Breaking News
Home / ಜಿಲ್ಲೆ / ಕೊಡಗು (page 3)

ಕೊಡಗು

ಕೊಡಗಿನಲ್ಲಿ ಸಂಚಾರಕ್ಕೆ ಅವಕಾಶ ನೀಡಿದರೂ ರಸ್ತೆಗಿಳಿಯದ ಖಾಸಗಿ ಬಸ್‍ಗಳು

ಮಡಿಕೇರಿ: ಲಾಕ್‍ಡೌನ್ ಕಟ್ಟುನಿಟ್ಟಾಗಿ ಪಾಲಿಸಲು ಸಾರಿಗೆ ಸಂಚಾರವನ್ನೂ ಬಂದ್ ಮಾಡಲಾಗಿತ್ತು. ಆದರೆ ಕೊಡಗು ಜಿಲ್ಲೆ ಗ್ರೀನ್ ಝೋನ್ ಆಗಿರುವುದರಿಂದ ಸರ್ಕಾರದ ನಿರ್ದೇಶನದಂತೆ 43 ದಿನಗಳ ಬಳಿಕ ಜಿಲ್ಲೆಯಲ್ಲಿ ಸಾರ್ವಜನಿಕ ಸಾರಿಗೆಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಆದರೆ ಬೆರಳೆಣಿಕೆಯಷ್ಟು ಕೆಎಸ್‍ಆರ್ ಟಿಸಿ ಬಸ್ ಗಳು ಮಾತ್ರ ರಸ್ತೆಗಿಳಿದಿದ್ದು, ಖಾಸಗಿ ಬಸ್ ಸಂಚಾರ ಇರಲಿಲ್ಲ. ಸಾರ್ವಜನಿಕರ ಸಾರಿಗೆ ಸಂಚಾರಕ್ಕೆ ಕೊಡಗು ಜಿಲ್ಲಾಡಳಿತ ಅವಕಾಶ ನೀಡಿದ್ದರೂ, ಕೊಡಗಿನ ಪ್ರತಿ ಹಳ್ಳಿಗೆ ಸಂಪರ್ಕ ಸೇತುವೆಯಾಗಿರುವ ಖಾಸಗಿ …

Read More »

ಕೊಡಗು ಜಿಲ್ಲೆಯಲ್ಲಿ ಲಾಕ್‍ಡೌನ್ ಸಡಿಲಿಕೆ- ವಾಹನ ಸಂಚಾರ ಆರಂಭ………

ಮಡಿಕೇರಿ: ಜಿಲ್ಲೆಯಲ್ಲಿ ವಿಧಿಸಿದ್ದ ಲಾಕ್‍ಡೌನ್ ಸಡಿಲಗೊಳಿಸಲಾಗಿದ್ದು, ವಾರದ ಎಲ್ಲ ದಿನಗಳೂ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಹಾಗೂ ವಾಹನ ಸಂಚಾರಕ್ಕೆ ಮುಕ್ತ ಅವಕಾಶ ನೀಡಲಾಗಿದೆ. ಈ ಹಿನ್ನೆಲೆ ವಾಹನಗಳು ರಸ್ತೆಗಿಳಿಯುತ್ತಿವೆ. ಈ ಸಂಬಂಧ ಮಾಹಿತಿ ನೀಡಿದ್ದ ಜಿಲ್ಲಾಡಳಿತ, ಬೆಳಗ್ಗೆ 7 ರಿಂದ ಸಂಜೆ 5 ರವರೆಗೆ ಅಂಗಡಿ-ಮುಂಗಟ್ಟುಗಳನ್ನು ತೆರೆಯಬಹುದು. ಬುಧವಾರದಿಂದ ಜಿಲ್ಲೆಯಲ್ಲಿ ಬೆಳಗ್ಗೆ 7 ರಿಂದ ಸಂಜೆ 7 ಗಂಟೆವರೆಗೆ ಜಿಲ್ಲೆಯ ಒಳಗೆ ಮಾತ್ರವೇ ಸಂಚರಿಸಲು ಅವಕಾಶ ನೀಡಿದೆ. ಸರ್ಕಾರಿ ಹಾಗೂ …

Read More »

ಕೊಡಗಿನಲ್ಲಿ ಲಾಕ್‍ಡೌನ್ ಸಡಿಲಿಕೆ ಇಲ್ಲ,ಮದ್ಯಮಾರಾಟಕ್ಕೆ ಅವಕಾಶ ಇಲ್ಲ,?

ಮಡಿಕೇರಿ: ಮೇ 4ರಿಂದ ಗ್ರೀನ್ ಝೋನ್ ಗಳಲ್ಲಿ ಲಾಕ್ ಡೌನ್ ಸಂಪೂರ್ಣ ಸಡಿಲಿಕೆ ಆಗುತ್ತದೆ ಎನ್ನುವ ನಿರೀಕ್ಷೆಯಲ್ಲಿದ್ದ ಕೊಡಗಿನ ಜನರಿಗೆ ನಿರಾಸೆಯಾಗಿದೆ. ಕೊಡಗು ಜಿಲ್ಲೆಯಲ್ಲಿ ಎಂದಿನಂತೆ ಲಾಕ್ ಡೌನ್ ಮುಂದುವರೆಸುವುದಾಗಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ. ಲಾಕ್‍ಡೌನ್ ಸಡಿಲಿಕೆ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಗೆ ಮೂರುವರೆಯಿಂದ ನಾಲ್ಕು ಸಾವಿರ ಜನ ಹೊರ ಜಿಲ್ಲೆ ಮತ್ತು ರಾಜ್ಯಗಳಿಂದ ಬರುವ ನಿರೀಕ್ಷೆ ಇದೆ. ಹೀಗಾಗಿ ಲಾಕ್‍ಡೌನ್ ಮುಂದುವರಿಸಲು ಚಿಂತನೆ ನಡೆಸಲಾಗಿದೆ. …

Read More »

ಕೊಡಗು ಜಿಲ್ಲೆಯಲ್ಲಿ ಗುಡುಗು, ಸಿಡಿಲು, ಬಿರುಗಾಳಿ ಸಹಿತ ಭಾರೀ ಮಳೆ……….

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಗುಡುಗು, ಸಿಡಿಲು, ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು, ಬಿರುಗಾಳಿಯ ರಭಸಕ್ಕೆ ಮನೆಗಳ ಛಾವಣಿ ಹಾಗೂ ಹೆಂಚುಗಳು ಹಾರಿವೆ. ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಹೋಬಳಿಯಾದ್ಯಂತ ಭಾನುವಾರ ಸಂಜೆ ಭಾರೀ ಮಳೆ ಸುರಿದಿದ್ದು, ಬಿರುಗಾಳಿ ಸಹಿತ ಮಳೆಗೆ ಜನ ತತ್ತರಿಸಿ ಹೋಗಿದ್ದಾರೆ. ಸಂಜೆ ಗುಡುಗು ಸಹಿತ ಪ್ರಾರಂಭವಾದ ಬಿರುಗಾಳಿ ಮಳೆಗೆ ಶನಿವಾರಸಂತೆ ಸಮೀಪದ ಅಪ್ಪಶೆಟ್ಟಳ್ಳಿ, ದೊಡ್ಡ ಬಿಳಾಹ, ಗಸುಳುಗಳಲೆ ಕಾಲೋನಿ ಹಾಗೂ ಚಿನ್ನಳ್ಳಿ ಗ್ರಾಮಗಳ ಹಲವು ಮನೆಗಳ ಮೇಲ್ಛಾವಣಿ, …

Read More »

ಕೊರೊನಾ ಮಹಾಮಾರಿ ಬಡವರು, ಕೂಲಿಕಾರ್ಮಿಕರನ್ನು ಕಣ್ಣೀರಿನಲ್ಲಿ ಕೈತೊಳೆಯುವಂತೆ ಮಾಡಿದೆ.

ಮಡಿಕೇರಿ: ಕೊರೊನಾ ಮಹಾಮಾರಿ ಬಡವರು, ಕೂಲಿಕಾರ್ಮಿಕರನ್ನು ಕಣ್ಣೀರಿನಲ್ಲಿ ಕೈತೊಳೆಯುವಂತೆ ಮಾಡಿದ್ದು, ಲಾಕ್‍ಡೌನ್ ಆಗಿರುವುದರಿಂದ ಕೂಲಿ ಕೆಲಸ ಇಲ್ಲದೆ ಗಂಜಿ ಕುಡಿದು ಬದುಕು ದೂಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಹಂಚಿತ್ತಿಟ್ಟು ಗ್ರಾಮದಲ್ಲಿ ಇಂತಹ ಮನಕಲಕುವ ಸ್ಥಿತಿ ಇದ್ದು, ಮಹಿಳೆ ಶಾಂತಮ್ಮ, ಬೆನ್ನು ಮೂಳೆ ಮುರಿದುಕೊಂಡು 13 ವರ್ಷದಿಂದ ಹಾಸಿಗೆ ಹಿಡಿದಿರುವ ಮಗನನ್ನು ಸಾಕುತ್ತಿದ್ದಾರೆ. ಕೂಲಿ ಮಾಡುತ್ತಿದ್ದ ಶಾಂತಮ್ಮ ಅದೇ ಹಣದಿಂದ ತನ್ನ ಮಗ ವಿಠಲನಿಗೆ ಮಂಗಳೂರಿನ ವೆನ್‍ಲಾಕ್ …

Read More »

ಬೇಸರವಾಗಿದೆ ಎಂದು ಮೀನು ಹಿಡಿಯಲು ಹೋದವರಿಗೆ ಆಶ್ಚರ್ಯ ಕಾದಿತ್ತು. ……

ಮಡಿಕೇರಿ: ಬೇಸರವಾಗಿದೆ ಎಂದು ಮೀನು ಹಿಡಿಯಲು ಹೋದವರಿಗೆ ಆಶ್ಚರ್ಯ ಕಾದಿತ್ತು. ಗಾಳಕ್ಕೆ ದೊಡ್ಡ ಮೀನು ಬಿದ್ದಿದ್ದು, ಮೀನು ನೋಡಿ ಅಲ್ಲಿನ ಜನ ನಿಬ್ಬರಗಾಗಿದ್ದಾರೆ. ಕೊಡಗು ಜಿಲ್ಲೆಯ ಕುಶಾಲನಗರ ಸಮೀಪದ ಹಾರಂಗಿ ಜಲಾಶಯದ ಹಿನ್ನೀರಿಗೆ ಸಮೀಪವಿರುವ ನಾಕೂರು ಶಿರಂಗಾಲ ಗ್ರಾಮದ ಯುವಕರು ಟೈಂ ಪಾಸ್‍ಗಾಗಿ ಮೀನು ಹಿಡಿಯಲು ಹೋಗಿದ್ದಾರೆ. ಈ ವೇಳೆ ಹಿನ್ನೀರಿನಲ್ಲಿ ಗಾಳ ಹಾಕಿ ಕುಳಿತಿದ್ದಾರೆ. ಗಾಳವನ್ನು ಯಾರೋ ಮನುಷ್ಯರು ಎಳೆಯುತ್ತಿರುವಂತೆ ಬಾಸವಾಗಿದೆ. ಬಳಿಕ ಮೂವರು ಯುವಕರು ಸೇರಿ ನಿಧಾನವಾಗಿ …

Read More »

ಅಂದು ಕ್ಯಾಮೆರಾಮ್ಯಾನ್ ಇಂದು ಬೀದಿ ಬೀದಿಯಲ್ಲಿ ಹಣ್ಣು, ತರಕಾರಿ ಮಾರೋ ವ್ಯಾಪಾರಿ

ಮಡಿಕೇರಿ: ಕೊರೊನಾ ವಿಶ್ವದಾದ್ಯಂತ ತಲ್ಲಣ ಮೂಡಿಸಿದ್ದು, ಭಾರತ ಸೇರಿದಂತೆ ಹಲವು ರಾಷ್ಟ್ರಗಳನ್ನು ಲಾಕ್‍ಡೌನ್ ಮಾಡಲಾಗಿದೆ. ಈ ಪರಿಣಾಮ ಹಲವರ ಬದುಕು ಬೀದಿಗೆ ಬಂದಿದೆ. ವರ್ಷದಲ್ಲಿ 6 ತಿಂಗಳು ಮದುವೆ, ನಾಮಕರಣ, ಪ್ರೀವೆಡ್ಡಿಂಗ್ ಶೂಟ್ ಹೀಗೆ ಫೋಟೋ ಹಾಗೂ ವಿಡಿಯೋ ಮಾಡಿಕೊಂಡು ಜೀವನ ನಡೆಸುತ್ತಿದ್ದ ಹಲವು ಛಾಯಾಗ್ರಾಹಕರ ಕುಟುಂಬಗಳಿಗೆ ಕೊರೊನಾ ಲಾಕ್‍ಡೌನ್ ಎಫೆಕ್ಟ್ ತಟ್ಟಿದೆ. ಇದಕ್ಕೆ ಕೊಡಗು ಜಿಲ್ಲೆಯ ಛಾಯಾಗ್ರಾಹಕರು ಹೊರತಾಗಿಲ್ಲ. ಏಕಾಏಕಿ ದೇಶದಾದ್ಯಂತ ಲಾಕ್‍ಡೌನ್ ಘೊಷಿಸಿದ್ದರಿಂದ ಯಾವುದೇ ಮದುವೆ ಹಾಗೂ …

Read More »

ಕೊರೊನಾ ಮಹಾಮಾರಿ ಸೋಂಕಿತರನ್ನು ಬಲಿ ಪಡೆಯುತ್ತಿರುವುದರ ಜೊತೆಗೆ ಬಡವರ ಜೀವನವನ್ನು ತೀವ್ರ ಸಂಕಷ್ಟಕ್ಕೆ ದೂಡಿದೆ.

ಮಡಿಕೇರಿ: ಇಡೀ ವಿಶ್ವವನ್ನೇ ಆವರಿಸಿರುವ ಕೊರೊನಾ ಮಹಾಮಾರಿ ಸೋಂಕಿತರನ್ನು ಬಲಿ ಪಡೆಯುತ್ತಿರುವುದರ ಜೊತೆಗೆ ಬಡವರ ಜೀವನವನ್ನು ತೀವ್ರ ಸಂಕಷ್ಟಕ್ಕೆ ದೂಡಿದೆ. ಕೊಡಗು ಜಿಲ್ಲೆಯ ಕುಶಾಲನಗರದ ಕರಿಯಪ್ಪ ಬಡಾವಣೆ ವೃದ್ಧ ದಂಪತಿ ಕೊರೊನಾ ಲಾಕ್‍ಡೌನ್‍ನಿಂದ ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ವಿಲನ್ಸ್ ಮತ್ತು ಜಯಲಕ್ಷ್ಮಿ ದಂಪತಿ ಕನಿಷ್ಠ ಊಟಕ್ಕೂ ಗತಿ ಇಲ್ಲದೆ ಕಣ್ಣೀರು ಇಡುತ್ತಿದ್ದಾರೆ. ಕಳೆದ ನಾಲ್ಕು ತಿಂಗಳ ಹಿಂದೆ ಅಪಘಾತದಲ್ಲಿ ವಿಲನ್ಸ್ ಅವರ ಕಾಲು ಮುರಿದುಹೋಗಿತ್ತು. ಬಳಿಕ ಅಕ್ಕಪಕ್ಕದ ಮನೆಯವರಿಂದ 40 …

Read More »

ಕಳ್ಳಭಟ್ಟಿ ದಂಧೆ ವಿರುದ್ಧ 21 ಪ್ರಕರಣ ದಾಖಲು………

ಕಳ್ಳಭಟ್ಟಿ ತಯಾರಿಕೆಯಲ್ಲಿ ಕೊಳೆತ ಹಣ್ಣು, ಕೊಳೆತ ಬೆಲ್ಲ, ಬ್ಯಾಟರಿ ಸೆಲ್, ಯೂರಿಯಾ ಮತ್ತಿತರ ಆರೋಗ್ಯಕ್ಕೆ ಹಾನಿಕರವಾದ ಪದಾರ್ಥಗಳನ್ನು ಮಿಶ್ರಣ ಮಾಡುವ ಸಾಧ್ಯತೆಗಳಿದ್ದು, ಇದು ಪಾನಿಕರ ಆರೋಗ್ಯದ ಮೇಲೆ ದುಷ್ಪರಿಣಾಮವನ್ನುಂಟು ಮಾಡಿ ರೋಗ ನಿರೋಧಕ ಶಕ್ತಿ ಕುಂದಿಸಲಿದೆ.  ಮಡಿಕೇರಿ: ಜಿಲ್ಲೆಯಾದ್ಯಂತ ಕೋವಿಡ್-19 (Covid-19) ವೈರಸ್ ಸೋಂಕು ತಡೆಗಟ್ಟುವಿಕೆ ಮತ್ತು ನಿಯಂತ್ರಿಸುವಲ್ಲಿ ಜಿಲ್ಲೆಯಲ್ಲಿ ಈಗಾಗಲೇ ಮದ್ಯ ಮಾರಾಟ ನಿಷೇದಿಸಿದ್ದು, ಮದ್ಯ ಮಾರಾಟ ನಿಷೇದ ಅವಧಿಯನ್ನು ಮೇ 3ರವರೆಗೆ ವಿಸ್ತರಿಸಲಾಗಿದೆ ಎಂದು ಕೊಡಗು ಜಿಲ್ಲಾ ಅಬಕಾರಿ …

Read More »

ಹೆಸರನ್ನೇ ಹೇಳದೆ ಆಟೋ ಚಾಲಕರಿಗೆ ವೈದ್ಯರ ತಂಡದಿಂದ ಧನಸಹಾಯ

ಮಡಿಕೇರಿ: ಕೊರೊನಾ ಮಹಾಮಾರಿಯನ್ನು ನಿಯಂತ್ರಿಸಲು ದೇಶವನ್ನು ಲಾಕ್‍ಡೌನ್ ಮಾಡಿ ತಿಂಗಳು ಕಳೆಯುತ್ತಿದೆ. ಈ ನಡುವೆ ದುಡಿಮೆಯೂ ಇಲ್ಲದೆ ಆಟೋ ಚಾಲಕರ ಸ್ಥಿತಿಯೂ ಶೋಚನೀಯವಾಗಿದೆ. ಆಟೋಗಳನ್ನು ಬಾಡಿಗೆ ಪಡೆದು ದುಡಿಯುತ್ತಿದ್ದ ಚಾಲಕರ ಸ್ಥಿತಿಯಂತೂ ಇನ್ನೂ ಗಂಭೀರ. ಹೀಗಾಗಿಯೇ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಆಟೋ ಓಡಿಸಿಕೊಂಡು ಬದುಕು ನಡೆಸುತ್ತಿದ್ದ, 40 ಕ್ಕೂ ಹೆಚ್ಚು ಆಟೋ ಚಾಲಕರಿಗೆ ಹೆಸರನ್ನು ಹೇಳದ ಮೂವರು ವೈದ್ಯರ ತಂಡವೊಂದು ಆರ್ಥಿಕ ನೆರವು ನೀಡಿದೆ. ಪ್ರತೀ ಚಾಲಕರಿಗೆ 1 ಸಾವಿರ …

Read More »