Breaking News

ಚಿಕ್ಕ ಮಂಗಳೂರು

ಚಾರ್ಮಾಡಿ ಘಾಟ್ ನಲ್ಲಿ ಭಾರೀ ಮಳೆ ಗುಡ್ಡದ ಕಲ್ಲು-ಮಣ್ಣು ರಸ್ತೆ ಮೇಲೆ ಕುಸಿದಿದ್ದು ಪ್ರಯಾಣಿಕರಲ್ಲಿ ಆತಂಕ

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್ ನಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಚಾರ್ಮಾಡಿ ಘಾಟಿಯ ಮಲಯ ಮಾರುತದ ಬಳಿ ಗುಡ್ಡದ ಕಲ್ಲು-ಮಣ್ಣು ರಸ್ತೆ ಮೇಲೆ ಕುಸಿದಿದ್ದು ಪ್ರಯಾಣಿಕರಲ್ಲಿ ಆತಂಕ ಎದುರಾಗಿದೆ. ಚಿಕ್ಕಮಗಳೂರು-ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿಯಲ್ಲಿ ಪ್ರತಿದಿನ ನೂರಾರು ವಾಹನಗಳು ಸಂಚರಿಸುತ್ತವೆ. ಸದ್ಯ ಭಾರೀ ಮಳೆಯಿಂದ ಅಲ್ಲಲ್ಲಿ ಗುಡ್ಡ ಕುಸಿಯುತ್ತಿರುವುದರಿಂದ ವಾಹನ ಸವಾರರ ಆತಂಕ ಕೂಡ …

Read More »

ವೈದ್ಯ, ನರ್ಸ್ ಕಾವಲಿನಲ್ಲಿ ಸಿಇಟಿ ಬರೆದ ಸೋಂಕಿತ ವಿದ್ಯಾರ್ಥಿ

ಚಿಕ್ಕಮಗಳೂರು: ವೈದ್ಯ ಹಾಗೂ ನರ್ಸ್ ಕಾವಲಿನ ಮಧ್ಯೆ ಕೊರೊನಾ ಸೋಂಕಿತ ವಿದ್ಯಾರ್ಥಿ ಪ್ರತ್ಯೇಕ ಕೊಠಡಿಯಲ್ಲಿ ಸಿಇಟಿ ಪರೀಕ್ಷೆ ಬರೆದಿದ್ದಾರೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ವಿದ್ಯಾರ್ಥಿಗೆ ಬುಧವಾರ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿತ್ತು. ಹೀಗಾಗಿ ಜಿಲ್ಲಾಡಳಿತ ವಿದ್ಯಾರ್ಥಿಗೆ ಎಲ್ಲ ರೀತಿಯ ಸೌಕರ್ಯ ಕಲ್ಪಿಸಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿತ್ತು. ವಿದ್ಯಾರ್ಥಿಗೆ ಕೊರೊನಾ ಲಕ್ಷಣಗಳು ತೀರಾ ಕಡಿಮೆ ಇದ್ದ ಕಾರಣ ಹೋಮ್ ಐಸೋಲೇಷನ್‍ನಲ್ಲಿ ಚಿಕಿತ್ಸೆಗೆ ಅವಕಾಶ ನೀಡಲಾಗಿತ್ತು. ಇಂದು ಬೆಳಗ್ಗೆ ಅರ್ಧ ಗಂಟೆ …

Read More »

ಕಾಫಿನಾಡ ಏಕೈಕ ಕಾರ್ಖಾನೆಗೆ ಬೀಗ……….

ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿದ್ದ ಕಾಫಿನಾಡ ಏಕೈಕ ಕಾರ್ಖಾನೆ ವಿಜ್ಞಾನ್ ಇಂಡಸ್ಟ್ರೀಸ್ ಲಿಮಿಟೆಡ್‍ಗೆ ಬೀಗ ಬೀಳುವ ಕಾಲ ಸನ್ನಿಹಿತವಾಗಿದ್ದು, ಕಾರ್ಖಾನೆಯನ್ನು ನೆಚ್ಚಿಕೊಂಡು ನಾಲ್ಕೈದು ದಶಕಗಳಿಂದ ಬದುಕು ಕಟ್ಟಿಕೊಂಡಿದ್ದ ಕಾರ್ಮಿಕರ ಪರಿಸ್ಥಿತಿ ಅತಂತ್ರವಾಗಿದೆ. ಪ್ರಸ್ತುತ ಕಾರ್ಖಾನೆಯಲ್ಲಿ 60 ಜನ ಪರ್ಮೆಂಟ್ ಉದ್ಯೋಗಿಗಳು, 12 ಜನ ಟ್ರೈನಿಸ್, 10 ಆಫೀಸರ್ಸ್ ಸೇರಿದಂತೆ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವ 180 ಕಾರ್ಮಿಕರು ಕಾರ್ಖಾನೆಯಿಂದ ಬದುಕು ಕಟ್ಟಿಕೊಂಡಿದ್ದರು. ಆದರೀಗ ಕಾರ್ಖಾನೆಗೆ ಬೀಗ ಬೀಳುತ್ತೆಂದು ನೌಕರರು ಕಂಗಾಲಾಗಿದ್ದಾರೆ. …

Read More »

ಕಾಫಿನಾಡ ಕಾಡಲ್ಲಿ ಬಂಗಾರದ ಕಾಡೆಮ್ಮೆ ಪತ್ತೆ…………

ಚಿಕ್ಕಮಗಳೂರು: 1980-90 ದಶಕದಲ್ಲಿ ಕಣ್ಮರೆಯಾಗಿದ್ದ ಅಪರೂಪದ ಕಾಟಿ ತಳಿಯ ಕಾಡೆಮ್ಮೆ ಸಂತತಿ ಮತ್ತೆ ಜಿಲ್ಲೆಯ ಭದ್ರಾ ಹುಲಿ ಸಂರಕ್ಷಿತ ಅರಣ್ಯದ ಮುತ್ತೋಡಿ ವಲಯದಲ್ಲಿ ಪತ್ತೆಯಾಗಿದೆ. ಕಾಡೆಮ್ಮೆಗಳು ಬಹುತೇಕ ಕಪ್ಪು ಬಣ್ಣದಿಂದ ಕೂಡಿರುತ್ತವೆ. ಆದರೆ ಕಾಟಿ ತಳಿಯ ಈ ಕಾಡೆಮ್ಮೆ ಬಂಗಾರದ ಬಣ್ಣದಿಂದ ಕಂಗೊಳಿಸುತ್ತಿದೆ. ಈ ಅಪರೂಪದ ಕಾಡೆಮ್ಮೆ ಬಣ್ಣ ಹಾಗೂ ಮೈಕಟ್ಟು ನೋಡುಗರಲ್ಲಿ ಅಚ್ಚರಿ ಮೂಡಿಸಿದರೂ 80-90ರ ದಶಕದಲ್ಲಿ ಈ ತಳಿಯ ಕಾಡೆಮ್ಮೆಗಳು ಕಾಫಿನಾಡ ಅರಣ್ಯದಲ್ಲಿ ಇತ್ತು. ಆಗ ಇಂದರ್ಫಿಸ್ಟ್ …

Read More »

ಅಂತ್ಯ ಸಂಸ್ಕಾರವಾದ ವಾರದ ಬಳಿಕ ಕೊರೊನಾ ವರದಿ- ಜನರ ಆಕ್ರೋಶ

ಚಿಕ್ಕಮಗಳೂರು: ಕೊರೊನಾ ಸೋಂಕಿತ ವ್ಯಕ್ತಿಗಳು ಸಾವನ್ನಪ್ಪಿ ಅವರ ಅಂತ್ಯ ಸಂಸ್ಕಾರವಾದ ವಾರದ ಬಳಿಕ ವರದಿಗಳು ಬರುತ್ತಿರುವುದರಿಂದ ಜಿಲ್ಲೆಯ ಜನ ಆತಂಕಕ್ಕೀಡಾಗಿ ಆರೋಗ್ಯ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ಎಂಟು ಹಾಗೂ ಆರು ದಿನಗಳ ಹಿಂದೆ ಸಾವನ್ನಪ್ಪಿದ ವ್ಯಕ್ತಿಗಳ ವರದಿ ತಡವಾಗಿ ಬಂದಿದ್ದು ಆರೋಗ್ಯ ಇಲಾಖೆ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಜುಲೈ 14ರಂದು ಕೊಪ್ಪ ಆಸ್ವತ್ರೆಯಲ್ಲಿ ಕೊರೊನಾ ಪರೀಕ್ಷೆಗೆ ಒಳಗಾಗಿದ್ದ ಪಟ್ಟಣದ ಮೇಲಿನ ಪೇಟೆಯ 60 ವರ್ಷದ ವೃದ್ಧ …

Read More »

ಔಷಧಿ ಸಿಂಪಡಿಸಲು ತೆರಳುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಸಾವು……

ಚಿಕ್ಕಮಗಳೂರು: ಅಡಕೆ ತೋಟಕ್ಕೆ ಔಷಧಿ ಸಿಂಪಡಿಸಲು ಕಬ್ಬಿಣದ ಏಣಿಯನ್ನು ತೋಟದಲ್ಲಿ ಹೊತ್ತುಯ್ಯುವಾಗ ತೋಟದಲ್ಲಿ ಹೋಗಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಕಾರ್ಮಿಕ ಸಾವನಪ್ಪಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಳಸ ಸಮೀಪದ ದುಗ್ಗಲಮಕ್ಕಿ ಗ್ರಾಮದಲ್ಲಿ ನಡೆದಿದೆ. ಮೃತ ಕಾರ್ಮಿಕನನ್ನ 28 ವರ್ಷದ ರಮೇಶ್ ಎಂದು ಗುರುತಿಸಲಾಗಿದೆ. ದಶಕಗಳ ಹಿಂದೆ ಕಾಫಿ-ಅಡಕೆ ತೋಟಗಳಲ್ಲಿ ಮರಗಸಿ, ಮೆಣಸು ಕೊಯ್ಯಲು ಹಾಗೂ ಔಷಧಿ ಸಿಂಪಡಿಸಲು ಬಿದಿರಿನ ಏಣಿಗಳನ್ನ ಬಳಸುತ್ತಿದ್ದರು. ಆದರೆ ಇತ್ತೀಚಿನ ವರ್ಷಗಳಲ್ಲಿ ಕಬ್ಬಿಣದ ಏಣಿ …

Read More »

ರೋಗದ ಲಕ್ಷಣವೇ ಇಲ್ಲದೇ ನಾಲ್ವರು ಪೊಲೀಸ್ ಪೇದೆಗಳಿಗೆ ಕೊರೊನಾ ಸೋಂಕು….

ಚಿಕ್ಕಮಗಳೂರು: ರೋಗದ ಲಕ್ಷಣವೇ ಇಲ್ಲದೇ ನಾಲ್ವರು ಪೊಲೀಸ್ ಪೇದೆಗಳಿಗೆ ಕೊರೊನಾ ಸೋಂಕು ತಗುಲಿದ್ದು, ಮುಂಜಾಗ್ರತಾ ಕ್ರಮವಾಗಿ 48 ಗಂಟೆಗಳ ಕಾಲ ಪೊಲೀಸ್ ಠಾಣೆಯನ್ನು ಸೀ¯ ಡೌನ್ ಮಾಡಿರುವಂತ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಳಸ ಠಾಣೆಯಲ್ಲಿ ಕಾರ್ಯನಿರ್ವಹಿಸುವ ನಾಲ್ವರು ಪೇದೆಗಳಿಗೆ ಸೋಂಕು ದೃಢಪಟ್ಟಿದೆ. ಸೋಂಕಿತ ಪೊಲೀಸರು ಸುಮಾರು 28 ರಿಂದ 30 ವರ್ಷ ವಯಸ್ಸಿನವರಾಗಿದ್ದಾರೆ ಎಂದು ತಿಳಿದು ಬಂದಿದೆ. ಕೊರೊನಾ ಸೋಂಕಿತ ಪೇದೆಗಳಿಗೆ ರೋಗದ ಯಾವುದೇ ಲಕ್ಷಣಗಳು …

Read More »

ಚಿಕ್ಕಮಗಳೂರು ಜಿಲ್ಲೆಯ ಮೂರು ಪೊಲೀಸ್ ಠಾಣೆ ಸೀಲ್ ಡೌನ್: ಹೆಚ್ಚಿದ ಆತಂಕ

ಚಿಕ್ಕಮಗಳೂರು: ನಾಲ್ವರು ಪೊಲೀಸರಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಮೂರು ಪೊಲೀಸ್ ಠಾಣೆಗಳನ್ನು ಸೀಲ್ ಡೌನ್ ಮಾಡಲಾಗಿದೆ. ಚಿಕ್ಕಮಗಳೂರು ಗ್ರಾಮಾಂತರ, ಅಜ್ಜಂಪುರ ಹಾಗೂ ಯಗಟಿ ಪೊಲೀಸ್ ಠಾಣೆಗಳನ್ನು ಸೀಲ್​ಡೌನ್ ಮಾಡಿ ಸೋಂಕಿತ ಪೊಲೀಸ್ ಪೇದೆಗಳನ್ನು ಚಿಕ್ಕಮಗಳೂರು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಲ್ಲಿಯವರೆಗೆ 250 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

Read More »

ಬರೆಯಲು ಜಾಗವಿಲ್ಲವೆಂದು ಬೇರೆ ಚೀಟಿ ಕೇಳಿದ್ದಕ್ಕೆ ವೈದ್ಯರ ಮೇಲೆ ಹಲ್ಲೆ?

ಚಿಕ್ಕಮಗಳೂರು: ಈ ಚೀಟಿಯಲ್ಲಿ ಬರೆಯಲು ಜಾಗ ಇಲ್ಲ ಬೇರೆ ಚೀಟಿ ಬರೆಸಿಕೊಂಡು ಬನ್ನಿ ಎಂದಿದ್ದಕ್ಕೆ ರೋಗಿಯ ಜೊತೆ ಬಂದಿದ್ದ ಯುವಕ, ವೈದ್ಯರ ಮೇಲೆ ಹಲ್ಲೆ ಮಾಡಿರುವ ಆರೋಪವೊಂದು ಜಿಲ್ಲೆಯ ಮೂಡಿಗೆರೆ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಕೇಳಿಬಂದಿದೆ. ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಅಹಮದ್ ಎಂಬ ಹುಡುಗ ವಯಸ್ಸಾದ ವೃದ್ಧರೊಬ್ಬರನ್ನು ಸಂತೋಷ್ ಎಂಬ ವೈದ್ಯರ ಕೊಠಡಿ ಮುಂಭಾಗ ಕೂರಿಸಿ ವೈದ್ಯರ ಬಳಿ ಚೀಟಿ ತೆಗೆದುಕೊಂಡು ಹೋಗಿದ್ದಾನೆ. ಈ ವೇಳೆ ವೈದ್ಯ …

Read More »

ಜಿಲ್ಲೆಯಲ್ಲಿ ಮೂರು ದಿನದಲ್ಲಿ ಕೊರೊನಾಗೆ ನಾಲ್ಕು ಜನ ಪ್ರಾಣ ತೆತ್ತಿದ್ದು ಜಿಲ್ಲೆಯ ಜನ ಕಂಗಾಲಾಗಿದ್ದಾರೆ.

ಚಿಕ್ಕಮಗಳೂರು: ಸೋಮವಾರ ಎರಡು, ಮಂಗಳವಾರ ಒಂದು, ಬುಧವಾರ ಒಂದು ಎಂಬಂತೆ ಜಿಲ್ಲೆಯಲ್ಲಿ ಮೂರು ದಿನದಲ್ಲಿ ಕೊರೊನಾಗೆ ನಾಲ್ಕು ಜನ ಪ್ರಾಣ ತೆತ್ತಿದ್ದು ಜಿಲ್ಲೆಯ ಜನ ಕಂಗಾಲಾಗಿದ್ದಾರೆ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರು ಹಾಗೂ ಸಾವಿನ ಸಂಖ್ಯೆ ಕೂಡ ಹೆಚ್ಚುತ್ತಿದ್ದು ಜಿಲ್ಲೆಯ ಜನ ತೀವ್ರ ಆತಂಕಕ್ಕೀಡಾಗಿದ್ದಾರೆ. ಜಿಲ್ಲೆಯ 72 ವರ್ಷದ ವೃದ್ಧೆ ಕೊರೊನಾಗೆ ಬಲಿಯಾಗಿದ್ದಾರೆ. ಅಸ್ತಮಾ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವೃದ್ಧೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಕೊರೊನಾಗೆ …

Read More »