Breaking News
Home / ಜಿಲ್ಲೆ / ಕೋಲಾರ (page 5)

ಕೋಲಾರ

ತಹಶೀಲ್ದಾರಿಗೆ ನಿವೃತ್ತ ಶಾಲಾ ಶಿಕ್ಷಕರೊಬ್ಬರು ಚಾಕುನಿಂದ ಇರಿದಿರುವ ಘಟನೆ

ಕೋಲಾರ ಜಿಲ್ಲೆಯ ಬಂಗಾರಪೇಟೆ ತಹಶೀಲ್ದಾರಿಗೆ ನಿವೃತ್ತ ಶಾಲಾ ಶಿಕ್ಷಕರೊಬ್ಬರು ಚಾಕುನಿಂದ ಇರಿದಿರುವ ಘಟನೆ ನಡೆದಿದೆ. ಸರ್ವೇ ಮಾಡೋ ವಿಚಾರದಲ್ಲಿ ಗೊಂದಲ ಏರ್ಪಟ್ಟಿದ್ದು, ಆರೋಪಿ ಶಿಕ್ಷಕ ದೊಡ್ಡಕಳವಂಚಿಯ ವೆಂಕಟಪತಿ ಎಂಬುವವರು ತಹಶೀಲ್ದಾರ್ ಚಂದ್ರಮೌಳೇಶ್ವರ್​ ಅವರಿಗೆ ಚಾಕುವಿನಿಂದ ಇರಿದಿದ್ದಾರೆ. ತಹಶೀಲ್ದಾರ್ ಬಂಗಾರಪೇಟೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಬಂಗಾರಪೇಟೆ ಪೊಲೀಸರು ಭೇಟಿ ನೀಡಿದ್ದಾರೆ. ತಹಶೀಲ್ದಾರ್​ ಸಾವು ತಾಜಾ ವರದಿಗಳ ಪ್ರಕಾರ ಆರ್.ಎಲ್.ಜಾಲಪ್ಪಾ ಆಸ್ಪತ್ರೆಗೆ ಸಾಗಿಸುವ ವೇಳೆ ಚಂದ್ರಮೌಳೇಶ್ವರ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. …

Read More »

ಬಯಲು ಸೀಮೆ ಕೋಲಾರದಲ್ಲಿ ನೀರಿನ ಜೊತೆಗೆ ರಕ್ತಕ್ಕೂ ಬರ..

ಕೋಲಾರ: ಮಹಾಮಾರಿ ಕೊರೊನಾ ತಡೆಗಟ್ಟಲು ಸರ್ಕಾರ ಮುನ್ನಚ್ಚರಿಕೆ ಕ್ರಮವಾಗಿ ಮಾಡಿದ ಲಾಕ್‍ಡೌನ್ ಎಫೆಕ್ಟ್ ಸಾಕಷ್ಟು ಕ್ಷೇತಗಳಿಗೆ ಹೊಡೆತ ಬಿದ್ದಿದೆ. ಬರದನಾಡು ಕೋಲಾರ ಜಿಲ್ಲೆಯಲ್ಲಿ ಲಾಕ್‍ಡೌನ್ ಎಫೆಕ್ಟ್ ನಿಂದ ರಕ್ತಕ್ಕೂ ಬರ ಬಂದಿದೆ. ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಲಾಕ್‍ಡೌನ್ ಜಾರಿಗೊಳಿಸಿದ್ದ ಪರಿಣಾಮ ರಾಜ್ಯದ ಜನರು ಆರ್ಥಿಕತೆ, ನಿರುದ್ಯೋಗ, ಆಹಾರ ಸಮಸ್ಯೆ ಸೇರಿದಂತೆ ಅನೇಕ ಸಮಸ್ಯೆಗಳನ್ನು ಕಾಣಬೇಕಾಯಿತು. ಇದರೊಂದಿಗೆ ರಕ್ತದ ಕೊರತೆಯೂ ಎದುರಾಗಿದೆ. ರಾಜ್ಯ ಸರ್ಕಾರ ಮಾ.23 ರಿಂದ ಲಾಕ್‍ಡೌನ್ …

Read More »

ಪ್ರತಿಭಟನೆಯಲ್ಲಿ ಸಮಾಜಿಕ ಅಂತರ ಪಾಲಿಸದೇ ನಿರ್ಲಕ್ಷತೆಯನ್ನ ವಹಿಸಿದ್ದಾರೆ.

ಕೋಲಾರ: ಕೋಲಾರದ ಎಪಿಎಂಸಿ ಮಾರುಕಟ್ಟೆಯಲ್ಲಿ ವರ್ತಕರಿಂದ ಪ್ರತಿಭಟನೆಯನ್ನು ಮಾಡುತ್ತಿದ್ದು, ಪ್ರತಿಭಟನೆಯಲ್ಲಿ ಕೋವಿಡ್ ನಿಯಮಗಳು ಉಲ್ಲುಂಘನೆ ಮಾಡಿದ್ದಾರೆ. ಪ್ರತಿಭಟನೆಯಲ್ಲಿ ಸಮಾಜಿಕ ಅಂತರ ಪಾಲಿಸದೇ ನಿರ್ಲಕ್ಷತೆಯನ್ನ ವಹಿಸಿದ್ದಾರೆ. ಮಾರುಕಟ್ಟೆಯ ಸೆಸ್ ಪಾವತಿಸುವುದಕ್ಕೆ ವಿರೋಧಿಸಿ ಪ್ರತಿಭಟನೆ ಮಾಡಿತ್ತಿದ್ದು, ಕೃಷಿ ಉತ್ಪನ್ನಗಳ ಖರೀದಿಗಾಗಿ ವರ್ತಕರು ಸಮಿತಿಗೆ ಪಾವತಿಸುವ ಸೆಸ್ ಶುಲ್ಕ ಮಾಡಿದ್ದಾರೆ. ಕೋವಿಡ್ ಸಮಸ್ಯೆ ಬಗೆಹರಿಯುವರೆಗು ಸೆಸ್ ಪಾವತಿ ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಕಳೆದ ಎರಡು ತಿಂಗಳಿನಿಂದ ಸೆಸ್ ಸಂಗ್ರಹ ನಿಲ್ಲಿಸಿದ್ದ ಎಪಿಎಂಸಿ ಕೊರೋನಾ ಮುಂದುವರೆದಿದ್ದರೂ …

Read More »

ಕೋಲಾರ: ವೈದ್ಯೆ ಸೇರಿ 10 ಮಂದಿಗೆ ಸೋಂಕು

ಕೋಲಾರ: ಜಿಲ್ಲೆಯಲ್ಲಿ ಗುರುವಾರ ವೈದ್ಯೆ ಸೇರಿದಂತೆ 10 ಮಂದಿಗೆ ಕೊರೊನಾ ಸೋಂಕು ಹರಡಿದ್ದು, ಸೋಂಕಿತರ ಸಂಖ್ಯೆ 86ಕ್ಕೆ ಏರಿದೆ. ಕೋಲಾರ ತಾಲ್ಲೂಕು ಒಂದರಲ್ಲೇ 5 ಮಂದಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಜನ ಬೆಚ್ಚಿ ಬಿದ್ದಿದ್ದಾರೆ. ಜಿಲ್ಲಾ ಕೇಂದ್ರದ ಆರ್‌.ಎಲ್‌.ಜಾಲಪ್ಪ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಕೋವಿಡ್‌-19 ವಾರ್ಡ್‌ನ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಇಬ್ಬರು ಆರೋಗ್ಯ ಕಾರ್ಯಕರ್ತರಿಗೆ ಸೋಂಕು ತಗುಲಿದೆ. ಕೊರೊನಾ ಸೋಂಕಿತರ ಸಂಪರ್ಕಕ್ಕೆ ಬಂದ ಕಾರಣಕ್ಕೆ ಈ ಇಬ್ಬರಿಗೆ ಸೋಂಕು ಹರಡಿರುವ …

Read More »

ಕೋಲಾರದಲ್ಲಿ ಚಿಕಿತ್ಸೆ ಫಕಲಾರಿಯಾಗದೆ ಕೊರೊನಾಗೆಮೊದಲ ಬಲಿ

ಕೋಲಾರ: ಹೆಮ್ಮಾರಿ ಕೊರೊನಾ ದಿನದಿಂದ ದಿನಕ್ಕೆ ತನ್ನ ಅಟ್ಟಹಾಸವನ್ನು ಮುಂದುರಿಸಿದ್ದು, ಕೋಲಾರದಲ್ಲಿ ಚಿಕಿತ್ಸೆ ಫಕಲಾರಿಯಾಗದೆ ಕೊರೊನಾಗೆ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಜಿಲ್ಲೆಯ ಕೆಜಿಎಫ್ ತಾಲೂಕಿನ ತೂಕಲ್ಲು ಗ್ರಾಮದ ರೋಗಿ 8495, 43 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಮೃತ ಮಹಿಳೆ ಕಳೆದ ಒಂದು ವಾರದಿಂದ ಜಾಲಪ್ಪಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಮೃತಪಟ್ಟಿದ್ದಾರೆ ಎಂದು ಕೆಜಿಎಫ್ ತಹಶೀಲ್ದಾರ್ ರಮೇಶ್ ಮಾಹಿತಿ ನೀಡಿದ್ದಾರೆ. ಕಳೆದ 10 ದಿನಗಳ ಹಿಂದೆ ದೆಹಲಿಯಿಂದ …

Read More »

ಲೈಟ್ ಆಫ್ ಮಾಡಿ ಕೊರೊನಾ ಸೋಂಕಿತೆಯ ಕೈ ಹಿಡಿದು ಎಳೆದಾಡಿದ ಕಾಮುಕ

ಕೋಲಾರ: ಕೋವಿಡ್-19 ಆಸ್ಪತ್ರೆಗೆ ನುಗ್ಗಿದ ವ್ಯಕ್ತಿ ಕೊರೊನಾ ಸೋಂಕಿತ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಭಾನುವಾರ ಘಟನೆ ನಡೆದಿದ್ದು, ಈ ಸಂಬಂಧ ಆಸ್ಪತ್ರೆಯ ರಕ್ಷಣಾಧಿಕಾರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವಿಶ್ವನಾಥಾಚಾರಿ ಅಸಭ್ಯವಾಗಿ ವರ್ತಿಸಿದ ವ್ಯಕ್ತಿ. ಈತ ನಗರದ ಬೆಸ್ತರ ಬೀದಿಯ ಗೆಲ್ಪೇಟ್ ನಿವಾಸಿ ಎಂದು ತಿಳಿದು ಬಂದಿದೆ. ಶ್ರೀನಿವಾಸಪುರ ತಾಲೂಕಿನ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಅರೋಗ್ಯ ಸಹಾಯಕನಾಗಿದ್ದಾನೆ ಎಂದು ತಿಳಿದು ಬಂದಿದೆ.   …

Read More »

ಕೋಲಾರದಲ್ಲಿ ಇಂದು 8 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಜಿಲ್ಲೆಯಲ್ಲಿ 64ಕ್ಕೆ ಕೊರೋನಾ ಸೊಂಕಿತರ ಸಂಖ್ಯೆ ಏರಿಕೆಯಾಗಿದೆ.

ಕೋಲಾರ : ಕೋಲಾರದಲ್ಲಿ ಇಂದು 8 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಜಿಲ್ಲೆಯಲ್ಲಿ 64ಕ್ಕೆ ಕೊರೋನಾ ಸೊಂಕಿತರ ಸಂಖ್ಯೆ ಏರಿಕೆಯಾಗಿದೆ. ಸೊಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ಸ್ಟಾಪ್ ನರ್ಸ್ ಸೇರಿ 8 ಜನರಲ್ಲಿ ಕೊರೋನಾ ಸೊಂಕು ಧೃಡವಾಗಿದ್ದು, ಕೋಲಾರ 3, ಬಂಗಾರಪೇಟೆ 3, ಮಾಲೂರು 1, ಮುಳಬಾಗಿಲು 1 ಪ್ರಕರಣ ದಾಖಲಾಗಿದೆ. ಸೊಂಕಿತರನ್ನು ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತಿದೆ. ಜಿಲ್ಲೆಯಲ್ಲಿ 64 ಕೊರೋನಾ ಸೊಂಕಿತರ ಪ್ರಕರಣಗಳು ದಾಖಲಾಗಿದ್ದ 32 …

Read More »

ವಿಶ್ವನಾಥ್ ತಾಳ್ಮೆಯಿಂದ ಇದ್ದರೆ ಮುಂದೆ ಒಳ್ಳೆಯ ಭವಿಷ್ಯವಿದೆ: ನಾಗೇಶ್

ಕೋಲಾರ: ವಿಧಾನ ಪರಿಷತ್ ಚುನಾವಣೆಗೆ ಟಿಕೆಟ್ ನೀಡುವ ವಿಚಾರದಲ್ಲಿ ವಿಶ್ವನಾಥ್ ಅವರನ್ನು ಬಿಜೆಪಿ ಹೈಕಮಾಂಡ್ ಕೈಬಿಟ್ಟಿರುವುದು ಬೇಸರ ತಂದಿದೆ. ಆದರೆ ಅವರು ತಾಳ್ಮೆಯಿಂದ ಇದ್ದರೆ ಮುಂದಿನ ದಿನಗಳಲ್ಲಿ ಅವರಿಗೆ ಒಳ್ಳೆಯ ಭವಿಷ್ಯವಿದೆ ಎಂದು ಅಬಕಾರಿ ಸಚಿವ ಎಚ್. ನಾಗೇಶ್ ಹೇಳಿದ್ದಾರೆ. ಕೋಲಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಸಂಬಂದ ಅಧಿಕಾರಿಗಲ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವು ಸಮಯ ರಾಜಕೀಯದಲ್ಲಿ ಏರುಪೇರುಗಳು ಆಗುತ್ತವೆ. ಅದು …

Read More »

ಪತ್ತೆಯಾಗದ ಕೊರೊನಾ ಸೋಂಕಿತ- ಶೋಧದಲ್ಲಿ 2 ರಾಜ್ಯದ ಅಧಿಕಾರಿಗಳು…………

ಕೋಲಾರ: ಕೊರೊನಾ ಸೋಂಕಿತ ತನಗೆ ಸೋಂಕು ತಗುಲಿರೋದು ದೃಢಪಡುತ್ತಿದ್ದಂತೆ ಮೊಬೈಲ್ ಸ್ವಿಚ್ ಆಫ್ ಮಾಡಿ ಎಸ್ಕೇಪ್ ಅಗಿರುವ ಘಟನೆ ಕೋಲಾರದಲ್ಲಿ ಆತಂಕಕ್ಕೆ ಕಾರಣವಾಗಿದೆ. ಕೋಲಾರದಲ್ಲಿ ಈ ಸೋಂಕಿತನಿಂದ ಸೋಂಕು ಹಬ್ಬುತ್ತಾ ಅನ್ನೋ ಆತಂಕ ಮನೆ ಮಾಡಿದೆ. ಮಂಡ್ಯ ಜಿಲ್ಲೆ ನಾಗಮಂಗಲ ಮೂಲದ ವ್ಯಕ್ತಿಯಿಂದ ಸದ್ಯ ಇಂಥಾದೊಂದು ಆತಂಕ ಎದುರಾಗಿದ್ದು, ಕೊರೊನಾ ಸೋಂಕಿತ (ರೋಗಿ-4863) ಜೂನ್ 3 ರಂದು ಆಂಧ್ರದ ತಿರುಪತಿ ತಿರುಮಲದಿಂದ ಕೋಲಾರಕ್ಕೆ ಬಂದಿದ್ದಾನೆ. ತಿರುಮಲದಲ್ಲಿ ಹೋಟೆಲ್ ಒಂದರಲ್ಲಿ ಕೆಲಸ …

Read More »

ಲಾಕ್‍ಡೌನ್ ಸಡಿಲಿಕೆಯಾಗುತ್ತಿದ್ದಂತೆ ತರಕಾರಿಗೆ ಹೆಚ್ಚಾದ ಡಿಮ್ಯಾಂಡ್………….

ಕೋಲಾರ: ಎರಡುವರೆ ತಿಂಗಳ ಕಾಲ ಕೊರೊನಾ ಲಾಕ್‍ಡೌನ್‍ನಿಂದಾಗಿ ಮಾರುಕಟ್ಟೆ ಇಲ್ಲದೆ ಟೊಮ್ಯಾಟೋ ಸೇರಿದಂತೆ ತರಕಾರಿಗಳಿಗೆ ಬೆಲೆ ಇಲ್ಲದೆ ಬೀದಿಗೆ ಸುರಿಯಲಾಗುತಿತ್ತು. ಆದರೆ ಲಾಕ್‍ಡೌನ್ ಸಡಿಲಿಕೆ ಅದೃಷ್ಟವನ್ನೇ ತಂದಿದ್ದು, ಕಂಗಾಲಾಗಿದ್ದ ರೈತ ಸಮುದಾಯ ಚೇತರಿಕೆಯತ್ತ ಹೆಜ್ಜೆ ಹಾಕುತ್ತಿದ್ದಾನೆ. ಬಯಲು ಸೀಮೆ ಕೋಲಾರ ಜಿಲ್ಲೆಯಲ್ಲಿ ಬಹುತೇಕ ರೈತರು ಟೊಮ್ಯಾಟೊ ಸೇರಿದಂತೆ ತರಕಾರಿಗಳನ್ನ ಬೆಳೆಯುತ್ತಾರೆ. ಆದರೆ ಅವರ ಶ್ರಮಕ್ಕೆ ತಕ್ಕಂತೆ ಬೆಲೆ ಸಿಗೋದು ಅಪರೂಪ. ಬೆಲೆ ಸಿಗದೇ ಬೆಳೆದ ಬೆಳೆಯನ್ನು ಬೀದಿಗೆ ಸುರಿದು ಕಣ್ಣೀರಾಕೋದು …

Read More »