Breaking News
Home / ಜಿಲ್ಲೆ / ದಕ್ಷಿಣ ಕನ್ನಡ (page 7)

ದಕ್ಷಿಣ ಕನ್ನಡ

ಕೊರೊನಾಗಿಂತಲೂ ಭಯಾನಕ ಪೊಲೀಸ್ ವೈರಸ್’

– ಆರೋಪಿಯ ವಿರುದ್ಧ ಎಫ್‍ಐಆರ್ ಮಂಗಳೂರು: ಜಗತ್ತು ಕೊರೊನಾ ಎಂಬ ಮಹಾಮಾರಿಗೆ ನಲುಗಿ ಹೋಗಿದೆ. ವೈದ್ಯರು, ಪೊಲೀಸರು ತಮ್ಮ ಜೀವದ ಹಂಗು ತೊರೆದು ಕೊರೊನಾ ನಿಯಂತ್ರಣಕ್ಕೆ ರಾತ್ರಿ ಹಗಲೆನ್ನದೇ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅದರಂತೆ ಮಂಗಳೂರಿನಲ್ಲಿ ಕೂಡ ಕಟ್ಟು ನಿಟ್ಟಾಗಿ ನಿಯಮ ಪಾಲಿಸುವಂತೆ ಪೊಲೀಸರು ನೋಡಿಕೊಳ್ಳುತ್ತಿದ್ದಾರೆ. ಆದರೆ ಇಂತಹ ಕೊರೊನಾ ವಾರಿಯರ್ಸ್ ಪೊಲೀಸರ ಬಗ್ಗೆ ಕಿಡಿಗೇಡಿಯೊಬ್ಬ ಕೀಳು ಮಟ್ಟದ ಪೋಸ್ಟ್ ಮಾಡಲಾಗಿದೆ. ಆರೋಪಿಯ ವಿರುದ್ಧ ಮಂಗಳೂರಿನ ಕಂಕನಾಡಿ ನಗರ ಠಾಣೆಯಲ್ಲಿ …

Read More »

ಇಟಲಿಯಲ್ಲಿದ್ದ ಮಂಗಳೂರಿನ ಯುವತಿಯನ್ನು ಸುರಕ್ಷಿತವಾಗಿ ಮನೆಗೆ ತಲುಪಿಸಿದ ಖಾದರ್

ಮಂಗಳೂರು: ಲಾಕ್‍ಡೌನ್ ಹಿನ್ನೆಲೆಯಲ್ಲಿ ತನ್ನ ಮನೆಗೆ ಬರಲಾಗದೇ ಬೆಂಗಳೂರಿನಲ್ಲಿ ಸಿಕ್ಕಿ ಹಾಕಿಕೊಂಡ ಮಂಗಳೂರು ಮೂಲದ ಯುವತಿಯನ್ನು ಮಾಜಿ ಸಚಿವ ಯು.ಟಿ ಖಾದರ್, ತನ್ನ ಕಾರಿನಲ್ಲಿ ಮಂಗಳೂರಿಗೆ ಕರೆತಂದು ಯುವತಿ ಮನೆಗೆ ಸೇಫ್ ಆಗಿ ತಲುಪಿಸಿ ಮಾನವೀಯತೆ ಮೆರೆದಿದ್ದಾರೆ. ಇಟಲಿಯಲ್ಲಿ ವಾಸವಾಗಿದ್ದ ಮಂಗಳೂರಿನ ಮೂಲದ ಶ್ರೀಮಧು ಇಟಲಿಯಿಂದ ಮಾ.22ರಂದು ಕೊನೆ ವಿಮಾನದಲ್ಲಿ ದೆಹಲಿ ತಲುಪಿದ್ದಳು. ಇಟಲಿಯಲ್ಲಿ ಕೊರೊನಾ ವೈರಸ್ ವ್ಯಾಪಕವಾಗಿ ಹರಡಿರುವ ಹಿನ್ನೆಲೆಯಲ್ಲಿ ಆಕೆಯನ್ನು ದೆಹಲಿಯಲ್ಲಿ ಕ್ವಾರಂಟೈನಲ್ಲಿ ಇರಿಸಲಾಗಿತ್ತು. ಕ್ವಾರಂಟೈನ್ ಅವಧಿ …

Read More »

ಬೋರ್ ಆಗ್ತಿದೆಂದು ಲಾಕ್‍ಡೌನ್ ನಡುವೆ ವಿದ್ಯಾರ್ಥಿಯ ಖತರ್ನಾಕ್  ಪ್ಲಾನ್”……

ಲಾಕ್‍ಡೌನ್ ನಡುವೆ ವಿದ್ಯಾರ್ಥಿಯ ಖತರ್ನಾಕ್  ಪ್ಲಾನ್ ಮಂಗಳೂರು: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಇಡೀ ದೇಶವೇ ಲಾಕ್‍ಡೌನ್ ಆಗಿದೆ. ಹೀಗಾಗಿ ನಗರದ ಅಪಾರ್ಟ್‌ಮೆಂಟ್‌ಗಳಲ್ಲಿ ವಾಸ್ತವ್ಯ ಇರುವವರು ಬಿಟ್ಟು ಹೊರಗಿನಿಂದ ಬರುವವರಿಗೆ ಪ್ರವೇಶಕ್ಕೆ ಕೆಲವು ಕಡೆ ನಿರ್ಬಂಧ ವಿಧಿಸಲಾಗುತ್ತಿದೆ. ಆದರೆ ವಿದ್ಯಾರ್ಥಿಯೊಬ್ಬ ಸೂಟ್‍ಕೇಸ್‍ನೊಳಗೆ ಗೆಳೆಯನನ್ನ ಸಾಗಿಸುವಾಗ ಸಿಕ್ಕಿ ಬಿದ್ದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಮಂಗಳೂರಿನ ಆರ್ಯ ಸಮಾಜದ ವಸತಿ ಸಮುಚ್ಚಯದಲ್ಲಿ ನಡೆದಿದೆ. ಆರ್ಯ ಸಮಾಜದ ವಸತಿ ಸಮುಚ್ಚಯದಲ್ಲಿ ವಿದ್ಯಾರ್ಥಿಯೊಬ್ಬ ಬಾಡಿಗೆಗೆ …

Read More »

ಮೀನುಗಾರಿಕೆಗೆ ವಿನಾಯಿತಿ- ನಾಡದೋಣಿ, ಸಾಂಪ್ರದಾಯಿಕ ಮೀನುಗಾರಿಕೆಗೆ ಅವಕಾಶ

ಮಂಗಳೂರು: ಕೊರೊನಾ ಮಹಾಮಾರಿ ಹಿನ್ನೆಲೆ ಇನ್ನೂ 15 ದಿನಗಳ ಕಾಲ ಲಾಕ್‍ಡೌನ್ ಮುಂದುವರಿಸಲಾಗಿದ್ದು, ಆದರೆ ಕೆಲವು ಅಗತ್ಯ ವಸ್ತುಗಳಿಗೆ ವಿನಾಯಿತಿ ನೀಡಲಾಗಿದೆ. ಈ ಪಟ್ಟಿಯಲ್ಲಿ ಮೀನುಗಾರಿಕೆ ಸಹ ಇದ್ದು, ಸಾಂಪ್ರದಾಯಿಕ ಮೀನುಗಾರಿಕೆಗೆ ಅವಕಾಶ ಕಲ್ಪಿಸಲಾಗಿದೆ. ಇಂದಿನಿಂದ ನಾಡದೋಣಿ, ಸಾಂಪ್ರದಾಯಿಕ ಮೀನುಗಾರಿಕೆಗೆ ಅವಕಾಶ ಕಲ್ಪಿಸಲಾಗಿದ್ದು, ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಆದೇಶಿಸಿದ್ದಾರೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಮೀನುಗಾರಿಕೆ ಆರಂಭವಾಗಲಿದೆ. ಜನಸಂದಣಿ ಇಲ್ಲದ …

Read More »

ಆಶಾ ಕಾರ್ಯಕರ್ತೆ ಮೇಲೆ ಹಲ್ಲೆಗೈದಿದ್ದ ಇಬ್ಬರು ಎಸ್‍ಡಿಪಿಐ ಕಾರ್ಯಕರ್ತರ ಬಂಧನ

ಮಂಗಳೂರು: ಆಶಾ ಕಾರ್ಯಕರ್ತೆ ಮೇಲೆ ಹಲ್ಲೆಗೈದಿದ್ದ ಇಬ್ಬರು ಎಸ್‍ಡಿಪಿಐ ಕಾರ್ಯಕರ್ತರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಲ್ಲೂರು ಬದ್ರಿಯಾ ನಗರ ನಿವಾಸಿಗಳಾದ ಇಸ್ಮಾಯಿಲ್ ಮತ್ತು ಅಶ್ರಫ್ ಬಂಧಿತರು. ಆರೋಪಿಗಳು ಕೊರೊನಾ ವೈರಸ್ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮನೆ ಮನೆ ಭೇಟಿಯಲ್ಲಿದ್ದ ಆಶಾ ಕಾರ್ಯಕರ್ತೆಯೊಬ್ಬರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಬೆದರಿಕೆ ಹಾಕಿದ್ದರು. ವಸಂತಿ ಎಂಬ ಆಶಾ ಕಾರ್ಯಕರ್ತೆ ಮನೆ ಭೇಟಿಗೆ ತೆರಳಿದ್ದ ವೇಳೆ ಇಬ್ಬರೂ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು. ಕರ್ತವ್ಯ ನಿರ್ವಹಿಸದಂತೆ ತಡೆದಿದ್ದ ಆರೋಪಿಗಳು, ಆಶಾ …

Read More »

ಮಂಗಳೂರು:ಶ್ರೀಕ್ಷೇತ್ರ ಧರ್ಮಸ್ಥಳದ ವಿಷು ಜಾತ್ರೆ ರದ್ದು.

ಮಂಗಳೂರು: ಕೊರೊನಾ ವೈರಸ್ ಹರಡುವ ಭೀತಿಯಿಂದ ಇಡೀ ದೇಶವೇ ಲಾಕ್ ಡೌನ್ ಆದ ಹಿನ್ನೆಲೆ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯಬೇಕಿದ್ದ ವಾರ್ಷಿಕ ವಿಷು ಮಾಸದ ಜಾತ್ರೆ ರದ್ದು ಮಾಡಲಾಗಿದೆ ಅಂತ ಧರ್ಮಸ್ಥಳದ ಧರ್ಮಾಧಿಕಾರಿ ಡಿ ವೀರೇಂದ್ರ ಹೆಗ್ಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದೇವರ ಪ್ರಶ್ನೆ ಮೂಲಕ ನೋಡಿ ಧರ್ಮದೇವತೆಗಳ, ಅಣ್ಣಪ್ಪ ಸ್ವಾಮಿಯ ನೇಮ-ಕೋಲಗಳು, ಐದು ದಿನಗಳ ಕಾಲ ನಡೆಯಬೇಕಿದ್ದ ಮಂಜುನಾಥ ಸ್ವಾಮಿಯ ರಥೋತ್ಸವ, ಕಟ್ಟೆ ವಿಹಾರ ಹಾಗೂ ಅವಭೃತ ವಿಹಾರವೂ ರದ್ದು ಮಾಡಲಾಗಿದೆ …

Read More »

ಬೆಂಗ್ಳೂರಿನಿಂದ ಮಂಗ್ಳೂರಿನವರೆಗೂ ಬಂದು ಜೈಲು ಸೇರಿದ ಅಸಾಮಿ…..

ಮಂಗಳೂರು: ಪ್ರೆಸ್ ಅಂತ ನಕಲಿ ಗುರುತಿನ ಚೀಟಿ ಅಂಟಿಸಿ ವಾಹನ ಚಲಾಯಿಸುತ್ತಿದ್ದ ಮಧ್ಯ ವಯಸ್ಕನೊಬ್ಬ ಮಂಗಳೂರಿನಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಬೆಂಗಳೂರಿನ ಹುಸೈನ್ ಅಲಿ (58) ಬಂಧಿತ ನಕಲಿ ಪತ್ರಕರ್ತ. ಕೊರೊನಾ ಭೀತಿಯಿಂದ ದೇಶಾದ್ಯಂತ ಲಾಕ್‍ಡೌನ್ ಘೋಷಿಸಲಾಗಿದೆ. ಯಾರು ಅನಗತ್ಯವಾಗಿ ಮನೆಯಿಂದ ಹೊರಗಡೆ ಬರುವಂತಿಲ್ಲ. ಆದರೆ ತುರ್ತು ಸೇವೆಯಲ್ಲಿ ಇರುವವರಿಗೆ, ವಿವಿಧ ಮಾಧ್ಯಮಗಳಲ್ಲಿ ವೃತ್ತಿ ಮಾಡುವವರಿಗೆ ವಿನಾಯಿತಿ ಇದೆ. ಇದನ್ನೇ ಬಂಡವಾಳ ಮಾಡಿಕೊಂಡು ಪ್ರೆಸ್ ಅಂತ ನಕಲಿ ಗುರುತಿನ ಚೀಟಿ ಅಂಟಿಸಿ …

Read More »

ಕರ್ನಾಟಕಕ್ಕೆ ತಲೆನೋವಾದ ಮಂಗಳೂರು ಕೊರೊನಾ ಸೋಂಕಿತ

ಮಂಗಳೂರು: ದೆಹಲಿಯ ನಿಜಾಮುದ್ದೀನ್ ಜಮಾತ್ ಪ್ರಕರಣದಂತೆ ಮಂಗಳೂರಿನ ಒಂದು ಪ್ರಕರಣ ಇದೀಗ ಕರ್ನಾಟಕಕ್ಕೆ ಕಗ್ಗಂಟಾಗಿದೆ. ಸಂಘಟನೆಯೊಂದಕ್ಕೆ ಸೇರಿರುವ ದಕ್ಷಿಣ ಕನ್ನಡ ಜಿಲ್ಲೆಯ (ರೋಗಿ ನಂ.144)ಈ ಸೋಂಕಿತ ವ್ಯಕ್ತಿ, ದೆಹಲಿಯಲ್ಲಿ ಮಾರ್ಚ್ 13ರಿಂದ 18ರವರೆಗೆ ತಂಗಿದ್ದರು. ಈ ವೇಳೆ ಪೌರತ್ವ ಕಾಯ್ದೆ ವಿರೋಧಿಸಿ ದೆಹಲಿಯ ಶಾಹೀನ್‍ಭಾಗ್‍ನಲ್ಲಿ ನಡೆದ ಪ್ರತಿಭಟನೆಯಲ್ಲೂ ಭಾಗಿಯಾಗುವುದರ ಜೊತೆಗೆ ಹಲವರನ್ನು ಭೇಟಿಯಾಗಿರೋದು ತಲೆ ನೋವಾಗಿ ಪರಿಣಮಿಸಿದೆ. ಈ 52 ವರ್ಷದ ವ್ಯಕ್ತಿ ಹಲವರ ಸಂಪರ್ಕದಲ್ಲಿದ್ದು, ಅವರಿಗೂ ಸೋಂಕು ತಗಲಿರೋ …

Read More »

ಇಂದಿನಿಂದ ದಕ್ಷಿಣ ಕನ್ನಡದಲ್ಲಿ ಕಟ್ಟುನಿಟ್ಟಿನ ಲಾಕ್‍ಡೌನ್: ಕೋಟ ಶ್ರೀನಿವಾಸ ಪೂಜಾರಿ

ಮಂಗಳೂರು: ಕೊರೊನಾ ವೈರಸ್ ಭೀತಿಯಿಂದ ಇಡೀ ದೇಶವನ್ನೇ ಲಾಕ್ ಡೌನ್ ಮಾಡಲಾಗಿದ್ದು, ಇಂದಿನಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಲಾಕ್ ಡೌನ್ ಮಾಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಖಾಸಗಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಬೆಳಗ್ಗೆ 7ರಿಂದ ಮಧ್ಯಾಹ್ನ 12ರ ವರೆಗೂ ದಿನಸಿ ಖರೀದಿಗೆ ಅವಕಾಶ ಮಾಡಿಕೊಡಲಾಗುತ್ತಿದೆ. ಆದರೆ ಸ್ಥಳೀಯ ಅಂಗಡಿಗಳಲ್ಲಿ ಮಾತ್ರ ದಿನಸಿ, ತರಕಾರಿ ಖರೀದಿಸಬಹುದಾಗಿದೆ. ತಮ್ಮ ವಾಹನಗಳಲ್ಲಿ ಬೇರೆ ಕಡೆ …

Read More »

ಕೇರಳ ಗಡಿ ದಾಟಲು ಯತ್ನ- ತಡೆದ ಪೊಲೀಸರ ಮೇಲೆ ಕಲ್ಲು ತೂರಾಟ

ಮಂಗಳೂರು: ಕೊರೊನಾ ಮುನ್ನೆಚ್ಚರಿಕೆ ಸಲುವಾಗಿ ವಾಹನಗಳ ತಪಾಸಣೆ ಮಾಡುತ್ತಿದ್ದ ಕರ್ತವ್ಯ ನಿರತ ಪೊಲೀಸರಿಗೆ ಹಲ್ಲೆ ಮಾಡಿ ತಪ್ಪಿಸಿಕೊಂಡ ಆರೋಪಿಯನ್ನು ಬಂಧಿಸಿ, ಆಸ್ಪತ್ರೆಗೆ ದಾಖಲು ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.     ಪೆಪ್ಪರೆಯ ಸಿನಾನ್ ಬಂಧಿತ ಆರೋಪಿಯಾಗಿದ್ದಾನೆ. ಎ.ಎಸ್.ಐ. ಭಾಸ್ಕರ್ ಪ್ರಸಾದ್ ಹಾಗೂ ಹೆಡ್ ಕಾನ್ಸ್ ಟೇಬಲ್ ರಾಮನಾಯ್ಕ ಅವರು ಜನ ಹಾಗೂ ವಾಹನಗಳ ತಪಾಸಣೆ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಸಿನಾನ್ …

Read More »