Breaking News

ಕಲಬುರ್ಗಿ

ತೈಲ ಬೆಲೆ‌ ಏರಿಕೆಗೆ ಸಮರ್ಥನೆ; ಅಕ್ಷರ ಆವಿಷ್ಕಾರಕ್ಕೆ ಬಿ.ಆರ್ ಪಾಟೀಲ ಅಪಸ್ವರ

ಕಲಬುರಗಿ: ರಾಜ್ಯ ಸರಕಾರ ಪೆಟ್ರೋಲ್, ಡಿಸೆಲ್ ದರ ಏರಿಕೆ ಮಾಡಿರುವುದನ್ನು ಸಮರ್ಥಿಸಿಕೊಂಡಿರುವ ಮುಖ್ಯಮಂತ್ರಿಗಳ ಸಲಹೆಗಾರರು ಹಾಗೂ ಆಳಂದ ಶಾಸಕ ಬಿ.ಆರ್. ಪಾಟೀಲ್, ಕಲ್ಯಾಣ ಕರ್ನಾಟಕವು ಸೇರಿದಂತೆ ರಾಜ್ಯದಲ್ಲಿ ಜಾರಿಗೆ ತರಲಾಗುತ್ತಿರುವ ಅಕ್ಷರ ಆವಿಷ್ಕಾರ ಯೋಜನೆಯ ಕುರಿತು ಅಪಸ್ವರ ಎತ್ತಿದ್ದಾರೆ. ನಗರದಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಯೋಜನೆ ಕಲ್ಯಾಣ ಕರ್ನಾಟಕದ 800ಕ್ಕೂ ಹೆಚ್ಚು ಶಾಲೆಗಳಲ್ಲಿ ಜಾರಿಗೆ ತರುತ್ತಿರುವುದು ನಮಗೆ ಗೊತ್ತಿಲ್ಲ. ಅದೂ ಅಲ್ಲದೆ ಬಹುತೇಕ ಶಾಸಕರಿಗೂ ಈ ವಿಷಯ …

Read More »

ಯಡಿಯೂರಪ್ಪ ಲಿಂಗಾಯತನೇ ಅಲ್ಲ,ಬಿಜೆಪಿ ಅಭ್ಯರ್ಥಿಗಳನ್ನ ಸೋಲಿಸುವುದು ಅಪ್ಪ, ಮಗನ ದಂಧೆ: ಯತ್ನಾಳ್

ಕಲಬುರಗಿ: ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸುವುದು ಮಾಜಿ ಸಿಎಂ ಯಡಿಯೂರಪ್ಪ (B.S Yediyurappa) ಹಾಗೂ ಅವರ ಮಗ ಬಿ.ವೈ ವಿಜಯೇಂದ್ರ (B.Y Vijayendra) ಅವರ ದಂಧೆಯಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ  (Lok Sabha Elections 2024) ಹಾಲಿ ಮೂವರು ಸಂಸದರಿಗೆ ಟಿಕೆಟ್ ಕೈ ತಪ್ಪುವ ವಿಚಾರಕ್ಕೆ ಪ್ರತಿಕ್ರಿಯಿಸಿದ್ದಾರೆ. ಪೂಜ್ಯ ತಂದೆ – ಮಗ ಇಬ್ಬರೂ …

Read More »

ಸಿಎಂ ಬೊಮ್ಮಾಯಿ ಭರ್ಜರಿ ಪ್ರಚಾರ: ಅಭ್ಯರ್ಥಿಗಳ ಪರ ಮತಬೇಟೆ

ಕಲಬುರಗಿ ಹಾಗೂ ಯಾದಗಿರಿಯಲ್ಲಿ ಸಿಎಂ ಬೊಮ್ಮಾಯಿ ಶುಕ್ರವಾರ ಅದ್ಧೂರಿ ರೋಡ್ ಶೋ ನಡೆಸಿದರು. ಅಭ್ಯರ್ಥಿಗಳಾದ ತೆಲ್ಕೂರ ಹಾಗೂ ಅಮೀನರೆಡ್ಡಿ ಪರವಾಗಿ ಮತಯಾಚನೆ ಮಾಡಿದರು.ಕಲಬುರಗಿ/ಯಾದಗಿರಿ: ‘ಮೋದಿ ಎಂದರೆ ವಿಷವನ್ನು ನುಂಗಿ ಇಡೀ ದೇಶದ ಹಿತ ಬಯಸುವ ನೀಲಕಂಠನಿದ್ದಂತೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಣ್ಣಿಸಿದರು. ಶುಕ್ರವಾರ ಸೇಡಂ ಪಟ್ಟಣದಲ್ಲಿ ಅಭ್ಯರ್ಥಿ ರಾಜಕುಮಾರ್​ ಪಾಟೀಲ್ ತೆಲ್ಕೂರ ಪರವಾಗಿ ಬೃಹತ್ ರೋಡ್ ಶೋ ಮೂಲಕ ಮತಯಾಚಿಸಿದರು. ಈ ವೇಳೆ ಮಾತನಾಡಿದ ಅವರು ಕಾಂಗ್ರೆಸ್ ನಾಯಕರ …

Read More »

ಯಾದಗಿರಿ, ಕಲಬುರಗಿಗೆ ಇಂದು ಪ್ರಧಾನಿ ಮೋದಿ ಭೇಟಿ

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ (ಜ.19) ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗೆ ಭೇಟಿ ನೀಡಿ, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ಕೊಡೆಕಲ್‌ಗೆ ಮಧ್ಯಾಹ್ನ 12ಕ್ಕೆ ಆಗಮಿಸುವರು. ನಾರಾಯಣಪುರ ಎಡದಂಡೆ ಕಾಲುವೆ ಜಾಲದ ವಿಸ್ತರಣೆ ನವೀಕರಣ ಮತ್ತು ಆಧುನಿಕ ಕಾಮಗಾರಿ ಲೋಕಾರ್ಪಣೆ, ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ ಮತ್ತು ಸೂರತ್‌-ಚೆನ್ನೈ ಎಕ್ಸ್‌ಪ್ರೆಸ್‌ ವೇ ಪ್ಯಾಕೇಜ್‌-3 ಕಾಮಗಾರಿ ಶಂಕುಸ್ಥಾಪನಾ ಸಮಾರಂಭದಲ್ಲಿ ಭಾಗವಹಿಸುವರು. ‌ ಕಲಬುರಗಿ ಜಿಲ್ಲೆಯ …

Read More »

ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ಆಗ್ರಹಿಸಿ ಪ್ರತ್ಯೇಕ ರಾಜ್ಯ ಧ್ವಜಾರೋಹಣ; ಬಿಗಿ ಪೊಲೀಸ್ ಬಂದೋಬಸ್ತ್

ಒಂದೆಡೆ ಕಲಬುರಗಿಯಲ್ಲಿ ಪ್ರತ್ಯೇಕ ಕಲ್ಯಾಣ ಕರ್ನಾಟಕ ರಾಜ್ಯಕ್ಕಾಗಿ ಆಗ್ರಹಿಸಲಾಗುತ್ತಿದ್ದು, ಬೆಳಗಾವಿಯಲ್ಲಿ ರಾಜ್ಯೋತ್ಸವಕ್ಕೆ ವಿರುದ್ಧವಾಗಿ ನಾಡದ್ರೋಹಿ ಎಂಇಎಸ್‌ನಿಂದ ಕರಾಳ ದಿನಾಚರಣೆ ಆಚರಿಸುತ್ತಿದೆ. ಈ ಎಲ್ಲ ನಿಟ್ಟಿನಲ್ಲಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಕಲಬುರಗಿ: ಕನ್ನಡ ಮಾತನಾಡುವ ಪ್ರದೇಶಗಳು ಭೌಗೋಳಿಕವಾಗಿ ಒಂದುಗೂಡಿದ ಹೆಮ್ಮೆಯ ದಿನವಿಂದು. ನಾಡಿನ ಸಮಸ್ತ ಜನರು ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿದ್ದರೆ ಕಲಬುರಗಿಯಲ್ಲಿ ಪ್ರತ್ಯೇಕ ಕಲ್ಯಾಣ ರಾಜ್ಯಕ್ಕಾಗಿ ಆಗ್ರಹಿಸಲಾಗುತ್ತಿದೆ. ಮಾತ್ರವಲ್ಲದೆ ಇಂದು ಪ್ರತ್ಯೇಕ ರಾಜ್ಯ ಧ್ವಜಾರೋಹಣ ನಡೆಸಲು ಸಿದ್ಧತೆ ನಡೆಸಲಾಗುತ್ತಿದೆ, ಇನ್ನೊಂದೆಡೆ …

Read More »

ರಸ್ತೆ ಸುಸ್ಥಿತಿಯಲ್ಲಿದ್ದರೂ ಮತ್ತೆ ಡಾಂಬರೀಕರಣ!

ಕಲಬುರಗಿ: ನಗರದ ಹಲವು ಕಡೆ ರಸ್ತೆಗಳು ಹದಗೆಟ್ಟಿವೆ. ದುರಸ್ತಿ ಪ್ರಕ್ರಿಯೆ ನಡೆಯುತ್ತಿಲ್ಲ. ಆದರೆ, ಸುಸ್ಥಿತಿಯಲ್ಲಿರುವ ರಸ್ತೆ ಮೇಲೆಯೇ ಶನಿವಾರ ಡಾಂಬರು ಹಾಕಲಾಗಿದೆ. ಇದಕ್ಕಾಗಿ ಲೋಕೋಪಯೋಗಿ ಇಲಾಖೆ ₹ 1.25 ಕೋಟಿ ಖರ್ಚು ಮಾಡಿದೆ! ಹೊಸ ಆರ್‌ಟಿಒ ಕಚೇರಿಯ ಗೇಟ್‌ ಸಮೀಪದ ಕುಸನೂರ ರಸ್ತೆಯ 3 ಕಿ.ಮೀ. ಉದ್ದ ಡಾಂಬರ್ ಹಾಕಲಾಗಿದೆ. ಆದರೆ, ಇಡೀ ರಸ್ತೆಯಲ್ಲಿ ಸಣ್ಣ ಪುಟ್ಟ ತಗ್ಗು, ಸ್ಪೀಡ್ ಬ್ರೇಕರ್ ಹೊರತುಪಡಿಸಿ ರಸ್ತೆ ಸುಸ್ಥಿತಿಯಲ್ಲಿದೆ. ಆರ್‌ಟಿಒ ಕಚೇರಿ ಎದುರಿನ ಈ …

Read More »

ಮೊಬೈಲ್‌ ಕದ್ದು ಗೂಗಲ್‌ ಪೇ, ಫೋನ್‌ ಪೇ ಮೂಲಕ ಹಣ ದೋಚುತ್ತಿದ್ದ ಕದೀಮರು

ಕಲಬುರಗಿ: ಮೊಬೈಲ್‌ ಕಳ್ಳತನ ಮಾಡಿ ಫೋನ್‌ ಪೇ ಮತ್ತು ಗೂಗಲ್‌ ಪೇ ಮೂಲಕ ಹಣ ದೋಚುತ್ತಿದ್ದ ಇಬ್ಬರು ಅಂತಾರಾಜ್ಯ ಕಳ್ಳರನ್ನು ಸೆನ್‌ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು 22 ಮೊಬೈಲ್‌ ಗಳು, 3.50 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ತೆಲಂಗಾಣದ ಕಿರಣ್‌ ರಾಜು ಸಾತಪಾಟಿ ಮತ್ತು ಶಿವಾ ಅಲಿಯಾಸ್‌ ಶಿವಾಜಿ ವೆಂಕಟೇಶ ಉಪ್ಲಾ ಎಂದು ಗುರುತಿಸಲಾಗಿದೆ. ಇವರು ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ರಾಯಚೂರು ಮತ್ತು ಗದಗ ಜಿಲ್ಲೆಗಳಲ್ಲಿ …

Read More »

ಪಿಎಸ್‌ಐ ಅಕ್ರಮ: ಖಾಲಿ ಉತ್ತರ ಪತ್ರಿಕೆಯಲ್ಲಿ ಮಂಜುನಾಥ ಕರಾಮತ್ತು

ಕಲಬುರಗಿ: ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಶಾಮೀಲಾದ ಮಂಜುನಾಥ ಮೇಳಕುಂದಿ ಒಎಂಆರ್‌ ಉತ್ತರ ಪತ್ರಿಕೆಗಳನ್ನು ಪರೀಕ್ಷೆ ಮುಗಿದ ಕೆಲವೇ ನಿಮಿಷಗಳಲ್ಲಿ ಪರೀಕ್ಷಾ ಸಿಬ್ಬಂದಿಯಿಂದ ಭರ್ತಿ ಮಾಡಿಸುವ ಮೂಲಕ ಅಭ್ಯರ್ಥಿಗಳು ಉತ್ತೀರ್ಣರಾಗುವಂತೆ ನೋಡಿಕೊಳ್ಳುತ್ತಿದ್ದ. ಆ ನಂತರ ತನ್ನ ಪಾಲಿನ ಹಣ ಬರುವವರೆಗೂ ಉತ್ತರ ಪತ್ರಿಕೆಯ ಅಭ್ಯರ್ಥಿಗಳ (ಕ್ಯಾಂಡಿಡೇಟ್ ಕಾಪಿ) ಪ್ರತಿಯನ್ನು ತನ್ನ ಬಳಿಯೇ ಇಟ್ಟುಕೊಳ್ಳುತ್ತಿದ್ದ ಸಂಗತಿ ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ಹೊರಬಿದ್ದಿದೆ. ಪ‍್ರಕರಣದಲ್ಲಿ ಮೊಟ್ಟಮೊದಲು ಬಂಧನಕ್ಕೊಳಗಾದ ಅಭ್ಯರ್ಥಿ, ಸೇಡಂನ ವೀರೇಶನಿಗೆ …

Read More »

ಪಿಎಸ್‌ಐ ನೇಮಕಾತಿ ಅಕ್ರಮ: ಹೆದರಿಸಿ ₹10 ಲಕ್ಷ ವಸೂಲಿ ಮಾಡಿದ್ದ ಡಿವೈಎಸ್ಪಿ!

ಕಲಬುರಗಿ: ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಶಾಮೀಲಾದವರ ಮಾಹಿತಿ ಇದ್ದರೂ ಬಂಧಿಸುವುದನ್ನು ಬಿಟ್ಟು ₹80 ಲಕ್ಷಕ್ಕೆ ಬೇಡಿಕೆ ಇಟ್ಟು ಸಂಧಾನದ ಬಳಿಕ ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ ₹10 ಲಕ್ಷ ಪಡೆದಿದ್ದಾರೆ ಎಂದು ಸಿಐಡಿ ಅಧಿಕಾರಿಗಳು ಕೋರ್ಟ್‌ಗೆ ಸಲ್ಲಿಸಿದ ದೋಷಾರೋಪ ಪಟ್ಟಿಯಲ್ಲಿ ದಾಖಲಿಸಿದ್ದಾರೆ.   ‘ಅಕ್ರಮದ ಕಿಂಗ್‌ಪಿನ್ ಅಫಜಲ ಪುರದ ಆರ್.ಡಿ.ಪಾಟೀಲ ಸೂಚನೆ ಆಧರಿಸಿ ಇನ್ನಿಬ್ಬರು ಪ್ರಮುಖ ಆರೋಪಿಗಳಾದ ಮಂಜುನಾಥ ಮೇಳಕುಂದಿ ಹಾಗೂ ಜ್ಞಾನಜ್ಯೋತಿ ಇಂಗ್ಲಿಷ್ ಮಾಧ್ಯಮ ಶಾಲೆಯ ಮುಖ್ಯಶಿಕ್ಷಕ ಕಾಶಿನಾಥ ಚಿಳ್ಳ ಅವರಿಗೆ …

Read More »

ಪಿಎಸ್‌ಐ ಅಕ್ರಮದ ಕಿಂಗ್ ಪಿನ್: ಪರೋಕ್ಷವಾಗಿ ಸಿಎಂ ಬೊಮ್ಮಾಯಿ ಹೆಸರು ಉಲ್ಲೇಖ

ಕಲಬುರಗಿ, ಜುಲೈ 7: ಪಿಎಸ್‌ಐ ಅಕ್ರಮ ನೇಮಕಾತಿ ವಿಚಾರದಲ್ಲಿ ಎಡಿಜಿಪಿ ಅಮೃತ್ ಪಾಲ್ ಬಂಧನದ ನಂತರ, ವಿರೋಧ ಪಕ್ಷವಾದ ಕಾಂಗ್ರೆಸ್ ಆಡಳಿತ ಪಕ್ಷದ ವಿರುದ್ದ ವಾಗ್ದಾಳಿಯನ್ನು ಇನ್ನಷ್ಟು ತೀವ್ರಗೊಳಿಸಿದೆ. ಕಾಂಗ್ರೆಸ್ ನಾಯಕರು ಸತತ ಸುದ್ದಿಗೋಷ್ಠಿ ನಡೆಸಿ ಮಾಹಿತಿಯನ್ನು ಹೊರಹಾಕುತ್ತಿದ್ದಾರೆ.   ಈ ಭ್ರಷ್ಟಾಚಾರದಲ್ಲಿ ಸರಿಯಾದ ತನಿಖೆ ನಡೆದರೆ ಮುಖ್ಯಮಂತ್ರಿ ಬದಲಾವಣೆ ನಿಶ್ಚಿತ ಎಂದಿದ್ದ ಕಾಂಗ್ರೆಸ್ ನಾಯಕ ಮತ್ತು ಚಿತ್ತಾಪುರ ಕ್ಷೇತ್ರದ ಶಾಸಕರೂ ಆಗಿರುವ ಪ್ರಿಯಾಂಕ್ ಖರ್ಗೆ, ಪರೋಕ್ಷವಾಗಿ ಈ ಅಕ್ರಮದ …

Read More »