷಿಪಾಳ್ಯದ 50 ವರ್ಷದ ವ್ಯಕ್ತಿಯೊಬ್ಬರು ತಮ್ಮ ಮನೆಯ ಸಮೀಪದ ಪಾರ್ಕ್ ಗೆ ವಾಕಿಂಗ್ ಗೆ ತೆರಳಿದ್ದರು. ಈ ವೇೆಳೆ, ಏಕಾಏಕಿ ಹೃದಯಾಘಾತವಾಗಿದ್ದು, ಪಾರ್ಕ್ ನಲ್ಲೇ ಕುಸಿದುಬಿದ್ದಿದ್ದರು. ಕೂಡಲೇ ಸ್ಥಳೀಯರು ಅವರನ್ನು ಕಾಡಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ, ಆಸ್ಪತ್ರೆಯಲ್ಲಿ ದಾಖಲಿಸಿಕೊಂಡಿರಲಿಲ್ಲ. ಮತ್ತೊಂದು ಆಸ್ಪತ್ರೆಗೆ ಕರೆದೊಯ್ದರೂ ಅಲ್ಲೂ ದಾಖಲಿಸಿಕೊಂಡಿರಲಿಲ್ಲ. ಹೃದಯಾಘಾತವಾಗಿದ್ದ ಈ ವ್ಯಕ್ತಿಗೆ ಸರಿಯಾಗಿ ಚಿಕಿತ್ಸೆ ಸಿಗದ ಕಾರಣ ಅವರು ಸಾವನ್ನಪ್ಪಿದರು. ಈಗ ಯಾವ ಆಸ್ಪತ್ರೆಯಲ್ಲೂ ಡೆತ್ ಸರ್ಟಿಫಿಕೇಟ್ ಕೂಡ ನೀಡುತ್ತಿಲ್ಲ. ಹೀಗಾಗಿ …

Read More »

ಕೋಲಾರ: ವೈದ್ಯೆ ಸೇರಿ 10 ಮಂದಿಗೆ ಸೋಂಕು

ಕೋಲಾರ: ಜಿಲ್ಲೆಯಲ್ಲಿ ಗುರುವಾರ ವೈದ್ಯೆ ಸೇರಿದಂತೆ 10 ಮಂದಿಗೆ ಕೊರೊನಾ ಸೋಂಕು ಹರಡಿದ್ದು, ಸೋಂಕಿತರ ಸಂಖ್ಯೆ 86ಕ್ಕೆ ಏರಿದೆ. ಕೋಲಾರ ತಾಲ್ಲೂಕು ಒಂದರಲ್ಲೇ 5 ಮಂದಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಜನ ಬೆಚ್ಚಿ ಬಿದ್ದಿದ್ದಾರೆ. ಜಿಲ್ಲಾ ಕೇಂದ್ರದ ಆರ್‌.ಎಲ್‌.ಜಾಲಪ್ಪ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಕೋವಿಡ್‌-19 ವಾರ್ಡ್‌ನ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಇಬ್ಬರು ಆರೋಗ್ಯ ಕಾರ್ಯಕರ್ತರಿಗೆ ಸೋಂಕು ತಗುಲಿದೆ. ಕೊರೊನಾ ಸೋಂಕಿತರ ಸಂಪರ್ಕಕ್ಕೆ ಬಂದ ಕಾರಣಕ್ಕೆ ಈ ಇಬ್ಬರಿಗೆ ಸೋಂಕು ಹರಡಿರುವ …

Read More »

ಮೆಟ್ರೋ ಸಂಚಾರ ಆರಂಭವಾಗೋದು ಡೌಟ್‌! ಕಾಮಗಾರಿ ವಿಳಂಬ:

ಬೆಂಗಳೂರು(ಜು.03): 2020-21ನೇ ಸಾಲಿನಲ್ಲಿ ಸುಮಾರು 445 ಕೋಟಿ ಆದಾಯ ಗುರಿ ಹೊಂದಿದ್ದ ನಮ್ಮ ಮೆಟ್ರೋ ನಿಗಮ ಕೊರೋನಾ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಮಾ.22ರಿಂದ ಮೆಟ್ರೋ ರೈಲು ಸಂಚಾರ ರದ್ದುಪಡಿಸಿದ್ದರಿಂದ ಅಂದಾಜು 110 ಕೋಟಿಗಿಂತ ಅಧಿಕ ನಷ್ಟಕ್ಕೊಳಗಾಗಿದೆ. ಕಳೆದ ಆರ್ಥಿಕ ವರ್ಷದಲ್ಲಿ ಬಿಎಂಆರ್‌ಸಿಎಲ್‌ 430 ಕೋಟಿ ಆದಾಯ ಗಳಿಸಿತ್ತು. ಇದರಿಂದ ಸಹಜವಾಗಿಯೇ 2020-21ನೇ ಸಾಲಿನಲ್ಲಿ ಮೆಟ್ರೋ ನಿಗಮ ಸುಮಾರು 445 ಕೋಟಿ ಆದಾಯದ ಗುರಿಯನ್ನು ಹೊಂದಲಾಗಿತ್ತು.ಯಲಚೇನಹಳ್ಳಿ- ನಾಗಸಂದ್ರ(ಹಸಿರು ಮಾರ್ಗ) ಮತ್ತು ಬೈಯ್ಯಪ್ಪನಹಳ್ಳಿ- ಮೈಸೂರು …

Read More »

ದಾಳಿಗೆ ತೆರಳಿದ್ದ ಸಮಯದಲ್ಲಿ ರೌಡಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಡಿವೈಎಸ್‌ಪಿ ಸೇರಿ 8 ಮಂದಿ ಪೊಲೀಸರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.

ಕಾನ್ಪುರ, ಜುಲೈ 3: ದಾಳಿಗೆ ತೆರಳಿದ್ದ ಸಮಯದಲ್ಲಿ ರೌಡಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಡಿವೈಎಸ್‌ಪಿ ಸೇರಿ 8 ಮಂದಿ ಪೊಲೀಸರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ರೌಡಿ ಶೀಟರ್ ವಿಕಾಸ್ ದುಬೆ ಇದ್ದ ಪ್ರದೇಶದ ಸುಳಿವು ಪಡೆದಿದ್ದ ಪೊಲೀಸರು ದಾಳಿಗೆಂದು ತೆರಳಿದ್ದರು ಆ ಸಂದರ್ಭದಲ್ಲಿ ರೌಡಿಗಳು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಕಾನ್ಪುರದಲ್ಲಿ ಪೊಲೀಸರ ಹತ್ಯೆಗೈದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಘಟನೆಯ …

Read More »

ನಗರದಲ್ಲಿ ದಿನೇ ದಿನೇ ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ 10 ಸಾವಿರ ಹಾಸಿಗೆಗಳನ್ನು ಮೀಸಲಿಡಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ಬೆಂಗಳೂರು(ಜು.03): ನಗರದಲ್ಲಿ ದಿನೇ ದಿನೇ ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ 10 ಸಾವಿರ ಹಾಸಿಗೆಗಳನ್ನು ಮೀಸಲಿಡಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ. ನಗರದಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸೋಂಕು ಲಕ್ಷಣಗಳಿದಿದ್ದರೂ ಪಾಸಿಟಿವ್‌ ವರದಿಗಳು ಬರುತ್ತಿವೆ. ಬೆಂಗಳೂರಲ್ಲಿ ಪ್ರತಿನಿತ್ಯ ಸೋಂಕಿನ ಪ್ರಕರಣಗಳು ಅಧಿಕಗೊಳ್ಳುತ್ತಿವೆ. ಇದರಿಂದ ಹಾಸಿಗೆ ಲಭ್ಯವಾಗುತ್ತಿಲ್ಲ ಎಂದು ಜನರು ಭೀತಿಗೊಳಗಾಗಿದ್ದಾರೆ. ಆದರೆ, ಜನರು ಯಾವುದೇ ರೀತಿಯಲ್ಲಿಯೂ ಭಯಗೊಳ್ಳಬೇಕಾದ ಅಗತ್ಯ ಇಲ್ಲ. ಸರ್ಕಾರ ಎಲ್ಲಾ ರೀತಿಯ …

Read More »

ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ಪ್ರಾಧ್ಯಾಪಕರಿಗೆ ಬಹು ಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಇವರುಗಳ ರಜೆ ಅವಧಿಯನ್ನು ಜುಲೈ 15ರವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.

ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ಪ್ರಾಧ್ಯಾಪಕರಿಗೆ ಬಹು ಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಇವರುಗಳ ರಜೆ ಅವಧಿಯನ್ನು ಜುಲೈ 15ರವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ. ದೇಶದಲ್ಲಿ ಕೊರೊನಾ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಈಗಾಗಲೇ ಶಾಲಾ – ಕಾಲೇಜುಗಳಿಗೆ ರಾಜ್ಯದಲ್ಲಿ ರಜೆ ಘೋಷಿಸಿದ್ದು, ಹೀಗಾಗಿ ಉನ್ನತ ಶಿಕ್ಷಣ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು ಬೋಧಕ ಸಿಬ್ಬಂದಿಗೆ ಜುಲೈ 2ರ ವರೆಗೆ ರಜೆ ಘೋಷಿಸಲಾಗಿತ್ತು. ಇದೀಗ ಮತ್ತೊಂದು ಸುತ್ತೋಲೆಯನ್ನು ಹೊರಡಿಸಲಾಗಿದ್ದು, ಪ್ರಾಧ್ಯಾಪಕರಿಗೆ ರಜೆ ಅವಧಿಯನ್ನು …

Read More »

ದೇಶದಲ್ಲಿ ಕಳೆದ ಕೆಲವು ದಿನಗಳಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಪ್ರತಿದಿನವೂ ಏರಿಕೆಯಾಗುತ್ತಿದ್ದು,

ದೇಶದಲ್ಲಿ ಕಳೆದ ಕೆಲವು ದಿನಗಳಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಪ್ರತಿದಿನವೂ ಏರಿಕೆಯಾಗುತ್ತಿದ್ದು, ಇದರಿಂದ ಶ್ರೀಸಾಮಾನ್ಯರು ಹೈರಾಣಾಗಿ ಹೋಗಿದ್ದಾರೆ. ಈ ಮೊದಲೇ ಕೊರೊನಾ ಲಾಕ್ಡೌನ್ ನಿಂದಾಗಿ ಆರ್ಥಿಕವಾಗಿ ತತ್ತರಿಸಿದ್ದ ಸಾರ್ವಜನಿಕರಿಗೆ ತೈಲ ಬೆಲೆ ಏರಿಕೆ ಮತ್ತೊಂದು ಹೊರೆಯಾಗಿ ಪರಿಣಮಿಸಿದೆ. ಇದರ ಮಧ್ಯೆ ಕಾನ್ಪುರದ ಕಲ್ಯಾಣಪುರದಲ್ಲಿನ ಪೆಟ್ರೋಲ್ ಬಂಕ್ ಒಂದರಲ್ಲಿ ಕೇವಲ 12 ರೂಪಾಯಿಗೆ ಪೆಟ್ರೋಲ್ ಮಾರಾಟ ಮಾಡಲಾಗಿದೆ. ಹೌದು, ತೈಲ ಬೆಲೆ ಏರಿಕೆಯನ್ನು ವಿರೋಧಿಸಲು ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೆಸ್ …

Read More »

ರಾ ಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸ್ಫೋಟಗೊಂಡಿದ್ದು, ಒಂದೇ ದಿನ 2,373 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 92,000ಕ್ಕೆ ಏರಿಕೆಯಾಗಿದೆ ಎಂದು ದೆಹಲಿ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ನವದೆಹಲಿ: ರಾ ಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸ್ಫೋಟಗೊಂಡಿದ್ದು, ಒಂದೇ ದಿನ 2,373 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 92,000ಕ್ಕೆ ಏರಿಕೆಯಾಗಿದೆ ಎಂದು ದೆಹಲಿ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 61 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 2,864ಕ್ಕೆ ಏರಿಕೆಯಾಗಿದೆ. ಈ ನಡುವೆ ನಿನ್ನೆ ಒಂದೇ ದಿನ 3,015 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇದರಂತೆ …

Read More »

ಪರೀಕ್ಷೆ ಬರೆಯುವ ಮೂಲಕ ಭವ್ಯ ಪ್ರಜೆಗಳಾಗಿ ಎಂದು ಚಿಕ್ಕೋಡಿ ಉಪನಿಧೇಶಕರ ಕಛೇರಿಯ ಶಿಕ್ಷಣಾಧಿಕಾರಿ ಅನಿಲಕುಮಾರ ಗಂಗಾಧರ ಹೇಳಿದರು.

ಮೂಡಲಗಿ: ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಿಯಮಾನುಸಾರ ನಡಿಯುತ್ತಿದ್ದು, ವಿದ್ಯಾರ್ಥಿಗಳು ಉತ್ತಮ ರೀತಿ ಪರೀಕ್ಷೆ ಬರೆಯುವ ಮೂಲಕ ಭವ್ಯ ಪ್ರಜೆಗಳಾಗಿ ಎಂದು ಚಿಕ್ಕೋಡಿ ಉಪನಿಧೇಶಕರ ಕಛೇರಿಯ ಶಿಕ್ಷಣಾಧಿಕಾರಿ ಅನಿಲಕುಮಾರ ಗಂಗಾಧರ ಹೇಳಿದರು. ಶಿವಾಪೂರ (ಹ), ಖಾನಟ್ಟಿ, ಪಟಗುಂದಿ, ಮೂಡಲಗಿಯಲ್ಲಿ ಗುರುವಾರ ಜರುಗಿದ ಎಸ್.ಎಸ್.ಎಲ್.ಸಿಯ ಕನ್ನಡ ಭಾಷಾ ಪರೀಕ್ಷೆಯ ಕೇಂದ್ರಗಳಿಗೆ ಭೇಟಿ ನೀಡಿ ಮಾತನಾಡಿದರು. ಮೂಡಲಗಿ ತಾಲೂಕಿನಲ್ಲಿ ಪರೀಕ್ಷೆಗಳಲ್ಲಿ ಸರ್ಕಾರದ ನಿಯಮ ಪಾಲಿಸಲಾಗುತ್ತಿದೆ. ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ದೈಹಿಕ ಅಂತರ, ಸ್ಕ್ರಿನಿಂಗ್, ಮಾಸ್ಕ್, ಸಿಸಿ …

Read More »