Home / ಜಿಲ್ಲೆ / ದಕ್ಷಿಣ ಕನ್ನಡ (page 3)

ದಕ್ಷಿಣ ಕನ್ನಡ

ಉಡುಪಿಯಲ್ಲಿ ಕ್ವಾರಂಟೈನ್ ಮುಗಿಸಿ ಮಂಗಳೂರಿಗೆ ಬಂದವರಿಗೆ ಕೊರೊನಾ

ಮಂಗಳೂರು: ಉಡುಪಿಯಲ್ಲಿ ಕ್ವಾರಂಟೈನ್ ಮುಗಿಸಿ ಮಂಗಳೂರಿಗೆ ಬಂದ ಏಳು ಮಂದಿ ಇತರ ಒಬ್ಬ ಸಹಿತ ಸೇರಿ ಒಟ್ಟು 8 ಮಂದಿಗೆ ಇಂದು ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಮಹಾರಾಷ್ಟ್ರದಿಂದ ಬಂದು ಉಡುಪಿಯಲ್ಲಿ 7 ಮಂದಿ ಕ್ವಾರೆಂಟೈನ್ ಆಗಿದ್ದರು. ಕ್ವಾರಂಟೈನ್ ಅವಶಿ ಮುಗಿದ ನಂತರ ಅವರನ್ನು ಮನೆಗೆ ಕಳುಹಿಸಲಾಗಿತ್ತು. ಇದೀಗ ಮಂಗಳೂರಿನಲ್ಲಿ ಗಂಟಲು ದ್ರವ ಪರೀಕ್ಷೆ ಮಾಡಿದಾಗ ಕೊರೊನಾ ಇರುವುದು ಪತ್ತೆಯಾಗಿದೆ. ಬಂಟ್ವಾಳದ 60 ವರ್ಷದ ವೃದ್ಧೆಗೂ ಸೋಂಕು ತಗುಲಿದ್ದು, ಮೂಲ ಪತ್ತೆಯಾಗಿಲ್ಲ. …

Read More »

ವಿವಾಹದಲ್ಲಿ ವೈದ್ಯ ಭಾಗಿ – ಸುಳ್ಯದಲ್ಲಿ 62 ಮಂದಿಗೆ ಕ್ವಾರಂಟೈನ್

ಮಂಗಳೂರು: ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರಂತೋಡು ಗ್ರಾಮದ 62 ಮಂದಿಯನ್ನು ಕ್ವಾರೆಂಟೈನ್ ಮಾಡಲಾಗಿದೆ. ಮಲೇಷಿಯಾದಿಂದ ಮೇ.22ರಂದು ಬೆಂಗಳೂರಿಗೆ ಬಂದಿದ್ದ ವೈದ್ಯರು ಸರ್ಕಾರಿ ಕ್ವಾರೆಂಟೈನ್ ಮುಗಿಸಿ ಮಂಗಳೂರಿಗೆ ಬಂದಿದ್ದರು. ಭಾನುವಾರ ಅರಂತೋಡು ಗ್ರಾಮದ ಸಂಬಂಧಿಕರ ಮನೆಗೆ ಆಗಮಿಸಿ, ಬಳಿಕ ಯಜಮಾನನ ಕಾರಿನಲ್ಲಿ ತೆರಳಿ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮಂಗಳೂರಿಗೆ ಬಂದ ಬಳಿಕ ಅವರಿಗೆ ಪಾಸಿಟಿವ್ ಇರುವುದು ದೃಢಪಟ್ಟಿತ್ತು. ಹೀಗಾಗಿ ಈ ವೈದ್ಯರ ಪ್ರಾಥಮಿಕ ಸಂಪರ್ಕಕ್ಕೆ ಬಂದ …

Read More »

ಏರ್ ಲಿಫ್ಟ್‌ನಲ್ಲೂ ಕೇರಳದ ಲಾಬಿ, ವಿಮಾನವಿಲ್ಲದೆ ಲಕ್ಷಾಂತರ ಕನ್ನಡಿಗರು ಕಂಗಾಲು……….

ಮಂಗಳೂರು: ಕೊರೊನಾ ವಿಚಾರದಲ್ಲೂ ಕೇರಳ ಲಾಬಿ ಮಾಡುತ್ತಿದ್ದು, ವಿದೇಶದಲ್ಲಿ ಸಹ ಲಾಬಿ ಮಾಡುತ್ತಿದೆ. ಇದರಿಂದ ನೇರವಾಗಿ ಕರ್ನಾಟಕದಿಂದ ಹೋಗಿ ವಿದೇಶದಲ್ಲಿ ನೆಲೆಸಿರುವ ಅನಿವಾಸಿ ಭಾರತೀಯರಿಗೆ ಎಫೆಕ್ಟ್ ಆಗುತ್ತಿದೆ. ಗಲ್ಫ್ ರಾಷ್ಟ್ರಗಳಲ್ಲಿ ರಾಜ್ಯದ 5 ಲಕ್ಷ ಕನ್ನಡಿಗರಿದ್ದಾರೆ. ಅದರಲ್ಲೂ ಕರಾವಳಿ ಮೂಲದವರೆ ಹೆಚ್ಚಿದ್ದಾರೆ. ಆದರೆ ಕೇರಳ ಲಾಬಿಯಿಂದ ಅವರು ಇದೀಗ ಅಲ್ಲೇ ಉಳಿದುಕೊಳ್ಳುವಂತಾಗಿದೆ. ವಂದೇ ಭಾರತ್ ಮಿಷನ್ ಅಡಿಯಲ್ಲಿ ನಡೆಯುತ್ತಿರುವ ಎರ್ ಲಿಫ್ಟ್‍ನಲ್ಲಿ ಕೇರಳ ಸರ್ಕಾರ ಲಾಬಿ ನಡೆಸುತ್ತಿರುವುದರಿಂದ ಕನ್ನಡಿಗರು ಸಂಕಷ್ಟಕ್ಕೀಡಾಗಿದ್ದಾರೆ. …

Read More »

ಕೊರೊನಾ ಎಫೆಕ್ಟ್: ಮಂಗಳೂರಿನ ಖಾಸಗಿ ಬಸ್‍ಗಳಲ್ಲಿ ಕ್ಯಾಶ್‍ಲೆಸ್ ಪ್ರಯಾಣ…………

ಮಂಗಳೂರು: ಕೊರೊನಾ ಎಫೆಕ್ಟ್‍ನಿಂದಾಗಿ ಮಂಗಳೂರಿನಲ್ಲಿ ಖಾಸಗಿ ಬಸ್‍ಗಳು ಕ್ಯಾಶ್‍ಲೆಸ್ ತಂತ್ರಜ್ಞಾನ ಅಳವಡಿಸಿಕೊಂಡಿದ್ದು, ಈ ಮೂಲಕ ಸುಗಮ ಪ್ರಯಾಣಕ್ಕೆ ಅನುಕೂಲವಾಗಿದೆ. ರಾಜ್ಯದಲ್ಲೇ ಮೊದಲ ಬಾರಿಗೆ ಮಂಗಳೂರಿನ ಖಾಸಗಿ ಬಸ್‍ಗಳಲ್ಲಿ ಕ್ಯಾಶ್‍ಲೆಸ್ ವ್ಯವಹಾರಕ್ಕೆ ನೂತನ ತಂತ್ರಜ್ಞಾನ ಅಳವಡಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಸಂಚಾರ ನಡೆಸುವುದು ಖಾಸಗಿ ಬಸ್‍ಗಳು. ಆದರೆ ಲಾಕ್‍ಡೌನ್ ನಿಂದ ಎರಡು ತಿಂಗಳುಗಳ ಕಾಲ ಸಂಚಾರ ನಡೆಸದೇ ನಿಂತಿದ್ದ ಖಾಸಗಿ ಬಸ್‍ಗಳು ಮತ್ತೆ ಸಂಚಾರ ಆರಂಭಿಸುತ್ತಿವೆ. ಆದರೆ ಖಾಸಗಿ …

Read More »

ಸರಕಾರ ಜೂನ್ 1ರಿಂದ ದೇವಾಲಯಗಳಿಗೆ ಭಕ್ತರ ಪ್ರವೇಶಕ್ಕೆ ಅನುಮತಿ ನೀಡಿದ್ದು, ದೇವರ ದರ್ಶನ ಭಾಗ್ಯ ಮತ್ತೆ ಸಿಗಲಿದೆ.

ಮಂಗಳೂರು: ಕೊರೊನಾ ಲಾಕ್‍ಡೌನ್‍ನಿಂದ ದೇವಾಲಯಗಳನ್ನು ಬಂದ್ ಮಾಡಿ ಭಕ್ತರ ಪ್ರವೇಶವನ್ನು ನಿಷೇಧ ಮಾಡಲಾಗಿತ್ತು. ಆದರೆ ಈಗ ಲಾಕ್‍ಡೌನ್ ಸಡಿಲಿಕೆ ಮಾಡಿದ ಹಿನ್ನೆಲೆಯಲ್ಲಿ ಸರಕಾರ ಜೂನ್ 1ರಿಂದ ದೇವಾಲಯಗಳಿಗೆ ಭಕ್ತರ ಪ್ರವೇಶಕ್ಕೆ ಅನುಮತಿ ನೀಡಿದ್ದು, ದೇವರ ದರ್ಶನ ಭಾಗ್ಯ ಮತ್ತೆ ಸಿಗಲಿದೆ. ದೇವಾಲಯ ತೆರೆದರೂ ದೇವರ ದರ್ಶನ ಹಿಂದಿನಂತೆ ಇರದೇ ಮುಜರಾಯಿ ಇಲಾಖೆಯಿಂದ ದೇವಸ್ಥಾನಗಳಿಗೆ ನೀಡಿದ ಮಾರ್ಗದರ್ಶನಗಳನ್ನು ಪಾಲಿಸಬೇಕಾಗುತ್ತದೆ. ಜೂನ್ 1ರಂದು ದೇವಾಲಯಗಳಿಗೆ ಭಕ್ತರಿಗೆ ಪ್ರವೇಶ ನೀಡಿದ ಹಿನ್ನೆಲೆಯಲ್ಲಿ ದೇವಸ್ಥಾನಗಳಲ್ಲಿ ಎಲ್ಲಾ …

Read More »

ನೋಡ ನೋಡುತ್ತಿದ್ದಂತೆಯೇ ನಡು ರಸ್ತೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ

ಮಂಗಳೂರು: ನೋಡ ನೋಡುತ್ತಿದ್ದಂತೆಯೇ ನಡು ರಸ್ತೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟವಾದ ಘಟನೆ ಮಂಗಳೂರಿನ ಜೆಪ್ಪು ಮಾರುಕಟ್ಟೆ ಬಳಿ ನಡೆದಿದೆ. ಮಾರ್ಕೆಟ್ ನ ಗ್ಯಾಸ್ ಸಿಲಿಂಡರ್ ಏಜೆನ್ಸಿ ಅಂಗಡಿಯಲ್ಲಿ ಲೀಕ್ ಆಗಿದ್ದ ಗ್ಯಾಸ್ ಸಿಲಿಂಡರನ್ನು ಸ್ಥಳೀಯರು ಅಂಗಡಿಯಿಂದ ಹೊರಗೆ ತಂದಿದ್ದರು. ಅಷ್ಟರಲ್ಲೇ ಸಿಲಿಂಡರ್ ಗೆ ಬೆಂಕಿ ಹೊತ್ತಿಕೊಂಡಿದ್ದು, ಕೆಲವೇ ಕ್ಷಣದಲ್ಲಿ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಸಿಲಿಂಡರ್ 50 ಮೀಟರ್ ಎತ್ತರಕ್ಕೆ ಚಿಮ್ಮಿದೆ. ಅದೃಷ್ಟವಶಾತ್ ಯಾರಿಗೂ ಗಾಯ ಸಂಭವಿಸಿಲ್ಲ. ಸಿಲಿಂಡರ್ ನಲ್ಲಿ ಬೆಂಕಿಯಿದ್ದರೂ …

Read More »

ಲಕ್ಷ ದ್ವೀಪದಿಂದ ಹಡಗಿನಲ್ಲಿ ಬಂದ ಮಂಗ್ಳೂರು ಕಾರ್ಮಿಕರು………..

ಮಂಗಳೂರು: ಕಡಲಾಚೆಯಲ್ಲಿ ಅತಂತ್ರರಾಗಿದ್ದ ಕಾರ್ಮಿಕರನ್ನ ರಕ್ಷಿಸುವಲ್ಲಿ ಇಂಡಿಯನ್ ಕೋಸ್ಟ್ ಗಾರ್ಡ್ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಲಕ್ಷ ದ್ವೀಪದಲ್ಲಿ ಸಿಲುಕಿದ್ದ ಮೂರು ಮಹಿಳೆಯರು ಸೇರಿದಂತೆ 19 ಮಂದಿಯನ್ನ ಗುರುವಾರ ಅಮಿನ್ ದೀವಿ ಹೆಸರಿನ ನೌಕೆ ಮುಖಾಂತರ ಮಂಗಳೂರಿಗೆ ಕರೆ ತರಲಾಯಿತು. ಬಳಿಕ ಎಲ್ಲ ಕಾರ್ಮಿಕರ ಆರೋಗ್ಯ ತಪಾಸಣೆಯನ್ನು ಮಾಡಲಾಯಿತು. ನೌಕರರು ಬಂದಿಳಿಯುತ್ತಿದ್ದಂತೆ ಜನಪ್ರತಿನಿಧಿಗಳು ಕಾರ್ಮಿಕರ ರಕ್ಷಣೆಗೆ ಮುಗಿಬಿದ್ದಿದ್ದರು. ಸಾಮಾಜಿಕ ಅಂತರ ಮರೆತ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಹಾಗೂ ಕಾಂಗ್ರೆಸ್ ಎಂ.ಎಲ್.ಸಿ ಐವಾನ್ …

Read More »

ಕ್ವಾರಂಟೈನ್ ನಲ್ಲಿದ್ದ ಗರ್ಭಿಣಿಗೆ ಸೂಕ್ತ ಚಿಕಿತ್ಸೆ ಸಿಗದ ಪರಿಣಾಮ ಹೊಟ್ಟೆಯಲ್ಲೇ ಮಗು ಸಾವನ್ನಪ್ಪಿದೆ

ಮಂಗಳೂರು: ಕ್ವಾರಂಟೈನ್ ನಲ್ಲಿದ್ದ ಗರ್ಭಿಣಿಗೆ ಸೂಕ್ತ ಚಿಕಿತ್ಸೆ ಸಿಗದ ಪರಿಣಾಮ ಹೊಟ್ಟೆಯಲ್ಲೇ ಮಗು ಸಾವನ್ನಪ್ಪಿದೆ ಎಂಬ ಆರೋಪವೊಂದು ವೈದ್ಯರ ವಿರುದ್ಧ ಕೇಳಿಬಂದಿದೆ. ಮೇ 12ರಂದು ದುಬೈನಿಂದ ಗರ್ಭಿಣಿ ಏರ್ ಲಿಫ್ಟ್ ಆಗಿದ್ದರು. ಮಂಗಳೂರು ವಿಮಾನ ನಿಲ್ದಾಣದಿಂದ ಆಕೆಯನ್ನು ಹೊಟೇಲ್ ಕ್ವಾರಂಟೈನ್ ಆಗಿದ್ದರು. ಮರುದಿನ ನಡೆದ ತಪಾಸಣೆಯಲ್ಲಿ ಕೊರೊನಾ ನೆಗೆಟಿವ್ ಬಂದಿತ್ತು. ಆದರೂ ಗರ್ಭಿಣಿಗೆ ಚಿಕಿತ್ಸೆ ನೀಡಲು ವೈದ್ಯರು ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ಗರ್ಭಿಣಿಯ ಆರೋಗ್ಯ ತಪಾಸಣೆ ವಿಚಾರದಲ್ಲಿ ವೈದ್ಯರು ನಿರ್ಲಕ್ಷ್ಯ …

Read More »

ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆ………..

ಮಂಗಳೂರು: ನದಿಗೆ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆ ಮಂಗಳೂರು ಎಂಬಲ್ಲಿ ನಡೆದಿದೆ. ಕಲ್ಲಡ್ಕ ಸಮೀಪದ ಕೊಳಕೀರು ನಿವಾಸಿ ನಿಶಾಂತ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಬಂಟ್ವಾಳ ಪಾಣೆ ಮಂಗಳೂರಿನ ನೇತ್ರಾವತಿ ನದಿಗೆ ಹಾರಿ ನಿಶಾಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಯುವಕ ನದಿಗೆ ಹಾರಿದಾಕ್ಷಣ ರಕ್ಷಣೆಗೆ ರಂಜಾನ್ ಹಬ್ಬದ ಸಡಗರದಲ್ಲಿದ್ದ ಮುಸ್ಲಿಂ ಯುವಕರು, ನದಿಗೆ ಜಿಗಿದು ಆತನನ್ನು ಮೇಲೆ ತಂದು ಪ್ರಥಮ ಚಿಕಿತ್ಸೆ ನೀಡಿ …

Read More »

ಸೋಮವಾರದಿಂದ ಮಂಗಳೂರಿನಿಂದ ಬೆಂಗಳೂರು ಮುಂಬೈ, ಚೆನ್ನೈಗೆ ವಿಮಾನಗಳ ಹಾರಾಟ ಆರಂಭ

ಮಂಗಳೂರು: ಕೊರೊನಾದಿಂದ ಸ್ಥಗಿತಗೊಂಡಿದ್ದ ವಿಮಾನ ಸೇವೆ ಮತ್ತೆ ಆರಂಭಿಸಲು ವಿಮಾನಯಾನ ಸಚಿವಾಲಯ ಸೂಚಿಸಿರುವ ಹಿನ್ನೆಲೆಯಲ್ಲಿ ಸೋಮವಾರದಿಂದ ಮಂಗಳೂರಿನಿಂದ ಬೆಂಗಳೂರು ಮುಂಬೈ, ಚೆನ್ನೈಗೆ ವಿಮಾನಗಳ ಹಾರಾಟ ಆರಂಭವಾಗಲಿದೆ. ಮೇ 25ರಿಂದ ಮಂಗಳೂರಿನಿಂದ ಇಂಡಿಗೋದ 3 ವಿಮಾನಗಳು ಮುಂಬೈ, ಬೆಂಗಳೂರು, ಚೆನ್ನೈಗೆ ಸಂಚರಿಸಲಿದೆ. ಸ್ಪೈಸ್ ಜೆಟ್ 3 ವಿಮಾನಗಳು ಬೆಂಗಳೂರು, ಮುಂಬೈಗೆ ಸಂಚರಿಸಲಿದೆ. ಏರ್ ಇಂಡಿಯಾ ವೇಳಾಪಟ್ಟಿ ಇನ್ನೂ ಬಿಡುಗಡೆಯಾಗಿಲ್ಲ. ಬೆಂಗಳೂರಿನಿಂದ ಮಂಗಳೂರಿಗೆ ಸ್ಪೈಸ್ ಜೆಟ್ ವಿಮಾನ ಬೆಳಗ್ಗೆ 8.30ಕ್ಕೆ, ರಾತ್ರಿ 7 …

Read More »