ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರೋವರೆಗೂ ಹೋರಾಡೋಣ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿವಾದಾತ್ಮಕ ಟ್ವೀಟ್ ಮಾಡುವ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅಲ್ಲದೇ ಉದ್ಧವ್ ಠಾಕ್ರೆ ಹೇಳಿಕೆ ಖಂಡಿಸಿ ರಾಜ್ಯಾಧ್ಯಂತ ವಿವಿಧ ಕನ್ನಡ ಸಂಘಟನೆಗಳು ಪ್ರತಿಭಟನೆಗೆ ಮುಂದಾಗಿವೆ. ಅದೇ ರೀತಿ ಬೆಳಗಾವಿಯಲ್ಲಿಯೂ ಕನ್ನಡಪರ ಸಂಘಟನೆಗಳು ಉದ್ಧವ್ ಠಾಕ್ರೆ ಭಾವಚಿತ್ರಕ್ಕೆ ಚಪ್ಪಲಿ ಸೇವೆ ಮಾಡಿ, ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿವೆ. ಗಡಿ ವಿಚಾರದಲ್ಲಿ ಉರಿಯುವ ಬೆಂಕಿಗೆ ತುಪ್ಪ ಸುರಿಯುವ ಕೆಲಸವನ್ನು ಮಹಾರಾಷ್ಟ್ರ …
Read More »ಗಡಿ ವಿಚಾರದಲ್ಲಿ ಮಹಾ ಸಿಎಂ ಉದ್ಧವ್ ಉದ್ಧಟತನ ಪ್ರದರ್ಶನ..ಸಿಎಂ ಬಿಎಸ್‍ವೈ ಆಕ್ರೋಶ
ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮರಾಠಿ ಭಾಷೆ ಮತ್ತು ಸಂಸ್ಕøತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಮಾತನಾಡಿರುವುದು ಅವರ ಉದ್ಧಟತನದ ಪ್ರದರ್ಶನವಾಗಿದೆ. ಇದು ಭಾರತೀಯ ಒಕ್ಕೂಟ ತತ್ವದ ವಿರುದ್ಧವಾದ ನಿಲುವು. ಮಹಾಜನ್ ವರದಿಯೇ ಅಂತಿಮ ಎಂಬುದು ಎಲ್ಲರೂ ಬಲ್ಲ ಸತ್ಯ ಎಂದು ಉದ್ಧವ್ ಠಾಕ್ರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದರು. ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಗೆ ಟ್ವೀಟ್ ಮೂಲಕ ತಕ್ಕ ಉತ್ತರ ನೀಡಿರುವ ಸಿಎಂ ಬಿಎಸ್‍ವೈ ಹೀಗಿರುವಾಗ …
Read More »ಬೆಳಗಾವಿ ನಮ್ಮದು, ಮಹಾರಾಷ್ಟ್ರ ಸಿಎಂ ಠಾಕ್ರೆಗೆ ಸಿದ್ಧರಾಮಯ್ಯ ಖಡಕ್ ವಾರ್ನಿಗ್
ಬೆಂಗಳೂರು : ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ ಕ್ಯಾತೆ ತೆಗೆದ ಮಹಾರಾಷ್ಟ್ರ ಸಿಎಂ ವಿರುದ್ಧ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರಣಿ ಟ್ವಿಟ್ ಮೂಲಕ ಕಿಡಿಕಾರಿದ್ದಾರೆ. ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ. ಬೆಳಗಾವಿ ಬಗ್ಗೆ ಉದ್ಧವ್ ಠಾಕ್ರೆ ನೀಡಿರುವುದು ಅಧಿಕಪ್ರಸಂಗತನದ ಹೇಳಿಕೆ. ಬೆಳಗಾವಿ ಗಡಿ ಬಗ್ಗೆ ಮಹಾಜನ ವರದಿಯೇ ಅಂತಿಮ. ಇತ್ಯರ್ಥವಾಗಿರುವ ವಿಷಯವನ್ನು ಕೆಣಕಿ ರಾಜಕೀಯ ಮಾಡಲು ಹೋಗಬೇಡಿ. ಈಗ ನೀವು ಕೇವಲ ಶಿವ ಸೈನಿಕ ಅಲ್ಲ, ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿ …
Read More »ತಮಿಳುನಾಡಿನಲ್ಲಿ ಜಲ್ಲಿಕಟ್ಟು ವೀಕ್ಷಿಸಿದ ರಾಹುಲ್ ಗಾಂಧಿ
ಮಧುರೈ: ಪೊಂಗಲ್ ಹಬ್ಬದ ಪ್ರಯುಕ್ತ ತಮಿಳುನಾಡಿನ ಅವನಿಯಪುರಂನಲ್ಲಿ ನಡೆಯುವ ಜಲ್ಲಿಕಟ್ಟು ಕ್ರೀಡೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ವೀಕ್ಷಿಸಿದರು. ಪೊಂಗಲ್ ಹಬ್ಬದಲ್ಲಿ ಪಾಲ್ಗೊಳ್ಳಲೆಂದು ತಮಿಳುನಾಡಿಗೆ ಆಗಮಿಸಿದ ರಾಹುಲ್ ಗಾಂಧಿ ಜಲ್ಲಿಕಟ್ಟು ವೀಕ್ಷಿಸಿದರು. ಈ ವೇಳೆ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ರಾಹುಲ್ ಗಾಂಧಿಗೆ ಸಾಥ್ ನೀಡಿದರು. ಈ ವೇಳೆ ಮಾತನಾಡಿದ ರಾಹುಲ್ ಗಾಂಧಿ, ತಮಿಳು ಭಾಷೆ, ಸಂಸ್ಕೃತಿಯನ್ನು ಬದಿಗಿರಿಸಿ, ತಮಿಳುನಾಡು ಜನರ ಮೇಲೆ …
Read More »ದೇಶಾದ್ಯಂತ ಜನವರಿ 31ರಂದು ಪಲ್ಸ್‌ಪೋಲಿಯೋ ಕಾರ್ಯಕ್ರಮ ನಿಗದಿ
ನವದೆಹಲಿ : ದೇಶದಲ್ಲಿ ಜನವರಿ 31ರಂದು ಪಲ್ಸ್‌ಪೋಲಿಯೋ ಕಾರ್ಯಕ್ರಮವನ್ನು ನಡೆಸಲು ನಿರ್ಧರಿಸಲಾಗಿದೆ.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಕುರಿತು ನಿರ್ಧಾರ ಪ್ರಕಟಿಸಿದೆ. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕುವ ಮೂಲಕ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಜನವರಿ 30ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಜನವರಿ 17ಕ್ಕೆ ನಿಗದಿಯಾಗಿದ್ದ ಪಲ್ಸ್ ಪೋಲಿಯಾ ಲಸಿಕೆ ಕಾರ್ಯಕ್ರಮವನ್ನು ಕೇಂದ್ರ ಆರೋಗ್ಯ …
Read More »ದೆಹಲಿಯ ಜನತೆಗೆ ನಾವು ಕೋವಿಡ್ 19 ಲಸಿಕೆ ಉಚಿತವಾಗಿ ನೀಡುತ್ತೇವೆ: ಕೇಜ್ರಿವಾಲ್
ನವದೆಹಲಿ : ಆಮ್ ಆದ್ಮಿ ಸರ್ಕಾರ ದೆಹಲಿ ಜನರಿಗೆ ಕೋವಿಡ್ 19 ಲಸಿಕೆ ಉಚಿತವಾಗಿ ನೀಡಲಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಉಚಿತ ವ್ಯಾಕ್ಸಿನೇಷನ್ ಮಾಡಬೇಕೆಂದು ಈಗಾಗಲೇ ಕೇಂದ್ರಕ್ಕೆ ಮನವಿ ಮಾಡಿದ್ದೇವೆ. ಕೇಂದ್ರವು ಏನು ಮಾಡುತ್ತದೆ ಎಂಬುದನ್ನು ನಾವು ನೋಡುತ್ತೇವೆ. ಅಗತ್ಯವಿದ್ದರೆ, ಕೇಂದ್ರವು ಲಸಿಕೆಯನ್ನು ಉಚಿತವಾಗಿ ನೀಡದಿದ್ದರೆ, ನಾವು ಲಸಿಕೆಯನ್ನು ದೆಹಲಿ …
Read More »ಮಕ್ಕಳ ಎದುರೇ ಪತ್ನಿ, ಅತ್ತೆಯನ್ನು ಹತ್ಯೆ ಮಾಡಿದ ಭೂಪ
ಗುವಾಹತಿ : ವ್ಯಕ್ತಿಯೋರ್ವ ತನ್ನ ಪತ್ನಿ ಹಾಗೂ ಅತ್ತೆಯನ್ನು ಕೊಂದಿದ್ದಲ್ಲದೆ ಕೋಳಿ ಮಾಂಸ ಕಟ್ ಮಾಡುವ ಹಾಗೆ ಅವರಿಬ್ಬರನ್ನು ತುಂಡರಿಸಿದ್ದಾನೆ. ತ್ರಿಪುರಾದಧಲೈ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ. ಘಟನೆಯ ಬಳಿಕ ಆತ ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ನಾವು ಆರೋಪಿಯನ್ನು ಬಂಧಿಸಿದ್ದೇವೆ. ಆತನಿಗೆ ವೈದ್ಯಕೀಯ ಪರೀಕ್ಷೆ ನಡೆಸಿದ್ದೇವೆ. ಆತನ ದೇಹದಲ್ಲಿ ವಿಷಾಂಶ ಪತ್ತೆಯಾಗಿದೆ. ಆತ ಅಪಾಯದಿಂದ ಪಾರಾಗಿದ್ದಾನೆ. ಆತನನ್ನು ವಿಚಾರಣೆಗೆ ಒಳಪಡಿಸಲು …
Read More »ಫೇಸ್‍ಬುಕ್, ಟ್ವಿಟರ್ ನಂತರ ಯೂಟೂಬ್ ಸರದಿ, ಟ್ರಂಪ್ ವಿಡಿಯೋಗಳಿಗೆ ತಡೆ
ವಾಷಿಂಗ್ಟನ್,ಜ.13- ಅಮೆರಿಕದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ಸಂದರ್ಭ ಸಮೀಪಿಸುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಿಂದಲೂ ಡೊಲಾನ್ಡ್ ಟ್ರಂಪ್ ಅವರನ್ನು ಹೊರ ಹಾಕುವ ಪ್ರಕ್ರಿಯೆಗಳು ಬಿರುಸಿನಿಂದ ನಡೆಯುತ್ತಿವೆ. ವಾಷಿಂಗ್ಟನ್‍ನ ಕ್ಯಾಪಿಟಲ್ ಹೀಲ್ಸ್‍ನ ಹೊರಗೆ ನಡೆದ ಹಿಂಸಾಚಾರದ ಬಳಿಕ ಫೇಸ್‍ಬುಕ್ ಮತ್ತು ಟ್ವಿಟರ್ ಟ್ರಂಪ್ ಅವರ ಖಾತೆಯನ್ನು ಅಮಾನತುಗೊಳಿಸಿದ್ದವು. ಪರ್ಯಾಯವಾಗಿ ಟ್ರಂಪ್ ಟೀಮ್ ಹಾಗೂ ಬೇರೆ ಬೇರೆ ಹೆಸರಿನಲ್ಲಿ ಖಾತೆ ತೆರೆಯಲು ಪ್ರಯತ್ನ ಮಾಡಿದರೂ ಅದಕ್ಕೆ ಅವಕಾಶ ಕೊಟ್ಟಿಲ್ಲ. ಪೇಸ್‍ಬುಕ್ ಕಳೆದ 6ದಿನಗಳಿಂದಲೂ ಟ್ರಂಪ್ ಅವರ …
Read More »ಗೋಹತ್ಯೆ ನಿಷೇಧ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ
ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆ ಕುರಿತಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದ್ದು, ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ ಓಕಾ ಹಾಗೂ ಸಚಿನ್ ಶಂಕರ್ ಮಗುದಂ ಅವರನ್ನೊಳಗೊಂಡ ಪೀಠ ಸರ್ಕಾರಕ್ಕೆ ನೊಟೀಸ್ ಜಾರಿ ಮಾಡಿದೆ. ಗೋಹತ್ಯೆ ನಿಷೇಧ ಸುಗ್ರೀವಾಜ್ಞೆಯನ್ನು ಪ್ರಶ್ನಿಸಿ ಪಿಳ್ಳಣ್ಣ ಗಾರ್ಡನ್ ನಿವಾಸಿ ಮೊಹಮ್ಮದ್ ಆರಿಫ್ ಜಮೀಲ್ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಗೋಹತ್ಯೆ ನಿಷೇಧದಿಂದ ಭಾರತದ ಸಂವಿಧಾನದ 19 (ಜಿ) ವಿಧಿ ಖಾತರಿಪಡಿಸಿದ …
Read More »BIG BREAKING : ನಾಳೆ 3.50ಕ್ಕೆ ನೂತನ ಸಚಿವರ ಪ್ರಮಾಣವಚನ : 8 ಶಾಸಕರು ಸಂಪುಟ ಸೇರ್ಪಡೆ – ಸಿಎಂ ಯಡಿಯೂರಪ್ಪ
ಬೆಂಗಳೂರು : 7 ರಿಂದ 8 ಶಾಸಕರನ್ನು ಮಂತ್ರಿ ಮಂಡಲಕ್ಕೆ ತೆಗೆದುಕೊಳ್ಳುವ ಬಗ್ಗೆ ನಾಳೆ 3.50 ಗಂಟೆಗೆ ತೀರ್ಮಾನ ಕೈಗೊಳ್ಳಲಾಗುವುದು. ನಾಳೆ 7 ರಿಂದ 8 ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಾಗುತ್ತದೆ. ಒಬ್ಬರನ್ನು ಕೈಬಿಡುವ ಚರ್ಚೆ ಕೂಡ ನಡೆದಿದೆ ಎಂಬುದಾಗಿ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಸಿಎಂ ಯಡಿಯೂರಪ್ಪ ಅವರು, ನಾಳೆ ಸಂಜೆ 3.50ಕ್ಕೆ ನೂತನ ಸಚಿವರು ಸಂಪುಟ ಸೇರ್ವಡೆಗೊಳ್ಳಲಿದ್ದಾರೆ. 7 ರಿಂದ …
Read More »
Laxmi News 24×7