ಕೊಪ್ಪಳ: ಯುಪಿಎ ಸರ್ಕಾರದ ಅವಧಿಯಲ್ಲಿ ಆಹಾರ ಭದ್ರತೆ ಕಾನೂನು ಜಾರಿಗೆ ತರಲಾಗಿದೆ. ನಾವು ಐದೂ ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿಗೆ ತಂದರೆ ಬಿಜೆಪಿಯವರಿಗೆ ಇನ್ನು 10 ವರ್ಷ ಮಾಡಲು ಏನೂ ಕೆಲಸ ಇರುವುದಿಲ್ಲ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ. ಕೊಪ್ಪಳದಲ್ಲಿ ಹಮ್ಮಿಕೊಂಡಿದ್ದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯದ 25 ಜನ ಬಿಜೆಪಿ ಸಂಸದರು ಪ್ರಧಾನ ಮಂತ್ರಿ ಬಳಿ ಹೋಗಿ …
Read More »ಸಿಎಂ ಕಾರ್ಯಕ್ರಮ ರದ್ದಾಗುವುದಿಲ್ಲ: ಸಚಿವ ಹಾಲಪ್ಪ ಆಚಾರ್
ಕೊಪ್ಪಳ: ಜಿಲ್ಲೆಯ ಯಲಬುರ್ಗಾದಲ್ಲಿ ಬುಧವಾರ ಬೆಳಿಗ್ಗೆ 11 ಗಂಟೆಗೆ ಆಯೋಜನೆಯಾಗಿರುವ ಮುಖ್ಯಮಂತ್ರಿ ಕಾರ್ಯಕ್ರಮ ನಿಗದಿಯಂತೆ ನಡೆಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವ, ಕ್ಷೇತ್ರದ ಶಾಸಕ ಹಾಲಪ್ಪ ಆಚಾರ್ ತಿಳಿಸಿದರು. ಕೃಷ್ಣ ಬಿ ಸ್ಕೀಂ ಯೋಜನೆಯಡಿ ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ರಮದ ಉದ್ಘಾಟನೆಗೆ ಸಿಎಂ ಬರಲಿದ್ದಾರೆ. 11.30ಕ್ಕೆ ಚುನಾವಣೆ ಆಯೋಗದ ಪತ್ರಿಕಾಗೋಷ್ಠಿ ಇದೆ. ನಮ್ಮ ಕಾರ್ಯಕ್ರಮ 11ಕ್ಕೆ ನಿಗದಿಯಾಗಿದೆ. ನಿಗದಿತ ಸಮಯಕ್ಕೆ ಕಾರ್ಯಕ್ರಮ ಆರಂಭವಾಗಲಿದೆ ಎಂದು ತಿಳಿಸಿದರು.
Read More »ನಾನು ಗೆದ್ದರೇ ಗಂಗಾವತಿಯ ಜನತೆಗೆ ಡಬಲ್ ಬೆಡ್ ರೂಮ್ ಮನೆ ಗಿಫ್ಟ್ – ಜನಾರ್ಧನ ರೆಡ್ಡಿ
ಕೊಪ್ಪಳ: ನಾನು ಶಾಸಕನಾದರೇ ಗಂಗಾವತಿಯ ಜನತೆಗೆ ಡಬಲ್ ಬೆಡ್ ರೂಮ್ ಮನೆ ಕಟ್ಟಿಸಿಕೊಡಲಾಗುತ್ತದೆ. ಗಂಗಾವತಿಯಲ್ಲಿ ರಿಂಗ್ ರಸ್ತೆ ನಿರ್ಮಾಣ ಮಾಡಿಕೊಡಲಾಗುತ್ತದೆ. ಗಂಗಾವತಿಯನ್ನು ಇಡೀ ರಾಜ್ಯಕ್ಕೆ ಮಾದರಿಯಾಗಿ ಮಾಡುವ ಕೆಲಸ ಮಾಡುವುದಾಗಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ರಾಜ್ಯಾಧ್ಯಕ್ಷ ಜನಾರ್ಧನ ರೆಡ್ಡಿ ( Farmer Minister Janardhana Reddy ) ಘೋಷಿಸಿದಿದ್ದಾರೆ. ಇಂದು ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, ಜಿಲ್ಲಾ ಮಂತ್ರಿಯಾಗಿದ್ದಾಗ ಹೊಸಪೇಟೆಯನ್ನು ಸುಂದರವಾಗಿ ಅಭಿವೃದ್ಧಿಗೊಳಿಸಲಾಗಿದೆ. …
Read More »ಜೆಡಿಎಸ್ ಅಧಿಕಾರಕ್ಕೆ ಬಂದರೆ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ : H.D.K.
ಕೊಪ್ಪಳ: ರಾಜ್ಯದಲ್ಲಿ ಈ ಬಾರಿ ಜೆಡಿಎಸ್ ಸಂಪೂರ್ಣ ಅಧಿಕಾರಕ್ಕೆ ಬಂದರೆ ಸ್ತ್ರೀ ಶಕ್ತಿ ಸಂಘಗಳ 1 ಲಕ್ಷ ರೂ ವರೆಗಿನ ಸಾಲ ಮನ್ನಾ ಮಾಡುವೆ ನಮಗೆ ಪೂರ್ಣ ಬಹುಮತ ಕೊಡಿ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ಹೇಳಿದರು. ಕುಷ್ಟಗಿ ತಾಲೂಕಿನ ತಾವರಗೇರಾದಲ್ಲಿ ಪಂಚರತ್ನ ಯಾತ್ರೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸಾವಿರಾರು ರೈತರು ಮಹಿಳೆಯರು ತಮ್ಮ ಕಷ್ಟ ಹೇಳಿಕೊಂಡು ನಮ್ಮ ಬಳಿ ಬರುತ್ತಿದ್ದಾರೆ. ಯುವಕರು ಕೆಲಸ ಕೊಡಿ …
Read More »ಪೋಷಕರು ಮಾಡಿದ ಸಾಲಕ್ಕೆ ಬಾಲಕನ ಮೇಲೆ ಮಾರಣಾಂತಿಕ ಹಲ್ಲೆ
ಕೊಪ್ಪಳ: ಪೋಷಕರು ಪಡೆದ ಸಾಲದ ಬಾಕಿ ತೀರಿಸಿಲ್ಲವೆಂದು ಮಗನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ (Assault on boy) ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಕೆ. ಹೂಸೂರಿನಲ್ಲಿ ಡಿಸೆಂಬರ್‌ನಲ್ಲಿ ನಡೆದಿದ್ದು, ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ. ಕನಕರಾಯಪ್ಪ, ರಾಜೇಶ್ವರಿ ಸೇರಿ 6 ಜನರು, 14 ವರ್ಷದ ಬಾಲಕನನ್ನು ಗಿಡಕ್ಕೆ ಕಟ್ಟಿ ಥಳಿಸಿದ್ದಾರೆ. ಬಾಲಕನ ಮೈಮೇಲೆ ಹಾಗೂ ಗುಪ್ತಾಂಗಕ್ಕೂ ಗಾಯವಾಗಿದೆ. ಕನಕರಾಯಪ್ಪ ಎಂಬುವರು ಮಂಜುಳಾ ಮಡಿವಾಳ ಎಂಬುವರಿಗೆ …
Read More »ಕೊಪ್ಪಳ :ಪಠ್ಯ ವಿಷಯವನ್ನೇ ನಾಟಕ, ಹಾಡು, ಕಥೆಗೆ ಬದಲಾಯಿಸಿ ಕಲಿಯುವ ವಿದ್ಯಾರ್ಥಿಗಳು
ಕೊಪ್ಪಳ : ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಹನುಮಸಾಗರ ಸರ್ಕಾರಿ ಪದವಿ ಪೂರ್ವ ಕಾಲೇಜ್ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಈಗ ಸಮಾಜವಿಜ್ಞಾನದ ಪಠ್ಯ ವಿಷಯವನ್ನೇ ನಾಟಕ, ಹಾಡು, ಕಥೆ, ಕವನದ ರೂಪಕ್ಕೆ ಬದಲಾಯಿಸಿಕೊಂಡು ಕಲಿಕೆ ಸರಳೀಕರಣಗೊಳಿಸಿಕೊಂಡು ಅಭ್ಯಾಸ ಮಾಡುತ್ತಿದ್ದಾರೆ. ಸಮಾಜವಿಜ್ಞಾನ ಶಿಕ್ಷಕ ಕಿಶನರಾವ್ ಕುಲಕರ್ಣಿ ಸಮಾಜ ವಿಜ್ಞಾನದ ಎಲ್ಲ ಸಿಲೆಬಸ್ ಅನ್ನು ನಾಟಕ ಹಾಗೂ ಕಥೆಗಳಿಗೆ ಬದಲಾವಣೆ ಮಾಡಿದ ಕಾರಣಕ್ಕಾಗಿ ವಿದ್ಯಾರ್ಥಿಗಳು ಅಭಿನಯಿಸುವದರೊಂದಿಗೆ ಕಲಿಕೆ ದೃಢೀಕರಿಸಿಕೊಳ್ಳುತ್ತಿದ್ದಾರೆ. ವಿದ್ಯಾರ್ಥಿಗಳು ಸಮಾಜ ವಿಜ್ಞಾನ …
Read More »ಭರ್ತಿಯಾಗಿ ಕೋಡಿ ಬಿತ್ತು ನಟ ಯಶ್ ಅಭಿವೃದ್ಧಿಪಡಿಸಿದ್ದ ತಲ್ಲೂರು ಕೆರೆ
ಕೊಪ್ಪಳ: ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ತಲ್ಲೂರು ಕೆರೆ ಕೋಡಿ ಬಿದ್ದಿದೆ. ನಟ ರಾಕಿಂಗ್ ಸ್ಟಾರ್ ಯಶ್ ಅವರು 2016 ರಲ್ಲಿ ಕೋಟ್ಯಂತರ ರೂ. ವೆಚ್ಚದಲ್ಲಿ ಹೂಳು ತೆಗೆಸಿ ಕೆರೆ ಅಭಿವೃದ್ಧಿಪಡಿಸಿದ್ದರು. ಸುಮಾರು 96 ಎಕರೆ ವಿಸ್ತೀರ್ಣದ ಕೆರೆಯಿಂದ 1038 ಎಕರೆ ಜಮೀನಿಗೆ ನೀರಾವರಿ ಕಲ್ಪಿಸಲಾಗುತ್ತದೆ. ಕಳೆದೆರಡು ದಿನಗಳಿಂದ ಭಾರಿ ಮಳೆಯಾಗಿ ಕೆರೆ ತುಂಬಿ ಕೋಡಿ ಬಿದ್ದಿದೆ. ಜಲಪಾತದಂತೆ ಕೋಡಿ ನೀರು ಭೋರ್ಗರೆಯುತ್ತಿದ್ದು, ನೋಡುಗರನ್ನು ಆಕರ್ಷಿಸುತ್ತಿದೆ. ಈ ದೃಶ್ಯ ಕಣ್ತುಂಬಿಕೊಳ್ಳಲು ಹೆಚ್ಚಿನ …
Read More »ಉದ್ದ ತೋಳಿನ ಶರ್ಟ್ ಧರಿಸಿ ಬಂದ ಪರೀಕ್ಷಾರ್ಥಿಗಳಿಗೆ ಕೆಪಿಟಿಸಿಎಲ್ ನೀಡಿತು ಶಾಕ್! ಬಟ್ಟೆ ಕಟ್ ಕಟ್
ಕೊಪ್ಪಳ: ರಾಜ್ಯಾದ್ಯಂತ ಇಂದು ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆ ನಡೆಯುತ್ತಿದೆ. ಕೊಪ್ಪಳದಲ್ಲಿ ಪರೀಕ್ಷೆ ಬರೆಯಲು ತುಂಬು ತೋಳಿನ ಅಂಗಿ ಹಾಕಿಕೊಂಡು ಬಂದವರಿಗೆ ಪರೀಕ್ಷಾ ಸಿಬ್ಬಂದಿ ತೋಳು ಕತ್ತರಿಸುವ ಮೂಲಕ ಶಾಕ್ ನೀಡಿದ್ದಾರೆ. ಪಿಎಸ್‌ಐ ನೇಮಕಾತಿಯಲ್ಲಿನ ಅಕ್ರಮದಿಂದಾಗಿ ಇತರ ನೇಮಕಾತಿ ಪರೀಕ್ಷೆಗಳಿಗೆ ಕಟ್ಟುನಿಟ್ಟಿನ ಕಟ್ಟಳೆ ವಿಧಿಸಲಾಗಿದೆ. ಇಂದು ನಡೆಯುತ್ತಿರುವ ಪರೀಕ್ಷೆಗೆ ತುಂಬು ತೋಳಿನ ಅಂಗಿ ಹಾಕಿ ಬಂದವರನ್ನು ಪರೀಕ್ಷಾ ಕೇಂದ್ರದ ಒಳಗೆ ಬಿಟ್ಟಿಲ್ಲ. ಬೇರೆ ಶರ್ಟ್ ಧರಿಸಿ ಬರುವಂತೆ …
Read More »‘ಮುಂದಿನ ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ.: ಕೆ.ಬಿ.ಕೋಳಿವಾಡ
ರಾಣೆಬೆನ್ನೂರು (ಹಾವೇರಿ ಜಿಲ್ಲೆ): ‘ಮುಂದಿನ ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ. ನನ್ನ ಪುತ್ರ ಪ್ರಕಾಶ ಕೋಳಿವಾಡ ಅವರಿಗೆ ರಾಣೆಬೆನ್ನೂರು ಕ್ಷೇತ್ರ ಬಿಟ್ಟು ಕೊಡುತ್ತಿದ್ದೇನೆ’ ಎಂದು ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ ಹೇಳಿದರು. ಇಲ್ಲಿನ ವಾಗೀಶನಗರದ ತಮ್ಮ ಗೃಹ ಕಚೇರಿಯಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿ, ‘ನನ್ನ ನಿರ್ಧಾರವನ್ನು ಹೈಕಮಾಂಡ್‌ಗೆ ತಿಳಿಸಿದ್ದೇನೆ. ಪುತ್ರನೇ ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ’ ಎಂದರು. ‘ರಾಜ್ಯ ಚುನಾವಣಾ ರಾಜಕೀಯದಿಂದ …
Read More »ಕೊಪ್ಪಳದಲ್ಲಿ ನಿಯಂತ್ರಣ ತಪ್ಪಿ ಬಾವಿಗೆ ಬಿದ್ದ ಕಾರು: ಚಾಲಕ ಸಾವು, ಮೂವರು ಪಾರು
ಕೊಪ್ಪಳ: ನಿಯಂತ್ರಣ ತಪ್ಪಿ ಕಾರೊಂದು ಬಾವಿಗೆ ಬಿದ್ದು ಚಾಲಕ ಸಾವನ್ನಪ್ಪಿರುವ ಘಟನೆ ಕೊಪ್ಪಳ-ಅಳವಂಡಿ ರಸ್ತೆಯ ಮೈನಳ್ಳಿ ಬಳಿ ನಡೆದಿದೆ. ಸಂಗಮೇಶ ಹಿರೇಮಠ (26) ಮೃತ ವ್ಯಕ್ತಿ. ಕಾರಿನಲ್ಲಿದ್ದ ನಾಲ್ವರು ಹರಿಹರದಿಂದ ಕೊಪ್ಪಳಕ್ಕೆ ಮದುವೆಗೆ ಬರುತ್ತಿದ್ದಾಗ ದುರಂತ ಸಂಭವಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗು ಅಳವಂಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಾವಿಯಿಂದ ಶವ ಮತ್ತು ಕಾರನ್ನು ಮೇಲಕ್ಕೆತ್ತಿದ್ದಾರೆ.
Read More »