ಚಿಕ್ಕಮಗಳೂರು: ಕೊರೊನಾ ವೈರಸ್‍ಗೆ ಆತಂಕಗೊಂಡು ಕಳೆದ 26 ದಿನಗಳಿಂದ ಜಿಲ್ಲೆಯ ತರೀಕೆರೆ ತಾಲೂಕಿನ ಹಾದಿಕೆರೆ ಗ್ರಾಮದ ಜನ ಇಂದಿಗೂ ದಿನಕ್ಕೆ 19 ಗಂಟೆಗಳ ಕಾಲ ಗ್ರಾಮದ ದ್ವಾರಬಾಗಿಲಲ್ಲಿ ಕಾವಲು ಕೂತಿದ್ದಾರೆ. ದಿನದಿಂದ ದಿನಕ್ಕೆ ಕೊರೊನಾ ಆತಂಕ ಹೆಚ್ಚುತ್ತಲೇ ಇದೆ. ಸಾವಿನ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಇವತ್ತು ನೆಗೆಟಿವ್ ಇದ್ದ ಜಿಲ್ಲೆಯಲ್ಲಿ ಬೆಳಗಾಗುವಷ್ಟರಲ್ಲಿ ಎರಡು-ಮೂರು ಪಾಸಿಟಿವ್ ಪ್ರಕರಣಗಳು ಬರುತ್ತಿವೆ. ಇಷ್ಟು ದಿನ ಜಿಲ್ಲೆ, ತಾಲೂಕು, ಪಟ್ಟಣಗಳಲ್ಲಿದ್ದ ಕೊರೊನಾ ಹಳ್ಳಿಗೂ ಕಾಲಿಟ್ಟಿರುವುದರಿಂದ ಜನ …
Read More »ಮಂಗಳೂರು ಜೈಲಿನಿಂದ 40 ಕೈದಿಗಳು ಚಿಕ್ಕಮಗಳೂರಿನ ಕಾರಾಗೃಹಕ್ಕೆ ಶಿಫ್ಟ್…
ಚಿಕ್ಕಮಗಳೂರು : ಮಂಗಳೂರು ಕಾರಾಗೃಹದಲ್ಲಿ ಸ್ಥಳಾವಕಾಶದ ಕೊರತೆಯಿಂದ ಚಿಕ್ಕಮಗಳೂರಿನ ಕಾರಾಗೃಹಕ್ಕೆ 40 ಕೈದಿಗಳನ್ನು ಸ್ಥಳಾಂತರಿಸಲಾಗಿದೆ. ಮಂಗಳೂರಿನ ಕೈದಿಗಳನ್ನು ಚಿಕ್ಕಮಗಳೂರು ಕಾರಾಗೃಹಕ್ಕೆ ಕರೆ ತಂದಿರುವುದಕ್ಕೆ ಇಲ್ಲಿನ ಕಾರಾಗೃಹದಲ್ಲಿರುವ ಕೈದಿಗಳು ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಕೊರೊನಾ ಸೋಂಕಿನ ಕಾರಣದಿಂದ ಸಾಮಾಜಿಕ ಅಂತರ ಕಾಪಾಡಲು ಸಮಸ್ಯೆಯಾಗುವ ಹಿನ್ನೆಲೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದ್ದು. ಎರಡು ಕೆಎಸ್ಆರ್ಟಿಸಿ ಬಸ್ಸುಗಳಲ್ಲಿ 40 ಕೈದಿಗಳು ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಚಿಕ್ಕಮಗಳೂರಿನ ಜಿಲ್ಲಾ ಕಾರಾಗೃಹ ಸೇರಿದ್ದಾರೆ.
Read More »ಕುರಿ ಮಾಂಸಕ್ಕೆ ದನದ ಮಾಂಸ ಮಿಕ್ಸ್ – ನಾಲ್ವರ ಬಂಧನ
ಚಿಕ್ಕಮಗಳೂರು: ಲಾಕ್‍ಡೌನ್ ವೇಳೆ ಮಾಂಸಕ್ಕೆ ಭಾರೀ ಬೇಡಿಕೆ ಇರುವ ಹಿನ್ನೆಲೆ ಕುರಿ ಮಾಂಸಕ್ಕೆ ದನದ ಮಾಂಸವನ್ನು ಮಿಕ್ಸ್ ಮಾಡಿ ನಾಲ್ವರು ಸಿಕ್ಕಿಬಿದ್ದಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಗ್ರಾಮದಲ್ಲಿ ನಡೆದಿದೆ. ಈ ಸಂಬಂಧ ಸಿರಾಜ್, ಅನಿಲ್ ಡಿಮೆಲ್ಲೊ, ಡೆಂನ್ಜಿಲ್, ಡೆಮಿಸ್ ಡಿಸೋಜ ಎಂಬವರನ್ನು ಬಂಧಿಸಲಾಗಿದೆ. ಕೊರೊನಾ ಆತಂಕದಿಂದ ಪ್ರತಿದಿನ ಜನಸಾಮಾನ್ಯರು ಆತಂಕದಿಂದ ಬದುಕುತ್ತಿದ್ದಾರೆ. ಜನರಿಗೆ ಊಟ-ತಿಂಡಿಗೆ ಸಮಸ್ಯೆ ಆಗಬಾರದೆಂದು ಸರ್ಕಾರ ಮಾಂಸವನ್ನು ಅತ್ಯಾವಶ್ಯಕ ಎಂದು ಪರಿಗಣಿಸಿ ಮಾಂಸ ಮಾರಾಟಕ್ಕೆ …
Read More »ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಮಹಿಳಾ ಕಾರ್ಮಿಕರು ಸಾವು
ಚಿಕ್ಕಮಗಳೂರು: ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಮಹಿಳಾ ಕಾರ್ಮಿಕರು ಮೃತಪಟ್ಟಿರುವ ಘಟನೆ ಮೂಡಿಗೆರೆ ತಾಲೂಕಿನ ಕಳಸದ ಬಾಳೆಹೊಳೆ ಸಮೀಪದ ಹಿತ್ಲುಮಕ್ಕಿ ಗ್ರಾಮದಲ್ಲಿ ಶನಿವಾರ ನಡೆದಿದೆ. ತಮಿಳುನಾಡು ಮೂಲದ ಜ್ಯೋತಿ (28), ಮಾದಮ್ಮ(65), ಮಾರಿ (27) ಮೃತ ತೋಟದ ಕಾರ್ಮಿಕರು. ಮಾದಮ್ಮ ಹಾಗೂ ಜ್ಯೋತಿ ತಾಯಿ ಮಗಳಾಗಿದ್ದು, ಮಾರಿ ಸಂಬಂಧಿ ಎಂದು ತಿಳಿದು ಬಂದಿದೆ. ತಮಿಳುನಾಡಿನ ಸೇಲಂ ಧರ್ಮಪುರಿ ಜಿಲ್ಲೆಯ ಪಾಪರೆಟ್ಟಿ ತಾಲೂಕಿನ 14 ಕಾರ್ಮಿಕರು ಕಳೆದ ಕೆಲ ತಿಂಗಳ …
Read More »ಅಡ್ಡ ಹಾಕಿದರು ಗಾಡಿ ನಿಲ್ಲ ದತಾಲೂಕು ಪಂಚಾಯತ್ ಅಧ್ಯಕ್ಷನ ಗಾಡಿ ಸೀಜ್….
ಚಿಕ್ಕಮಗಳೂರು: ಪೊಲೀಸರು ಅಡ್ಡ ಹಾಕಿದರು ಗಾಡಿ ನಿಲ್ಲಸದೆ ಮೂಡಿಗೆರೆ ತಾಲೂಕಿನ ಬಣಕಲ್‍ಗೆ ಬಂದು ಹಿಂದಿರುಗಿದ ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷನ ಗಾಡಿಯನ್ನು ಬಣಕಲ್ ಪೊಲೀಸರು ಸೀಜ್ ತಂದು ಠಾಣೆಯಲ್ಲಿ ನಿಲ್ಲಿಸಿದ್ದಾರೆ. ದಿನದಿಂದ ದಿನಕ್ಕೆ ಕೊರೊನಾ ಆತಂಕ ಹೆಚ್ಚಾಗುತ್ತಿದೆ. ರಾಜ್ಯ ಸರ್ಕಾರ ಎಲ್ಲಾ ಜಿಲ್ಲೆ ಹಾಗೂ ರಾಜ್ಯಗಳ ಗಡಿಗಳನ್ನು ಬಂದ್ ಮಾಡಿ ಆದೇಶ ಹೊರಡಿಸಿದೆ. ಈ ಮಧ್ಯೆ ಕೊರೊನಾ ವೈರಸ್ ಆತಂಕದಲ್ಲಿ ಮಂಗಳೂರು ರೆಡ್ ಝೋನ್‍ನಲ್ಲಿದೆ. ಮಂಗಳೂರಿನಿಂದ ಚಾರ್ಮಾಡಿ ಮೂಲಕ ಚಿಕ್ಕಮಗಳೂರಿಗೆ …
Read More »ಸಾಗರ To ತಮಿಳುನಾಡು – 600 ಕಿ.ಮೀ ನಡೆದೇ ಹೊರಟ ಕಾರ್ಮಿಕರು
ಚಿಕ್ಕಮಗಳೂರು: ಕಳೆದ ಆರು ತಿಂಗಳ ಹಿಂದೆ ಕಟ್ಟಡ ನಿರ್ಮಾಣಕ್ಕೆಂದು ತಮಿಳುನಾಡಿನಿಂದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿಗೆ ಬಂದಿದ್ದ 5 ಕಾರ್ಮಿಕರು ನಡೆದುಕೊಂಡೇ ತಮಿಳುನಾಡಿನತ್ತ ಹೆಜ್ಜೆ ಹಾಕಿದ್ದಾರೆ. ಏಪ್ರಿಲ್ 14ರ ಬಳಿಕವೂ ಕೊರೊನಾ ಲಾಕ್‍ಡೌನ್ ಮುಂದುವರೆದ ಹಿನ್ನೆಲೆ ವಾಹನಗಳು ಸಿಗದ ಕಾರಣ ಐವರು ಕಾರ್ಮಿಕರು ತಮಿಳುನಾಡಿನತ್ತ ನಡೆದುಕೊಂಡೇ ಸಾಗುತ್ತಿದ್ದಾರೆ. ಸಾಗರದಿಂದ ತಮಿಳುನಾಡಿಗೆ ಸರಿಸುಮಾರು 600 ಕಿ.ಮೀ ಅಂತರವಿದೆ. ಇಲ್ಲಿ ಕೆಲಸವಿಲ್ಲ ಎಂದು ಊರು ನೆನಪಾಗಿ ನಡೆದೇ ಊರು ಸೇರಲು ಕಾರ್ಮಿಕರು ಹೊರಟಿದ್ದಾರೆ. …
Read More »ಊಟ ಸಿಗದೆ ಬಾಣಂತಿಯೊಬ್ಬರು ತನ್ನ ಹಸುಗೂಸಿಗೆ ಹೊಟ್ಟೆ ತುಂಬಾ ಹಾಲು ಕುಡಿಸಲು ಪರಿತಪ್ಪಿಸುತ್ತಿರುವಂತಹ ಸ್ಥಿತಿ ನಿರ್ಮಾಣ
ಚಿಕ್ಕಮಗಳೂರು: ಕೊರೊನಾ ಎಫೆಕ್ಟ್‍ನಿಂದ ಹೊಟ್ಟೆ ತುಂಬಾ ಊಟ ಸಿಗದೆ ಬಾಣಂತಿಯೊಬ್ಬರು ತನ್ನ ಹಸುಗೂಸಿಗೆ ಹೊಟ್ಟೆ ತುಂಬಾ ಹಾಲು ಕುಡಿಸಲು ಪರಿತಪ್ಪಿಸುತ್ತಿರುವಂತಹ ಸ್ಥಿತಿ ಚಿಕ್ಕಮಗಳೂರಿನಲ್ಲಿ ನಿರ್ಮಾಣವಾಗಿದೆ. ಹಣ್ಣು-ತರಕಾರಿ ಸೇರಿದಂತೆ ಪೌಷ್ಠಿಕ ಆಹಾರ ಸಿಗದೆ ಬಾಣಂತಿಯೂ ಸೊರಗಿದ್ದು, ಹಸುಗೂಸಿಗೆ ತಾಯಿಯ ಎದೆಹಾಲು ಕೂಡ ಸರಿಯಾಗಿ ಸಿಗುತ್ತಿಲ್ಲ. ನಗರದ ಹಿರೇಮಗಳೂರಿನ ರೈಲ್ವೆ ಬ್ರಿಡ್ಜ್ ಕೆಳಗೆ ಬಯಲಲ್ಲಿ ಶೆಡ್ ಹಾಕಿಕೊಂಡು ಬದುಕುತ್ತಿರುವ ನಿರಾಶ್ರಿತ ಕುಟುಂಬಗಳು ಶೋಚನಿಯ ಸ್ಥಿತಿ ತಲುಪಿವೆ. ಅಂದೇ ದುಡಿದು ಅಂದೇ ತಿನ್ನುತ್ತಿದ್ದ ಈ …
Read More »ಚಿಕ್ಕಮಗಳೂರು:ಮಲೆನಾಡಲ್ಲಿ ಮಳೆ ಅಬ್ಬರ- ಬೃಹತ್ ಗಾತ್ರದ ಆಲಿಕಲ್ಲು ಪತ್ತೆ
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಭಾನುವಾರ ಜಿಲ್ಲೆಯ ಮೂಡಿಗೆರೆ ಹಾಗೂ ಶೃಂಗೇರಿ ಭಾಗದಲ್ಲಿ ಧಾರಾಕಾರ ಮಳೆಯಾಗಿದರೆ ಕೊಪ್ಪ ಹಾಗೂ ಎನ್.ಆರ್.ಪುರದಲ್ಲಿ ಸಾಧಾರಣ ಮಳೆಯಾಗಿದೆ. ಮೂಡಿಗೆರೆ ತಾಲೂಕಿನ ಕಳಸ ಭಾಗದಲ್ಲಿ ಧಾರಾಕಾರ ಮಳೆಯಾಗಿದ್ದು, ಆಲಿಕಲ್ಲು ಸಮೇತ ವರುಣ ಅಬ್ಬರಿಸಿದ್ದಾನೆ. ಬೃಹತ್ ಗಾತ್ರದ ಆಲಿಕಲ್ಲನ್ನು ಹಿಡಿದು ಯುವಕರು ಫೋಟೋ ಕ್ಲಿಕ್ಕಿಸಿಕೊಂಡು ಖುಷಿ ಪಟ್ಟಿದ್ದಾರೆ. ಇತ್ತ ಶೃಂಗೇರಿಯ ಸುತ್ತಮುತ್ತಲೂ ಭಾರೀ ಮಳೆಯಾಗಿದೆ. ಮಳೆ ದೇವರೆಂದೇ ಖ್ಯಾತಿಯಾಗಿರುವ ಕಿಗ್ಗಾದ ಋಷ್ಯಶೃಂಗ …
Read More »ನಕಲಿ ಪಾಸ್ ಮಾರಾಟ ಮಾಡುತ್ತಿದ್ದ ಇಬ್ಬರು ಪೊಲೀಸರ ವಶಕ್ಕೆ
ಚಿಕ್ಕಮಗಳೂರು : ಕರ್ಫ್ಯೂ ನಕಲಿ ಪಾಸ್ ಮಾರಾಟದಲ್ಲಿ ತೊಡಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊರೊನಾ ಆತಂಕದಲ್ಲಿ ದೇಶವೇ ಲಾಕ್ ಡೌನ್ ಮಾಡಲಾಗಿದ್ದು, ಅಗತ್ಯ ವಸ್ತುಗಳಿಗೆ ಯಾವುದೇ ತೊಂದರೆಯಾಗದಂತೆ ಸರ್ಕಾರ ಕ್ರಮಕೈಗೊಂಡಿದೆ ಇಂಥವರಿಗೆ ಪಾಸ್ ವಿತರಿಸಿದೆ. ಆದರೆ ಇದೇ ಪಾಸುಗಳನ್ನು ನಕಲಿ ಮಾಡಿ ಮಾರುತ್ತಿದ್ದ ಆರೋಪಿಗಳು. ಇಲ್ಲಿನ ದಂಟರಮಕ್ಕಿ ಬಡಾವಣೆ ನಿವಾಸಿಗಳು. ಆರೋಪಿಗಳಿಂದ ಸ್ಕ್ಯಾನರ್, ಪ್ರಿಂಟರ್, ಕಂಪ್ಯೂಟರ್, ಮೊಬೈಲ್ ಹಾಗೂ ನಕಲಿ ಕರ್ಫ್ಯೂ ಪಾಸ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ತಲಾ …
Read More »ಅಕ್ಕಿ ಚೀಲಗಳ ಮಧ್ಯೆ ಅಡಗಿಸಿ ಕಾರ್ಮಿಕರ ಸಾಗಿಸುತ್ತಿದ್ದ ಪಿಕಪ್ ವಾಹನ ವಶಕ್ಕೆ
ಚಿಕ್ಕಮಗಳೂರು : ಅಕ್ಕಿ ಚೀಲವನ್ನು ಆಸರೆಯಾಗಿ ಬಳಸಿಕೊಂಡು ಟಾರ್ಪಲ್ ಮುಚ್ಚಿ ಪಿಕಪ್ ವಾಹನದಲ್ಲಿ ಬಳ್ಳಾರಿ ಜಿಲ್ಲೆ ಹಗರಿಬೊಮ್ಮನಹಳ್ಳಿಗೆ ಹೊರಟಿದ್ದ ವಾಹನವನ್ನು ವಶಕ್ಕೆ ಪಡೆದು ಜಿಲ್ಲಾ ಪೊಲೀಸರು 30 ಜನರನ್ನು ಹಾಸ್ಟೆಲ್ ಒಂದರಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಿದ್ದಾರೆ. ಜಿಲ್ಲೆಯ ಗಡಿ ಪ್ರದೇಶವಾದ ಬೇಲೂರು ತಾಲೂಕಿನ ಪುರ ಎಸ್ಟೇಟ್ ನಿಂದ ಬಂದಿದ್ದ ಇವರು ತೋಟದಲ್ಲಿ ಕೆಲಸವಿಲ್ಲದೆ ಮಾಲೀಕರು ತಮ್ಮ ಮನೆಗಳಿಗೆ ತೆರಳಲು ತಿಳಿಸಿದ್ದು ಕೆಲಸವಿಲ್ಲದೆ ಹೊಟ್ಟೆ ಬಟ್ಟೆಗೂ ಕಷ್ಟವಾಗಿದೆ ವಾಹನದಲ್ಲಿ ಊರಿಗೆ ಬರುತ್ತಿದ್ದೇವೆ …
Read More »
Laxmi News 24×7