Breaking News

ಅಂತರಾಷ್ಟ್ರೀಯ

ಗಣೇಶವಾಡಿ ಗ್ರಾಮದ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ, ಯುವ ನಾಯಕರಾದ ರಾಹುಲ ಜಾರಕಿಹೊಳಿ, ಸರ್ವೋತ್ತಮ ಜಾರಕಿಹೊಳಿ

  ಘಟಪ್ರಭಾ : ಪ್ರಾಚೀನ ಕಾಲದಿಂದಲೂ ನಾವು ದೈವ ಭಕ್ತರು. ದೇವರನ್ನು ನಂಬಿ ಬದುಕುತ್ತಿರುವವರು. ದೇವರಿಂದಲೇ ಈ ಜಗತ್ತು ನಡೆದಿದೆ. ದೇಶವು ವಿವಿಧತೆಯಲ್ಲಿ ಏಕತೆಯನ್ನು ಸಾರುತ್ತಿರುವುದರಿಂದ ನಮ್ಮದು ಜಾತ್ಯಾತೀತ ರಾಷ್ಟ್ರವೆಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರ ಸಂಜೆ ಸಮೀಪದ ಗಣೇಶವಾಡಿ ಗ್ರಾಮದ ಲಕ್ಷ್ಮೀದೇವಿ ದೇವಸ್ಥಾನದ 25 ನೇ ವರ್ಷದ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಜನರು ದೇವರ ಮೇಲೆ …

Read More »

ಜಾತ್ರೆಗಳು ನಮ್ಮ ಭವ್ಯ ಪರಂಪರೆಯನ್ನು ಬಿಂಬಿಸುತ್ತವೆ- ಶಾಸಕ ಬಾಲಚಂದ್ರ ಜಾರಕಿಹೊಳಿ.

ರಾಜಾಪೂರ- ಗ್ರಾಮ ದೇವತೆ ಜಾತ್ರೆಗೆ ಚಾಲನೆ ನೀಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.     ಮೂಡಲಗಿ- ಜಾತ್ರಾ ಉತ್ಸವಗಳು ನಮ್ಮ ಭಾರತೀಯ ಪರಂಪರೆ, ಇತಿಹಾಸ ವನ್ನು ಬಿಂಬಿಸುತ್ರಿವೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲ್ಲೂಕಿನ ರಾಜಾಪೂರ ಗ್ರಾಮದಲ್ಲಿ ನಡೆಯುತ್ತಿರುವ ಗ್ರಾಮ ದೇವತೆ ಹಾಗೂ ಚೂನಮ್ಮದೇವಿ ಜಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜೊತೆಗೆ ಜಾತ್ರೆಗಳು ನಮ್ಮ ಸಾಂಸ್ಕೃತಿಕ ರಾಯಭಾರಿಯಾಗಿವೆ ಎಂದು ಅವರು ತಿಳಿಸಿದರು. …

Read More »

ಸತ್ತಿಗೇರಿ ತೋಟದಲ್ಲಿ ಕಿಡಿಗೇಡಿಗಳಿಂದ ಮಸೀದಿ ಮೇಲೆ ಧ್ವಜ.. ಉಭಯ ಸಮುದಾಯಗಳ ಶಾಂತಿ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ.

  ಗೋಕಾಕ : ಸಮೀಪದ ಅರಭಾವಿ ಸತ್ತಿಗೇರಿ ತೋಟದ ಮಸೀದಿ ಹತ್ತಿರ ಕೆಲ ಕಿಡಗೇಡಿಗಳು ಕಳೆದ ರಾತ್ರಿ ಕೇಸರಿ ಧ್ವಜ ಕಟ್ಟಿದ್ದರಿಂದ ಕೆಲ ಕಾಲ ಪರಿಸ್ಥಿತಿ ಉದ್ವಿಘ್ನಗೊಂಡಿದ್ದು, ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಮ್ಮ ಸಿಬ್ಬಂದಿಗಳ ಮೂಲಕ ಸತ್ತಿಗೇರಿ ತೋಟದ ಉಭಯ ಸಮುದಾಯಗಳ ಸಭೆ ನಡೆಸುವ ಮೂಲಕ ಯಶಸ್ವಿಯಾಗಿ ಸಂಧಾನ ನಡೆಸಿದ್ದಾರೆ.   ಇಲ್ಲಿಯ ಎನ್‌ಎಸ್‌ಎಫ್ ಅತಿಥಿ ಗೃಹದಲ್ಲಿ ಬುಧವಾರದಂದು ಅಲ್ಲಿನ ನಿವಾಸಿಗಳ ಸಭೆ ನಡೆಸಿ …

Read More »

G.P.L. ಕ್ರಿಕೆಟ್ ಪಂದ್ಯಾವಳಿ ಇಂದು ಸೆಮಿಫೈನಲ್ ನಾಳೆ ಫೈನಲ್,ಗೆಲ್ಲೋರು ಯಾರು..?

ರಾಹುಲ ಜಾರಕಿಹೊಳಿ ಸಧ್ಯಕ್ಕೆ ಎಲ್ಲ ಕಡೆ ಚರ್ಚೆ ಯಲ್ಲಿರುವ ವಿಷಯ ಅವರು ಪ್ರತಿದಿನ ಏನಾದ್ರೂ ಒಂದು ಕೆಲಸ ಮಾಡ್ತಾನೆ ಇರತಾರೆ , ಸಾಮಾಜಿಕ ಕಾರ್ಯ, ಕಬ್ಬಡಿ ಪಂದ್ಯಾವಳಿ, ಈ ತರ ಎಲ್ಲಾದ್ರೂ ಒಂದು ಕಡೆ ಚರ್ಚೆಯಲ್ಲಿ ಇರ್ತಾರೆ. ಇನ್ನು ಗೋಕಾಕ ನಲ್ಲಿ ನಡೆದ ಜಿ ಪೀ ಎಲ್ ಲೆದರ್ ಬಾಲ ಕ್ರಿಕೆಟ್ ಟೂರ್ನಮೆಂಟ್ ಆಯೋಜನೆ ಮಾಡಿತ್ತು.     ಇಂದೂ ಅದರ ಸೆಮಿ ಫೈನಲ್ ನಡೆಯಿತು. ಹಾಗೂ ನಾಳೆ ಫೈನಲ್ …

Read More »

ಅಮಿತ್ ಶಾ ಸಮ್ಮುಖದಲ್ಲಿ ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದ ಬಸವರಾಜ ಹೊರಟ್ಟಿ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti) ಅವರು ಇಂದು (ಮೇ 03) ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ತಾಜ್ ವೆಸ್ಟೆಂಡ್ ಹೋಟೆಲ್​ನಲ್ಲಿ ಸೇರ್ಪಡೆಯಾಗಿ ಮಾತನಾಡಿದ ಬಸವರಾಜ ಹೊರಟ್ಟಿ, ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ. ಬಿಜೆಪಿಗೆ ಬರುವುದು ಒಳ್ಳೆಯದು ಎಂದು ಅಮಿತ್ ಶಾ ಹೇಳಿದರು. ಜೆಡಿಎಸ್ ಬಗ್ಗೆ ನನಗೆ ಒಳ್ಳೆಯ ಅಭಿಪ್ರಾಯವಿದೆ. ಆದರೆ ಮತದಾರರ …

Read More »

ಮೋದಿ ವಿದೇಶದಿಂದ ಹಿಂದಿರುಗಿದ ನಂತರ ಕರ್ನಾಟಕದಲ್ಲಿ ಸಿಎಂ ಬದಲಾವಣೆ, ಸಂಪುಟ ಪುನಾರಚನೆ: ಬಸನಗೌಡ ಯತ್ನಾಳ

ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶ ಪ್ರವಾಸದಿಂದ ಹಿಂದಿರುಗಿದ ಬಳಿಕ ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಮತ್ತು ಸಚಿವ ಸಂಪುಟ ಪುನಾರಚನೆ ಬಗ್ಗೆ ಪಕ್ಷದ ವರಿಷ್ಠರು ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ಇನ್ನು ಎರಡು ದಿನಗಳಲ್ಲಿ ಮೋದಿ ವಿದೇಶ ಪ್ರವಾಸದಿಂದ ಹಿಂದಿರುಗಲಿದ್ದಾರೆ. ಅನಂತರ ಸಿಎಂ ಬದಲಾವಣೆ ಬಗ್ಗೆ ಅಂತಿಮ ನಿರ್ಣಯ ಕೈಗೊಳ್ಳುತ್ತಾರೆ. ಈಗಾಗಲೇ ಪಕ್ಷದ ಹೈಕಮಾಂಡ್ ಅಗತ್ಯ ಮಾಹಿತಿ ಪಡೆದುಕೊಂಡಿದೆ. ದೆಹಲಿಯಲ್ಲಿ …

Read More »

GPL T-20 ಕ್ರಿಕೆಟ್ ಪಂದ್ಯಾವಳಿಗೆ ಯುವ ನಾಯಕರಾದ ರಾಹುಲ್ ಜಾರಕಿಹೊಳಿ ಹಾಗೂ ಸರ್ವೋತ್ತಮ ಜಾರಕಿಹೊಳಿ ಚಾಲನೆ!

    ಗೋಕಾಕ: ಗೋಕಾಕ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯನ್ನು ಯುವ ನಾಯಕ ರಾಹುಲ್ ಜಾರಕಿಹೊಳಿ ಹಾಗೂ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರು ಚಾಲನೆ ನೀಡಿದರು. ಗೋಕಾಕ ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರ ಪ್ರಾಯೋಜಕತ್ವದಲ್ಲಿ ಗೋಕಾಕ ಕ್ರಿಕೆಟ್ ಕ್ಲಬ್ ಆಯೋಜಿಸಿದ್ದ ಗೋಕಾಕ ಪ್ರೀಮಿಯರ್ ಲೀಗ್ ಕ್ರಿಕೆಟ್ ಲೇದರ್ ಬಾಲ್ ಪಂದ್ಯಾವಳಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಹಾಗೂ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ …

Read More »

ಬೆಳಗಾವಿ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆ

ಬೆಳಗಾವಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೇ. 1 ರವರೆಗೆ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಮೇ 1 ರವರರೆಗೂ ರಾಜ್ಯದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಇಂದು ಬೆಳಗಾವಿ,ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು, ವಿಜಯಪುರ, ಕೊಪ್ಪಳ, ಹುಬ್ಬಳ್ಳಿ-ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ಚಿತ್ರದುರ್ಗ ಮತ್ತು ಉಡುಪಿ, ಕೊಡಗಿನಲ್ಲಿ ಮಳೆಯಾಗಲಿದೆ.

Read More »

ಗೋಕಾಕ ಸಿಪಿಐ, ಪಿಎಸ್ಐ ಕಿರುಕುಳಕ್ಕೆ ಬೇಸತ್ತ ಬಬಲಿ ಕುಟುಂಬ…!

  ಬೆಳಗಾವಿ :ಗೋಕಾಕ ಸಿಪಿಐ ಗೋಪಾಲ್ ರಾಥೋಡ್ ಮತ್ತು ಪಿಎಸ್ ಐ ಪೊಲೀಸ್ ಅಧಿಕಾರಿಗಳಿಂದ ಆಗಿರುವ ಅನ್ಯಾಯಕ್ಕೆ ನಮಗೆ ನ್ಯಾಯ ದೊರಕಿಸಿಕೊಡುವಂತೆ ಬಬಲಿ ಕುಟುಂಬಸ್ಥರು ಶನಿವಾರ ಜಿಲ್ಲಾಧಿಕಾರಿ ಆವರಣದಲ್ಲಿ ಮಾಧ್ಯಮದವರ ಮುಂದೆ ಅಳಲು‌ ತೋಡಿಕೊಂಡರು. ಕಳೆದ ಜೂನ್ 2021 ರಂದು ಗೋಕಾಕ ತಾಲೂಕಿನ ಮಹಾಂತೇಶ ನಗರ ಬಡಾವಣೆಯ ಮಾಲದಿನ್ನಿ ಕ್ರಾಸ್ ಬಳಿ ಸಂಜೆ 7ಕ್ಕೆ ಮಂಜು ಶಂಕರ ಮುರುಕಿಬಾವಿ ಎಂಬ ವ್ಯಕ್ತಿಯ ಅನುಮಾನಸ್ಪಾದವಾಗಿ ಕೊಲೆಯಾಗಿದ್ದಾನೆ. ಈತನಿಗೂ ನಮ್ಮ ಮಕ್ಕಳಿಗೆ ಯಾವುದೇ …

Read More »

ಜನ ಹಾಗೂ ಜಾನುವಾರಿಗಳಿಗೆ ಕುಡಿಯುವ ನೀರಿಗಾಗಿ 10 ದಿನಗಳವರೆಗೆ ನೀರು ಬಿಡಲು ಪ್ರಾದೇಶಿಕ ಆಯುಕ್ತರಿಗೆ ಮನವಿ ಮಾಡಿಕೊಂಡಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ

ಹಿಡಕಲ್ ಜಲಾಶಯದಿಂದ ಜಿಆರ್‌ಬಿಸಿ, ಜಿಎಲ್‌ಬಿಸಿ, ಸಿಬಿಸಿ ಕಾಲುವೆಗಳಿಗೆ ನೀರು ಬಿಡಲು ಕೆಎಮ್‌ಎಫ್ ಅಧ್ಯಕ್ಷ ಬಾಲಚ ಮೂಡಲಗಿ: ಹಿಡಕಲ್ ಜಲಾಶಯದಿಂದ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರನ್ನು ತಕ್ಷಣವೇ ಘಟಪ್ರಭಾ ಎಡದಂಡೆ, ಘಟಪ್ರಭಾ ಬಲದಂಡೆ ಮತ್ತು ಸಿಬಿಸಿ ಕಾಲುವೆಗಳಿಗೆ ನೀರನ್ನು ಬಿಡುಗಡೆ ಮಾಡುವಂತೆ ಕೆಎಮ್‌ಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಗುರುವಾರ ಸಂಜೆ ಪ್ರತಿಕಾ ಹೇಳಿಕೆಯನ್ನು ನೀಡಿರುವ ಅವರು, …

Read More »