Breaking News
Home / ಜಿಲ್ಲೆ / ಗದಗ (page 5)

ಗದಗ

ಜಮೀನಿನಲ್ಲಿ ಕೆಲಸ ಮಾಡ್ತಿದ್ದಾಗ ಸಿಡಿಲು ಬಡಿದು ರೈತ ಸಾವು

ಗದಗ: ಜಮೀನಿನಲ್ಲಿ ಬಿತ್ತನೆ ಕಾರ್ಯ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ರೈತ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ರೋಣ ತಾಲೂಕಿನ ಯಾವಗಲ್ ಗ್ರಾಮದಲ್ಲಿ ನಡೆದಿದೆ. 34 ವರ್ಷದ ಕೃಷ್ಣಪ್ಪ ಭಜಮ್ಮನವರ್ ಮೃತ ದುರ್ದೈವಿ ರೈತ. ನಾಲ್ಕು ಜನ ಸೇರಿಕೊಂಡು ಜಮೀನಿನಲ್ಲಿ ಮೆಣಸಿನ ಬೀಜ ಬಿತ್ತನೆ ಮಾಡ್ತಿದ್ದರು. ಮಳೆ ಬಂದ ಹಿನ್ನೆಲೆಯಲ್ಲಿ ಇತರೆ 3 ಬೇರೆ ಮರದಡಿ ನಿಂತುಕೊಂಡಿದ್ದಾರೆ. ಆದರೆ ಕೃಷ್ಣಪ್ಪ ಒಬ್ಬನೇ ಒಂದು ಮರದಡಿ ಮೊಬೈಲ್ ನಲ್ಲಿ ಮಾತನಾಡುತ್ತಾ ನಿಂತಿದ್ದರು. ಈ …

Read More »

ಉಸಿರಾಟದ ತೊಂದರೆಯಿಂದ ನಡುರಸ್ತೆಯಲ್ಲೇ ನರಳಾಡಿದ ಕೊರೊನಾ ಶಂಕಿತ

ಗದಗ: ಕೊರೊನಾ ಶಂಕಿತ ವ್ಯಕ್ತಿಯೋರ್ವ ನಡುರಸ್ತೆಯಲ್ಲಿ ಬಿದ್ದು ನರಳಾಡುತ್ತಿರುವ ದೃಶ್ಯ ಗದಗ ನಗರದ ಬೆಟಗೇರಿ ಭಾಗದಲ್ಲಿ ಕಂಡು ಬಂದಿದೆ. ನಡುರಸ್ತೆಯಲ್ಲಿ ನರಳಾಡಿದ ವ್ಯಕ್ತಿ ನಗರದ ಕುರಹಟ್ಟಿಪೆಟೆ ನಿವಾಸಿ ಎನ್ನಲಾಗಿದೆ. ಗಂಟಲು ನೋವು, ಹೊಟ್ಟೆ ಉರಿ, ಎದೆ ಉರಿ ಎಂದು ಎದೆ ಬಡಿದುಕೊಂಡು ನರಳಾಡುತ್ತಿದ್ದರೂ ಯಾರು ಮುಟ್ಟಿಲ್ಲ. ಕೂಡಲೇ 108 ವಾಹನಕ್ಕೆ ಫೋನ್ ಮಾಡಿದರೂ ವಾಹನ ಬರಲಿಲ್ಲ. ಒಂದು ಗಂಟೆ ತಡವಾಗಿ ಬಂದಿದ್ದಕ್ಕೆ ಸ್ಥಳೀಯರು ಅಂಬುಲೆನ್ಸ್ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. …

Read More »

ಕಂಟೈನ್ಮೆಂಟ್ ಪ್ರದೇಶದಲ್ಲೇ ವೈನ್‍ಶಾಪ್ ಓಪನ್- ಪಾನಮತ್ತರಿಂದ ಬೇಸತ್ತ ಸ್ಥಳೀಯರು

ಗದಗ: ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಕಂಟೈನ್ಮೆಂಟ್ ಪ್ರದೇಶದಲ್ಲಿ ಎಲ್ಲವೂ ಬಂದ್ ಇದ್ದು, ವೈನ್‍ಶಾಪ್ ಮಾತ್ರ ಓಪನ್ ಮಾಡಲಾಗಿದೆ. ಗ್ರಾಮದಲ್ಲಿ ಪಾಸಿಟಿವ್ ಕೇಸ್ ಕಂಡುಬಂದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಆರೋಗ್ಯ ಇಲಾಖೆಯಿಂದ ಅನೇಕ ಏರಿಯಾಗಳನ್ನಿ ಸೀಲ್ ಡೌನ್ ಮಾಡಲಾಗಿದೆ. ಕಂಟೈನ್ಮೆಂಟ್ ಪ್ರದೇಶದಲ್ಲಿರುವ ಎಲ್ಲಾ ಅಂಗಡಿ ಮುಗ್ಗಟ್ಟುಗಳು, ಜನ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ. ಆದರೆ ಕಂಟೈನ್ಮೆಂಟ್ ಪ್ರದೇಶದಲ್ಲಿ ಪ್ರಭಾವಿಯೊಬ್ಬರ ವೈನ್‍ಶಾಪ್ ಮಾತ್ರ ಓಪನ್ ಮಾಡಿದ್ದಾರೆ. ಪಾನಮತ್ತರ ಹಾವಳಿಯಿಂದ ಸ್ಥಳೀಯರು ಬೆಸತ್ತಿದ್ದಾರೆ. …

Read More »

ಚೊಚ್ಚಲ ಹೆರಿಗೆ 108 ವಾಹನದಲ್ಲೇ……

ಗದಗ: ಚೊಚ್ಚಲ ಹೆರಿಗೆ 108 ವಾಹನದಲ್ಲೇ ಆಗಿದ್ದು, ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷಿಸಿದರೂ ಅಂಬುಲೆನ್ಸ್ ಚಾಲಕ ಸಮಯಪ್ರಜ್ಞೆಯಿಂದ ಹೆರಿಗೆ ಮಾಡಿಸಿ ಜೀವ ಉಳಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಜಿಲ್ಲೆಯ ಶಿರಹಟ್ಟಿಯ 108 ಅಂಬುಲೆನ್ಸ್ ವಾಹನ ಚಾಲಕ ಮಹೇಶ್ ಮಾರನಬಸರಿ ಈ ಸಾಹಸ ಮಾಡಿದ್ದಾರೆ. ಅಂಬುಲೆನ್ಸ್ ವಾಹನದಲ್ಲಿ ನರ್ಸಿಂಗ್ ಸ್ಟಾಫ್ ಇಲ್ಲದಿದ್ದರೂ ವಾಹನದಲ್ಲೇ ಹೆರಿಗೆ ಮಾಡಿಸಿ ಚಾಲಕ 2 ಜೀವ ಉಳಿಸಿದ್ದಾರೆ. 108 ವಾಹನದಲ್ಲಿ ಚಾಲಕ ಒಬ್ಬನೇ ಇದ್ದು, ಹೆರಿಗೆ ಮಾಡಿಸಿಕೊಂಡು ಕ್ಲೀನಿಂಗ್ …

Read More »

ಈಗ 30 ದಿನಗಳ ಕಾಲ ರಜೆ ಬಂದಿರುವ ಯೋಧ 14 ದಿನಗಳ ಕಾಲ ಒಂಟಿಯಾಗಿ ಕ್ವಾರಂಟೈನ್ ನಲ್ಲಿ

ಗದಗ: ಇವರ ಹೆಸರು ಪ್ರಕಾಶ್ ಹೈಗರ್, ಗದಗ ಜಿಲ್ಲೆಯ ವಿಚಿತ್ರ ಹೆಸರು ಹೊಂದಿರುವ ಅಂತೂರು ಬೆಂತೂರು ಗ್ರಾಮದವರು. ಭಾರತೀಯ ಸೇನೆಯಲ್ಲಿರುವ ಇವರು ಅರುಣಾಚಲ ಪ್ರದೇಶದಲ್ಲಿ ಸೇವೆಯಲ್ಲಿದ್ದು, ಒಂದು ತಿಂಗಳ ರಜೆಯ ಮೇಲೆ ತವರಿಗೆ ಬಂದಿದ್ದಾರೆ. ಬರುವದಕ್ಕೂ ಮೊದಲು ತಾವು ಕೋವಿಡ್-19 ಪರೀಕ್ಷೆ ಮಾಡಿಸಿಕೊಂಡು, ನೆಗೆಟಿವ್ ಆಗಿರುವ ಕುರಿತು ಸರ್ಟಿಫಿಕೇಟ್ ಕೂಡ ತೆಗೆದುಕೊಂಡು ತಮ್ಮ ಗ್ರಾಮಕ್ಕೆ ಆಗಮಿಸಿದ್ದಾರೆ. ಎರಡು ವರುಷಗಳ ನಂತರ ತಮ್ಮ 15 ಸದಸ್ಯರ ಅವಿಭ್ಯಕ್ತ ಕುಟುಂಬ ಸೇರುತ್ತಿರುವ ಅವರು …

Read More »

ನರಗುಂದದಲ್ಲಿ 20 ಅಡಿಯಷ್ಟು ಭೂಮಿ ಕುಸಿತ- ಜನರಲ್ಲಿ ಆತಂಕ

ಗದಗ: ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಮನೆಯ ಮುಂದೆ ಭೂ ಕುಸಿತವಾಗಿದ್ದು, ಸ್ಥಳೀಯರು ಆತಂಕಕ್ಕೊಳಗಾಗಿದ್ದಾರೆ. ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಸಿ.ಸಿ.ಪಾಟೀಲ್ ತವರಲ್ಲೇ ಭೂ ಕುಸಿತ ಸಂಭವಿಸಿದೆ. ಜಿಲ್ಲೆಯ ನರಗುಂದದ ಶಂಕರಲಿಂಗ ಕಾಲೋನಿಯ ಅಂಬೋಜಿ ಪೇಟೆಯವರ ಮನೆ ಮುಂದೆ ಭೂಮಿ ಕುಸಿದಿದೆ. ಬೆಳಗ್ಗೆ ಈ ಘಟನೆ ನಡೆದಿದ್ದು, ಕ್ಷಣಾರ್ಧದಲ್ಲಿ ಬಾರಿ ಅನಾಹುತ ತಪ್ಪಿದೆ. ಸುಮಾರು 20 ಅಡಿಯಷ್ಟು ಭೂಮಿ ಕುಸಿತವಾಗಿದೆ. ಇದರಿಂದ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ. ಅಂತರ್ಜಲ ಹೆಚ್ಚಳ, ನರಗುಂದ …

Read More »

ಗ್ರಾಮೀಣ ಭಾಗಕ್ಕೂ ಆವರಿಸಿದ ಮಹಾಮಾರಿ ಕೊರೋನಾ..!

ಗದಗ: ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಹೆಚ್ಚಾಗುತ್ತಿದೆ. ಕೊರೋನಾ ಚಿಕಿತ್ಸೆಗೆ ಮೈದಾನ, ಕ್ರೀಡಾಂಗಣ ಸೇರಿದಂತೆ ಬಯಲು ಪ್ರದೇಶಗಳಲ್ಲಿ ವ್ಯವಸ್ಥೆ ಮಾಡಲು ಜನರನ್ನು ಜಾನುವಾರುಗಳು ಎಂದು ತಿಳಿದಿದ್ದೀರಾ? ಎಂದು ಶಾಸಕ ಎಚ್‌.ಕೆ. ಪಾಟೀಲ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಯುದ್ಧೋಪಾದಿಯಲ್ಲಿ ಮಾಡಬೇಕಾದ ಕೆಲಸಗಳನ್ನು ಬಿಟ್ಟು ಬೇರೆಲ್ಲವನ್ನೂ ಮಾಡುತ್ತಿದೆ. ಸಾರ್ವಜನಿಕರಿಗೆ ಗುಣಮಟ್ಟದ ಸೇವೆ ಲಭ್ಯವಾಗುತ್ತಿಲ್ಲ. ಎಲ್ಲೆಡೆ ಕೋವಿಡ್‌ ಆಸ್ಪತ್ರೆಗಳು ದಿನ ಕಳೆದಂತೆ ಭರ್ತಿಯಾಗುತ್ತಿವೆ. ಹೆಚ್ಚಿನ ಬೆಡ್‌ಗಳ ವ್ಯವಸ್ಥೆ ಮಾಡಲು …

Read More »

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಗದಗ: ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದು ಮನೆಗೆ ಹೋಗುತ್ತಿದ್ದಾಗ ಅಪಘಾತವಾಗಿ ಆಸ್ಪತ್ರೆಗೆ ಸೇರಿದ್ದ ಇಬ್ಬರು ವಿದ್ಯಾರ್ಥಿಗಳ ಪೈಕಿ ಓರ್ವನಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಮುಂಡರಗಿ ತಾಲೂಕಿನ ಕಲಕೇರಿ ಪರೀಕ್ಷಾ ಕೇಂದ್ರದಿಂದ ಜೂನ್ 25ರಂದು ಮೊದಲ ಪರೀಕ್ಷೆ ಮುಗಿಸಿ ಬೈಕ್‍ನಲ್ಲಿ ಮೂವರು ವಿದ್ಯಾರ್ಥಿಗಳು ಬಾಗೇವಾಡಿ ಗ್ರಾಮಕ್ಕೆ ಹೊರಟಿದ್ದರು. ಈ ವೇಳೆ ದಾರಿ ನಡುವೆ ಲಾರಿಗೆ ಬೈಕ್ ಡಿಕ್ಕಿ ಹೊಡೆದಿತ್ತು. ಸ್ಥಳಲ್ಲೇ ಓರ್ವ ಮೃತಪಟ್ಟಿದ್ದರೆ, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ಗದಗ ಜಿಮ್ಸ್ …

Read More »

S.S.L.C.  ಪರೀಕ್ಷೆ ಮುಗಿಸಿ‌ ಬೈಕ್​ನಲ್ಲಿ ತಮ್ಮೂರಿಗೆ ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ ಲಾರಿ ಡಿಕ್ಕಿ

ಗದಗ: ಎಸ್ಎಸ್ಎಲ್ ಸಿ  ಪರೀಕ್ಷೆ ಮುಗಿಸಿ‌ ಬೈಕ್​ನಲ್ಲಿ ತಮ್ಮೂರಿಗೆ ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ ಲಾರಿ ಡಿಕ್ಕಿಯಾಗಿ ಮೂವರು ಗಂಭೀರ ಗಾಯವಾಗಿರುವ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಬಳಿ  ಸಂಭವಿಸಿದೆ. ಸಿದ್ದಪ್ಪ ತಳವಾರ, ಈರಣ್ಣ ಬಡಿಗೇರ ಹಾಗೂ ಮೈಲಾರಿ ಯಳವತ್ತಿ ಎಂಬ  ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿದ್ದು, ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಎಸ್ಎಸ್ಎಲ್ ಸಿ  ಪರೀಕ್ಷೆ ನಿಮಿತ್ತ ಪಕ್ಕದ ಕಲಕೇರಿ‌ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಮುಗಿಸಿದ ಮೂವರು ವಿದ್ಯಾರ್ಥಿಗಳು ಬೈಕ್​ನಲ್ಲಿ …

Read More »

ಕ್ಷುಲ್ಲಕ ಕಾರಣಕ್ಕೆ ಮಾರಾಮಾರಿ- ರಕ್ತಸಿಕ್ತವಾದ ರಸ್ತೆ

ಗದಗ: ಹಳೆ ವೈಷಮ್ಯದ ಹಿನ್ನೆಲೆ ಎರಡು ಕುಟುಂಬಗಳು ಕ್ಷುಲ್ಲಕ ಕಾರಣಕ್ಕೆ ಮಾರಕಾಸ್ತ್ರಗಳಿಂದ ಬಡಿದಾಡಿಕೊಂಡಿರುವ ಘಟನೆ ಗದಗದ ಬೆಟಗೇರಿ ಸೆಟಲ್ಮೆಂಟ್‍ನಲ್ಲಿ ನಡೆದಿದೆ. ನಡು ರಸ್ತೆಯಲ್ಲೆ ಲಾಂಗು, ಮಚ್ಚುಗಳು ಝಳಪಿದ ಹಿನ್ನೆಲೆ ರಸ್ತೆ ಅನೇಕ ಕಡೆಗೆ ರಕ್ತಸಿಕ್ತವಾಗಿದೆ. ಬುಲೆಟ್ ಬೈಕ್, ಕಾರ್, ಮನೆಯ ಕಿಟಕಿ, ಬಾಗಿಲು ಸಂಪೂರ್ಣ ಜಖಂ ಆಗಿವೆ. ಘಟನೆಯಿಂದ ಯೇಸುಕುಮಾರ ಹೊಸಮನಿ (34), ಅನಿಲ ಮುತಗಾರ (35), ಗೋವಿಂದ ಮುತಗಾರ (43) ಮತ್ತು ಶಾಕಮ್ಮ (37)ಗೆ ಗಂಭೀರವಾಗಿ ಗಾಯಗಳಾಗಿವೆ. ಗಾಯಾಳನ್ನು …

Read More »