Breaking News

ಅಂತರಾಷ್ಟ್ರೀಯ

ಇದು ನಿಸ್ವಾರ್ಥದ ನಿರ್ಧಾರ! ಕೊಹ್ಲಿಯನ್ನು ಹೊಗಳಿದ ಇಂಗ್ಲೆಂಡ್​ನ ಮಾಜಿ ನಾಯಕ ಮೈಕಲ್ ವಾನ್

ವಿರಾಟ್ ಕೊಹ್ಲಿ ಗುರುವಾರ ಭಾರತದ ಟಿ 20 ತಂಡದ ನಾಯಕತ್ವದಿಂದ ಕೆಳಗಿಳಿಯುವುದಾಗಿ ಘೋಷಿಸಿದರು. ಅಕ್ಟೋಬರ್ 17 ರಿಂದ ನವೆಂಬರ್ 14 ರವರೆಗೆ ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಒಮಾನ್‌ನಲ್ಲಿ ನಡೆಯಲಿರುವ ಟಿ 20 ವಿಶ್ವಕಪ್ 2021 ರ ನಂತರ ಟೀಮ್ ಇಂಡಿಯಾದ ನಾಯಕನ ಸ್ಥಾನವನ್ನು ತ್ಯಜಿಸುವುದಾಗಿ ಅವರು ಹೇಳಿದರು. ಈ ನಿರ್ಧಾರ ಬಂದ ತಕ್ಷಣ ವಿರಾಟ್ ಕೊಹ್ಲಿಯ ಬಗ್ಗೆ ಚರ್ಚೆ ಎಲ್ಲೆಡೆ ಆರಂಭವಾಯಿತು. ಕೊಹ್ಲಿ ತನ್ನ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ …

Read More »

ಕರ್ನಾಟಕದಲ್ಲಿ ಹೊಸದಾಗಿ 1,003 ಜನರಿಗೆ ಕೊರೊನಾ ದೃಢ; 18 ಮಂದಿ ಸಾವು

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಸೆಪ್ಟೆಂಬರ್ 17) ಹೊಸದಾಗಿ 1,003 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,66,194 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,12,633 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 18 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,573 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 15,960 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ …

Read More »

ಜಿಎಸ್​ಟಿ ಮಂಡಳಿ ಸಭೆ: ಕೈಗೊಂಡ ಪ್ರಮುಖ ನಿರ್ಣಯಗಳು ಇಲ್ಲಿವೆ, ಓದಿ

    ದೆಹಲಿ: ಉತ್ತರ ಪ್ರದೇಶದ ಲಖನೌನಲ್ಲಿ 45ನೇ ಜಿಎಸ್‌ಟಿ ಮಂಡಳಿಯ ಸಭೆಯಲ್ಲಿ ಕೊರೊನಾ ಲಸಿಕೆ ಸಂಬಂಧಿತ ಔಷಧಗಳ ಮೇಲೆ ಜಿಎಸ್​ಟಿ ವಿನಾಯಿತಿಯನ್ನು ಡಿಸೆಂಬರ್ 31ರವರೆಗೆ  ಮುಂದುವರಿಸಲು ನಿರ್ಧರಿಸಲಾಯಿತು. ಕಬ್ಬಿಣ, ಮ್ಯಾಂಗನೀಸ್, ತಾಮ್ರ, ನಿಕಲ್, ಕೋಬಾಲ್ಟ್, ಅಲ್ಯೂಮಿನಿಯಂ, ಸೀಸ, ಸತು, ತವರ, ಕ್ರೋಮಿಯಂ – ಅದಿರು ಮೇಲಿನ ಜಿಎಸ್‌ಟಿ ದರವನ್ನು ಶೇಕಡಾ 5 ರಿಂದ ಶೇಕೆಡಾ 18 ಕ್ಕೆ ಹೆಚ್ಚಿಸಲು ಜಿಎಎಸ್​ಟಿ ಕೌನ್ಸಿಲ್ ಅನುಮೋದನೆ ನೀಡಿತು. ತೆಂಗಿನ ಎಣ್ಣೆ ಮೇಲೆ …

Read More »

ಪ್ರಿಯಾಂಕಾ ಜಾರಕಿಹೊಳಿ ನೇತೃತ್ವದಲ್ಲಿ ನಿರುದ್ಯೋಗ ದಿನ ಆಚರಣೆ; ರಸ್ತೆಯಲ್ಲೇ ಪಕೋಡಾ ತಯಾರಿಸಿ ಆಕ್ರೋಶ

    ಗೋಕಾಕ: ನಗರದಲ್ಲಿ ಇಂದು ಗೋಕಾಕ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಘಟಕದ ವತಿಯಿಂದ ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿಯವರ ನೇತೃತ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನದ ಬದಲು ‘ರಾಷ್ಟ್ರೀಯ ನಿರುದ್ಯೋಗ ದಿನ’ ಆಚರಿಸಿ, ಪ್ರತಿಭಟನೆ ನಡೆಸಲಾಯಿತು.   ಇಲ್ಲಿನ ಬಸವೇಶ್ವರ ಸರ್ಕಲ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ಮಧ್ಯದಲ್ಲಿಯೇ ಪಕೋಡಾ (ಮಿರ್ಚಿ ಬಜಿ) ತಯಾರಿಸಿ, ಪ್ರಧಾನಿ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ …

Read More »

IPS Bhaskar Rao: ಎಡಿಜಿಪಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಅರ್ಜಿಗೆ ಒಪ್ಪಿಗೆ ಸೂಚಿಸಿದ ಪ್ರವೀಣ್ ಸೂದ್

ಬೆಂಗಳೂರು: ಎಡಿಜಿಪಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಅರ್ಜಿಗೆ ಪೊಲೀಸ್​​ ಮಹಾನಿರ್ದೇಶಕ ಪ್ರವೀಣ್ ಸೂದ್​ರಿಂದ ಒಪ್ಪಿಗೆ ಸಿಕ್ಕಿದೆ. ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಅರ್ಜಿಗೆ ಡಿಜಿ, ಐಜಿಪಿ ಒಪ್ಪಿಗೆ ಸೂಚಿಸಿದ್ದಾರೆ. ಕ್ಲಿಯರೆನ್ಸ್ ನೀಡಿ ರಾಜ್ಯ ಸರ್ಕಾರಕ್ಕೆ ಕಡತ ರವಾನೆ ಮಾಡಲಾಗಿದೆ. ಸರ್ಕಾರದ ಗೃಹ ಇಲಾಖೆಗೆ ಕಡತ ರವಾನಿಸಲಾಗಿದೆ. ಇನ್ನು ರಾಜ್ಯ ಸರ್ಕಾರದ ‌ಮಟ್ಟದಲ್ಲಿ ಒಪ್ಪಿಗೆ ಸೂಚಿಸುವುದು ಬಾಕಿ ಇದೆ. ರೈಲ್ವೇ ಪೊಲೀಸ್ ಆಗಿರುವ ಎಡಿಜಿಪಿ ಭಾಸ್ಕರ್ ರಾವ್ ಅವರು ಸೇವೆಯಿಂದ …

Read More »

ಮಾಜಿ-ಹಾಲಿ ಶಾಸಕರ ನಡುವೆ ಜಟಾಪಟಿ; ಗ್ರಾಮದವರಿಗೆ ಕಲುಷಿತ ನೀರು ಕುಡಿಯುವ ಭಾಗ್ಯ

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣ ನಿವಾಸಿಗಳು ಕಳೆದ ನಾಲ್ಕು ತಿಂಗಳಿಂದ ಕಲುಷಿತ ನೀರನ್ನ ಕುಡಿದು ಆಸ್ಪತ್ರೆ ಪಾಲಾಗುತ್ತಿದ್ದಾರಂತೆ. ಇಲ್ಲಿನ ನೀರು ಹೇಗಿದೆ ಅಂದ್ರೆ ನೀರು ಬಗೆ ಬಗೆ ಬಣ್ಣಕ್ಕೆ ತಿರುಗಿದೆ. ಕುಡಿಯುವ ಜಲವೂ ವಾಸನೆ ಬರುತ್ತಿದೆ. ದಾಹ ತಣಿಸುವ ಹನಿಯೆಲ್ಲವೂ, ಒಗರೊಗರು ರುಚಿ ಬರುತ್ತಿದೆ. ಶುದ್ಧ ನೀರಿನಲ್ಲಿ ಯಾವೆಲ್ಲ ಗುಣಗಳು ಇರಬಾರದೋ ಅದೆಲ್ಲವೂ ಈ ನೀರಿನಲ್ಲಿದೆ. ಅಷ್ಟಕ್ಕೂ ಇದಕ್ಕೆಲ್ಲ ಕಾರಣ, ಮಾಜಿ ಶಾಸಕ ಅಶೋಕ ಪಟ್ಟಣ, ಹಾಲಿ ಬಿಜೆಪಿ ಶಾಸಕ …

Read More »

Vaccination: ದೇಶದಲ್ಲಿ ಇಂದು ಬೃಹತ್ ಲಸಿಕೆ ಮೇಳ; ಈಗಾಗಲೇ 1 ಕೋಟಿ ಡೋಸ್ ಲಸಿಕೆ ನೀಡಿ ದಾಖಲೆ

ಇಂದು ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಇಂದು ದೇಶದೆಲ್ಲೆಡೆ ಬೃಹತ್ ಲಸಿಕಾ ಮೇಳವನ್ನು ಆಯೋಜಿಸಲಾಗಿದೆ. ಇಂದು ಈವರೆಗೆ 1 ಕೋಟಿ ಡೋಸ್ ಲಸಿಕೆ ನೀಡಿಕೆ ನೀಡಲಾಗಿದ್ದು, ದಾಖಲೆ ನಿರ್ಮಿಸಲಾಗಿದೆ. ಇಂದು ಒಟ್ಟು 2 ಕೋಟಿ ಡೋಸ್ ಲಸಿಕೆ ನೀಡುವ ಗುರಿಯನ್ನು ಇದ್ದು, ರಾತ್ರಿ ವೇಳೆಗೆ ಎರಡು ಕೋಟಿ ಡೋಸ್ ಲಸಿಕೆ ನೀಡಿಕೆಯ ಗುರಿಯನ್ನು ಹೊಂದಲಾಗಿದೆ. ಕೊರೊನಾ ಲಸಿಕೆ ನೀಡುವುದು ಸಂಜೆ ತನಕ ಮುಂದುವರೆಯಲಿದ್ದು, 2 ಕೋಟಿ ಉದ್ದೇಶಿತ ಗುರಿಯನ್ನು …

Read More »

ಸೆಪ್ಟೆಂಬರ್​ 17ನ್ನು ಸಾಮಾಜಿಕ ನ್ಯಾಯ ದಿನವನ್ನಾಗಿ ಆಚರಿಸಲು ತಮಿಳುನಾಡು ಸಿಎಂ ಸ್ಟಾಲಿನ್​ ನಿರ್ಧಾರ; ಅಣ್ಣಾಮಲೈರಿಂದ ವಿರೋಧ

ಚೆನ್ನೈ: ಇಂದು (ಸೆಪ್ಟೆಂಬರ್ 17) ದ್ರಾವಿಡಿಯನ್​ ಚಳವಳಿ ನಾಯಕನಾದ ಪೆರಿಯಾರ್​ ಇ.ವಿ.ರಾಮಸ್ವಾಮಿ ಅವರ ಹುಟ್ಟುಹಬ್ಬದ ನಿಮಿತ್ತ ಸಾಮಾಜಿಕ ನ್ಯಾಯ ದಿನವನ್ನಾಗಿ ಆಚರಿಸಲು ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ನಿರ್ಧರಿಸಿದ್ದಾರೆ. ಆದರೆ ಈ ನಿರ್ಧಾರ ಇದೀಗ ವಿವಾದಕ್ಕೆ ಕಾರಣವಾಗಿದೆ. ಪೆರಿಯಾರ್​ ಅವರ ಜನ್ಮದಿನವನ್ನು ಸಾಮಾಜಿಕ ನ್ಯಾಯದ ದಿನವನ್ನಾಗಿ ಆಚರಿಸಲು ಒಪ್ಪಿಗೆ ಇದೆ, ಆದರೆ ಡಿಎಂಕೆ ಸರ್ಕಾರ ಉಳಿದ ಸಮಾಜ ಸುಧಾಕರನ್ನು ನಿರ್ಲಕ್ಷಿಸುವುದನ್ನು ಖಂಡಿಸುತ್ತೇವೆ ಎಂದು ಬಿಜೆಪಿ ಹೇಳಿಕೊಂಡಿದೆ. 1879ರ ಸೆಪ್ಟೆಂಬರ್​ 17ರಂದು ಜನಿಸಿದ್ದ …

Read More »

ಮೇಘನಾ ರಾಜ್​ ಎರಡನೇ ಮದುವೆ ಬಗ್ಗೆ ಸುಳ್ಳು ಸುದ್ದಿ; ನಟ ಪ್ರಥಮ್​ ಆಕ್ರೋಶ

ನಟಿ ಮೇಘನಾ ರಾಜ್​ ಸರ್ಜಾ ಅವರ ಬದುಕಿನಲ್ಲಿ ಹಲವು ಏರಿಳಿತಗಳಾದವು. ಪತಿ ಚಿರಂಜೀವಿ ಸರ್ಜಾ ಅಗಲಿಕೆಯಿಂದ ಅವರು ಸಾಕಷ್ಟು ನೋವು ಅನುಭವಿಸಬೇಕಾಯಿತು. ಈಗ ಪುತ್ರ ರಾಯನ್​ ರಾಜ್​ ಸರ್ಜಾನ ಆರೈಕೆಯಲ್ಲಿ ಅವರು ನಗು ಕಂಡುಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರ ಕುಟುಂಬಕ್ಕೆ ನೋವು ನೀಡುವಂತಹ ಹಲವು ಸುಳ್ಳು ಸುದ್ದಿಗಳು ಹರಿದಾಡುತ್ತಿವೆ. ಇತ್ತೀಚೆಗೆ ರಾಯನ್​ ರಾಜ್​ ಸರ್ಜಾ ನಾಮಕರಣದ ದಿನವೇ ಮೇಘನಾ ತಾಯಿ ಪ್ರಮೀಳಾ ಜೋಷಾಯ್​ ಅವರು ಕೆಲವು ಸುದ್ದಿಗಳ ಬಗ್ಗೆ ಅಸಮಾಧಾನ …

Read More »

ಪ್ರಧಾನಿ ಮೋದಿಗೆ ಒಂದೇ ವಾಕ್ಯದಲ್ಲಿ ವಿಶ್​​ ಮಾಡಿದ ರಾಹುಲ್​ ಗಾಂಧಿ; ಇದು ಅವಮಾನ ಎಂದ ನೆಟ್ಟಿಗರು

ಪ್ರಧಾನಿ ನರೇಂದ್ರ ಮೋದಿಯವರ 71ನೇ ಹುಟ್ಟುಹಬ್ಬವಾದ (PM Modi Birthday) ಇಂದು ಬಿಜೆಪಿ ದೇಶಾದ್ಯಂತ ವಿವಿಧ ಸೇವಾ ಕಾರ್ಯಗಳನ್ನು ಹಮ್ಮಿಕೊಂಡಿದ್ದರೆ, ಅತ್ತ ಕಾಂಗ್ರೆಸ್​ ರಾಷ್ಟ್ರೀಯ ನಿರುದ್ಯೋಗ ದಿನವನ್ನಾಗಿ ಆಚರಣೆ ಮಾಡುತ್ತಿದೆ. ಈ ಮಧ್ಯೆ ರಾಹುಲ್​ ಗಾಂಧಿಯವರು ಪ್ರಧಾನಿ ನರೇಂದ್ರ ಮೋದಿಗೆ ಒಂದೇ ಸಾಲಿನಲ್ಲಿ ಹುಟ್ಟುಹಬ್ಬದ ವಿಶ್​ ಮಾಡಿದ್ದಾರೆ. ಇಷ್ಟು ವರ್ಷ ಪ್ರಧಾನಿಗೆ ಜನ್ಮದಿನದ ಶುಭಾಶಯ ಕೋರುವಾಗ ನಾಲ್ಕು ಸಾಲು ಬರೆಯುತ್ತಿದ್ದರು. ವ್ಯಂಗ್ಯ ಮಾಡುತ್ತಿದ್ದರು. ಆದರೆ ಈ ಬಾರಿ ಹೆಚ್ಚೇನೂ ಬರೆಯದೇ …

Read More »