Breaking News
Home / ಜಿಲ್ಲೆ / ಕೊಪ್ಪಳ (page 6)

ಕೊಪ್ಪಳ

ಶಿವರಾಜ ತಂಗಡಗಿಯಂಥ ಪ್ರಾಮಾಣಿಕ, ಸತ್ಯಹರಿಶ್ಚಂದ್ರರಂತಿರುವ ವ್ಯಕ್ತಿಯನ್ನು ನಾನು ಇದುವರೆಗೂ ನೋಡೇ ಇಲ್ಲ.:

ಕೊಪ್ಪಳ: ಮಾಜಿ ಸಚಿವ, ಕಾಂಗ್ರೆಸ್‌ನ ಕೊಪ್ಪಳ ಜಿಲ್ಲಾಧ್ಯಕ್ಷ ಶಿವರಾಜ ತಂಗಡಗಿಯಂಥ ಪ್ರಾಮಾಣಿಕ, ಸತ್ಯಹರಿಶ್ಚಂದ್ರರಂತಿರುವ ವ್ಯಕ್ತಿಯನ್ನು ನಾನು ಇದುವರೆಗೂ ನೋಡೇ ಇಲ್ಲ. ಅದಕ್ಕೆ ಜನ ಅವರನ್ನ ಎಲ್ಲಿಡಬೇಕೋ ಅಲ್ಲೇ ಇಟ್ಟಿದ್ದಾರೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ‌.ಪಾಟೀಲ ಹೇಳಿದರು. ಕೊಪ್ಪಳದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಮಾಲೆ‌ ಕಣ್ಣಿನವರಿಗೆ ಕಾಣೋದೆಲ್ಲ ಹಳದಿನೇ. ಅವರು ಈ ಹಿಂದೆ ಮಾಡಿದ್ದನ್ನ ಪದೇ ಪದೇ ನಮಗೆ ಅನ್ವಯಿಸಿ ಹೇಳುತ್ತಿದ್ದಾರೆ. ಜನ ಈಗಾಗಲೇ ಅವರಿಗೆ …

Read More »

ಗಂಗಾವತಿ ಬಿಜೆಪಿ ಶಾಸಕ ಪರಣ್ಣ ಮುನವಳ್ಳಿಗೆ ಕೊರೊನಾ ಸೋಂಕು

ಕೊಪ್ಪಳ: ಜಿಲ್ಲೆಯ ಗಂಗಾವತಿ ಕ್ಷೇತ್ರದ ಶಾಸಕ ಪರಣ್ಣ ಮುನವಳ್ಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತು ಗಂಗಾವತಿ ಬಿಜೆಪಿ ಶಾಸಕ ಪರಣ್ಣ ಮುನವಳ್ಳಿ ಮಾಹಿತಿ ನೀಡಿದ್ದಾರೆ. ಶಾಸಕರಲ್ಲಿ ಕೊರೊನಾ ಪತ್ತೆಯಾಗಿರುವುದು ಅವರ ಬೆಂಬಲಿಗರು ಹಾಗೂ ಸ್ನೇಹಿತರಲ್ಲಿ ಭಯವನ್ನುಂಟು ಮಾಡಿದೆ. ಶಾಸಕರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮುಂದಾಗಿದ್ದು, ಈಗಾಗಲೇ ಪ್ರಯಾಣ ಬೆಳೆಸಿದ್ದಾರೆ. ಶಾಸಕ ಪರಣ್ಣ ಮುನವಳ್ಳಿ ಜುಲೈ 16ರಂದು ಜಿಲ್ಲಾಧಿಕಾರಿಗಳ ಕೋವಿಡ್-19 ನಿಯಂತ್ರಣ ಸಭೆಯಲ್ಲಿ ಸಹ ಭಾಗಿಯಾಗಿದ್ದರು. ಈ …

Read More »

ಹನು​ಮ​ಸಾ​ಗರ ಸ್ವಯಂ ಘೋಷಿತ ಲಾಕ್‌​ಡೌ​ನ್‌…..?

ಕೊಪ್ಪಳ: ಜಿಲ್ಲೆಯಲ್ಲಿ ಕೊರೋನಾ ಹೆಮ್ಮಾರಿಯ ಅಟ್ಟಹಾಸ ನಿಲ್ಲುತ್ತಿಲ್ಲವಾದರೂ ಈಗಾಗಲೇ 248 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಹೋಗಿದ್ದಾರೆ. ಜಿಲ್ಲೆಯಲ್ಲಿ ಶುಕ್ರವಾರದವರೆಗೂ 431 ಜನರಿಗೆ ಸೋಂಕು ದೃಢಪಟ್ಟಿದೆ. ಈ ಪೈಕಿ ಕೇವಲ 9 ಜನರು ಸಾವನ್ನಪ್ಪಿದ್ದು, ಉಳಿದವರ ಪೈಕಿ 248 ಜನರು ಗುಣಮುಖವಾಗಿದ್ದಾರೆ. ಉಳಿದವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಒಂದಿಲ್ಲೊಂದು ಕಾಯಿಲೆ ಜಿಲ್ಲೆಯಲ್ಲಿ ಇದುವರೆಗೂ ಕೊರೋನಾದಿಂದಲೇ ಯಾರು ಸತ್ತಿಲ್ಲ. ಬೇರೆ ನಾನಾ ಕಾಯಿಲೆ ಇರುವವರಿಗೂ ಸೋಂಕು ಬಂದಿದೆ. ಅಂಥವರು ಮೃತಪಟ್ಟಿದ್ದಾರೆಯೇ ವಿನಃ ಇದುವರೆಗೂ …

Read More »

ಈ ಕೊರೊನಾದಿಂದ ಸಾವು ಮಾತ್ರ ಬರೋದು ಬೇಡ. ಬೇರೆ ಯಾವುದೇ ರೀತಿಯಾದರೂ ಸಾವು ಬರಲಿ ಅನ್ನೋ ಸ್ಥಿತಿ ನಿರ್ಮಾಣವಾಗಿದೆ.

ಕೊಪ್ಪಳ: ರಾಜ್ಯದಲ್ಲಿ ಕೊರೊನಾ ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಈ ಕೊರೊನಾದಿಂದ ಸಾವು ಮಾತ್ರ ಬರೋದು ಬೇಡ. ಬೇರೆ ಯಾವುದೇ ರೀತಿಯಾದರೂ ಸಾವು ಬರಲಿ ಅನ್ನೋ ಸ್ಥಿತಿ ನಿರ್ಮಾಣವಾಗಿದೆ. ಕೊಪ್ಪಳದಲ್ಲಿ ಒಂದೇ ದಿನ ಕೊರೊನಾ ಮಹಾಮಾರಿಗೆ ಇಬ್ಬರು ಬಲಿಯಾಗಿದ್ದಾರೆ. ಗಂಗಾವತಿ ತಾಲೂಕಿನ ಹಿರೇಜಂತಕಲ್ ಗ್ರಾಮದ ನಿವಾಸಿ 51 ವರ್ಷದ ವ್ಯಕ್ತಿ ಮತ್ತು ಕೊಪ್ಪಳ ತಾಲೂಕಿನ ಮುನಿರಾಬಾದನ 65 ವರ್ಷದ ವ್ಯಕ್ತಿ ಕೊರೊನಾದಿಂದ ಮೃತಪಟ್ಟಿದ್ದರು. 51 ವರ್ಷದ ವ್ಯಕ್ತಿಯ …

Read More »

ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿನಿಗೆ ಕೊರೊನಾ ಸೋಂಕು……….

ಕೊಪ್ಪಳ: ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಹಾಜರಾಗುತ್ತಿರುವ ವೇಳೆ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ತಗುಲಿರುವುದು ಬೆಳಕಿಗೆ ಬಂದಿದ್ದು, ಇದೀಗ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಲ್ಲಿ ಆತಂಕ ಎದರಾಗಿದೆ. ಜಿಲ್ಲೆಯ ಕಾರಟಗಿ ನಗರದ ಖಾಸಗಿ ಶಾಲಾ ಪರೀಕ್ಷಾ ಕೇಂದ್ರದಲ್ಲಿನ ವಿದ್ಯಾರ್ಥಿನಿಗೆ ಸೋಂಕು ದೃಢವಾಗಿದೆ. ಕಳೆದ ಎರಡು ವಿಷಯಗಳ ಪರೀಕ್ಷೆಗೆ ಹಾಜರಾಗಿರುವ ವಿದ್ಯಾರ್ಥಿನಿಗೆ ಇಂದು ಸೋಂಕು ದೃಢವಾಗಿದೆ. ಈ ಹಿನ್ನಲೆಯಲ್ಲಿ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ಸಮಯದಲ್ಲಿಯೇ ವಿದ್ಯಾರ್ಥಿನಿಗೆ ಕೊರೊನಾ ಚಿಕಿತ್ಸೆ ನೀಡುವ ಹಿನ್ನೆಲೆಯಲ್ಲಿ ರಾಯಚೂರು …

Read More »

: 14 ವರ್ಷದ ಬಾಲಕಿಯನ್ನು ತಂದೆಯೇ ಗರ್ಭಿಣಿ ಮಾಡಿರುವ ವಿಕೃತ ಘಟನೆ…….

ಕೊಪ್ಪಳ: 14 ವರ್ಷದ ಬಾಲಕಿಯನ್ನು ಆಕೆಯ ತಂದೆಯೇ ಗರ್ಭಿಣಿ ಮಾಡಿರುವ ವಿಕೃತ ಘಟನೆ ನಡೆದಿದ್ದು, ಅಪ್ಪಂದಿರ ದಿನವೇ ಇಂತಹದ್ದೊಂದು ನೀಚ ಕೃತ್ಯ ಬಯಲಿಗೆ ಬಂದಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ. ಕೊಪ್ಪಳದ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಖಾಸಗಿ ಆಸ್ಪತ್ರೆಯಲ್ಲಿ 14 ವರ್ಷದ ಬಾಲಕಿ ಮಗುವಿಗೆ ಜನ್ಮ ನೀಡಿದ್ದಾಳೆ. ಬಾಲಕಿ ಮಗುವಿಗೆ ಜನ್ಮ ನೀಡಲು ಅವಳ ತಂದೆಯೇ ಕಾರಣ ಎಂದು ತಿಳಿದು ಬಂದಿದೆ. ಕುಡಿದ ಆಮಲಿನಲ್ಲಿ …

Read More »

ಕೊಪ್ಪಳ ಜಿಲ್ಲೆಯಲ್ಲಿ ಕೊರೊನಾಗೆ ಮೊದಲ ಬಲಿ………..

ಕೊಪ್ಪಳ: ಹೆಮ್ಮಾರಿ ಕೊರೊನಾ ವೈರಸ್ ಜಿಲ್ಲೆಯಲ್ಲಿ ಮೊದಲ ಬಲಿ ಪಡೆದುಕೊಂಡಿದೆ. ನಗರದ ಕೋವಿಡ್-19 ಆಸ್ಪತ್ರೆಯಲ್ಲಿ ಸೋಂಕಿತ 50 ವರ್ಷದ ಮಹಿಳೆ ಇಂದು ಸಾವನ್ನಪ್ಪಿದ್ದಾರೆ. ಮೃತ ಮಹಿಳೆ ರೋಗಿ-7105 ಆಗಿದ್ದು, ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ ಎಂದು ಕೊಪ್ಪಳ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ. ಜಿಂದಾಲ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಮಗನಿಗೆ ಕೊರೊನಾ ದೃಢಪಟ್ಟಿತ್ತು. ಈ ಹಿನ್ನೆಲೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಆತನ ತಂದೆ-ತಾಯಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಿದಾಗ ಅವರಿಗೂ ಸೋಂಕು …

Read More »

ಸಿದ್ದರಾಮಯ್ಯ ಗೊಂದಲ ಸೃಷ್ಟಿಮಾಡೋದರಲ್ಲಿ ನಂಬರ್ ಒನ್: ನಳಿನ್ ಕುಮಾರ್ ಕಟೀಲ್

ಕೊಪ್ಪಳ: ನಮ್ಮಲ್ಲಿ ಯಾವುದೇ ಭಿನ್ನಮತವಿಲ್ಲ, ಎಲ್ಲರೂ ಒಂದಾಗಿದ್ದೇವೆ. ಎಲ್ಲರೂ ಹೈಕಮಾಂಡ್ ತೀರ್ಮಾನಕ್ಕೆ ಬದ್ಧರಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಇಂದು ಕೊಪ್ಪಳ ಜಿಲ್ಲೆ ಕಾರಟಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಟಿಲ್, ಶಾಸಕರು ಸೇರಿ ಒಟ್ಟಾಗಿ ಊಟ ಮಾಡಿದ್ರೆ, ಚಹಾ ಕುಡಿದ್ರೆ ಭಿನ್ನಮತನಾ ಎಂದು ಪ್ರಶ್ನೆ ಮಾಡಿದ್ರು. ರಾಜ್ಯದಲ್ಲಿ ಇಬ್ಬರು ಸಿಎಂ ಎಂದು ಹೇಳಿಕೆ ನೀಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯಗೆ ತಿರುಗೇಟು ನೀಡಿದ ಕಟಿಲ್, ಸಿದ್ದರಾಮಯ್ಯ ಗೊಂದಲ ಸೃಷ್ಟಿಮಾಡೋದರಲ್ಲಿ …

Read More »

ರಾಜ್ಯ ಬಿಜೆಪಿ ಸರ್ಕಾರ ಸತ್ತು ಹೋಗಿದೆ.: ಮಾಜಿ ಸಿಎಂ ಸಿದ್ದರಾಮಯ್ಯ

ಕೊಪ್ಪಳ: ರಾಜ್ಯ ಬಿಜೆಪಿ ಸರ್ಕಾರ ಸತ್ತು ಹೋಗಿದೆ. ಬಿಜೆಪಿಯಲ್ಲಿ ಇಬ್ಬರು ಮುಖ್ಯಮಂತ್ರಿಗಳಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ, ರಾಜ್ಯದಲ್ಲಿ ಸಂವಿಧಾನಾತ್ಮಕ ಮುಖ್ಯಮಂತ್ರಿ ಒಬ್ಬರಿದ್ದರೆ, ಅಸಂವಿಧಾನಿಕವಾಗಿ ಇನ್ನೊಬ್ಬರು ಮುಖ್ಯಮಂತ್ರಿ ಇದ್ದಾರೆ. ವಿಜಯೇಂದ್ರ ಇನ್ನೋರ್ವ ಮುಖ್ಯಮಂತ್ರಿ, ಇನ್ನೊಂದು ಸಲಾ ಹೇಳಲಾ ಎಂದು ಎರಡು ಬಾರಿ ವಿಜಯೇಂದ್ರನ ಹೆಸರು ಹೇಳುವ ಮೂಲಕ ಇದು ನಾನು ಹೇಳಿದ್ದಲ್ಲ ಬಿಜೆಪಿ ಶಾಸಕರೇ ಹೇಳಿರುವುದು ಎಂದು …

Read More »

15 ವರ್ಷಗಳ ಹಿಂದಿನ ತಂದೆಯ ಕೊಲೆ ರಹಸ್ಯ ಮಗಳಿಂದ ಬಯಲು_ ತಾಯಿ ಸೇರಿ ಐವರು ಅರೆಸ್ಟ್

ಕೊಪ್ಪಳ: 15 ವರ್ಷಗಳ ಹಿಂದೆ ಮಹಿಳೆಯೊಬ್ಬಳು ತನ್ನ ಪತಿಯನ್ನು ಕೊಲೆ ಮಾಡಿಸಿ ಮುಚ್ಚಿ ಹಾಕಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದೀಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಶಂಕರ್‍ಸಿಂಗ್ ಮೃತ ವ್ಯಕ್ತಿ. ಬಂಧಿತ ಆರೋಪಿಗಳನ್ನು ಗಂಗಾವತಿಯ ವಿರುಪಾಪೂರ ನಗರದ ಮೃತನ ಪತ್ನಿ ಲಕ್ಷ್ಮೀಸಿಂಗ್, ರಾಂಪೂರ ಪೇಟೆಯ ಅಮ್ಜದ್‍ಖಾನ್, ಕಿಲ್ಲಾ ಏರಿಯಾದ ಅಬ್ದುಲ್ ಹಫೀಜ್, ಬಾಬಾ ಜಾಕೀರಬಾಷಾ ಹಾಗೂ ಈಳಿಗನೂರ ಗ್ರಾಮದ ಶಿವನಗೌಡ …

Read More »