Breaking News
Home / ಜಿಲ್ಲೆ / ಉಡುಪಿ (page 5)

ಉಡುಪಿ

ಕೊರೊನಾ ವರದಿ ನೆಗೆಟಿವ್ ಐಶೋಲೇಶನ್ ವಾರ್ಡ್ ನಲ್ಲೇ ಆತ್ಮ ಹತ್ಯೆ..

ಉಡುಪಿ: ಜಿಲ್ಲಾಸ್ಪತ್ರೆಯ ಐಸೋಲೇಷನ್ ವಾರ್ಡಿನಲ್ಲಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. 63 ವರ್ಷದ ಪ್ರಭಾಕರ್ ಪುತ್ರನ್ ಆತ್ಮಹತ್ಯೆ ಮಾಡಿಕೊಂಡಿದ್ದು, ಕೋವಿಡ್-19 ಸೋಂಕಿತನ ಪ್ರಾಥಮಿಕ ಸಂಪರ್ಕದ ಕಾರಣ ಜುಲೈ 5 ರಂದು ಉಡುಪಿ ಜಿಲ್ಲಾಸ್ಪತ್ರೆಯ ಐಸೋಲೇಷನ್ ವಾರ್ಡಿಗೆ ದಾಖಲಾಗಿದ್ದರು. ಆದರೆ ಆತ್ಮಹತ್ಯೆ ನಂತರ ಕೊರೊನಾ ಪರೀಕ್ಷಾ ವರದಿ ವೈದ್ಯರ ಕೈ ಸೇರಿದೆ. ಆತ್ಮಹತ್ಯೆ ಮಾಡಿಕೊಂಡ ಪ್ರಭಾಕರ ಅವರಿಗೆ ಕೊರೊನಾ ನೆಗೆಟಿವ್ ಬಂದಿದೆ. ಕೊರೊನಾ ಆತಂಕದಲ್ಲಿ ಆತ್ಮಹತ್ಯೆ ಸಾಧ್ಯತೆಯಿದೆ. ಜನ …

Read More »

ಸಾರಿಗೆ ಸಿಬ್ಬಂದಿ, ಪೊಲೀಸರು, ಡಾಕ್ಟರ್ಸ್, ನರ್ಸ್ ಆಯ್ತು ಇದೀಗ ಬಿಬಿಎಂಪಿಗೂ ಕೊರೊನಾ ಸೋಂಕು

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಅಟ್ಟಹಾಸ ಮಿತಿ ಮೀರುತ್ತಿದೆ. ಸಾರಿಗೆ ಸಿಬ್ಬಂದಿ, ಪೊಲೀಸರು, ಡಾಕ್ಟರ್ಸ್, ನರ್ಸ್ ಆಯ್ತು ಇದೀಗ ಬಿಬಿಎಂಪಿಗೂ ಕೊರೊನಾ ಸೋಂಕು ವಕ್ಕರಿಸಿದೆ. ಬೆಂಗಳೂರಲ್ಲಿ 19 ಜನ ಪೌರ ಕಾರ್ಮಿಕರಿಗೆ ಸೋಂಕು ತಗುಲಿದೆ. ನ್ಯಾಷನಲ್ ಕಾಲೇಜ್ ಗ್ರೌಂಡ್‍ನಲ್ಲಿ ಕೆಲಸ ಮಾಡುತ್ತಿದ್ದ 19 ಜನ ಪೌರಕಾರ್ಮಿಕರಲ್ಲಿ 7 ಜನ ಪಾದರಾಯನಪುರ ನಿವಾಸಿಗಳು ಅಂತ ಹೇಳಲಾಗ್ತಿದೆ.   ಸೋಂಕಿತ ಪಾದರಾಯನಪುರದ ನಿವಾಸಿಗಳನ್ನ ಹಜ್ ಭವನಕ್ಕೆ ಶಿಷ್ಟ್ ಮಾಡಲಾಗಿದೆ. ಉಳಿದ 12 ಜನರ …

Read More »

ಕೆರೆಗೆ ಕಾರು ಉರುಳಿದರೂ ಪವಾಡ ಸದೃಶವಾಗಿ ಯುವತಿ ಪಾರು ; ಜೀವದಾನ ಮಾಡಿದ ಬಾಲಕಿಯ ವೀಡಿಯೋ ವೈರಲ್

ಉಡುಪಿ: ಬಾರ್ಕೂರಿನ ಚೌಳಿಕೆರೆಗೆ ಕಾರು ಉರುಳಿ ಬಿದ್ದು ಸ್ಥಳೀಯ ಉದ್ಯಮಿ ಸಂತೋಷ್ ಶೆಟ್ಟಿ ಎಂಬವರು ಸ್ಥಳದಲ್ಲೇ  ಸಾವನ್ನಪ್ಪಿದ್ದರು. ಅವರ ಜೊತೆಗಿದ್ದ ಸಂಸ್ಥೆಯ ಉದ್ಯೋಗಿ ಶ್ವೇತಾ ಅಪಘಾತದಿಂದ ಬಚಾವಾಗಿದ್ದೇ ಒಂದು ಪವಾಡ. ಆದರೆ, ಈ ಪವಾಡ ನಡೆದದ್ದು ಹೇಗೆ ಅನ್ನೋದು ತಡವಾಗಿ ಬೆಳಕಿಗೆ ಬಂದಿದೆ. ನೀರು ತುಂಬಿದ್ದ ಕೆರೆಗೆ ಕಾರು ಬಿದ್ದಾಗ ಇಬ್ಬರೂ ಮುಳುಗಿದ್ದರು. ಸಂತೋಷ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಯುವತಿಯ ಪ್ರಾಣವಾಯು ಇನ್ನೂ ಉಳಿದಿತ್ತು. ಬಾಲಕಿಯೊಬ್ಬಳ ಸಮಯ ಪ್ರಜ್ಞೆಯಿಂದ ಶ್ವೇತಾ ಬದುಕಿ …

Read More »

ಇಲಾಖೆ ಹೇಳೋದು ಒಂದು, ಆರೋಗ್ಯ ಸಚಿವರು ಹೇಳೋದು ಮತ್ತೊಂದು……..

ಉಡುಪಿ: ಮಹಾರಾಷ್ಟ್ರದಿಂದ ಬಂದವರಿಗೆ 7 ದಿನಗಳ ಕಾಲ ಸರ್ಕಾರಿ ಕ್ವಾರಂಟೈನ್ ಕಡ್ಡಾಯ ಎಂದು ಸೋಮವಾರವಷ್ಟೇ ಸರ್ಕಾರ ಆದೇಶ ಹೊರಡಿಸಿದ್ದು, ಇದೀಗ ಆರೋಗ್ಯ ಸಚಿವ ಶ್ರೀರಾಮುಲು ಅವರು ಇನ್ನು ಮುಂದೆ ಸರ್ಕಾರಿ ಕ್ವಾರಂಟೈನ್ ಇರಲ್ಲ ಎಂದು ಹೇಳಿದ್ದಾರೆ. ಈ ಮೂಲಕ ಜನ ಆರೋಗ್ಯ ಇಲಾಖೆಯನ್ನು ನಂಬಬೇಕಾ ಅಥವಾ ಆರೋಗ್ಯ ಸಚಿವರನ್ನು ನಂಬಬೇಕಾ ಎಂಬ ಗೊಂದಲದಲ್ಲಿ ಸಿಲುಕಿದ್ದಾರೆ. ಹೌದು. ಉಡುಪಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀರಾಮುಲು, ಮಹಾರಾಷ್ಟ್ರದಿಂದ ಬಂದವರಿಗೆ ಹೋಂ ಕ್ವಾರಂಟೈನ್ ಮಾಡಲಾಗುತ್ತದೆ. …

Read More »

ಶೇ.99ರಷ್ಟು ಅನ್‍ಲಾಕ್ ಇಂಡಿಯಾ- ಧರ್ಮಸ್ಥಳ, ಕುಕ್ಕೆಯಲ್ಲಿ ದೇವರ ದರ್ಶನ

ಮಂಗಳೂರು: ಲಾಕ್‍ಡೌನ್ ಅಂತ್ಯಗೊಂಡು ಇಡೀ ರಾಜ್ಯದಲ್ಲಿ ದೇಗುಲಗಳು ಓಪನ್ ಆಗಿದೆ. ದೇಗುಲಗಳಲ್ಲಿ ಒಂದಷ್ಟು ರೂಲ್ಸ್‍ಗಳನ್ನು ಪಾಲಿಸಿಕೊಂಡು ಭಗವಂತ ದರ್ಶನ ನೀಡ್ತಿದ್ದಾನೆ. 77 ದಿನಗಳಿಂದ ಲಾಕ್‍ಡೌನ್ ಆಗಿದ್ದ ದೇಶ ಸೋಮವಾರ ಮೊದಲ ಹಂತವಾಗಿ ತೆರೆದುಕೊಂಡಿತು. ಸೋಮವಾರ ದೇವಾಲಯ, ಹೋಟೆಲ್, ಮಾಲ್, ಪ್ರವಾಸಿ ತಾಣಗಳು ಸಾರ್ವಜನಿಕರಿಗೆ ಮುಕ್ತವಾಗಿವೆ. ಬಹುತೇಕ ದೇವಾಲಯಗಳು ಬಾಗಿಲು ತೆರೆದಿದ್ದವು. ಆದರೆ ಭಕ್ತರ ಸಂಖ್ಯೆಯೇ ಕಡಿಮೆಯಿತ್ತು. ಇನ್ನು ಕೆಲವು ಕಡೆ ಜುಲೈ ಬಳಿಕ ದೇಗುಲ ತೆರೆಯಲು ನಿರ್ಧರಿಸಲಾಗಿದೆ. ನಿನ್ನೆಯಿಂದ ರಾಜ್ಯಾದ್ಯಂತ …

Read More »

ಮಹಾರಾಷ್ಟ್ರ, ಉಡುಪಿಜಿಲ್ಲೆಗೆ ದಿನೇ ದಿನೇ ಕಂಟಕವಾಗುತ್ತಿದೆ.:

ಉಡುಪಿ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪಾಸಿಟಿವ್ ಹೆಚ್ಚುತ್ತಲೇ ಇದೆ. ಶುಕ್ರವಾರ ಒಂದೇ ದಿನ ದ್ವಿಶತಕ ದಾಖಲಿಸಿದ್ದ ಕೊರೊನಾ, ಶನಿವಾರ ಶತಕ ದಾಖಲಿಸಿದೆ. 121 ಪಾಸಿಟಿವ್ ಪ್ರಕರಣಗಳು ಜಿಲ್ಲೆಯಲ್ಲಿ ದಾಖಲಾಗಿದ್ದು, ಈ ಮೂಲಕ ಜಿಲ್ಲೆಯ ಕೊರೊನಾ ಸೋಂಕಿತರ ಸಂಖ್ಯೆ 889ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರ, ಜಿಲ್ಲೆಗೆ ದಿನೇ ದಿನೇ ಕಂಟಕವಾಗುತ್ತಿದೆ. ಮುಂಬೈಯಿಂದ ಜಿಲ್ಲೆಗೆ ಬಂದ ಶೇ.10 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢವಾಗಿದ್ದು ಜಿಲ್ಲೆಯ ಜನರಲ್ಲಿ ಆತಂಕವನ್ನು ಮೂಡಿಸಿದೆ. ಉಡುಪಿಗೆ ಮುಂಬೈನಿಂದ ಬಂದ …

Read More »

ದೆಹಲಿ ಮತ್ತು ಮಹಾರಾಷ್ಟ್ರದಿಂದ ಇಡೀ ದೇಶಕ್ಕೆ ಕೊರೊನಾ ಹಬ್ಬಿದೆ.:ಶೋಭಾ ಕರಂದ್ಲಾಜೆ

ಉಡುಪಿ: ದೆಹಲಿ ಮತ್ತು ಮಹಾರಾಷ್ಟ್ರದಿಂದ ಇಡೀ ದೇಶಕ್ಕೆ ಕೊರೊನಾ ಹಬ್ಬಿದೆ. ಬೆಂಗಳೂರು ಸ್ಲಂಗಳಿಗೆ ತಬ್ಲಿಘಿಗಳು ಉದ್ದೇಶ ಪೂರ್ವಕವಾಗಿ ಸೋಂಕು ಪಸರಿಸಿದರು ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಶೋಭಾ ಕರಂದ್ಲಾಜೆ ಮೋದಿ ಸರ್ಕಾರ ಆರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸರ್ಕಾರದ ಸಾಧನೆಗಳನ್ನು ಹೇಳಿದರು. ಈ ಸಂದರ್ಭದಲ್ಲಿ ಕೊರೊನಾ ಬಗ್ಗೆ ಮಾತನಾಡಿ, ಪಾದರಾಯಣಪುರ, ಸಿದ್ಧಿಕ್ ಲೇಔಟ್‍ನಲ್ಲಿ ಉದ್ದೇಶ ಪೂರ್ವಕವಾಗಿ ಸೋಂಕು ಹಂಚಿದರು. ತಬ್ಲಿಘಿ ನಡತೆ ನೋಡಿದರೆ ಉದ್ದೇಶ ಪೂರ್ವಕವಾಗಿ …

Read More »

ಕರ್ನಾಟಕ ಕರಾವಳಿಯಲ್ಲಿ 60 ರಿಂದ 70 ಕಿಲೋಮೀಟರ್ ವೇಗದಲ್ಲಿ ಈ ಚಂಡಮಾರುತ ಬೀಸಲಿದೆ……….

ಉಡುಪಿ: ಕರ್ನಾಟಕಕ್ಕೆ ಮಾನ್ಸೂನ್ ಅಪ್ಪಳಿಸುವ ಮೊದಲೇ ‘ನಿಸರ್ಗ’ ಚಂಡಮಾರುತ ಅಬ್ಬರಿಸಲು ಸಿದ್ಧವಾಗಿದೆ. ಏಳು ವರ್ಷದ ಬಳಿಕ ಅರಬ್ಬಿ ಸಮುದ್ರದಲ್ಲಿ ಒಂದು ಶಕ್ತಿಶಾಲಿ ಚಂಡಮಾರುತ ಬೀಸಲಿದೆ. ಅರಬ್ಬಿ ಕಡಲ ತೀರದಲ್ಲಿ ಹುಟ್ಟುವ ಈ ಚಂಡಮಾರುತ ಸಮುದ್ರದ ತೀರದಲ್ಲಿರುವ ಎಲ್ಲಾ ರಾಜ್ಯಗಳಲ್ಲಿ ಮಳೆ ತರಲಿದೆ. ಕರ್ನಾಟಕ ಕರಾವಳಿಯಲ್ಲಿ 60 ರಿಂದ 70 ಕಿಲೋಮೀಟರ್ ವೇಗದಲ್ಲಿ ಈ ಚಂಡಮಾರುತ ಬೀಸಲಿದೆ. ದಕ್ಷಿಣ ಮತ್ತು ಉತ್ತರ ಭಾರತಕ್ಕೆ ಇದು ಸಂಚಾರ ಮಾಡಲಿದೆ ಎಂದು ಹವಾಮಾನ ಇಲಾಖೆ …

Read More »

ಉಡುಪಿಯ ಕ್ಯಾಬಿನೆಟ್ ದರ್ಜೆಯ ಜಿಲ್ಲಾಪಂಚಾಯತ್ ಅಧ್ಯಕ್ಷರನ್ನು ಇದೇ ಕೊರೊನಾ ಕಂಡಕ್ಟರ್ ಮಾಡಿದೆ.

ಉಡುಪಿ: ಕಿಡಿಗೇಡಿ ಕೊರೊನಾ ವಿಶ್ವದಲ್ಲಿ ಏನೇನೋ ಅವಾಂತರ ಸೃಷ್ಟಿ ಮಾಡಿದೆ. ಉಡುಪಿಯ ಕ್ಯಾಬಿನೆಟ್ ದರ್ಜೆಯ ಜಿಲ್ಲಾಪಂಚಾಯತ್ ಅಧ್ಯಕ್ಷರನ್ನು ಇದೇ ಕೊರೊನಾ ಕಂಡಕ್ಟರ್ ಮಾಡಿದೆ. ಉಡುಪಿ ಜಿಲ್ಲಾಪಂಚಾಯತ್ ಅಧ್ಯಕ್ಷ ದಿನಕರ್ ಬಾಬು ಉಡುಪಿ ನಗರದಲ್ಲಿ ಸಿಟಿ ಬಸ್ಸಿನಲ್ಲಿ ಕಂಡಕ್ಟರ್ ಆಗಿ ರೈಟ್ ರೈಟ್ ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಶಾಸಕ ರಘುಪತಿ ಭಟ್ ನೇತೃತ್ವದ ಕಡಿಯಾಳಿ ಗಣೇಶೋತ್ಸವ ಸಮಿತಿ ಖಾಸಗಿ ಬಸ್ ಮಾಲೀಕರೊಂದಿಗೆ ಸೇರಿ ಏಳು ದಿನಗಳ ಕಾಲ ಉಚಿತ ಬಸ್ …

Read More »

ಆರ್‌ಎಸ್‌ಐ ನೇಣಿಗೆ ಶರಣು- ವಿಪರೀತ ಹೊಟ್ಟೆ, ತಲೆ ನೋವಿನಿಂದ ಆತ್ಮಹತ್ಯೆ ಶಂಕೆ

ಉಡುಪಿ: ಸಶಸ್ತ್ರ ಮೀಸಲುಪಡೆಯ ಆರ್‌ಎಸ್‌ಐ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ಸಶಸ್ತ್ರ ಮೀಸಲು ಪಡೆಯ ಆರ್‌ಎಸ್‌ಐ ಆಗಿದ್ದ ಕಲಬುರಗಿಯ ನೌರುಗಂಜ್ ನಿವಾಸಿ ಮಲ್ಲಿಕಾರ್ಜುನ್ ಗುಬ್ಬಿ (56) ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಅಧಿಕಾರಿ. ಮಲ್ಲಿಕಾರ್ಜುನ ಗುಬ್ಬಿ ಮೂಲತಃ ಕಲಬುರಗಿಯವರಾಗಿದ್ದು, ಉಡುಪಿ ಜಿಲ್ಲೆಯ ನಕ್ಸಲ್ ಬಾಧಿತ ಅಮಾಸೆಬೈಲು ಠಾಣಾ ಭದ್ರತೆಗಾಗಿ ನಿಯೋಜನೆಗೊಂಡಿದ್ದರು. ಸುಮಾರು 29 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಮಲ್ಲಿಕಾರ್ಜುನ, ಕಳೆದ ಮೂರು ತಿಂಗಳ ಹಿಂದಷ್ಟೇ ಕೊಪ್ಪಳ ಜಿಲ್ಲೆಯ …

Read More »