Home / ಜಿಲ್ಲೆ / ದಾವಣಗೆರೆ (page 3)

ದಾವಣಗೆರೆ

ರಾತ್ರಿ 2 ಗಂಟೆಗೆ ಆಕ್ಸಿಜನ್​ ತಂದುಕೊಟ್ಟ ರೇಣುಕಾಚಾರ್ಯ; 20 ರೋಗಿಗಳು ಅಪಾಯದಿಂದ ಪಾರು

ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲ್ಲೂಕು ಆಸ್ಪತ್ರೆಯಲ್ಲಿ ರಾತ್ರೋರಾತ್ರಿ ವೈದ್ಯಕೀಯ ಆಕ್ಸಿಜನ್ ಖಾಲಿಯಾಗುವ ಹಂತ ತಲುಪಿದ್ದು, ಕ್ಷೇತ್ರದ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರಿಂದ ರಾತ್ರಿ 2 ಗಂಟೆ ಸುಮಾರಿಗೆ ಆಕ್ಸಿಜನ್ ಪೂರೈಕೆ ಆಗಿದೆ. ಪಿಪಿಇ ಕಿಟ್ ಹಾಕಿಕೊಂಡು ವಾರ್ಡ್‌ಗೆ ಭೇಟಿ ನೀಡುವ ಸಲುವಾಗಿ ರೇಣುಕಾಚಾರ್ಯ ಆಸ್ಪತ್ರೆಗೆ ಬಂದಿದ್ದಾಗ ಮೆಡಿಕಲ್ ಆಕ್ಸಿಜನ್ ಖಾಲಿಯಾಗುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಕೇವಲ 3 ಗಂಟೆಗಳಿಗೆ ಆಗುವಷ್ಟು ಆಕ್ಸಿಜನ್ ಮಾತ್ರ ಇದೆ, ಆಕ್ಸಿಜನ್ ಬೇಕೆಂದು ವೈದ್ಯರು ಶಾಸಕರಿಗೆ ತಿಳಿಸಿದ್ದರು. …

Read More »

ಪಾರ್ಶ್ವವಾಯುಗೆ ತುತ್ತಾಗಿದ್ದ ವಿದ್ಯಾರ್ಥಿನಿಗೆ ಚಿನ್ನದ ಪದಕ

ದಾವಣಗೆರೆ: ಬ್ರೈನ್‌ ಸ್ಟ್ರೋಕ್‌ (ಮೆದುಳಿನ ಪಾರ್ಶ್ವವಾಯು) ಆಗಿದ್ದ ವಿದ್ಯಾರ್ಥಿನಿ ಹಾಸಿಗೆಯಲ್ಲಿ ಮಲಗಿದ್ದರೂ ಛಲ ಬಿಡದೇ ಓದಿ ಸ್ನಾತಕೋತ್ತರ ಪದವಿಯಲ್ಲಿ (ಇಂಗ್ಲಿಷ್‌) ಚಿನ್ನದ ಪದಕ ಪಡೆದಿದ್ದಾರೆ. ದಾವಣಗೆರೆ ವಿದ್ಯಾನಗರದ ನಿಸರ್ಗ ಕೆ.ಪಿ. ಈ ಸಾಧಕ ವಿದ್ಯಾರ್ಥಿನಿ. ಸಿವಿಲ್‌ ಕಂಟ್ರಾಕ್ಟರ್‌ ಪಂಚಾಕ್ಷರಿ-ಬಸಮ್ಮ ದಂಪತಿಯ ಮಗಳಾಗಿರುವ ನಿಸರ್ಗ ಅವರಿಗೆ 2020ರ ಏಪ್ರಿಲ್‌ನಲ್ಲಿ ಬ್ರೈನ್‌ ಸ್ಟ್ರೋಕ್‌ ಆಗಿತ್ತು. ಶಿವಮೊಗ್ಗದ ಮಾನಸ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೊರೊನಾ ಕಾರಣದಿಂದ ತಡವಾಗಿ ಅಂದರೆ ಸೆಪ್ಟೆಂಬರ್‌ನಲ್ಲಿ ಪರೀಕ್ಷೆ …

Read More »

ರಾಜಕೀಯ ಸಮಾವೇಶಗಳಲ್ಲಿ ಇಲ್ಲದ ನಿರ್ಬಂಧ ಸಿನಿಮಾ ಥಿಯೇಟರ್‌ಗೆ ಏಕೆ..?: ದುನಿಯಾ ವಿಜಿ

ದಾವಣಗೆರೆ: ರಾಜಕೀಯ ಸಮಾವೇಶಗಳಲ್ಲಿ ಸಾವಿರಾರು ಜನ ಸೇರ್ತಾರೆ. ಅದಕ್ಕೆ ನಿರ್ಬಂಧ ಇಲ್ಲ. ಎಲ್ಲೂ ಇಲ್ಲದ ನಿಯಮಗಳು ಸಿನಿಮಾ ಥಿಯೇಟರ್‌ಗೆ ಏಕೆ ಎಂದು ಸ್ಯಾಂಡಲ್‍ವುಡ್ ನಟ ದುನಿಯಾ ವಿಜಯ್ ಪ್ರಶ್ನಿಸಿದ್ದಾರೆ. ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಹರಿಹರದ ಬೆಳ್ಳೂಡಿ ಕಾಗಿನೆಲೆ ಶಾಖಾ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಥಿಯೇಟರ್‌ಗಳಿಗೆ ಶೇ.50 ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ಎಂಬ ಸರ್ಕಾರದ ಅದೇಶಕ್ಕೆ ಪ್ರತಿಕ್ರಿಯಿಸಿದರು. ಅಲ್ಲದೆ ಸರ್ಕಾರದ ವಿರುದ್ಧ ಅಸಮಾಧಾನ ಹೊರ ಹಾಕಿದರು. ಎಲ್ಲೂ ಇಲ್ಲದ ನಿಯಮಗಳು …

Read More »

ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿಗೆ ಬೆಳಗಾವಿ ಹುಕ್ಕೇರಿ ಹಿರೇಮಠದಿಂದ ಗೌರವ

ಹರಿಹರ (ರಾಜನಹಳ್ಳಿ): ವಾಲ್ಮೀಕಿ ಜಾತ್ರಾ ಮಹೋತ್ಸವವನ್ನು ಯಶಸ್ವಿಯಾಗಿ ಸಂಘಟಿಸುತ್ತಿರುವ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಅವರಿಗೆ ಬೆಳಗಾವಿಯ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸ್ಮರಣಿಕೆ ನೀಡಿ ಸನ್ಮಾನಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ ಅವರು ಸ್ವಾಮೀಜಿ ಯವರನ್ನು ಸನ್ಮಾನಿಸಿ ಮಾತನಾಡಿ, “ಬೆಳಗಾವಿ ಹುಕ್ಕೇರಿ ಹಿರೇಮಠ ಎಲ್ಲ ಸಮುದಾಯದೊಂದಿಗೆ ಬೆರೆತು ಕಾರ್ಯವನ್ನು ಮಾಡುತ್ತಿದೆ. ವಾಲ್ಮೀಕಿ ಪೀಠದ ಗುರುಗಳಿಗೆ ಗೌರವಿಸಿದ್ದು ನನಗೆ ಅತೀವ ಸಂತಸ ತಂದಿದೆ” ಎಂದು ಹೇಳಿದರು. ಹುಕ್ಕೇರಿ ಹಿರೇಮಠದ …

Read More »

ನಟ ಸುದೀಪ್ ನೋಡಲು ಮುಗಿಬಿದ್ದ ಅಭಿಮಾನಿಗಳು : ಪೊಲೀಸರಿಂದ ಲಾಠಿ ಪ್ರಹಾರ, ಖುರ್ಚಿ, ಸೋಫಾ ಪೀಸ್​ ಪೀಸ್

ದಾವಣಗೆರೆ : ಜಿಲ್ಲೆ ಹರಿಹರ ತಾಲ್ಲೂಕಿನ ರಾಜನಹಳ್ಳಿಯಲ್ಲಿ ನಡೆದ ವಾಲ್ಮೀಕಿ ಜಾತ್ರೆಯಲ್ಲಿ ಮಂಗಳವಾರ ನಟ ಸುದೀಪ ಅವರಿಗೆ ಪ್ರಸನ್ನಾನಂದ ಸ್ವಾಮೀಜಿ ‘ ವಾಲ್ಮೀಕಿ ರತ್ನ’ ಪ್ರಶಸ್ತಿ ನೀಡಿ ಗೌರವಿಸಿದರು. ಈ ಮೊದಲು ನಟ ಕಿಚ್ಚ ಸುದೀಪ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಂತೆ ಅಭಿಮಾನಿಗಳು ತಮ್ಮ ನೆಚ್ಚಿನ ನಟನನ್ನ ನೋಡಲು ಹಾಗೂ ಸೆಲ್ಫಿ ತೆಗೆಸಿಕೊಳ್ಳಲು ಜಮಾಯಿಸಿದಾಗ ನೂಕು ನುಗ್ಗಲು ಸಂಭವಿಸಿದೆ. ಪರಿಸ್ಥಿತಿಯನ್ನ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಈ ವೇಳೆ ಸುದೀಪ್​ …

Read More »

ವಾಲ್ಮೀಕಿ ಜಾತ್ರೆಯಲ್ಲಿ ಪ್ರಿಯಾಂಕ.. ಪುತ್ರಿಗೆ ರಾಜಕೀಯ ತರಬೇತಿ ನೀಡುತ್ತಿದ್ದಾರಾ ಸತೀಶ್ ಜಾರಕಿಹೊಳಿ?

ದಾವಣಗೆರೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಮ್ಮ ಮಗಳಿಗೆ ರಾಜಕೀಯ ತರಬೇತಿ ನೀಡುತ್ತಿದ್ದಾರಾ ಎಂಬ ಅನುಮಾನ ಕಾಡುತ್ತಿದೆ. ವಾಲ್ಮೀಕಿ ಜಾತ್ರೆಯಲ್ಲಿ ಪ್ರಿಯಾಂಕ ಜಾರಕಿಹೊಳಿ.. ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಮಠದಲ್ಲಿ ನಡೆಯುತ್ತಿರುವ 3ನೇ ಮಹರ್ಷಿ ವಾಲ್ಮೀಕಿ ಜಾತ್ರೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮಗಳು ಪ್ರಿಯಾಂಕ ಅವರು ಆಗಮಿಸಿ, ವಾಲ್ಮೀಕಿ ಮಠದ ಪ್ರಸನ್ನಾನಂದಪುರಿ ಸ್ವಾಮೀಜಿ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ. ಕೆಲವು ದಿನಗಳಿಂದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಸಹ ಹೆಚ್ಚು …

Read More »

ಮುಂದಿನ ಸಿಎಂ ನಾನೇ: ಶಾಸಕ ಬಸನಗೌಡ ಯತ್ನಾಳ ಘೋಷಣೆ

  ದಾವಣೆಗರೆ: ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕುರ್ಚಿ ಅಲುಗಾಡುತ್ತಿದೆ. ನಾನು ಮಂತ್ರಿಯಾಗಬೇಕೆಂದು ಯಾರ ಕೈಕಾಲು ಹಿಡಿಯುವವನಲ್ಲ. ”ನಮಗೆ ಬರೋದಿದೆ ಸಿಎಂ ಕುರ್ಚಿ” ಎಂದು ಹೇಳುವ ಮೂಲಕ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಬಹಿರಂಗವಾಗಿ ಹೇಳಿಕೆ ನೀಡಿದರು. ದಾವಣಗೆರೆ ಜಿಲ್ಲೆಯ ಹರಿಹರ ಪಟ್ಟಣದಲ್ಲಿ ಪಂಚಮಸಾಲಿ ಸಮುದಾಯದ 2ಎ ಮೀಸಲಾತಿಗಾಗಿ ನಡೆಯುತ್ತಿರುವ ಪಾದಯಾತ್ರೆ ಸಮಾವೇಶದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿದರು. ಮುಖ್ಯಮಂತ್ರಿ ಆಗಿದ್ದವರು ಕೈಗಾರಿಕಾ ಮಂತ್ರಿಯಾಗಿದ್ದಾರೆ. ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ …

Read More »

ಬೆಂಗಳೂರು, ಬೆಳಗಾವಿಗೆ ಮಾತ್ರ ಸಚಿವ ಸ್ಥಾನ ಸೀಮಿತನಾ? ರೇಣುಕಾಚಾರ್ಯ

ದಾವಣಗೆರೆ: ಮುಖ್ಯಮಂತ್ರಿಗಳಿಂದ ಈ ವರೆಗೆ ಯಾವುದೇ ಕರೆ ಬಂದಿಲ್ಲ. ಸಂಜೆ ವರೆಗೆ ಕಾದು ನೋಡುತ್ತೇನೆ. ಸಚಿವ ಸ್ಥಾನ ನೀಡದಿದ್ದರೆ ಸೂಕ್ತ ಕಾಲದಲ್ಲಿ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಶಾಸಕ ರೇಣುಕಾಚಾರ್ಯ ರೆಬೆಲ್ ಆಗುವ ಸುಳಿವು ನೀಡಿದ್ದಾರೆ. ಜಿಲ್ಲೆಯ ನ್ಯಾಮತಿ ತಾಲೂಕಿನ ಆರುಂಡಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವನಾಗಬೇಕು ಎಂಬುದು ಜನರ ಅಪೇಕ್ಷೆ. ಸಿಎಂ ಅವರಿಂದ ಈವರೆಗೆ ಯಾವುದೇ ಕರೆ ಬಂದಿಲ್ಲ. ದಾವಣಗೆರೆ ಜಿಲ್ಲೆ ಮಧ್ಯ ಕರ್ನಾಟಕ, ಅವಕಾಶ ಕೊಡಲೇ ಬೇಕು …

Read More »

ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ

ದಾವಣಗೆರೆ: ಕಚೇರಿಯಲ್ಲಿಯೇ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ಎಂ.ಬಿ.ಶಿವಕುಮಾರ್ (46) ಆತ್ಮಹತ್ಯೆ ಮಾಡಿಕೊಂಡಿರುವ ಸಮಾಜ ಕಲ್ಯಾಣ ಇಲಾಖೆ ಅಧೀಕ್ಷಕ. ದಾವಣಗೆರೆ ಜಿಲ್ಲಾಡಳಿತ ಭವನದಲ್ಲಿರುವ ಅಧೀಕ್ಷಕರ ಕಚೇರಿಯಲ್ಲಿ ಶಿವಕುಮಾರ್ ಅವರ ಶವ ನೇಣು ಬಿಗದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಗಾಂಧೀನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More »

ಬಂಜಾರ ನಿಗಮ, ಅಂಬೇಡ್ಕರ್ ಇದೆ. ಅದರಂತೆ ಮರಾಠ ನಿಗಮ ಸ್ಥಾಪಿಸಲಾಗಿದೆ. ಇದಕ್ಕೆ ಭೆರೆ ಅರ್ಥ ಕಲ್ಪಿಸಬೇಕಿಲ್:ರೇಣುಕಾಚಾರ್ಯಲ

ದಾವಣಗೆರೆ: ರಾಜಕೀಯ, ಚುನಾವಣೆ ದೃಷ್ಟಿಯಿಂದ ಮರಾಠ ಅಭಿವೃದ್ದಿ ನಿಗಮ ಸ್ಥಾಪಿಸಿಲ್ಲ. ಸಮುದಾಯದ ಅಭಿವೃದ್ಧಿಯ ದೃಷ್ಟಿಯಿಂದ ನಿಗಮ ಸ್ಥಾಪಿಸಲಾಗಿದೆ ಎಂದು ಶಾಸಕ ರೇಣುಕಾಚಾರ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಮರಾಠ ಭಾಷೆಗೆ ಆದ್ಯತೆ ಕೊಟ್ಟಿಲ್ಲ. ಸಮಾಜದವರ ಏಳಿಗೆಗೆ, ಅಭಿವೃದ್ದಿಗೆ ನಿಗಮ ಮಾಡಿದೆ. ನನ್ನ ಕ್ಷೇತ್ರದಲ್ಲಿ ಸಹ ಸಾಕಷ್ಟು ಜನ ಮರಾಠರು ಇದ್ದಾರೆ. ಬಂಜಾರ ನಿಗಮ, ಅಂಬೇಡ್ಕರ್ ಇದೆ. ಅದರಂತೆ ಮರಾಠ ನಿಗಮ ಸ್ಥಾಪಿಸಲಾಗಿದೆ. ಇದಕ್ಕೆ ಭೆರೆ ಅರ್ಥ ಕಲ್ಪಿಸಬೇಕಿಲ್ಲ …

Read More »