Breaking News
Home / ಜಿಲ್ಲೆ / ಗದಗ (page 4)

ಗದಗ

ಮಹಿಳೆಯೊಬ್ಬಳು ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಲೆ

ಗದಗ: ಮಹಿಳೆಯೊಬ್ಬಳು ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಲೆ ಮಾಡಿರುವ ಘಟನೆ ತಾಲೂಕಿನ ಕಬಲಾಯತಕಟ್ಟಿ ತಾಂಡದಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ. ಲಕ್ಷ್ಮಣ ಪಾಂಡಪ್ಪ ಲಮಾಣಿ (39) ಮೃತ ದುರ್ದೈವಿ. ಈತನ ಪತ್ನಿ ಲಲಿತಾ ಮತ್ತು ಈಕೆಯ ಪ್ರಿಯಕರ ಸೋಮಪ್ಪ ಚೆನ್ನಪ್ಪ ಲಮಾಣಿ ಕೊಲೆ ಆರೋಪಿಗಳು. ರಾತ್ರಿ ಮನೆಯಲ್ಲಿ ಮಲಗಿದ್ದ ಲಕ್ಷ್ಮಣ ಪಾಂಡಪ್ಪ ಅವರನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ. ಲಲಿತಾ ಮತ್ತು ಸೋಮಪ್ಪ ನಾಲ್ಕು ವರ್ಷಗಳಿಂದ ಅಕ್ರಮ ಸಂಬಂಧ …

Read More »

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ…………..

ಗದಗ: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಕಾರಿನ ಮುಂಭಾಗ ಸಂಪೂರ್ಣ ಸುಟ್ಟಿದೆ. ಆದರೆ ಪವಾಡವೆಂಬಂತೆ ತಾಲೂಕು ಪಂಚಾಯತ್ ಅಧ್ಯಕ್ಷ ಪರಸಪ್ಪ ಇಮ್ಮಡಿ ಪಾರಾಗಿದ್ದಾರೆ.ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕು ಬಟ್ಟೂರು ಬಳಿ ಘಟನೆ ನಡೆದಿದೆ. ಲಕ್ಷ್ಮೇಶ್ವರ ತಾಲೂಕು ಪಂಚಾಯಿತಿ ಅಧ್ಯಕ್ಷರ ಪರಸಪ್ಪ ಇಮ್ಮಡಿ ಅವರ ಡಸ್ಟರ್ ಕಾರಿನ ಮುಂಭಾಗ ಹಾಗೂ ಒಳಗಡೆಯ ಸೀಟ್‍ಗಳು ಸುಟ್ಟು ಕರಕಲಾಗಿವೆ. ಬಟ್ಟೂರಿನಿಂದ ಲಕ್ಷ್ಮೇಶ್ವರಕ್ಕೆ ಹೋಗುವ ವೇಳೆ ಆಡರಗಟ್ಟಿ ಬಳಿ ದಾರಿ ಮಧ್ಯೆ ಕಾರಿನಲ್ಲಿ ಏಕಾಏಕಿ ಬೆಂಕಿ …

Read More »

ಸೋದರಿ ಜೊತೆ ಅನುಚಿತವಾಗಿ ವರ್ತಿಸಬೇಡ ಅಂದಿದ್ದಕ್ಕೆ ಚಾಕುವಿನಿಂದ ಇರಿದು ಕೊಲೆ

ಗದಗ: ತನ್ನ ಸಹೋದರಿ ಜೊತೆಗೆ ಮಾತನಾಡುವುದು, ಭೇಟಿ ಮಾಡಿ ಅನುಚಿತವಾಗಿ ವರ್ತಿಸಬೇಡಿ ಅಂದಿದ್ದಕ್ಕೆ ಸಹೋದರರಿಬ್ಬರು ಯುವಕನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಕಲಕೇರಿ ಗ್ರಾಮದಲ್ಲಿ ನಡೆದಿದೆ. 23 ವರ್ಷದ ಮುಸ್ತಾಕ್ ಅಲಿ ನದಾಫ್ ಕೊಲೆಯಾದ ಯುವಕ. ದಾವಲ್ ಸಾಬ್ ಮಲ್ಲಾಡದ ಹಾಗೂ ಮಹ್ಮದ್ ಅಲಿ ಮಲ್ಲಾಡದ ಎಂಬ ಸಹೋದರರು ಒಟ್ಟಾಗಿ ಮುಸ್ತಾಕ್ ಅಲಿ ಜೊತೆ ಜಗಳವಾಡಿದ್ದಾರೆ. ಮಾತಿಗೆ ಮಾತು ಬೆಳೆದು ಜಗಳ ತಾರಕಕ್ಕೇರಿದ ವೇಳೆ …

Read More »

ಡಾ. ಪಂ. ಪುಟ್ಟರಾಜ ಗವಾಯಿಗಳವರ ಬಸ್ ನಿಲ್ದಾಣ ಎಂದು ನಾಮಕರಣ ಮಾಡುವಂತೆ ಪ್ರತಿಭಟನೆ : ಪೂಜಾ ಕಾರ್ಯ ಮುಂದಕ್ಕೆ

ಗದಗ :  ನಗರದ ನವೀಕರಣಗೊಂಡ ಹಳೆ ಬಸ್ ನಿಲ್ದಾಣಕ್ಕೆ ಪಂ.ಪುಟ್ಟರಾಜ ಗವಾಯಿಗಳ ಹೆಸರನ್ನು ನಾಮಕರಣ ಮಾಡುವಂತೆ ಆಗ್ರಹಿಸಿ ಹೋರಾಟ ಮುಂದುವರೆಸಿದ್ದರಿAದ  ಶಾಸಕ ಎಚ್.ಕೆ.ಪಾಟೀಲ ಅವರು ಭರವಸೆ ನೀಡಿದ್ದರಿಂದ ಸಾರಿಗೆ ಅಧಿಕಾರಿಗಳು ಭಾನುವಾರ ಬಸ್ ನಿಲ್ದಾಣಕ್ಕೆ ಸಾಂಕೇತಿಕವಾಗಿ ಹಮ್ಮಿಕೊಂಡಿದ್ದ ಪೂಜಾ ಕಾರ್ಯಕ್ರಮವನ್ನು ಮುಂದೂಡಿದ್ದಾರೆ. ನಗರದಲ್ಲಿ ನವೀಕರಣವಾಗುತ್ತಿರುವ ಹಳೆ ಬಸ್ ನಿಲ್ದಾಣಕ್ಕೆ  ಡಾ. ಪಂ. ಪುಟ್ಟರಾಜ ಬಸ್ ನಿಲ್ದಾಣ ಎಂದು ನಾಮಕರಣ ಮಾಡಬೇಕೆಂದು ಆಗ್ರಹಿಸಿ ಸ್ನೇಹ ಬಳಗ, ಕ್ರಾಂತಿ ಸೇನಾ ಹಾಗೂ ವಿವಿಧ …

Read More »

ಆಸ್ಪತ್ರೆಯ ಕಟ್ಟಡದ ಮೇಲಿಂದ ಹಾರಿ ಆತ್ಮಹತ್ಯೆ

ಗದಗ: ಕೊರೊನಾ ಸೋಂಕು ದೃಢಪಟ್ಟ ಹಿನ್ನಲೆ ಆಘಾತಗೊಂಡ ವ್ಯಕ್ತಿ ಆಸ್ಪತ್ರೆಯ ಕಟ್ಟಡದ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗದಗನ ಜಿಮ್ಸ್ ಆಸ್ಪತ್ರೆಯಲ್ಲಿ ಘಟನೆ ನಡೆದಿದ್ದು, ಜಿಮ್ಸ್ ಕೋವಿಡ್-19 ಆಸ್ಪತ್ರೆಯ 4ನೇ ಅಂತಸ್ತಿನ ಮೇಲಿಂದ ಹಾರಿ ಸಾವಿಗೆ ಶರಣಾಗಿದ್ದಾನೆ. ಮುಂಡರಗಿ ತಾಲೂಕಿನ ಸುಮಾರು 40 ವರ್ಷದ ಬಸವರಾಜ್ ಈಳಗೇರ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದ ಹಿನ್ನೆಲೆ ಗುರುವಾರ ಜಿಮ್ಸ್ ಕೋವಿಡ್-19 ಆಸ್ಪತ್ರೆಯಲ್ಲಿ ಗಂಟಲು ದ್ರವ ಪರೀಕ್ಷೆ …

Read More »

ಗದಗ ಜಿಲ್ಲೆಯಲ್ಲಿ ನಕಲಿ ಮದ್ಯ ಮಾರಾಟ ಮಾಡುತ್ತಿದ್ದ ನಾಲ್ವರ ಬಂಧನ

ಗದಗ : ಮದ್ಯ ಪ್ರಿಯರೇ ಎಚ್ಚರ.. ಎಚ್ಚರ.. ಇನ್ಮುಂದೆ ಮದ್ಯ ಸೇವನೆ ಮಾಡಬೇಕಾದ್ರೆ, ಹತ್ತು ಸಾರಿ ವಿಚಾರ ಮಾಡಿ. ಇಲ್ಲವಾದ್ರೆ, ನೀವು ನಕಲಿ ಮದ್ಯ ಸೇವನೆ ಮಾಡಿ ಯಮರಾಯನ ಪಾದ ಸೇರೋದು ಗ್ಯಾರಂಟಿ. ಗದಗ ಜಿಲ್ಲೆಯಲ್ಲಿ ನಕಲಿ ಮದ್ಯವನ್ನು ರಾಜರೋಷವಾಗಿ ಮಾರಾಟ ಮಾಡಲಾಗುತ್ತಿದೆ. ಸ್ವಲ್ಪವೂ ಅನುಮಾನ ಬಾರದ ಹಾಗೆ ಒರಿಜನಲ್ ಬಾಟಲ್ ಹಾಗೇ ಪ್ಯಾಕ್ ಮಾಡಿ ನಕಲಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಇದು ನಕಲಿ ಮದ್ಯದ ಅಸಲಿ ಕಥೆ. ನಕಲಿ …

Read More »

ಲಿಫ್ಟ್‌ನಲ್ಲೇ ಶವ- ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ನಿರ್ಲಕ್ಷ್ಯ

ಗದಗ: ಇಲ್ಲಿನ ಜಿಮ್ಸ್ ಆಸ್ಪತ್ರೆ ಸದಾ ವಿವಾದಗಳಿಗೆ ಕಾರಣವಾಗುತ್ತಿದೆ. ಇದೀಗ ಸಿಬ್ಬಂದಿ ಶವವನ್ನು ಲಿಫ್ಟ್ ನಲ್ಲೇ ಬಿಟ್ಟು ಹೋಗಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಆಸ್ಪತ್ರೆಯ ಲಿಪ್ಟ್‍ನಲ್ಲಿಯೇ ಶವ ಬಿಡುವುದು, ಐಸಿಯು ಬೆಡ್‍ಗಾಗಿ ರೋಗಿಗಳು ಪರದಾಡುವುದು ಜಿಮ್ಸ್ ನಲ್ಲಿ ನಿತ್ಯದ ಕತೆಯಾಗಿದೆ. ಅಂಬುಲೆನ್ಸ್ ಅಸ್ತವ್ಯಸ್ತತೆ ಕಾರಣದಿಂದ ಒಂದು ಕೋವಿಡ್ ಶವವನ್ನು ಬೆಳಗ್ಗೆಯಿಂದ ಸಾಯಂಕಾಲದವರೆಗೆ ಲಿಫ್ಟ್‍ನಲ್ಲೇ ಬಿಡಲಾಗಿತ್ತು ಎನ್ನಲಾಗುತ್ತಿದೆ ಕನಿಷ್ಠ ಶವಾಗಾರದಲ್ಲೇ ಇಟ್ಟು ಅಂಬುಲೆನ್ಸ್ ಬಂದ ನಂತರ ಸಾಗಿಸಬೇಕಿತ್ತು. ಆದರೆ ಸಿಬ್ಬಂದಿ ಲಿಫ್ಟ್ …

Read More »

ಆರೋಗ್ಯಾಧಿಕಾರಿಗಳ ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ: ಸಚಿವ ಸಿ.ಸಿ ಪಾಟೀಲ

ಗದಗ: ಮುಂಡರಗಿ ತಾಲ್ಲೂಕು ವೈದ್ಯಾಧಿಕಾರಿಗೆ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಬೆಂಗಳೂರಿನ ಸ್ಪರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವು ಭರಿಸಲಿದೆ ಎಂದು ಗದಗ ಜಿಲ್ಲೆ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ತಿಳಿಸಿದ್ದಾರೆ. ಈ ಕುರಿತು ಸಚಿವರು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಜಾವಿದ್ ಅಕ್ತರ್ ಅವರೊಂದಿಗೆ ಮಾತನಾಡಿದ್ದು, ಅವರು ಸ್ಪರ್ಶ ಆಸ್ಪತ್ರೆಯ ಮುಖ್ಯಸ್ಥರೊಂದಿಗೆ ಈಗಾಗಲೇ ಮಾತನಾಡಿದ್ದು, ಸರ್ಕಾರವು ಚಿಕಿತ್ಸೆ ವೆಚ್ಚ ಪಾವತಿಸಲಿದೆ. ಸರ್ಕಾರವು ಕೊರೊನಾ ವಾರಿಯರ್ಸ್ ಜೊತೆಗೆ ಇರಲಿದೆ ಎಂದು …

Read More »

ಮತ್ತೆ 46 ಜನರಿಗೆ ಸೋಂಕು

ಗದಗ: ಜಿಲ್ಲೆಯಲ್ಲಿ ಹೊಸದಾಗಿ 46 ಜನರಿಗೆ ಕೋವಿಡ್‌ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 2,399ಕ್ಕೆ ಏರಿದೆ. ಈ ವರೆಗೆ 1321 ಜನರು ಗುಣಮುಖರಾಗಿದ್ದು, 1027 ಪ್ರಕರಣಗಳು ಸಕ್ರಿಯವಾಗಿವೆ. ಗದಗ-28, ಮುಂಡರಗಿ-4, ನರಗುಂದ-6, ರೋಣ-6, ಶಿರಹಟ್ಟಿ-1, ಹೊರಜಿಲ್ಲೆಯ ಒಬ್ಬರಿಗೆ ಕೋವಿಡ್‌ ದೃಢಪಟ್ಟಿದೆ. ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿಯ ಜೆ.ಟಿ. ಕಾಲೇಜು ರಸ್ತೆ, ನರಸಾಪುರ, ವಿವೇಕಾನಂದ ನಗರ,ಬೆಟಗೇರಿ, ಕಳಸಾಪುರ ರಸ್ತೆಯ ಬಾಪೂಜಿ ನಗರ, ಹುಡ್ಕೊ ಕಾಲೋನಿ, ಮದೀನಾ ಮಸೀದಿ ಹತ್ತಿರ, ಎಸ್‌.ಎಂ. ಕೃಷ್ಣಾ ನಗರ, …

Read More »

ತಾಯಿಯ ಮಾಂಗಲ್ಯವನ್ನು ಬಿಡಿಸಿಕೊಡುವ ಜವಾಬ್ದಾರಿ ನನ್ನದು: ಸಿಸಿ ಪಾಟೀಲ್

ಗದಗ: ಮಕ್ಕಳ ಆನ್‍ಲೈನ್ ಶಿಕ್ಷಣಕ್ಕಾಗಿ ಜಿಲ್ಲೆಯ ನರಗುಂದ ತಾಲೂಕಿನ ರಡ್ಡೆರ ನಾಗನೂರ ಗ್ರಾಮದ ತಾಯಿ ಕಸ್ತೂರಿ ಅವರು ಅಡವಿಟ್ಟಿರುವ ಮಾಂಗಲ್ಯವನ್ನು ವಾಪಸ್ ಕೊಡಿದುವುದಾಗಿ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿಸಿ ಪಾಟೀಲ್ ಹೇಳಿದ್ದಾರೆ. ಕಸ್ತೂರಿ ಅವರು ಮಾಂಗಲ್ಯವನ್ನು ಅಡವಿಟ್ಟು ಟಿವಿ ಖರೀದಿ ಮಾಡಿ ಮಕ್ಕಳ ಶಿಕ್ಷಣಕ್ಕೆ ಅನುವು ಮಾಡಿಕೊಟ್ಟ ಸುದ್ದಿಯನ್ನುಮಾಡಿತ್ತು. ಈ ವರದಿಯನ್ನು ಗಮನಿಸಿಮಾತನಾಡಿದ ಸಚಿವ ಸಿಸಿ ಪಾಟೀಲ್, ಘಟನೆ ಬಗ್ಗೆ ನಾನು ಮಾಹಿತಿ ಪಡೆದು ಮಹಿಳೆಯೊಂದಿಗೆ ಮಾತನಾಡಿದ್ದೇನೆ. ಅಲ್ಲದೇ …

Read More »