Breaking News

ಅಂತರಾಷ್ಟ್ರೀಯ

ಪ್ರಿಯಾಂಕಾ ಜಾರಕಿಹೊಳಿ ನೇತೃತ್ವದಲ್ಲಿ ನಿರುದ್ಯೋಗ ದಿನ ಆಚರಣೆ; ರಸ್ತೆಯಲ್ಲೇ ಪಕೋಡಾ ತಯಾರಿಸಿ ಆಕ್ರೋಶ

    ಗೋಕಾಕ: ನಗರದಲ್ಲಿ ಇಂದು ಗೋಕಾಕ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಘಟಕದ ವತಿಯಿಂದ ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿಯವರ ನೇತೃತ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನದ ಬದಲು ‘ರಾಷ್ಟ್ರೀಯ ನಿರುದ್ಯೋಗ ದಿನ’ ಆಚರಿಸಿ, ಪ್ರತಿಭಟನೆ ನಡೆಸಲಾಯಿತು.   ಇಲ್ಲಿನ ಬಸವೇಶ್ವರ ಸರ್ಕಲ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ಮಧ್ಯದಲ್ಲಿಯೇ ಪಕೋಡಾ (ಮಿರ್ಚಿ ಬಜಿ) ತಯಾರಿಸಿ, ಪ್ರಧಾನಿ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ …

Read More »

IPS Bhaskar Rao: ಎಡಿಜಿಪಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಅರ್ಜಿಗೆ ಒಪ್ಪಿಗೆ ಸೂಚಿಸಿದ ಪ್ರವೀಣ್ ಸೂದ್

ಬೆಂಗಳೂರು: ಎಡಿಜಿಪಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಅರ್ಜಿಗೆ ಪೊಲೀಸ್​​ ಮಹಾನಿರ್ದೇಶಕ ಪ್ರವೀಣ್ ಸೂದ್​ರಿಂದ ಒಪ್ಪಿಗೆ ಸಿಕ್ಕಿದೆ. ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಅರ್ಜಿಗೆ ಡಿಜಿ, ಐಜಿಪಿ ಒಪ್ಪಿಗೆ ಸೂಚಿಸಿದ್ದಾರೆ. ಕ್ಲಿಯರೆನ್ಸ್ ನೀಡಿ ರಾಜ್ಯ ಸರ್ಕಾರಕ್ಕೆ ಕಡತ ರವಾನೆ ಮಾಡಲಾಗಿದೆ. ಸರ್ಕಾರದ ಗೃಹ ಇಲಾಖೆಗೆ ಕಡತ ರವಾನಿಸಲಾಗಿದೆ. ಇನ್ನು ರಾಜ್ಯ ಸರ್ಕಾರದ ‌ಮಟ್ಟದಲ್ಲಿ ಒಪ್ಪಿಗೆ ಸೂಚಿಸುವುದು ಬಾಕಿ ಇದೆ. ರೈಲ್ವೇ ಪೊಲೀಸ್ ಆಗಿರುವ ಎಡಿಜಿಪಿ ಭಾಸ್ಕರ್ ರಾವ್ ಅವರು ಸೇವೆಯಿಂದ …

Read More »

ಮಾಜಿ-ಹಾಲಿ ಶಾಸಕರ ನಡುವೆ ಜಟಾಪಟಿ; ಗ್ರಾಮದವರಿಗೆ ಕಲುಷಿತ ನೀರು ಕುಡಿಯುವ ಭಾಗ್ಯ

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣ ನಿವಾಸಿಗಳು ಕಳೆದ ನಾಲ್ಕು ತಿಂಗಳಿಂದ ಕಲುಷಿತ ನೀರನ್ನ ಕುಡಿದು ಆಸ್ಪತ್ರೆ ಪಾಲಾಗುತ್ತಿದ್ದಾರಂತೆ. ಇಲ್ಲಿನ ನೀರು ಹೇಗಿದೆ ಅಂದ್ರೆ ನೀರು ಬಗೆ ಬಗೆ ಬಣ್ಣಕ್ಕೆ ತಿರುಗಿದೆ. ಕುಡಿಯುವ ಜಲವೂ ವಾಸನೆ ಬರುತ್ತಿದೆ. ದಾಹ ತಣಿಸುವ ಹನಿಯೆಲ್ಲವೂ, ಒಗರೊಗರು ರುಚಿ ಬರುತ್ತಿದೆ. ಶುದ್ಧ ನೀರಿನಲ್ಲಿ ಯಾವೆಲ್ಲ ಗುಣಗಳು ಇರಬಾರದೋ ಅದೆಲ್ಲವೂ ಈ ನೀರಿನಲ್ಲಿದೆ. ಅಷ್ಟಕ್ಕೂ ಇದಕ್ಕೆಲ್ಲ ಕಾರಣ, ಮಾಜಿ ಶಾಸಕ ಅಶೋಕ ಪಟ್ಟಣ, ಹಾಲಿ ಬಿಜೆಪಿ ಶಾಸಕ …

Read More »

Vaccination: ದೇಶದಲ್ಲಿ ಇಂದು ಬೃಹತ್ ಲಸಿಕೆ ಮೇಳ; ಈಗಾಗಲೇ 1 ಕೋಟಿ ಡೋಸ್ ಲಸಿಕೆ ನೀಡಿ ದಾಖಲೆ

ಇಂದು ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಇಂದು ದೇಶದೆಲ್ಲೆಡೆ ಬೃಹತ್ ಲಸಿಕಾ ಮೇಳವನ್ನು ಆಯೋಜಿಸಲಾಗಿದೆ. ಇಂದು ಈವರೆಗೆ 1 ಕೋಟಿ ಡೋಸ್ ಲಸಿಕೆ ನೀಡಿಕೆ ನೀಡಲಾಗಿದ್ದು, ದಾಖಲೆ ನಿರ್ಮಿಸಲಾಗಿದೆ. ಇಂದು ಒಟ್ಟು 2 ಕೋಟಿ ಡೋಸ್ ಲಸಿಕೆ ನೀಡುವ ಗುರಿಯನ್ನು ಇದ್ದು, ರಾತ್ರಿ ವೇಳೆಗೆ ಎರಡು ಕೋಟಿ ಡೋಸ್ ಲಸಿಕೆ ನೀಡಿಕೆಯ ಗುರಿಯನ್ನು ಹೊಂದಲಾಗಿದೆ. ಕೊರೊನಾ ಲಸಿಕೆ ನೀಡುವುದು ಸಂಜೆ ತನಕ ಮುಂದುವರೆಯಲಿದ್ದು, 2 ಕೋಟಿ ಉದ್ದೇಶಿತ ಗುರಿಯನ್ನು …

Read More »

ಸೆಪ್ಟೆಂಬರ್​ 17ನ್ನು ಸಾಮಾಜಿಕ ನ್ಯಾಯ ದಿನವನ್ನಾಗಿ ಆಚರಿಸಲು ತಮಿಳುನಾಡು ಸಿಎಂ ಸ್ಟಾಲಿನ್​ ನಿರ್ಧಾರ; ಅಣ್ಣಾಮಲೈರಿಂದ ವಿರೋಧ

ಚೆನ್ನೈ: ಇಂದು (ಸೆಪ್ಟೆಂಬರ್ 17) ದ್ರಾವಿಡಿಯನ್​ ಚಳವಳಿ ನಾಯಕನಾದ ಪೆರಿಯಾರ್​ ಇ.ವಿ.ರಾಮಸ್ವಾಮಿ ಅವರ ಹುಟ್ಟುಹಬ್ಬದ ನಿಮಿತ್ತ ಸಾಮಾಜಿಕ ನ್ಯಾಯ ದಿನವನ್ನಾಗಿ ಆಚರಿಸಲು ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ನಿರ್ಧರಿಸಿದ್ದಾರೆ. ಆದರೆ ಈ ನಿರ್ಧಾರ ಇದೀಗ ವಿವಾದಕ್ಕೆ ಕಾರಣವಾಗಿದೆ. ಪೆರಿಯಾರ್​ ಅವರ ಜನ್ಮದಿನವನ್ನು ಸಾಮಾಜಿಕ ನ್ಯಾಯದ ದಿನವನ್ನಾಗಿ ಆಚರಿಸಲು ಒಪ್ಪಿಗೆ ಇದೆ, ಆದರೆ ಡಿಎಂಕೆ ಸರ್ಕಾರ ಉಳಿದ ಸಮಾಜ ಸುಧಾಕರನ್ನು ನಿರ್ಲಕ್ಷಿಸುವುದನ್ನು ಖಂಡಿಸುತ್ತೇವೆ ಎಂದು ಬಿಜೆಪಿ ಹೇಳಿಕೊಂಡಿದೆ. 1879ರ ಸೆಪ್ಟೆಂಬರ್​ 17ರಂದು ಜನಿಸಿದ್ದ …

Read More »

ಮೇಘನಾ ರಾಜ್​ ಎರಡನೇ ಮದುವೆ ಬಗ್ಗೆ ಸುಳ್ಳು ಸುದ್ದಿ; ನಟ ಪ್ರಥಮ್​ ಆಕ್ರೋಶ

ನಟಿ ಮೇಘನಾ ರಾಜ್​ ಸರ್ಜಾ ಅವರ ಬದುಕಿನಲ್ಲಿ ಹಲವು ಏರಿಳಿತಗಳಾದವು. ಪತಿ ಚಿರಂಜೀವಿ ಸರ್ಜಾ ಅಗಲಿಕೆಯಿಂದ ಅವರು ಸಾಕಷ್ಟು ನೋವು ಅನುಭವಿಸಬೇಕಾಯಿತು. ಈಗ ಪುತ್ರ ರಾಯನ್​ ರಾಜ್​ ಸರ್ಜಾನ ಆರೈಕೆಯಲ್ಲಿ ಅವರು ನಗು ಕಂಡುಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರ ಕುಟುಂಬಕ್ಕೆ ನೋವು ನೀಡುವಂತಹ ಹಲವು ಸುಳ್ಳು ಸುದ್ದಿಗಳು ಹರಿದಾಡುತ್ತಿವೆ. ಇತ್ತೀಚೆಗೆ ರಾಯನ್​ ರಾಜ್​ ಸರ್ಜಾ ನಾಮಕರಣದ ದಿನವೇ ಮೇಘನಾ ತಾಯಿ ಪ್ರಮೀಳಾ ಜೋಷಾಯ್​ ಅವರು ಕೆಲವು ಸುದ್ದಿಗಳ ಬಗ್ಗೆ ಅಸಮಾಧಾನ …

Read More »

ಪ್ರಧಾನಿ ಮೋದಿಗೆ ಒಂದೇ ವಾಕ್ಯದಲ್ಲಿ ವಿಶ್​​ ಮಾಡಿದ ರಾಹುಲ್​ ಗಾಂಧಿ; ಇದು ಅವಮಾನ ಎಂದ ನೆಟ್ಟಿಗರು

ಪ್ರಧಾನಿ ನರೇಂದ್ರ ಮೋದಿಯವರ 71ನೇ ಹುಟ್ಟುಹಬ್ಬವಾದ (PM Modi Birthday) ಇಂದು ಬಿಜೆಪಿ ದೇಶಾದ್ಯಂತ ವಿವಿಧ ಸೇವಾ ಕಾರ್ಯಗಳನ್ನು ಹಮ್ಮಿಕೊಂಡಿದ್ದರೆ, ಅತ್ತ ಕಾಂಗ್ರೆಸ್​ ರಾಷ್ಟ್ರೀಯ ನಿರುದ್ಯೋಗ ದಿನವನ್ನಾಗಿ ಆಚರಣೆ ಮಾಡುತ್ತಿದೆ. ಈ ಮಧ್ಯೆ ರಾಹುಲ್​ ಗಾಂಧಿಯವರು ಪ್ರಧಾನಿ ನರೇಂದ್ರ ಮೋದಿಗೆ ಒಂದೇ ಸಾಲಿನಲ್ಲಿ ಹುಟ್ಟುಹಬ್ಬದ ವಿಶ್​ ಮಾಡಿದ್ದಾರೆ. ಇಷ್ಟು ವರ್ಷ ಪ್ರಧಾನಿಗೆ ಜನ್ಮದಿನದ ಶುಭಾಶಯ ಕೋರುವಾಗ ನಾಲ್ಕು ಸಾಲು ಬರೆಯುತ್ತಿದ್ದರು. ವ್ಯಂಗ್ಯ ಮಾಡುತ್ತಿದ್ದರು. ಆದರೆ ಈ ಬಾರಿ ಹೆಚ್ಚೇನೂ ಬರೆಯದೇ …

Read More »

ಮೋದಿಜೀಯವರ ೭೧ನೇಯ ಜನ್ಮದಿನ ಅಂಗವಾಗಿ ವಿವಿಧ ಕಾರ್ಯಕ್ರಮಗಳಿಗೆ ಶಾಸಕ ರಮೇಶ್ ಜಾರಕಿಹೊಳಿ ಚಾಲನೆ

  ಗೋಕಾಕ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ೭೧ನೇಯ ಜನ್ಮದಿನದ ಅಂಗವಾಗಿ ಗೋಕಾಕ ಬಿಜೆಪಿ ವತಿಯಿಂದ ಶಾಸಕ ರಮೇಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ಶಾಸಕರ ಗೃಹ ಕಚೇರಿಯಲ್ಲಿ ಮೋದಿಯವರ ಜನ್ಮದಿನದ ಆಚರಣೆ ನಡೆಸಿ ಸಿಹಿ ಹಂಚಿ ಸರಳವಾಗಿ ಆಚರಿಸಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ ಹಾಗೂ ನಗರದಲ್ಲಿರುವ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಗೂ ಶಿವಾ ಫೌಂಡೇಶನ್‌ನ ಮಕ್ಕಳಿಗೆ ಹಣ್ಣು ಹಂಪಲು ವಿತರಣೆ ಮಾಡಿದರು.   …

Read More »

ಇಲ್ಲಿನ ಎಲ್ಲ ವಿದ್ಯಾರ್ಥಿಗಳು 20 ಕಿ.ಮೀ. ದೂರ ಪ್ರಯಾಣ ಮಾಡಿದರಷ್ಟೇ ಶಾಲಾ ಕಾಲೇಜು ಗಳಿಗೆ ತಲುಪಲು ಸಾಧ್ಯ.

    ಗೋಕಾಕ: ಸಾರಿಗೆ ಸಂಸ್ಥೆ ಬಸ್‌ ಸಕಾಲಕ್ಕೆ ಆಗಮಿಸದೇ ಇರುವುದರಿಂದ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳು ಶಾಲಾ-ಕಾಲೇಜುಗೆ ಸಮಯಕ್ಕೆ ಸರಿಯಾಗಿ ತಲುಪಲಾಗದೆ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಕೋವಿಡ್‌ ಮಾರ್ಗಸೂಚಿ ತೆರವಾದ ನಂತರ ಗ್ರಾಮೀಣ ಪ್ರದೇಶದಲ್ಲಿ ಬಸ್‌ಗಳ ಸೇವೆ ಅಪರೂಪವಾಗಿದೆ. ಮುಖ್ಯ ರಸ್ತೆಗಳು ಸೇರಿದಂತೆ ಗ್ರಾಮೀಣ ಭಾಗದ ಎಲ್ಲ ಕಡೆಯಲ್ಲೂ ಪೂರ್ಣ ಪ್ರಮಾಣದಲ್ಲಿ ಬಸ್‌ ಸೇವೆ ಆರಂಭಗೊಂಡಿಲ್ಲ.   ಇದರಿಂದ ವಿದ್ಯಾರ್ಥಿಗಳು ಬಸ್‌ಗಳಿಗಾಗಿ ರಸ್ತೆ ಬದಿಯಲ್ಲಿ ಕಾದು ನಿಲ್ಲುವ ಸ್ಥಿತಿ ನಿರ್ಮಾಣವಾಗಿದೆ. ಗೋಕಾಕ …

Read More »

ಕ್ಷೀರಭಾಗ್ಯ ಯೋಜನೆ ಹಾಲಿನಪುಡಿ ಅಕ್ರಮ ಸಾಗಾಟ, ಗ್ರಾಮಸ್ಥರಿಂದ ಓರ್ವನ ಸೆರೆ..

    ಆಂಕರ್: ಅಪೌಷ್ಟಿಕತೆ ಹೋಗಲಾಡಿಸಲು ಸರ್ಕಾರದ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ, ಅಂಗನವಾಡಿ ಹಾಗೂ ಶಾಲೆಗಳಲ್ಲಿ ಕ್ಷೀರಭಾಗ್ಯ ಯೋಜನೆ ಅಡಿಯಲ್ಲಿ ಹಾಲಿನ ಪುಡಿ ಸರಬರಾಜು ಮಾಡಲಾಗುತ್ತದೆ. ಆದರೆ ಚಿಕ್ಕೋಡಿ ಉಪವಿಭಾಗ ಅಥಣಿ ತಾಲೂಕಿನ ಖಿಳೆಗಾಂವ್ ಗ್ರಾಮದಲ್ಲಿ ಅಕ್ರಮವಾಗಿ ಹಾಲಿನ ಪುಡಿ ಸಾಗಾಟ ಮಾಡುತ್ತಿರುವ ಓರ್ವನನ್ನು ಗ್ರಾಮಸ್ಥರು ಸೆರೆಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದೆ.   ಅಕ್ರಮವಾಗಿ ಕ್ಷೀರಭಾಗ್ಯ ಯೋಜನೆಯ ಹಾಲಿನ ಪುಡಿಯನ್ನು ಬೈಕ್ ಮೇಲೆ ಸಾಗಾಟ ಮಾಡುತ್ತಿರುವ ಅಥಣಿ …

Read More »