ತುಮಕೂರು: ಇತ್ತಿಚಿನ ದಿನದಲ್ಲಿ ದಲಿತರಿಗಾಗಿ ಇರುವ ಅಟ್ರಾಸಿಟಿ ಸೇರಿದಂತೆ ಕೆಲವು ಕಾನೂನುಗಳು ದುರುಪಯೋಗ ಪಡಿಸಿಕೊಳ್ಳುತ್ತಿರುವ ಬಗ್ಗೆ ಮಾಜಿ ಸಚಿವ ಕೆ ಎನ್ ರಾಜಣ್ಣ ಬೇಸರ ಹೊರಹಾಕಿದ್ದಾರೆ. ತುಮಕೂರಿನಲ್ಲಿ ದಲಿತ ಸಂಘರ್ಷ ಸಮಿತಿ ಹಾಗೂ ಚರಕ ಚಾರಿಟಬಲ್ ಟ್ರಸ್ಟ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದಲಿತ ಸಮುದಾಯದ ಯುವ ಸಮೂಹವೇ ಈ ಕಾನೂನನ್ನು ಹೆಚ್ಚು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಹೇಳಿದರು. ದಲಿತರು ಬೇರೆ ಸಮುದಾಯದ ಪ್ರೀತಿ ವಿಶ್ವಾಸವನ್ನು ಗಳಿಸಬೇಕೇ ಹೊರತು ನಮಗಾಗಿ ಇರುವ …
Read More »ಮಿದುಳು ಕ್ಯಾನ್ಸರ್‌ಗೆ ತುತ್ತಾದ ಬಾಲಕಿಗೆ ಜಿಲ್ಲಾಡಳಿತದ ನೆರವು
ಗುಬ್ಬಿ: ಆಧಾರ್ ಕಾರ್ಡ್‌ನಲ್ಲಿ ಕನ್ನಡದಲ್ಲಿ ಹೆಸರು ಇಲ್ಲದೆ ಸಮಸ್ಯೆ ಎದುರಿಸಿದ್ದ ಮಿದುಳು ಕ್ಯಾನ್ಸರ್‌ಗೆ ತುತ್ತಾದ ಬಾಲಕಿಗೆ ಜಿಲ್ಲಾಡಳಿತ ಕೊಟ್ಟ ಮಾತಿನಂತೆ ನಾಲ್ಕು ದಿನದಲ್ಲಿ ಆಧಾರ್ ತಿದ್ದುಪಡಿ ಹಾಗೂ ಬಿಪಿಎಲ್ ಕಾರ್ಡ್ ಸಿದ್ಧ ಮಾಡಿ ಕುಟುಂಬಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರೇ ಹಸ್ತಾಂತರ ಮಾಡಿದ್ದಾರೆ. ಪಟ್ಟಣದ ಸಮೀಪದ ಜಿ.ಹರಿವೇಸಂದ್ರ ಗ್ರಾಮದ ಮಂಜುನಾಥ್ ಹಾಗೂ ನೇತ್ರಾವತಿ ದಂಪತಿಯ ಹತ್ತು ವರ್ಷದ ಪುತ್ರಿ ಐದು ತಿಂಗಳ ಹಿಂದೆ ಜ್ವರದಿಂದ ಬಳಲಿ ನಂತರ ಕೈ ಕಾಲು …
Read More »ಬಾಕಿ ಬಿಲ್ಗೆ ಆಗ್ರಹಿಸಿ ಮಾ.6ರಂದು ಗುತ್ತಿಗೆದಾರರ ಪ್ರತಿಭಟನೆಗೆ ಕರೆ
ತುಮಕೂರು: ಬಾಕಿ ಬಿಲ್ ವಿಚಾರವಾಗಿ ರಾಜ್ಯ ಸರ್ಕಾರ ದ ವಿರುದ್ಧ ಸಮರ ಸಾರಿರುವ ಗುತ್ತಿಗೆದಾರರ ಸಂಘ, ಮಾ. 6ರಂದು ಪ್ರತಿಭಟನೆ ನಡೆಸಲು ಮುಂದಾಗಿದೆ. ಈ ಕುರಿತು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಮಂಜುನಾಥ್ ನೇತೃತ್ವದಲ್ಲಿ ತುಮಕೂರು ನಗರದ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಲಾಗಿದ್ದು, ಕಳೆದ ಮೂರು ವರ್ಷಗಳಲ್ಲಿ ರಾಜ್ಯ ಸರ್ಕಾರ ಸುಮಾರು 37 ಸಾವಿರ ಕೋಟಿ ರೂ. ಬಿಲ್ ಬಾಕಿ ಉಳಿಸಿಕೊಂಡಿದೆ ಎಂದು ಆರೋಪಿಸಲಾಗಿದೆ. ಈ ಸರ್ಕಾರದ …
Read More »ವಿದ್ಯುತ್ ಕಂಬದಿಂದ ಬಿದ್ದು ಗೋಕಾಕ್ ಮೂಲದ ಲೈನ್‌ಮ್ಯಾನ್ ಸಾವು…!
ತುಮಕೂರು : ವಿದ್ಯುತ್ ಕಂಬದಿಂದ ಬಿದ್ದು ಲೈನ್‌ಮ್ಯಾನ್ ಮೃತಪಟ್ಟ ಘಟನೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಶೆಟ್ಟಿಕೆರೆ ಹೋಬಳಿಯ ವಡೇರಹಳ್ಳಿ ಗ್ರಾಮದಲ್ಲಿ ನಡೆದಿದೆ. ಹನುಮಂತ ಜಾಲಿಕಟ್ಟೆ (29) ಮೃತ ದುರ್ದೈವಿ. ವಿದ್ಯುತ್ ಕಂಬದ ಮೇಲೆ ದುರಸ್ತಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಕೆಳಗಡೆ ಬಿದ್ದಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ಮೂಲದ ಹನುಮಂತ ಜಾಲಿಕಟ್ಟೆ ಕಂಬದ ಮೇಲೆ ಕೆಲಸ ಮಾಡುವ ಮೊದಲು ವಿದ್ಯುತ್ ಸಂಪರ್ಕ ಸರಿಯಾಗಿ ಕಡಿತಗೊಳಿಸಬೇಕು. ಬೆಸ್ಕಾಂ ಅಧಿಕಾರಿ ಮತ್ತು …
Read More »ಮಗ ನಮ್ಮ ಜೊತೆಗಿದ್ದಿದ್ದರೆ ಸಾಕಾಗಿತ್ತು. ದುಡ್ಡು ಕೊಟ್ಟರೆ ಮಗ ಮತ್ತೆ ವಾಪಸ್ ಬರೊಲ್ಲ ಸಾರ್.. ಮುನ್ನೆಚ್ಚರಿಕೆ ವಹಿಸಬೇಕು.. ಇದು ಚಿನ್ನಸ್ವಾಮಿ ಸ್ಟೇಡಿಯಂನ ಕಾಲ್ತುಳಿತದಲ್ಲಿ ಸಾವನ್ನಪ್ಪಿದ ವಿದ್ಯಾರ್ಥಿಯ ತಂದೆಯ ನುಡಿ..
ತುಮಕೂರು: ಇತ್ತೀಚಿಗೆ (ಜೂನ್ 4) ಆರ್ ಸಿಬಿ ವಿಜಯೋತ್ಸವದ ವೇಳೆ ಮೃತಪಟ್ಟ ತುಮಕೂರು ಮೂಲದ ವಿದ್ಯಾರ್ಥಿ ಮನೋಜ್ ಕುಟುಂಬಕ್ಕೆ ಸರ್ಕಾರದ ಆದೇಶದಂತೆ 25 ಲಕ್ಷ ರೂಪಾಯಿ ಹಣದ ಚೆಕ್ಅನ್ನು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಭಾನುವಾರ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಮೃತ ವಿದ್ಯಾರ್ಥಿ ಮನೋಜ್ ತಂದೆ ದೇವರಾಜ್, ಚೆಕ್ ಕೊಟ್ಟಿದಾರೆ ಸರ್.. ಮಗ ಬರೊಲ್ವಲ್ಲ. ಚೆಕ್ ಕೊಟ್ಟರೆ ಮಗಾ ಬರ್ತಾನಾ, ಇದ್ದೋನು ಒಬ್ಬನೇ ಮಗ ಎಂದು ನೊಂದು …
Read More »ತುಮಕೂರು: ಕೊಳಕುಮಂಡಲ ಹಾವು ಮತ್ತು 43 ಮರಿಗಳ ರಕ್ಷಣೆ
ತುಮಕೂರು : ನಗರದ ಮಹಾಲಕ್ಷ್ಮಿ ಬಡಾವಣೆಯ ವಾಸಿ ಶಿವಣ್ಣ ಟೈರ್ಸ್ ಮಾಲೀಕರಾದ ಕಾರ್ತಿಕ್ ಅವರ ಕಟ್ಟಡ ಕಾರ್ಮಿಕರ ಶೆಡ್ನಲ್ಲಿ 4 ಅಡಿ ಉದ್ದದ ಕೊಳಕುಮಂಡಲ ಹಾವು ಹಾಗೂ ಅದರ 43 ಮರಿಗಳು ಕಾಣಿಸಿಕೊಂಡಿವೆ. ಈ ವಿಷಯ ತಿಳಿದ ವನ್ಯಜೀವಿ ಜಾಗೃತಿ ಹಾಗೂ ಉರಗ ಸಂರಕ್ಷಣಾ ಸಂಸ್ಥೆಯ (ವಾರ್ಕೊ) ಉರಗ ರಕ್ಷಕರಾದ ಚಂದನ್, ಮನು ಅಗ್ನಿವಂಶಿ ಮತ್ತು ಕಾರ್ತಿಕ್ ಸಿಂಗ್ ಅವರು ಸುರಕ್ಷಿತವಾಗಿ ಹಾವಿನ ಮರಿಗಳನ್ನು ರಕ್ಷಿಸಿ, ಸಮೀಪದ ದೇವರಾಯನ ದುರ್ಗಾ …
Read More »ವಿಶ್ವವಿದ್ಯಾಲಯಗಳನ್ನು ಮುಚ್ಚುವುದು ದುರದೃಷ್ಟಕರ; ಬಿ.ವೈ. ವಿಜಯೇಂದ್ರ
ತುಮಕೂರು: ವಿಶ್ವವಿದ್ಯಾಲಯಗಳನ್ನು ಮುಚ್ಚುವ ಸರಕಾರದ ನಿರ್ಧಾರ ಕುರಿತಂತೆ ಉತ್ತರ ನೀಡಿದ ಅವರು, ವಿಶ್ವವಿದ್ಯಾಲಯಗಳನ್ನು ಮುಚ್ಚುವುದು ದುರದೃಷ್ಟಕರ. ಬಿಜೆಪಿ ಸರಕಾರ ಇದ್ದಾಗ ತೆರೆದ ಹೊಸ ವಿವಿಗಳನ್ನು ಮುಚ್ಚುವ ಕೆಲಸವನ್ನು ಸರಕಾರ ಮಾಡುತ್ತಿದೆ. ಕಾರಣ ಏನು? ಇವುಗಳಿಗೆ 300 ಕೋಟಿ, 400 ಕೋಟಿ ಅನುದಾನ ಕೊಡಬೇಕಿದೆ. ಅನುದಾನ ಕೊಟ್ಟರೆ ವಿವಿಗಳು ಕೆಲಸ ಮಾಡಲು ಸಾಧ್ಯ ಮತ್ತು ಅದರಿಂದ ಬಡ ಮಕ್ಕಳಿಗೆ ಅನುಕೂಲ ಆಗುತ್ತದೆ. ಕಾಂಗ್ರೆಸ್ ಸರಕಾರದ ನಿರ್ಧಾರ ಶೋಭೆ ತರುವುದಿಲ್ಲ ಇದರಿಂದ ಒಳಿತಾಗುವುದಿಲ್ಲ …
Read More »ವೀರಶೈವ, ಲಿಂಗಾಯತ ಒಂದೇ ನಾಣ್ಯದ ಮುಖಗಳು: ಈಶ್ವರ ಖಂಡ್ರೆ
ತುಮಕೂರು: ಎಲ್ಲ ಧರ್ಮ, ಜಾತಿಗಳಿಗೂ ಪ್ರಪಂಚದ ಮೊದಲ ಸಂಸತ್ತು ಎನಿಸಿಕೊಂಡಿರುವ ಅನುಭವ ಮಂಟಪದಲ್ಲಿ ಅವಕಾಶ ಕಲ್ಪಿಸಿದವರು ಬಸವೇಶ್ವರರು. ಮೌಡ್ಯದಿಂದ ಸಮಾಜವನ್ನು ಹೊರತರಬೇಕೆಂಬುದು ಅವರ ಕನಸಾಗಿತ್ತು. ಇಂತಹ ಕನಸನ್ನು ನನಸು ಮಾಡಲು ನಾವೆಲ್ಲರೂ ಕಟಿಬದ್ಧರಾಗಬೇಕಿದೆ, ವೀರಶೈವ, ಲಿಂಗಾಯತ ಎಂಬುದು ಶರಣ ಸಮಾಜವೆಂಬ ಒಂದು ನಾಣ್ಯದ ಎರಡು ಮುಖಗಳು ಎಂದು ಅಖಿಲ ಭಾರತ ವೀರಶೈವ, ಲಿಂಗಾಯತ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಈಶ್ವರ ಖಂಡ್ರೆ ಹೇಳಿದರು. ನಗರದ ಶ್ರೀ …
Read More »ಹಣಕ್ಕೆ ಬೇಡಿಕೆಯಿಟ್ಟಿದ್ದಲ್ಲದೆ, ತನ್ನೊಂದಿಗೆ ಮಲಗುವಂತೆ ಕೇಳಿದ ಆರೋಪ: ಮಂಜು ಪಾವಗಡ ಸಹೋದನಿಗೆ ಥಳಿತ
ತುಮಕೂರು: ಪತ್ರಕರ್ತನ ಸೋಗಿನಲ್ಲಿ ತುಮಕೂರು ಪಾಲಿಕೆ ಸಿಬ್ಬಂದಿಗೆ ಹಣಕ್ಕಾಗಿ ಬೇಡಿಕೆಯಿಟ್ಟು, ಬೆದರಿಕೆಯೊಡ್ಡಿದ್ದ ಆರೋಪದಡಿಯಲ್ಲಿ ಬಿಗ್‌ಬಾಸ್ ಖ್ಯಾತಿಯ ಮಂಜು ಪಾವಗಡ ಸಹೋದರ ಪ್ರದೀಪ್ ಪಾವಗಡ ಹಾಗೂ ಮೂವರು ಯುವತಿಯರು ಸೇರಿದಂತೆ ಒಟ್ಟು ನಾಲ್ವರನ್ನು ತುಮಕೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಪ್ರದೀಪ್ ಪಾವಗಡ ತಾನೊಬ್ಬ ಸತ್ಯ ವಿಸ್ಮಯ ವಾರ ಪತ್ರಿಕೆ ಸಂಪಾದಕ ಎಂದು ಹೇಳಿಕೊಂಡಿದ್ದ ಮತ್ತು ತುಮಕೂರು ಮಹಾನಗರ ಪಾಲಿಕೆ ನಲ್ಮ್ ವಿಭಾಗದ ಸಿಬ್ಬಂದಿ ದೀಪಿಕಾಗೆ ಪರಿಚಯವಾಗಿದ್ದ. ಸಂಘ, ಸಂಸ್ಥೆ ಹೆಸರಲ್ಲಿ …
Read More »ತಾತನನ್ನೇ ಕೊಂದು ತೋಟದಲ್ಲಿ ಹೂತುಹಾಕಿದ್ದ ಮೊಮ್ಮಗ! ತುಮಕೂರಲ್ಲಿ 8 ತಿಂಗಳ ಬಳಿಕ ಭಯಾನಕ ರಹಸ್ಯ ಬಯಲು
ತುಮಕೂರು: ತಾತನನ್ನು ಮೊಮ್ಮಗನೇ ಕೊಲೆ ಮಾಡಿದ ರಹಸ್ಯ 8 ತಿಂಗಳ ಬಳಿಕ ಬಯಲಾಗಿದೆ. ಅದೂ ಸ್ನೇಹಿತರ ನಡುವೆ ಮನಸ್ತಾಪ ಉಂಟಾಗಿದ್ದರಿಂದ… ಇಂತಹ ವಿಚಿತ್ರ ಪ್ರಕರಣ ಗುಬ್ಬಿ ತಾಲೂಕಿನ ನಡೆದಿದೆ. ಕಲ್ಲರ್ದಗೆರೆ ಭೋವಿ ಕಾಲನಿಯ ಗೋವಿಂದಪ್ಪ (75) ಕೊಲೆಯಾಗಿದ್ದು, ಪ್ರಕರಣದ ಬೆನ್ನು ಹತ್ತಿದ ಚೇಳೂರು ಪೊಲೀಸರು ಗೋವಿಂದಪ್ಪನ ಮೊಮ್ಮಗ ಮೋಹನ್ ಹಾಗೂ ಆತನ ಸ್ನೇಹಿತರಾದ ಪ್ರಜ್ವಲ್, ಚೇತನ್ ಎಂಬುವವರನ್ನು ಬಂಧಿಸಿದ್ದಾರೆ. ಏನಿದು ಪ್ರಕರಣ?: ಗೋವಿಂದಪ್ಪಗೆ ನಾಲ್ಕು ಎಕರೆ ಜಮೀನು ಇತ್ತು. ಇವರಿಗೆ ಒಬ್ಬ …
Read More »
Laxmi News 24×7