Breaking News
Home / ಜಿಲ್ಲೆ / ಚಿಕ್ಕ ಮಂಗಳೂರು (page 12)

ಚಿಕ್ಕ ಮಂಗಳೂರು

ಅಡ್ಡ ಹಾಕಿದರು ಗಾಡಿ ನಿಲ್ಲ ದತಾಲೂಕು ಪಂಚಾಯತ್ ಅಧ್ಯಕ್ಷನ ಗಾಡಿ ಸೀಜ್….

ಚಿಕ್ಕಮಗಳೂರು: ಪೊಲೀಸರು ಅಡ್ಡ ಹಾಕಿದರು ಗಾಡಿ ನಿಲ್ಲಸದೆ ಮೂಡಿಗೆರೆ ತಾಲೂಕಿನ ಬಣಕಲ್‍ಗೆ ಬಂದು ಹಿಂದಿರುಗಿದ ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷನ ಗಾಡಿಯನ್ನು ಬಣಕಲ್ ಪೊಲೀಸರು ಸೀಜ್ ತಂದು ಠಾಣೆಯಲ್ಲಿ ನಿಲ್ಲಿಸಿದ್ದಾರೆ. ದಿನದಿಂದ ದಿನಕ್ಕೆ ಕೊರೊನಾ ಆತಂಕ ಹೆಚ್ಚಾಗುತ್ತಿದೆ. ರಾಜ್ಯ ಸರ್ಕಾರ ಎಲ್ಲಾ ಜಿಲ್ಲೆ ಹಾಗೂ ರಾಜ್ಯಗಳ ಗಡಿಗಳನ್ನು ಬಂದ್ ಮಾಡಿ ಆದೇಶ ಹೊರಡಿಸಿದೆ. ಈ ಮಧ್ಯೆ ಕೊರೊನಾ ವೈರಸ್ ಆತಂಕದಲ್ಲಿ ಮಂಗಳೂರು ರೆಡ್ ಝೋನ್‍ನಲ್ಲಿದೆ. ಮಂಗಳೂರಿನಿಂದ ಚಾರ್ಮಾಡಿ ಮೂಲಕ ಚಿಕ್ಕಮಗಳೂರಿಗೆ …

Read More »

ಸಾಗರ To ತಮಿಳುನಾಡು – 600 ಕಿ.ಮೀ ನಡೆದೇ ಹೊರಟ ಕಾರ್ಮಿಕರು

ಚಿಕ್ಕಮಗಳೂರು: ಕಳೆದ ಆರು ತಿಂಗಳ ಹಿಂದೆ ಕಟ್ಟಡ ನಿರ್ಮಾಣಕ್ಕೆಂದು ತಮಿಳುನಾಡಿನಿಂದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿಗೆ ಬಂದಿದ್ದ 5 ಕಾರ್ಮಿಕರು ನಡೆದುಕೊಂಡೇ ತಮಿಳುನಾಡಿನತ್ತ ಹೆಜ್ಜೆ ಹಾಕಿದ್ದಾರೆ. ಏಪ್ರಿಲ್ 14ರ ಬಳಿಕವೂ ಕೊರೊನಾ ಲಾಕ್‍ಡೌನ್ ಮುಂದುವರೆದ ಹಿನ್ನೆಲೆ ವಾಹನಗಳು ಸಿಗದ ಕಾರಣ ಐವರು ಕಾರ್ಮಿಕರು ತಮಿಳುನಾಡಿನತ್ತ ನಡೆದುಕೊಂಡೇ ಸಾಗುತ್ತಿದ್ದಾರೆ. ಸಾಗರದಿಂದ ತಮಿಳುನಾಡಿಗೆ ಸರಿಸುಮಾರು 600 ಕಿ.ಮೀ ಅಂತರವಿದೆ. ಇಲ್ಲಿ ಕೆಲಸವಿಲ್ಲ ಎಂದು ಊರು ನೆನಪಾಗಿ ನಡೆದೇ ಊರು ಸೇರಲು ಕಾರ್ಮಿಕರು ಹೊರಟಿದ್ದಾರೆ. …

Read More »

ಊಟ ಸಿಗದೆ ಬಾಣಂತಿಯೊಬ್ಬರು ತನ್ನ ಹಸುಗೂಸಿಗೆ ಹೊಟ್ಟೆ ತುಂಬಾ ಹಾಲು ಕುಡಿಸಲು ಪರಿತಪ್ಪಿಸುತ್ತಿರುವಂತಹ ಸ್ಥಿತಿ ನಿರ್ಮಾಣ

ಚಿಕ್ಕಮಗಳೂರು: ಕೊರೊನಾ ಎಫೆಕ್ಟ್‍ನಿಂದ ಹೊಟ್ಟೆ ತುಂಬಾ ಊಟ ಸಿಗದೆ ಬಾಣಂತಿಯೊಬ್ಬರು ತನ್ನ ಹಸುಗೂಸಿಗೆ ಹೊಟ್ಟೆ ತುಂಬಾ ಹಾಲು ಕುಡಿಸಲು ಪರಿತಪ್ಪಿಸುತ್ತಿರುವಂತಹ ಸ್ಥಿತಿ ಚಿಕ್ಕಮಗಳೂರಿನಲ್ಲಿ ನಿರ್ಮಾಣವಾಗಿದೆ. ಹಣ್ಣು-ತರಕಾರಿ ಸೇರಿದಂತೆ ಪೌಷ್ಠಿಕ ಆಹಾರ ಸಿಗದೆ ಬಾಣಂತಿಯೂ ಸೊರಗಿದ್ದು, ಹಸುಗೂಸಿಗೆ ತಾಯಿಯ ಎದೆಹಾಲು ಕೂಡ ಸರಿಯಾಗಿ ಸಿಗುತ್ತಿಲ್ಲ. ನಗರದ ಹಿರೇಮಗಳೂರಿನ ರೈಲ್ವೆ ಬ್ರಿಡ್ಜ್ ಕೆಳಗೆ ಬಯಲಲ್ಲಿ ಶೆಡ್ ಹಾಕಿಕೊಂಡು ಬದುಕುತ್ತಿರುವ ನಿರಾಶ್ರಿತ ಕುಟುಂಬಗಳು ಶೋಚನಿಯ ಸ್ಥಿತಿ ತಲುಪಿವೆ. ಅಂದೇ ದುಡಿದು ಅಂದೇ ತಿನ್ನುತ್ತಿದ್ದ ಈ …

Read More »

ಚಿಕ್ಕಮಗಳೂರು:ಮಲೆನಾಡಲ್ಲಿ ಮಳೆ ಅಬ್ಬರ- ಬೃಹತ್ ಗಾತ್ರದ ಆಲಿಕಲ್ಲು ಪತ್ತೆ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಭಾನುವಾರ ಜಿಲ್ಲೆಯ ಮೂಡಿಗೆರೆ ಹಾಗೂ ಶೃಂಗೇರಿ ಭಾಗದಲ್ಲಿ ಧಾರಾಕಾರ ಮಳೆಯಾಗಿದರೆ ಕೊಪ್ಪ ಹಾಗೂ ಎನ್.ಆರ್.ಪುರದಲ್ಲಿ ಸಾಧಾರಣ ಮಳೆಯಾಗಿದೆ. ಮೂಡಿಗೆರೆ ತಾಲೂಕಿನ ಕಳಸ ಭಾಗದಲ್ಲಿ ಧಾರಾಕಾರ ಮಳೆಯಾಗಿದ್ದು, ಆಲಿಕಲ್ಲು ಸಮೇತ ವರುಣ ಅಬ್ಬರಿಸಿದ್ದಾನೆ. ಬೃಹತ್ ಗಾತ್ರದ ಆಲಿಕಲ್ಲನ್ನು ಹಿಡಿದು ಯುವಕರು ಫೋಟೋ ಕ್ಲಿಕ್ಕಿಸಿಕೊಂಡು ಖುಷಿ ಪಟ್ಟಿದ್ದಾರೆ. ಇತ್ತ ಶೃಂಗೇರಿಯ ಸುತ್ತಮುತ್ತಲೂ ಭಾರೀ ಮಳೆಯಾಗಿದೆ. ಮಳೆ ದೇವರೆಂದೇ ಖ್ಯಾತಿಯಾಗಿರುವ ಕಿಗ್ಗಾದ ಋಷ್ಯಶೃಂಗ …

Read More »

ನಕಲಿ ಪಾಸ್ ಮಾರಾಟ ಮಾಡುತ್ತಿದ್ದ ಇಬ್ಬರು ಪೊಲೀಸರ ವಶಕ್ಕೆ

ಚಿಕ್ಕಮಗಳೂರು : ಕರ್ಫ್ಯೂ ನಕಲಿ ಪಾಸ್ ಮಾರಾಟದಲ್ಲಿ ತೊಡಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊರೊನಾ ಆತಂಕದಲ್ಲಿ ದೇಶವೇ ಲಾಕ್ ಡೌನ್ ಮಾಡಲಾಗಿದ್ದು, ಅಗತ್ಯ ವಸ್ತುಗಳಿಗೆ ಯಾವುದೇ ತೊಂದರೆಯಾಗದಂತೆ ಸರ್ಕಾರ ಕ್ರಮಕೈಗೊಂಡಿದೆ ಇಂಥವರಿಗೆ ಪಾಸ್ ವಿತರಿಸಿದೆ. ಆದರೆ ಇದೇ ಪಾಸುಗಳನ್ನು ನಕಲಿ ಮಾಡಿ ಮಾರುತ್ತಿದ್ದ ಆರೋಪಿಗಳು. ಇಲ್ಲಿನ ದಂಟರಮಕ್ಕಿ ಬಡಾವಣೆ ನಿವಾಸಿಗಳು. ಆರೋಪಿಗಳಿಂದ ಸ್ಕ್ಯಾನರ್, ಪ್ರಿಂಟರ್, ಕಂಪ್ಯೂಟರ್, ಮೊಬೈಲ್ ಹಾಗೂ ನಕಲಿ ಕರ್ಫ್ಯೂ ಪಾಸ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ತಲಾ …

Read More »

ಅಕ್ಕಿ ಚೀಲಗಳ ಮಧ್ಯೆ ಅಡಗಿಸಿ ಕಾರ್ಮಿಕರ ಸಾಗಿಸುತ್ತಿದ್ದ ಪಿಕಪ್ ವಾಹನ ವಶಕ್ಕೆ

ಚಿಕ್ಕಮಗಳೂರು : ಅಕ್ಕಿ ಚೀಲವನ್ನು ಆಸರೆಯಾಗಿ ಬಳಸಿಕೊಂಡು ಟಾರ್ಪಲ್ ಮುಚ್ಚಿ ಪಿಕಪ್ ವಾಹನದಲ್ಲಿ ಬಳ್ಳಾರಿ ಜಿಲ್ಲೆ ಹಗರಿಬೊಮ್ಮನಹಳ್ಳಿಗೆ ಹೊರಟಿದ್ದ ವಾಹನವನ್ನು ವಶಕ್ಕೆ ಪಡೆದು ಜಿಲ್ಲಾ ಪೊಲೀಸರು 30 ಜನರನ್ನು ಹಾಸ್ಟೆಲ್ ಒಂದರಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಿದ್ದಾರೆ. ಜಿಲ್ಲೆಯ ಗಡಿ ಪ್ರದೇಶವಾದ ಬೇಲೂರು ತಾಲೂಕಿನ ಪುರ ಎಸ್ಟೇಟ್ ನಿಂದ ಬಂದಿದ್ದ ಇವರು ತೋಟದಲ್ಲಿ ಕೆಲಸವಿಲ್ಲದೆ ಮಾಲೀಕರು ತಮ್ಮ ಮನೆಗಳಿಗೆ ತೆರಳಲು ತಿಳಿಸಿದ್ದು ಕೆಲಸವಿಲ್ಲದೆ ಹೊಟ್ಟೆ ಬಟ್ಟೆಗೂ ಕಷ್ಟವಾಗಿದೆ ವಾಹನದಲ್ಲಿ ಊರಿಗೆ ಬರುತ್ತಿದ್ದೇವೆ …

Read More »

21 ಜನರನ್ನ ತುಂಬಿಕೊಂಡು ವಿಜಯಪುರಕ್ಕೆ ಹೋಗ್ತಿದ್ದ ಅಂಬುಲೆನ್ಸ್ ಚಾಲಕ ಅರೆಸ್ಟ್

ಚಿಕ್ಕಮಗಳೂರು: ಒಬ್ಬರಿಗೆ 1,800ರಿಂದ 2,000 ರೂ.ನಂತೆ ಪಡೆದು 21 ಜನರನ್ನು ಕರೆದುಕೊಂಡು ಮಂಗಳೂರಿನಿಂದ ವಿಜಯಪುರಕ್ಕೆ ಹೋಗುತ್ತಿದ್ದ ಅಂಬುಲೆನ್ಸ್ ಚಾಲಕನನ್ನು ಪೊಲೀಸರು ಬಂಧಿಸಿರುವ ಘಟನೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ನಡೆದಿದೆ. ದಾವಣಗೆರೆ ಮೂಲದ ಭೀಮಾ ಅಂಬುಲೆನ್ಸ್ ಸರ್ವಿಸ್ ಎಂಬ ಖಾಸಗಿ ಸಂಸ್ಥೆಯ ಚಾಲಕ ಬಸವರಾಜ್ ಬಂಧಿತ ವ್ಯಕ್ತಿ. ಬಸವರಾಜ್ ದಾವಣಗೆರೆಯಿಂದ ಮಂಗಳೂರಿಗೆ ರೋಗಿಯನ್ನು ಕರೆದುಕೊಂಡು ಬಂದಿದ್ದ. ಅಲ್ಲಿದ್ದ ವಿಜಯಪುರ ಹಾಗೂ ಮುದ್ದೆಬಿಹಾಳ ಮೂಲದ ಸುಮಾರು 21 ಜನರನ್ನ ಅಂಬುಲೆನ್ಸ್‌ನಲ್ಲಿ ಕರೆತಂದಿದ್ದಾನೆ. ಅಂಬುಲೆನ್ಸ್ …

Read More »

ವಧು-ವರರಿಬ್ಬರು ಮಾಸ್ಕ್ ಧರಿಸಿಯೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಚಿಕ್ಕಮಗಳೂರು: ದೇಶಾದ್ಯಾಂತ ಕೊರೊನಾಆ ಭೀತಿ ಹೆಚ್ಚಿದ್ದು, ಲಾಕ್ ಡೌನ್ ಘೋಷಿಸಾಲಾಗಿದೆ. ಈ ಹಿನ್ನಲೆಯಲ್ಲಿ ನಿಶ್ಚಯವಾಗಿದ್ದ ಮದುವೆಗಳೆಲ್ಲ ಯಾವುದೇ ಆಡಂಬರ, ಅಬ್ಬರವಿಲ್ಲದೇ ಸರಳವಾಗಿ ನಡೆಯುತ್ತಿದೆ. ಈ ನಡುವೆ ರಾಜ್ಯದ ಚಿಕ್ಕಮಗಳೂರು ಜಿಲ್ಲೆಯಲ್ಲಿ ವಧು-ವರರಿಬ್ಬರು ಮಾಸ್ಕ್ ಧರಿಸಿಯೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಹಲಸುಗುಡ್ಡೆ ಗ್ರಾಮದಲ್ಲಿ ಲಾಅಕ್ ಡೌನ್ ನಡುವೆ ವಧು-ವರರಿಬ್ಬರೂ ಮುಖಕ್ಕೆ ಮಾಸ್ಕ್ ಧರಿಸಿ ಪುರೋಹಿತರು ಹಾಗೂ ತಂದೆ-ತಾಯಿ ಸಮ್ಮುಖದಲ್ಲಿ ಸರಳವಾಗಿ ದಾಂಪತ್ಯ ಜೀವನಕ್ಕೆ ಪದಾರ್ಪಣೆ ಮಾಡಿದ್ದಾರೆ. …

Read More »

ಜಮಾತ್‍ಗೆ ಹೋದವರಿಂದಲೇ ದೇಶಾದ್ಯಂತ ಕೊರೊನಾ ಹಬ್ಬಿಸುವ ದುಷ್ಕೃತ್ಯ: ಕರಂದ್ಲಾಜೆ

ಚಿಕ್ಕಮಗಳೂರು: ದೆಹಲಿಯ ನಿಜಾಮುದ್ದೀನ್ ತಬ್ಲಿಘಿ  ಸಭೆಯಲ್ಲಿ ಭಾಗವಹಿಸಿದ್ದವರಿಂದ ದೇಶಾದ್ಯಂತ ಕೊರೊನಾ ವೈರಸ್ ಹಬ್ಬಿಸುವ ದುಷ್ಕೃತ್ಯ ನಡೆದಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಗಂಭೀರ ಆರೋಪ ಮಾಡಿದ್ದಾರೆ. ಚಿಕ್ಕಮಗಳೂರಿನ ನಗರಸಭೆಯಲ್ಲಿ ಮಾತನಾಡಿದ ಅವರು, ಜಮಾತ್ ಸಭೆಗೆ ಹೋದ ಹಲವರು ನಾಪತ್ತೆಯಾಗಿದ್ದಾರೆ. ಇದರ ಹಿಂದೆ ಕೊರೊನಾ ಜಿಹಾದಿಯ ವಾಸನೆ ಕೂಡ ಬಡಿಯುತ್ತಿದೆ. ದೇಶವನ್ನು ಕೊರೊನಾ ಮುಕ್ತ ಮಾಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೋರಾಡುತ್ತಿವೆ. ಯಾರು ದೆಹಲಿಗೆ ಹೋಗಿದ್ದರೋ ಅವರನ್ನ ಪತ್ತೆ ಹಚ್ಚುವ …

Read More »

ಪ್ರತಿನಿತ್ಯ ಊರಿನ ಕಸವನ್ನ ಕೊಂಡೊಯ್ಯುವ ಆಟೋದಲ್ಲಿ ಪಡಿತರ ಅಕ್ಕಿಯನ್ನ ಸಾಗಿಸಿದ್ದಕ್ಕೆ ಆಕ್ರೋಶ

ಚಿಕ್ಕಮಗಳೂರು: ಪ್ರತಿನಿತ್ಯ ಊರಿನ ಕಸವನ್ನ ಕೊಂಡೊಯ್ಯುವ ಆಟೋದಲ್ಲಿ ಪಡಿತರ ಅಕ್ಕಿಯನ್ನ ಸಾಗಿಸಿದ್ದಕ್ಕೆ ಸ್ಥಳೀಯರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರದಲ್ಲಿ ನಡೆದಿದೆ. ಕೊರೊನಾ ವೈರಸ್ ಕಾಟ ಆರಂಭವಾದಾಗಿನಿಂದ ದೇಶ ಸೇರಿದಂತೆ ಜಗತ್ತೇ ತತ್ತರಿಸಿ ಹೋಗಿದೆ. ಕೊರೊನಾ ಸೋಂಕು ನಿಯಂತ್ರಣಕ್ಕೆ ಇಡೀ ದೇಶವೇ ಲಾಕ್‍ಡೌನ್ ಆಗಿದೆ. ಈ ಮಧ್ಯೆ ರಾಜ್ಯದಲ್ಲಿ ಜನಸಾಮಾನ್ಯರಿಗೆ ಪಡಿತರ ಸಮಸ್ಯೆ ಉದ್ಭವಿಸದಂತೆ ಸರ್ಕಾರ ಮುಂಗಡವಾಗಿ ಮೂರು ತಿಂಗಳ ಪಡಿತರ ಸಾಮಾಗ್ರಿಗಳನ್ನು ನೀಡಲು …

Read More »