Breaking News
Home / ಜಿಲ್ಲೆ / ಚಿಕ್ಕ ಮಂಗಳೂರು (page 6)

ಚಿಕ್ಕ ಮಂಗಳೂರು

ಅಂತ್ಯ ಸಂಸ್ಕಾರವಾದ ವಾರದ ಬಳಿಕ ಕೊರೊನಾ ವರದಿ- ಜನರ ಆಕ್ರೋಶ

ಚಿಕ್ಕಮಗಳೂರು: ಕೊರೊನಾ ಸೋಂಕಿತ ವ್ಯಕ್ತಿಗಳು ಸಾವನ್ನಪ್ಪಿ ಅವರ ಅಂತ್ಯ ಸಂಸ್ಕಾರವಾದ ವಾರದ ಬಳಿಕ ವರದಿಗಳು ಬರುತ್ತಿರುವುದರಿಂದ ಜಿಲ್ಲೆಯ ಜನ ಆತಂಕಕ್ಕೀಡಾಗಿ ಆರೋಗ್ಯ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ಎಂಟು ಹಾಗೂ ಆರು ದಿನಗಳ ಹಿಂದೆ ಸಾವನ್ನಪ್ಪಿದ ವ್ಯಕ್ತಿಗಳ ವರದಿ ತಡವಾಗಿ ಬಂದಿದ್ದು ಆರೋಗ್ಯ ಇಲಾಖೆ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಜುಲೈ 14ರಂದು ಕೊಪ್ಪ ಆಸ್ವತ್ರೆಯಲ್ಲಿ ಕೊರೊನಾ ಪರೀಕ್ಷೆಗೆ ಒಳಗಾಗಿದ್ದ ಪಟ್ಟಣದ ಮೇಲಿನ ಪೇಟೆಯ 60 ವರ್ಷದ ವೃದ್ಧ …

Read More »

ಔಷಧಿ ಸಿಂಪಡಿಸಲು ತೆರಳುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಸಾವು……

ಚಿಕ್ಕಮಗಳೂರು: ಅಡಕೆ ತೋಟಕ್ಕೆ ಔಷಧಿ ಸಿಂಪಡಿಸಲು ಕಬ್ಬಿಣದ ಏಣಿಯನ್ನು ತೋಟದಲ್ಲಿ ಹೊತ್ತುಯ್ಯುವಾಗ ತೋಟದಲ್ಲಿ ಹೋಗಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಕಾರ್ಮಿಕ ಸಾವನಪ್ಪಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಳಸ ಸಮೀಪದ ದುಗ್ಗಲಮಕ್ಕಿ ಗ್ರಾಮದಲ್ಲಿ ನಡೆದಿದೆ. ಮೃತ ಕಾರ್ಮಿಕನನ್ನ 28 ವರ್ಷದ ರಮೇಶ್ ಎಂದು ಗುರುತಿಸಲಾಗಿದೆ. ದಶಕಗಳ ಹಿಂದೆ ಕಾಫಿ-ಅಡಕೆ ತೋಟಗಳಲ್ಲಿ ಮರಗಸಿ, ಮೆಣಸು ಕೊಯ್ಯಲು ಹಾಗೂ ಔಷಧಿ ಸಿಂಪಡಿಸಲು ಬಿದಿರಿನ ಏಣಿಗಳನ್ನ ಬಳಸುತ್ತಿದ್ದರು. ಆದರೆ ಇತ್ತೀಚಿನ ವರ್ಷಗಳಲ್ಲಿ ಕಬ್ಬಿಣದ ಏಣಿ …

Read More »

ರೋಗದ ಲಕ್ಷಣವೇ ಇಲ್ಲದೇ ನಾಲ್ವರು ಪೊಲೀಸ್ ಪೇದೆಗಳಿಗೆ ಕೊರೊನಾ ಸೋಂಕು….

ಚಿಕ್ಕಮಗಳೂರು: ರೋಗದ ಲಕ್ಷಣವೇ ಇಲ್ಲದೇ ನಾಲ್ವರು ಪೊಲೀಸ್ ಪೇದೆಗಳಿಗೆ ಕೊರೊನಾ ಸೋಂಕು ತಗುಲಿದ್ದು, ಮುಂಜಾಗ್ರತಾ ಕ್ರಮವಾಗಿ 48 ಗಂಟೆಗಳ ಕಾಲ ಪೊಲೀಸ್ ಠಾಣೆಯನ್ನು ಸೀ¯ ಡೌನ್ ಮಾಡಿರುವಂತ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಳಸ ಠಾಣೆಯಲ್ಲಿ ಕಾರ್ಯನಿರ್ವಹಿಸುವ ನಾಲ್ವರು ಪೇದೆಗಳಿಗೆ ಸೋಂಕು ದೃಢಪಟ್ಟಿದೆ. ಸೋಂಕಿತ ಪೊಲೀಸರು ಸುಮಾರು 28 ರಿಂದ 30 ವರ್ಷ ವಯಸ್ಸಿನವರಾಗಿದ್ದಾರೆ ಎಂದು ತಿಳಿದು ಬಂದಿದೆ. ಕೊರೊನಾ ಸೋಂಕಿತ ಪೇದೆಗಳಿಗೆ ರೋಗದ ಯಾವುದೇ ಲಕ್ಷಣಗಳು …

Read More »

ಚಿಕ್ಕಮಗಳೂರು ಜಿಲ್ಲೆಯ ಮೂರು ಪೊಲೀಸ್ ಠಾಣೆ ಸೀಲ್ ಡೌನ್: ಹೆಚ್ಚಿದ ಆತಂಕ

ಚಿಕ್ಕಮಗಳೂರು: ನಾಲ್ವರು ಪೊಲೀಸರಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಮೂರು ಪೊಲೀಸ್ ಠಾಣೆಗಳನ್ನು ಸೀಲ್ ಡೌನ್ ಮಾಡಲಾಗಿದೆ. ಚಿಕ್ಕಮಗಳೂರು ಗ್ರಾಮಾಂತರ, ಅಜ್ಜಂಪುರ ಹಾಗೂ ಯಗಟಿ ಪೊಲೀಸ್ ಠಾಣೆಗಳನ್ನು ಸೀಲ್​ಡೌನ್ ಮಾಡಿ ಸೋಂಕಿತ ಪೊಲೀಸ್ ಪೇದೆಗಳನ್ನು ಚಿಕ್ಕಮಗಳೂರು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಲ್ಲಿಯವರೆಗೆ 250 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

Read More »

ಬರೆಯಲು ಜಾಗವಿಲ್ಲವೆಂದು ಬೇರೆ ಚೀಟಿ ಕೇಳಿದ್ದಕ್ಕೆ ವೈದ್ಯರ ಮೇಲೆ ಹಲ್ಲೆ?

ಚಿಕ್ಕಮಗಳೂರು: ಈ ಚೀಟಿಯಲ್ಲಿ ಬರೆಯಲು ಜಾಗ ಇಲ್ಲ ಬೇರೆ ಚೀಟಿ ಬರೆಸಿಕೊಂಡು ಬನ್ನಿ ಎಂದಿದ್ದಕ್ಕೆ ರೋಗಿಯ ಜೊತೆ ಬಂದಿದ್ದ ಯುವಕ, ವೈದ್ಯರ ಮೇಲೆ ಹಲ್ಲೆ ಮಾಡಿರುವ ಆರೋಪವೊಂದು ಜಿಲ್ಲೆಯ ಮೂಡಿಗೆರೆ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಕೇಳಿಬಂದಿದೆ. ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಅಹಮದ್ ಎಂಬ ಹುಡುಗ ವಯಸ್ಸಾದ ವೃದ್ಧರೊಬ್ಬರನ್ನು ಸಂತೋಷ್ ಎಂಬ ವೈದ್ಯರ ಕೊಠಡಿ ಮುಂಭಾಗ ಕೂರಿಸಿ ವೈದ್ಯರ ಬಳಿ ಚೀಟಿ ತೆಗೆದುಕೊಂಡು ಹೋಗಿದ್ದಾನೆ. ಈ ವೇಳೆ ವೈದ್ಯ …

Read More »

ಜಿಲ್ಲೆಯಲ್ಲಿ ಮೂರು ದಿನದಲ್ಲಿ ಕೊರೊನಾಗೆ ನಾಲ್ಕು ಜನ ಪ್ರಾಣ ತೆತ್ತಿದ್ದು ಜಿಲ್ಲೆಯ ಜನ ಕಂಗಾಲಾಗಿದ್ದಾರೆ.

ಚಿಕ್ಕಮಗಳೂರು: ಸೋಮವಾರ ಎರಡು, ಮಂಗಳವಾರ ಒಂದು, ಬುಧವಾರ ಒಂದು ಎಂಬಂತೆ ಜಿಲ್ಲೆಯಲ್ಲಿ ಮೂರು ದಿನದಲ್ಲಿ ಕೊರೊನಾಗೆ ನಾಲ್ಕು ಜನ ಪ್ರಾಣ ತೆತ್ತಿದ್ದು ಜಿಲ್ಲೆಯ ಜನ ಕಂಗಾಲಾಗಿದ್ದಾರೆ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರು ಹಾಗೂ ಸಾವಿನ ಸಂಖ್ಯೆ ಕೂಡ ಹೆಚ್ಚುತ್ತಿದ್ದು ಜಿಲ್ಲೆಯ ಜನ ತೀವ್ರ ಆತಂಕಕ್ಕೀಡಾಗಿದ್ದಾರೆ. ಜಿಲ್ಲೆಯ 72 ವರ್ಷದ ವೃದ್ಧೆ ಕೊರೊನಾಗೆ ಬಲಿಯಾಗಿದ್ದಾರೆ. ಅಸ್ತಮಾ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವೃದ್ಧೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಕೊರೊನಾಗೆ …

Read More »

ಹೊರ ಜಿಲ್ಲೆಯಿಂದ ಬಂದ್ರೆ ಶಾಲೆಯಲ್ಲಿ ಇರಬೇಕುʼ – ಡಂಗುರ ಸಾರಿದ ಗ್ರಾಮಸ್ಥರು

ಚಿಕ್ಕಮಗಳೂರು: ಹೊರ ಜಿಲ್ಲೆ ಹಾಗೂ ರಾಜ್ಯದಿಂದ ಬರುವವರು ಕಡ್ಡಾಯವಾಗಿ ಆಸ್ಪತ್ರೆಯಲ್ಲಿ ಪರೀಕ್ಷಿಸಿಕೊಂಡು ಏಳು ದಿನಗಳ ಕಾಲ ಶಾಲಾ ಕಟ್ಟಡದಲ್ಲಿ ಇದ್ದು ಕ್ವಾರಂಟೈನ್‌ ಬಳಿಕ ಮನೆಗೆ ಬರಬೇಕೆಂದು ಕಡೂರು ತಾಲೂಕಿನ ಗ್ರಾಮದಲ್ಲಿ ಡಂಗುರ ಸಾರಿಸಿ ಎಚ್ಚರಿಕೆ ನೀಡಲಾಗಿದೆ. ಜಿಲ್ಲೆಯ ಕಡೂರು ತಾಲೂಕಿನ ದೇವನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಮೇನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮದಲ್ಲಿ ಡಂಗುರ ಸಾರಿಸಿ ಸ್ಥಳೀಯರಿಗೆ ಎಚ್ಚರಿಸಿದ್ದಾರೆ. ಬೆಂಗಳೂರು, ಮೈಸೂರು ಸೇರಿದಂತೆ ಹೊರರಾಜ್ಯ ಹಾಗೂ ಹೊರಜಿಲ್ಲೆಯಿಂದ ಬರುವವರನ್ನು ಯಾರೂ ಮನೆಗೆ …

Read More »

ಸಂಜೆ 7ರಿಂದ ಬೆಳಗ್ಗೆ 7ರವರೆಗೆ ಚಾರ್ಮಾಡಿ ಸಂಚಾರ ಬಂದ್……..

ಚಿಕ್ಕಮಗಳೂರು: ಕಳೆದ ಬಾರಿ ತಿಂಗಳುಗಟ್ಟಲೇ ಬಂದ್ ಆಗಿದ್ದ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟಿಯಲ್ಲಿ ಸಂಜೆ 7 ಗಂಟೆಯಿಂದ ಬೆಳಗ್ಗೆ 7 ಗಂಟೆಯವರಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ಬಂದ್ ಮಾಡಿ ಜಿಲ್ಲಾಧಿಕಾರಿ ಬಗಾದಿ ಗೌತಮ್ ಆದೇಶಿಸಿದ್ದಾರೆ. ಕಳೆದ ಬಾರಿ ಭಾರೀ ಮಳೆಯಿಂದ ಚಾರ್ಮಾಡಿ ಘಾಟ್‍ನ ಹಲವೆಡೆ ಬೆಟ್ಟ-ಗುಡ್ಡಗಳು ಕುಸಿದಿದ್ದವು. ತಿಂಗಳುಗಟ್ಟಲೇ ಚಾರ್ಮಾಡಿ ಸಂಚಾರವನ್ನು ಸಂಪೂರ್ಣ ಸ್ಥಗಿತಗೊಳಿಸಲಾಗಿತ್ತು. ಕುಸಿದಿದ್ದ ಬೆಟ್ಟಗುಡ್ಡಗಳ ಮಣ್ಣನ್ನು ತೆಗೆಯಲು ಮೂರ್ನಾಲ್ಕು ಜೆಸಿಬಿಗಳು ತಿಂಗಳುಗಟ್ಟಲೇ …

Read More »

ಕಾಫಿನಾಡಲ್ಲಿ ಕೊರೊನಾ ದರ್ಬಾರ್- ……………..

ಚಿಕ್ಕಮಗಳೂರು: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಎಗ್ಗಿಲ್ಲದೆ ಕೊರೊನಾ ಸೋಂಕು ಹಬ್ಬುತ್ತಿದೆ. ಇಂದು ಒಂದೇ ದಿನ 23 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢವಾಗಿದ್ದು, ಜಿಲ್ಲೆಯ ಜನ ಮತ್ತಷ್ಟು ಕಂಗಾಲಾಗಿದ್ದಾರೆ. ಚಿಕ್ಕಮಗಳೂರು ಹಾಗೂ ಕಡೂರು ತಾಲೂಕಿನಲ್ಲಿ ಕೊರೊನಾ ಅಬ್ಬರ ಮುಂದುವರಿದಿದೆ. ಇಂದು ಚಿಕ್ಕಮಗಳೂರಿನಲ್ಲಿ 12 ಕೊರೊನಾ ಪ್ರಕರಣಗಳು ಪತ್ತೆಯಾಗಿದೆ. ಕಡೂರಿನಲ್ಲಿ ಎಂಟು ಪ್ರಕರಣಗಳು ಬೆಳಕಿಗೆ ಬಂದಿದೆ. ಉಳಿದಂತೆ ಜಿಲ್ಲೆಯ ಕೊಪ್ಪ, ಎನ್.ಆರ್.ಪುರ ಹಾಗೂ ಅಜ್ಜಂಪುರದಲ್ಲಿ ತಲಾ ಒಂದೊಂದು ಪ್ರಕರಣ ಪತ್ತೆಯಾಗಿದೆ. ಕಡೂರು ನಗರದ …

Read More »

ಭೀಕರ ಅಪಘಾತದಲ್ಲಿ ವ್ಯಕ್ತಿ ಸಾವು; ಎದೆ ಝಲ್ಲೆನಿಸೋ ದೃಶ್ಯ ಸಿಸಿಟಿವಿಯಲ್ಲಿ ಸೆರೆ…

ಚಿಕ್ಕಮಗಳೂರು: ಜಿಲ್ಲೆಯಲ್ಲಿ ನಿನ್ನೆ ಭೀಕರ ಅಪಘಾತಕ್ಕೀಡಾಗಿ, ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ದೈಹಿಕ ಶಿಕ್ಷಕ ಮಹಾಂತೇಶ್ ಮೃತ ದುರ್ದೈವಿ. ಕಡೂರು ತಾಲೂಕಿನ ಬೀರೂರು ಸಮೀಪ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಈ ಘಟನೆ ನಡೆದಿದೆ. ಕಡೂರಿನಿಂದ ಬಿರೂರಿಗೆ ಬರುತ್ತಿದ್ದ ಟಾಟಾ ಏಸ್​ ವಾಹನಕ್ಕೆ, ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬೈಕ್​ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬೈಕ್​ ಹಾರಿ ಹೋಗಿದ್ದು, ಮಹಂತೇಶ್​​ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಎದೆ ಝಲ್ಲೆನಿಸುವಂತಿದೆ. ಘಟನೆ …

Read More »