ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡದ ಗಂಜಿಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ. ಲಲಿತಾ ಕತ್ತಿ(37) ಮತ್ತು ಅನುಪಮಾ ದೊಡ್ಡಮನಿ(20) ಜಲಸಮಾಧಿಯಾದವರು. ಕೆರೆಯಲ್ಲಿ ಬಿದ್ದ ಮಹಿಳೆಯನ್ನು ರಕ್ಷಿಸಲು ಹೋಗಿದ್ದ ಆರು ಜನರನ್ನು ಸ್ಥಳೀಯರು ಮತ್ತು ಮೀನುಗಾರರಿಂದ ಐವರ ರಕ್ಷಣೆಯಾಗಿದೆ. ಒಂದೇ ಕುಟುಂಬದ ವ್ಯಕ್ತಿ, ನಾಲ್ವರು ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ. ಗುಳೇದಗುಡ್ಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಗುಳೇದಗುಡ್ಡ ಪಟ್ಟಣದ ಗಂಜಿಕೆರೆಯಲ್ಲಿ ಬಟ್ಟೆ ತೊಳೆಯಲು ಹೋದ ಲಲಿತಾ ಕತ್ತಿ …
Read More »ಡಿ.ಕೆ ಶಿವಕುಮಾರ್ ಕಲೆಕ್ಷನ್ ಗಿರಾಕಿ: ಕೆದಕುತ್ತಾ ಹೋದರೆ ಇವರದ್ದೂ ಹೊರಬರುತ್ತದೆ- ಇಬ್ಬರು ಕಾಂಗ್ರೆಸ್ ನಾಯಕರ ಸ್ಫೊಟಕ ಮಾತು ವೈರಲ್.
ಬೆಂಗಳೂರು, ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಬಗ್ಗೆ ಇಬ್ಬರು ಕಾಂಗ್ರೆಸ್ ನಾಯಕರ ಸ್ಪೋಟಕ ಮಾತು ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಡಿಕೆ ಶಿವಕುಮಾರ್ ರದ್ದು ದೊಡ್ಡ ಸ್ಕ್ಯಾಮ್, ಕಲೆಕ್ಷನ್,ಗಿರಾಕಿ, ಡಿಕೆಶಿ ಹುಡುಗರ ಬಳಿ 50ರಿಂದ 100 ಕೋಟಿ ರೂಪಾಯಿ ಇದೆ. ಕೆದಕುತ್ತಾ ಹೋದರೆ ಇವರದ್ದೂ ಹೊರಬರುತ್ತದೆ ಎಂದು ಕಾಂಗ್ರೆಸ್ ನ ಇಬ್ಬರು ಪ್ರಮುಖ ನಾಯಕರು ವೇದಿಕೆಯಲ್ಲಿ ಮಾತನಾಡಿಕೊಂಡಿರುವ ಆಡಿಯೋ ವೈರಲ್ ಆಗಿದೆ. ನಿನ್ನೆ ಬೆಂಗಳೂರಿನಲ್ಲಿ ಮಾಜಿ ಸಂಸದ ವಿಎಸ್ ಉಗ್ರಪ್ಪ …
Read More »ರಾಜಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿದ್ದ ಬಾಗಲಕೋಟೆ ಯೋಧ ಸಾವು! ಇಂದು ಹುಟ್ಟೂರಿನಲ್ಲಿ ಅಂತ್ಯಸಂಸ್ಕಾರ
ಬಾಗಲಕೋಟೆ: ರಾಜಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿದ್ದ ಬಾಗಲಕೋಟೆ ಯೋಧ ಸಾವನ್ನಪ್ಪಿದ್ದಾರೆ. ಅನಾರೋಗ್ಯದಿಂದ ಬಿಎಸ್ಎಪ್ ಯೋಧ ಮೃತಪಟ್ಟಿದ್ದಾರೆ. ಹುನಗುಂದ ತಾಲೂಕಿನ ಕೂಡಲಸಂಗಮದ ಮಹಾಂತೇಶ್ ಚೌಧರಿ ಮೃತ ಯೋಧ. ಮಹಾಂತೇಶ್ ಚೌಧರಿ, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಇಂದು (ಅ.13) ಯೋಧನ ಪಾರ್ಥಿವ ಶರೀರ ಗ್ರಾಮಕ್ಕೆ ಆಗಮಿಸಿದೆ. ಸದ್ಯ ಯೋಧ ಮಹಾಂತೇಶ್ ಚೌಧರಿ ರಾಜಸ್ಥಾನದ ಚಾರ್ಲಿ ಬಟಾಲಿಯನ್ 161ರಲ್ಲಿ ಸೇವೆ ಸಲ್ಲಿಸುತ್ತಿದ್ದರು. ಆದರೆ ಅನಾರೋಗ್ಯದಿಂದ ಬಳಲುತ್ತಿದ್ದ ಯೋಧ …
Read More »100 ಲಕ್ಷ ಕೋಟಿ ರೂ. ಮೊತ್ತದ ‘ಪಿಎಂ ಗತಿ ಶಕ್ತಿ ಯೋಜನೆ’ಗೆ ಇಂದು ಚಾಲನೆ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಗತಿ ಶಕ್ತಿ ಯೋಜನೆಯನ್ನು (PM Gati Shakti Yojana) ಜಾರಿಗೆ ತರಲು ಮುಂದಾಗಿದ್ದು, ಇಂದು ಈ ಯೋಜನೆಗೆ ಚಾಲನೆ ನೀಡಲಿದ್ದಾರೆ. ಈ ಯೋಜನೆ ಬರೋಬ್ಬರಿ ₹100 ಲಕ್ಷ ಕೋಟಿ ಮೊತ್ತದ್ದಾಗಿದೆ. ಇನ್ನು ಈ ಯೋಜನೆಯಿಂದ ದೇಶದಲ್ಲಿ ಉದ್ಯೋಗಾವಕಾಶ ಸುಧಾರಿಸಲಿವೆ. ಗತಿ ಶಕ್ತಿ ಯೋಜನೆಯು ದೇಶದ ಮಾಸ್ಟರ್ ಪ್ಲಾನ್ ಮತ್ತು ಮೂಲಸೌಕರ್ಯಕ್ಕೆ ಅಡಿಪಾಯ ಹಾಕುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ. 100 ಲಕ್ಷ ಕೋಟಿ ರೂಪಾಯಿ ಮೊತ್ತದ ಈ …
Read More »BIG ENCOUNTER ಕಣಿವೆ ನಾಡಿನಲ್ಲಿ 5 ಭಯೋತ್ಪಾದಕರು ಉಡೀಸ್
ನವದೆಹಲಿ: ಲಷ್ಕರ್-ಎ-ತೊಯ್ಬಾ -ರೆಸಿಸ್ಟೆನ್ಸ್ ಫ್ರಂಟ್ ನೊಂದಿಗೆ ಸಂಪರ್ಕ ಹೊಂದಿದ ಒಟ್ಟು ಐದು ಭಯೋತ್ಪಾದಕರು ನಿನ್ನೆ ಜಮ್ಮು & ಕಾಶ್ಮೀರದ ಶೋಪಿಯಾನ್‌ನಲ್ಲಿ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಹತ್ಯೆಗೀಡಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ತಲ್ರಾನ್ ಗ್ರಾಮದಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ ಬೆನ್ನಲ್ಲೆ ಉಗ್ರರ ಎನ್‌ಕೌಂಟರ್ ನಡೆದಿದೆ. ಇನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಪೊಲೀಸರು ಮತ್ತು ಸೇನೆಯ ಜಂಟಿ ಶೋಧ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮತ್ತೊಂದು …
Read More »ಉತ್ತರ ಕನ್ನಡ: ಗ್ಯಾಸ್ ಟ್ಯಾಂಕರ್ ಸ್ಫೋಟ; ಸುತ್ತಮುತ್ತ 300-400 ಮೀಟರ್ ವ್ಯಾಪಿಸಿರುವ ಬೆಂಕಿ
ಉತ್ತರ ಕನ್ನಡ: ಇಂದು (ಅಕ್ಟೋಬರ್ 13) ಬೆಳಿಗ್ಗೆ 5.30ರ ಸುಮಾರಿಗೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಇಡಗುಂದಿ ಬಳಿ ಗ್ಯಾಸ್ ಟ್ಯಾಂಕರ್ ಸ್ಫೋಟಗೊಂಡಿದೆ. ಸ್ಪೋಟದಿಂದಾಗಿ ಸುತ್ತಮುತ್ತ 300 ರಿಂದ 400 ಮೀಟರ್ ಬೆಂಕಿ ವ್ಯಾಪಿಸಿದೆ. ಸಾಕಷ್ಟು ದೂರ ವ್ಯಾಪ್ತಿಯಲ್ಲಿ ಹಬ್ಬಿಕೊಂಡಿದ್ದ ಬೆಂಕಿಯನ್ನು ನಂದಿಸಲು ಅಗ್ನಿಶಾಮಕದಳದ ಸಿಬ್ಬಂದಿಗಳು ಹರಸಾಹಸ ಪಡಬೇಕಾಯಿತು. ಸದ್ಯ 300 ರಿಂದ 400 ಮೀಟರ್ ದೂರಗಳಷ್ಟು ಸ್ಪೋಟದಿಂದ ಏನಾಗಿದೆ ಎನ್ನುವ ಮಾಹಿತಿ ದೊರೆಯದೆ ಅಧಿಕಾರಿಗಳು ಕಂಗಾಲಾಗಿದ್ದಾರೆ.
Read More »ಐಪಿಎಲ್‍ನಿಂದ RCB ಔಟ್
ಶಾರ್ಜಾ: ಬ್ಯಾಟಿಂಗ್ ನಲ್ಲಿ ಹೀನಾಯ ಪ್ರದರ್ಶನ ನೀಡಿದ ರಾಯಲ್ ಚಾಲೆಂಜರ್ಸ್ ಎಲಿಮಿನೇಟರ್ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೋತು ಐಪಿಎಲ್‍ನಿಂದ ನಿರ್ಗಮಿಸಿದೆ. ಗೆಲ್ಲಲು 139 ರನ್‍ಗಳ ಸುಲಭದ ಗುರಿಯನ್ನು ಪಡೆದ ಕೋಲ್ಕತ್ತಾ 19.4 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 139 ರನ್ ಹೊಡೆದು 4 ವಿಕೆಟ್‍ಗಳ ಜಯ ಸಾಧಿಸಿತು. ಬುಧವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 2ನೇ ಕ್ವಾಲಿಫೈಯರ್ ಪಂದ್ಯ ನಡೆಯಲಿದ್ದು ವಿಜೇತರಾದವರು ಶುಕ್ರವಾರ ಚೆನ್ನೈ ವಿರುದ್ಧ ಫೈನಲ್ …
Read More »ಮಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್; ಕಿಡ್ನ್ಯಾಪ್ ಮಾಡಿ ಅತ್ಯಾಚಾರವೆಸಗಿದ ಆರೋಪಿಗಳು
ದಕ್ಷಿಣ ಕನ್ನಡ: ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ. ಅಪ್ರಾಪ್ತೆಯನ್ನು ಅಪಹರಿಸಿದ ಐವರು ಆರೋಪಿಗಳು ಈ ದುಷ್ಕೃತ್ಯ ಎಸಗಿದ್ದಾರೆ. ಬಾಲಕಿಗೆ ಮತ್ತುಬರಿಸಿ ಅತ್ಯಾಚರವೆಸಗಿರುವ ಆರೋಪ ಕೇಳಿಬಂದಿದೆ. ಸಂತ್ರಸ್ತ ಅಪ್ರಾಪ್ತೆಯನ್ನು ಮಂಗಳೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಬಂಟ್ವಾಳದಿಂದ ಬಾಲಕಿಯನ್ನು ಅಪಹರಿಸಿ ಅಮ್ಟಾಡಿಯ ರೂಂ ಒಂದಕ್ಕೆ ಕರೆದೊಯ್ದು ಆರೋಪಿಗಳು ಅತ್ಯಾಚಾರವೆಸಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ …
Read More »ಮೀನು ಹಿಡಿಯಲು ತೆರಳಿದ್ದ ಯುವಕನೋರ್ವ ನಾಪತ್ತೆ: ಶೋಧ ಕಾರ್ಯಾಚರಣೆ ತೀವ್ರಗೊಳಿಸಿದ ಅಧಿಕಾರಿಗಳು
ಮೂಡಲಗಿ: ಘಟಪ್ರಭಾ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದ ಯುವಕನೋರ್ವ ಗುರುವಾರ ರಾತ್ರಿ ನಾಪತ್ತೆಯಾಗಿರುವ ಘಟನೆ ಕಮಲದನ್ನಿಯಲ್ಲಿ ನಡೆದಿದೆ. ಉದಯ ಪರಿಶುರಾಮ ಹಾದಿಮನಿ (17) ನಾಪತ್ತೆಯಾದ ಯುವಕ. ಮೂಡಲಗಿ ತಾಲೂಕಿನ ಕಮಲದಿನ್ನಿಯ, ಘಟಪ್ರಭಾ ನದಿಯಲ್ಲಿ ಯುವಕ ನಿನ್ನೆ ಸಂಜೆ ವೇಳೆಗೆ ಮೀನು ಹಿಡಿಯಲು ಹೋಗಿದಾಗ ಆಕಸ್ಮಿಕ ಜಾರಿ ಬಿದಿದ್ದು, ನೀರಿನ ರಭಸಕ್ಕೆ ಉದಯ ಕೊಚ್ಚಿ ಹೋಗಿರುವ ಶಂಕೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಗ ನಾಪತ್ತೆ ಬಳಿಕ ಕುಟುಂಬಸ್ಥರ ಆಕ್ರಂದನ ಮುಗಿಲು …
Read More »ಬಾಗಲಕೋಟೆಯಲ್ಲಿ IT ದಾಳಿ ಅಂತ್ಯ; ತುಮಕೂರಲ್ಲಿ ಮುಂದುವರಿದ ಶೋಧಕಾರ್ಯ
ಬಾಗಲಕೋಟೆ/ ತುಮಕೂರು: ಬೆಂಗಳೂರು ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಸುತ್ತಿರುವ ಐಟಿ ಅಧಿಕಾರಿಗಳು ಇಂದು ಕೂಡ ಹಲವು ಭಾಗಗಳಲ್ಲಿ ದಾಳಿಯನ್ನ ಮುಂದುವರಿಸಿದ್ದಾರೆ. ಅದರಂತೆ ತುಮಕೂರು ಜಿಲ್ಲೆಯಲ್ಲಿ ಇಂದು ಕೂಡ ದಾಳಿ ಕಂಟಿನ್ಯೂ ಆಗಿದೆ. ಕೊರಟಗೆರೆ ತಾಲೂಕಿನ ಸಿಂಗ್ರಿಹಳ್ಳಿ ಬಳಿಯ ಸತ್ಯನಾರಾಯಣ ಕನ್ಸ್ಟ್ರಕ್ಷನ್ ಪ್ರೈ.ಲಿ. ಕಚೇರಿ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಸ್ಎನ್ಸಿ ಕಂಪನಿಯ ಕಡತಗಳ ಪರಿಶೀಲನೆ ಮಾಡುತ್ತಿದ್ದಾರೆ. ಇನ್ನು ಎಸ್ಎನ್ಸಿ ಎತ್ತಿನಹೊಳೆ ಯೋಜನೆಯ ಪೈಪ್ ಲೈನ್ ಕಾಮಗಾರಿಯನ್ನ ನಡೆಸುತ್ತಿದೆ. ಅದರಂತೆ …
Read More »
Laxmi News 24×7