Breaking News
Home / ಜಿಲ್ಲೆ / ದಾವಣಗೆರೆ

ದಾವಣಗೆರೆ

ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿಗೆ ಬೆಳಗಾವಿ ಹುಕ್ಕೇರಿ ಹಿರೇಮಠದಿಂದ ಗೌರವ

ಹರಿಹರ (ರಾಜನಹಳ್ಳಿ): ವಾಲ್ಮೀಕಿ ಜಾತ್ರಾ ಮಹೋತ್ಸವವನ್ನು ಯಶಸ್ವಿಯಾಗಿ ಸಂಘಟಿಸುತ್ತಿರುವ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಅವರಿಗೆ ಬೆಳಗಾವಿಯ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸ್ಮರಣಿಕೆ ನೀಡಿ ಸನ್ಮಾನಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ ಅವರು ಸ್ವಾಮೀಜಿ ಯವರನ್ನು ಸನ್ಮಾನಿಸಿ ಮಾತನಾಡಿ, “ಬೆಳಗಾವಿ ಹುಕ್ಕೇರಿ ಹಿರೇಮಠ ಎಲ್ಲ ಸಮುದಾಯದೊಂದಿಗೆ ಬೆರೆತು ಕಾರ್ಯವನ್ನು ಮಾಡುತ್ತಿದೆ. ವಾಲ್ಮೀಕಿ ಪೀಠದ ಗುರುಗಳಿಗೆ ಗೌರವಿಸಿದ್ದು ನನಗೆ ಅತೀವ ಸಂತಸ ತಂದಿದೆ” ಎಂದು ಹೇಳಿದರು. ಹುಕ್ಕೇರಿ ಹಿರೇಮಠದ …

Read More »

ನಟ ಸುದೀಪ್ ನೋಡಲು ಮುಗಿಬಿದ್ದ ಅಭಿಮಾನಿಗಳು : ಪೊಲೀಸರಿಂದ ಲಾಠಿ ಪ್ರಹಾರ, ಖುರ್ಚಿ, ಸೋಫಾ ಪೀಸ್​ ಪೀಸ್

ದಾವಣಗೆರೆ : ಜಿಲ್ಲೆ ಹರಿಹರ ತಾಲ್ಲೂಕಿನ ರಾಜನಹಳ್ಳಿಯಲ್ಲಿ ನಡೆದ ವಾಲ್ಮೀಕಿ ಜಾತ್ರೆಯಲ್ಲಿ ಮಂಗಳವಾರ ನಟ ಸುದೀಪ ಅವರಿಗೆ ಪ್ರಸನ್ನಾನಂದ ಸ್ವಾಮೀಜಿ ‘ ವಾಲ್ಮೀಕಿ ರತ್ನ’ ಪ್ರಶಸ್ತಿ ನೀಡಿ ಗೌರವಿಸಿದರು. ಈ ಮೊದಲು ನಟ ಕಿಚ್ಚ ಸುದೀಪ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಂತೆ ಅಭಿಮಾನಿಗಳು ತಮ್ಮ ನೆಚ್ಚಿನ ನಟನನ್ನ ನೋಡಲು ಹಾಗೂ ಸೆಲ್ಫಿ ತೆಗೆಸಿಕೊಳ್ಳಲು ಜಮಾಯಿಸಿದಾಗ ನೂಕು ನುಗ್ಗಲು ಸಂಭವಿಸಿದೆ. ಪರಿಸ್ಥಿತಿಯನ್ನ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಈ ವೇಳೆ ಸುದೀಪ್​ …

Read More »

ವಾಲ್ಮೀಕಿ ಜಾತ್ರೆಯಲ್ಲಿ ಪ್ರಿಯಾಂಕ.. ಪುತ್ರಿಗೆ ರಾಜಕೀಯ ತರಬೇತಿ ನೀಡುತ್ತಿದ್ದಾರಾ ಸತೀಶ್ ಜಾರಕಿಹೊಳಿ?

ದಾವಣಗೆರೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಮ್ಮ ಮಗಳಿಗೆ ರಾಜಕೀಯ ತರಬೇತಿ ನೀಡುತ್ತಿದ್ದಾರಾ ಎಂಬ ಅನುಮಾನ ಕಾಡುತ್ತಿದೆ. ವಾಲ್ಮೀಕಿ ಜಾತ್ರೆಯಲ್ಲಿ ಪ್ರಿಯಾಂಕ ಜಾರಕಿಹೊಳಿ.. ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಮಠದಲ್ಲಿ ನಡೆಯುತ್ತಿರುವ 3ನೇ ಮಹರ್ಷಿ ವಾಲ್ಮೀಕಿ ಜಾತ್ರೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮಗಳು ಪ್ರಿಯಾಂಕ ಅವರು ಆಗಮಿಸಿ, ವಾಲ್ಮೀಕಿ ಮಠದ ಪ್ರಸನ್ನಾನಂದಪುರಿ ಸ್ವಾಮೀಜಿ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ. ಕೆಲವು ದಿನಗಳಿಂದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಸಹ ಹೆಚ್ಚು …

Read More »

ಮುಂದಿನ ಸಿಎಂ ನಾನೇ: ಶಾಸಕ ಬಸನಗೌಡ ಯತ್ನಾಳ ಘೋಷಣೆ

  ದಾವಣೆಗರೆ: ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕುರ್ಚಿ ಅಲುಗಾಡುತ್ತಿದೆ. ನಾನು ಮಂತ್ರಿಯಾಗಬೇಕೆಂದು ಯಾರ ಕೈಕಾಲು ಹಿಡಿಯುವವನಲ್ಲ. ”ನಮಗೆ ಬರೋದಿದೆ ಸಿಎಂ ಕುರ್ಚಿ” ಎಂದು ಹೇಳುವ ಮೂಲಕ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಬಹಿರಂಗವಾಗಿ ಹೇಳಿಕೆ ನೀಡಿದರು. ದಾವಣಗೆರೆ ಜಿಲ್ಲೆಯ ಹರಿಹರ ಪಟ್ಟಣದಲ್ಲಿ ಪಂಚಮಸಾಲಿ ಸಮುದಾಯದ 2ಎ ಮೀಸಲಾತಿಗಾಗಿ ನಡೆಯುತ್ತಿರುವ ಪಾದಯಾತ್ರೆ ಸಮಾವೇಶದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿದರು. ಮುಖ್ಯಮಂತ್ರಿ ಆಗಿದ್ದವರು ಕೈಗಾರಿಕಾ ಮಂತ್ರಿಯಾಗಿದ್ದಾರೆ. ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ …

Read More »

ಬೆಂಗಳೂರು, ಬೆಳಗಾವಿಗೆ ಮಾತ್ರ ಸಚಿವ ಸ್ಥಾನ ಸೀಮಿತನಾ? ರೇಣುಕಾಚಾರ್ಯ

ದಾವಣಗೆರೆ: ಮುಖ್ಯಮಂತ್ರಿಗಳಿಂದ ಈ ವರೆಗೆ ಯಾವುದೇ ಕರೆ ಬಂದಿಲ್ಲ. ಸಂಜೆ ವರೆಗೆ ಕಾದು ನೋಡುತ್ತೇನೆ. ಸಚಿವ ಸ್ಥಾನ ನೀಡದಿದ್ದರೆ ಸೂಕ್ತ ಕಾಲದಲ್ಲಿ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಶಾಸಕ ರೇಣುಕಾಚಾರ್ಯ ರೆಬೆಲ್ ಆಗುವ ಸುಳಿವು ನೀಡಿದ್ದಾರೆ. ಜಿಲ್ಲೆಯ ನ್ಯಾಮತಿ ತಾಲೂಕಿನ ಆರುಂಡಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವನಾಗಬೇಕು ಎಂಬುದು ಜನರ ಅಪೇಕ್ಷೆ. ಸಿಎಂ ಅವರಿಂದ ಈವರೆಗೆ ಯಾವುದೇ ಕರೆ ಬಂದಿಲ್ಲ. ದಾವಣಗೆರೆ ಜಿಲ್ಲೆ ಮಧ್ಯ ಕರ್ನಾಟಕ, ಅವಕಾಶ ಕೊಡಲೇ ಬೇಕು …

Read More »

ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ

ದಾವಣಗೆರೆ: ಕಚೇರಿಯಲ್ಲಿಯೇ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ಎಂ.ಬಿ.ಶಿವಕುಮಾರ್ (46) ಆತ್ಮಹತ್ಯೆ ಮಾಡಿಕೊಂಡಿರುವ ಸಮಾಜ ಕಲ್ಯಾಣ ಇಲಾಖೆ ಅಧೀಕ್ಷಕ. ದಾವಣಗೆರೆ ಜಿಲ್ಲಾಡಳಿತ ಭವನದಲ್ಲಿರುವ ಅಧೀಕ್ಷಕರ ಕಚೇರಿಯಲ್ಲಿ ಶಿವಕುಮಾರ್ ಅವರ ಶವ ನೇಣು ಬಿಗದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಗಾಂಧೀನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More »

ಬಂಜಾರ ನಿಗಮ, ಅಂಬೇಡ್ಕರ್ ಇದೆ. ಅದರಂತೆ ಮರಾಠ ನಿಗಮ ಸ್ಥಾಪಿಸಲಾಗಿದೆ. ಇದಕ್ಕೆ ಭೆರೆ ಅರ್ಥ ಕಲ್ಪಿಸಬೇಕಿಲ್:ರೇಣುಕಾಚಾರ್ಯಲ

ದಾವಣಗೆರೆ: ರಾಜಕೀಯ, ಚುನಾವಣೆ ದೃಷ್ಟಿಯಿಂದ ಮರಾಠ ಅಭಿವೃದ್ದಿ ನಿಗಮ ಸ್ಥಾಪಿಸಿಲ್ಲ. ಸಮುದಾಯದ ಅಭಿವೃದ್ಧಿಯ ದೃಷ್ಟಿಯಿಂದ ನಿಗಮ ಸ್ಥಾಪಿಸಲಾಗಿದೆ ಎಂದು ಶಾಸಕ ರೇಣುಕಾಚಾರ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಮರಾಠ ಭಾಷೆಗೆ ಆದ್ಯತೆ ಕೊಟ್ಟಿಲ್ಲ. ಸಮಾಜದವರ ಏಳಿಗೆಗೆ, ಅಭಿವೃದ್ದಿಗೆ ನಿಗಮ ಮಾಡಿದೆ. ನನ್ನ ಕ್ಷೇತ್ರದಲ್ಲಿ ಸಹ ಸಾಕಷ್ಟು ಜನ ಮರಾಠರು ಇದ್ದಾರೆ. ಬಂಜಾರ ನಿಗಮ, ಅಂಬೇಡ್ಕರ್ ಇದೆ. ಅದರಂತೆ ಮರಾಠ ನಿಗಮ ಸ್ಥಾಪಿಸಲಾಗಿದೆ. ಇದಕ್ಕೆ ಭೆರೆ ಅರ್ಥ ಕಲ್ಪಿಸಬೇಕಿಲ್ಲ …

Read More »

ಸಚಿವ ಜಗದೀಶ್ ಶೆಟ್ಟರ್ ಪುತ್ರನ ಕಾರು ಅಪಘಾತ

ದಾವಣಗೆರೆ: ಸಚಿವ ಜಗದೀಶ್ ಶೆಟ್ಟರ್ ಪುತ್ರನ ಕಾರು ಅಪಘಾತಕ್ಕೀಡಾದ ಘಟನೆ ದಾವಣಗೆರೆ ನಗರದ ಹಳೇ ಕುಂದುವಾಡ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಘಟನೆಯಲ್ಲಿ ಪ್ರಶಾಂತ್ ಶೆಟ್ಟರ್ ಹಾಗೂ ಅವರ ಪತ್ನಿ ಅಂಚಲ್ ಗೆ ಸಣ್ಣಪುಟ್ಟ ಗಾಯಗಳಾಗಿದೆ. ಗಾಯಾಳುಗಳನ್ನು ಹೈಟೆಕ್ ಆಸ್ಪತ್ರೆಗೆ ರವಾನಿಸಲಾಗಿದೆ. ಡಿವೈಡರ್ ಬಳಿ ಲಾರಿ ಹಾಗೂ ಲ್ಯಾಂಡ್ ರೋವರ್ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಶೆಟ್ಟರ್ ಪುತ್ರ ಇಂದು ದಾವಣಗೆರೆಯಿಂದ ಹುಬ್ಬಳ್ಳಿ ನಿವಾಸಕ್ಕೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ …

Read More »

ಭತ್ತ ಕಟಾವು ಯಂತ್ರದ ಬಾಡಿಗೆ ದರ ಗಂಟೆಗೆ ರೂ.1,800 ಮೀರದಂತೆ ಬಾಡಿಗೆಯನ್ನು ನಿಗದಿಪಡಿಸಿಬೇಕು.

ದಾವಣಗೆರೆ : ಜಿಲ್ಲೆಯಲ್ಲಿ 2020-21ನೇ ಸಾಲಿನ ಮುಂಗಾರಿನ ಹಂಗಾಮಿನಲ್ಲಿ 66046 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯಲಾಗಿದ್ದು, ಸದ್ಯ ಭತ್ತದ ಬೆಳೆಯು ಬಹುತೇಕ ಕಾಳು ಬೆಳೆಯುವ ಹಂತದಲ್ಲಿರುವುದರಿಂದ ಇನ್ನು 2 ರಿಂದ 3 ವಾರಗಳಲ್ಲಿ ಕಟಾವು ಪ್ರಾರಂಭವಾಗಲಿದೆ. ಜಿಲ್ಲೆಯಲ್ಲಿ ಶೇ.95% ರಷ್ಟು ರೈತರು ಭತ್ತದ ಬೆಳೆಯನ್ನು ಭತ್ತ ಕಟಾವು ಯಂತ್ರಗಳ ಮೂಲಕ ಕಟಾವು ಮಾಡುತ್ತಿದ್ದು, ತಮ್ಮ ಸಮೀಪದ ಕೃಷಿ ಯಂತ್ರಧಾರೆ ಕೇಂದ್ರಗಳಲ್ಲಿ ಲಭ್ಯಯವಿರುವ ಭತ್ತ ಕಟಾವು ಯಂತ್ರಗಳ ಪ್ರಯೋಜನವನ್ನು ಪಡೆಯಬಹುದಾಗಿರುತ್ತದೆ. ಖಾಸಗಿ ಭತ್ತ …

Read More »

ಆಯುಧ ಪೂಜೆ ದಿನವೇ ಆಂಜನೇಯ ದೇವಸ್ಥಾನದಲ್ಲಿ ಕಳ್ಳತನ ನಡೆದಿದೆ.

ದಾವಣಗೆರೆ: ಆಯುಧ ಪೂಜೆ ದಿನವೇ ಆಂಜನೇಯ ದೇವಸ್ಥಾನದಲ್ಲಿ ಕಳ್ಳತನ ನಡೆದಿದೆ. ರಾತ್ರಿ ಒಂದು ಗಂಟೆ ಸುಮಾರಿಗೆ ನಿಟ್ಟುವಳ್ಳಿ ಚಾಮುಂಡೇಶ್ವರಿ ಚಿತ್ರಮಂದಿರದ ಬಳಿ ಇರುವ ದೇವಸ್ಥಾ‌ನದಲ್ಲಿ ಕಳ್ಳರು ತಮ್ಮ ಕೈ ಚಳಕ ಪ್ರದರ್ಶಿಸಿದ್ದಾರೆ. ಖದೀಮರು ದೇವಸ್ಥಾ‌ನದ ಹುಂಡಿ ಹೊಡೆದು ಹಣವನ್ನು ದೋಚಿ ಪರಾರಿಯಾಗಿದ್ದಾರೆ. ಸುಮಾರು ಒಂದು ಲಕ್ಷ ಹಣ ಕಳ್ಳತನವಾಗಿರಬಹುದು ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಕೆಟಿಜೆ ನಗರ ಠಾಣೆ ಪೊಲೀಸರು ಭೇಟಿ ನೀಡಿದ್ದು ಶ್ವಾನದಳ, ಬೆರಳಚ್ಚು ತಜ್ಞರಿಂದ ದೇವಸ್ಥಾನದ ಪರಿಶೀಲನೆ ನಡೆಯುತ್ತಿದೆ. …

Read More »