Home / ಜಿಲ್ಲೆ / ಕೊಪ್ಪಳ (page 5)

ಕೊಪ್ಪಳ

ಮನೆಯಲ್ಲೇ ಚಿಕಿತ್ಸೆ ಪಡೆದು ಕೊರೊನಾ ಗೆದ್ದ 105 ವರ್ಷದ ಅಜ್ಜಿ

ಕೊಪ್ಪಳ: ಕೊರೊನಾ ಹಾಟ್‍ಸ್ಪಾಟ್ ಎಂದೇ ಖ್ಯಾತಿಯಾಗಿರುವ ಕೊಪ್ಪಳ ಜಿಲ್ಲೆಯಲ್ಲಿ ಕೋವಿಡ್‍ಗೆ ನಿತ್ಯವೂ ಸಾಲು ಸಾಲು ಸಾವುಗಳು ಸಾಮಾನ್ಯ ಎನ್ನುವಂತಾಗಿದೆ. ಇದರ ಮಧ್ಯೆ 105 ವರ್ಷದ ಅಜ್ಜಿ ಮನೆಯಲ್ಲೇ ಚಿಕಿತ್ಸೆ ಪಡೆದು ಕೊರೊನಾ ಗೆದ್ದಿದ್ದಾರೆ. ಕೊಪ್ಪಳ ತಾಲೂಕಿನ ಕಾತರಕಿ ಗ್ರಾಮದ 105 ವರ್ಷ ಭರ್ತಿಯಾಗಿರುವ ಕಮಲಮ್ಮ ಲಿಂಗನಗೌಡ ಹಿರೇಗೌಡ್ರ ಕೊರೊನಾದಿಂದ ಗುಣಮುಖವಾಗಿದ್ದಾರೆ. ಕಳೆದ ವಾರವಷ್ಟೇ ಅವರಿಗೆ ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಕೊಪ್ಪಳದ ಅವರ ಪುತ್ರ ಶಂಕರಗೌಡ ಅವರ ನಿವಾಸದಲ್ಲಿ ಹೋಮ್ …

Read More »

ಕುಷ್ಟಗಿ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಕೋವಿಡ್ ಹೆಲ್ತ್ ಕೇರ್ ಸೆಂಟರ್​ನಲ್ಲಿ ದಾಖಲಾಗಿದ್ದ ವೃದ್ಧೆ ಚಿಕಿತ್ಸೆ ನಿರಾಕರಿಸಿ ಮನೆಗೆ ತೆರಳಿರುವ ಘಟನೆ ನಡೆದಿದೆ.

ಕೊಪ್ಪಳ : ಕುಷ್ಟಗಿ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಕೋವಿಡ್ ಹೆಲ್ತ್ ಕೇರ್ ಸೆಂಟರ್​ನಲ್ಲಿ ದಾಖಲಾಗಿದ್ದ ವೃದ್ಧೆ ಚಿಕಿತ್ಸೆ ನಿರಾಕರಿಸಿ ಮನೆಗೆ ತೆರಳಿರುವ ಘಟನೆ ನಡೆದಿದೆ. ಕುಷ್ಟಗಿ ತಾಲೂಕಿನ ಮೀಯಾಪೂರ ಗ್ರಾಮದ ವೃದ್ಧೆಯೋರ್ವರಿಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆ ಕಳೆದ 3 ದಿನಗಳಿಂದ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಆದರೆ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಇಷ್ಟವಿಲ್ಲದ ಅವರಿಗೆ, ವೈದ್ಯರು ಕುಟುಂಬದವರಿಗೆ ಇನ್ನೂ ಕೆಲವು ದಿನ ಈ ಆಸ್ಪತ್ರೆಯಲ್ಲಿರಲು ಎಷ್ಟೇ ಮನವೊಲಿಸಿದರೂ ಪ್ರಯೋಜನವಾಗಲಿಲ್ಲ. ವೈದ್ಯರೊಂದಿಗೆ ವಾಗ್ವಾದಕ್ಕೆ …

Read More »

ಮನೆಯಲ್ಲೇ ಪತ್ನಿಯ ಪುತ್ಥಳಿ ಸ್ಥಾಪಿಸಿದ ಉದ್ಯಮಿ

ಕೊಪ್ಪಳ: ಆ ಮಹಿಳೆಗೆ ಹೀಗೆಯೇ ಮನೆಕಟ್ಟಿಸಬೇಕೆಂದು ಕನಸಿತ್ತು. ಮನೆ ನಿರ್ಮಾಣದ ಭೂಮಿ ಪೂಜೆಗೆ ಇದ್ದ ಆಕೆ ಮನೆಯ ಗೃಹ ಪ್ರವೇಶಕ್ಕೆ ಜೀವಂತವಾಗಿದ್ದಿಲ್ಲ. ಆದರೆ ಅದೇ ಮನೆಯಲ್ಲಿ ಜೀವಂತ ಪ್ರತಿಮೆಯಾಗಿದ್ದಳು. ಅರೇ ಇದೇನಪ್ಪ ಜೀವಂತ ಪ್ರತಿಮೆ ಅಂತೀರಾ? ಹಾಗಿದ್ರೆ ಈ ಸ್ಟೋರಿ ಓದಿ. ಒಂದೆಡೆ ಜೀವಂತ ಇರಬೇಕಾದಾಗಿನ ಫೋಟೋದಲ್ಲಿನ ಮಹಿಳೆ, ಇನ್ನೊಂದೆಡೆ ಮನೆಯಲ್ಲಿ ಜೀವಂತ ಇದ್ದಾರೇನೋ ಎನ್ನುವ ರೀತಿಯಲ್ಲಿ ಪ್ರತಿಮೆಯಾಗಿ ಕುಳಿತಿರುವ ಮಹಿಳೆ. ಮತ್ತೊಂದೆಡೆ ಮನೆಯೊಡತಿ ಜೊತೆ ಕುಳಿತಿರುವ ಪತಿ, ಮಕ್ಕಳು. …

Read More »

ಕೊಪ್ಪಳದ ಮುಸ್ಲಿಂ ಯುವಕಸಂಶುದ್ದೀನ್ 1 ಚೀಲ ಸಿಮೆಂಟ್‍ನೊಂದಿಗೆ ಅಯೋಧ್ಯೆಗೆ

ಕೊಪ್ಪಳ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರಕ್ಕೆ ಇಂದು ಶಿಲಾನ್ಯಾಸ ನೆರವೇರುತ್ತಿರುವ ಹಿನ್ನೆಲೆಯಲ್ಲಿ ಕೊಪ್ಪಳದ ಮುಸ್ಲಿಂ ಯುವಕನಲ್ಲಿ ಸಂಭ್ರಮ ಮನೆ ಮಾಡಿದೆ.ಹೌದು. ಮೂರು ವರ್ಷಗಳ ಹಿಂದೆ ಸಂಶುದ್ದೀನ್ 1 ಚೀಲ ಸಿಮೆಂಟ್‍ನೊಂದಿಗೆ ಅಯೋಧ್ಯೆಗೆ ತೆರಳಿದ್ದರು. 2017ರ ಏಪ್ರೀಲ್ 27 ರಂದು ಕೊಪ್ಪಳದಿಂದ ರೈಲು ಮೂಲಕ ತೆರಳಿ, 2017ರ ಮೇ 1 ರಂದು ಅಯೋಧ್ಯೆಯಲ್ಲಿದ್ದರು. ಅಲ್ಲದೆ ಅಂದೇ ಟ್ರಸ್ಟ್ ಗೆ ಒಂದು ಚೀಲ ಸಿಮೆಂಟ್ ನೀಡಿದ್ದರು. ಈ ವೇಳೆ ಶ್ರೀರಾಮ ಮಂದಿರ ಶೀಘ್ರವೇ ನಿರ್ಮಾಣವಾಗಲೆಂದು …

Read More »

ಶಾಸಕ `ಹಾಲಪ್ಪ ಆಚಾರ್’ ಗೆ ಕೊರೊನಾ ಸೋಂಕು ದೃಢ

ಕೊಪ್ಪಳ : ಈಗಾಗಲೇ ಜಿಲ್ಲೆಯ ಶಾಸಕರಾದಂತ ರಾಘವೇಂದ್ರ ಹಿಟ್ನಾಳ್ ಹಾಗೂ ಪರಣ್ಣ ಮುನವಳ್ಳಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಇದೀಗ ಇವರ ಬಳಿಕ ಶಾಸಕ ಹಾಲಪ್ಪ ಆಚಾರ್ ಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.   ಈ ಕುರಿತಂತೆ ತಮ್ಮ ಫೇಸ್ ಬುಕ್ ಮುಖಪುಟದಲ್ಲಿ ಮಾಹಿತಿ ಹಂಚಿಕೊಂಡಿರುವ ಕೊಪ್ಪಳ ಜಿಲ್ಲೆಯ ಯಲಬುರ್ಗ ವಿಧಾನಸಭಾ ಕ್ಷೇತ್ರದ ಶಾಸಕ ಹಾಲಪ್ಪ ಆಚಾರ್, ಸ್ವಯಂ ಕೋವಿಡ್ ತಪಾಸಣೆಯನ್ನು ಮಾಡಿಸಿಕೊಳ್ಳಲಾಗಿ, ವೈದ್ಯಕೀಯ ವರದಿಯ ಅನುಸಾರ ಕೊರೋನಾ …

Read More »

ಶಾಸಕ ರಾಘವೇಂದ್ರ ಹಿಟ್ನಾಳ್‍ಗೆ ಕೋವಿಡ್ 19 ದೃಢ

ಕೊಪ್ಪಳ: ಇಲ್ಲಿನ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕನಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಶಾಸಕರಿಗೆ ಕೊರೊನಾ ದೃಢಪಟ್ಟ ಮಾಹಿತಿಯನ್ನು ಜಿಲ್ಲಾಧಿಕಾರಿ ಸೂರಳ್ಕರ್ ವಿಕಾಸ್ ಕಿಶೋರ್ ಬಹಿರಂಗಪಡಿಸಿದ್ದಾರೆ. ಕಳೆದ ಎರಡು ದಿನಗಳ ಹಿಂದೆಯಷ್ಟೇ ಶಾಸಕ ರಾಘವೇಂದ್ರ ಹಿಟ್ನಾಳ್‍ಗೆ ಕೊರೊನಾ ಸೊಂಕು ತಗಲಿರುವ ಬಗ್ಗೆ ಕ್ಷೇತ್ರದಾದ್ಯಂತ ಹರಿದಾಡಿತ್ತು.ಈಗ ಸ್ವತಃ ಜಿಲ್ಲಾಧಿಕಾರಿಗಳೇ ಶಾಸಕರಿಗೆ ಸೋಂಕು ತಗಲಿರುವುದನ್ನು ದೃಢಪಡಿಸಿದ್ದಾರೆ. ಕೆಲದಿನಗಳ ಹಿಂದೇ ಗಂಗಾವತಿ ಶಾಸಕ ಪರಣ್ಣ ಮುನವಳ್ಳಿರವರಿಗೆ ಕೊರೊನಾ ದೃಢಪಟ್ಟಿತ್ತು. ಗಂಗಾವತಿ ಶಾಸಕರ ಪಕ್ಕದಲ್ಲಿಯೇ ಜಿಲ್ಲಾಧಿಕಾರಿಗಳ ಸಭೆಯಲ್ಲಿ …

Read More »

ಕೊರೊನಾ ಸೋಂಕಿತ ವ್ಯಕ್ತಿಯನ್ನ ನಡೆದುಕೊಂಡು ಮನೆಗೆ ಹೋಗಿ ಎಂದ ಆರೋಗ್ಯ ಇಲಾಖೆ

ಕೊಪ್ಪಳ: ಕೊರೊನಾ ಸೋಂಕಿತ ವ್ಯಕ್ತಿಯನ್ನ ನಡೆದುಕೊಂಡು ಮನೆಗೆ ಹೋಗಿ ಎಂದು ಆರೋಗ್ಯ ಇಲಾಖೆ ಸಿಬ್ಬಂದಿ ಹೇಳುವ ಮೂಲಕ ಅಮಾನವೀಯವಾಗಿ ವರ್ತಿಸಿರುವ ಘಟನೆ ಕೊಪ್ಪಳದಲ್ಲಿ ಬೆಳಕಿಗೆ ಬಂದಿದೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮುದೇನೂರ ಗ್ರಾಮದ ನಿವಾಸಿಗೆ ಸಿಬ್ಬಂದಿ ಕೊರೊನಾ ಇರುವುದನ್ನು ದೃಢಪಡಿಸಿದ್ದಾರೆ. ಅಲ್ಲದೆ ಮನೆಗೆ ನಡೆದುಕೊಂಡು ಹೋಗಿ ಎಂದು ಹೇಳಿ ಕಳಿಸಿದ್ದಾರೆ ಎಂದು ಸೋಂಕಿತ ಆರೋಪಿಸುತ್ತಿದ್ದಾರೆ. ಮುದೇನೂರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಈ ರೀತಿ ಅಮಾನವಿಯ ರೀತಿಯಲ್ಲಿ ನಡೆದುಕೊಂಡಿದ್ದಾರೆ …

Read More »

ಸರ್ಕಾರ ಬೆಳಗ್ಗೆ ಕೊಟ್ಟು ಸಾಯಂಕಾಲ ಅಧ್ಯಕ್ಷ ಸ್ಥಾನ ಕಸಿದುಕೊಂಡಿತ್ತು

ಕೊಪ್ಪಳ: ಸರ್ಕಾರ ಬೆಳಗ್ಗೆ ಕೊಟ್ಟು ಸಾಯಂಕಾಲ ಅಧ್ಯಕ್ಷ ಸ್ಥಾನ ಕಸಿದುಕೊಂಡಿತ್ತು. ಯಾವುದೇ ಅಸಮಾಧಾನ ಇಲ್ಲ ಅಂತ ಶಾಸಕ ಬಸವರಾಜ್ ದಡೇಸೂಗೂರು ಹೇಳಿದ್ರು. ರಾಜ್ಯ ಬಿಜೆಪಿ ಸರ್ಕಾರ, ಮುಖ್ಯ ಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಇಂದು ಮಹತ್ವದ ನಿರ್ಧಾರ ಕೈಗೊಂಡಿದ್ರು. ರಾಜ್ಯ ಸರ್ಕಾರದ 24 ನಿಗಮ-ಮಂಡಳಿಗಳಿಗೆ ಅಧ್ಯಕ್ಷ ಸ್ಥಾನವನ್ನು ನೇಮಿಸಲಾಗಿತ್ತು. ಕೊಪ್ಪಳ ಜಿಲ್ಲೆಯ ಇಬ್ಬರು ಶಾಸಕರನ್ನು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿಕೊಂಡು ಆದೇಶ ಹೊರಡಿಸಲಾಗಿತ್ತು.ಕನಕಗಿರಿ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ್ ಮತ್ತು ಗಂಗಾವತಿ …

Read More »

ಕೊಪ್ಪಳದಲ್ಲಿ ನಾಪತ್ತೆಯಾಗಿದ್ದ ಬಾಲಕ ಹಳ್ಳದಲ್ಲಿ ಶವವಾಗಿ ಪತ್ತೆ ; ಮುಗಿಲು ಮುಟ್ಟಿದ ಹೆತ್ತವರ ಆಕ್ರಂದನ

ಕೊಪ್ಪಳ(ಜುಲೈ.23): ಕಾಣೆಯಾಗಿದ್ದ ಬಾಲಕನೊಬ್ಬ ಹಳ್ಳದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಈ ದುರಂತ ಘಟನೆ ನಡೆದಿದ್ದು ಕೊಪ್ಪಳದ ತಾಲೂಕಿನ ಹಲಗೇರಿ ಹಳ್ಳದಲ್ಲಿ. ಆಡಿ ಬೆಳೆಯುವ ವಯಸ್ಸಿನ 4ನೇ ತರಗತಿಯಲ್ಲಿ ಓದುತ್ತಿದ್ದ ಆ ಬಾಲಕ ಮಂಜುನಾಥ ಬುರ್ಲಿ ಬದುಕಿನ ಬಗ್ಗೆ, ಹೆತ್ತವರು ಅಗಾಧ ಕನಸು ಕಂಡಿದ್ದರು. ಕೆಲ ದಿನಗಳ ಹಿಂದೆ ಇದ್ದಕ್ಕಿದ್ದಂತೆ ಕಾಣೆಯಾಗಿದ್ದ ಈ ಬಾಲಕ ಬುಧವಾರ ಶವವಾಗಿ ಪತ್ತೆಯಾಗಿದ್ದಾನೆ. ಮಗನ ಶವವನ್ನು ಕಂಡು ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ. ಚಿಕ್ಕವಯಸ್ಸಿನ ಮಗನನ್ನು ಕಳೆದುಕೊಂಡ ತಾಯಿಯ ಸಂಕಟ …

Read More »

ರೈತರೊಬ್ಬರಿಂದ ಆರು ಸಾವಿರ ರೂಪಾಯಿ ಗಳ ಲಂಚ ಪಡೆಯುತ್ತಿದ್ದ ವೇಳೆ ಗಂಗಾವತಿ ತಹಸೀಲ್ದಾರಎಸಿಬಿ‌‌ ಬಲೆಗೆ

ಕೊಪ್ಪಳ:  ಜಮೀನಿನ ಖಾತಾ ಉತಾರ ಬದಲಾವಣೆಗೆ ಸಂಬಂಧಿಸಿದಂತೆ ರೈತರೊಬ್ಬರಿಂದ ಆರು ಸಾವಿರ ರೂಪಾಯಿ ಗಳ ಲಂಚ ಪಡೆಯುತ್ತಿದ್ದ ವೇಳೆ ಗಂಗಾವತಿ ತಹಸೀಲ್ದಾರ, ಮತ್ತು ಭೂಮಿ ಕೇಂದ್ರದ ತಹಸೀಲ್ದಾರ್  ‌ ಎಸಿಬಿ‌‌ ಬಲೆಗೆ ಬಿದಿದ್ದಾರೆ. ಎಸಿಬಿ‌ ಡಿಎಸ್ಪಿ ರುದ್ರೇಶ್ ಉಜ್ಜನಕೊಪ್ಪ ಅವರ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ  ಗಂಗಾವತಿ ತಹಸೀಲ್ದಾರ ಎಲ್.ಡಿ.ಚಂದ್ರಕಾಂತ ಹಾಗೂ ಭೂಮಿ ಕೇಂದ್ರದ ಶಿರಸ್ತೆದಾರ ಶರಣಪ್ಪ ಅವರು ವಡ್ಡರಹಟ್ಟಿಯ ಸುಂದರರಾಜ ಎಂಬ ರೈತರಿಂದ ಜಮೀನಿನ ಖಾತಾ ಬದಲಾವಣೆಗೆ ರೂ.6  ಸಾವಿರ …

Read More »