Home / ಜಿಲ್ಲೆ / ಚಾಮರಾಜ ನಗರ (page 4)

ಚಾಮರಾಜ ನಗರ

ತಾಯಿ ಹಾಸಿಗೆ ಹಿಡಿದ್ರು ಕೊರೊನಾ ತಡೆಗಾಗಿ ಶ್ರಮಿಸುತ್ತಿರೋ ಜಿಲ್ಲಾಧಿಕಾರಿ………

ಚಾಮರಾಜನಗರ: ತಾಯಿ ಅನಾರೋಗ್ಯದಿಂದ ಹಾಸಿಗೆ ಹಿಡಿದ್ರೂ ಅಮ್ಮನನ್ನು ನೋಡಲು ಹೋಗದೇ ಕೊರೊನಾ ವಿರುದ್ಧ ಹೋರಾಡುತ್ತಾ ಚಾಮರಾಜನಗರದ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಕರ್ತವ್ಯ ನಿಷ್ಠೆ ಮೆರೆದಿದ್ದಾರೆ. ಜಿಲ್ಲಾಧಿಕಾರಿ ರವಿಯವರ ತಾಯಿ ಬಹುಅಂಗಾಂದ ವೈಫಲ್ಯದಿಂದ ಬಳಲುತ್ತಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಚಾಮರಾಜನಗರ ಜಿಲ್ಲೆಗೆ ಕೊರೊನಾ ಹರಡದಂತೆ ಶ್ರಮಿಸುತ್ತಿರುವ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಕಳೆದ ಐವತ್ತು ದಿನಗಳಿಂದ ತಮ್ಮ ಪ್ರೀತಿಯ ತಾಯಿಯನ್ನು ಭೇಟಿಯಾಗಲು ಹೋಗಿಲ್ಲ. ಒಬ್ಬ ಜಿಲ್ಲಾಧಿಕಾರಿ ಪಕ್ಕದ ಜಿಲ್ಲೆಯ ಚೆಕ್‍ಪೋಸ್ಟ್ ದಾಟಿ …

Read More »

ಚಾಮರಾಜನಗರದ ಸಕ್ಕರೆ ಕಾರ್ಖಾನೆಗೆ ತಮಿಳುನಾಡಿನಿಂದ ಕಾರ್ಮಿಕರು- ಅನ್ನದಾತರ ಆಕ್ರೋಶ

ಚಾಮರಾಜನಗರ: ಹಸಿರು ವಲಯದಲ್ಲಿ ಲಾಕ್‍ಡೌನ್ ಸಡಿಲಿಕೆ ಹಿನ್ನೆಲೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿರುವ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆ ಪುನರಾರಂಭಗೊಂಡಿದೆ. ಆದರೆ ಕಾರ್ಖಾನೆ ಆಡಳಿತ ಮಂಡಳಿ ತಮಿಳುನಾಡಿನಿಂದ 45ಕ್ಕೂ ಹೆಚ್ಚು ಕಾರ್ಮಿಕರನ್ನು ಕರೆಸಿಕೊಂಡಿರುವುದು ಕೊರೊನಾ ಮುಕ್ತವಾಗಿರುವ ಚಾಮರಾಜನಗರ ಜಿಲ್ಲೆಯಲ್ಲಿ ಭಾರೀ ಆತಂಕ ಉಂಟುಮಾಡಿದೆ. ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದೇಶದಲ್ಲೇ 5ನೇ ಸ್ಥಾನದಲ್ಲಿರುವ ತಮಿಳುನಾಡಿನಿಂದ ಕಾರ್ಮಿಕರನ್ನು ಕರೆಸಿಕೊಳ್ಳುವ ಔಚಿತ್ಯವಾದರೂ ಏನಿತ್ತು ಎಂದು ರೈತ ಸಂಘ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಒಂದು ವೇಳೆ ಆ …

Read More »

ಹಾಟ್‍ಸ್ಪಾಟ್‍ಗಳ ಮಧ್ಯೆಯಿದ್ರೂ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಒಂದೇ ಒಂದು ಕೊರೊನಾ ಪ್ರಕರಣ ಪತ್ತೆಯಾಗಿಲ್ಲ……….

ಚಾಮರಾಜನಗರ: ರಾಜ್ಯದಲ್ಲಿ ಕೊರೊನಾ ಕೇಸ್‍ಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಹಾಟ್‍ಸ್ಪಾಟ್‍ಗಳ ಸಂಖ್ಯೆಯೂ ಹೆಚ್ಚಾಗುತ್ತಲೇ ಇದೆ. ಆದರೆ ಹಾಟ್‍ಸ್ಪಾಟ್‍ಗಳ ಮಧ್ಯೆಯಿದ್ರೂ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಒಂದೇ ಒಂದು ಕೊರೊನಾ ಪ್ರಕರಣ ಪತ್ತೆಯಾಗಿಲ್ಲ. ನಂಜನಗೂಡು, ದೆಹಲಿ ನಿಜಾಮುದ್ದೀನ್ ಪ್ರಕರಣದ ಬಳಿಕ ಚಾಮರಾಜನಗರದಲ್ಲಿ ಆತಂಕ ಮನೆ ಮಾಡಿತ್ತು. ಆದರೆ ಅಲ್ಲಿಂದ ಬಂದವರ ರಿಪೋರ್ಟ್ ಸಹ ನೆಗೆಟಿವ್ ಬಂದಿದ್ದು, ಜನ ನಿಟ್ಟುಸಿರು ಬಿಟ್ಟಿದ್ದಾರೆ. ನೆರೆ ರಾಜ್ಯಗಳಾದ ಕೇರಳ, ತಮಿಳುನಾಡಿನಲ್ಲಿ ಕೊರೊನಾ ಹೆಚ್ಚಾಗುತ್ತಿದೆ. ಜೊತೆಗೆ ನೆರೆ …

Read More »

ಮೇ 3ರವರೆಗೆ ಮದ್ಯ ಮಾರಾಟಕ್ಕೆ ಅವಕಾಶ ಇಲ್ಲ : ಸಚಿವ ಎಸ್.ಟಿ. ಸೋಮಶೇಖರ್

ಚಾಮರಾಜನಗರ- ಮೇ 3ರ ವರೆಗೆ ರಾಜ್ಯದ ಯಾವುದೇ ಭಾಗದಲ್ಲೂ ಮದ್ಯ ಮಾರಾಟಕ್ಕೆ ಅವಕಾಶ ಇಲ್ಲ. ರಾಜ್ಯಕ್ಕೆ ಇದರಿಂದ ನಷ್ಟವಾಗುತ್ತಿದ್ದರೂ ಜನತೆ ಹಿತದೃಷ್ಟಿಯಿಂದ ಸಿಎಂ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು. ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆಗೆ ಹಲವು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವರು, ಬಳಿಕ ಸಭೆ ನಡೆಸಿ ಕೆಲವು ಕಟ್ಟುನಿಟ್ಟಿನ ಸೂಚನೆ ನೀಡಿದರು. ಸಾಮಾಜಿಕ ಅಂತರವನ್ನು …

Read More »

ಕಾಡಿಗೆ ಬೆಂಕಿಯಿಟ್ಟು ಬೇಟೆಯಾಡುತ್ತಿದ್ದ ಖದೀಮರ ಬಂಧನ………..

ಚಾಮರಾಜನಗರ: ಕಾಡಿಗೆ ಬೆಂಕಿಯಿಟ್ಟು ಬೇಟೆಯಾಡುತ್ತಿದ್ದ ನಾಲ್ವರು ಖದೀಮರನ್ನು ಕಾವೇರಿ ವನ್ಯಧಾಮದ ಕೊತ್ತನೂರು ವಲಯದಲ್ಲಿ ಬಂಧಿಸಲಾಗಿದೆ. ಕೊಳ್ಳೇಗಾಲ ತಾಲೂಕಿನ ಜಾಗೇರಿ ಗ್ರಾಮದ ವಿನ್ಸೆಂಟ್, ಸಗಾಯ್ ರಾಜ್, ಚಾರ್ಲಿಸ್ ಸವರಿನಾಥನ್ ಹಾಗೂ ಜ್ಞಾನಪ್ರಕಾಶ್ ಬಂಧಿತ ಬೇಟೆಗಾರರು. ಕಾಡಿಗೆ ಬೆಂಕಿಯಿಟ್ಟು ಅರಣ್ಯ ಇಲಾಖೆ ಸಿಬ್ಬಂದಿಗಳ ಗಮನ ಬೇರೆಡೆಗೆ ಸೆಳೆದು ಬೇಟೆಯಾಡುತ್ತಿದ್ದರು ಎನ್ನಲಾಗಿದ್ದು, ಈ ಹಿಂದೆಯೂ ಬೇಟೆಯಾಡಿ ಇವರು ಸಿಕ್ಕಿಬಿದ್ದಿದ್ದರು ಎಂದು ಡಿಎಫ್‍ಒ ಡಾ.ಎಸ್. ರಮೇಶ್ ತಿಳಿಸಿದ್ದಾರೆ. ಬಂಧಿತರಿಂದ ನಾಡಬಂದೂಕು, ಮದ್ದುಗುಂಡು, ಚಾಕುಗಳು, ಸಾಂಬಾರ ಪದಾರ್ಥಗಳು, …

Read More »

ಲಕ್ಷಾಂತರ ಮೌಲ್ಯದ ತರಕಾರಿಯನ್ನ ಉಚಿತವಾಗಿ ಹಂಚಿದ ರೈತ……..

ಚಾಮರಾಜನಗರ: ಕೊರೊನಾ ಲಾಕ್‍ಡೌನ್ ಪರಿಣಾಮದಿಂದಾಗಿ ಗಡಿ ಜಿಲ್ಲೆಯ ಜನರು ಪರದಾಡುತ್ತಿದ್ದಾರೆ. ರೈತರು ಕೂಡ ತಾವು ಬೆಳೆದ ಬೆಳೆಗಳನ್ನು ಮಾರಾಟ ಮಾಡಲಾಗದೇ ಆರ್ಥಿಕ ನಷ್ಟ ಅನುಭವಿಸುತ್ತಿದ್ದಾರೆ. ಆದರೆ ಇಲ್ಲೊಬ್ಬ ರೈತ ಲಕ್ಷಾಂತರ ರೂಪಾಯಿ ಮೌಲ್ಯದ ತರಕಾರಿಯನ್ನು ಕಾಡಂಚಿನ ಜನರಿಗೆ ಹಂಚುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಜಿಲ್ಲೆಯ ಹನೂರು ತಾಲೂಕಿನ ಪಿ.ಜಿ.ಪಾಳ್ಯ ಬಸವನಗುಡಿ ಗ್ರಾಮದ ಬೆಳ್ಳುಳ್ಳಿ ಮಾದೇಶ ತಮ್ಮ ಐದು ಎಕರೆ ಜಮೀನಿನಲ್ಲಿ, ಎಲೆಕೋಸು, ಮೆಣಸಿನಕಾಯಿ, ಬದನೆಕಾಯಿ, ಕರಿಬೇವಿನಸೊಪ್ಪು ಬೆಳೆದಿದ್ದರು. ಆದರೆ ಈ …

Read More »

ರೈತರಿಗೆ ನೆರವಾದ ಸಂಸದ ಡಿಕೆ ಸುರೇಶ್- ನಷ್ಟವಾಗುತ್ತಿದ್ದ ಕಲ್ಲಂಗಡಿ ಖರೀದಿ

ಚಾಮರಾಜನಗರ: ಕೊರೊನಾ ಭೀತಿಯಿಂದ ಬೆಳೆ ನಷ್ಟ ಅನುಭವಿಸುತ್ತಿದ್ದ ರೈತರ ನೋವಿಗೆ ಸಂಸದ ಡಿ.ಕೆ.ಸುರೇಶ್ ಸ್ಪಂದಿಸಿದ್ದು, ಕಲ್ಲಂಗಡಿ, ಟೊಮಟೊ, ಬದನೆಕಾಯಿ ನಷ್ಟವಾಗುತ್ತಿದ್ದುದನ್ನು ಮನಗಂಡು ಸ್ವತಃ ತಾವೇ ಖರೀದಿ ಮಾಡಲು ಮುಂದಾಗಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಹೂಗ್ಯಂ ಗ್ರಾ.ಪಂ. ವ್ಯಾಪ್ತಿಯ ನಲ್ಲೂರು, ಗದ್ದೆ ಪೋಡಿ ಗ್ರಾಮಗಳಿಗೆ ಭೇಟಿ ನೀಡಿದ್ದು, ಈ ವೇಳೆ ಬೆಳೆ ನಷ್ಟವಾಗುತ್ತಿರುವುದು ಕಂಡು ಬಂದಿದೆ. ಹೀಗಾಗಿ ಸುಮಾರು 18 ಎಕರೆಯಲ್ಲಿ ಬೆಳೆದ ಕಲ್ಲಂಗಡಿಯನ್ನು ಸುರೇಶ್ ಕೊಂಡುಕೊಂಡಿದ್ದಾರೆ. ಕಲ್ಲಂಗಡಿ ಜೊತೆಗೆ …

Read More »

“ಬಡ ಕುಟುಂಬಗಳಿಗೆ ಮಾದಪ್ಪನ ದಾಸೋಹದಿಂದ ಅಕ್ಕಿ, ಮಾಸ್ಕ್ ವಿತರಣೆ”

ಚಾಮರಾಜನಗರ: ಲಾಕ್‍ಡೌನ್ ನಿಂದ ಸಂಕಷ್ಟದಲ್ಲಿರುವ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳು ಹಾಗೂ ಮಹದೇಶ್ವರಬೆಟ್ಟದ ವ್ಯಾಪ್ತಿಯ ಬಡ ಕುಟುಂಬಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಪಡಿತರ ವಿತರಣೆ ಮಾಡಿದರು. ಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ದಾಸೋಹ ನಡೆಯದ ಕಾರಣ ಅಲ್ಲಿ ದಾಸ್ತಾನು ಆಗಿರುವ ಸುಮಾರು 89 ಟನ್ ಅಕ್ಕಿಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಸಲಹೆಯಂತೆ ಮಹದೇಶ್ವರ ಬೆಟ್ಟ ವ್ಯಾಪ್ತಿಯ ಸುಮಾರು 6,500 …

Read More »

ಚಾಮರಾಜನಗರ:ಆಹಾರ ಕಿಟ್ ವಿತರಿಸಿ ಮಾನವೀಯತೆ ಮೆರೆದ ಟಿಬೇಟಿಯನ್ ಕ್ಯಾಂಪ್ ಜನತೆ

ಚಾಮರಾಜನಗರ: ಕೊರೊನಾ ತುರ್ತು ಪರಿಸ್ಥಿತಿ ಹಿನ್ನೆಲೆ ಮುಂದಿನ ಜೀವನ ನಿರ್ವಹಣೆಗೆ ಹೇಗೆ ಎಂದು ಕಂಗಾಲಾಗಿರುವ ಗಿರಿಜನ ಹಾಡಿಗಳ ಜನರಿಗೆ ಜಿಲ್ಲೆಯ ಹನೂರು ತಾಲೂಕಿನ ಒಡೆಯರಪಾಳ್ಯ ಸಮೀಪದ ಟಿಬೇಟಿಯನ್ ಸೆಟ್ಲೆಮೆಂಟ್ ಯೂನಿಯನ್ ಸಿಬ್ಬಂದಿ ಆಹಾರ ಸಾಮಗ್ರಿಗಳ ಕಿಟ್ ವಿತರಿಸಿ ಮಾನವೀಯತೆ ಮೆರೆದಿದ್ದಾರೆ. ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ದೇಶವನ್ನೇ ಲಾಕ್‍ಡೌನ ಮಾಡಿದೆ. ಇದರಿಂದ ದಿನಗೂಲಿ ಕಾರ್ಮಿಕರಿಗೆ ಜೀವನ ನಡೆಸುವುದು ಕಷ್ಟಕರವಾಗಿದೆ. ತುತ್ತು ಅನ್ನಕ್ಕೂ ಪರದಾಡುವಂತಾಗಿದೆ. ಪರಿಸ್ಥಿತಿ ಅರಿತ ಹನೂರು ತಾಲೂಕಿನ …

Read More »

ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳು ಪತ್ತೆ : ಬೆಚ್ಚಿ ಬಿದ್ದ ರೈತರು

ಕಬ್ಬು ಕಟಾವು ಮಾಡುವಾಗ ಕಬ್ಬಿನ ಗದ್ದೆಯಲ್ಲಿ ಎರಡು ಚಿರತೆ ಮರಿಗಳನ್ನು ನೋಡಿರೋ ರೈತರು ಬೆಚ್ಚಿ ಬಿದ್ದಿದ್ದಾರೆ.   ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಹೋಬಳಿಯ ತುಳಸಿ ಗ್ರಾಮದ ತೊಪಯ್ಯನ ಮಂಜೇಗೌಡರ ಕಬ್ಬಿನ ಗದ್ದೆಯಲ್ಲಿ ಎರಡು ಚಿರತೆ ಮರಿಗಳು ಕಂಡುಬಂದಿವೆ. ಕಬ್ಬು ಕಟಾವು ಮಾಡುವ ಕೂಲಿ ಕಾರ್ಮಿಕರು ಕಬ್ಬಿನ ಗದ್ದೆಯಲ್ಲಿ ಕಬ್ಬು ಕಟಾವು ಮಾಡುವ ಸಂದರ್ಭದಲ್ಲಿ ಎರಡು ಚಿರತೆ ಮರಿಗಳು ಗೋಚರಿಸಿವೆ. ಚಿರತೆ ಮರಿಗಳು ಲವಲವಿಕೆಯಿಂದ ಓಡಾಡುತ್ತಿದ್ದು, ಈ ಗ್ರಾಮದ ರೈತರ ಆತಂಕಕ್ಕೆ …

Read More »