Breaking News
Home / ಜಿಲ್ಲೆ / ದಕ್ಷಿಣ ಕನ್ನಡ (page 6)

ದಕ್ಷಿಣ ಕನ್ನಡ

ನಾಡಿಗೆ ಬಂದು ಬಾವಿಗೆ ಬಿದ್ದ ಚಿರತೆ ರಕ್ಷಣೆ

ಮಂಗಳೂರು: ಲಾಕ್‍ಡೌನ್ ಹಿನ್ನೆಲೆ ಜನದಟ್ಟಣೆ ಕಡಿಮೆಯಾಗಿರುವುದರಿಂದ ಆಹಾರ ಹುಡುಕಿಕೊಂಡು ಕಾಡಿನಿಂದ ನಾಡಿಗೆ ಬಂದಿದ್ದ ಚಿರತೆಯೊಂದು ಬಾವಿಗೆ ಬಿದ್ದಿದ್ದು, ನಂತರ ರಕ್ಷಣೆ ಮಾಡಿ ಕಾಡಿಗೆ ಬಿಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ತುಂಬೆಯಲ್ಲಿ ಘಟನೆ ನಡೆದಿದ್ದು, ಮಜಿ ಮೋನಪ್ಪ ಅವರ ಜಮೀನಿನಲ್ಲಿರುವ ಸುಮಾರು 6 ಅಡಿ ಆಳದ ಬಾವಿಗೆ ಚಿರತೆ ಬಿದ್ದು ಆತಂಕ ಸೃಷ್ಟಿಸಿತ್ತು. ಬಾವಿಯಿಂದ ಮೇಲಕ್ಕೆ ಬರಲು ಸಾಧ್ಯವಾಗದೆ ಹೊರಳಾಡುತ್ತಿತ್ತು. ರಾತ್ರಿ ವೇಳೆ ಕಾಣದೆ ಚಿರತೆ ಬಾವಿಯಲ್ಲಿ ಬಿದ್ದಿದ್ದು, …

Read More »

ಜಮೀರ್ ಅಹಮ್ಮದ್‍ರನ್ನ ಗೂಂಡಾ ಕಾಯ್ದೆಯಡಿ ಬಂಧಿಸಿ: ಕಟೀಲ್

ಮಂಗಳೂರು: ಶಾಸಕ, ಮಾಜಿ ಸಚಿವ ಜಮೀರ್ ಅಹ್ಮದ್ ಅವರನ್ನ ಗೂಂಡಾ ಕಾಯ್ದೆಯಡಿ ಬಂಧಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಪಾದರಾಯನಪುರ ಗಲಾಟೆ ವಿಚಾರದಲ್ಲಿ ಶಾಸಕ ಜಮೀರ್ ಅಹ್ಮದ್ ನೀಡಿದ ಹೇಳಿಕೆ ವಿಚಾರ ಹಾಗೂ ನಡೆದುಕೊಂಡ ರೀತಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಈ ಘಟನೆ ನಡೆದಾಗ ಶಾಸಕ ಜಮೀರ್ ತೆಗೆದುಕೊಂಡ ನಿರ್ಧಾರ ಮತ್ತು ವರ್ತನೆ ಕಾನೂನು ಬಾಹಿರವಾಗಿದೆ. ಅಲ್ಲಿನ ಗೂಂಡಾಗಿರಿಗೆ ಶಾಸಕನಾಗಿ ಬೆಂಗಾವಲಾಗಿ ನಿಂತಿರುವುದು …

Read More »

ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್‍ಗೊಂಡ ವ್ಯಕ್ತಿಯ ಕಣ್ಣೀರ ಸಂದೇಶ

ಮಂಗಳೂರು: ಕೊರೊನಾದಿಂದ ಗುಣಮುಖರಾದ ಮಂಗಳೂರಿನ ವ್ಯಕ್ತಿಯೊಬ್ಬರು ಕಣ್ಣೀರಿನ ಮೂಲಕ ತಮ್ಮ ಜೀವ ಉಳಿಸಿದ ವಾರಿಯರ್ಸ್ ಗೆ ಧನ್ಯವಾದ ಸಲ್ಲಿಸಿದ್ದಾರೆ. ಆಸ್ಪತ್ರೆಯಿಂದ ಮನೆಗೆ ಬಂದ ವ್ಯಕ್ತಿಯನ್ನು ಸ್ಥಳೀಯರು ಮತ್ತು ಕುಟುಂಬಸ್ಥರು ಚಪ್ಪಾಳೆ ಮೂಲಕ ಬರಮಾಡಿಕೊಂಡರು. ಈ ವೇಳೆ ಮಾತನಾಡಿದ ವ್ಯಕ್ತಿ, ಪೊಲೀಸರು ಮತ್ತು ಆಸ್ಪತ್ರೆ ಸಿಬ್ಬಂದಿ ನಮ್ಮನ್ನು ಅತ್ಯಂತ ಚೆನ್ನಾಗಿ ನೋಡಿಕೊಂಡರು. ಕುಡಿಯಲು ತಣ್ಣೀರು ಬೇಕಾ ಅಥವಾ ಬಿಸಿ ನೀರು ಬೇಕಾ ಎಂದು ಕೇಳುತ್ತಿದ್ದಾರೆ. ಆಸ್ಪತ್ರೆಯಲ್ಲಿ ಸಿಬ್ಬಂದಿ ಎಷ್ಟು ಕಷ್ಟಪಡುತ್ತಾರೆ ಎಂಬುವುದು …

Read More »

ನರಕದಿಂದ ನಮ್ಮನ್ನು ಹೊರ ತರಲು ಕಷ್ಟ ಪಡ್ತಿರೋರಿಗೆ ನಾವು ಸಹಕರಿಸೋಣ – ಗುಣಮುಖವಾಗಿ ಕಣ್ಣೀರಿಟ್ಟ

ಮಂಗಳೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕಿತ ವ್ಯಕ್ತಿಯೊಬ್ಬರು ಗುಣಮುಖರಾಗಿದ್ದು ಪೊಲೀಸರು, ವೈದ್ಯರು, ನರ್ಸ್‍ಗಳಿಗೆ ನಾವು ಸಹಕರಿಸಬೇಕು ಎಂದು ಕಣ್ಣೀರಿಡುತ್ತಾ ಮನಮುಟ್ಟುವಂತೆ ಜನರಿಗೆ ಸಂದೇಶ ನೀಡಿದ್ದಾರೆ. ವಿಡಿಯೋವೊಂದರ ಮೂಲಕ ಇಡೀ ಸಮಾಜಕ್ಕೆ ಸಂದೇಶವನ್ನು ನೀಡಿದ್ದಾರೆ. ಕಳೆದ 3 ದಿನದ ಹಿಂದೆ ಗುಣಮುಖರಾಗಿ ಕೋವಿಡ್-19 ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ ಸೋಂಕಿತ ವ್ಯಕ್ತಿ ಪೊಲೀಸರು, ವೈದ್ಯರು, ನರ್ಸ್‍ಗಳ ಕಾರ್ಯದ ಬಗ್ಗೆ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದರು. ನರಕದಿಂದ ನಮ್ಮನ್ನು ಹೊರ ಕರೆತರಲು ಅವರು ಬಹಳ ಕಷ್ಟಪಡುತ್ತಿದ್ದಾರೆ. ಈ …

Read More »

ಪುತ್ತೂರು ಮಹಾಲಿಂಗೇಶ್ವರನ ಸನ್ನಿಧಿಯಲ್ಲಿ 8 ಅಡಿ ಆಳದಿಂದ ಚಿಮ್ಮಿದ ಜಲಧಾರೆ- ಪವಾಡ ಎಂದ ಭಕ್ತರು

ಮಂಗಳೂರು: ದೇಶವೇ ಕೊರೊನಾ ಭೀತಿಯಿಂದ ಲಾಕ್‍ಡೌನ್ ಆಗಿದೆ. ಆದರೆ ಈ ನಡುವೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮಹಾಲಿಂಗೇಶ್ವರ ಆವರಣದಲ್ಲಿ ಕೇವಲ 8 ಅಡಿಯಲ್ಲಿ ನೀರು ಸಿಕ್ಕಿ ಅಚ್ಚರಿ ಘಟನೆ ನಡೆದಿದೆ. ಪುತ್ತೂರು ಮಹಾಲಿಂಗೇಶ್ವರನ ಜಾತ್ರೆ ಅಂದ್ರೆ ಜಿಲ್ಲೆಯ ದೊಡ್ಡ ಜಾತ್ರೆ. ಆದರೆ ಈ ಬಾರಿ ಕೊರೊನಾ ಲಾಕ್‍ಡೌನ್‍ನಿಂದ ಭಕ್ತರಿಗೆ ಪ್ರವೇಶ ಇಲ್ಲದೆ ಶಾಸ್ತ್ರೋಕ್ತವಾಗಿ ಜಾತ್ರೆ ನಡೆಯುತ್ತಿದೆ. ಜಾತ್ರಾ ಸಂದರ್ಭದ ದೇಗುಲದ ಆವರಣದ ಅಯ್ಯಪ್ಪಸ್ವಾಮಿ ಗುಡಿ ಬಳಿ, ದೇವರ ಅವಭೃತ …

Read More »

ದಿನದ 24 ಗಂಟೆಯೂ ಗಂಡನ ಕಾವಲು – ಮಂಗಳೂರು ವೃದ್ಧನ ಪತ್ನಿಯ ನೋವು ಕೇಳಿದ್ರೆ ಮನಕಲುಕುತ್ತೆ

ಮಂಗಳೂರು: ಸಾಮಾನ್ಯವಾಗಿ ಪತ್ನಿ, ಪತಿಯ ಯಶಸ್ಸು, ನೋವು, ಬೇಸರ ಮತ್ತು ಕಣ್ಣೀರಿನಲ್ಲಿಯೂ ಜೊತೆಯಲ್ಲಿಯೇ ಇರುತ್ತಾರೆ. ಪತಿಗೆ ಹುಷಾರಿಲ್ಲ ಎಂದರೆ ಒಂದು ಮಗುವನ್ನು ನೋಡಿಕೊಳ್ಳುವ ರೀತಿಯಲ್ಲಿ ಗಂಡನನ್ನು ಚೆನ್ನಾಗಿ ನೋಡಿಕೊಳ್ಳುತ್ತಾರೆ. ಇದೇ ರೀತಿ ಮಂಗಳೂರಿನಲ್ಲಿ ಪತ್ನಿಯೊಬ್ಬರು ತಮ್ಮ ಪತಿಯನ್ನು ದಿನದ 24 ಗಂಟೆಗಳ ಕಾಲ ಕಾಯುತ್ತಾ ಅವರನ್ನು ಕಣ್ಣಿನ ರೆಪ್ಪೆ ತರ ನೋಡಿಕೊಳ್ಳುತ್ತಿದ್ದಾರೆ. ಆ ಪತ್ನಿಯ ಕಷ್ಟ, ನೋವು ನೋಡಿದರೆ ಪ್ರತಿಯೊಬ್ಬರ ಮನಕಲುಕುತ್ತದೆ. ಕಳೆದ ದಿನ ಮಂಗಳೂರಿನಲ್ಲಿ ಪೊಲೀಸರು ವೃದ್ಧರೊಬ್ಬರ ಬಳಿ …

Read More »

ಗೋಶಾಲೆಗಳಿಗೆ ಆರ್ಥಿಕ ಸಹಾಯ ನೀಡಿ – ಸಿಎಂಗೆ ಮನವಿ

ಮಂಗಳೂರು: ಗೋಶಾಲೆಗಳಿಗೆ ಆರ್ಥಿಕ ಸಹಾಯ ನೀಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸ್ಟೇಟ್ ಎನಿಮಲ್ ವೆಲ್ಪೆರ್ ಬೋರ್ಡ್‍ನ ಸದಸ್ಯ ವಿನಯ್ ಶೆಟ್ಟಿ ಪತ್ರ ಬರೆದು ಮನವಿ ಮಾಡಿದ್ದಾರೆ. ಲಾಕ್‍ಡೌನ್‍ನಿಂದ ಗೋಶಾಲೆಗಳಿಗೆ ಬರುತ್ತಿದ್ದ ಸಾರ್ವಜನಿಕ ದೇಣಿಗೆ ಸಂಪೂರ್ಣ ನಿಂತು ಹೋಗಿದೆ. ಸರ್ಕಾರದ ಪರವಾಗಿ ಗೋವುಗಳನ್ನು ಸಾಕುತ್ತಿರುವ ಗೋಶಾಲೆಗಳಿಗೆ ಆರ್ಥಿಕ ಪರಿಹಾರ ನೀಡಬೇಕು ಎಂದು ವಿನಯ್ ಶೆಟ್ಟಿ ಕೇಳಿಕೊಂಡಿದ್ದಾರೆ. ಅಕ್ರಮ ಗೋಸಾಗಾಟದ ಸಂದರ್ಭದಲ್ಲಿ ಪೊಲೀಸರು ವಶಪಡಿಸಿದ ಗೋವುಗಳನ್ನು ನ್ಯಾಯಲಯಗಳು ಸರ್ಕಾರದ ಪರವಾಗಿ ಸಾಕುವಂತೆ ಗೋಶಾಲೆಗಳಿಗೆ …

Read More »

ನೀಡಲಾದ ಆಹಾರದ ಕಿಟ್‌ನಲ್ಲಿ ಚಿನ್ನದ ಉಂಗುರ ವಾರಸುದಾರರಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾನೆ ಬಾಲಕ

ಮಂಗಳೂರು: ಲಾಕ್ ಡೌ ನ್ ಹಿನ್ನಲೆಯಲ್ಲಿ ನೀಡಲಾದ ಆಹಾರದ ಕಿಟ್‌ನಲ್ಲಿ ಬಾಲಕನೊಬ್ಬನಿಗೆ ಚಿನ್ನದ ಉಂಗುರ ಸಿಕ್ಕ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಆದ್ರೆ ಸಿಕ್ಕ ಉಂಗುರವನ್ನು ಬಾಲಕ ವಾರಸುದಾರರಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾನೆ. ಕೊರೊನಾ ಭೀತಿಯಿಂದ ದೇಶವೇ ಲಾಕ್‌ಡೌನ್ ಆಗಿದ್ದು, ಜನ ಒಂದು ಹೊತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ. ಇಂತಹ ಕಷ್ಟದ ಸಮಯದಲ್ಲಿ ಹಲವು ಕಡೆಗಳಲ್ಲಿ ದಾನಿಗಳು ಬಡವರಿಗೆ ಆಹಾರ ಹಾಗೂ ಆಹಾರದ ಕಿಟ್‌ಗಳನ್ನು ನೀಡುತ್ತಿದ್ದಾರೆ. ಅದರಂತೆ ಪುತ್ತೂರು …

Read More »

ಕೊರೊನಾ ಎಫೆಕ್ಟ್ – ಮರದ ಮೇಲೆ ಮನೆ ಮಾಡಿದ ಕರಾವಳಿಯ ಉಪನ್ಯಾಸಕ

ಮಂಗಳೂರು: ಕೊರೊನಾ ಭೀತಿಯಿಂದ ಜನರು ಸಾಮಾಜಿಕ ಅಂತರ ಕಾಯ್ದು ಕೊಳ್ಳುತ್ತಿದ್ದಾರೆ. ಆದರೆ ಇಲ್ಲೊಬ್ಬರು ಸಾಮಾಜಿಕ ಅಂತರದಲ್ಲಿ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಮರದ ಮೇಲೆಯೇ ಟ್ರೀಹೌಸ್ ನಿರ್ಮಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸವಣೂರು ಸಮೀಪದ ಪುಣ್ಚಪ್ಪಾಡಿ ಗ್ರಾಮದ ವಿವೇಕ್ ಆಲ್ವ ಮರದ ಮೇಲೆ ಮನೆ ನಿರ್ಮಿಸಿದ್ದಾರೆ. ವೃತ್ತಿಯಲ್ಲಿ ಉಪನ್ಯಾಸಕರಾಗಿರುವ ಇವರು, ಕೃಷಿ ಸಂಶೋಧನೆಗಾಗಿ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ತನ್ನ ಮನೆಯ ಸಮೀಪವಿರುವ …

Read More »

ಮಂಗಳೂರು:ಎರಡು ಸಾವಿರಕ್ಕಾಗಿ ಮುಗಿಬಿದ್ದ ಜನ……….

ಮಂಗಳೂರು: ಎರಡು ಸಾವಿರ ರೂಪಾಯಿ ಸಿಗುತ್ತದೆ ಎಂದು ಸಾಮಾಜಿಕ ಅಂತರವನ್ನೂ ಮರೆತು ಜನ ಮುಗಿಬಿದ್ದಿದ್ದು, ನೂಕುನುಗ್ಗಲು ಸಂಭವಿಸಿದೆ. ಮಂಗಳೂರು ನಗರದ ಕೂಳೂರಿನಲ್ಲಿ ಘಟನೆ ನಡೆದಿದ್ದು, ಶ್ರೀ ದೇವಿ ಪ್ರಸಾದ್ ಖಾಸಗಿ ಕಟ್ಟಡದಲ್ಲಿ ಕೂಲಿ ಕಾರ್ಮಿಕರ ಮಾಹಿತಿ ಪಡೆದು ಹಣ ಅಕೌಂಟ್‍ಗೆ ಹಾಕಲಾಗುತ್ತದೆ ಎಂದು ಸುಳ್ಳು ಮಾಹಿತಿ ನೀಡಿದ್ದಾರೆ. ಇದನ್ನು ಕೇಳಿದ ಜನತೆ ಸಾಮಾಜಿಕ ಅಂತರವನ್ನು ಮರೆದು ಸುಮಾರು 600-750 ಜನರ ಗುಂಪು ಸಾಲಿನಲ್ಲಿ ಸೇರಿತ್ತು. ಯಾಕೆ ನಿಂತಿದ್ದೀರಿ ಎಂದು ಕೇಳಿದರೆ …

Read More »