Breaking News
Home / ಜಿಲ್ಲೆ / ಕೋಲಾರ

ಕೋಲಾರ

ವರ್ತೂರು ಕಿಡ್ನಾಪ್ ಕೇಸ್: ಇಬ್ಬರು ವಿದ್ಯಾರ್ಥಿಗಳು ಸೇರಿ 6 ಜನರ ಬಂಧನ

ಕೋಲಾರ: ಮಾಜಿ ಸಚಿವ ವರ್ತೂರು ಪ್ರಕಾಶ್ ಅವರನ್ನು ಕಾರಿನಲ್ಲಿ ಅಪಹರಿಸಿ 30 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ವಿದ್ಯಾರ್ಥಿಗಳು ಸೇರಿದಂತೆ ಬೆಂಗಳೂರಿನ ಆರು ಮಂದಿಯನ್ನು ಬಂಧಿಸುವಲ್ಲಿ ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಕೇಂದ್ರ ವಲಯದ ಐಜಿಪಿ ಸೀಮಂತ್‍ಕುಮಾರ್ ಸಿಂಗ್ ತಿಳಿಸಿದರು.   ಮೂಲತಃ ತಮಿಳುನಾಡಿನ ಬೆಂಗಳೂರಿನ ವಿನಾಯಕನಗರದಲ್ಲಿ ವಾಸಿಸುತ್ತಿರುವ ಕವಿರಾಜ್ (43), ಬೆಳ್ಳಂದೂರು-ಸರ್ಜಾಪುರ ರಸ್ತೆಯ ಅರಳೂರು ನಿವಾಸಿ, ಬಿಕಾಂ ವಿದ್ಯಾರ್ಥಿಗಳಾದ ಲಿಖಿತ್ (20), ಉಲ್ಲಾಸ್ (21), …

Read More »

ರಸ್ತೆ ಮಾಡದಿದ್ರೆ ವೋಟ್ ಇಲ್ಲ ಐದು ಸರಿ ಚುನಾವಣೆ ಬಹಿಷ್ಕಾರ ಮಾಡಿದ ಗ್ರಾಮಸ್ಥರು

ಕೋಲಾರ: ರಸ್ತೆಗಾಗಿ ಗ್ರಾಮ ಪಂಚಾಯಿತಿ ಮತದಾನದಿಂದ ದೂರ ಉಳಿಯುವ ಮೂಲಕ ಗ್ರಾಮಸ್ಥರು ಬಹಿಷ್ಕಾರ ಹಾಕಿದ್ದಾರೆ. ಈ ಮೂಲಕ ಗ್ರಾಮಸ್ಥರು 5 ಚುನಾವಣೆ ಬಹಿಷ್ಕರಿಸಿದಂತಾಗಿದೆ.ಜಿಲ್ಲೆಯ ಮಾಲೂರು ತಾಲೂಕಿನ ಮತಗಟ್ಟೆ ಸಂಖ್ಯೆ 17 ಕಂಬಿಪುರ ಗ್ರಾಮಸ್ಥರು ಮತದಾನದಿಂದ ದೂರ ಉಳಿಯುವ ಮೂಲಕ ಬಹಿಷ್ಕಾರ ಹಾಕಿದರು. ಬೆಳಗ್ಗೆ 9 ಗಂಟೆಯಾದರೂ ಮತ ಕೇಂದ್ರದತ್ತ ಸುಳಿಯದ ಮತದಾರರು, ಬಹಿಷ್ಕಾರ ಹಾಕಿದ್ದಾರೆ. ಈ ಮೂಲಕ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಗ್ರಾಮಸ್ಥರು ಮತದಾನ ಬಹಿಷ್ಕಾರ ಮಾಡಿದರ ಹಿನ್ನೆಲೆಯಲ್ಲಿ ಮತಗಟ್ಟೆ …

Read More »

₹1 ಕೋಟಿ ಲಂಚ ಕೇಳಿದ್ರಾ ಅಬಕಾರಿ ಸಚಿವ ಹೆಚ್​​. ನಾಗೇಶ್? ಪ್ರಧಾನಿ ಮೋದಿಗೆ ದೂರು

ಕೋಲಾರ: ಕೋಲಾರದ ಉಸ್ತುವಾರಿ ಸಚಿವ ಹಾಗೂ ಅಬಕಾರಿ ಸಚಿವ ಹೆಚ್.ನಾಗೇಶ್ ವಿರುದ್ಧ ಪ್ರಧಾನ ಮಂತ್ರಿ ಕಚೇರಿಯಲ್ಲಿ ಭ್ರಷ್ಟಾಚಾರ ಆರೋಪದ ದೂರು ದಾಖಲಾಗಿದೆ. ಅಬಕಾರಿ ಅಧಿಕಾರಿಯೊಬ್ಬರ ವರ್ಗಾವಣೆಗೆ ಒಂದು ಕೋಟಿ ರೂಪಾಯಿ ಲಂಚಕ್ಕೆ ಒತ್ತಾಯಿಸಿರುವ ಆರೋಪದ ಮೇಲೆ ಸಚಿವ ಹೆಚ್​​​.ನಾಗೇಶ್ ಅವರ ವಿರುದ್ದ ಸಲ್ಲಿಕೆಯಾಗಿರುವ ದೂರು ತಡವಾಗಿ ಬೆಳಕಿಗೆ ಬಂದಿದೆ. ಅಧಿಕಾರಿಯ ಪುತ್ರಿಯೊಬ್ಬರು ಪ್ರಧಾನ ಮಂತ್ರಿ ಕಚೇರಿಗೆ ಸಲ್ಲಿಸಿರುವ ಈ ದೂರು ರಾಜ್ಯದ ಇ-ಜನಸ್ಪಂದನ ವಿಭಾಗದಲ್ಲಿಯೂ ಸಹ ಅಧಿಕೃತವಾಗಿ ದಾಖಲಾಗಿದೆ ಎನ್ನಲಾಗಿದೆ. …

Read More »

ಟಿಕೆಟ್ ಹಿಂದೆ ಬರೆದಿದ್ದ 5 ರೂ. ಚಿಲ್ಲರೆಗಾಗಿ ಕೆಎಸ್‍ಆರ್ ಟಿಸಿ ಬಸ್ ಕಂಡಕ್ಟರ್ ಹಾಗೂ ಪ್ರಯಾಣಿಕನ ನಡುವೆ ಮಾರಾರಿ

ಕೋಲಾರ: ಟಿಕೆಟ್ ಹಿಂದೆ ಬರೆದಿದ್ದ 5 ರೂ. ಚಿಲ್ಲರೆಗಾಗಿ ಕೆಎಸ್‍ಆರ್ ಟಿಸಿ ಬಸ್ ಕಂಡಕ್ಟರ್ ಹಾಗೂ ಪ್ರಯಾಣಿಕನ ನಡುವೆ ಮಾರಾರಿ ನಡೆದಿದೆ. ಜಿಲ್ಲೆಯ ಮುಳುಬಾಗಿಲು ಪಟ್ಟಣದ ಹಳೇ ಕೋರ್ಟ್ ಸರ್ಕಲ್ ಬಳಿ ಘಟನೆ ನಡೆದಿದ್ದು, ಚಿಲ್ಲರೆ ಹಣಕ್ಕಾಗಿ ಕೆಎಸ್‍ಆರ್‍ಟಿಸಿ ಕಂಡಕ್ಟರ್ ಮತ್ತು ಪ್ರಯಾಣಿಕ ಹೊಡೆದಾಡಿಕೊಂಡಿದ್ದಾರೆ. ಕೆಎಸ್‍ಆರ್‍ಟಿಸಿ ಬಸ್ ಕಂಡಕ್ಟರ್ ಟಿಕೆಟ್ ಹಿಂದೆ ಐದು ರೂಪಾಯಿ ಚಿಲ್ಲರೆ ಬರೆದುಕೊಟ್ಟಿದ್ದರು. ನಿಲ್ದಾಣ ಬರುತ್ತಿದ್ದಂತೆ ಪ್ರಯಾಣಿಕ ಚಿಲ್ಲರೆ ಕೊಡುವಂತೆ ಕೇಳಿದ್ದಾರೆ. ಈ ವೇಳೆ ನಿರ್ವಾಹಕ …

Read More »

ನಿವಾರ್ ಅಬ್ಬರ- ಕೋಲಾರದಲ್ಲಿ ಭಾರೀ ಮಳೆ,

ಕೋಲಾರ: ಚೆನ್ನೈ ನಿವಾರ್ ಚಂಡ ಮಾರುತದ ಅಬ್ಬರ ಮುಂದುವರೆದಿದ್ದು, ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದೆ. ಪರಿಣಾಮ ಮನೆಯ ಗೋಡೆ ಕುಸಿದಿದ್ದು, ವ್ಯಕ್ತಿಯ ಕಾಲು ಮುರಿದಿದೆ. ಜಿಲ್ಲೆಯ ಮುಳಬಾಗಿಲು ತಾಲೂಕಿನಲ್ಲಿ ಪ್ರತ್ಯೇಕ ಪ್ರಕರಣದಲ್ಲಿ ನಾಲ್ಕು ಮನೆ ಗೋಡೆ ಕುಸಿತವಾಗಿವೆ. ಪೆದ್ದೂರು ಗ್ರಾಮದ ಸೂರ್ಯ ನಾರಾಯಣ ಅವರ ಕಾಲು ಮುರಿದಿದೆ. ಮಲಗಿದ್ದಾಗ ಗೋಡೆ ಕುಸಿದ್ದರಿಂದ ಕಾಲು ಮುರಿದಿದೆ. ಮುಷ್ಟೂರಲ್ಲಿ ನಾಗಮಣಿ, ವಿಜಿಯಮ್ಮ ಅವರ 2 ಮನೆಯ ಗೋಡೆ ಕುಸಿತವಾಗಿದೆ. ಅಬ್ಬೆಹಳ್ಳಿಯ ಭಾಗ್ಯಮ್ಮ ಅವರ …

Read More »

ಲೈಟ್ ಕಂಬದ ವಿಚಾರಕ್ಕೆ ಜಗಳ – ನಾದಿನಿಗೆ ಹಿಗ್ಗಾಮುಗ್ಗ ಥಳಿಸಿದ ಬಾವ

ಕೋಲಾರ: ಕ್ಷುಲ್ಲುಕ ಕಾರಣಕ್ಕೆ ಉಂಟಾದ ಜಗಳದಲ್ಲಿ ವ್ಯಕ್ತಿಯೋರ್ವ ತನ್ನ ತಮ್ಮನ ಹೆಂಡತಿಯನ್ನು ಹಿಗ್ಗಾಮುಗ್ಗ ಥಳಿಸಿದ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕು ಕಲ್ಲುಕುಂಟೆ ಗ್ರಾಮದಲ್ಲಿ ನಡೆದಿದೆ.ಮನೆ ಬಳಿ ವಿದ್ಯುತ್ ಕಂಬ ಅಳವಡಿಸುವ ವಿಚಾರದಲ್ಲಿ ಬಾವನೊಂದಿಗೆ ಜಗಳ ಕಿತ್ತ ನಾದಿನಿ, ಮೊದಲಿಗೆ ಬಾವನಿಗೆ ಪೊರಕೆ ಸೇವೆ ಮಾಡಿದ್ದಾಳೆ. ಈ ವೇಳೆ ಇಬ್ಬರ ನಡುವೆ ಜಗಳ ಹೆಚ್ಚಾದಾಗ ಜಗಳ ಬಿಡಿಸುವ ನೆಪದಲ್ಲಿ ಬಂದ ಬಾವನ ಮಗನೂ ಕೂಡ ಮಹಿಳೆ ಮೇಲೆ ಹಲ್ಲೆ ಮಾಡಿದ್ದಾನೆ. …

Read More »

ರಾಷ್ಟ್ರ ಧ್ವಜ ಸುಟ್ಟ ಟಿಪ್ಪರ್ ಚಾಲಕ – ಹಿಡಿದು ಥಳಿಸಿದ ಸಾರ್ವಜನಿಕರು

ಕೋಲಾರ: ಕನ್ನಡ ರಾಜ್ಯೋತ್ಸವದೊಂದೆ ರಾಷ್ಟ್ರ ಧ್ವಜ ಸುಟ್ಟು ಅಪಮಾನವೆಸಿಗಿದ್ದ ಟಿಪ್ಪರ್ ಚಾಲಕನಿಗೆ ಸಾರ್ವಜನಿಕರು ಥಳಿಸಿದ ಘಟನೆ ಕೋಲಾರದಲ್ಲಿ ನಡೆದಿದೆಕೋಲಾರ ಜಿಲ್ಲೆಯ ಮಾಲೂರು ತಾಲೂಕು ಮಾಸ್ತಿ ಗ್ರಾಮದ ತಿಮ್ಮಸಂದ್ರ ಬಳಿ ಉತ್ತರ ಭಾರತ ಮೂಲದ ಟಿಪ್ಪರ್ ಲಾರಿ ಡ್ರೈವರ್ ಸತ್ಯೇಂದ್ರ ಕುಮಾರ್ ಯಾದವ್ ರಾಷ್ಟ್ರ ಧ್ವಜಕ್ಕೆ ಅಪಮಾನವೆಸಿಗಿದ್ದ ಕಿಡಿಗೇಡಿ. ರಾಷ್ಟ್ರಧ್ವಜಕ್ಕೆ ಅಪಮಾನವೆಸಗಿದ್ದ ಸುದ್ದಿ ತಿಳಿಯುತ್ತಿದ್ದಂತೆ ಸಾರ್ವಜನಿಕರು ಚಾಲಕನಿಗೆ ಹಿಗ್ಗಾಮುಗ್ಗ ಥಳಿಸಿದ್ದಾರೆ. ಅಪಮಾನವೆಸಗಿದ್ದ ಕಿಡಿಗೇಡಿ ಕೈಗೆ ರಾಷ್ಟ್ರ ಧ್ವಜ ಮತ್ತು ಕನ್ನಡ ಧ್ವಜವನ್ನು …

Read More »

ಕುರಿ ಕಾಪಾಡಲು ಹೋದ ಇಬ್ಬರೂ ನೀರು ಪಾಲು- ಕುರಿ ಮಾತ್ರ ಸುರಕ್ಷಿತ

ಕೋಲಾರ: ಕುರಿ ಕಾಪಾಡಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಕುರಿಗಾಹಿಗಳು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಕೋಲಾರದಲ್ಲಿ ನಡೆದಿದೆ.  ಮುಳಬಾಗಲು ತಾಲ್ಲೂಕಿನ ಕೀಲು ಹೋಳಲಿ ಗ್ರಾಮದ ಕೆರೆಯಲ್ಲಿ ಇಂದು ಸಂಜೆ ಈ ಘಟನೆ ನಡೆದಿದ್ದು, ಮೊದಲಿಗೆ ಕುರಿ ಮೇಯಿಸುತ್ತಿದ್ದ 46 ವರ್ಷದ ತಿಮ್ಮಪ್ಪ ತನ್ನ ಕುರಿಯನ್ನ ರಕ್ಷಣೆ ಮಾಡಲು ಕೆರೆಗೆ ಇಳಿದಿದ್ದಾನೆ. ಕುರಿ ಬಚಾವ್ ಆಗಿ ಬಂದಿದೆ. ಕುರಿಯನ್ನು ಕಾಪಾಡಲು ಹೋಗಿದ್ದ ತಿಮ್ಮಪ್ಪ ನೀರಿನಲ್ಲಿ ಮುಳುಗಿ ಸಾವನ್ನಪ್ಪುತ್ತಾನೆ. ಈ ವಿಚಾರ ತಿಳಿದು …

Read More »

ಅಕ್ರಮವಾಗಿ ಸಂಗ್ರಹಿಸಿದ್ದ 420 ಮೂಟೆ ಯೂರಿಯಾ ಗೊಬ್ಬರವನ್ನು ಕೃಷಿ ಅಧಿಕಾರಿಗಳು ದಾಳಿ ಮಾಡಿ ವಶಕ್ಕೆ

ಕೋಲಾರ: ಅಕ್ರಮವಾಗಿ ಸಂಗ್ರಹಿಸಿದ್ದ 420 ಮೂಟೆ ಯೂರಿಯಾ ಗೊಬ್ಬರವನ್ನು ಕೃಷಿ ಅಧಿಕಾರಿಗಳು ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ. ಜಿಲ್ಲೆಯ ಮಾಲೂರು ಕೃಷಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ರೈತರಿಗೆ ಸರಬರಾಜು ಮಾಡಬೇಕಿದ್ದ ಯೂರಿಯಾ ಗೊಬ್ಬರವನ್ನು ಖಾಸಗಿ ಕಾರ್ಖಾನೆ ಗೋಡೌನ್‍ನಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಕೃಷಿ ಅಧಿಕಾರಿಗಳು 420 ಮೂಟೆ ಗೊಬ್ಬರವನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಮಾಲೂರು ಸಹಾಯಕ ಕೃಷಿ ಅಧಿಕಾರಿ ಚಂದ್ರಪ್ಪ ಅವರ …

Read More »

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಯುತ್ತಾರಾ ಕೆ.ಎಚ್ ಮುನಿಯಪ್ಪ?

ಕೋಲಾರ: ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ರಾಜ್ಯ ರಾಜಕಾರಣದತ್ತ ಗಮನ ಹರಿಸುವಂತೆ ಕೆಪಿಸಿಸಿ ಅಧ್ಯಕ್ಷರು ಮತ್ತು ವಿರೋಧ ಪಕ್ಷದ ನಾಯಕರು ಅಭಿಮತ ವ್ಯಕ್ತಪಡಿಸಿದ್ದಾರೆ ಎಂದು ಮಾಜಿ ಸಂಸದ ಕೆ.ಎಚ್ ಮುನಿಯಪ್ಪ ಹೇಳಿದ್ರು. ಕೋಲಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಮೇಶ್ ಬಾಬು ಜೊತೆಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ರಾಜಕಾರಣಕ್ಕೆ ಬರುವ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲವೆಂದು ಸ್ಪಷ್ಟಪಡಿಸಿದ್ರು. ಇತ್ತೀಚೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ …

Read More »