Breaking News
Home / ಜಿಲ್ಲೆ / ಚಿಕ್ಕ ಮಂಗಳೂರು (page 9)

ಚಿಕ್ಕ ಮಂಗಳೂರು

‘ಬಡವರಿಗೊಂದು, ಶ್ರೀಮಂತರಿಗೊಂದು ಕಾನೂನಾ?’- ಅಧಿಕಾರಿಗಳ ವಿರುದ್ಧ ಹಳ್ಳಿಗರು ಗರಂ

ಚಿಕ್ಕಮಗಳೂರು: ಜಿಲ್ಲೆಯ ವೈದ್ಯರ ಕೊರೊನಾ ವರದಿ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಅವರೊಂದಿಗೆ ಸಂಪರ್ಕಕ್ಕೆ ಬಂದಿದ್ದ 800ಕ್ಕೂ ಅಧಿಕ ಜನರನ್ನು ಕ್ವಾರಂಟೈನ್ ಮಾಡಲು ಜಿಲ್ಲಾಡಳಿತ ಮುಂದಾಗಿದ್ದು, ಆದರೆ ಅಧಿಕಾರಿಗಳ ವಿರುದ್ಧ ಹಳ್ಳಿಯ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳು ಬಡವರಿಗೊಂದು, ಶ್ರೀಮಂತರಿಗೊಂದು ಕಾನೂನು ಪಾಲನೆ ಮಾಡುತ್ತಿದ್ದಾರೆ ಎಂದು ಮಲೆನಾಡಿನ ಜನ ಆರೋಪಿಸಿದ್ದಾರೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ನಂದೀಪುರ ಗ್ರಾಮದ ಸರ್ಕಾರಿ ವೈದ್ಯರೊಬ್ಬರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಅವರ ಸಂಪರ್ಕದಲ್ಲಿದ್ದ ಸುಮಾರು 800 ಜನರನ್ನು …

Read More »

ಸಾಂಸ್ಥಿಕ ಕ್ವಾರಂಟೈನ್ ಬೇಡ, ಮಲೆನಾಡಲ್ಲಿ ಹೋಂಕ್ವಾರಂಟೈನ್ ಮಾಡಿ: ಶೋಭಾ ಕರಂದ್ಲಾಜೆ

ಚಿಕ್ಕಮಗಳೂರು: ಕರಾವಳಿ ಹಾಗೂ ಮಲೆನಾಡಿನ ಭಾಗದಲ್ಲಿ ಕ್ವಾರಂಟೈನ್‍ಗೆ ಒಳಪಡಿಸುವವರನ್ನು ಹೋಂ ಕ್ವಾರಂಟೈನಲ್ಲಿ ಇರಿಸುವಂತೆ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಅವರಿಗೆ ಮನವಿ ಮಾಡಿಕೊಂಡಿದ್ದಾರೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಿಗೆ ಮುಂಬೈ ಸೇರಿದಂತೆ ಬೇರೆ ರಾಜ್ಯ ಹಾಗೂ ವಿದೇಶಗಳಿಂದ ಸಾಕಷ್ಟು ಜನ ಬರುತ್ತಿದ್ದಾರೆ. ಇಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಕೂಡ ಹೆಚ್ಚಾಗುತ್ತಿವೆ. ಉಡುಪಿ-ಚಿಕ್ಕಮಗಳೂರು ಎರಡೂ …

Read More »

ಟ್ರ್ಯಾಕ್ಟರ್ ನೇಗಿಲಿಗೆ ಸಿಲುಕಿ ಹಾವಿನ ಬೆನ್ನು ಮೂಳೆ ಮುರಿತ- ಶಸ್ತ್ರಚಿಕಿತ್ಸೆ ಮಾಡಿಸಿದ ರೈತ

ಚಿಕ್ಕಮಗಳೂರು: ಜಮೀನು ಉಳುಮೆ ಮಾಡುವಾಗ ಟ್ರ್ಯಾಕ್ಟರ್ ನೇಗಿಲಿಗೆ ಸಿಲುಕಿದ ಭಾರೀ ಗಾತ್ರದ ನಾಗರಹಾವಿಗೆ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಿಸುವ ಮೂಲಕ ರೈತರೊಬ್ಬರು ಮಾನವೀಯತೆ ಮೆರೆದಿದ್ದಾರೆ. ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಗುಬ್ಬಿಗಾ ಗ್ರಾಮದಲ್ಲಿ ಘಟನೆ ನಡೆದಿದ್ದು, ಗ್ರಾಮದ ರೈತ ಗೋಪಾಲಾಚಾರ್ ಅವರು ಜಮೀನಿನಲ್ಲಿ ಉಳುಮೆ ಮಾಡುವಾಗ ಟ್ರ್ಯಾಕ್ಟರ್ ನೇಗಿಲಿಗೆ ಭೂಮಿಯೊಳಗಿದ್ದ ಬೃಹತ್ ಗಾತ್ರದ ನಾಗರಹಾವು ಸಿಲುಕಿಕೊಂಡಿದೆ. ನೇಗಿಲಿಗೆ ಸಿಕ್ಕ ನಾಗರಹಾವು ಬಿಡಿಸಿಕೊಳ್ಳಲಾಗದೆ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸಿದೆ. ಹಾವಿನ ಸ್ಥಿತಿ ಕಂಡ …

Read More »

ಎಪಿಎಂಸಿ ಕಾಯ್ದೆ ವಿರೋಧಿಸುವವರು ಚರ್ಚೆಗೆ ಬರಲಿ: ಸಚಿವ ಸಿ.ಟಿ.ರವಿ

ಚಿಕ್ಕಮಗಳೂರು: ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸುವವರಿಗೆ ಸಚಿವ ಸಿ.ಟಿ.ರವಿ ಸಾರ್ವಜನಿಕ ಚರ್ಚೆಗೆ ಆಹ್ವಾನ ನೀಡಿದ್ದಾರೆ. ಚಿಕ್ಕಮಗಳೂರಿನಲ್ಲಿ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ವಿರೋಧಕ್ಕಾಗಿ ವಿರೋಧ ಮಾಡೋದು ಅರ್ಥಹೀನ. 2003ರಲ್ಲಿ ಡ್ರಾಫ್ಟ್ ಆಯ್ತು. ಯುಪಿಎ ಸರ್ಕಾರದ ಅವಧಿಯಲ್ಲಿ ಆ ಡ್ರಾಫ್ಟ್ ನ ಪರಿಷ್ಕರಣೆ ಮಾಡಿ ಮಾಡೆಲ್ ಡ್ರಾಫ್ಟ್ ಆದ ಬಳಿಕ 16 ರಾಜ್ಯಗಳು ಅದನ್ನು ಒಪ್ಪಿಕೊಂಡವು. ಈಗ ಅದನ್ನು ಇನ್ನಷ್ಟು ಸುಧಾರಣೆ ಮಾಡಿ ರೈತ ಸ್ನೇಹಿಯಾಗಿ ಹೊಸ ಕಾಯ್ದೆಯನ್ನು ಜಾರಿಗೆ …

Read More »

ಮಾಜಿ ಶಾಸಕ ವೈ.ಎಸ್.ವಿ.ದತ್ತರ ಸೇವೆಗೆ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಫಿದಾ

ಚಿಕ್ಕಮಗಳೂರು: ಫೇಸ್‍ಬುಕ್ ಲೈವ್ ಮೂಲಕ ಎಸ್‍ಎಸ್‍ಎಲ್‍ಸಿ ಮಕ್ಕಳಿಗೆ ಪಾಠ ಮಾಡುತ್ತಿರೋ ಜಿಲ್ಲೆಯ ಕಡೂರಿನ ಮಾಜಿ ಶಾಸಕ ವೈ.ಎಸ್.ವಿ.ದತ್ತರ ಸೇವೆಗೆ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಫಿದಾ ಆಗಿದ್ದಾರೆ. ದತ್ತ ಅವರಿಗೆ ಪತ್ರ ಬರೆಯುವ ಮೂಲಕ ಅವರ ಸೇವೆಗೆ ಧನ್ಯವಾದ ತಿಳಿಸಿದ್ದಾರೆ. ವೃತ್ತಿ ಹಾಗೂ ಮಕ್ಕಳ ಮೇಲಿರುವ ನಿಮ್ಮ ಪ್ರೀತಿಗೆ ನನ್ನದೊಂದು ಸಲಾಂ ಎಂದು ಪತ್ರದಲ್ಲಿ ಬರೆದಿದ್ದಾರೆ. ದತ್ತ ಮೇಷ್ಟ್ರು ಎಸ್‍ಎಸ್‍ಎಲ್‍ಸಿ ಮಕ್ಕಳಿಗೆ ಪ್ರತಿ ದಿನ ಸಂಜೆ 7.30 ರಿಂದ …

Read More »

ಪಾಕ್-ಬಾಂಗ್ಲಾ ವಿರುದ್ಧ ಯುದ್ಧ ಮಾಡಿದ್ದ ಯೋಧನಿಗೆ ಅನ್ನ, ನೀರು, ಸೂರಿಲ್ಲ

ಚಿಕ್ಕಮಗಳೂರು: ಆಸ್ತಿಗಾಗಿ ಮಗನೇ ಹೆತ್ತ ಅಪ್ಪನನ್ನು ಮನೆಯಿಂದ ಹೊರ ಹಾಕಿರುವಂತಹ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಬೊಮ್ಮಲಪುರದಲ್ಲಿ ನಡೆದಿದೆ. ಭಾರತೀಯ ಸೇನೆಯಲ್ಲಿ 22 ವರ್ಷ ದೇಶಕ್ಕಾಗಿ ಹೋರಾಡಿದ ಮಾಜಿ ಯೋಧನಿಂದು ತಿನ್ನೋಕೆ ಅನ್ನವಿಲ್ಲದೆ, ಮಲಗಲು ಜಾಗವಿಲ್ಲದೆ ಪಾಳುಬಿದ್ದ ಬಸ್ ನಿಲ್ದಾಣದಲ್ಲಿ ಬದುಕುವಂತಾಗಿದೆ. 77 ವರ್ಷದ ಮಾಜಿ ಸೈನಿಕ ರಾಮಪ್ಪ ಇಂದು ಕೊಪ್ಪದ ಬಸ್ ನಿಲ್ದಾಣದಲ್ಲಿ ನಿರ್ಗತಿಕನಂತೆ ಬದುಕುತ್ತಿದ್ದಾರೆ. ತಾವೇ ಕಟ್ಟಿದ ಮನೆಯಲ್ಲಿ ತನಗೇ ಆಶ್ರಯ ಸಿಗದೇ ಕೊಪ್ಪದ ಮಾಜಿ ಸೈನಿಕರ …

Read More »

ಹೋಟೆಲ್‍ನ ಕ್ವಾರಂಟೈನ್ ಘಟಕ ಮಾಡುತ್ತಾರೆಂದು ವಿಷಯ ತಿಳಿದು ಹೋಟೆಲ್ ಸಿಬ್ಬಂದಿಗಳು ಮೊಬೈಲ್ ಸ್ವಿಚ್

ಚಿಕ್ಕಮಗಳೂರು: ಹೋಟೆಲ್‍ನ ಕ್ವಾರಂಟೈನ್ ಘಟಕ ಮಾಡುತ್ತಾರೆಂದು ವಿಷಯ ತಿಳಿದು ಹೋಟೆಲ್ ಸಿಬ್ಬಂದಿಗಳು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಹೋಗಿರುವ ಘಟನೆ ನಗರದಲ್ಲಿ ನಡೆದಿದೆ. ನಗರದ ಕೋಟೆ ಬಡಾವಣೆಯಲ್ಲಿರೋ ವೈಟ್ ಫೆದರ್ ಹೋಟೆಲ್‍ನಲ್ಲಿ ವಿದೇಶ ಹಾಗೂ ಹೊರರಾಜ್ಯ ಬಂದ ಪ್ರಯಾಣಿಕರಿಗೆ ಕ್ವಾರಂಟೈನ್ ಘಟಕಕ್ಕೆ ಜಿಲ್ಲಾಡಳಿತ ಚಿಂತಿಸಿತ್ತು. ಈ ವಿಷಯ ತಿಳಿದ ಕೂಡಲೇ ಹೋಟೆಲ್ ಸಿಬ್ಬಂದಿಗಳು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ಇತ್ತ ಈ ಹೋಟೆಲ್‍ನಲ್ಲಿ ಕ್ವಾರಂಟೈನ್ ಘಟಕ ಮಾಡಲು ಸ್ಥಳೀಯರು ಕೂಡ …

Read More »

ರೈತರು ಹೇಳಿದ್ದೇ ದರ – ಈರುಳ್ಳಿ, ಟೊಮಾಟೊ, ಕಲ್ಲಂಗಡಿ ಖರೀದಿಸಿದ ವೈ.ಎಸ್.ವಿ.ದತ್ತ

ಚಿಕ್ಕಮಗಳೂರು: ಬದುಕಿಗಾಗಿ ಬೆಳೆ ಬೆಳೆದು ಲಾಕ್‍ಡೌನ್‍ನಿಂದ ಕೊಳ್ಳುವವರಿಲ್ಲದೆ ಕಂಗಾಲಾಗಿದ್ದ ರೈತರ ಹೊಲಗಳಿಗೆ ಹೋಗಿ ಜಿಲ್ಲೆಯ ಕಡೂರಿನ ಮಾಜಿ ಶಾಸಕ ವೈ.ಎಸ್.ವಿ.ದತ್ತ ಸಾಂಕೇತಿಕವಾಗಿ ರೈತರು ಹೇಳಿದ ಬೆಲೆಗೆ ಈರುಳ್ಳಿ, ಟೊಮಾಟೊ ಹಾಗೂ ಕಲ್ಲಂಗಡಿ ಖರೀದಿಸಿದ್ದಾರೆ. ಒಂದೆರಡು ಎಕ್ರೆಯಲ್ಲಿ ರೈತರು ಬದುಕಿಗಾಗಿ ನಾನಾ ಬೆಳೆ ಬೆಳೆದಿರುತ್ತಾರೆ. ಬೆಲೆ ಇದ್ದಾಗ ಬೆಳೆ ಇರಲ್ಲ. ಬೆಳೆ ಇದ್ದಾಗ ಬೆಲೆ ಇರಲ್ಲ. ರಾಜ್ಯದ ರೈತರದ್ದು ಶೋಚನಿಯ ಪರಿಸ್ಥಿತಿ. ರೈತರ ಬಹುಪಾಲು ಜೀವನ ಮಧ್ಯವರ್ತಿಗಳ ಜೇಬು ಸೇರುತ್ತೆ. ಅದರಲ್ಲೂ …

Read More »

ಕಾಫಿ ಉದ್ಯಮದ ಮೇಲೆ ಕೊರೊನಾ ಕಾರ್ಮೋಡ…………

ಹಾಸನ: ಕೊರೊನಾ ಮಹಾಮಾರಿ ಹೊಡೆತಕ್ಕೆ ಕಾಫಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಾಫಿಗೆ ಒಳ್ಳೆ ಬೆಲೆನೂ ಸಿಗುತ್ತಿಲ್ಲ. ಇತ್ತ ಕಾಫಿಯನ್ನು ಕೊಳ್ಳುವವರು ಇಲ್ಲದಂತಾಗಿದೆ. ಪ್ರತಿ ವರ್ಷ ಒಂದಲ್ಲ ಒಂದು ಸಮಸ್ಯೆ ಎದುರಿಸುತ್ತಿದ್ದ ಕಾಫಿತೋಟದ ಮಾಲೀಕರು ಈ ಬಾರಿ ಉತ್ತಮ ಲಾಭದ ನಿರೀಕ್ಷೆಯಲ್ಲಿದ್ದರು. ಇದ್ದಕ್ಕಿದ್ದಂತೆ ವಕ್ಕರಿಸಿದ ಕೊರೊನಾ ಮಹಾಮಾರಿಯಿಂದಾಗಿ ಕಾಫಿ ಬೆಳೆಗೆ ಬೇಡಿಕೆ ಕುಸಿದಿದೆ. ಕಾಫಿ ಕೊಳ್ಳುವವರು ಕೂಡ ಮುಂದೆ ಬರುತ್ತಿಲ್ಲ. ಇದರಿಂದ ಸರಿಯಾದ ಬೆಲೆ ಕೂಡ ಸಿಗದಂತಾಗಿದೆ. ಇದೇ ರೀತಿ ಮುಂದುವರಿದರೆ …

Read More »

ಚೌಕಾಬಾರದಲ್ಲಿ ಗೆದ್ದ 500 ರೂ.ಗಾಗಿ ಅಣ್ಣನನ್ನೇ ಕೊಲೆಗೈದ ತಮ್ಮ……..

ಚಿಕ್ಕಮಗಳೂರು: ಮದ್ಯದ ಅಮಲಿನಲ್ಲಿ ತಮ್ಮನೇ ಅಣ್ಣನನ್ನು ಹೊಡೆದು ಕೊಲೆ ಮಾಡಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿ ಹೋಬಳಿಯ ಉಪ್ಪಾರ ಬೀರನಹಳ್ಳಿ ಪಿಡಬ್ಲ್ಯುಡಿ ಕ್ವಾಟರ್ಸ್‍ನಲ್ಲಿ ನಡೆದಿದೆ. ಸಹೋದರರಿಬ್ಬರು ಮನೆ ಮುಂದೆ ಚೌಕಾಬಾರ ಆಟವಾಡುತ್ತಿದ್ದಾಗ ಕ್ಷುಲಕ್ಕ ಕಾರಣಕ್ಕೆ ಗಲಾಟೆ ಆರಂಭವಾಗಿದೆ. ತಮ್ಮ ಕಿರಣ್ ಬಳಿ ಅಣ್ಣ ಅರುಣ್ ಚೌಕಾಬಾರ ಆಟದಲ್ಲಿ 500 ರೂಪಾಯಿ ಸೋತಿದ್ದ. ಈ ವೇಳೆ ತಮ್ಮ ಕಿರಣ್ ಮೊದಲು ಸೋತ ಹಣ ಕೊಡು, ಆಮೇಲೆ ಆಡೋಣ ಎಂದು ದುಂಬಾಲು …

Read More »