Home / ಜಿಲ್ಲೆ / ದಾವಣಗೆರೆ (page 2)

ದಾವಣಗೆರೆ

ಖಾಸಗಿ ಆಸ್ಪತ್ರೆಯಲ್ಲಿ ಶವವಿಟ್ಟು ವೈದ್ಯರ ವಿರುದ್ಧ ಪ್ರತಿಭಟನೆ

ದಾವಣಗೆರೆ: ತಪ್ಪು ಚಿಕಿತ್ಸೆ ನೀಡಿ ಸಾವಿಗೆ ಕಾರಣವಾಗಿರುವ ವೈದ್ಯರ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಮೃತರ ಸಂಬಂಧಿಕರು, ಸಾರ್ವಜನಿಕರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಗುರುವಾರ ಕೆ.ಆರ್. ರಸ್ತೆಯ ಖಾಸಗಿ ಆಸ್ಪತ್ರೆಯಲ್ಲಿ ಶವವಿಟ್ಟು ಪ್ರತಿಭಟನೆ ನಡೆಸಿದರು. ದಾವಣಗೆರೆಯ ಜಯನಗರ ನಿವಾಸಿ ಅನ್ನಪೂರ್ಣಮ್ಮ(65) ಎಂಬುವರ ಸಾವಿಗೆ ಖಾಸಗಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ವೃದ್ಧೆಯ ಸಂಬಂಧಿಕರು ಶವವಿಟ್ಟು ಪ್ರತಿಭಟನೆ ನಡೆಸಿದರು. ವೈದ್ಯರ ಬಂಧನ, ಆಸ್ಪತ್ರೆ ಬಂದ್ ಮಾಡುವಂತೆ ಒತ್ತಾಯಿಸಿದರು. ಜೂ. 8 …

Read More »

ಮೃತಪಟ್ಟ ಮಹಿಳೆಯೊಬ್ಬರ ಅಂಗಾಂಗಳನ್ನು ದಾನ ಮಾಡಿ ಜೀವನದ ಸಾರ್ಥಕತೆ

ಮಣಿಪಾಲ: ದಾವಣಗೆರೆ ಬಳಿ ಸಂಭವಿಸಿದ ರಸ್ತೆ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫ‌ಲಕಾರಿಯಾಗದೆ ಮೃತಪಟ್ಟ ಮಹಿಳೆಯೊಬ್ಬರ ಅಂಗಾಂಗಳನ್ನು ದಾನ ಮಾಡಿ ಜೀವನದ ಸಾರ್ಥಕತೆ ಮೆರೆದಿದ್ದಾರೆ. ದಾವಣಗೆರೆ ಬಳಿ ಗುಡಾಲು ಗ್ರಾಮದ ಗುಮ್ಮನೂರು ರಸ್ತೆಯಲ್ಲಿ ಜ.22ರ ಸಂಜೆ ಅಪಘಾತ ಸಂಭವಿಸಿತ್ತು. ನಂಜುಂಡಪ್ಪ ಎಚ್‌.ಎನ್‌. ಅವರ ಪತ್ನಿ ಇಂದ್ರಮ್ಮ ಬಿ.ಎಂ. (57) ಗಂಭೀರ ಗಾಯಗೊಂಡಿದ್ದು, ಜ. 23ರಂದು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರ ಗಂಭೀರ ಪ್ರಯತ್ನದ ಹೊರತಾಗಿಯೂ ಚೇತರಿಸಿಕೊಳ್ಳದ …

Read More »

ಫೋಟೋಶೂಟ್​ ಹುಚ್ಚಿನಿಂದಾಗಿ ರೈಲ್ವೆ ಹಳಿ ಮೇಲೆ ನಿಂತು ಪ್ರಾಣ ಕಳೆದುಕೊಂಡ ಯುವಕ

ದಾವಣಗೆರೆ: ಫೋಟೋಶೂಟ್​ ಹುಚ್ಚಿನಿಂದಾಗಿ ರೈಲ್ವೆ ಹಳಿ ಮೇಲೆ ನಿಂತು ಫೋಟೋ ತೆಗೆದುಕೊಳ್ಳಲು ಮುಂದಾದ ಯುವಕನೊಬ್ಬ ಪ್ರಾಣ ಕಳೆದುಕೊಂಡಿದ್ದಾನೆ.ದಾವಣಗೆರೆಯ ಡಿಸಿಎಂ ಟೌನ್‌ಶಿಪ್‌ನ ಬಳಿ ಈ ದುರಂತ ಸಂಭವಿಸಿದೆ.ಸಚಿನ್ (16) ಎಂಬಾತ ಸಾವಿಗೀ ಡಾದ ಯುವಕ ಫೋಟೋಶೂಟ್​ಗೆಂದು ಈ ಯುವಕ ಗೆಳೆಯರೊಂದಿಗೆ ಇಲ್ಲಿಗೆ ಬಂದಿದ್ದಾನೆ.ಒಳ್ಳೆಯ ಬ್ಯಾಕ್​ಗ್ರೌಂಡ್​​ ಸಿಗುತ್ತದೆ ಎಂದು ಹಳಿ ಮೇಲೆ ನಿಂತವ ಈಗ ಮರಳಿ ಬಾರದ ಲೋಕಕ್ಕೆ ತೆರಳಿದ್ದಾನೆ. ರೈಲು ಬರುವಾಗ ಹಳಿ ಮೇಲೆ ನಿಂತು ಫೋಟೋ ತೆಗೆದುಕೊಂಡರೆ ಚೆನ್ನಾಗಿ ಕಾಣಿಸುತ್ತದೆ ಎಂದು …

Read More »

ದಾವಣಗೆರೆ : ಕಬ್ಬಿನ ಗದ್ದೆಯಲ್ಲಿ ಅಡಗಿ ಕುಳಿತಿದ್ದವರಿಗೆ ಲಸಿಕೆ ಹಾಕಿಸಿದ ತಹಶೀಲ್ದಾರ್

ದಾವಣಗೆರೆ : ಜನ ಲಸಿಕೆ ಹಾಕಿಸಿಕೊಳ್ಳಲು ದಿನಕ್ಕೊಂದು ಹೈಡ್ರಾಮಾ ಮಾಡುತ್ತಿದ್ದರಿಂದ ಆರೋಗ್ಯ ಇಲಾಖೆಯ ಸಿಬ್ಬಂದಿಗೆ ತಲೆನೋವು ಆಗಿ ಪರಿಣಮಿಸಿದೆ. ದಾವಣಗೆರೆ ಜಿಲ್ಲೆಯ ಕೈದಾಳೆ ಗ್ರಾಮದಲ್ಲಿ ಲಸಿಕೆ ನೀಡುತ್ತಾರೆ ಎಂಬ ಒಂದೇ ಕಾರಣಕ್ಕೆ ಕೆಲವರು ಕಬ್ಬಿನ ಗದ್ದೆಗಳಲ್ಲಿ ಅವಿತುಕೊಂಡಿದ್ದರು. ಅಂತಹವರನ್ನು ಹೊರಕರೆಸಿದ ದಾವಣಗೆರೆ ತಹಶೀಲ್ದರ್ ಲಸಿಕೆ ಹಾಕಿಸಿದ್ದಾರೆ. ದಾವಣಗೆರೆ ತಹಶೀಲ್ದಾರ್ ಗಿರೀಶ್ ನೇತೃತ್ವದಲ್ಲಿ ಮನೆ ಮನೆಗೂ ಹೋಗಿ ಲಸಿಕೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆರೋಗ್ಯ ಇಲಾಖೆ‌ ಸಿಬ್ಬಂದಿ ಲಸಿಕೆ ನೀಡಲು ಬರುತ್ತಿದ್ದಾರೆಂದು …

Read More »

ತುಂಬಿ ಹರಿಯುತ್ತಿದ್ದ ಹಳ್ಳ ದಾಟಲು ಹೋಗಿ ಕೊಚ್ಚಿ ಹೋದ ಯುವಕ, 24 ಗಂಟೆ ಕಳೆದರೂ ಪತ್ತೆಯಾಗದ ಶವ

ದಾವಣಗೆರೆ: ಜಿಲ್ಲೆಯಲ್ಲಾದ ಭಾರಿ ಮಳೆಗೆ ಚಿರಡೋಣಿ ಹಾಗೂ ದೊಡ್ಡಘಟ್ಟ ಗ್ರಾಮಗಳ ನಡುವಿನ ಹಳ್ಳ ತುಂಬಿ ಹರಿಯುತ್ತಿದೆ. ಈ ಹಳ್ಳದಾಟಲು ಹೋಗಿ ಯುವಕ ಕೊಚ್ಚಿ ಹೋದ ಘಟನೆ ದಾವಣಗೆರೆಯಲ್ಲಿ ಸಂಭವಿಸಿದೆ. ಶಿವರಾಜ್ (23) ನೀರು ಪಾಲದ ಯುವಕ. ಘಟನೆ ಸಂಭವಿಸಿ 24 ಗಂಟೆ ಕಳೆದರೂ ಯುವಕನ ಶವ ಪತ್ತೆಯಾಗಿಲ್ಲ. ಭಾರಿ ಮಳೆಗೆ ತುಂಬಿ ಹರಿಯುತ್ತಿರುವ ಹಳ್ಳವನ್ನು ದಾಟಲು ಮುಂದಾಗಿದ್ದ ಯುವಕ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದಾನೆ. ಕಳೆದ 24 ಗಂಟೆಗಳಿಂದ ಹಳ್ಳಕ್ಕೆ …

Read More »

ದಾವಣಗೆರೆ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯೊಂದು ಹೊತ್ತಿ ಉರಿದ ಮನೆ

ದಾವಣಗೆರೆ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯೊಂದು ಹೊತ್ತಿ ಉರಿದ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮಾವಿನಹೊಳೆ ಗ್ರಾಮದಲ್ಲಿ ನಡೆದಿದೆ.   ಮನೆಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ನಿವಾಸಿಗಳು ಮನೆಯಿಂದ ಆಚೆ ಓಡಿ ಬಂದು ಜೀವ ಉಳಿಸಿಕೊಂಡಿದ್ದಾರೆ.   ಮನೆಯಲ್ಲಿ ವೀಣಾ ಹಾಗೂ ಆಕೆಯ ಇಬ್ಬರು ಮಕ್ಕಳು ಇದ್ದರು. ಆದರೆ ಮನೆ ಸಂಪೂರ್ಣ ಭಸ್ಮವಾಗಿದೆ. ತುಂಬಿದ ಸಿಲೀಂಡರ್​ಗೆ ಕನೆಕ್ಷನ್ ಕೊಡುವಾಗ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.

Read More »

ಸೀಮಂತ ಕಾರ್ಯಕ್ರಮದಲ್ಲಿ ವಿಷ ಆಹಾರ ಸೇವಿಸಿ 100ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ದಾವಣಗೆರೆ: ವಿಷ ಆಹಾರ ಸೇವಿಸಿ 100ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿರುವ ದುರ್ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಬೆಣ್ಣೆಹಳ್ಳಿ ಗ್ರಾಮದಲ್ಲಿ ನಡೆದಿದೆ. ಅದೃಷ್ಟವಷಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಣ್ಣೆಹಳ್ಳಿ ಗ್ರಾಮದ ಮನೆ ಒಂದರಲ್ಲಿ ಸೀಮಂತ ಕಾರ್ಯ ನಡೆದಿತ್ತು. ಈ ವೇಳೆ ನೂರಾರು ಜನರಿಗೆ ಸಿಹಿಯೂಟ ಹಾಕಲಾಗಿತ್ತು. ಊಟ ಸೇವಿಸಿದ 100ಕ್ಕೂ ಹೆಚ್ಚು ಮಂದಿಯಲ್ಲಿ ವಾಂತಿ-ಭೇದಿ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಅಸ್ವಸ್ಥರೆಲ್ಲರನ್ನೂ ಬೆಣ್ಣೆಹಳ್ಳಿ ಪಿಎಚ್‌ಸಿ‌ ಕೇಂದ್ರದಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹಲವರು …

Read More »

ಆಟೊ ಚಾಲಕರಿಗೆ ಮಹತ್ವದ ಮಾಹಿತಿ : ಸೆ. 1 ರಿಂದ ಆಟೊಗಳಿಗೆ ಮೀಟರ್ ಕಡ್ಡಾಯ

ದಾವಣಗೆರೆ : ದಾವಣಗೆರೆ ಜಿಲ್ಲೆಯಲ್ಲಿ ಸೆಪ್ಟೆಂಬರ್ 1 ರಿಂದ ಆಟೊ ಗಳಿಗೆ ಕಡ್ಡಾಯವಾಗಿ ಮೀಟರ್ ಅಳವಡಿಸುವಂತೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಆದೇಶ ಹೊರಡಿಸಿದ್ದಾರೆ. ಕರಾವಳಿ ಸೇರಿ ರಾಜ್ಯದ ಹಲವೆಡೆ ಇನ್ನೂ 4 ದಿನ ಭಾರೀ ಮಳೆ : ಹೈ ಅಲರ್ಟ್ ಸೆಪ್ಟೆಂಬರ್ 1 ರಿಂದ ಜಿಲ್ಲೆಯಲ್ಲಿ ಆಟೊ ಗಳಿಗೆ ಮೀಟರ್ ಕಡ್ಡಾಯಗೊಳಿಸಲಾಗಿದ್ದು, ಎಲ್ಲಾ ಆಟೋ ಚಾಲಕ, ಮಾಲೀಕರು ತಮ್ಮ ಆಟೊಗಳಿಗೆ ಅನುಮತಿ ಇರುವ ಫ್ಲಾಗ್ ಮೀಟರ್ ಗಳನ್ನು ಅಳವಡಿಸಿಕೊಂಡು ದರಕ್ಕೆ …

Read More »

ಖಾಲಿ ಜಾಗದಲ್ಲಿ ಗುಡಿಸಲು ಹಾಕಿ, ಕೈಯಲ್ಲಿ ದೊಣ್ಣೆ ಹಿಡಿದು ಡಿ.ಸಿ ಕಚೇರಿ ಮುಂದೆ ಈ ಬಡವರು ಪ್ರತಿಭಟನೆ ನಡೆಸುತ್ತಿರುವುದು ಏಕೆ?

ದಾವಣಗೆರೆ: ಬಡವರಿಗಾಗಿ ಮೀಸಲಿಟ್ಟ ಸೈಟ್​ಗಳನ್ನು ಬೇರೆಯವರಿಗೆ ನೀಡಲು ಮುಂದಾದ ಮಹಾನಗರ ಪಾಲಿಕೆ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದು, ಖಾಲಿ ಜಾಗದಲ್ಲಿ ತಮ್ಮ ಗುಡಿಸಲು ಹಾಕಿ ಪ್ರತಿಭಟನೆ ನಡೆಸಿದ್ದಾರೆ. ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯ ಬಸಾಪುರ ಹಳ್ಳದ ಬಳಿ ಇರುವ ಜಾಗದಲ್ಲಿ ಬಡವರಿಗೆ ಉಚಿತ ಸೈಟ್​ ನೀಡುವುದಾಗಿ ಹಲವು ವರ್ಷಗಳ ಹಿಂದೆಯೇ ತಿಳಿಸಲಾಗಿತ್ತು. ಹೀಗಾಗಿ ಈ ಭಾಗದ ಜನರು ಮಹಾನಗರ ಪಾಲಿಕೆಗೆ ಅರ್ಜಿ ಸಹ ಸಲ್ಲಿಸಿದ್ದರು. ಆದರೆ ಇವರೆಗೂ ಯಾವುದೇ ಸೈಟ್​ …

Read More »

ಕೋವಿಡ್ ಕೇರ್ ಸೆಂಟರನ್ನು ಸಂಸದ ಜಿ.ಎಂ. ಸಿದ್ದೇಶ್ವರ ಉದ್ಘಾಟನೆ ಮಾಡಿದರು

ದಾವಣಗೆರೆ: ಕೋವಿಡ್ ಸೋಂಕಿತರಿಗಾಗಿ ದಾವಣಗೆರೆ-ಶಿರಮಗೊಂಡನಹಳ್ಳಿ ಮಾರ್ಗದಲ್ಲಿರುವ ತರಳಬಾಳು ವಿದ್ಯಾರ್ಥಿನಿಯರ ವಸತಿನಿಲಯವನ್ನು ಕೋವಿಡ್ ಕೇರ್ ಸೆಂಟರ್ ಆಗಿ ವ್ಯವಸ್ಥೆಗೊಳಿಸಲಾಗಿದ್ದು, ಶನಿವಾರ ಸಂಸದ ಜಿ.ಎಂ. ಸಿದ್ದೇಶ್ವರ ಅದಕ್ಕೆ ಚಾಲನೆ ನೀಡಿದರು. ‘ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸೋಂಕಿತರಿಂದ ಇತರರಿಗೆ ರೋಗ ಹರಡುವುದನ್ನು ತಡೆಗಟ್ಟಲು ಜಿಲ್ಲೆಯಲ್ಲಿ ವಿವಿಧೆಡೆ ವ್ಯವಸ್ಥಿತವಾಗಿ ಕೋವಿಡ್ ಕೇರ್ ಸೆಂಟರ್‌ಗಳನ್ನು ಸ್ಥಾಪಿಸಲಾಗುತ್ತಿದೆ. ತರಳಬಾಳು ವಿದ್ಯಾರ್ಥಿನಿಯರ ವಸತಿನಿಲಯವನ್ನು ಕೋವಿಡ್ ಕೇರ್ ಸೆಂಟರ್ ಮಾಡಲು ತರಳಬಾಳು ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರಿಗೆ …

Read More »