Home / ಜಿಲ್ಲೆ / ಕೊಡಗು (page 4)

ಕೊಡಗು

ಕೊಡಗಿನ ಬಡವರ ಕಷ್ಟಕ್ಕೆ ಮಾಧ್ಯಮ ‘ಸ್ಪಂದನ’.

ಮಡಿಕೇರಿ: ಸಮಾಜದಲ್ಲಿ ಪತ್ರಕರ್ತರಿಂದ ಹೆಚ್ಚು ಪ್ರಚಾರಗಿಟ್ಟಿಸಿಕೊಳ್ಳುವವರೇ ಹೆಚ್ಚು. ಅದರಲ್ಲೂ ಈ ಲಾಕ್‍ಡೌನ್ ಸಮಯದಲ್ಲಿ ಬಡ ಜನರಿಗೆ ಸೇವೆ ಮಾಡುವ ಅನೇಕ ಸಂಘ ಸಂಸ್ಥೆಗಳು ಮಾಧ್ಯಮದವರು ಹಾಗೂ ಪತ್ರಕರ್ತರನ್ನು ಕರೆದುಕೊಂಡು ಹೋಗಿ ಪ್ರಚಾರ ಪಡೆದುಕೊಳ್ಳುತ್ತಾರೆ. ಪ್ರಚಾರ ಕೊಡುವ ಪತ್ರಕರ್ತರೇ ಯಾರಿಗೂ ತಿಳಿಯದಂತೆ ಸಂಕಷ್ಟದಲ್ಲಿ ಇರುವವರಿಗೆ ಮಾಧ್ಯಮ ಸ್ಪಂದನ ತಂಡ ಕಟ್ಟಿಕೊಂಡು ಜಿಲ್ಲೆಯ ವಿವಿಧೆಡೆ ತಮ್ಮ ಕೈಯಿಂದ ಆಗುವ ಸಹಾಯವನ್ನು ಮಾಡುತ್ತಿದ್ದಾರೆ. ಹೌದು, ಕೊಡಗಿನಲ್ಲಿ ಹಲವಾರು ಬಡ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದ್ದು, ಊಟದ …

Read More »

ಕೊರೊನಾ ಶಂಕಿತ ವೃದ್ಧ ಆಸ್ಪತ್ರೆಯಿಂದ ಎಸ್ಕೇಪ್ ಆಗಲು ಯತ್ನ……

ಮಡಿಕೇರಿ: ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊರೊನಾ ಶಂಕಿತ ವೃದ್ಧ ರೋಗಿಯೊಬ್ಬ ಎಸ್ಕೇಪ್ ಆಗಲು ಯತ್ನಿಸಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಕೇರಳದ ವಯನಾಡಿನ 70 ವರ್ಷದ ವೃದ್ಧನಿಗೆ ಕೊರೊನಾ ಸೋಂಕು ಶಂಕೆಯ ಆಧಾರದಲ್ಲಿ ಕೋವಿಡ್ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಈ ವೃದ್ಧ ಆಸ್ಪತ್ರೆಯಿಂದ ಹೊರಬಂದು ಎಸ್ಕೇಪ್ ಆಗಲು ಪ್ರಯತ್ನಿಸಿದ್ದಾನೆ. ಇದರಿಂದ ಆಸ್ಪತ್ರೆ ಸಿಬ್ಬಂದಿ ಒಂದು ಕ್ಷಣಕ್ಕೆ ದಿಗ್ಭ್ರಮೆಗೊಂಡಿದ್ದಾರೆ. ತಕ್ಷಣವೇ ಎಚ್ಚೆತ್ತುಕೊಂಡ ನರ್ಸ್ ಹಾಗೂ ಸ್ವಚ್ಛತಾ ಸಿಬ್ಬಂದಿ …

Read More »

ಅಕ್ರಮ ಮದ್ಯ ಮಾರಾಟ ಪರಿಶೀಲನೆ- ಬೀದಿಯಲ್ಲೇ ಬಡಿದಾಡಿಕೊಂಡ ಅಬಕಾರಿ ಪೊಲೀಸರು

ಮಡಿಕೇರಿ: ಅಕ್ರಮ ಮದ್ಯ ಮಾರಾಟ ಪರಿಶೀಲನೆ ಮಾಡಲು ಹೋಗಿದ್ದ ಅಬಕಾರಿ ಪೊಲೀಸರು ಅಶ್ಲೀಲ ಪದಗಳಿಂದ ಒಬ್ಬರನೊಬ್ಬರು ನಿಂದಿಸಿ, ನಡು ಬೀದಿಯಲ್ಲೇ ಬಡಿದಾಡಿಕೊಂಡಿದ್ದಾರೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ಅಬಕಾರಿ ಇನ್ಸ್ ಪೆಕ್ಟರ್ ನಟರಾಜ್ ಮತ್ತು ಉಪ ಅಧೀಕ್ಷಕ ಶಿವಪ್ಪ ನಡುಬೀದಿಯಲ್ಲೇ ಹೊಡೆದಾಡಿಕೊಂಡಿದ್ದಾರೆ. ಲಾಕ್‍ಡೌನ್ ಆಗಿರುವುದರಿಂದ ಎಲ್ಲಿಯೂ ಮದ್ಯ ಮಾರುವಂತಿಲ್ಲ. ಹೀಗಾಗಿ ಗ್ರಾಮೀಣ ಭಾಗದ ಜನರು ಕಳ್ಳಬಟ್ಟಿ, ಅಕ್ರಮ ಮದ್ಯ ಮಾರಾಟಕ್ಕೆ ಮುಂದಾಗಿದ್ದಾರೆ ಎನ್ನುವ ಆರೋಪಗಳು ಕೇಳಿಬಂದಿವೆ. ಹೀಗಾಗಿ ಉಪ ಅಧೀಕ್ಷಕ ಶಿವಪ್ಪ …

Read More »

ಲಾಕ್‍ಡೌನ್ ಉಲ್ಲಂಘಿಸಿ ಪ್ರವಾಸ- ರೆಸಾರ್ಟಿನಲ್ಲಿ ಮೋಜು, ಮಸ್ತಿ

ಮಡಿಕೇರಿ: ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನಲ್ಲಿ ಲಾಕ್‍ಡೌನ್ ಉಲ್ಲಂಘಿಸಿ ಕೆಲ ವ್ಯಕ್ತಿಗಳು ಪ್ರವಾಸ ಕೈಗೊಂಡಿದ್ದು, ರೆಸಾರ್ಟಿನಲ್ಲಿ ಮೋಜು ಮಸ್ತಿ ನಡೆಸಿದ್ದಾರೆ. ಹೆಮ್ಮಾರಿ ಕೊರೊನಾ ವೈರಸ್ ನಿಯಂತ್ರಿಸಲು ದೇಶವನ್ನು ಲಾಕ್‍ಡೌನ್ ಮಾಡಿ ಜನರು ಮನೆಯಲ್ಲಿರುವಂತೆ ಕೇಂದ್ರ ಸರ್ಕಾರ ಮನವಿ ಮಾಡಿಕೊಂಡಿದೆ. ವೈದ್ಯರು, ಪೊಲೀಸರು ಹಗಲು ರಾತ್ರಿ ಎನ್ನದೆ ತಮ್ಮ ಪ್ರಾಣವನ್ನು ಲೆಕ್ಕಿಸದೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದರೆ ಬೆಂಗಳೂರಿನ ಜನರಿಗೆ ಮಾತ್ರ ಇದೆಲ್ಲಕ್ಕಿಂತ ಮೋಜು ಮಸ್ತಿ ಪ್ರವಾಸವೇ ಮುಖ್ಯವಾಗಿದೆ. ಇಂತಹ ಪರಿಸ್ಥಿತಿಯಲ್ಲಿಯೂ ಕೆಲ …

Read More »

ಮಡಿಕೇರಿ:ಜಾನುವಾರುಗಳನ್ನು ಖರೀದಿಸಿ, ಮಾರಾಟ ಮಾಡ್ತಿದ್ದ ವ್ಯಾಪಾರಿ ಕಾಫಿ ತೋಟದಲ್ಲಿ ಹೆಣವಾಗಿ ಪತ್ತೆ

ಮಡಿಕೇರಿ: ಹಳ್ಳಿ, ಹಳ್ಳಿಗಳನ್ನು ಸುತ್ತುತ್ತಾ ಜಾನುವಾರುಗಳನ್ನು ಖರೀದಿಸಿ, ಮಾರಾಟ ಮಾಡ್ತಿದ್ದ ವ್ಯಾಪಾರಿಯೊಬ್ಬರು ಕಾಫಿ ತೋಟವೊಂದರಲ್ಲಿ ಹೆಣವಾಗಿ ಪತ್ತೆಯಾಗಿದ್ದಾರೆ. ಒಂದು ವಾರದ ಬಳಿಕ ವ್ಯಾಪಾರಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕೊಳತ್ತೂರಿನಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ. ಬೆಟೋಳಿ ಗ್ರಾಮದ ನಿವಾಸಿ ಮೂಸಾ(65) ಮೃತ ದುರ್ದೈವಿ. ಮೂಸಾ ಏಪ್ರಿಲ್ 7ರಂದು ಆಪ್ತರೊಬ್ಬರ ಬಳಿ ಹಣ ಪಡೆದು ಸಮೀಪದ ಕೋಲ್ಕೋಡು ಗ್ರಾಮಕ್ಕೆ ದನದ ವ್ಯಾಪಾರಕ್ಕೆ ಹೋಗಿದ್ದರು. ಅಲ್ಲಿ …

Read More »

ಮಡಿಕೇರಿ: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಭಾಗವಹಿಸುವ ದುಬಾರೆ ಸಾಕಾನೆ ಶಿಬಿರಕ್ಕೂ ಲಾಕ್‍ಡೌನ್ ಎಫೆಕ್ಟ್

ಮಡಿಕೇರಿ: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಭಾಗವಹಿಸುವ ದುಬಾರೆ ಸಾಕಾನೆ ಶಿಬಿರಕ್ಕೂ ಲಾಕ್‍ಡೌನ್ ಎಫೆಕ್ಟ್ ತಟ್ಟಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ದುಬಾರೆ ಸಾಕಾನೆ ಶಿಬಿರದಲ್ಲಿ ಆನೆಗಳ ಪರಿಸ್ಥಿತಿ ಸಾಕಾನೆಗಳ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎನ್ನುವಂತೆ ಆಗಿದೆ. ಶಿಬಿರದಲ್ಲಿರುವ ಆನೆಗಳಿಗೆ ಹೊಟ್ಟೆ ತುಂಬಾ ಆಹಾರ ಬಳಲುತ್ತಿವೆ. ಲಾಕ್‍ಡೌನ್ ಹಿನ್ನೆಲೆ ಆಹಾರ ಪೂರೈಕೆಯಾಗಿಲ್ಲ. ಆನೆಗಳಿಗೆ ಪ್ರತಿದಿನ ಆಹಾರ ನೀಡುತ್ತಿದ್ದ ಭತ್ತದ ಹುಲ್ಲು, ಬೆಲ್ಲದ ಕೊರತೆ ಉಂಟಾಗಿದೆ. ಮಾವುತರು, ಕಾವಡಿಗರಿಗೂ ಅಗತ್ಯ ವಸ್ತುಗಳ ಕೊರತೆಯಾಗಿದೆ. …

Read More »

ಕೊರೊನಾ ಆತಂಕ ಮಧ್ಯೆ ಕೊಡಗು, ಹಾಸನದಲ್ಲಿ ಲಘು ಭೂಕಂಪನ

ಹಾಸನ/ಕೊಡಗು: ಕೊರೊನಾ ಆತಂಕದ ನಡುವೆ ಕೊಡಗು ಮತ್ತು ಹಾಸನ ಜಿಲ್ಲೆಯ ಕೆಲವು ಭಾಗಗಳಲ್ಲಿ ಭೂಮಿ ಕಂಪಿಸಿರುವ ಅನುಭವವಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕೆಲವೆಡೆ ಭೂಮಿ ಕಂಪಿಸಿದ ಅನುಭವವಾಗಿ ಜನ ಭಯಭೀತರಾಗಿದ್ದಾರೆ. ಕಾಳೇನಹಳ್ಳಿ, ಗರುಡನಹಳ್ಳಿ ಸುತ್ತಮುತ್ತಲಿನ ಗ್ರಾಮದಲ್ಲಿ ಭೂಮಿ ಕಂಪನದ ಅನುಭವವಾಗಿದೆ. ಇಂದು ಸಂಜೆ 5.20ರ ಸಮಯದಲ್ಲಿ ಭೂಮಿ ಕಂಪಿಸಿ ನಡುಗಿದ ಅನುಭವವಾಗಿದ್ದು, ಬೆಚ್ಚಿಬಿದ್ದ ಜನ ಮನೆಯಿಂದ ಹೊರ ಓಡಿ ಬಂದಿದ್ದಾರೆ. ಕೊಡಗು ಜಿಲ್ಲೆಯ ಕುಶಾಲನಗರ, ಕೂಡಿಗೆ, ಹೆಬ್ಬಾಲೆ ಸೇರಿದಂತೆ …

Read More »

ದುಬೈನಿಂದ ಹಿಂದಿರುಗಿದ ಕೊಡಗು ಮೂಲದ ವ್ಯಕ್ತಿಗೆ ಕೊರೊನಾ ಶಂಕೆ

ದುಬೈನಿಂದ ಹಿಂದಿರುಗಿದ ಕೊಡಗು ಮೂಲದ ವ್ಯಕ್ತಿಗೆ ಕೊರೊನಾ ಶಂಕೆ ಮಡಿಕೇರಿ: ದುಬೈನಿಂದ ಬಂದಿದ್ದ ವ್ಯಕ್ತಿಗೆ ಕೊರೊನಾ ಸೋಂಕಿನ ಲಕ್ಷಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ವ್ಯಕ್ತಿಗೆ ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಶಂಕಿತ ವ್ಯಕ್ತಿಯ ರಕ್ತ ಹಾಗೂ ಗಂಟಲಿನ ದ್ರವದ ಮಾದರಿಯನ್ನು ಮೈಸೂರಿಗೆ ರವಾನಿಸಲಾಗಿದೆ. ದುಬೈನಿಂದ ಬಂದ ವ್ಯಕ್ತಿಯನ್ನು ಶಂಕಿತ ಎಂದು ಪರಿಗಣಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶುಕ್ರವಾರ ರಕ್ತ ಮಾದರಿಯ ವರದಿ ನಂತರ ವಾಸ್ತವ ಗೊತ್ತಾಗಲಿದೆ. ಕೊಡಗು ಮೂಲದ ವ್ಯಕ್ತಿ ದುಬೈನಲ್ಲಿ …

Read More »