Breaking News
Home / ಜಿಲ್ಲೆ / ದಕ್ಷಿಣ ಕನ್ನಡ

ದಕ್ಷಿಣ ಕನ್ನಡ

ತೀವ್ರ ಹೊಟ್ಟೆ ನೋವಿನಿಂದ ಬಳಲಿ ಸ್ನೇಹಿತೆಯರಿಬ್ಬರು ಸಾವನ್ನಪ್ಪಿದಾರೆ

ತೀವ್ರ ಹೊಟ್ಟೆ ನೋವಿನಿಂದ ಬಳಲಿ ಸಾವನ್ನಪ್ಪಿದ ಸ್ನೇಹಿತೆಯರು – ಧರ್ಮಸ್ಥಳ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲು. ಬೆಳ್ತಂಗಡಿ(ದಕ್ಷಿಣ ಕನ್ನಡ): ತೀವ್ರ ಹೊಟ್ಟೆ ನೋವಿನಿಂದ ಬಳಲಿ ಸ್ನೇಹಿತೆಯರಿಬ್ಬರು ಅಸಹಜ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ನಿನ್ನೆ(ಏ.6) ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಪಟ್ರಮೆಯಲ್ಲಿ ನಡೆದಿದೆ. ಮೃತ ಯುವತಿಯರು ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಪಟ್ಟೂರಿನ ಬಾಬು ಹಾಗೂ ಗೀತಾ ದಂಪತಿ ಪುತ್ರಿ ರಕ್ಷಿತಾ (22) ಹಾಗೂ ಆಕೆಯ ನೆರೆಮನೆಯ ಶ್ರೀನಿವಾಸ ಆಚಾರಿ ಹಾಗೂ …

Read More »

ಪ್ರಶಸ್ತಿಗಾಗಿ ಕೆಲಸ ಮಾಡಲಿಲ್ಲ

ಮಂಗಳೂರು : ಛಲವೊಂದಿದ್ದರೆ ಎನನ್ನೂ ಸಾಧಿಸಬಹುದು ಎಂಬುದಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಮೈ ಮಹಾಲಿಂಗ ನಾಯ್ಕ ಅವರೇ ಸಾಕ್ಷಿ. ಬೋಳುಗುಡ್ಡೆಯಲ್ಲಿ ಸುರಂಗ ನಿರ್ಮಿಸಿ, ನೀರು ಹರಿಸಿ ಬಂಗಾರ ಬೆಳೆದ ಭಗೀರಥ. ಶಾಲೆ, ಕಾಲೇಜುಗಳಿಗೆ ಹೋಗದಿದ್ದರೂ, ನೀರನೆಮ್ಮದಿಯನ್ನು ಕಂಡು ಪ್ರಗತಿಪರ ಕೃಷಿಕರೆನಿಸಿಕೊಂಡವರು. ಮಹಾಲಿಂಗ ನಾಯ್ಕರ ಸಾಧನೆ ಮನ್ನಿಸಿ ಅವರನ್ನು ಭಾರತ ಸರ್ಕಾರದ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಅರಸಿ ಬಂದಿದೆ. ‘ದೇಶದ ದೊಡ್ಡ ಪ್ರಶಸ್ತಿ ಬಂದಿರುವುದು ನಮಗೆ ಖುಷಿ ಕೊಟ್ಟಿದೆ. …

Read More »

ದೇವಸ್ಥಾನದ ನವರಾತ್ರಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾದ ಮಂಗಳೂರು ಉತ್ತರ ಕ್ಷೇತ್ರದ ಮಾಜಿ ಶಾಸಕ ಮೊಯಿದ್ದೀನ್ ಬಾವಾಗೆ ಮುಂಬೈನಿಂದ ಬೆದರಿಕೆ ಕರೆ ಬಂದಿದೆ.

ಮಂಗಳೂರು: ದೇವಸ್ಥಾನದ ನವರಾತ್ರಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾದ ಮಂಗಳೂರು ಉತ್ತರ ಕ್ಷೇತ್ರದ ಮಾಜಿ ಶಾಸಕ ಮೊಯಿದ್ದೀನ್ ಬಾವಾಗೆ ಮುಂಬೈನಿಂದ ಬೆದರಿಕೆ ಕರೆ ಬಂದಿದೆ. ಮಂಗಳೂರು ಹೊರವಲಯದ ಬಜಪೆ ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ನವರಾತ್ರಿಯ ಪ್ರಯುಕ್ತ ಕೊಪ್ಪರಿಗೆ ಇಡುವ ಕಾರ್ಯಕ್ರಮವಿತ್ತು. ಇದಕ್ಕೆ ಕ್ಷೇತ್ರದ ಆಹ್ವಾನದಂತೆ ಮಾಜಿ ಶಾಸಕ ಮೊಯಿದ್ದೀನ್ ಬಾವಾ ಭೇಟಿ ನೀಡಿದ್ದರು. ಅದೇ ವೇಳೆ ಕೊಪ್ಪರಿಗೆ ಇಡುವ ಧಾರ್ಮಿಕ ವಿಧಿ ವಿಧಾನ ನಡೆಯುತ್ತಿತ್ತು. ಹೀಗಾಗಿ ಕ್ಷೇತ್ರಾಡಳಿತ ಮಂಡಳಿಯವರು …

Read More »

ದೇವಸ್ಥಾನದೊಳಗೆ ಪ್ರತ್ಯಕ್ಷವಾಗಿ ಅಚ್ಚರಿ ಮೂಡಿಸಿದ ಮೊಸಳೆ

ಮಂಗಳೂರು: ನೆರೆಯ ಕಾಸರಗೋಡು ಜಿಲ್ಲೆಯ ಕುಂಬಳೆ ಸಮೀಪದ ಅನಂತಪುರ ದೇವಸ್ಥಾನದಲ್ಲಿ ಇಂದು ಮೊಸಳೆಯೊಂದು ಪ್ರತ್ಯಕ್ಷವಾಗಿದೆ. ಗರ್ಭಗುಡಿ ಬಳಿ ಬಂದಿದ್ದು, ಈ ಕ್ಷೇತ್ರದ ಮೊಸಳೆ ಅನ್ನೋದು ವಿಶೇಷ. ಈ ಕ್ಷೇತ್ರ ಕೆರೆ ನೀರಿನ ಮಧ್ಯೆ ಇದ್ದು ಇಲ್ಲಿನ ಕೆರೆಯಲ್ಲಿ ವಾಸವಾಗಿರುವ ದೇವರ ಮೊಸಳೆ ಎಂದೇ ಪ್ರಸಿದ್ಧಿ ಪಡೆದ ‘ಬಬಿಯಾ’ ಅನ್ನುವ ಮೊಸಳೆ ಗರ್ಭಗುಡಿ ಬಳಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದೆ. ಹಲವಾರು ವರ್ಷಗಳಿಂದ ದೇವಸ್ಥಾನದ ಕೆರೆಯಲ್ಲಿ ಇರುವ ‘ಬಬಿಯಾ’ಗೆ ಪ್ರತಿನಿತ್ಯದ ಪೂಜೆಯ ಬಳಿಕ …

Read More »

ಮಂಗಳೂರು ದಸರಾಕ್ಕೆ ವಿದ್ಯುಕ್ತ ಚಾಲನೆ ನೀಡಿದ ಕೊರೊನಾ ವಾರಿಯರ್

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಮಂಗಳೂರು ದಸರಾಕ್ಕೆ ಇಂದು ವಿದ್ಯುಕ್ತವಾಗಿ ಚಾಲನೆ ದೊರೆಯಿತು. ಕೊರೊನಾ ವಾರಿಯರ್ ಎನ್.ಆರ್.ಐ ಫೋರಂನ ಮಾಜಿ ಉಪಾಧ್ಯಕ್ಷೆ, ಚಿಕ್ಕಮಗಳೂರು ಮೂಲದ ಡಾ.ಆರತಿ ಕೃಷ್ಣ ಈ ಬಾರಿಯ ಮಂಗಳೂರು ದಸರಾಕ್ಕೆ ಚಾಲನೆ ನೀಡಿದರು. ಶ್ರೀ ಕ್ಷೇತ್ರದಲ್ಲಿ ಗಣಪತಿ, ಶಾರದಾ ಮಾತೆ, ನವದುರ್ಗೆಯರು ಹಾಗೂ ಆದಿಶಕ್ತಿಯ ಮಣ್ಣಿನ ಮೂರ್ತಿಗಳನ್ನು ಏಕಕಾಲದಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಕ್ಷೇತ್ರದ ಅಭಿವೃದ್ಧಿಯ ರೂವಾರಿ ಜನಾರ್ದನ ಪೂಜಾರಿಯವರ ಆಶಯದಂತೆ ಕೊರೊನಾ ಹಿನ್ನೆಲೆಯಲ್ಲಿ ಈ …

Read More »

ಕೇಂದ್ರ ಸರ್ಕಾರ ಆದೇಶ ಮಾಡಿದೆ. ಆದರೂ ಕೇರಳ ಸರ್ಕಾರ ಮಾತ್ರ ಕರ್ನಾಟಕದ ಗಡಿ ಬಂದ್ ಮಾಡಿ ಉದ್ಧಟತನ ತೋರಿದೆ.

ಮಂಗಳೂರು: ದೇಶದ ಎಲ್ಲಾ ರಾಜ್ಯದ ಗಡಿಗಳನ್ನು ಓಪನ್ ಮಾಡಿ ಅಂತರ್ ರಾಜ್ಯ ಸಂಪರ್ಕಕ್ಕೆ ಅನುವು ಮಾಡಿಕೊಡಲು ಕೇಂದ್ರ ಸರ್ಕಾರ ಆದೇಶ ಮಾಡಿದೆ. ಆದರೂ ಕೇರಳ ಸರ್ಕಾರ ಮಾತ್ರ ಕರ್ನಾಟಕದ ಗಡಿ ಬಂದ್ ಮಾಡಿ ಉದ್ಧಟತನ ತೋರಿದೆ. ಮಂಗಳೂರಿನ ತಲಪಾಡಿಯಲ್ಲಿರುವ ಕೇರಳ ಗಡಿ ಚೆಕ್ ಪೋಸ್ಟ್ ನಲ್ಲಿ ಕೇರಳಕ್ಕೆ ಪ್ರವೇಶಿಸದಂತೆ ಕೇರಳ ಪೊಲೀಸರು ತಡೆಯುತ್ತಿದ್ದಾರೆ. ಕೇರಳದ ಸಿಪಿಎಂ ಸರ್ಕಾರದ ಈ ನಡೆಯಿಂದ ಗಡಿನಾಡ ಕನ್ನಡಿಗರು ಅತಂತ್ರರಾಗಿದ್ದಾರೆ. ತಕ್ಷಣ ಗಡಿಯನ್ನು ಓಪನ್ ಮಾಡಬೇಕೆಂದು …

Read More »

ಪ್ರಾಣದ ಹಂಗು ತೊರೆದು ಕೊಚ್ಚಿ ಹೋಗುತ್ತಿದ್ದ ಕಾಲು ಸೇತುವೆ ಕಟ್ಟಿ, ಗಟ್ಟಿಗೊಳಿಸಿದ ಗ್ರಾಮಸ್ಥ

ಮಂಗಳೂರು: ಪಶ್ಚಿಮ ಘಟ್ಟ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ ಜಿಲ್ಲೆಯ ಎಲ್ಲ ಜೀವನದಿಗಳು ಉಕ್ಕಿ ಹರಿಯುತ್ತಿವೆ. ಮಳೆ, ಪ್ರವಾಹದಿಂದ ಜನ ತಮ್ಮ ಬದುಕು ಕಟ್ಟಿಕೊಳ್ಳಲು ಹರ ಸಾಹಸ ಪಡುತ್ತಿದ್ದಾರೆ. ಅದೇ ರೀತಿ ಕೊಚ್ಚಿ ಹೋಗುತ್ತಿದ್ದ ಸೇತುವೆಯನ್ನು ಪ್ರಾಣದ ಹಂಗು ತೊರೆದು ಗ್ರಾಮಸ್ಥರೊಬ್ಬರು ಕಟ್ಟಿ ನಿಲ್ಲಿಸಿದ್ದಾರೆದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ದಿಡುಪೆಯಲ್ಲಿ ಜನರೇ ನಿರ್ಮಿಸಿದ್ದ ಕಾಲು ಸೇತುವೆಯನ್ನು ಉಳಿಸಿಕೊಳ್ಳಲು ಗ್ರಾಮಸ್ಥರೊಬ್ಬರು ತಮ್ಮ ಪ್ರಾಣವನ್ನೇ ಒತ್ತೆ ಇಟ್ಟಿದ್ದಾರೆ. ರಭಸವಾಗಿ …

Read More »

ಶ್ರೀ ಕ್ಷೇತ್ರ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟ ಮುಳುಗುವ ಭೀತಿ

ಮಂಗಳೂರು: ಪಶ್ಚಿಮ ಘಟ್ಟದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟ ಮುಳುಗುವ ಭೀತಿ ಎದುರಾಗಿದೆ. ನೇತ್ರಾವತಿ ನದಿ ನೀರು ತುಂಬಿ ಹರಿಯುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಸ್ನಾನಘಟ್ಟದ ಮೇಲ್ಬಾಗದವರೆಗೂ ನೇತ್ರಾವತಿ ನದಿ ನೀರು ಬರುತ್ತಿದೆ. ಅಪಾಯದ ಮಟ್ಟ ಮೀರಿ ನೀರು ಹರಿಯುತ್ತಿರುವುದರಿಂದ ನೇತ್ರಾವತಿ ಸ್ನಾನ ಘಟ್ಟದ ಬಳಿ ಭಕ್ತರಿಗೆ ಸಂಪೂರ್ಣವಾಗಿ ನಿಷೇಧ ಹೇರಲಾಗಿದೆ. ಪಶ್ಚಿಮ ಘಟ್ಟದಲ್ಲಿ ಇದೇ ರೀತಿ ಮಳೆ ಮುಂದುವರೆದರೆ …

Read More »

ಐವಾನ್ ಡಿಸೋಜಾ ಜೊತೆ ಸುತ್ತಾಡಿದ ಡಿಕೆಶಿಗೆ ಯಾಕಿಲ್ಲ ಕ್ವಾರಂಟೈನ್?

ಮಂಗಳೂರು: ಮಾಜಿ ಎಂಎಲ್‍ಸಿ ಐವಾನ್ ಡಿಸೋಜಾಗೆ ಕೊರೊನಾ ಪಾಸಿಟಿವ್ ಆಗಿದ್ರೂ ಅವರ ಜೊತೆ ದಿನವಿಡೀ ಸುತ್ತಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕ್ವಾರಂಟೈನ್ ನಿಯಮ ಉಲ್ಲಂಘಿಸಿ ಇಂದು ಕೂಡಾ ಜನರ ಮಧ್ಯೆ ಸುತ್ತಾಡುತ್ತಿದ್ದಾರೆ. ಕಾನೂನು, ನಿಯಮಗಳು ಜನಪ್ರತಿನಿಧಿಗಳಿಗೆ ಅನ್ವಯ ಆಗಲ್ವಾ ಎಂದು ಸಾರ್ವಜನಿಕರು ಪ್ರಶ್ನೆ ಮಾಡುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಜುಲೈ 31 ರಂದು ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಬಂದಾಗ ಸ್ವಾಗತಿಸಲು ಐವಾನ್ ಡಿಸೋಜಾ ಅವರು ಹೋಗಿದ್ದರು. ಯಾವುದೇ ಸಾಮಾಜಿಕ ಅಂತರವಿಲ್ಲದೆ ಜೊತೆಯಲ್ಲಿದ್ದು ಬಳಿಕ ಕಾಂಗ್ರೇಸ್ …

Read More »

ಭಾರತದ ಹೆಬ್ಬುಲಿಗಳ ಅಟ್ಟಹಾಸಕ್ಕೆ ಪತರುಗುಟ್ಟಿದ ಪಾಕಿಸ್ತಾನ ಕಾರ್ಗಿಲ್ ಬಿಟ್ಟು ಓಡಿಹೋಗಿ 21 ವರ್ಷಗಳು ಕಳೆದಿವೆ.

ಮಂಗಳೂರು: ಭಾರತದ ಹೆಬ್ಬುಲಿಗಳ ಅಟ್ಟಹಾಸಕ್ಕೆ ಪತರುಗುಟ್ಟಿದ ಪಾಕಿಸ್ತಾನ ಕಾರ್ಗಿಲ್ ಬಿಟ್ಟು ಓಡಿಹೋಗಿ 21 ವರ್ಷಗಳು ಕಳೆದಿವೆ. ಭಾರತೀಯ ಯೋಧರ ಧೈರ್ಯ, ಸಾಹಸ, ದೇಶಪ್ರೇಮದ ಪ್ರತೀಕವಾಗಿ ಕಾರ್ಗಿಲ್ ಭಾರತದಲ್ಲೇ ಉಳಿದಿದೆ. ತ್ರಿವರ್ಣ ಧ್ವಜ ಸ್ವಚ್ಛಂದವಾಗಿ ಹಾರುತ್ತಿದೆ. ಕಾರ್ಗಿಲ್ ಯುದ್ಧದಲ್ಲಿ ದೇಶಕ್ಕಾಗಿ ಹುತಾತ್ಮರಾದವರ ಕಥೆಯೇ ರೋಮಾಂಚನಕಾರಿ ಯಾದರೆ, ಯುದ್ಧದಲ್ಲಿ ಗೆದ್ದು, ಭಾರತಮಾತೆಗೆ ವಿಜಯದ ತಿಲಕವಿಟ್ಟ ವೀರ ಸೇನಾನಿಗಳ ಹೋರಾಟ ಅದೊಂದು ಇತಿಹಾಸ. ಇಂತಹ ವೀರ ಸೇನಾನಿಗಳ ಪೈಕಿ ಕರಾವಳಿಯಲ್ಲಿ ಹೆಮ್ಮೆಯ ಯೋಧ ಪ್ರವೀಣ್ …

Read More »