Home / ಜಿಲ್ಲೆ / ಉಡುಪಿ (page 3)

ಉಡುಪಿ

ಕರ್ನಾಟಕದ ಪಡಿತರ ಅಕ್ಕಿ ಕೇರಳಕ್ಕೆ- ಐವರು ಖದೀಮರ ಅರೆಸ್ಟ್

ಉಡುಪಿ: ಕರ್ನಾಟಕದ ಉಚಿತ ಪಡಿತರ ಅಕ್ಕಿಯನ್ನು ಸಂಗ್ರಹಿಸಿ ಕೇರಳಕ್ಕೆ ಸಾಗಿಸುವ ದಂಧೆಯ ಮೇಲೆ ಉಡುಪಿ ಡಿಸಿಐಬಿ ಪೊಲೀಸರು ದಾಳಿ ಮಾಡಿದ್ದಾರೆ. ಸರ್ಕಾರ ಉಚಿತವಾಗಿ ಬಡವರಿಗೆ ಕೊಡುವ ಉಚಿತ ಅಕ್ಕಿಯನ್ನು ಕೇರಳಕ್ಕೆ ಸಾಗಿಸುವ ಐವರು ಚೋರರ ಬಂಧನವಾಗಿದೆ. ಬಡವರು ಹಸಿದಿರಬಾರದು. ಮೂರೊತ್ತು ಊಟ ಮಾಡಬೇಕೆಂದು ಸರ್ಕಾರ ಉಚಿತ ಅಕ್ಕಿ ವಿತರಿಸುತ್ತಿದೆ. ಆದ್ರೆ ಸರ್ಕಾರದ ಅಕ್ಕಿ ಪಡೆದು ಕೆಲವರು ಅದನ್ನು ದಂಧೆಕೋರರಿಗೆ ಮಾರಾಟ ಮಾಡಿ ದ್ರೋಹ ಬಗೆಯುತ್ತಿದ್ದಾರೆ. ಇಂತಹ ಘಟನೆ ಉಡುಪಿಯಲ್ಲಿ ಬೆಳಕಿಗೆ …

Read More »

ಪ್ರೇಮ’ಪಾಶ’ಕ್ಕೆ ಕೊರಳೊಡ್ಡಿದ ಎಂಬಿಎ ಪದವೀಧರೆ

ಉಡುಪಿ: ಪ್ರೇಮ ಪಾಶಕ್ಕೆ ಸಿಲುಕಿ ಎಂಬಿಎ ಪದವೀಧರ ನೇಣಿಗೆ ಶರಣಾದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಬ್ರಹ್ಮಾವರ ತಾಲೂಕು ಸಾಯ್ಬರಕಟ್ಟೆ ಸಮೀಪದ ಕಾಜ್ರಳ್ಳಿ ನಿವಾಸಿ ಅನಿಶಾ ಜಿ. ಪೂಜಾರಿ ಆತ್ಮಹತ್ಯೆಗೆ ಶರಣಾದ ಯುವತಿ. ಅನಿಶಾ ಮತ್ತು ಸತೀಶ್ ಶೆಟ್ಟಿ ಕಳೆದ ಐದಾರು ವರ್ಷಗಳಿಂದ ಪ್ರೀತಿಸುತ್ತಿದ್ದರು. ಪ್ರೀತಿ ಮದುವೆಯ ಹಂತಕ್ಕೆ ಬಂದಾಗ ಸತೀಶ್ ಮದುವೆಗೆ ಒಪ್ಪಿಲ್ಲ. ಅನಿಶಾ ಪರಿಪರಿಯಾಗಿ ಬೇಡಿದರೂ ಮದುವೆಯಾಗುವ ಮನಸ್ಸು ಮಾಡಲಿಲ್ಲ. ಪ್ರಿಯತಮನಿಗೆ ಕರೆ ಮಾಡಿ ತಾನು ಆತ್ಮಹತ್ಯೆ …

Read More »

ಬೈಕ್ ಬಿಟ್ಟು ರೈಲ್ವೆ ಬ್ರಿಡ್ಜ್ ಮೇಲೆ ನಡೆದುಕೊಂಡು ಹೋಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

ಉಡುಪಿ: ಜಿಲ್ಲೆ ಕಾಪು ತಾಲೂಕಿನ ಉದ್ಯಾವರ ಬೊಳ್ಜೆ ರೈಲ್ವೆ ಟ್ರ್ಯಾಕ್ ಮೇಲೆ ಶವವೊಂದು ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಉಬೇದುಲ್ಲ ಎಂದು ಗುರುತಿಸಲಾಗಿದೆ.ಉಬೇದುಲ್ಲ ಕಾಪು ತಾಲೂಕು ಮಲ್ಲಾರು ಗ್ರಾಮದ ನಿವಾಸಿ. ಕಳೆದ ರಾತ್ರಿ 9 ಗಂಟೆ ಸುಮಾರಿಗೆ ಉದ್ಯಾವರ ಬಳಜಿ ರೈಲ್ವೆ ಟ್ರ್ಯಾಕ್ ನಲ್ಲಿ ಬಂದಿದ್ದು, ಅಮಲಿನಲ್ಲಿದ್ದರು ಎನ್ನಲಾಗಿದೆ. ಈ ಕುರಿತು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಘಟನಾ ಸ್ಥಳದಲ್ಲಿ ಬೈಕ್ ಹಾಗೂ ಮೊಬೈಲ್ ಫೋನ್ ಪತ್ತೆಯಾಗಿದೆ. ಸ್ಥಳೀಯ ನಿವಾಸಿಯೊಬ್ಬರು ಘಟನೆ …

Read More »

ಉಡುಪಿ ಆರೋಗ್ಯ ಅಧಿಕಾರಿಗಳ ಯಡವಟ್ಟು ಮೃತಪಟ್ಟ ವ್ಯಕ್ತಿಯೇ ಬೇರೆಯಾಗಿದ್ದರೇ, ತಂದಿದ್ದ ಶವವೇ ಬೇರೆಯವರದ್ದಾಗಿತ್ತು.

ಉಡುಪಿ  : ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ ವ್ಯಕ್ತಿಯೊಬ್ಬನನ್ನು ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಕೊರೋನಾ ಸೋಂಕಿತರಾಗಿದ್ದ ಕಾರಣ ಪ್ಲಾಸ್ಟಿಕ್ ಚೀಲದಲ್ಲಿ ಪ್ಯಾಕ್ ಮಾಡಿ ಕಳುಹಿಸಲಾಗಿತ್ತು. ಇಂತಹ ಶವವನ್ನು ಆಂಬುಲೆನ್ಸ್ ಮೂಲಕ ಕುಂದಾಪುರಕ್ಕೆ ಶವಸಂಸ್ಕಾರ ಮಾಡಲು ತರಲಾಗಿತ್ತು. ಶವವನ್ನು ಸ್ಮಾಶನದಲ್ಲಿ ತೆರೆದು ನೋಡಿದವರಿಗೆ ಅಲ್ಲಿ ಶಾಕ್ ಕಾದಿತ್ತು. ಅದೇ ಮೃತಪಟ್ಟ ವ್ಯಕ್ತಿಯೇ ಬೇರೆಯಾಗಿದ್ದರೇ, ತಂದಿದ್ದ ಶವವೇ ಬೇರೆಯವರದ್ದಾಗಿತ್ತು. ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ನೇರಂಬಳ್ಳಿ ಮೂಲದ 65 ವರ್ಷದ ವೃದ್ಧರೊಬ್ಬರು …

Read More »

ವೈದ್ಯರ ನಿರ್ಲಕ್ಷ್ಯದಿಂದ ನನ್ನ ಪತ್ನಿ ಮೃತಪಟ್ಟಿದ್ದಾಳೆ -ವೈದ್ಯರ ವಿರುದ್ಧ BJP ಮುಖಂಡನ ಆರೋಪ

ಉಡುಪಿ: ವೈದ್ಯರ ನಿರ್ಲಕ್ಷ್ಯಕ್ಕೆ ಮಹಿಳೆ ಮೃತಪಟ್ಟಿರುವ ಆರೋಪ ಉಡುಪಿ ನಗರದ ಮಿಷನ್‌ ಆಸ್ಪತ್ರೆ ವೈದ್ಯರ ವಿರುದ್ಧ ಕೇಳಿ ಬಂದಿದೆ. ಸ್ಥಳೀಯ ಬಿಜೆಪಿ ಮುಖಂಡನ ಪತ್ನಿ ಶ್ರೀರಕ್ಷಾ(26) ಮೃತ ಮಹಿಳೆ.   ಬಿಜೆಪಿ ಮುಖಂಡನ ಪತ್ನಿ ಶ್ರೀರಕ್ಷಾ ತಲೆನೋವೆಂದು ಮಿಷನ್‌ ಆಸ್ಪತ್ರೆಗೆ ದಾಖಲಾಗಿದ್ದರು. ಹೀಗಾಗಿ ವೈದ್ಯರು ಅಸ್ವಸ್ಥ ಮಹಿಳೆಗೆ ಇಂಜೆಕ್ಷನ್ ಕೊಟ್ಟು ಕಳುಹಿಸಿದ್ದರು. ಮನೆಗೆ ತೆರಳುತ್ತಿದ್ದಂತೆ ಅಸ್ವಸ್ಥಗೊಂಡಿದ್ದ ಶ್ರೀರಕ್ಷಾ ಮೃತಪಟ್ಟಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದಲೇ ಸಾವು ಸಂಭವಿಸಿದೆ ಎಂದು ಸ್ಥಳೀಯ ಬಿಜೆಪಿ ಮುಖಂಡ, ಪತಿ …

Read More »

ರಸ್ತೆ ದಾಟುತ್ತಿದ್ದ ವೇಳೆ ಲಾರಿ ಡಿಕ್ಕಿ

ಬೈಂದೂರು: ರಸ್ತೆ ದಾಟುತ್ತಿದ್ದ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಪಿಯುಸಿ ವಿದ್ಯಾರ್ಥಿಯೊಬ್ಬ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮರವಂತೆಯ ಕಿಶನ್ ಖಾರ್ವಿ(17) ಮೃತಪಟ್ಟ ಬಾಲಕ. ಈತ ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನ ಪಿಯುಸಿ ವಿದ್ಯಾರ್ಥಿಯಾಗಿದ್ದು, ಬೆಳಗ್ಗೆ ದ್ವಿತೀಯ ಪಿಯುಸಿ ಪ್ರವೇಶ ದಾಖಲಾತಿಗಾಗಿ ಕಾಲೇಜಿಗೆ ಬಂದಿದ್ದನು. ದಾಖಲಾತಿ ಪ್ರಕ್ರಿಯೆ ಮುಗಿಸಿ ವಾಪಸ್ ಮನೆಗೆ ಹೋಗಲು ರಸ್ತೆ ದಾಟುತ್ತಿದ್ದ …

Read More »

ಬೈಂದೂರು ಸಮುದ್ರದಲ್ಲಿ ನಾಲ್ವರು ಮೀನುಗಾರರು ಕಣ್ಮರೆ- ಕ್ರೇನ್ ಬಳಸಿ ಶೋಧಕಾರ್ಯ

ಉಡುಪಿ: ನಾಡದೋಣಿ ಮೀನುಗಾರಿಕೆಗೆ ತೆರಳಿದ್ದ ಬೋಟ್ ಬಂಡೆಗೆ ಬಡಿದು ನಾಲ್ವರು ಮೀನುಗಾರರು ಕಣ್ಮರೆಯಾಗಿದ್ದು, ಕ್ರೇನ್ ಮೂಲಕ ಶೋಧ ಕಾರ್ಯ ನಡೆಸಲಾಗುತ್ತಿದೆ. ಬೈಂದೂರು ತಾಲೂಕು ಕಿರಿಮಂಜೇಶ್ವರದ ಕೊಡೇರಿಯಲ್ಲಿ ದುರ್ಘಟನೆ ನಡೆದಿದ್ದು, ಕೊಡೇರಿ ಅಳಿವೆಬಾಗಿಲಿನಲ್ಲಿ ಕಣ್ಮರೆಯಾದ ನಾಲ್ವರಿಗೆ ಶೋಧ ಕಾರ್ಯ ನಡೆಯುತ್ತಿದೆ. 11 ಮಂದಿ ಮೀನುಗಾರರಿದ್ದ ಬೋಟ್ ಇಂದು ಬೆಳಗ್ಗೆ ಮೀನುಗಾರಿಕೆಗೆ ತೆರಳಿತ್ತು. ಇದರಲ್ಲಿ 7 ಜನ ಈಜಿ ದಡ ಸೇರಿದ್ದಾರೆ. ನಾಲ್ವರು ಕಾಣೆಯಾಗಿದ್ದಾರೆ.

Read More »

ಗೃಹ ಸಚಿವರ ಚಪ್ಪಲಿಯನ್ನು ಎತ್ತಿಕೊಂಡು ಹೋಗಿದ್ದ ಸಮುದ್ರದ ಚಪ್ಪಲಿಯನ್ನು ದಡಕ್ಕೆ ಎಸೆದಿದೆ

ಉಡುಪಿ: ರಾಜ್ಯ ಗೃಹ ಸಚಿವ ಉಡುಪಿ ಉಸ್ತುವಾರಿ ಸಚಿವ ಬಸವರಾಜ್ ಬೊಮ್ಮಾಯಿ ಮೇಲೆ ಸಮುದ್ರ ರಾಜ ಎರಗಿದ್ದಾನೆ. ಉಡುಪಿಯ ನೆರೆಪೀಡಿತ ಪ್ರದೇಶಗಳ ಪ್ರವಾಸ ಕೈಗೊಂಡ ಸಂದರ್ಭ ಸಮುದ್ರದ ಅಲೆ ಸಚಿವ ಬೊಮ್ಮಾಯಿ ಅವರಿಗೆ ಬಡಿದಿದೆ. ಉಡುಪಿ ಜಿಲ್ಲೆ ಕಾಪು ತಾಲೂಕು ಪಡುಬಿದ್ರೆ ಕಡಲಕಿನಾರೆಗೆ ಬಸವರಾಜ್ ಬೊಮ್ಮಾಯಿ ಮೊದಲ ಭೇಟಿ ಕೊಟ್ಟರು. ಸಮುದ್ರ ಕೊರೆತ ವೀಕ್ಷಿಸಿದ ಬೊಮ್ಮಾಯಿ, ಅರಬ್ಬಿ ಸಮುದ್ರಕ್ಕೆ ಇಳಿದರು. ಈ ಸಂದರ್ಭ ಬೃಹತ್ ಗಾತ್ರದ ಅಲೆ ಗೃಹ ಸಚಿವ …

Read More »

ಉಡುಪಿಯಲ್ಲಿ ನಾಳೆ ಕೃಷ್ಣಜನ್ಮಾಷ್ಟಮಿ ಆಚರಣೆ ಇಲ್ಲ

ಉಡುಪಿ: ಶ್ರೀಕೃಷ್ಣ ಮಠದಲ್ಲಿ ನಾಳೆ ಅಷ್ಟಮಿ ಆಚರಣೆ ನಡೆಯುತ್ತಿಲ್ಲ. ಸೆಪ್ಟೆಂಬರ್ 11ಕ್ಕೆ ಶ್ರೀಕೃಷ್ಣಜನ್ಮಾಷ್ಟಮಿ ಆಚರಿಸಲು ಉಡುಪಿ ಕೃಷ್ಣಮಠ ತೀರ್ಮಾನಿಸಿದೆ. ಚಾಂದ್ರಮಾನ ಪದ್ಧತಿಯ ಪ್ರಕಾರ ನಾಳೆ ಅಷ್ಟಮಿ ನಾಡಿನಾದ್ಯಂತ ನಡೆಯುತ್ತಿದೆ. ಉಡುಪಿ ಶ್ರೀಕೃಷ್ಣಮಠ ಸೌರಮಾನ ಪದ್ಧತಿಯನ್ನು ಅನುಸರಿಸುವ ಧಾರ್ಮಿಕ ಕೇಂದ್ರ. ಅಗಸ್ಟ್ 11ಕ್ಕೆ ನಾಡಿನಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ನಡೆಯುತ್ತಿದ್ದು, ಕೃಷ್ಣನ ನಾಡು ಉಡುಪಿಯಲ್ಲಿ ಒಂದು ತಿಂಗಳು ನಂತರ ಆಚರಣೆ ನಡೆಯಲಿದೆ. ಶ್ರೀಕೃಷ್ಣ ಹುಟ್ಟಿದ್ದು, ಸಿಂಹಮಾಸ ಕೃಷ್ಣ ಪಕ್ಷ ರೋಹಿಣಿ ನಕ್ಷತ್ರ …

Read More »

ಜೆಸಿಬಿ ಇಳಿಸಿ ರಸ್ತೆ ಕ್ಲೀನ್ ಮಾಡಿದ ಜನಪ್ರತಿನಿಧಿಗಳು….

ಉಡುಪಿ: ರಸ್ತೆಯಲ್ಲಿದ್ದ ಮರಳನ್ನು ಕಾಪುವಿನ ಜನಪ್ರತಿನಿಧಿಗಳು ಮುಂದೆ ನಿಂತು ಸ್ವಚ್ಛಗೊಳಿಸಿದ್ದಾರೆ. ಭಾರೀ ಮಳೆಯಾಗುತ್ತಿರುವುದರಿಂದ ಅರಬ್ಬಿ ಸಮುದ್ರದ ಅಬ್ಬರ ಕೂಡ ಜಾಸ್ತಿಯಾಗಿದೆ. ಕಾಪು ತಾಲೂಕಿನ ಉದ್ಯಾವರ ತೀರದಲ್ಲಿ ಕಡಲು ಕೊರೆತದಿಂದ ರಸ್ತೆ ಸಂಪರ್ಕ ಸಮಸ್ಯೆ ಉಂಟಾಗಿದೆ.ಭಾರಿ ಮಳೆ ಹಿನ್ನೆಲೆ ಕನಕೋಡ ಉದ್ಯಾವರ ಪಡುಕರೆಯಲ್ಲಿ ಕಡಲಬ್ಬರ ಜಾಸ್ತಿಯಾಗಿದ್ದು, ಕಡಲಿನ ಆರ್ಭಟಕ್ಕೆ ರಾಶಿ ರಾಶಿ ಮರಳು ದಡಕ್ಕೆ ಉಕ್ಕಿ ಬರುತ್ತಿದೆ. ಅಲೆಗಳ ಜೊತೆ ಭಾರಿ ಪ್ರಮಾಣದ ಮರಳು ಕೂಡ ಮೀನುಗಾರಿಕಾ ರಸ್ತೆಯನ್ನು ಸೇರುತ್ತಿದೆ. ಕಡಲು …

Read More »