ಬೆಳಗಾವಿ: ಮಾನವ ಬಂಧುತ್ವ ವೇದಿಕೆಯ ವತಿಯಿಂದ ನಾಗರ ಪಂಚಮಿಯನ್ನು ಬಸವ ಪಂಚಮಿಯನ್ನಾಗಿ ಆಚರಿಸಲಾಗಿದ್ದು, ಬೆಳಗಾವಿ, ಗೋಕಾಕ, ಘಟಪ್ರಭ ಸೇರಿದಂತೆ ಮತ್ತಿತರ ಸ್ಥಳಗಳಲ್ಲಿಯೂ ಬಸವ ಪಂಚಮಿ ನಿಮಿತ್ತ ಬಡ ಮಕ್ಕಳಿಗೆ, ರೋಗಿಗಳಿಗೆ ಹಾಲು ವಿತರಿಸಲಾಯಿತು. ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಮಂಗಳವಾರ ಬೆಳಗಾವಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ರೋಗಿಗಳಿಗೆ ಹಾಲು ವಿತರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಜಾರಕಿಹೊಳಿ ಅವರು, ನಾಗರ ಪಂಚಮಿಯನ್ನು ಬಸವ ಪಂಚಮಿಯನ್ನಾಗಿ ಕಳೆದ ನಾಲ್ಕು …
Read More »ಬಸವಣ್ಣನವರ ಹೋರಾಟ ಜನರಿಗೆ ತಿಳಿಸುವ ಕಾರ್ಯ ನಿರಂತರ : ಸತೀಶ ಜಾರಕಿಹೊಳಿ
ಘಟಪ್ರಭಾ ಪಟ್ಟಣದ ಕೆಎಚ್ಐ ಆಸ್ಪತ್ರೆಯಲ್ಲಿ ಮಾನವ ಬಂದುತ್ವ ವೇದಿಕೆ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಸಂಯುಕ್ತ ಆಶ್ರಯದಲ್ಲಿ ರೋಗಿಗಳಿಗೆ ಹಾಲು ಹಣ್ಣುಹಂಪಲ ವಿತರಣೆ ಮಾಡುವ ಮೂಲಕ ನಾಗರ ಪಂಚಮಿಯನ್ನು ಬಸವ ಪಂಚಮಿಯಾಗಿ ಆಚರಿಸಿದರು. ಘಟಪ್ರಭಾದ ಗುಬ್ಬಲಗುಡ್ಡ ಮಹಾಸ್ವಾಮೀಗಳಾದ ಶ್ರೀ ಮಲ್ಲಿಕಾರ್ಜುನ ದೇವರು ಇದ್ದರು. ಮಾನವ ಬಂಧುತ್ವ ವೇದಿಕೆ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಇಡೀ ರಾಜ್ಯಾದ್ಯಂತ ಬಸವ ಪಂಚಮಿಯನ್ನು ಆಚರಿಸುತ್ತಿದ್ದೇವೆ. ಮೌಢ್ಯಗಳ ವಿರುದ್ಧ ಬಸವಣ್ಣನವರ ಹೋರಾಟವನ್ನು …
Read More »ನರೇಗಾ ಯೋಜನೆಯಡಿ ತೋಟದ ರಸ್ತೆಗಳನ್ನು ಕೈಗೊಳ್ಳಿ : ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ.
*ಗೋಕಾಕ :* ನಿರಂತರ ಮಳೆಯಿಂದಾಗಿ ಮೂಡಲಗಿ ಹಾಗೂ ಗೋಕಾಕ ತಾಲೂಕುಗಳ ತೋಟದ ರಸ್ತೆಗಳು ಹಾಳಾಗಿದ್ದು, ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಸಂಚಾರಕ್ಕೆ ಅನುಕೂಲವಾಗಲು ನರೇಗಾ ಯೋಜನೆಯಡಿ ತೋಟದ ರಸ್ತೆ ಕಾಮಗಾರಿಗಳನ್ನು ಆರಂಭಿಸುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಗೃಹ ಕಛೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು, ಗೋಕಾಕ-ಮೂಡಲಗಿ ತಾಲೂಕುಗಳ ತೋಟದ …
Read More »ಮೂಡಲಗಿ ವಲಯಕ್ಕೆ ಮತ್ತೆರಡು ಸರಕಾರಿ ಪ್ರೌಢ ಶಾಲೆಗಳ ಮಂಜೂರು : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮಾಹಿತಿ
ಗೋಕಾಕ : ಮೂಡಲಗಿ ವಲಯದ ತಪಸಿ ಮತ್ತು ಗೋಸಬಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಉನ್ನತೀಕರಿಸಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಪಸಿ ಮತ್ತು ಗೋಸಬಾಳ ಗ್ರಾಮಸ್ಥರ ಒತ್ತಾಸೆಯಂತೆ ಎರಡೂ ಹಿರಿಯ ಪ್ರಾಥಮಿಕ ಶಾಲೆಗಳನ್ನು ಉನ್ನತೀಕರಿಸಿ ಪ್ರೌಢ ಶಾಲೆಗಳನ್ನಾಗಿ ಮಂಜೂರು ಮಾಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ತಮ್ಮ ಮನವಿಯ ಮೇರೆಗೆ ಮೂಡಲಗಿ ವಲಯದಲ್ಲಿರುವ ತಪಸಿ …
Read More »ಘಟಪ್ರಭಾ : ಬೈಕ್ ಕಳುವು ಆರೋಪಿ ಅರೆಸ್ಟ್
ಘಟಪ್ರಭಾ: ಬೈಕ್ ಗಳನ್ನು ಕಳುವು ಮಾಡುತ್ತಿದ್ದ ಆರೋಪಿಯೊಬ್ಬನ್ನು ಘಟಪ್ರಭಾ ಪೊಲೀಸರು ಬಂಧಿಸಿದ್ದಾರೆ. ಇಷ್ಟಕ್ಕೂ ಈತನ ಬಳಿಯಿಂದ ಪೊಲೀಸರು ವಶಪಡಿಸಿಕೊಂಡಿದ್ದು ಬರಿ ಒಂದೆರಡು ಬೈಕ್ ಗಳಲ್ಲ. ಬರೊಬ್ಬರಿ 11 ಬೈಕ್ ಗಳು ! ಪೊಲೀಸರು ಈತನನ್ನು ವಿಚಾರಣೆಗೆ ಗುರಿಪಡಿಸಿದ್ದು ಘಟಪ್ರಭಾ ಪೊಲೀಸ್ ಸಿಬ್ಬಂದಿ ಕಾರ್ಯಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
Read More »ಬೆಳಗಾವಿ: ಹೆರಿಗೆ ವೇಳೆ ಮಗು ಸಾವು; ಬಿಮ್ಸ್ ಆಸ್ಪತ್ರೆಯಲ್ಲಿ ಸಂಬಂಧಿಗಳ ಪ್ರತಿಭಟನೆ
ಬೆಳಗಾವಿ: ವೈದ್ಯರ ನಿರ್ಲಕ್ಷ್ಯದಿಂದ ಹೆರಿಗೆ ವೇಳೆ ಮಗು ಮೃತಪಟ್ಟಿರುವುದಾಗಿ ಆರೋಪಿಸಿ ಕುಟುಂಬದವರು ಬಿಮ್ಸ್ ಆಸ್ಪತ್ರೆಯಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. ಹೊನ್ನಿಹಾಳ ಗ್ರಾಮದ ಸುನೀತಾ ಎಂಬ ಗರ್ಭಿಣಿಯನ್ನು ವಾರದ ಹಿಂದೆ ಹೊಟ್ಟೆನೋವಿನ ಹಿನ್ನೆಲೆಯಲ್ಲಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಲ್ಲಿನ ವೈದ್ಯರು ಅವಳತ್ತ ಲಕ್ಷ್ಯವನ್ನೇ ನೀಡಿಲ್ಲ. ಸಿಜೇರಿಯನ್ ಮಾಡಿ ಎಂದು ಅಂಗಲಾಚಿದರೂ ವೈದ್ಯರು ಕೇಳಿಲ್ಲ ಎಂಬುದು ಕುಟುಂಬದವರ ಆರೋಪ. “ಸ್ಕ್ಯಾನಿಂಗ್ ಕೂಡ ಹೊರಗಿನಿಂದ ಮಾಡಿಸಿಕೊಂಡು ಬರಲು …
Read More »ನೇಸರಗಿ: ಅಕ್ರಮ ಸಾಗಾಟವಾಗುತ್ತಿದ್ದ ಪಡಿತರ ಅಕ್ಕಿ ವಶ
ಬೈಲಹೊಂಗಲ: ನೇಸರಗಿಯಲ್ಲಿ ಅಕ್ರಮವಾಗಿ ಗೂಡ್ಸ್ ವಾಹನದಲ್ಲಿ ಸಾಗಿಸಲಾಗುತ್ತಿದ್ದ ಪಡಿತರ ಅಕ್ಕಿಯನ್ನು ಅಧಿಕಾರಿಗಳ ತಂಡ ವಶಪಡಿಸಿಕೊಂಡಿದೆ. ಅಂದಾಜು 76076 ರೂ. ಮೌಲ್ಯದ ಪಡಿತರ ಅಕ್ಕಿಯ 71 ಬ್ಯಾಗ್ ಗಳನ್ನು ಬೊಲೆರೊ ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದ ವೇಳೆ ಖಚಿತ ಮಾಹಿತಿ ಆಧರಿಸಿ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಬೊಲೆರೊ ಪಿಕ್ ಅಪ್ ವಾಹನವನ್ನು ಜಪ್ತಿ ಮಾಡಿ ಕಾನೂನು ಕ್ರಮ ಮುಂದುವರಿಸಲಾಗಿದೆ
Read More »ಜೂನ್ 1ರಿಂದ ಜುಲೈ 18ರವರೆಗೆ ಸುರಿದ ಮಳೆಯಲ್ಲಿ 775 ಮನೆಗಳಿಗೆ ಹಾನಿ
ಬೆಳಗಾವಿ: ಬೆಳಗಾವಿಯಲ್ಲಿ ಭಾರೀ ಮಳೆಯಾಗಿದ್ದು, ಕಳೆದ ಎರಡು ವಾರಗಳಿಂದ ಸುರಿದ ನಿರಂತರ ಮಳೆಗೆ ಜಿಲ್ಲೆಯ ಜನ ತತ್ತರಿಸಿದ್ದಾರೆ. ಜೂನ್ 1ರಿಂದ ಜುಲೈ 18ರವರೆಗೆ ಸುರಿದ ಮಳೆಯಲ್ಲಿ 775 ಮನೆಗಳಿಗೆ ಹಾನಿಯಾಗಿದ್ದು, ಜಿಲ್ಲೆಯಲ್ಲಿ ಮೂರು ಮನೆಗಳು ಸಂಪೂರ್ಣ ನೆಲಸಮವಾಗಿದೆ. ಸವದತ್ತಿಯಲ್ಲಿ 191, ಬೈಲಹೊಂಗಲದಲ್ಲಿ 112, ಕಿತ್ತೂರಿನಲ್ಲಿ 99, ರಾಮದುರ್ಗದಲ್ಲಿ 92, ಚಿಕ್ಕೋಡಿಯಲ್ಲಿ 89, ಬೆಳಗಾವಿಯಲ್ಲಿ 42 ಮನೆಗಳಿಗೆ ಮಳೆಯಿಂದ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಮಾಹಿತಿ ನೀಡಿದ್ದು, ಮಳೆ …
Read More »LOC ಮೆಹಂದಾರ್‌ನಲ್ಲಿ ಕರ್ತವ್ಯದಲ್ಲಿದ್ದ ವೇಳೆ ಅಚಾನಕ್ಕಾಗಿ ಗ್ರೆನೇಡ್ ಕೆಳಕ್ಕೆ ಬಿದ್ದು ಸ್ಫೋಟಗೊಂಡಿದೆ.
ಜಮ್ಮು ಮತ್ತು ಕಾಶ್ಮೀರ(ಜು.18): ಆಕಸ್ಮಿಕವಾಗಿ ಗ್ರೆನೇಡ್ಸ ಸ್ಫೋಟಗೊಂಡ ಕಾರಣ ಗಡಿ ರಕ್ಷಣಾ ಕರ್ತವ್ಯದಲ್ಲಿ ನಿರತರಾಗಿದ್ದ ಭಾರತೀಯ ಸೇನಯ ಕ್ಯಾಪ್ಟನ್ ಹಾಗೂ ಕಿರಿಯ ಕಮಿಷನ್ಡ್ ಆಫೀಸರ್ ನಿಧನರಾಗಿದ್ದಾರೆ. ಜಮ್ಮ ಮತ್ತು ಕಾಶ್ಮೀರದ ಪೂಂಚ್ ವಲಯದಲ್ಲಿ ಈ ಘಟನೆ ನಡೆದಿದೆ. LOC ಮೆಹಂದಾರ್‌ನಲ್ಲಿ ಕರ್ತವ್ಯದಲ್ಲಿದ್ದ ವೇಳೆ ಅಚಾನಕ್ಕಾಗಿ ಗ್ರೆನೇಡ್ ಕೆಳಕ್ಕೆ ಬಿದ್ದು ಸ್ಫೋಟಗೊಂಡಿದೆ. ಪರಿಣಾಮ ಕ್ಯಾಪ್ಟನ್ ಆನಂದ್ ಹಾಗೂ ನೈಬ್ ಸುಬೇದಾರ್ ಭಗವಾನ್ ಸಿಂಗ್ ಮೃತಪಟ್ಟಿದ್ದಾರೆ. ಮೆಹಂದಾರ್ ಸೆಕ್ಟರ್‌ನಲ್ಲಿ ಸೇನಾ ಟ್ರೋಪ್‌ನೊಂದಿಗೆ ಕಾರ್ಯನಿರ್ವಹಿಸುತ್ತಿದ್ದ …
Read More »ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ
ಬಿಬಿಎಂಪಿ ಚುನಾವಣೆ ಹತ್ತಿರವಾಗುತ್ತಿದ್ದಂತೆ ಸಿಎಂ ಬಲು ಚುರುಕಾಗಿದ್ದಾರೆ. ಸಿಲಿಕಾನ್ ಸಿಟಿಯ ಗದ್ದುಗೆ ಏರಲು ಬಿಜೆಪಿ ತಾಲೀಮು ನಡೆಸುತ್ತಿದೆ. ರಾಜಧಾನಿಯಲ್ಲಿ ಸಿಎಂ ಮಿಂಚಿನ ಸಂಚಾರ ನಡೆಸಿದರು. ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಶಂಕು ಸ್ಥಾಪನೆ ನೆರವೇರಿಸಿದರು. ರಾಜ್‌ಕುಮಾರ್ ರಸ್ತೆಯ ಮೈಸೂರು ಸ್ಯಾಂಡಲ್ ಸೋಪ್ ಫ್ಯಾಕ್ಟರಿ ವೃತ್ತದಲ್ಲಿ ಬಸವಧಾಮ ಉದ್ಯಾನವನದಲ್ಲಿ ಸ್ಥಾಪಿಸಲಾಗಿರುವ ಬಸವಣ್ಣ ಪುತ್ಥಳಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಿದರು. ಸಿದ್ಧಗಂಗಾ ಮಠದ …
Read More »